ವಿಮಾನ ಖರೀದಿಯಲ್ಲಿ ೧ ಲಕ್ಷ ೩೦ ಸಾವಿರ ಕೋಟಿ ಹಗರಣ ನಡೆದಿದೆ ಎಂದು ಎಐಸಿಸಿ ಮಾಧ್ಯಮ ಸಂಚಾಲಕಿ ಪ್ರಿಯಾಂಕ ಚತುರ್ವೇದಿ ಆರೋಪಿಸುದ್ದಾರೆ. ಹುಬ್ಬಳ್ಳಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಕೇಂದ್ರ ಸರ್ಕಾರದಿಂದ ರಕ್ಷಣಾ ಇಲಾಖೆಯಲ್ಲಿ ನಡೆದಿರುವ ದೊಡ್ಡ ಹಗರಣ ಇದಾಗಿದ್ದು, ವಿಮಾನ ಕೊಳ್ಳುವ ಬೆಲೆಯ ಮೂರು ಪಟ್ಟು ಹೆಚ್ಚಿಸಿ ೧ ಲಕ್ಷ ೩೦ ಸಾವಿರ ಕೋಟಿ ಹಣವನ್ನು ಖಾಸಗಿಯವರಿಗೆ ಹಸ್ತಾಂತರಿಸಿದೆ. ಅಷ್ಟೇ ಅಲ್ಲದೇ ರಫೇಲ್ ವಿಮಾನ ಖರೀದಿಯಲ್ಲೂ ಗೋಲಮಾಲ್ ನಡೆದಿದ್ದು, …
Read More »ಸ್ಥಳೀಯ ಸಂಸ್ಥೆ ಚುನಾವಣೆ: ನಾಳೆ ಸಾರ್ವತ್ರಿಕ ರಜೆ
ಆಯಾ ಮತ ಕ್ಷೇತ್ರಗಳ ಎಲ್ಲಾ ರಾಜ್ಯ ಸರ್ಕಾರಿ ಕಛೇರಿಗಳು, ಶಾಲಾ-ಕಾಲೇಜು, ಸರ್ಕಾರಿ ಸ್ವಾಮ್ಯದ ಅಂಗಸಂಸ್ಥೆಗಳಿಗೆ ಒಂದು ದಿನದ ಸಾರ್ವತ್ರಿಕ ರಜೆ. ಬೆಂಗಳೂರು: ಸ್ಥಳೀಯ ಸಂಸ್ಥೆಗಳ ಚುನಾವಣೆ ಹಿನ್ನೆಲೆಯಲ್ಲಿ ಆಗಸ್ಟ್ 31ರಂದು ಸಾರ್ವತ್ರಿಕ ರಜೆ ಘೋಷಿಸಿ ಸರ್ಕಾರ ಆದೇಶ ಹೊರಡಿಸಿದೆ. ನಗರ ಸ್ಥಳೀಯ ಸಂಸ್ಥೆ ಹಾಗೂ ಮಹಾನಗರ ಪಾಲಿಕೆಗಳ ಚುನಾವಣೆ ಆ.31 ನಡೆಯಲಿದ್ದು, ಮತದಾರರು ಮತ ಚಲಾಯಿಸಲು ಅನುಕೂಲವಾಗುವಂತೆ ಆಯಾ ಮತ ಕ್ಷೇತ್ರಗಳ ಎಲ್ಲಾ ರಾಜ್ಯ ಸರ್ಕಾರಿ ಕಚೇರಿಗಳು, ಶಾಲಾ-ಕಾಲೇಜುಗಳು, ಸರ್ಕಾರಿ …
Read More »ಕೇರಳ ಪ್ರವಾಹ: 305 ಪರಿಹಾರ ಕೇಂದ್ರಗಳಲ್ಲಿ 59ಸಾವಿರಕ್ಕೂ ಹೆಚ್ಚು ಮಂದಿಗೆ ಆಶ್ರಯ-ಸಿಎಂ
ತಿರುವನಂತಪುರಂ: ಇತ್ತೀಚೆಗೆ ಉಂಟಾದ ಭಾರೀ ಪ್ರವಾಹದಲ್ಲಿ ಮನೆ ಕಳೆದುಕೊಂಡ 59,296 ಮಂದಿಗೆ 305 ಪರಿಹಾರ ಕೇಂದ್ರಗಳಲ್ಲಿ ಆಶ್ರಯ ನೀಡಲಾಗಿದೆ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದ್ದಾರೆ. ಕೇರಳ ಶಾಸಕಾಂಗ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಇದುವರೆಗೂ ಪ್ರವಾಹ ಪರಿಹಾರ ಮತ್ತು ಪುನರ್ವಸತಿ ಕಾರ್ಯಕ್ಕಾಗಿ ಆಗಸ್ಟ್ 28ರವರೆಗೆ ಮುಖ್ಯಮಂತ್ರಿಗಳ ಪ್ರಕೃತಿ ವಿಕೋಪ ಪರಿಹಾರ ನಿಧಿಗೆ 738 ಕೋಟಿ ರೂ. ಠೇವಣಿ ಮಾಡಲಾಗಿದೆ ಎಂದರಲ್ಲದೆ, ಮುಂದಿನ ದಿನಗಳಲ್ಲಿ ಕೇರಳದಲ್ಲಿ ಅಗತ್ಯ ಮೂಲಭೂತ …
Read More »ಸಿದ್ದರಾಮಯ್ಯ ಮತ್ತೊಮ್ಮೆ ಸಿಎಂ ಆಗುತ್ತೇನೆ ಎನ್ನುವುದರಲ್ಲಿ ತಪ್ಪೇನು?: ಸಿಎಂ ಕುಮಾರಸ್ವಾಮಿ
ನವದೆಹಲಿ: ಸಿದ್ದರಾಮಯ್ಯ ಸಿಎಂ ಆಗುತ್ತೇನೆ ಎನ್ನುವುದರಲ್ಲಿ ತಪ್ಪೇನು? ಅದನ್ನು ಬೇರೆ ರೀತಿ ಅರ್ಥೈಸುವ ಅವಶ್ಯಕತೆ ಇಲ್ಲ ಎಂದು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಸಮ್ಮಿಶ್ರ ಸರ್ಕಾರ ರಚನೆಯಾಗಿ ನೂರು ದಿನ ಪೂರೈಸಿದ ಹಿನ್ನೆಲೆಯಲ್ಲಿ ನವದೆಹಲಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಸಮ್ಮಿಶ್ರ ಸರ್ಕಾರವನ್ನು ರಚನೆ ಮಾಡಿ ಇಂದಿಗೆ ನೂರು ದಿನ ತುಂಬಿದೆ. ರಾಜ್ಯದ ಮೈತ್ರಿ ಸರ್ಕಾರ ನೂರು ದಿನ ಪೂರೈಸಿದೆ. …
Read More »ಚಲಿಸುವ ರೈಲಿನಲ್ಲಿ ಮೂಡಿದ ಪ್ರೀತಿ, ಪ್ರೇಯಸಿ ಹುಡುಕಲು ಆತ ಮಾಡಿದ ಪ್ಲಾನ್ ಏನು?
ನವದೆಹಲಿ: ಮೊದಲ ಪ್ರೀತಿ ಕೊನೆವರೆಗೂ ನೆನಪಿನಲ್ಲಿರುತ್ತದೆ ಎಂದು ಹೇಳುತ್ತಾರೆ. ಅದನ್ನು ಮರೆಯಲು ಎಂದಿಗೂ ಸಾಧ್ಯವಿಲ್ಲ ಎಂದು ಹಲವರು ಹೇಳುತ್ತಾರೆ. ಕೊಲ್ಕತ್ತಾದ ಒಬ್ಬ ಹುಡುಗನಿಗೂ ಇದೇ ರೀತಿಯ ಆಗಿದೆ. ವಾಸ್ತವವಾಗಿ ಕೊಲ್ಕತ್ತಾದ ಒಬ್ಬ ವ್ಯಕ್ತಿಗೆ ಒಂದು ದಿನ ರೈಲಿನಲ್ಲಿ ಪ್ರಯಾಣಿಸುವ ವೇಳೆ ಅದೇ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಹುಡುಗಿಯನ್ನು ನೋಡಿದೊಡನೆ ಪ್ರೀತಿ ಮೂಡಿದೆ. ಕೆಲ ದಿನಗಳ ಆ ವ್ಯಕ್ತಿ ತನ್ನ ಪ್ರೇಯಸಿಯನ್ನು ಹುಡುಕುವುದು ಹೇಗೆ ಎಂದು ಯೋಚಿಸಿದ್ದಾನೆ. ಆ ಹುಡುಗಿಯನ್ನು ಹುಡುಕಲು ಸಾಧ್ಯವಾಗದ …
Read More »ಬೆಂಗಳೂರಿನ ಪಬ್, ಬಾರ್, ರೆಸ್ಟೋರೆಂಟ್ ಗಳು ಧೂಮಪಾನ ನಿಷೇಧಿತ ವಲಯ: ಬಿಬಿಎಂಪಿ ಸುತ್ತೋಲೆ
ಬೆಂಗಳೂರು: ಬೆಂಗಲೂರಿನ ಹೋಟೆಲ್ ಗಳು, ಕ್ಲಬ್, ಪಬ್, ಬಾರ್ ಮತ್ತು ರೆಸ್ಟೋರೆಂಟ್ ಗಳು ಇನ್ನು ಮುಂದೆ ಧೂಮಪಾನ ಮುಕ್ತವಾಗಲಿದೆ. ಬೆಂಗಳೂರಿನ ಹೋಟೆಲ್, ರೆಸ್ಟೋರೆಂಟೆ, ಪಬ್ ಗಳನ್ನು “ಸಂಪೂರ್ಣ ಧೂಮಪಾನ ನಿಷೇಧಿತ ವಲಯ” ವನ್ನಾಗಿ ರೂಪಿಸಲು ಬೃಅಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ತೀರ್ಮಾನಿಸಿದ್ದು ಇದಕ್ಕಾಗಿ ಸುತ್ತೋಲೆಯನ್ನು ಹೊರಡಿಸಿದೆ. ಮುಂದಿನ ದಿನಗಳಲ್ಲಿ ಈ ನಿಯಮವನ್ನು ಪಾಲಿಸದ ಹೋಟೆಲ್, ಪಬ್, ಬಾರ್ ಗಳ ಪರವಾನಗಿಯನ್ನು ರದ್ದು ಮಾಡುವುದಾಗಿ ಸಹ ಸುತ್ತೋಲೆಯ ಮೂಲಕ ಎಚ್ಚರಿಸಲಾಗಿದೆ. …
Read More »ಸಮ್ಮಿಶ್ರ ಸರ್ಕಾರ ಯಾವುದೇ ಗೊಂದಲವಿಲ್ಲದೆ ಐದು ವರ್ಷ ಪೂರೈಸಲಿದೆ- ಪರಮೇಶ್ವರ್
ಬೆಂಗಳೂರು: ರಾಜ್ಯ ಸಮ್ಮಿಶ್ರ ಸರಕಾರ ನೂರು ದಿನಗಳನ್ನು ಯಶಸ್ವಿಯಾಗಿ ಪೂರೈಸಿದ್ದು, ಯಾವುದೇ ಗೊಂದಲವಿಲ್ಲದೇ ಐದು ವರ್ಷವನ್ನೂ ಪೂರ್ಣಗೊಳಿಸಲಿದೆ ಎಂದು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಯವನಿಕಾದಲ್ಲಿ ಬುಧವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಈ ಸಮ್ಮಿಶ್ರ ಸರಕಾರ ಇಂಥ ಸಂವತ್ಸರದಲ್ಲೇ ಬೀಳಲಿದೆ ಎಂದು ವಿರೋಧ ಪಕ್ಷದವರು ಭವಿಷ್ಯ ನುಡಿದಿದ್ದರು. ಆದರೆ, ನಾವು 100 ದಿನಗಳನ್ನೇ ಪೂರೈಸಿದ್ದೀವಿ. ಈ ಸರಕಾರ ಸುಭದ್ರವಾಗಿದ್ದು ಐದು ವರ್ಷವನ್ನೂ ಪೂರ್ಣಗೊಳಿಸಲಿದೆ ಎಂದರು. ನೂರು …
Read More »ಆಕಸ್ಮಿಕವಾಗಿ ಸಿಎಂ ಹೆಚ್ಡಿಕೆ ಭೇಟಿಯಾದ ಈ ಬಾಲಕಿಯ ಸಂಭ್ರಮಕ್ಕೆ ಕಾರಣ ಏನು ಗೊತ್ತಾ?
ಮಂಡ್ಯ: ‘ಕರುಣಾಳು ಬಾ ಬೆಳಕೇ, ಮಸುಕಿದೀ ಮಬ್ಬಿನಲಿ ಕೈ ಹಿಡಿದು ನಡೆಸೆನ್ನನು..’ ಎಂಬ ಕವಿತೆಯಂತೆ ಮನ ಕರಗಿಸುವ ಘಟನೆಯೊಂದು ಬುಧವಾರ(ಆ.29) ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿಯವರು ಶ್ರೀರಂಗಪಟ್ಟಣದ ಬಳಿ ತೆರಳುವಾಗ ನಡೆದಿದೆ. ಸಿಎಂ ಹೆಚ್.ಡಿ. ಕುಮಾರಸ್ವಾಮಿಯವರನ್ನು ಆಕಸ್ಮಿಕವಾಗಿ ಭೇಟಿಯಾದ ಈ ಹುಡುಗಿ ಸಂಭ್ರಮದಲ್ಲಿ ಮುಳುಗಲು ಕಾರಣ ಏನು ಗೊತ್ತಾ? ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಕೃಷ್ಣರಾಜಸಾಗರದಲ್ಲಿ ಕರಯಕ್ರಮಗಳನ್ನು ಮುಗಿಸಿ ರಾಮನಗರ-ಕನಕಪುರದಲ್ಲಿ ಜನರ ಅಹವಾಲುಗಳನ್ನು ಕೇಳಲು ಹೊರಟಿದ್ದರು. ಅವರ ಕಾರು ಶ್ರೀರಂಗಪಟ್ಟಣ ದಾಟುತ್ತಿತ್ತು. ಆ …
Read More »ಸಮಾಜದ ಅಭಿವೃದ್ಧಿಗೆ ಕಾರ್ಪೋರೇಟ್ ಕಂಪನಿಗಳ ಸಹಕಾರ ಅಗತ್ಯ
ಬೆಂಗಳೂರು: ಕಾರ್ಪೋರೇಟ್ ಕಂಪನಿಗಳು ಸಮಾಜದ ಅಭಿವೃದ್ಧಿಗಾಗಿ ತಮ್ಮ ಲಾಭದಲ್ಲಿ ಇಂತಿಷ್ಟ ಹಣವನ್ನು ಮೀಸಲಿಡುವ ಮೂಲಕ ಸಮಾಜ ಮುಖಿಯಾಗಬೇಕು ಎಂದು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಹೇಳಿದರು. ವೈಟ್ಫೀಲ್ಡ್ನ ಇಪಿಐಪಿ ಆವರಣದಲ್ಲಿ ಎನ್/ಡಬ್ಲ್ಯೂ ನೆಟ್ ಆ್ಯಪ್ ಕಂಪನಿ ಸಹಯೋಗದಲ್ಲಿ ನಿರ್ಮಿಸಿರುವ ಅಗ್ನಿಶಾಮಕ ಠಾಣ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದ ಅವರು, ಎನ್/ಡಬ್ಲ್ಯೂ ನೆಟ್ ಆ್ಯಪ್ ಕಂಪನಿಯು ಅಗ್ನಿಶಾಮಕ ದಳದ ಕಟ್ಟಡ ನಿರ್ಮಾಣಕ್ಕೆ 2 ಕೋಟಿ ರೂ. ಸಹಕಾರ ನೀಡುವ ಮೂಲಕ ಎಲ್ಲಾ ಕಾರ್ಪೋರೇಟ್ ಕಂಪನಿಗಳಿಗೂ …
Read More »ಶೌಚಾಲಯ ಬಳಕೆಗೆ ವಿಶೇಷ ಜಾಗೃತಿ ಆಂದೋಲನ ರೂಪಿಸಿ- ಸಚಿವ ಕೃಷ್ಣ ಭೈರೇಗೌಡ
ಧಾರವಾಡ: ಸ್ವಚ್ಛ ಭಾರತ ಮಿಷನ್ ಅಡಿ ನಿರ್ಮಿಸಲಾಗಿರುವ ಶೌಚಾಲಯಗಳನ್ನು ಬಳಸಲು ಆಂದೋಲನದ ಮಾದರಿಯಲ್ಲಿ ಜನಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ಸಾರ್ವಜನಿಕರಲ್ಲಿ ಈ ಕುರಿತು ಇರುವ ಮನೋಭಾವ, ರೂಢಿಗಳನ್ನು ಬದಲಾಯಿಸಲು ಮಾಹಿತಿ, ಶಿಕ್ಷಣ ಹಾಗೂ ಸಂವಹನ ಚಟುವಟಿಕೆಗಳನ್ನು ಚುರುಕುಗೊಳಿಸಬೇಕು ಎಂದು ಗ್ರಾಮೀಣಾಭಿವೃದ್ಧಿ, ಪಂಚಾಯತರಾಜ್ ಹಾಗೂ ಕಾನೂನು ಸಚಿವರಾದ ಕೃಷ್ಣ ಭೈರೇಗೌಡ ಹೇಳಿದರು. ಇಲ್ಲಿನ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಆ.29ರಂದು ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಗ್ರಾಮೀಣ ಕುಡಿಯುವ ನೀರು …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





