ಹೆಬ್ರಿ:ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬಸ್ನಲ್ಲಿದ್ದ ಹಲವು ಪ್ರಯಾಣಿಕರು ಗಾಯಗೊಂಡ ಘಟನೆ ಶಿವಮೊಗ್ಗದಿಂದ ಉಡುಪಿಗೆ ಹೋಗುತ್ತಿದ್ದ ಹೆಬ್ರಿ ಸಮೀಪ ಕನ್ಯಾನ ಎಂಬಲ್ಲಿ ಸಂಭವಿಸಿದೆ. ನಿರ್ವಾಹಕ ಪುಟ್ಟಸ್ವಾಮಿ ಹಾಗೂ ಬಸ್ನಲ್ಲಿದ್ದ ಸುಮಾರು 15 ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ.ಬಸ್ ಚಾಲಕ ರಾಘವೇಂದ್ರ ಅವರು ಅಜಾಗರೂಕತೆಯಿಂದ ರಸ್ತೆಯ ತೀರಾ ಎಡಬದಿಗೆ ಹೋಗಿದರು.ಪರಿಣಾಮ ಬಸ್ನ ಮುಂದಿನ ಭಾಗವು ಸಂಪೂರ್ಣ ಜಖಂಗೊಂಡಿದೆ.ಹೆಬ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More »ಇಂದು ರಾಜ್ಯಕ್ಕೆ ರಾಷ್ಟ್ರೀಯ ಕಾಂಗ್ರೆಸ್ ನಾಯಕ ಆಗಮನ
ಬೆಂಗಳೂರು: ಇಂದು ಬೆಂಗಳೂರಿಗೆ ರಾಷ್ಟ್ರೀಯ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆಗಮಿಸಲಿದ್ದು, ಎರಡು ದಿನ ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ. ಮುಂದಿನ ವರ್ಷ ನಡೆಯಲಿರುವ ಕರ್ನಾಟಕ ವಿಧಾನಸಭೆ ಚುನಾವಣೆಗೆ ಮುನ್ನ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪಕ್ಷವನ್ನು ಬಲಪಡಿಸುವ ಉದ್ದೇಶದಿಂದ ಇಂದಿನಿಂದ ಎರಡು ದಿನಗಳ ರಾಜ್ಯ ಪ್ರವಾಸ ಕೈಗೊಳ್ಳಲಿದ್ದು, ಇದಕ್ಕಾಗಿ ಹಲವು ಸಭೆಗಳನ್ನು ಆಯೋಜಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
Read More »ಈಶ್ವರಪ್ಪ ಕುರಿತು ತನಿಖೆ ನಡೆಸುವಂತೆ ಪೊಲೀಸರಿಗೆ ಕೋರ್ಟ್ ಆದೇಶ
ಶಿವಮೊಗ್ಗ: ನಗರದಲ್ಲಿ ಬಜರಂಗದಳದ ಕಾರ್ಯಕರ್ತ ಹರ್ಷನ ಹತ್ಯೆ ಪ್ರಕರಣ ಸಂಬಂಧ ಈಶ್ವರಪ್ಪ ಪ್ರಚೋಧನಾಕಾರಿ ಹೇಳಿಕೆ ಸಂಬಂದ ಖಾಸಗಿ ದೂರು ದಾಖಲಾಗಿತ್ತು. ಇದೀಗ ಸಚಿವ ಈಶ್ವರಪ್ಪ ತನಿಖೆ ನಡೆಸುವಂತೆ ಶಿವಮೊಗ್ಗದ ದೊಡ್ಡಪೇಟೆ ಪೊಲೀಸರಿಗೆ ಕೋರ್ಟ್ ಆದೇಶ ನೀಡಿದೆ. ಹರ್ಷ ಹತ್ಯೆ ನಂತರ ಸಚಿವ ಕೆ.ಎಸ್.ಈಶ್ವರಪ್ಪ ಹಾಗೂ ಶಿವಮೊಗ್ಗ ಪಾಲಿಕೆ ಸದಸ್ಯ ಚನ್ನಬಸಪ್ಪ ರಿಂದ ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿತ್ತು. ಮುಸಲ್ಮಾನ ಗೂಂಡಾಗಳನ್ನು ಬಿಡುವುದಿಲ್ಲ , ಅವರನ್ನು ದಮನ ಮಾಡುತ್ತೇವೆ …
Read More »ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಮತ್ತೆ ಅಧಿಕಾರಕ್ಕೆ ಬಂದೇ ಬರುತ್ತದೆ: ಮೊಹಮ್ಮದ್ ಹ್ಯಾರಿಸ್ ನಲಪಾಡ್
ಮಂಗಳೂರು: ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಕೊಡುಗೆ ನೀಡಿ ಬಲಿದಾನ ಮಾಡಿರುವ ಚರಿತ್ರೆ ಕಾಂಗ್ರೆಸ್ ಪಕ್ಷಕ್ಕೆ ಇದೆ. ‘ಕಾಂಗ್ರೆಸ್ ಮುಕ್ತ ಭಾರತ ಮಾಡಲು ಯಾರಿಂದಲೂ ಸಾಧ್ಯವಿಲ್ಲ. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಮತ್ತೆ ಅಧಿಕಾರಕ್ಕೆ ಬಂದೇ ಬರುತ್ತದೆ’ ಎಂದು ಕಾಂಗ್ರೆಸ್ ರಾಜ್ಯ ಯುವ ಘಟಕದ ಅಧ್ಯಕ್ಷ ಮೊಹಮ್ಮದ್ ಹ್ಯಾರಿಸ್ ನಲಪಾಡ್ ವಿಶ್ವಾಸ ವ್ಯಕ್ತಪಡಿಸಿದರು. ಯುವ ಕಾಂಗ್ರೆಸ್ ಘಟಕದ ಅಧ್ಯಕ್ಷರಾಗಿ ಆಯ್ಕೆಯಾದ ಮೇಲೆ ಮೊದಲ ಬಾರಿಗೆ ಜಿಲ್ಲೆಗೆ ಭೇಟಿ ನೀಡಿದ್ದ ಅವರು, …
Read More »ದೆಹಲಿಗೆ ಪ್ರಯಾಣ ಮಾಡಲು ಡಿಕೆಶಿಗೆ ಅನುಮತಿ ನೀಡಿದ ಹೈಕೋರ್ಟ್
ನವದೆಹಲಿ : ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನಿನ ಮೇಲೆ ಹೊರಗಿರುವ ಕಾಂಗ್ರೆಸ್ ನಾಯಕ ಡಿ.ಕೆ. ಶಿವಕುಮಾರ್ ಅವರಿಗೆ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಯುನೈಟೆಡ್ ಅರಬ್ ಎಮಿರೇಟ್ಸ್ಗೆ ತೆರಳಲು ದೆಹಲಿ ಹೈಕೋರ್ಟ್ ಅನುಮತಿ ನೀಡಿದೆ. ಶಿವಕುಮಾರ್ ಅವರು ಸಲ್ಲಿಸಿದ್ದ ಅರ್ಜಿಯನ್ನು ಮಾನ್ಯ ಮಾಡಿರುವ ನ್ಯಾಯಮೂರ್ತಿಗಳಾದ ಆಶಾ ಮೆನನ್, ‘ಅರ್ಜಿದಾರರಿಗೆ ಮಾ. 31 ರಿಂದ ಏ. 6 ರ ನಡುವೆ ದುಬೈ ಮತ್ತು ಅಬುಧಾಬಿಗೆ ಪ್ರಯಾಣಿಸಲು ಅವಕಾಶವಿದೆ. ಅಲ್ಲಿಂದ ಹಿಂದಿರುಗಿದ ವಿಚಾರವನ್ನು …
Read More »ಮತದಾರ ಪಟ್ಟಿ ತಯಾರಿಕೆಯಲ್ಲಿ ಅಧಿಕಾರಗಳ ನಿರ್ಲಕ್ಷ : ಪಿ.ಎಚ್. ನೀರಲಕೇರಿ ಆಗ್ರಹ
ಧಾರವಾಡ : ಮತದಾರರ ಯಾದಿ ತಯಾರಿಕೆಯಲ್ಲಿ ಚುನಾವಣಾ ಆಯೋಗ ನಿರ್ಲಕ್ಷ ತೋರಿದೆ. ಇದರ ಪರಿಣಾಮ ಸಾವಿರಾರು ಅರ್ಹ ಮತದಾರರ ಹೆಸರುಗಳು ಮತಪಟ್ಟಿಯಿಂದ ಕೈ ಬಿಟ್ಟು ಹೋಗಿವೆ. ಕೂಡಲೇ ಜಿಲ್ಲಾ ಚುನಾವಣಾಧಿಕಾರಿಗಳೂ ಆದ ಜಿಲ್ಲಾಧಿಕಾರಿ ಕೂಡಲೇ ಪರಿಶೀಲಿಸಬೇಕೆಂದು ಕೆಪಿಸಿಸಿ ಮಾಧ್ಯಮ ವಿಶ್ಲೇಷಕ ಪಿ.ಎಚ್. ನೀರಲಕೇರಿ ಆಗ್ರಹಿಸಿದರು. ಬುಧವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹು-ಧಾ ಪಶ್ಚಿಮ ಮತಕ್ಷೇತ್ರದ ವಿವಿಧ ಪ್ರದೇಶಗಳಿಗೆ ಸಮೀಕ್ಷೆ ನಡೆಸಿದ್ದು ಸಾಕಷ್ಟು ಕುಟುಂಬಗಳಲ್ಲಿ ಚುನಾವಣಾ ಆಯೋಗದ ಗುರುತಿನ ಚೀಟಿ …
Read More »ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ : ಇಬ್ಬರು ಬಂಧನ
ಹುಬ್ಬಳ್ಳಿ: ಐಪಿಎಲ್ ಟಿ–20 ಕ್ರಿಕೆಟ್ ಟೂರ್ನಿ ಮೇಲೆ ಹೊಸೂರ ಕ್ರಾಸ್ ಬಳಿ ಬೆಟ್ಟಿಂಗ್ ನಡೆಸುತ್ತಿದ್ದ ಇಬ್ಬರು ಆರೋಪಿಗಳನ್ನು ಉಪನಗರ ಠಾಣೆ ಪೊಲೀಸರು ಬಂಧಿಸಿ, ಮೂರು ಮೊಬೈಲ್ ಹಾಗೂ 6,100 ವಶಪಡಿಸಿಕೊಂಡಿದ್ದಾರೆ. ಹೊಸೂರಿನ ಸಂಜು ರೋಣದ, ಮನೀಷ ಕೊರವರ ಬಂಧಿತ ಆರೋಪಿಗಳು. ಅರುಣ ಕಠಾರೆ ತಪ್ಪಿಸಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು ಉಪನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





