Breaking News

BigTv News

ಪ್ರಸಕ್ತ ಸಾಲಿನ ಸಮಗ್ರ ಸಹಭಾಗಿತ್ವ ವಾರ್ಷಿಕ ಕ್ರಿಯಾ ಯೋಜನೆ ಸಿದ್ಧಪಡಿಸಲು ಎಲ್ಲ ಗ್ರಾ.ಪಂ.ಗಳಿಗೆ ಸೂಚನೆ: ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು: ಗ್ರಾಮ ಪಂಚಾಯಿತಿ ದೂರದೃಷ್ಟಿ ಯೋಜನೆ ಆಧರಿಸಿ 2025-26ನೇ ಸಾಲಿನ ಸಮಗ್ರ ಸಹಭಾಗಿತ್ವ ವಾರ್ಷಿಕ ಕ್ರಿಯಾ ಯೋಜನೆಯನ್ನು ಸಿದ್ಧಪಡಿಸಲು ರಾಜ್ಯದ ಎಲ್ಲಾ ಗ್ರಾಮ ಪಂಚಾಯತಿಗಳಿಗೆ ಸೂಚಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ. ಈ ಬಗ್ಗೆ ತಮ್ಮ ಸಾಮಾಜಿಕ ಜಾಲತಾಣದಲ್ಲಿ ವಿವರಿಸಿರುವ ಅವರು, ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ 1993 ಪ್ರಕರಣ 309(ಬಿ) ಅಡಿಯಲ್ಲಿ ರಾಜ್ಯದ …

Read More »

ಆನ್ ಲೈನ್ ಬೆಟ್ಟಿಂಗ್’ ಗೆ ಮತ್ತೊಬ್ಬ ಯುವಕ ಬಲಿ : 30 ಲಕ್ಷ ಸಾಲ ಮಾಡಿ ಮನೆಯಲ್ಲೇ ಸೂಸೈಡ್.!

ಕೆಲವರು ಆನ್‌ಲೈನ್‌ನಲ್ಲಿ ಕ್ರಿಕೆಟ್ ಬೆಟ್ಟಿಂಗ್ ಮಾಡುತ್ತಾರೆ. ಆರಂಭದಲ್ಲಿ, ಹಣವನ್ನು ಸ್ವೀಕರಿಸಿದ ನಂತರ, ಇದು ಒಳ್ಳೆಯದು ಎಂದು ಅವರು ಭಾವಿಸುತ್ತಾರೆ. ಬಳಿಕ ಬರುಬರುತ್ತಾ ಬೆಟ್ಟಿಂಗ್ ವ್ಯಸನಿಯಾಗುತ್ತಾರೆ. ಈ ರೀತಿ ಹಣ ಕಳೆದುಕೊಳ್ಳುವುದು ಮಾತ್ರವಲ್ಲದೆ ಸಾಲದ ಸುಳಿಯಲ್ಲಿ ಸಿಲುಕುತ್ತೀರಿ. ಕೊನೆಗೆ ಪ್ರಾಣ ಕಳೆದುಕೊಳ್ಳುತ್ತಾರೆ.ತೆಲಂಗಾಣ ರಾಜ್ಯದಲ್ಲಿ ದೊಡ್ಡ ದುರಂತವೊಂದು ನಡೆದಿದೆ. ಮತ್ತೊಬ್ಬ ಯುವಕ ಆನ್‌ಲೈನ್ ಬೆಟ್ಟಿಂಗ್‌ಗೆ ಬಲಿಯಾಗಿದ್ದಾನೆ. ವಾರಂಗಲ್ ಜಿಲ್ಲೆಯ ವರ್ತಣ್ಣ ಪೇಟ ಮಂಡಲದ ಇಲ್ಲಂದ ಗ್ರಾಮದ ರಾಜ್ ಕುಮಾರ್ ಆನ್ ಲೈನ್ ಬೆಟ್ಟಿಂಗ್ …

Read More »

ಚನ್ನರಾಯಪಟ್ಟಣ: ಸಾರ್ವಜನಿಕ, ಸರ್ಕಾರಿ ಆಸ್ಪತ್ರೆಗಳ ನವೀಕರಣಕ್ಕೆ ₹2.89 ಕೋಟಿ ಅನುದಾನ ಬಿಡುಗಡೆಗೆ ಮನವಿ

ಚನ್ನರಾಯಪಟ್ಟಣ: ಪಟ್ಟಣದಲ್ಲಿರುವ ಸಾರ್ವಜನಿಕ ಆಸ್ಪತ್ರೆ ಸೇರಿ ತಾಲ್ಲೂಕಿನಲ್ಲಿರುವ ಸರ್ಕಾರಿ ಆಸ್ಪತ್ರೆಗಳ ನವೀಕರಣಕ್ಕೆ ₹2.89 ಕೋಟಿ ಅನುದಾನ ಬಿಡುಗಡೆ ಮಾಡುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಬೆಂಗಳೂರಿನಲ್ಲಿ ಶಾಸಕ ಸಿ.ಎನ್. ಬಾಲಕೃಷ್ಣ ಮನವಿ ಸಲ್ಲಿಸಿದರು. ತಾಲ್ಲೂಕು ಕೇಂದ್ರದಲ್ಲಿರುವ ಸಾರ್ವಜನಿಕ ಆಸ್ಪತ್ರೆಯ ದುರಸ್ತಿ ಮತ್ತು ನವೀಕರಣಕ್ಕೆ ₹52 ಲಕ್ಷ, ನುಗ್ಗೇಹಳ್ಳಿ ಹೋಬಳಿ ಕೇಂದ್ರದಲ್ಲಿರುವ ಹಳೆಯ ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರದ ದುರಸ್ತಿಗೆ ₹23 ಲಕ್ಷ, ಹಿರೀಸಾವೆ ಹೋಬಳಿ ಕೇಂದ್ರದಲ್ಲಿರುವ ಸಮುದಾಯ …

Read More »

2023-24ನೇ ಸಾಲಿನಲ್ಲಿ ದೇಶದ ಗ್ರಾಮೀಣ ಬಡತನ ಶೇ.4.86ಕ್ಕೆ ಇಳಿಕೆ

ನವದೆಹಲಿ : ಇತ್ತೀಚಿನ ದಿನಗಳಲ್ಲಿ ಭಾರತದಲ್ಲಿ ಬಡತನಕ್ಕೆ ಸಂಬಂಧಿಸಿದ ವಿವಿಧ ಆರ್ಥಿಕ ಸಂಶೋಧನಾ ವರದಿಗಳು ಪ್ರಕಟವಾಗುತ್ತಿದ್ದು, ನಗರಗಳಿಗೆ ಹೋಲಿಸಿದರೆ ಹಳ್ಳಿಗಳಲ್ಲಿ ಬಡತನ ವೇಗವಾಗಿ ಕಡಿಮೆಯಾಗುತ್ತಿದೆ ಮತ್ತು ಆದಾಯ ಮತ್ತು ಕೊಳ್ಳುವ ಶಕ್ತಿ ಕೂಡ ವೇಗವಾಗಿ ಹೆಚ್ಚುತ್ತಿದೆ ಎಂಬ ಅಂಶವನ್ನು ಎತ್ತಿ ತೋರಿಸುತ್ತಿವೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಸಂಶೋಧನೆ ಬಿಡುಗಡೆ ಮಾಡಿದ ಬಡತನದ ಕುರಿತಾದ ಇತ್ತೀಚಿನ ವರದಿಯು, ಬಡವರಿಗೆ ನೇರವಾಗಿ ಪ್ರಯೋಜನವಾಗುವ ಸರ್ಕಾರಿ ಬೆಂಬಲ ಕಾರ್ಯಕ್ರಮಗಳು ಮತ್ತು ಬೆಳವಣಿಗೆಯ …

Read More »

ಜಾತಿಗಣತಿ ಕುರಿತು ಸಂಪುಟ ಸಭೆಯಲ್ಲಿ ಚರ್ಚಿಸಲಾಗುವುದು: ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು: ಜಾತಿ ಗಣತಿ ವಿಚಾರವನ್ನು ಸಂಪುಟ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ತಮ್ಮ ಸರಕಾರಿ ಗೃಹ ಕಚೇರಿ ಕೃಷ್ಣಾದಲ್ಲಿ ಶುಕ್ರವಾರ ಕಾಂಗ್ರೆಸ್ ಹಿರಿಯ ನಾಯಕರ ಸಭೆ ಬಳಿಕ ಶಿವಕುಮಾರ್ ಮಾಧ್ಯಮದವರ ಜೊತೆ ಮಾತನಾಡುತ್ತಿದ್ದರು. ಜಾತಿ ಗಣತಿ ವಿರೋಧಿಸಿ ಒಕ್ಕಲಿಗ ಹಾಗೂ ಲಿಂಗಾಯತ ನಾಯಕರ ಸಭೆ ನಡೆಯುವುದೇ ಎಂಬ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಡಿಸಿಎಂ, “ನನಗೆ ಗೊತ್ತಿರುವ ಮಾಹಿತಿ ಪ್ರಕಾರ ಈ ಬಗ್ಗೆ ಯಾವುದೇ ಸಭೆ ಇಲ್ಲ. …

Read More »

ಶಿವಮೊಗ್ಗ: ಕೆ ಎಸ್ ಆರ್ ಟಿ ಸಿ ಯಿಂದ ಶಿಶಿಕ್ಷು ತರಬೇತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಶಿವಮೊಗ್ಗ : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಶಿವಮೊಗ್ಗ ವಿಭಾಗದಿಂದ ತಾಂತ್ರಿಕ ವೃತ್ತಿಗಳಲ್ಲಿ ಅರ್ಹ ಅಭ್ಯರ್ಥಿಗಳನ್ನುಶಿಶಿಕ್ಷು ತರಬೇತಿ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದ್ದು, ಜ.5 ರಿಂದ ಜ.20 ವರೆಗೆ ಅರ್ಜಿ ಸಲ್ಲಿಸಬಹುದು. ಐಟಿಐ ಫಿಟ್ಟರ್, ಎಲೆಕ್ಟ್ರಿಷಿಯನ್, ಮೆಕ್ಯಾನಿಕ್( ಡಿಸೇಲ್), ವೆಲ್ಡರ್, ಕೋಪಾ(ಪಾಸಾ)/ ಐಟಿಐ ನಲ್ಲಿ ತೇರ್ಗಡೆ ಹೊಂದಿರುವ ಡಿಟಿಪಿಓ ಅಭ್ಯರ್ಥಿಗಳು ತರಬೇತಿ ಪಡೆಯಲು ಅರ್ಹತೆ ಹೊಂದಿದ್ದಾರೆ. ಮೆಕಾನಿಕಲ್ ಡಿಸೇಲ್-20, ಫಿಟ್ಟರ್-10, ವೆಲ್ಡರ್-10, ಎಲೆಕ್ಟಿçಷಿಯನ್-20, ಕೋಪಾ/ಡಿಡಿಪಿಓ-10 ಶಿಶಿಕ್ಷ …

Read More »

ಷೇರುಗಳ ಮಾರಾಟ ₹14 ಲಕ್ಷ ಕೋಟಿ ಬಂಡವಾಳ ಸಂಗ್ರಹಿಸುವ ನಿರೀಕ್ಷೆ: ಸೆಬಿ ಅಧ್ಯಕ್ಷೆ ಮಾಧವಿ ಪುರಿ

ಮುಂಬೈ: 2024-25ನೇ ಆರ್ಥಿಕ ವರ್ಷದಲ್ಲಿ ಕಂಪನಿಗಳು ಷೇರುಗಳ ಮಾರಾಟ ಹಾಗೂ ಸಾಲಪತ್ರಗಳ ಮೂಲಕ ₹14.27 ಲಕ್ಷ ಕೋಟಿ ಬಂಡವಾಳ ಸಂಗ್ರಹಿಸುವ ನಿರೀಕ್ಷೆಯಿದೆ ಎಂದು ಭಾರತೀಯ ಷೇರುಪೇಟೆ ನಿಯಂತ್ರಣ ಮಂಡಳಿ (ಸೆಬಿ) ಅಧ್ಯಕ್ಷೆ ಮಾಧವಿ ಪುರಿ ಬುಚ್‌ ಹೇಳಿದ್ದಾರೆ. 2023-24ರಲ್ಲಿ ₹11.8 ಲಕ್ಷ ಕೋಟಿ ಸಂಗ್ರಹವಾಗಿತ್ತು. ಇದಕ್ಕೆ ಹೋಲಿಸಿದರೆ ಬಂಡವಾಳ ಸಂಗ್ರಹ ಪ್ರಮಾಣವು ಶೇ 21ರಷ್ಟು ಹೆಚ್ಚಳವಾಗುವ ಅಂದಾಜಿದೆ ಎಂದು ಹೇಳಿದ್ದಾರೆ. ಪ್ರಸಕ್ತ ಆರ್ಥಿಕ ವರ್ಷದ ಮೊದಲ ಒಂಬತ್ತು ತಿಂಗಳಲ್ಲಿ ಈಕ್ವಿಟಿ …

Read More »

ಬೆಳಗಾವಿಯಲ್ಲಿ ಎನ್ ಐ ಎಫ್ ಟಿ ಇ ಎಂ ಸ್ಥಾಪನೆಗೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ರಿಗೆ ಸಂಸದ ಜಗದೀಶ್ ಶೆಟ್ಟರ್ ಮನವಿ

ಬೆಳಗಾವಿ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಸಂಸದ ಜಗದೀಶ್ ಶೆಟ್ಟರ್ ಅವರು ಶುಕ್ರವಾರ ಭೇಟಿ ಮಾಡಿದ್ದು, ಬೆಳಗಾವಿಯಲ್ಲಿ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಫುಟ್ ಟೆಕ್ನಾಲಜಿ ಎಂಟರ್ ಪ್ರೆನರ್ಶಿಪ್ ಆಯಂಡ್ ಮ್ಯಾನೇಜ್ ಮೆಂಟ್ ಸ್ಥಾಪನೆಗೆ ಮನವಿ ಮಾಡಿದರು. ಇದಕ್ಕೂ ಮುನ್ನ ಕೇಂದ್ರ ಆಹಾರ ಸಂಸ್ಕರಣಾ ಉದ್ಯಮ ಸಚಿವರಾದ ಚಿರಾಗ್ ಪಾಸ್ವಾನ್ ಅವರನ್ನು ಭೇಟಿ ಮಾಡಿ, ಅವರಿಗೂ ಮನವಿ ಸಲ್ಲಿಸಿದರು. ಈ ಪ್ರಸ್ತಾವನೆ ಅನುಮೋದನೆ, ಅಗತ್ಯ ಅನುದಾನ ಮಂಜೂರಾತಿಗಾಗಿ ಕೇಂದ್ರ ಹಣಕಾಸು …

Read More »

ಇಂದು ಬೆಂಗಳೂರಿಗೆ ಆಗಮಿಸಿದ ಉಪರಾಷ್ಟ್ರಪತಿ ಜಗದೀಪ್ ಧನಕರ್: ಸಿಎಂ ಸಿದ್ದರಾಮಯ್ಯರಿಂದ ಸ್ವಾಗತ

ಬೆಂಗಳೂರು: ಭಾರತದ ಉಪರಾಷ್ಟ್ರಪತಿ ಜಗದೀಪ್ ಧನಕರ್ ಹಾಗೂ ಅವರ ಪತ್ನಿ ಶ್ರೀಮತಿ ಸುದೇಶ ಧನಕರ್ ಅವರು ಇಂದು ಬೆಂಗಳೂರಿಗೆ ಭೇಟಿ ನೀಡಿದ್ದಾರೆ. ಬೆಂಗಳೂರಿಗೆ ಆಗಮಿಸಿದ ಉಪರಾಷ್ಟ್ರಪತಿ ಅವರನ್ನು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರಾದ ಎಮ್ ಸಿ ಸುಧಾಕರ್ ಸೇರಿದಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಹಾಗೂ ರಾಜ್ಯದ ಹಿರಿಯ ಅಧಿಕಾರಿಗಳು ಹೆಚ್‌ಎಎಲ್ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದರು. ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಹಮ್ಮಿಕೊಳ್ಳಲಾಗಿರುವ ಎಲ್ಲಾ …

Read More »

2025-26ನೇ ಸಾಲಿನ ಸಮಗ್ರ ಸಹಭಾಗಿತ್ವ ವಾರ್ಷಿಕ ಕ್ರಿಯಾ ಯೋಜನೆ ಸಿದ್ಧಪಡಿಸಲು ಎಲ್ಲ ಗ್ರಾ.ಪಂ.ಗಳಿಗೆ ಸೂಚನೆ: ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು : ಗ್ರಾಮ ಪಂಚಾಯತ್‌ ದೂರದೃಷ್ಟಿ ಯೋಜನೆ ಆಧರಿಸಿ 2025-26ನೇ ಸಾಲಿನ ಸಮಗ್ರ ಸಹಭಾಗಿತ್ವ ವಾರ್ಷಿಕ ಕ್ರಿಯಾ ಯೋಜನೆಯನ್ನು ಸಿದ್ದಪಡಿಸಲು ರಾಜ್ಯದ ಎಲ್ಲ ಗ್ರಾಮ ಪಂಚಾಯತಿಗಳಿಗೆ ಸೂಚಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮ ಪ್ರಕಟನೆ ನೀಡಿರುವ ಅವರು, ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ 1993 ಪ್ರಕರಣ 309(ಬಿ)ರಡಿಯಲ್ಲಿ ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗಳು ಮುಂದಿನ …

Read More »