ವಿಜಯನಗರ: ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನ ಖಾಲಿ ಇಲ್ಲ, ಸಿದ್ದರಾಮಯ್ಯ ಅವರೇ ಪೂರ್ತಿ ಐದು ವರ್ಷ ಮುಖ್ಯಮಂತ್ರಿ ಆಗಿರುತ್ತಾರೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಅವರ ವಿರುದ್ಧ ಪರೋಕ್ಷವಾಗಿ ಬೃಹತ್ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್ ಗುಡುಗಿದ್ದಾರೆ. ಈ ಕುರಿತು ಸಿರಸಂಗಿ ಲಿಂಗರಾಜ ದೇಸಾಯಿ ಅವರ 164ನೇ ಜಯಂತ್ಯೋತ್ಸವ ಪ್ರಯುಕ್ತ ಹಮ್ಮಿಕೊಂಡಿರುವ ರಾಜ್ಯ ಮಟ್ಟದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬಂದಿದ್ದ ಅವರು ಮಾಧ್ಯಮದವರೊಂದಿಗೆ ಮಾತನಾಡಿ, ಎರಡೂವರೆ ವರ್ಷದ ಬಳಿಕ ಮುಖ್ಯಮಂತ್ರಿ ಸ್ಥಾನ ಬಿಟ್ಟುಕೊಡುವ …
Read More »ಕೆಪಿಸಿಎಲ್ ನೇಮಕಾತಿ: ಕನ್ನಡ ಭಾಷಾ ಪರೀಕ್ಷೆಯನ್ನು ಮತ್ತೊಮ್ಮೆ ನಡೆಸುವಂತೆ ಹೈಕೋರ್ಟ್ ಆದೇಶ
ಬೆಂಗಳೂರು: ಹೈದರಾಬಾದ್-ಕರ್ನಾಟಕ ಮತ್ತು ಇತರೆ ಕೋಟಾಗಳ ಅಡಿಯಲ್ಲಿ ಜೂನಿಯರ್ ಎಂಜಿನಿಯರ್ (ಮೆಕ್ಯಾನಿಕಲ್) ಮತ್ತು ಸಹಾಯಕ ಎಂಜಿನಿಯರ್(ಮೆಕ್ಯಾನಿಕಲ್) ಹುದ್ದೆಗಳಿಗೆ ಕನ್ನಡ ಭಾಷಾ ಪರೀಕ್ಷೆಯನ್ನು ಮತ್ತೊಮ್ಮೆ ನಡೆಸುವಂತೆ ಕರ್ನಾಟಕ ಹೈಕೋರ್ಟ್ ‘ಕರ್ನಾಟಕ ವಿದ್ಯುತ್ ನಿಗಮ ನಿಯಮಿತ(ಕೆಪಿಸಿಎಲ್)ಕ್ಕೆ ಆದೇಶಿಸಿದೆ. ನೇಮಕಾತಿ ಅಧಿಸೂಚನೆಯು ಕನ್ನಡ ಭಾಷಾ ಪರೀಕ್ಷೆಗೆ ಗರಿಷ್ಠ 150 ಅಂಕಗಳನ್ನು ಸ್ಪಷ್ಟವಾಗಿ ಸೂಚಿಸಿದ್ದರೂ, ಈಗಾಗಲೇ ನಡೆಸಲಾದ ಪರೀಕ್ಷೆಯ ನಂತರ ಅರ್ಹತಾ ಅಂಕಗಳಾಗಿ ಕನಿಷ್ಠ 50 ಅಂಕಗಳನ್ನು ಏಕಪಕ್ಷೀಯವಾಗಿ ನಿಗದಿಪಡಿಸಿರುವುದು ನ್ಯಾಯಯುತವಾಗಿಲ್ಲ ಅಥವಾ ಪಾರದರ್ಶಕ ಕ್ರಮವಲ್ಲ” …
Read More »ನಾಳೆ ಬೆಂಗಳೂರಿನಲ್ಲಿ ಸಿ ಎಲ್ ಪಿ ಸಭೆ: ಇಂದು ರಾಜ್ಯಕ್ಕೆ ರಣದೀಪ್ ಸಿಂಗ್ ಸುರ್ಜೆವಾಲ ಭೇಟಿ
ಬೆಂಗಳೂರು : ನಾಳೆ ಬೆಂಗಳೂರಲ್ಲಿ ಖಾಸಗಿ ಹೋಟೆಲ್ನಲ್ಲಿ ಸಿ ಎಲ್ ಪಿ ಸಭೆ ಹಿನ್ನೆಲೆ ಇಂದು ರಾಜ್ಯಕ್ಕೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಆಗಮಿಸಲಿದ್ದಾರೆ. ನಾಳೆ ಸಂಜೆ ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ಸಿ ಎಲ್ ಪಿ ಸಭೆ ಹಾಗೂ ಜ. 21ರಂದು ನಡೆಯಲಿರುವ ಬೆಳಗಾವಿಯಲ್ಲಿ ಗಾಂಧಿ ಸಮಾವೇಶದ ಕುರಿತು ಚರ್ಚೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಇಂದು ಬೆಂಗಳೂರಿಗೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಅವರು …
Read More »ಅಂಬೇಡ್ಕರ್ ಅವರ ಸಂವಿಧಾನ ಆಶಯದಂತೆ ಕೇಂದ್ರದ ನರೇಂದ್ರ ಮೋದಿ ಸರ್ಕಾರ ಕಾರ್ಯನಿರ್ವಹಿಸುತ್ತಿದೆ: ಕೇಂದ್ರ ಸಚಿವ ಎಚ್ಡಿಕೆ
ಮಂಡ್ಯ: ಸಂವಿಧಾನ ಶಿಲ್ಪಿ ಡಾ.ಅಂಬೇಡ್ಕರ್ ಅವರ ಸಂವಿಧಾನದ ಆಶಯದಂತೆ ಕೇಂದ್ರದ ನರೇಂದ್ರ ಮೋದಿ ಅವರ ಸರಕಾರ ಕಾರ್ಯ ನಿರ್ವಹಿಸುತ್ತಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು. ಮಳವಳ್ಳಿ ತಾಲೂಕಿನ ಕಲ್ಕುಣಿ ಗ್ರಾಮದಲ್ಲಿ ನಿರ್ಮಿಸಲಾಗಿರುವ ‘ಬೌದ್ಧ ಅಂಬೇಡ್ಕರ್ ಮಹಾದ್ವಾರ’ವನ್ನು ಉದ್ಘಾಟಿಸಿ ಮಾತನಾಡಿದ ಅವರು, ಅತ್ಯಂತ ಅರ್ಥಪೂರ್ಣವಾಗಿ ನಿರ್ಮಿಸಲಾಗಿರುವ ಈ ಮಹಾದ್ವಾರ ಸಮ ಸಮಾಜದ ಸಂಕೇತವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಐತಿಹಾಸಿಕವಾಗಿ ಅಂಬೇಡ್ಕರ್ ಅವರಿಗೆ …
Read More »ಕೆಕೆಆರ್ಡಿಬಿಯಿಂದ ವಡಗೇರಾ ಮಿನಿ ವಿಧಾನಸೌಧ ನಿರ್ಮಾಣಕ್ಕಾಗಿ ₹15 ಕೋಟಿ ಮಂಜೂರು
ವಡಗೇರಾ: ತಾಲ್ಲೂಕು ಕೇಂದ್ರವಾಗಿ ಏಳು ವರ್ಷಗಳ ಬಳಿಕ ನಂತರ ವಡಗೇರಾ ಪಟ್ಟಣದಲ್ಲಿ ಮಿನಿವಿಧಾನ ಸೌಧ ನಿರ್ಮಾಣಕ್ಕೆ ಸಿದ್ಧತೆ ನಡೆದಿದ್ದು, ಇದರಿಂದಾಗಿ ತಾಲ್ಲೂಕಿನ ಜನರ ಬಹುದಿನಗಳ ಕನಸು ನನಸಾಗುತ್ತಿದೆ. 2018ರಲ್ಲಿ ಅಂದಿನ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ರಾಜ್ಯದಲ್ಲಿ ಸುಮಾರು 44 ನೂತನ ತಾಲ್ಲೂಕು ಕೇಂದ್ರಗಳನ್ನು ಘೋಷಣೆ ಮಾಡಿದ್ದರು. ಅದರಲ್ಲಿ ವಡಗೇರಾ ಸಹ ಒಂದು. ಜಮೀನು ಮಂಜೂರು: ಇಲ್ಲಿನ ತುಮಕೂರು ಗ್ರಾಮಕ್ಕೆ ತೆರಳುವ ಮಾರ್ಗದಲ್ಲಿ ಇರುವ ಮೊರಾರ್ಜಿ ವಸತಿ ಶಾಲೆಯ ಪಕ್ಕದ ಸ.ನಂ.581ರಲ್ಲಿ …
Read More »ದೇಶದ ಪ್ರತಿಯೊಂದು ಲೋಕಸಭಾ ಕ್ಷೇತ್ರದಲ್ಲಿಯೂ ಪಾಸ್ ಪೋರ್ಟ್ ಸೇವಾ ಕೇಂದ್ರ: ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ
ಗುನಾ: ದೇಶದ ಪ್ರತಿಯೊಂದು ಲೋಕಸಭಾ ಕ್ಷೇತ್ರದಲ್ಲಿಯೂ ಪಾಸ್ಪೋರ್ಟ್ ಸೇವಾ ಕೇಂದ್ರ ತೆರೆಯಲಾಗುವುದು ಎಂದು ಟೆಲಿಕಾಂ ಸಚಿವ ಜ್ಯೋತಿರಾದಿತ್ಯ ಸಿಂದಿಯಾ ಹೇಳಿದ್ದಾರೆ. ಸಂಸತ್ತಿನಲ್ಲಿ ತಾವು ಪ್ರತಿನಿಧಿಸುವ ಮಧ್ಯಪ್ರದೇಶದ ಗುನಾದಲ್ಲಿ ನೂತನ ಕೇಂದ್ರಕ್ಕೆ ಚಾಲನೆ ನೀಡಿದ ವೇಳೆ ಈ ಘೋಷಣೆ ಮಾಡಿದ್ದಾರೆ. ಇದೇ ವೇಳೆ ಅವರು, ರಾಜ್ಯದಲ್ಲಿ ಇನ್ನೂ ಆರು ಹೊಸ ಪಾಸ್ಪೋರ್ಟ್ ಕೇಂದ್ರಗಳು 2025ರಲ್ಲೇ ಆರಂಭವಾಗಲಿವೆ ಎಂದು ತಿಳಿಸಿದ್ದಾರೆ. ಸೇವೆಯನ್ನು ವಿಸ್ತರಿಸುವ ಉದ್ದೇಶದಿಂದ ಸಂಸತ್ತಿನ ಪ್ರತಿಯೊಂದು ಕ್ಷೇತ್ರದಲ್ಲೂ ಸೇವಾ ಕೇಂದ್ರ ತೆರೆಯಲು …
Read More »ಲಾಸ್ ಏಂಜಲೀಸ್ ನಲ್ಲಿ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ ಏರಿಕೆ, ತುರ್ತು ಪರಿಸ್ಥಿತಿ ಘೋಷಣೆ
ಲಾಸ್ ಏಂಜಲೀಸ್: ಬಹುತೇಕ ಶ್ರೀಮಂತರೇ ನೆಲೆಸಿದ್ದ ಲಾಸ್ ಏಂಜಲೀಸ್ ನಲ್ಲಿ ಮಹಾಮಾರಿಯಂತೆ ಕಾಡ್ಗಿಚ್ಚು ವ್ಯಾಪಿಸುತ್ತಲೇ ಇದ್ದು, ಸಾವಿನ ಸಂಖ್ಯೆ 11ಕ್ಕೆ ಏರಿಕೆಯಾಗಿದೆ. ಅಮೆರಿಕ ಇತಿಹಾಸದಲ್ಲೇ ಅತ್ಯಂತ ಭೀಕರ ಎನ್ನಬಹುದಾದ ಪ್ರಕೃತಿ ವಿಕೋಪದ ಹಿನ್ನೆಲೆಯಲ್ಲಿ ಆರೋಗ್ಯ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ. ಲಾಸ್ ಏಂಜಲೀಸ್ ಕರಾವಳಿ ತೀರದಲ್ಲಿ ಮೊದಲ ಬಾರಿ ಕಾಣಿಸಿಕೊಂಡ ಕಾಡ್ಗಿಚ್ಚು 5 ದಿನಗಳಾದರೂ ನಿಯಂತ್ರಣಕ್ಕೆ ಬರುತ್ತಿಲ್ಲ. ಇದರಿಂದ ಸುಮಾರು 12 ಸಾವಿರ ಕಟ್ಟಡಗಳು ಆಹುತಿಯಾಗಿದ್ದು, ಲಕ್ಷಾಂತರ ಜನ ಮನೆ ಮಠ …
Read More »ಸಿಂಧನೂರು: ನಗರ ಯೋಜನೆ ಪ್ರಾಧಿಕಾರವನ್ನು ನಗರಾಭಿವೃದ್ಧಿ ಪ್ರಾಧಿಕಾರವೆಂದು ಮೇಲ್ದರ್ಜೆಗೇರಿಸಿ ಆದೇಶ
ಸಿಂಧನೂರು: ನಗರ ಯೋಜನಾ ಪ್ರಾಧಿಕಾರವನ್ನು ಸರ್ಕಾರ ಸಿಂಧನೂರು ನಗರಾಭಿವೃದ್ಧಿ ಪ್ರಾಧಿಕಾರವೆಂದು ಮೇಲ್ದರ್ಜೆಗೇರಿಸಿ ಆದೇಶ ನೀಡಿದೆ. ಡಿಸೆಂಬರ್ 21, 2000ರಲ್ಲಿ ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನಾ ಕಾಯ್ದೆ 1961ರ ಕಲಂ 4(ಎ-1) ರಡಿಯಲ್ಲಿ ಪ್ರದತ್ತವಾದ ಅಧಿಕಾರದಿಂದ ಸಿಂಧನೂರು ಸ್ಥಳೀಯ ಯೋಜನಾ ಪ್ರದೇಶದಲ್ಲಿನ ಪಟ್ಟಣ ಮತ್ತು ಸುತ್ತಮುತ್ತಲಿನ 21 ಗ್ರಾಮಗಳಿಗೆ ಸೀಮಿತಗೊಳಿಸಿ ನಗರ ಯೋಜನಾ ಪ್ರಾಧಿಕಾರ ಎಂದು ಘೋಷಿಸಲಾಗಿತ್ತು. ಸಿಂಧನೂರು ತಾಲ್ಲೂಕು ಕೇಂದ್ರ ಸ್ಥಾನವಾಗಿದ್ದು, ಪಟ್ಟಣದ ಯೋಜನಾಬದ್ಧ ಬೆಳವಣಿಗೆಯ ಉದ್ದೇಶದಿಂದ ಹಾಗೂ …
Read More »ಎರಡ್ಮೂರು ತಿಂಗಳಲ್ಲಿ ಭೂ ದಾಖಲೆಗಳ ಡಿಜಿಟಲೀಕರಣ: ಸಚಿವ ಈಶ್ವರ್ ಖಂಡ್ರೆ
ಬೀದರ್: ಜಿಲ್ಲಾಡಳಿತವು ಲಕ್ಷಾಂತರ ಭೂ ದಾಖಲೆಗಳನ್ನು ಡಿಜಿಟಲೀಕರಣ ಮಾಡುವ ಪ್ರಕ್ರಿಯೇ ಪ್ರಾರಂಭಿಸಿದ್ದು ಎರಡ್ಮೂರು ತಿಂಗಳೊಳಗಾಗಿ ಭೂ ದಾಖಲೆಗಳ ಡಿಜಿಟಲೀಕರಣ ಮಾಡಲಾಗುತ್ತದೆ ಎಂದು ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಹೇಳಿದರು. ಅವರು ಭಾಲ್ಕಿ ತಹಸೀಲ್ ಕಛೇರಿಯಲ್ಲಿ ಹಮ್ಮಿಕೊಂಡಿದ್ದ ಭೂ ಸುರಕ್ಷಾ ಇ-ಖಜಾನೆ (ತಾಲೂಕು ಕಛೇರಿ, ಸರ್ವೆ ಮತ್ತು ನೋಂದಣಿ ಇಲಾಖೆಗಳ ಎಲ್ಲಾ ಭೂ ದಾಖಲೆಗಳ ಡಿಜಿಟಲೀಕರಣ) ಉದ್ಘಾಟನೆ ಮಾಡಿ ಮಾತನಾಡಿದರು. ಕಚೇರಿಗಳಲ್ಲಿ ದಾಖಲೆಗಳು …
Read More »ನಿವೃತ್ತಿ ನಂತರ ಅಧಿಕಾರಿಗಳನ್ನು ಲೋಕ ಸೇವಾ ಆಯೋಗಗಳಲ್ಲಿ ಮುಂದುವರೆಸುವಿಕೆಯನ್ನು ತಡೆಯಬೇಕು: ಉಪರಾಷ್ಟ್ರಪತಿ ಧನಕರ್
ಬೆಂಗಳೂರು: ಅಧಿಕಾರಿಗಳು ಮತ್ತು ರಾಜಕಾರಣಿಗಳು ತಮ್ಮ ಕುಟುಂಬದವರನ್ನು ಅರ್ಹತೆ ಇಲ್ಲದಿದ್ದರೂ ಲೋಕ ಸೇವಾ ಆಯೋಗದ ಸದಸ್ಯರನ್ನಾಗಿ ನೇಮಿಸುತ್ತಿದ್ದಾರೆ. ಈ ರೀತಿಯ ಸ್ವಜನ ಪಕ್ಷಪಾತದಿಂದಾಗಿ ಲೋಕಸೇವಾ ಆಯೋಗಗಳ ವಿಶ್ವಾಸಾರ್ಹತೆ ಕುಸಿಯುವಂತಾಗಿದೆ. ಈ ಅಪವಾದದಿಂದ ಆಯೋಗಗಳು ಹೊರಬರಲು ಕಾನೂನು ಬಿಗಿಗೊಳಿಸಬೇಕಿದೆ ಎಂದು ಉಪರಾಷ್ಟ್ರಪತಿ ಜಗದೀಪ್ ಧನಕರ್ ಹೇಳಿದರು. ರಾಜ್ಯ ಲೋಕಸೇವಾ ಆಯೋಗ ಖಾಸಗಿ ಹೋಟೆಲ್ನಲ್ಲಿ ಶನಿವಾರ ಆಯೋಜಿಸಿದ್ದ ’25ನೇ ರಾಜ್ಯ ಲೋಕಸೇವಾ ಆಯೋಗಗಳ ಅಧ್ಯಕ್ಷರ ಸಮ್ಮೇಳನ’ ಉದ್ಘಾಟಿಸಿ ಮಾತನಾಡಿ, ಅಧಿಕಾರಿಗಳು ಮತ್ತು ರಾಜಕಾರಣಿಗಳು …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





