ಧಾರವಾಡ: ಮಾರ್ಚ್ 19, ಮಂಗಳವಾರದಂದು ನಗರದ ಕುಮಾರೇಶ್ವರನಗರದಲ್ಲಿ ಕಟ್ಟಡ ಕುಸಿದು ಸಂಭವಿಸಿದ ದುರಂತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 19 ಕ್ಕೆ ಏರಿದೆ.ಅಂತಿಮ ಹಂತದ ಕಾರ್ಯಾಚರಣೆ ವೇಳೆ ಅವಶೇಷಗಳಡಿ ಸಿಲುಕಿದ್ದ ಮತ್ತಿಬ್ಬರ ಮೃತದೇಹವನ್ನು ಹೊರತೆಗೆಯಲಾಗಿದೆ. ಮೃತರನ್ನು ವಾಘು ಮೋರೆ(24), ಸಹದೇವ(50) ಎಂದು ಗುರುತಿಸಲಾಗಿದೆ.ಮಂಗಳವಾರ ಸಂಭವಿಸಿದ ಈ ದುರ್ಘಟನೆಯಲ್ಲಿ 19 ಮಂದಿ ಮರಣ ಹೊಂದಿದ್ದು, 50ಕ್ಕೂ ಹೆಚ್ಚು ಜನರನ್ನು ರಕ್ಷಿಸಲಾಗಿದೆ. ಕಟ್ಟಡ ಕುಸಿತ ಘಟನೆಗೆ ಸಂಬಂಧಿಸಿದಂತೆ ಆರು ಮಂದಿ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿದ್ದರು. …
Read More »ಐಪಿಎಲ್ ಮ್ಯಾಚ್ನಲ್ಲೇ ಕೊಹ್ಲಿ-ರೈನಾ ಕಾಳಗ..
ಬೆಂಗಳೂರು: ಐಪಿಎಲ್ 12ನೇ ಸೀಸನ್ ಇಂದಿನಿಂದ ಆರಂಭವಾಗಲಿದೆ. ಅದ್ರಲ್ಲು ಮೊದಲ ಪಂದ್ಯದಲ್ಲೇ ಎರಡು ಬಲಿಷ್ಠ ತಂಡಗಳು ಮುಖಾಮುಖಿಯಾಗಲಿವೆ. ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಫಸ್ಟ್ ಮ್ಯಾಚ್ನಲ್ಲಿ ಎದುರಾಗಲಿದ್ದು, ಹೈವೋಲ್ಟೇಜ್ ಪಂದ್ಯ ಎನಿಸಿಕೊಂಡಿದೆ.ಈ ಮಧ್ಯೆ ಮೊದಲ ಪಂದ್ಯದಲ್ಲೆ ಕೊಹ್ಲಿ ಹಾಗೂ ರೈನಾ ವಿಶೇಷ ದಾಖಲೆ ಬರೆಯಲು ಉತ್ಸುಕರಾಗಿದ್ದಾರೆ. ಐಪಿಎಲ್ ಐತಿಹಾಸದ ಸ್ಕೋರ್ಬೋರ್ಡ್ನಲ್ಲಿ 5000ದ ಗಡಿ ದಾಟಲು ಇಬ್ಬರು ಸಜ್ಜಾಗಿದ್ದು, ವಿರಾಟ್ ಕೊಹ್ಲಿ ಹಾಗೂ ಸುರೇಶ್ ರೈನಾ …
Read More »ಪೌರಾಡಳಿತ ಸಚಿವ ಸಿ.ಎಸ್. ಶಿವಳ್ಳಿ ಹೃದಯಾಘಾತದಿಂದ ನಿಧನ..?
ಹುಬ್ಬಳ್ಳಿ. ಮಾರ್ಚ್ 22: ರಾಜ್ಯ ಪೌರಾಡಳಿತ ಸಚಿವ ಸಿ.ಎಸ್. ಶಿವಳ್ಳಿ (57) ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ.ಹೃದಾಯಾಘಾತಕ್ಕೆ ಒಳಗಾಗಿದ್ದ ಶಿವಳ್ಳಿ ಅವರನ್ನು ಹುಬ್ಬಳ್ಳಿಯ ಲೈಫ್‌ಲೈನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಅವರು ನಿಧನರಾಗಿದ್ದಾರೆ.ಪೌರಾಡಳಿತ ಸಚಿವ ಸಿ.ಎಸ್. ಶಿವಳ್ಳಿಗೆ ತೀವ್ರ ಹೃದಯಾಘಾತಧಾರವಾಡದ ಕುಂದಗೋಳ ವಿಧಾನಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದಿಂದ ಆಯ್ಕೆಯಾಗಿದ್ದ ಶಿವಳ್ಳಿ ಅವರು ಸಮ್ಮಿಶ್ರ ಸರ್ಕಾರದಲ್ಲಿ ಪೌರಾಡಳಿತ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದರು.ಕಳೆದ ತಿಂಗಳ ಆರಂಭದಲ್ಲಷ್ಟೇ ಅವರು …
Read More »ಪೌರಾಡಳಿತ ಸಚಿವ ಸಿ.ಎಸ್ ಶಿವಳ್ಳಿ ವಿಧಿವಶ
ಹುಬ್ಬಳ್ಳಿ: ಪೌರಾಡಳಿತ ಸಚಿವ ಸಿ.ಎಸ್ ಶಿವಳ್ಳಿ ಅವರು ಇಂದು ತೀವ್ರ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.ಖಾಸಗಿ ಕಾರ್ಯಕ್ರಮಕ್ಕೆಂದು ಶುಕ್ರವಾರ ಹುಬ್ಬಳ್ಳಿಗೆ ತೆರಳಿದ್ದ ಅವರಿಗೆ ಹೃದಯಾಘಾತ ಉಂಟಾಗಿದೆ. ಕೂಡಲೇ ಅವರನ್ನು ಹುಬ್ಬಳ್ಳಿಯ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ.ಕಳೆದ ತಿಂಗಳು ವಿಷಾಹಾರ ಸೇವನೆಯಿಂದಾಗಿ ಅವರು ಅಸ್ವಸ್ಥಗೊಂಡು ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು.56 ವರ್ಷದ ಶಿವಳ್ಳಿ 1999ರಲ್ಲಿ ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡಿದ್ದರು. ದಿ. ಎಸ್. ಬಂಗಾರಪ್ಪ ಅವರ ಬೆಂಬಲಿಗರಾಗಿದ್ದರು. ವಿಧಾನಸಭೆ ಚುನಾವಣೆಯಲ್ಲಿ 3 …
Read More »24ಕ್ಕೆ ನಿಸರ್ಗ ದಯಣ್ಣವರ ಭರತನಾಟ್ಯ ರಂಗಪ್ರವೇಶ ಕಾರ್ಯಕ್ರಮ
ಹುಬ್ಬಳ್ಳಿ: ನಿಸರ್ಗ ದಯಣ್ಣವರ ಇವರ ಭರತನಾಟ್ಯ ರಂಗಪ್ರವೇಶ ಕಾರ್ಯಕ್ರಮವನ್ನು ಇದೇ 24ರಂದು ಸಂಜೆ 5ಕ್ಕೆ ನಗರದ ಸವಾಯಿ ಗಂಧರ್ವ ಹಾಲನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ನೃತ್ಯ ಕಲಾ ಸಂಸ್ಥೆಯ ಅಧ್ಯಕ್ಷರಾದ ಪ್ರದೀಪ ಭಟ್ ಹಾಗೂ ಸಹನಾ ಭಟ್ ತಿಳಿಸಿದರು.ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಜಂಟಿಯಾಗಿ ಮಾತನಾಡಿದ ಅವರು, ದೇಶಿಯ ನೃತ್ಯ ಪರಂಪರೆಯನ್ನು ಉಳಿಸಿ ಬೆಳೆಸುವ ಹಾಗೂ ಭರತನಾಟ್ಯ ನೃತ್ಯವನ್ನು ಜನಪ್ರಿಯಗೊಳಿಸುವ ಸದುದ್ದೇಶದಿಂದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು. ನಿಸರ್ಗ ದಯಣ್ಣವರ ಅವರು ತಮ್ಮ ಐದನೇ ವಯಸ್ಸಿನಲ್ಲಿಯೇ …
Read More »ಕಳಪೆ ಕಟ್ಟಡ ನಿರ್ಮಾಣದಲ್ಲಿ ಕೈ ಜೋಡಿಸಿದವರ ವಿರುದ್ಧ ಕಠಿಣ ಶಿಕ್ಷಗೆ ಚೌಕಿಮಠ ಆಗ್ರಹ
ಹುಬ್ಬಳ್ಳಿ: ಧಾರವಾಡದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದು ಹಲವಾರು ಸಾವು ನೋವುಗಳು ಸಂಭವಿಸಿರುವುದು ವಿಷಾದಕರ ಸಂಗತಿಯಾಗಿದೆ. ಕಳಪೆ ಕಟ್ಟಡ ನಿರ್ಮಾಣದಲ್ಲಿ ಕೈ ಜೋಡಿಸಿರುವ ಇಂಜಿನಿಯರ್, ಗುತ್ತಿಗೆದಾರ ಹಾಗೂ ಮಾಲೀಕರ ವಿರುದ್ಧ ಸೂಕ್ತ ಕಾನೂನು ಕ್ರಮ ಜಾರಿ ಮಾಡಬೇಕು ಅಲ್ಲದೇ ಮೃತರ ಕುಟುಂಬಕ್ಕೆ ಹಾಗೂ ಗಾಯಾಳುಗಳಿಗೆ ಪರಿಹಾರದ ಮೊತ್ತವನ್ನು ನೀಡಬೇಕು ಎಂದು ವೀರಶೈವ ಸಂಘಟನಾ ಸಮಿತಿಯ ಸದಸ್ಯ ಚನ್ನಯ್ಯ ಚೌಕಿಮಠ ಆಗ್ರಹಿಸಿದರು.ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಧಾರವಾಡದಲ್ಲಿ ಬಹುಮಹಡಿ ಕಟ್ಟಡ ಕುಸಿದು …
Read More »ಸಾಯಿಬಾಬಾ ಮಂದಿರದಲ್ಲಿ ದುರಾಡಳಿತ ನಡೆಸುತ್ತಿರುವ ಆಡಳಿತ ಮಂಡಳಿ ವಿರುದ್ಧ ದೂರು ಸಲ್ಲಿಕೆ: ಮಿಸ್ಕಿನ್..
ಹುಬ್ಬಳ್ಳಿ: ನಗರದ ಕೋರ್ಟ್ ಸರ್ಕಲ್ ಹತ್ತಿರ ಇರುವ ಶಿರಡಿ ಸಾಯಿಬಾಬಾ ದೇವಸ್ಥಾನದ ಪ್ರಸ್ತುತ ಆಡಳಿತ ಮಂಡಳಿಯವರು ದಬ್ಬಾಳಿಕೆ ಹಾಗೂ ದುರ್ನಡತೆಯಿಂದ ಮನನೊಂದು ಸಹಕಾರಿ ಸಂಘಗಳ ಉಪನಿಬಂಧಕರಿಗೆ ದೂರು ಸಲ್ಲಿಸಲಾಗಿದೆ ಎಂದು ಅನೀಲ ಮಿಸ್ಕಿನ್ ತಿಳಿಸಿದರು.ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಧ್ಯಕ್ಷರಾದ ಟಿ.ಎಸ್.ಮೋಹನಕುಮಾರ, ಕಾರ್ಯದರ್ಶಿ ವೆಂಕಟರಾವ್ ಕುಲಕರ್ಣಿ, ಉಪಾಧ್ಯಕ್ಷ ಮಹಾದೇವ ಮಾಶ್ಯಾಳ ಖಜಾಂಚಿಯಾದ ಗೋವಿಂದ ಕೋಟಕರ ಇನ್ನಿತರ ಸದಸ್ಯರ ದುರಾಡಳಿತ ಖಂಡಿಸಿದ್ದಕ್ಕಾಗಿ ನನ್ನನ್ನು ಸುಮಾರು ಎರಡು ತಿಂಗಳು ಸಭೆ ಹಾಗೂ ಕಾರ್ಯಕಲಾಪಗಳಿಗೆ …
Read More »ಕಟ್ಟಡ ಕುಸಿತ ಪ್ರಕರಣದಲ್ಲಿ ನಿಷ್ಪಕ್ಷಪಾತ ತನಿಖೆ; ಸಿಎಂ..
ಧಾರವಾಡ ಕುಮಾರೇಶ್ವರ ನಗರದಲ್ಲಿ ಮಂಗಳವಾರ ಮಧ್ಯಾಹ್ನ ನಿರ್ಮಾಣ ಹಂತದಲ್ಲಿದ್ದ ವಾಣಿಜ್ಯ ಕಟ್ಟಡವೊಂದು ಕುಸಿದ ತಕ್ಷಣ ರಕ್ಷಣಾ ಕಾರ್ಯಾಚರಣೆ ತ್ವರಿತವಾಗಿ ಆರಂಭಿಸಿ ಇದುವರೆಗೆ 54 ಜನರ ಜೀವ ರಕ್ಷಣೆ ಮಾಡಲಾಗಿದೆ. 13 ಜನ ಮೃತಪಟ್ಟಿದ್ದಾರೆ ಅವಶೇಷಗಳಡಿ ಇನ್ನೂ ಸುಮಾರು 12 ರಿಂದ 14 ಜನ ಇರುವ ಸಾಧ್ಯತೆ ಇದ್ದು, ರಕ್ಷಣಾ ಕಾರ್ಯ ಮುಂದುವರೆಯಲಿದೆ. ಘಟನೆ ಕುರಿತು ಮ್ಯಾಜಿಸ್ಟ್ರೇಟ್ ಹಂತದ ತನಿಖೆ ನಡೆಸಲು ಸೂಚಿಸಲಾಗಿದೆ. ಅಗತ್ಯ ಬಿದ್ದರೆ ಇನ್ನೂ ಉನ್ನತ ತನಿಖೆಗೂ ಸರ್ಕಾರ …
Read More »ಕಟ್ಟಡ ಕುಸಿದ ಸ್ಥಳಕ್ಕೆ ಮುಖ್ಯಮಂತ್ರಿ ಭೇಟಿ
ಧಾರವಾಡ: ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಗುರುವಾರ ಸಂಜೆ ಧಾರವಾಡಕ್ಕೆ ಭೇಟಿ ನೀಡಿ ಕಟ್ಟಡ ಕುಸಿದ ಸ್ಥಳ ಪರಿಶೀಲನೆ ನಡೆಸಿದರು.ಧಾರವಾಡದಲ್ಲಿ ಕಟ್ಟಡ ಕುಸಿದ ಸ್ಥಳ ಪರಿಶೀಲನೆ ನಂತರ ಪರಿಹಾರ ಕಾರ್ಯಾಚರಣೆಯಲ್ಲಿ ಭಾಗಿಯಾದ ತಂಡಗಳೊಂದಿಗೆ ಮಾತುಕತೆ ನಡೆಸಿ ವಿವರಗಳನ್ನು ಪಡೆದುಕೊಂಡರು. ಬಳಿಕ ಅವರು ಸಿವಿಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳನ್ನು ಭೇಟಿಯಾಗಿ ಸಾಂತ್ವನ ಹೇಳಿದರು.ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಕುಮಾರಸ್ವಾಮಿ, ಜಿಲ್ಲಾಧಿಕಾರಿಗಳು ಈಗಾಗಲೇ ಪ್ರಕರಣದಲ್ಲಿ ಮೃತಪಟ್ಟವರಿಗೆ 2 ಲಕ್ಷ ರೂಪಾಯಿ ಪರಿಹಾರ …
Read More »ರಸ್ತೆಯಲ್ಲಿಯೇ 13 ಮೊಟ್ಟೆಗಳನ್ನಿಟ್ಟ ನಾಗರಹಾವು..!
ಮಂಡ್ಯ: ರಸ್ತೆಯಲ್ಲೇ ನಾಗರಹಾವುವೊಂದು 13 ಮೊಟ್ಟೆಯಿಟ್ಟ ಘಟನೆ ಮಂಡ್ಯ ಜಿಲ್ಲೆ ಮದ್ದೂರು ಪಟ್ಟಣದಲ್ಲಿ ನಡೆದಿದೆ. ಪಟ್ಟಣದ ಶಿಕ್ಷಕರ ಬಡಾವಣೆಯ ರವಿ ಎಂಬುವವರ ಮನೆಯ ಆವರಣದಲ್ಲಿ ಹಾವು ಸೇರಿಕೊಂಡಿತ್ತು. ರವಿ ಅವರ ಮಾಹಿತಿ ಮೇರೆಗೆ ಉರಗ ತಜ್ಞ ಮನ. ಪ್ರಸನ್ನಕುಮಾರ್ ಸ್ಥಳಕ್ಕೆ ಆಗಮಿಸಿ, ಹಾವು ರಕ್ಷಣೆ ಮಾಡಿದ್ದಾರೆ. ಇದೇ ವೇಳೆ ಹಾವು ಮೊಟ್ಟೆಯಿಡಲು ಶುರು ಮಾಡಿದ್ದು, ಒಟ್ಟು 13 ಮೊಟ್ಟೆಗಳನ್ನು ನಾಗರಹಾವು ಇಟ್ಟಿದೆ. ಉರಗತಜ್ಞ ಮೊದಲಿಗೆ ಹಾವನ್ನು ರಕ್ಷಿಸಿ ಬೇರೆಡೆ ಬಿಟ್ಟಿದ್ದಾರೆ. …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





