Breaking News

BigTv News

ರಾಯಚೂರು ಜಿಲ್ಲೆಯಲ್ಲಿ ₹68.30 ಕೋಟಿ ಬಂಡವಾಳ ಹೂಡಿಕೆಯ ಹೊಸ ಯೋಜನೆಗಳಿಗೆ ಅನುಮೋದನೆ

ರಾಯಚೂರು: ಜಿಲ್ಲೆಯಲ್ಲಿ ₹ 68.30 ಕೋಟಿ ಬಂಡವಾಳ ಹೂಡಿಕೆಯ ಹೊಸ ಯೋಜನೆಗಳಿಗೆ ಜಿಲ್ಲಾ ಮಟ್ಟದ ಏಕಗವಾಂಕ್ಷಿ ಸಮಿತಿ ಅನುಮೋದನೆ ನೀಡಿದೆ. ಜಿಲ್ಲಾ ಮಟ್ಟದ ಏಕ ಗವಾಕ್ಷಿ ಸಮಿತಿಯ ಅಧ್ಯಕ್ಷರೂ ಆದ ಜಿಲ್ಲಾಧಿಕಾರಿ ನಿತೀಶ್ ಕೆ. ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಅನುಮೋದನೆ ನೀಡಲಾಯಿತು. ಜಿಲ್ಲಾ ಮಟ್ಟದ ಏಕಗವಾಕ್ಷಿ ಸಮಿತಿಯ ಸದಸ್ಯ ಕಾರ್ಯದರ್ಶಿಯೂ ಆದ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರು, ₹1 ಕೋಟಿ ವೆಚ್ಚಲದಲ್ಲಿ ಜಾನುವಾರು ಮೇವು …

Read More »

ಭಾರತೀಯ ವಾಯುಪಡೆಯ ಏರ್ ಮ್ಯಾನ್ ಆಯ್ಕೆಗೆ ನೇಮಕಾತಿ ರ‍್ಯಾಲಿ

ಶಿವಮೊಗ್ಗ: ಭಾರತೀಯ ವಾಯುಪಡೆಯು ಭಾರತದ/ಗೂರ್ಖಾ(ನೇಪಾಳ) ಪುರುಷ ಅಭ್ಯರ್ಥಿಗಳನ್ನು ಭಾರತೀಯ ವಾಯುಪಡೆಗೆ ಏರ್‌ಮ್ಯಾನ್ ಆಗಿ ಗ್ರೂಪ್ ‘ವೈ'(ತಾಂತ್ರಿಕವಲ್ಲದ) ವೈದ್ಯಕೀಯ ಸಹಾಯಕ ವೃತ್ತಿಗೆ ಸೇರಲು ಜ.29 ರಿಂದ ಫೆ.06 ರವರೆಗೆ ನೇಮಕ ರ‍್ಯಾಲಿ ಏರ್ಪಡಿಸಿದೆ. ನೇಮಕಾತಿ ರ‍್ಯಾಲಿಯನ್ನು ಮಹಾರಾಜ ಕಾಲೇಜು ಮೈದಾನ, ಪಿ ಟಿ ಉಷಾ ರಸ್ತೆ, ಶೆಣೈಸ್ ಎರ್ನಾಕುಲಂ, ಕೊಚ್ಚಿ, ಕೇರಳ 682011 ಇಲ್ಲಿ ಏರ್ಪಡಿಸಲಾಗಿದೆ. ಜ.29 ರಿಂದ 30 ರವರೆಗೆ ಗುಂಪು ವೈ/ ವೈದ್ಯಕೀಯ ಸಹಾಯಕರ ಹುದ್ದೆಗೆ, ವಿದ್ಯಾರ್ಹತೆ 10+2 …

Read More »

ಆರೋಗ್ಯ ಇಲಾಖೆಯ 878 ಹುದ್ದೆಗಳ ನೇಮಕಾತಿಗೆ ಸರ್ಕಾರ ಕ್ರಮ ಕೈಗೊಳ್ಳವಂತೆ ಆಗ್ರಹ

ಬೆಂಗಳೂರು :ಕೋವಿಡ್ 19 ಸಂದರ್ಭದಲ್ಲಿ ರಾಜ್ಯ ಸರ್ಕಾರದ ಆರೋಗ್ಯ ಇಲಾಖೆಯು ತನ್ನ 878 ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಆರಂಭ ಮಾಡಿ ಹಲವು ವರ್ಷ ಕಳೆದರೂ ಇನ್ನೂ ಪೂರ್ಣಗೊಳಿಸದೇ ಇರುವುದು ಅಚ್ಚರಿಗೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಆರೋಗ್ಯ ಇಲಾಖೆಯಲ್ಲಿ ನೇಮಕಾತಿ ಭಾಗ್ಯ ಮರೀಚಿಕೆಯಾಯಿತೇ ಎಂಬ ಪ್ರಶ್ನೆ ಮೂಡಿದೆ. ಕಲ್ಯಾಣ ಕರ್ನಾಟಕ ಹಾಗೂ ಉಳಿದ ಕರ್ನಾಟಕ ಪ್ರದೇಶಗಳಿಗೆ ಸುಮಾರು 878 ವಿವಿದ ಹುದ್ದೆಗಳ ನೇಮಕಾತಿಯ ಅಧಿಸೂಚನೆಯು 2022ರಲ್ಲಿ ಅರ್ಜಿ ಆಹ್ವಾನಿಸಿತ್ತು. ಆದರೆ …

Read More »

ತಿರುಪತಿ ಕಾಲ್ತುಳಿತ ಗಲಾಟೆಗೆ ಸಿಎಂ, ಪೊಲೀಸ್, ಕಂದಾಯ ಅಧಿಕಾರಿಗಳೇ ಕಾರಣ: ಮಾಜಿ ಸಿಎಂ ಜಗನ್ ರೆಡ್ಡಿ ಆರೋಪ

ಆಂಧ್ರ ಪ್ರದೇಶ: ತಿರುಪತಿಯಲ್ಲಿ ಕಾಲ್ತುಳಿತಕ್ಕೆ ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ಪೊಲೀಸ್ ಮತ್ತು ಕಂದಾಯ ಅಧಿಕಾರಿಗಳೇ ಕಾರಣ ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್.ಚಂದ್ರಬಾಬು ನಾಯ್ಡು ಆರೋಪಿಸಿದ್ದಾರೆ. ಚಂದ್ರಬಾಬು ನಾಯ್ಡು ಅವರ ಕುಪ್ಪಂ ಪ್ರವಾಸಕ್ಕಾಗಿ ಮೂರು ದಿನಗಳ ಕಾಲ ಇಡೀ ಪೊಲೀಸ್ ಪಡೆಯನ್ನು ನಿಯೋಜಿಸಲಾಗಿತ್ತು. ಜನಸಂದಣಿ ನಿರ್ವಹಣೆಗೆ ಯಾವುದೇ ಪೊಲೀಸ್ ಸಿಬ್ಬಂದಿ ಇರಲಿಲ್ಲ. ಇದು ಕಾಲ್ತುಳಿತಕ್ಕೆ ಕಾರಣವಾಯಿತು” ಎಂದು ರೆಡ್ಡಿ ಆರೋಪಿಸಿದರು. ಜನವರಿ 6, 7 ಮತ್ತು 8ರಂದು ಸಿಎಂ ನಾಯ್ಡು …

Read More »

ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಮುಕ್ತ ನಿಧಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ಬೆಳಗಾವಿ: ಬೆಳಗಾವಿ ಮಹಾನಗರ ಪಾಲಿಕೆ ವ್ಯಾಪ್ತಿಯ ಸನ್ 2024-25ನೇ ಸಾಲಿನ ಎಸ್.ಎಫ್.ಸಿ ಮುಕ್ತ ನಿಧಿ ಯೋಜನೆಯಡಿ ಸಣ್ಣ ಉದ್ದಿಮೆದಾರರಿಗೆ ಸಹಾಯಧನ ಕಾರ್ಯಕ್ರಮ, ಶಿಕ್ಷಣ-ಲ್ಯಾಪ್‌ಟಾಪ್, ಇತರೇ ಬಡ ವಿಧ್ಯಾರ್ಥಿಗಳಿಗೆ ಉನ್ನತ ಶಿಕ್ಷಣಕ್ಕಾಗಿ ಸಹಾಯಧನ ಒದಗಿಸುವುದು, ಶಸ್ತ್ರ ಚಿಕಿತ್ಸೆಗೆ ಧನ ಸಹಾಯ ನೀಡುವ ಕಾರ್ಯಕ್ರಮ, ಸಾಂಸ್ಕೃತಿಕ ಹಾಗೂ ಇತರೆ ವ್ಯಾಸಂಗೇತರ ಚಟುವಟಿಕೆಗಳಲ್ಲಿ ಭಾಗಹಿಸುವ ವಿಧ್ಯಾರ್ಥಿಗಳಿಗೆ ಪ್ರೋತ್ಸಾಹ ಧನ, ಸ್ಪರ್ಧಾತ್ಮಕ ಪರೀಕ್ಷೆ ನೋಂದಾಯಿತ ತರಬೇತಿ ಸಂಸ್ಥೆಗಳ ಮೂಲಕ ಅನುದಾನ ಒದಗಿಸುವ ಕುರಿತು, ವೈಯಕ್ತಿಕ ಶೌಚಾಲಯ …

Read More »

ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ತೆರಿಗೆ ಪಾಲು ಹಂಚಿಕೆ: ₹6,310 ಕೋಟಿ ಬಿಡುಗಡೆ

ನವದೆಹಲಿ: ಕೇಂದ್ರ ಸರ್ಕಾರವು ಕರ್ನಾಟಕ ಸರ್ಕಾರಕ್ಕೆ ತೆರಿಗೆ ಪಾಲಿನ ಕಂತಿನ ರೂಪದಲ್ಲಿ ₹6310.40 ಕೋಟಿಯನ್ನು ಇಂದು ಬಿಡುಗಡೆ ಮಾಡಿದೆ. ಕೇಂದ್ರವು 28 ರಾಜ್ಯಗಳಿಗೆ ಒಟ್ಟು ₹1,73,030 ಕೋಟಿ ಬಿಡುಗಡೆಗೊಳಿಸಿದೆ. 15ನೇ ಹಣಕಾಸು ಆಯೋಗದ ಶಿಫಾರಸಿನ ಪ್ರಕಾರ, ಆರ್ಥಿಕ ವರ್ಷದಲ್ಲಿ ಕೇಂದ್ರ ಸರ್ಕಾರ ಸಂಗ್ರಹಿಸುವ ತೆರಿಗೆಯಲ್ಲಿ ಶೇ 41 ಮೊತ್ತವನ್ನು ರಾಜ್ಯ ಸರ್ಕಾರಗಳಿಗೆ 14 ಕಂತುಗಳಲ್ಲಿ ಹಂಚಿಕೆ ಮಾಡಲಾಗುತ್ತದೆ. 2024ರ ಡಿಸೆಂಬರ್ ತಿಂಗಳ ಕಂತಿನಲ್ಲಿ ₹89,086 ಕೋಟಿ ಬಿಡುಗಡೆಗೊಳಿಸಿತ್ತು. ರಾಜ್ಯಗಳಿಗೆ ಅಭಿವೃದ್ಧಿ …

Read More »

ಅಂಬಿಗರ ಚೌಡಯ್ಯ ಭವನದ ಕಟ್ಟಡ ಕಾಮಗಾರಿಯನ್ನು ಮೂರು ತಿಂಗಳಲ್ಲಿ ಪೂರ್ಣಗೊಳಿಸಲಾಗುವುದು: ಸಚಿವ ಪ್ರಿಯಾಂಕ್ ಖರ್ಗೆ ಭರವಸೆ

ಕಲಬುರಗಿ : ಚಿತ್ತಾಪುರ ಪಟ್ಟಣದ ನಾಗಾವಿ ಪ್ರದೇಶದಲ್ಲಿ ನಿರ್ಮಾಣ ಹಂತದಲ್ಲಿರುವ ನಿಜಶರಣ ಅಂಬಿಗರ ಚೌಡಯ್ಯ ಭವನದ ಕಟ್ಟಡ ಕಾಮಗಾರಿ ಬರುವ ಮೂರು ತಿಂಗಳಿನಲ್ಲಿ ಪೂರ್ಣಗೊಳಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್, ಐಟಿಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಭರವಸೆ ನೀಡಿದರು. ಚಿತ್ತಾಪೂರ ತಾಲೂಕು ಕೋಲಿ ಸಮಾಜದ ಗೌರವಾಧ್ಯಕ್ಷ ರಾಮಲಿಂಗ ಬಾನರ, ನೂತನ ಅದ್ಯಕ್ಷ ನಿಂಗಣ್ಣಾ ಹೆಗಲೇರಿ, ನೂತನ ನಗರಾಧ್ಯಕ್ಷ‌ ಪ್ರಭು‌ ಹಲಕರ್ಟಿ, ಮುಖಂಡರಾದ ಬಸವರಾಜ ಚಿನ್ನಮಳ್ಳಿ, ಹಣಮಂತ ಸಂಕನೂರು …

Read More »

ಪರಮಾಣು ವಿದ್ಯುತ್ ಸ್ಥಾವರ ಸ್ಥಾಪನೆಗೆ ಆತಂಕ: ಅಧಿಕಾರಿಗಳ ಸರ್ವೆಗೆ ತಡೆ ಹಿಡಿದ ಗ್ರಾಮಸ್ಥರು

ಕೊಪ್ಪಳ: ಪರಮಾಣು ವಿದ್ಯುತ್‌ ಸ್ಥಾವರ ಸ್ಥಾಪನೆ ಸಲುವಾಗಿ ಅಧಿಕಾರಿಗಳು ಸರ್ವೆ ಮಾಡಲು ಬಂದಿದ್ದಾರೆ ಎಂದು ಆತಂಕಗೊಂಡ ತಾಲ್ಲೂಕಿನ ಅರಸಿನಕೇರಿ ಗ್ರಾಮಸ್ಥರು ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಅಧಿಕಾರಿಗಳು ನಿಕ್ಷೇಪ ಪತ್ತೆ ಸರ್ವೆಗಾಗಿ ಅರಸಿನಕೇರಿಗೆ ತೆರಳಿದ್ದಾಗ ಗ್ರಾಮಸ್ಥರು ಅಧಿಕಾರಿಗಳ ವಾಹನದ ಮುಂದೆ ಕುಳಿತು ಅವರನ್ನು ತರಾಟೆಗೆ ತೆಗೆದುಕೊಂಡರು. ನಾವು ಪರಮಾಣು ಸ್ಥಾವರದ ಬಗ್ಗೆ ಸರ್ವೆ ಮಾಡಲು ಬಂದಿಲ್ಲ. ಭೂಮಿಯಲ್ಲಿರುವ ಖನಿಜದ ಬಗ್ಗೆ ಮಾಹಿತಿ ಸಂಗ್ರಹಿಸಲು ಮಾತ್ರ ಬಂದಿದ್ದೇವೆ’ …

Read More »

ಎಐಸಿಸಿ ನೂತನ ಕಟ್ಟಡ ಉದ್ಘಾಟನೆ: ದೆಹಲಿಗೆ ತೆರಳಲಿರುವ ಸಿದ್ಧರಾಮಯ್ಯ, ಡಿ.ಕೆ.ಶಿವಕುಮಾರ್

ಬೆಂಗಳೂರು: ಎಐಸಿಸಿ ನೂತನ ಕಟ್ಟಡದ ಉದ್ಘಾಟನೆಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಜನವರಿ 15 ರಂದು ದೆಹಲಿಗೆ ತೆರಳಲಿದ್ದಾರೆ. ಅವರು ಹಿಂದಿನ ರಾತ್ರಿ ರಾಷ್ಟ್ರ ರಾಜಧಾನಿಯನ್ನು ತಲುಪುವ ಸಾಧ್ಯತೆಯಿದೆ. ಅವರು ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ.ವೇಣುಗೋಪಾಲ್ ಮತ್ತು ರಣದೀಪ್ ಸಿಂಗ್ ಸುರ್ಜೆವಾಲಾ ಅವರೊಂದಿಗೆ ರಾಜ್ಯದ ರಾಜಕೀಯ ಬೆಳವಣಿಗೆಗಳ ಬಗ್ಗೆ ಮಾತುಕತೆ ನಡೆಸುವ ಸಾಧ್ಯತೆ ಇದೆ. ಜನವರಿ 13 ರಂದು, ಕಾಂಗ್ರೆಸ್ ಬೆಂಗಳೂರಿನಲ್ಲಿ ಸಭೆಗಳನ್ನು ಆಯೋಜಿಸಿದೆ, ಅಲ್ಲಿ ಸುರ್ಜೆವಾಲಾ …

Read More »

ಇಂದಿರಾ ಕ್ಯಾಂಟೀನ್‌ ಗಳನ್ನು ಮಹಿಳಾ ಸ್ವಸಹಾಯ ಸಂಘಗಳ ಮೂಲಕ ನಡೆಸುವ ಕುರಿತು ಪ್ರಸ್ತಾವನೆ ಸಲ್ಲಿಸಲು ಅಧಿಕಾರಿಗಳಿಗೆ ಸಿಎಂ ಸೂಚನೆ

ಬೆಂಗಳೂರು : ರಾಜ್ಯದಲ್ಲಿ ಆರಂಭಿಸಲಾಗಿರುವ ‘ಅಕ್ಕ ಕಾಫಿ’ ಘಟಕಗಳ ಮಾದರಿಯಲ್ಲಿ ಇಂದಿರಾ ಕ್ಯಾಂಟೀನ್‍ಗಳನ್ನು ಮಹಿಳಾ ಸ್ವಸಹಾಯ ಸಂಘಗಳ ಮೂಲಕ ನಡೆಸುವ ಕುರಿತು ಪ್ರಸ್ತಾವನೆಯನ್ನು ಸಲ್ಲಿಸಲು ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಪ್ರಗತಿ ಪರಿಶೀಲನೆ ಸಭೆಯನ್ನು ಅವರು ನಡೆಸಿದರು. ಆರ್ಥಿಕ ಚಟುವಟಿಕೆಗಳಲ್ಲಿ ಗ್ರಾಮೀಣ ಮಹಿಳೆಯರ ಭಾಗವಹಿಸುವಿಕೆಯನ್ನು ಹೆಚ್ಚಿಸಲು ಗ್ರಾಮ ಪಂಚಾಯತ್ ಮಟ್ಟದಲ್ಲಿ ಗ್ರಾಮೀಣ ಮಹಿಳೆಯರಿಗೆ ಕೌಶಲ್ಯ …

Read More »