Breaking News

BigTv News

ಮಾಸಿಕ 15 ಸಾವಿರ ರೂ. ಗೌರವಧನ ನೀಡುವವರೆಗೆ ಹೋರಾಟ: ಆಶಾ ಕಾರ್ಯಕರ್ತೆಯರ ಸಂಘ

ಬೆಂಗಳೂರು : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವ ದಿನೇಶ್ ಗುಂಡೂರಾವ್ ಆಶಾ ಕಾರ್ಯಕರ್ತೆಯರ ಬೇಡಿಕೆ ಈಡೇರಿಸುವ ಭರವಸೆ ನೀಡಿಲ್ಲ. ಹೀಗಾಗಿ ಮಾಸಿಕ 15 ಸಾವಿರ ರೂ. ಗೌರವಧನದ ನೀಡುವವರೆಗೆ ಹೋರಾಟ ಮುಂದುವರೆಸಲಾಗುವುದು ಎಂದು ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ ತಿಳಿಸಿದೆ. ಇಲ್ಲಿನ ಫ್ರೀಡಂ ಪಾರ್ಕಿನ ಹೋರಾಟದ ವೇದಿಕೆಯಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಟಿಯಲ್ಲಿ ಸಂಘದ ಕಾರ್ಯದರ್ಶಿ ಡಿ. ನಾಗಲಕ್ಷ್ಮೀ ಮಾತನಾಡಿ, ಆಶಾ ಕಾರ್ಯಕರ್ತೆಯರು ಹೋರಾಟ ನಡೆಸುತ್ತಿದ್ದ ಸ್ಥಳಕ್ಕೆ …

Read More »

ಪಂಜಾಬ್ ಸರ್ಕಾರದಿಂದ ₹200 ಕೋಟಿ ವೆಚ್ಚದಲ್ಲಿ 1,419 ಅಂಗನವಾಡಿ ಕೇಂದ್ರಗಳ ಸ್ಥಾಪನೆ

ಚಂಡೀಗಢ: ಮಹಿಳೆಯರು ಮತ್ತು ಮಕ್ಕಳ ಸಮಗ್ರ ಅಭಿವೃದ್ಧಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಪಂಜಾಬ್‌ ಸರ್ಕಾರವು ₹ 200 ಕೋಟಿ ವೆಚ್ಚದಲ್ಲಿ 1,419 ಅಂಗನವಾಡಿ ಕೇಂದ್ರಗಳನ್ನು ಸ್ಥಾಪಿಸಲಿದೆ ಎಂದು ಸಚಿವ ಬಲ್ಜಿತ್‌ ಕೌರ್‌ ತಿಳಿಸಿದ್ದಾರೆ. ಕಟ್ಟಡಗಳನ್ನು ನಿರ್ಮಿಸುವುದಷ್ಟೇ ಅಲ್ಲ.ಮಗುವಿನ ದೈಹಿಕ, ಮಾನಸಿಕ ಮತ್ತು ಭಾವನಾತ್ಮಕ ಬೆಳವಣಿಗೆಗೆ ಪೂರಕ ವಾತಾವರಣವನ್ನು ಕಲ್ಪಿಸುವುದು ಈ ಉಪಕ್ರಮದ ಉದ್ದೇಶ ಎಂದು ಅವರು ಹೇಳಿದ್ದಾರೆ. ಮಹಿಳೆ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಕೌರ್‌, ‘ಹೊಸ ಅಂಗನವಾಡಿ ಕೇಂದ್ರಗಳ …

Read More »

ಯುವನಿಧಿ ಯೋಜನೆಯಡಿ ಯುವಕರಿಗೆ ಆದ್ಯತೆಯ ಮೇರೆಗೆ ಕೌಶಲ್ಯ ತರಬೇತಿ ನೀಡಲು ಅಧಿಕಾರಿಗಳಿಗೆ ಸಿಎಂ ಸೂಚನೆ

ಬೆಂಗಳೂರು: ಯುವ ನಿಧಿ ಯೋಜನೆಯಡಿಯಲ್ಲಿ ನೋಂದಣಿಗೊಂಜ ಯುವಕರಿಗೆ ಆದ್ಯತೆಯ ಮೇಲೆ ಕೌಶಲ್ಯ ತರಬೇತಿಯನ್ನು ನೀಡುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚನೆ ನೀಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಗೃಹಕಚೇರಿ ಕೃಷ್ಣಾದಲ್ಲಿ ಗುರುವಾರ ನಡೆದ ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಪ್ರಗತಿ ಪರಿಶೀಲನೆ ಸಭೆ ನಡೆಯಿತು. ಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು, ಯುವ ನಿಧಿ ಯೋಜನೆ ರಾಜ್ಯ ಸರ್ಕಾರವು ಜಾರಿಗೆ ತಂದಿರುವ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿದ್ದು, ಇದರ ಅಡಿಯಲ್ಲಿ …

Read More »

ತಿರುಪತಿ ಕಾಲ್ತುಳಿತ ಪ್ರಕರಣ: ಮೃತರ ಕುಟುಂಬಕ್ಕೆ ತಲಾ 25 ಲಕ್ಷ ರೂ. ಪರಿಹಾರ; ಸಿಎಂ ಚಂದ್ರಬಾಬು ನಾಯ್ಡು

ತಿರುಪತಿ: ತಿರುಪತಿಯ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಬ್ಬರು ಹಿರಿಯ ಅಧಿಕಾರಿಗಳನ್ನು ಅಮಾನತು ಮಾಡಲಾಗಿದ್ದು, ಮೃತ ಕುಟುಂಬಗಳಿಗೆ ತಲಾ 25 ಲಕ್ಷ ರೂ. ಮತ್ತು ಕುಟುಂಬದ ಒಬ್ಬಬ್ಬರಿಗೆ ಗುತ್ತಿಗೆ ಆಧಾರದ ಕೆಲಸ ನೀಡುವುದಾಗಿ ಆಂಧ್ರಪ್ರದೇಶ ಸಿಎಂ ಚಂದ್ರ ಬಾಬು ನಾಯ್ಡು ಗುರುವಾರ ಘೋಷಿಸಿದ್ದಾರೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ, ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ಇಬ್ಬರಿಗೆ ತಲಾ ರೂ.5 ಲಕ್ಷ ಧನಸಹಾಯ ನೀಡುವುದಾಗಿ ತಿಳಿಸಿದ ಸಿಎಂ ಆರೋಗ್ಯ ಸುಧಾರಿಸುವವರೆಗೆ ಚಿಕಿತ್ಸಾ …

Read More »

ಕಲಬುರಗಿಗೆ ಮುಂಬರುವ ಬಜೆಟ್ ನಲ್ಲಿ ಅನುದಾನ ಘೋಷಣೆಗಾಗಿ ಶಾಸಕಿ ಕನೀಜ್ ಫಾತೀಮಾರಿಂದ ಸಿಎಂಗೆ ಮನವಿ

ಕಲಬುರಗಿ: ಕಲಬುರಗಿಯ ವ್ಯಾಪ್ತಿಯಲ್ಲಿ ವಿವಿಧ ಯೋಜನೆಗಳಿಗೆ ಮುಂಬರುವ ಬಜೆಟ್ ನಲ್ಲಿ ಅನುದಾನ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿ ಕಲಬುರಗಿ ಉತ್ತರ ಮತಕ್ಷೇತ್ರದ ಶಾಸಕಿ ಕನಿಜ್ ಫಾತಿಮಾ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಬೆಂಗಳೂರಿನಲ್ಲಿ ಮನವಿ ಮಾಡಿದರು. ಕಲಬುರಗಿ ನಗರದಲ್ಲಿ ಪ್ರವಾಸಿ ಸ್ಥಳಗಳನ್ನು ವೀಕ್ಷಿಸಲು ದೇಶ, ವಿದೇಶದಿಂದ ಅಗಮಿಸುವ ಪ್ರವಾಸಿಗರಿಗೆ ಆಕರ್ಷಿಸಲು ಮುಂಬರುವ ಫೆಬ್ರವರಿ-2025ರ ಆಯವ್ಯಯನಲ್ಲಿ ಪಮುಖ ಸ್ಥಳಗಳ ಅಭಿವೃದ್ಧಿಗಾಗಿ ರೂ.25 ಕೋಟಿಗಳ ಅನುದಾನ ಮೀಸಲಿಡಬೇಕು, ವಕ್ಫ್ ಆಸ್ತಿಗಳು ಸಂರಕ್ಷಣೆ, ಅಭಿವೃದಿಗಾಗಿ ಹಾಗೂ …

Read More »

ತುರ್ತು ವೈದ್ಯಕೀಯ ಸೇವೆಗೆ 587 ವೈದ್ಯರನ್ನು ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳುವಂತೆ ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ರಾಜ್ಯ ಸರ್ಕಾರದಿಂದ ಆಸ್ಪತ್ರೆಗಳಲ್ಲಿ ತುರ್ತು ವೈದ್ಯಕೀಯ ಸೇವೆಯನ್ನು ಉತ್ತಮ ರೀತಿಯಲ್ಲಿ ಒದಗಿಸಲು ಮಹತ್ವದ ಕ್ರಮ ವಹಿಸಲಾಗಿದೆ. ಕೂಡಲೇ 587 ವೈದ್ಯರನ್ನು ಗುತ್ತಿಗೆ ಆಧಾರದ ಮೇಲೆ ಕೂಡಲೇ ನೇಮಕಾತಿ ಮಾಡಿಕೊಳ್ಳುವಂತೆ ಆದೇಶಿಸಿದೆ. ಇಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಸರ್ಕಾರದ ಅಧೀನ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದು,ಆಯುಕ್ತರ ಏಕ ಕಡತ ಸಂಖ್ಯೆ: 1634358 ರಲ್ಲಿ ಸ್ವೀಕರಿಸಿರುವ ಪ್ರಸ್ತಾವನೆಯಲ್ಲಿ ಪ್ರಸ್ತುತ ತುರ್ತು ಚಿಕಿತ್ಸಾ ವೈಧ್ಯಾಧಿಕಾರಿಗಳ 706 ಹುದ್ದೆಗಳು ಮಂಜೂರಾಗಿದ್ದು, ಅದರಲ್ಲಿ …

Read More »

ಕಡಿಮೆಯಾದ ತೊಗರಿ ಬೆಲೆ: ರೈತರು ಕಂಗಾಲು

ಬಾಗಲಕೋಟೆ: ಬೆಂಬಲ ಬೆಲೆಯಡಿ ತೊಗರಿಕಾಳು ಖರೀದಿಸಲು ಖರೀದಿ ಕೇಂದ್ರಗಳನ್ನು ಆರಂಭಿಸದ್ದರಿಂದ ರೈತರು ಕಂಗಾಲಾಗಿದ್ದಾರೆ. ಕೇಂದ್ರ ಸರ್ಕಾರವು ₹7,550 ಬೆಂಬಲ ಘೋಷಿಸಿದ್ದು, ಅದಕ್ಕಿಂತಲೂ ಕಡಿಮೆ ಬೆಲೆಗೆ ಎಪಿಎಂಸಿಯಲ್ಲಿ ಮಾರಾಟವಾಗುತ್ತಿದೆ. ಜಿಲ್ಲೆಯಲ್ಲಿ 73,301 ಹೆಕ್ಟೇರ್ ಪ್ರದೇಶದಲ್ಲಿ ತೊಗರಿಕಾಳು ಬೆಳೆಯಲಾಗಿದೆ. 7,33,013 ಮೆಟ್ರಿಕ್‌ ಟನ್‌ ಇಳುವರಿ ನಿರೀಕ್ಷಿಸಲಾಗಿದೆ. ಡಿಸೆಂಬರ್ ಆರಂಭದಿಂದಲೇ ತೊಗರಿಕಾಳು ಮಾರುಕಟ್ಟೆಗೆ ಬರಲಾರಂಭಿಸಿದೆ. ಬಾಗಲಕೋಟೆ ಎಪಿಎಂಸಿಯಲ್ಲಿ 30 ಸಾವಿರ ಕ್ವಿಂಟಲ್‌ನಷ್ಟು ಮಾರಾಟವಾಗಿದೆ. ಹೊರಗಡೆ ಮಾರುಕಟ್ಟೆಯಲ್ಲಿಯೂ ಸಾಕಷ್ಟು ಮಾರಾಟವಾಗಿದೆ. ಪ್ರತಿ ಕ್ವಿಂಟಲ್‌ಗೆ ₹2 ಸಾವಿರದಿಂದ …

Read More »

ರಾಯಚೂರು: 68.30 ಕೋಟಿ ರೂ.ಗಳ ಬಂಡವಾಳ ಹೂಡಿಕೆಯ ಹೊಸ ಯೋಜನೆಗಳ ಮಂಜೂರಾತಿಗೆ ಅನುಮೋದನೆ

ರಾಯಚೂರು: ಜಿಲ್ಲಾಮಟ್ಟದ ಏಕಗವಾಂಕ್ಷಿ ಸಮಿತಿ ಸಭೆಯು ಜಿಲ್ಲಾಮಟ್ಟದ ಏಕಗವಾಕ್ಷಿ ಸಮಿತಿಯ ಅಧ್ಯಕ್ಷರು ಆಗಿರುವ ಜಿಲ್ಲಾಧಿಕಾರಿಗಳಾದ ನಿತೀಶ್ ಕೆ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇಂದು ನಡೆಯಿತು. 100 ಲಕ್ಷ ರೂ ವೆಚ್ಚದಲ್ಲಿ ಕ್ಯಾಟಲ್ ಫೀಡ್ ಹೆಚ್ಚುವರಿಯಾಗಿ ಕ್ಯಾಟಲ್ ಫೀಡ್ ಹಾಗೂ ಆಯಿಲ್ ಮಿಲ್ಲಿಂಗ್ ಚಟುವಟಿಕೆ, 55 ಲಕ್ಷ ರೂ ವೆಚ್ಚದಲ್ಲಿ ವೇರ್‍ಹೌಸ್ ಹೆಚ್ಚುವರಿಯಾಗಿ ಫ್ಲೈಯಾಸ್ ಬ್ರಿಕ್ಸ್ ತಯಾರಿಕೆ ಚಟುವಟಿಕೆ, 540 ಲಕ್ಷ ರೂ. ವೆಚ್ಚದಲ್ಲಿ ಕಾಟನ್ ಜಿನ್ನಿಂಗ್ ಅಂಡ್ …

Read More »

ದಿನದಿಂದ ದಿನಕ್ಕೆ ತೆಂಗಿನಕಾಯಿ ಬೇಡಿಕೆ ಹೆಚ್ಚಳ: ಗಗನಕ್ಕೇರಿದ ಧಾರಣೆ

ತುಮಕೂರು: ದಿನದಿಂದ ದಿನಕ್ಕೆ ತೆಂಗಿನಕಾಯಿಗೆ ಬೇಡಿಕೆ ಹೆಚ್ಚುತ್ತಿದ್ದು, ರೈತರಿಗೆ ಉತ್ತಮ ಬೆಲೆ ಸಿಗುತ್ತಿದೆ. ಮುಂದಿನ ಬೇಸಿಗೆ ಹೊತ್ತಿಗೆ ದರ ಮತ್ತಷ್ಟು ದುಬಾರಿಯಾಗಲಿದೆ ಎಂದು ವರ್ತಕರು ಹೇಳುತ್ತಾರೆ. ತೆಂಗಿನಕಾಯಿಗಳ ಗಾತ್ರಕ್ಕೆ ಅನುಗುಣವಾಗಿ ಮಾರುಕಟ್ಟೆಯಲ್ಲಿ ಬೆಲೆ ನಿಗದಿಯಾಗುತ್ತಿದೆ. ಸಣ್ಣ ಗಾತ್ರದ ಕಾಯಿ ₹20-₹22ಕ್ಕೆ ಮಾರಾಟವಾಗುತ್ತಿದ್ದರೆ, ಮಧ್ಯಮ ಗಾತ್ರ ₹25, ದೊಡ್ಡ ಗಾತ್ರದ ಕಾಯಿಗೆ ₹30ರ ವರೆಗೂ ಬೆಲೆ ಸಿಗುತ್ತಿದೆ. ಸಂತೆಗಳಲ್ಲಿ ಕೆ.ಜಿ ಲೆಕ್ಕದಲ್ಲೂ ಖರೀದಿಸುತ್ತಿದ್ದು, ಕೆ.ಜಿ ₹57-₹60ರ ವರೆಗೂ ಏರಿಕೆಯಾಗಿದೆ. ಜಿಲ್ಲೆಯಲ್ಲಿ 2.24 …

Read More »

ದೆಹಲಿಯಲ್ಲಿ ಸುಮಾರು ಐದು ದಶಕದ ಬಳಿಕ ಕಾಂಗ್ರೆಸ್ ಗೆ ಹೊಸ ಕಚೇರಿ

ನವದೆಹಲಿ: ಸುಮಾರು ಐದು ದಶಕದ ಬಳಿಕ ಕಾಂಗ್ರೆಸ್‌ ಪಕ್ಷದ ದೆಹಲಿಯ ಪ್ರಧಾನ ಕಚೇರಿಯ ವಿಳಾಸ ಬದಲಾಗುತ್ತಿದೆ. ಇಂದಿರಾ ಗಾಂಧಿ ಅಧಿಕಾರ ಸ್ವೀಕಾರ, ಹತ್ಯೆ ಸೇರಿ ಹಲವು ರಾಜಕೀಯ ಪಲ್ಲಟ, ವಿಪ್ಲವಗಳಿಗೆ ಸಾಕ್ಷಿಯಾಗಿದ್ದ 24, ಅಕ್ಬರ್‌ ರೋಡ್‌ನಿಂದ 9ಎ, ಕೋಟ್ಲಾ ರಸ್ತೆಗೆ ತನ್ನ ಪ್ರಧಾನ ಕಚೇರಿಯನ್ನು ಬದಲಾಯಿಸುತ್ತಿದೆ. ಹಿಂದಿನ ಪ್ರಧಾನಿ ಮನಮೋಹನ ಸಿಂಗ್‌ ಅವರ ಕಾಲಾವಧಿಯಲ್ಲಿ 2009ರಲ್ಲಿ ಈ ಕಟ್ಟಡ ನಿರ್ಮಾಣ ಕಾರ್ಯಕ್ಕೆ ಶಂಕುಸ್ಥಾಪನೆ ನೆರವೇರಿಸಲಾಗಿತ್ತು. ಇದಾಗಿ 15 ವರ್ಷಗಳ ಬಳಿಕ …

Read More »