Breaking News

Shaikh BIG TV NEWS, Hubballi

ರಾಜ್ಯದಲ್ಲಿ‌ ಮಹಿಳಾ ಪೊಲೀಸರ ಸಂಖ್ಯೆ ಹೆಚ್ಚುತ್ತಿರುವುದು ..

ತುಮಕೂರು: ರಾಜ್ಯದಲ್ಲಿ ಮಹಿಳಾ ಪೊಲೀಸರ ಸಂಖ್ಯೆ ಹೆಚ್ಚುತ್ತಿದ್ದು, ಇದನ್ನು ಶೇ. 20 ರಷ್ಟು ಏರಿಕೆ ಮಾಡುವ ಚಿಂತನೆ ಸರಕಾರದ ಮಟ್ಟದಲ್ಲಿದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹೇಳಿದರು. ತುಮಕೂರಿನಲ್ಲಿ 120 ಮಹಿಳಾ ಪ್ರಶಿಕ್ಷಣಾರ್ಥಿಗಳ ನಿರ್ಗಮನ ಪಥಸಂಚಲ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಇತ್ತೀಚಿನ‌ ದಿನಗಳಲ್ಲಿ ಮಹಿಳೆಯರು ಪೊಲೀಸ್ ಇಲಾಖೆಗೆ ಸೇರ್ಪಡೆಗೊಳ್ಳುವ ಸಂಖ್ಯೆ ಹೆಚ್ಚಳವಾಗಿದೆ ಎಂದು ಸಂತಸ ವ್ಯಕ್ತಪಡಿಸಿದರು. ರಾಜ್ಯದಲ್ಲಿರುವ 250 ಐಪಿಎಸ್‌ ಅಧಿಕಾಗಳ ಪೈಕಿ 20 ಮಹಿಳಾ ಅಧಿಕಾರಿಗಳಿದ್ದಾರೆ. …

Read More »

RBI ಗ್ರೇಡ್ ‘ಬಿ’ 2018 ಪರೀಕ್ಷೆಯ ಫಲಿತಾಂಶ ಪ್ರಕಟ.

ನವದೆಹಲಿ: ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್ಬಿಐ) ಗ್ರೇಡ್ ‘ಬಿ’ ಹುದ್ದೆಗಾಗಿ ನಡೆಸಲಾಗಿದ್ದ ಪರೀಕ್ಷೆ 2018 ಫಲಿತಾಂಶಗಳನ್ನು ಪ್ರಕಟಿಸಿದೆ. ಅಭ್ಯರ್ಥಿಗಳು  rbi.org.in ನಲ್ಲಿ  ತಮ್ಮ ಫಲಿತಾಂಶಗಳನ್ನು ನೋಡಬಹುದು. ಭಾರತೀಯ ರಿಸರ್ವ್ ಬ್ಯಾಂಕ್ 166 ಗ್ರೇಡ್ ಬಿ’ ಅಧಿಕಾರಿಗಳ ಹುದ್ದೆಯ ನೇಮಕಾತಿಗೆ ಆನ್ಲೈನ್ ಪರೀಕ್ಷೆಯನ್ನು ನಡೆಸಿತು. ಆರ್ಬಿಐ ಗ್ರೇಡ್ ‘ಬಿ’  ಪ್ರಿಲಿಮ್ಸ್ ಪರೀಕ್ಷೆ ಆಗಸ್ಟ್ 16ರಂದು ನಡೆಸಲಾಗಿತ್ತು. ಪ್ರಿಲಿಮ್ಸ್ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳು ಈಗ ಹಂತ-II ಅಂದರೆ ಮೇನ್ಸ್  ಪರೀಕ್ಷೆಯನ್ನು …

Read More »

ಸಲಿಂಗಕಾಮ ಅಪರಾಧವೋ? ಇಲ್ಲವೋ? ಸೆಕ್ಷನ್ 377 ಕುರಿತು ಸುಪ್ರೀಂ ಕೋರ್ಟ್​ನಿಂದ ಇಂದು ತೀರ್ಪು ಪ್ರಕಟ

ನವದೆಹಲಿ: ಸಲಿಂಗಕಾಮವನ್ನು ಅಪರಾಧೀಕರಿಸುವ ಭಾರತೀಯ ದಂಡ ಸಂಹಿತೆ (ಐಪಿಸಿ) ಸೆಕ್ಷನ್​ 377ರ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆಯ ಮಹತ್ವದ ತೀರ್ಪನ್ನು ಸುಪ್ರೀಂ ಕೋರ್ಟ್​ ಇಂದು ಪ್ರಕಟಿಸಲಿದೆ.  ಸೆಕ್ಷನ್​ 377ರ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗಳ ಸಂಬಂಧ ಸುದೀರ್ಘ ವಿಚಾರಣೆ ನಡೆಸಿದ್ದ ಮುಖ್ಯ ನ್ಯಾಯಮೂರ್ತಿಗಳಾದ ದೀಪಕ್​ ಮಿಶ್ರಾ, ನ್ಯಾಯಮೂರ್ತಿಗಳಾದ ರೋಹಿಂಟನ್​ ನಾರಿಮನ್​, ಎ. ಎಂ. ಖಾನ್ವಿಲ್ಕರ್​, ಡಿ.ವೈ. ಚಂದ್ರಛೂಡ ಮತ್ತು ಇಂದು ಮೆಲ್ಹೋತ್ರಾ ಅವರನ್ನೊಳಗೊಂಡ ಸಾಂವಿಧಾನಿಕ ಪೀಠ ಕಳೆದ ಜುಲೈನಲ್ಲಿ …

Read More »

ಈಕೆಗೆ ಸಿಎಂ ಜನತಾದರ್ಶನ ತಂದ ಫಲವಿದು!

ಬೆಂಗಳೂರು: ಜನತಾದರ್ಶನದಲ್ಲಿ ಮನೆ ಕಳೆದುಕೊಂಡು ದುಗುಡ ಹೊತ್ತು ತಂದಿದ್ದ ಗಿರಿನಗರದ ಕನ್ನಿಯಮ್ಮನ ಮೊಗದಲ್ಲಿಂದು ಮಂದಹಾಸ. ಪತಿ ಮಾಡಿದ ಕೈಸಾಲ ಪ್ರಾಮಾಣಿಕವಾಗಿ ತೀರಿಸುತ್ತಾ ಬಂದಿದ್ದರೂ ಊರಲ್ಲಿ ಇಲ್ಲದ ಸಂದರ್ಭದಲ್ಲಿ ಸಾಲ ಕೊಟ್ಟ ವ್ಯಕ್ತಿ ಆಕೆಯ ಮನೆಯ ಬೀಗ ಒಡೆದು ಮನೆಯನ್ನ ಸ್ವಾಧೀನ ಪಡಿಸಿಕೊಂಡು ಅಕ್ರಮವಾಗಿ ಮತ್ತೊಬ್ಬರಿಗೆ ಬಾಡಿಗೆ ಕೊಟ್ಟಿದ್ದರು.  ಸೆಪ್ಟೆಂಬರ್1 ರಂದು ನಡೆದ ಜನತಾದರ್ಶನದಲ್ಲಿ ಮುಖ್ಯಮಂತ್ರಿಗಳ ಬಳಿ ಮನೆ ವಾಪಸ್ ಕೊಡಿಸುವಂತೆ ಕನ್ನಿಯಮ್ಮ ಅಹವಾಲು ಸಲ್ಲಿಸಿದ್ದರು. ಕೂಡಲೇ ಪೊಲೀಸ್ ಆಯುಕ್ತ ಸುನೀಲ್ …

Read More »

ಗೋವಾ: ಮೂರು ಬಿಜೆಪಿ ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ ಎಂದ ಕಾಂಗ್ರೆಸ್

ಪಣಜಿ: ಗೋವಾದಲ್ಲಿ, ಬಿಜೆಪಿ ಆಡಳಿತದ ಮೂರು ಶಾಸಕರು ತಮ್ಮೊಂದಿಗೆ ಸಂಪರ್ಕದಲ್ಲಿದ್ದಾರೆ, ಮನೋಹರ್ ಪರಿಕ್ಕರ್ ನೇತೃತ್ವದ ಸಮ್ಮಿಶ್ರ ಸರ್ಕಾರ ಶೀಘ್ರದಲ್ಲೇ ಪತನವಾಗಬಹುದು ಎಂದು ಕಾಂಗ್ರೆಸ್ ಹೇಳಿದೆ.  ಈ ಹೇಳಿಕೆಯನ್ನು ತಿರಸ್ಕರಿಸಿರುವ ಬಿಜೆಪಿ ಕಾಂಗ್ರೆಸ್ ತನ್ನ ಹೇಳಿಕೆಯಿಂದ ಮೂರ್ಖರನ್ನಾಗಿಸುತ್ತಿದೆ ಎಂದು ಹೇಳಿದೆ.  ಕಾಂಗ್ರೆಸ್ ವಕ್ತಾರ ಮತ್ತು ಶಾಸಕ ದಯಾನಂದ ಸೋಪ್ಟೆ ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಾ, “ಬಿಜೆಪಿ ಶಾಸನಸಭೆಯ ಮೂರು ಶಾಸಕರು ಕಾಂಗ್ರೆಸ್ನೊಂದಿಗೆ ಸಂಪರ್ಕದಲ್ಲಿರುತ್ತಾರೆ” ಎಂದು ಹೇಳಿದರು. ಆದರೆ ಅವರು ಶಾಸಕರ ಹೆಸರು ತಿಳಿಸಲು …

Read More »

ಗೌರಿ ದಿನಾಚರಣೆ: ಬೆದರಿಕೆಗೆ, ಗನ್ನಿಗೆ ಎಂದೂ ನಾವು ಬಗ್ಗುವುದಿಲ್ಲ: ಹೋರಾಟಗಾರರ ಎಚ್ಚರಿಕೆ.

ಬೆಂಗಳೂರು: ಕೋಮುವಾದಿಗಳ ಬೆದರಿಕೆಗೆ ಮತ್ತು ಅವರ ಗನ್ನಿಗೆ ನಾವು ಎಂದೂ ಬಗ್ಗುವುದಿಲ್ಲ ಎಂದು ವಿಚಾರವಾದಿಗಳು ಮತ್ತು ಹೋರಾಟಗಾರರು ಎಚ್ಚರಿಕೆ ನೀಡಿದ್ದಾರೆ. ಬುಧವಾರ ಬೆಂಗಳೂರಿನಲ್ಲಿ ನಡೆದ ಪತ್ರಕರ್ತೆ ಗೌರಿ ಲಂಕೇಶ್ ಅವರ ಪುಣ್ಯತಿಥಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ವಿಚಾರವಾದಿಗಳು ಕೇಂದ್ರ ಸರ್ಕಾರ ದಮನಕಾರಿ ನೀತಿ ಅನುಸರಿಸುತ್ತಿದೆ ಎಂದು ಒಕ್ಕೋರಲಿನಿಂದ ಹೇಳಿದೆ. ಗೌರಿ ದಿನಾಚರಣೆಯಲ್ಲಿ ಪಾಲ್ಗೊಂಡು ಮಾತನಾಡಿದ ದಿ ವೈರ್ ಪತ್ರಿಕೆ ಸಂಪಾದಕ ಸಿದ್ಧಾರ್ಥ ವರದರಾಜನ್ ಅವರು, ಆದಿವಾಸಿಗಳು ಹಾಗೂ ದಲಿತ ಹಕ್ಕುಗಳ ಹೋರಾಟಗಾರರನ್ನು, …

Read More »

ಜಾರಕಿಹೊಳಿ ಸೋದರರು-ಲಕ್ಷ್ಮಿ ಹೆಬ್ಬಾಳ್ಕರ್ ನಡುವಿನ ಕಿತ್ತಾಟ; ಸಮ್ಮಿಶ್ರ ಸರ್ಕಾರಕ್ಕೆ ಕುತ್ತು?

ಬೆಳಗಾವಿ : ಇಲ್ಲಿನ ಪ್ರಾಥಮಿಕ ಭೂ ಅಭಿವೃದ್ಧಿ(ಪಿಎಲ್ ಡಿ) ಬ್ಯಾಂಕ್ ಮುಖ್ಯಸ್ಥರ ಹುದ್ದೆ ಚುನಾವಣೆಗೆ ಸಂಬಂಧಿಸಿದಂತೆ ಜಾರಕಿಹೊಳಿ ಸೋದರರು ಮತ್ತು ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ನಡುವೆ ನಡೆದ ಕಲಹ, ಮನಸ್ತಾಪ, ಕಿತ್ತಾಟಗಳಿಂದ ಸಮ್ಮಿಶ್ರ ಸರ್ಕಾರದ ಭವಿಷ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ ಎನ್ನಲಾಗಿದೆ. ಪಿಎಲ್ ಡಿ ಬ್ಯಾಂಕಿನ ಮುಖ್ಯಸ್ಥರ ಚುನಾವಣೆ ನಾಳೆ ನಡೆಯಲಿದ್ದು ರಾಜ್ಯ ರಾಜಕೀಯದಲ್ಲಿ ಪ್ರಭಾವ ಹೊಂದಿರುವ ಸತೀಶ್ ಜಾರಕಿಹೊಳಿ ಮತ್ತು ರಮೇಶ್ ಜಾರಕಿಹೊಳಿ ಸೋದರರು, ಪಿಎಲ್ ಡಿ …

Read More »

ಬಿಜೆಪಿ ವಿರುದ್ಧ ದಿನೇಶ್ ಗುಂಡುರಾವ್ ನೇತೃತ್ವದಲ್ಲಿ ಪ್ರತಿಭಟನೆ

ಪೆಟ್ರೋಲ್,  ಡಿಸೇಲ್ ಬೆಲೆ ಏರಿಕೆಯನ್ನು ಖಂಡಿಸಿ ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ‌ ಕೆಪಿಸಿಸಿ ಅಧ್ಯಕ್ಷ ದಿನೇಶ ಗುಂಡೂರಾವ್ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ವಿನೂತನ ‌ ಪ್ರತಿಭಟನೆ ನಡೆಸಿದರು. ನಗರದ ಕೆಇಸಿ ವೃತ್ತದಿಂದ ವಿಮಾನ‌ ನಿಲ್ದಾಣದವರೆಗೆ ಎತ್ತಿನ ಬಂಡೆಯಲ್ಲಿ ಮೆರವಣಿಗೆ ಮಾಡುವ ಮೂಲಕ ಕೇಂದ್ರ ಸರ್ಕಾರ ವಿರುದ್ಧ ಆಕ್ರೋಶ ವ್ಯಕ್ತಪಡೆಸಿದರು. ಕೇಂದ್ರ ಸರ್ಕಾರ ಹಾಗೂ ಪ್ರಧಾನಿ ನರೇಂದ್ರ ಮೋದಿಯವರು ಭಾಷಣ ಮಾಡಿ ಪುಕ್ಕಟೆ ಪ್ರಚಾರ ಗಿಟ್ಟಿಸಿಕೊಳ್ಳುತ್ತಿದ್ದಾರೆ ಎಂದು ಕಿಡಿಕಾರಿದರು.  ಈ ವೇಳೆ ಮಾತನಾಡಿದ …

Read More »

ಆಧಾರ್ ಇಲ್ಲವೆಂದು ಮಕ್ಕಳ ಪ್ರವೇಶವನ್ನು ಶಾಲೆಗಳು ನಿರಾಕರಿಸುವಂತಿಲ್ಲ: ಯುಐಡಿಎಐ.

ನವದೆಹಲಿ: ಆಧಾರ್ ಕಾರ್ಡ್ ಹೊಂದಿಲ್ಲವೆಂಬ ಕಾರಣಕ್ಕೆ ಶಾಲೆಗಳು ಮಕ್ಕಳ ಪ್ರವೇಶಾತಿಯನ್ನು ನಿರಾಕರಿಸುವಂತಿಲ್ಲ ಎಂದು ಭಾರತದ ವಿಶಿಷ್ಟ ಗುರುತು ಚೀಟಿ ಪ್ರಾಧಿಕಾರ ಸ್ಪಷ್ಟಪಡಿಸಿದೆ.  ಕೇವಲ ಆಧಾರ್ ಕಾರ್ಡ್ ಇಲ್ಲ ಎಂಬ ಕಾರಣಕ್ಕೆ ಮಕ್ಕಳನ್ನು ಶಾಲೆಗೆ ದಾಖಲಿಸಿಕೊಳ್ಳಲು ಆಡಳಿತ ಮಂಡಳಿಗಳು ನಿರಾಕರಿಸುತ್ತಿರುವ ಪ್ರಕರಣಗಳು ಬೆಳಕಿಗೆ ಬಂದಿದ್ದು, ಇದನ್ನು ಯುಐಡಿಎಐ ಗಂಭೀರವಾಗಿ ಪರಿಗಣಿಸಿದೆ. ಈ ಹಿನ್ನೆಲೆಯಲ್ಲಿ ಎಲ್ಲಾ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳಿಗೆ ಯುಐಡಿಎಐ ಸುತ್ತೋಲೆ ಹೊರಡಿಸಿದ್ದು, ಆಧಾರ್ ಇಲ್ಲದ ಕಾರಣಕ್ಕೆ ಮಕ್ಕಳಿಗೆ ಪ್ರವೇಶ ನಿರಾಕರಿಸುವುದು …

Read More »

ಗುಟ್ಕಾ ಹಗರಣ: ಚೆನ್ನೈನಾದ್ಯಂತ ಸಚಿವರು, ಅಧಿಕಾರಿಗಳ ಮನೆ ಮೇಲೆ ಸಿಬಿಐ ದಾಳಿ

ಚೆನ್ನೈ: ಬಹುಕೋಟಿ ಗುಟ್ಕಾ ಹಗರಣಕ್ಕೆ ಸಂಬಂಧಿಸಿದಂತೆ ಚೆನ್ನೈನಾದ್ಯಂತ ತನಿಖಾ ಕಾರ್ಯಾಚರಣೆ ಆರಂಭಿಸಿರುವ ಸಿಬಿಐ, ತಮಿಳುನಾಡು ಆರೋಗ್ಯ ಮಂತ್ರಿ ಸಿ.ವಿಜಯಭಾಸ್ಕರ್ ಮನೆ ಸೇರಿದಂತೆ ಸುಮಾರು 40 ಸ್ಥಳಗಳ ಮೇಲೆ ದಾಳಿ ನಡೆಸಿದ್ದಾರೆ. ತಮಿಳುನಾಡು ಪೊಲೀಸ್ ಮಹಾನಿರ್ದೇಶಕ ಟಿ.ಕೆ.ರಾಜೇಂದ್ರನ್ಮ್ ನಿವೃತ್ತ ಪೊಲೀಸ್ ಮಹಾನಿರ್ದೇಶಕ ಎಸ್.ಜಾರ್ಜ್ ಸೇರಿದಂತೆ ಇತರ ಪೋಲಿಸ್ ಅಧಿಕರಿಗಲ್ ಮೆನೆ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದು, ಹಲವು ದಾಖಲೆಪತ್ರಗಳನ್ನು ವಶಪಡಿಸಿಕೊಂಡಿದ್ದಾರೆ ಎನ್ನಲಾಗಿದೆ. ತಮಿಳುನಾಡಿನಲ್ಲಿ 2017ರ ಜುಲೈ 8ರಂದು ಗುಟ್ಕಾ ಹಗರಣ …

Read More »