ಚಿಕ್ಕಬಳ್ಳಾಪುರ: ನಗರದಲ್ಲಿ ಇಂದು ‘ನಮ್ಮ ಗ್ರಾಮ ನಮ್ಮ ಶಾಸಕರು’ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ ಕುಂದುಕೊರತೆಗಳ ಅಹವಾಲು ಸ್ವೀಕಾರ ಸಭೆ ನಡೆಯಲಿದೆ. ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಇಂದು ಬೆಳಗ್ಗೆ ತಮ್ಮ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗೌಡಗೆರೆ ಮತ್ತು ಅದ್ದೆಗೊಪ್ಪ ಗ್ರಾಮಗಳಿಗೆ ಭೇಟಿ ನೀಡಿ, ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿ ಅಹವಾಲುಗಳನ್ನು ಸ್ವೀಕರಿಸಲಿದ್ದಾರೆ. ನಮ್ಮ ಗ್ರಾಮ ನಮ್ಮ ಶಾಸಕರು’ ಕಾರ್ಯಕ್ರಮ ಸಂದರ್ಭದಲ್ಲಿ ತಾಲ್ಲೂಕು ಆಡಳಿತದ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿರಲಿದ್ದಾರೆ ಎಂದು ಶಾಸಕರ ಕಚೇರಿ …
Read More »ಶಿವಮೊಗ್ಗ: ಆಶ್ರಯ ಮನೆಗಳ ಹಂಚಿಕೆಗೆ ದಿನಾಂಕ ನಿಗದಿ
ಬೆಂಗಳೂರು: ಶಿವಮೊಗ್ಗದ ಗೋವಿಂದಪುರ ಮತ್ತು ಗೋಪಿಶೆಟ್ಟಿಕೊಪ್ಪದಲ್ಲಿ ನಿರ್ಮಾಣ ಮಾಡಿರುವ 652 ಆಶ್ರಯ ಮನೆಗಳ ಹಂಚಿಕೆಗೆ ದಿನಾಂಕ ನಿಗದಿಪಡಿಸಲಾಗಿದೆ. ವಿಧಾನ ಪರಿಷತ್ ಸದಸ್ಯೆ ಬಲ್ಕಿಶ್ ಬಾನು, ಕಾಂಗ್ರೆಸ್ ಮುಖಂಡ ಹೆಚ್.ಸಿ. ಯೋಗೇಶ್ ನೇತೃತ್ವದ ನಿಯೋಗ ವಸತಿ ಸಚಿವ ಜಮೀರ್ ಅಹಮದ್ ಖಾನ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ. ಮೆಸ್ಕಾಂಗೆ ಪಾವತಿ ಮಾಡಬೇಕಿರುವ 13 ಕೋಟಿ ರೂಪಾಯಿ ಪಾವತಿಸಲು ಒಪ್ಪಿಗೆ ಪಡೆದುಕೊಳ್ಳಲಾಗಿದ್ದು, ಬಳಿಕ ಆಶ್ರಯ ಮನೆಗಳ ಹಂಚಿಕೆಗೆ ದಿನಾಂಕ ನಿಗದಿಪಡಿಸಿ ಸಚಿವರ …
Read More »ರಾಜ್ಯದಲ್ಲಿ ಹೆದ್ದಾರಿ ಯೋಜನೆಗಳ ಅಭಿವೃದ್ದಿ ಬಗ್ಗೆ ಕ್ರಮ ವಹಿಸಿ: ಗಡ್ಕರಿಗೆ ಎಚ್ಡಿಕೆ ಮನವಿ
ನವದೆಹಲಿ: ಕರ್ನಾಟಕದ ವಿವಿಧ ಹೆದ್ದಾರಿ ಯೋಜನೆಗಳ ಬಗ್ಗೆ ಕೇಂದ್ರ ಹೆದ್ದಾರಿ ಮತ್ತು ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ಅವರನ್ನು ಬುಧವಾರ ಇಲ್ಲಿ ಭೇಟಿಯಾಗಿ ಚರ್ಚೆ ನಡೆಸಿದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು, ಹಲವಾರು ಮನವಿಗಳನ್ನು ಸಲ್ಲಿಸಿ ಆದಷ್ಟು ಬೇಗ ಕ್ರಮ ವಹಿಸುವಂತೆ ಕೋರಿದರು. ರಾಜ್ಯದಲ್ಲಿ ಹಲವಾರು ಹೆದ್ದಾರಿ ಯೋಜನೆಗಳ ಅಭಿವೃದ್ಧಿ ಆಗಬೇಕಿದ್ದು, ಆ ಬಗ್ಗೆ ಕ್ರಮ ವಹಿಸಬೇಕು ಎಂದು ಹತ್ತಕ್ಕೂ ಹೆಚ್ಚು ಯೋಜನೆಗಳ ಮನವಿ ಪತ್ರಗಳನ್ನು …
Read More »ಮುಂದಿನ ಐದು ವರ್ಷಗಳಲ್ಲಿ ಕೃಷಿ ಕಾರ್ಮಿಕರು, ವಾಹನ ಚಾಲಕರ ಹುದ್ದೆಗೆ ಹೆಚ್ಚಿನ ಬೇಡಿಕೆ: ವಿಶ್ವ ಆರ್ಥಿಕ ವೇದಿಕೆ ವರದಿ
ನವದೆಹಲಿ: ಮುಂದಿನ ಐದು ವರ್ಷಗಳಲ್ಲಿ ಕೃಷಿ ಕಾರ್ಮಿಕರು, ವಾಹನ ಚಾಲಕರ ಹುದ್ದೆಗಳಿಗೆ ಹೆಚ್ಚಿನ ಬೇಡಿಕೆ ಇರಲಿದೆ ಎಂದು ವಿಶ್ವ ಆರ್ಥಿಕ ವೇದಿಕೆ ಬಿಡುಗಡೆ ಮಾಡಿರುವ ಉದ್ಯೋಗಗಳ ಭವಿಷ್ಯ -2025ರ ವರದಿಯಲ್ಲಿ ತಿಳಿಸಲಾಗಿದೆ. 2030ರ ವೇಳೆಗೆ 17 ಕೋಟಿ ಹೊಸ ಉದ್ಯೋಗಗಳು ಸೃಷ್ಟಿಯಾಗಲಿವೆ. 9.2 ಕೋಟಿ ಜನ ಉದ್ಯೋಗ ಕಳೆದುಕೊಳ್ಳಲಿದ್ದಾರೆ. ಕ್ಯಾಷಿಯರ್, ಟಿಕೆಟ್ ಕ್ಲರ್ಕ್ ಗಳ ಹುದ್ದೆಗಳಿಗೆ ಬೇಡಿಕೆ ಇರುವುದಿಲ್ಲ. ಕೃಷಿ ಕಾರ್ಮಿಕರು, ವಾಹನ ಚಾಲಕರ ಹುದ್ದೆಗಳಿಗೆ ಚಿನ್ನ ಬೇಡಿಕೆ ಇರಲಿದೆ …
Read More »ಆಶಾ ಕಾರ್ಯಕರ್ತೆಯರಿಗೆ 9,500 ರೂ.ಗಳನ್ನು ಮುಂಗಡವಾಗಿ ನೀಡಲು ಸರ್ಕಾರ ಸಿದ್ಧ: ಸಚಿವ ದಿನೇಶ್ ಗುಂಡೂರಾವ್
ಬೆಂಗಳೂರು: ಆಶಾ ಕಾರ್ಯಕರ್ತೆಯರಿಗೆ ಪ್ರಸ್ತುತ ನೀಡುತ್ತಿರುವ 8 ಸಾವಿರ ರೂ. ಖಚಿತ ಗೌರವಧನ ಬದಲಾಗಿ 9,500 ರೂಪಾಯಿಗಳನ್ನು ಮುಂಗಡವಾಗಿ ನೀಡಲು ಸರಕಾರ ಸಿದ್ಧ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಬುಧವಾರ ಇಲ್ಲಿನ ಫ್ರೀಡಂ ಪಾರ್ಕ್ನಲ್ಲಿ ಆಶಾ ಕಾರ್ಯಕರ್ತೆಯರು ನಡೆಸುತ್ತಿದ್ದ ಅನಿರ್ದಿಷ್ಟಾವಧಿ ಮುಷ್ಕರ ಸ್ಥಳಕ್ಕೆ ಭೇಟಿ ನೀಡಿ ಮಾತನಾಡಿದ ಅವರು, ಮುಷ್ಕರ ಕೈ ಬಿಟ್ಟು ಆರೋಗ್ಯ ಸೇವೆ ಒದಗಿಸುವ ನಿಟ್ಟಿನಲ್ಲಿ ಸಹಕಾರ ನೀಡಬೇಕು. ಹೆಚ್ಚಿನ ಪ್ರೋತ್ಸಾಹಧನ ಕೇಂದ್ರ ಸರಕಾರದ …
Read More »ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಬೋಧಕರ ಕೊರತೆ: ಹುದ್ದೆಗಳನ್ನು ಭರ್ತಿ ಮಾಡುವಂತೆ ಸಿಎಂ ಸೂಚನೆ
ಬೆಂಗಳೂರು: ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಭಾರೀ ಪ್ರಮಾಣದಲ್ಲಿ ಬೋಧಕ ಹುದ್ದೆಗಳು ಖಾಲಿ ಇರುವ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಆದ್ಯತೆಯ ಮೇಲೆ ಹುದ್ದೆ ಭರ್ತಿ ಮಾಡುವಂತೆ ಉನ್ನತ ಶಿಕ್ಷಣ ಇಲಾಖೆ ಮತ್ತು ಹಣಕಾಸು ಇಲಾಖೆಗೆ ಸೂಚನೆ ನೀಡಿದ್ದಾರೆ. ಬುಧವಾರ ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ ಕರೆದಿದ್ದ ಉನ್ನತ ಶಿಕ್ಷಣ ಇಲಾಖೆಯ ಪ್ರಗತಿ ಪರೀಶೀಲನೆ ಸಭೆಯಲ್ಲಿ ಮುಖ್ಯಮಂತ್ರಿಗಳು ಸರಕಾರಿ ವಿ.ವಿ. ಮತ್ತು ಪ್ರಥಮ ದರ್ಜೆ ಕಾಲೇಜುಗಳಲ್ಲಿ ಬೋಧಕ ಹುದ್ದೆಗಳನ್ನು …
Read More »ಕಾಲೇಜುಗಳಲ್ಲಿ ಖಾಲಿ ಇರುವ 1,033 ಹುದ್ದೆಗಳ ಭರ್ತಿಗೆ ಕ್ರಮ: ಸಿಎಂ ಸಿದ್ದರಾಮಯ್ಯ
ಬೆಂಗಳೂರು : ಕಾಲೇಜುಗಳಲ್ಲಿ ಒಟ್ಟು 1033 ಹುದ್ದೆಗಳು ಖಾಲಿಯಿವೆ. ಇದನ್ನು ಭರ್ತಿ ಮಾಡುವ ಕುರಿತು ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಬುಧವಾರ ಗೃಹ ಕಚೇರಿ ಕೃಷ್ಣಾದಲ್ಲಿ ಉನ್ನತ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು, ವಿಶ್ವವಿದ್ಯಾಲಯಗಳಲ್ಲಿ ಖಾಲಿಯಿರುವ ಹುದ್ದೆಗಳನ್ನು ತುಂಬುವುದು ಹಾಗೂ ತಕ್ಷಣಕ್ಕೆ ಕೈಗೊಳ್ಳಬೇಕಾದ ಕ್ರಮಗಳ ಅನುಷ್ಠಾನದ ಕುರಿತು ಚರ್ಚೆ ನಡೆಸಿದರು. ಉನ್ನತ ಶಿಕ್ಷಣಕ್ಕೆ ಪ್ರಸಕ್ತ ಆಯವ್ಯಯದಲ್ಲಿ 5862 ಕೋಟಿ ರೂ. ಒದಗಿಸಲಾಗಿದ್ದು, ಇದುವರೆಗೆ …
Read More »ಬಯಲು ಸೀಮೆಯ ಜೀವನಾಡಿ ವಿವಿ ಸಾಗರ ಜಲಾಶಯ ಬಾಗಿನ ಅರ್ಪಣೆಗೆ ಸಿಎಂ, ಡಿಸಿಎಂಗೆ ಆಹ್ವಾನ
ಚಿತ್ರದುರ್ಗ : ಬಯಲುಸೀಮೆಯ ಜನರ ಜೀವನಾಡಿ ವಾಣಿ ವಿಲಾಸ ಸಾಗರ ಜಲಾಶಯ ಕೋಡಿ ಬೀಳಲು ಕ್ಷಣಗಣನೆ ಪ್ರಾರಂಭವಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಶೀಘ್ರವೇ ಜಿಲ್ಲೆಗೆ ಆಗಮಿಸಿ ಭರ್ತಿಯಾಗಿರುವ ವಾಣಿವಿಲಾಸ ಸಾಗರ ಜಲಾಶಯಕ್ಕೆ ಬಾಗಿನ ಅರ್ಪಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಜಿ.ಪಂ. ಸಿಇಒ ಎಸ್.ಜೆ. ಸೋಮಶೇಖರ್ ಅವರು ವಿವಿ ಸಾಗರಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು. ವಾಣಿವಿಲಾಸ ಸಾಗರ ಜಲಾಶಯಕ್ಕೆ ನಿತ್ಯ ಭದ್ರಾದಿಂದ 693 ಕ್ಯೂಸೆಕ್ ನೀರು ಒಳಹರಿವಿದ್ದು, ಮಂಗಳವಾರದಂದು …
Read More »ಆಂಧ್ರ ಪ್ರದೇಶದಲ್ಲಿ 2 ಲಕ್ಷ ಕೋಟಿ ರೂ.ಗಳ ಬಹು ಯೋಜನೆಗಳಿಗೆ ಪ್ರಧಾನಿ ಮೋದಿ ಶಂಕುಸ್ಥಾಪನೆ
ವಿಶಾಖಪಟ್ಟಣ: ಆಂಧ್ರಪ್ರದೇಶದಲ್ಲಿ ಪ್ರಧಾನಿ ಮೋದಿ ಇಂದು 2 ಲಕ್ಷ ಕೋಟಿ ರೂ.ಗಳ ಬಹು ಯೋಜನೆಗಳಿಗೆ ಶಂಕುಸ್ಥಾಪನೆ ಮಾಡಿದರು. ಈ ವೇಳೆ ಮಾತನಾಡಿದ ಮೋದಿ, ನಾವು ಚಂದ್ರಬಾಬು ನಾಯ್ಡು ಮತ್ತು ಪವನ್ ಕಲ್ಯಾಣ್ ಅವರೊಂದಿಗೆ ಹೆಗಲಿಗೆ ಹೆಗಲು ಕೊಟ್ಟು ಕೆಲಸ ಮಾಡುತ್ತೇವೆ ಎಂದಿದ್ದಾರೆ. ಆಂಧ್ರಪ್ರದೇಶವು ಸಾಧ್ಯತೆಗಳು ಮತ್ತು ಅವಕಾಶಗಳ ರಾಜ್ಯವಾಗಿದೆ. ಆಂಧ್ರದಲ್ಲಿನ ಈ ಸಾಧ್ಯತೆಗಳನ್ನು ಅರಿತುಕೊಂಡಾಗ ಆಂಧ್ರವೂ ಅಭಿವೃದ್ಧಿ ಹೊಂದುತ್ತದೆ ಮತ್ತು ಆಗ ಮಾತ್ರ ಭಾರತವು ಅಭಿವೃದ್ಧಿ ಹೊಂದಿದ ರಾಷ್ಟ್ರವಾಗುತ್ತದೆ ಎಂದು …
Read More »ಯುಜಿಸಿ ನೇಮಕಾತಿ ನಿಯಮಗಳಿಗೆ ತಿದ್ದುಪಡಿ: ಕೇಂದ್ರ ಸರ್ಕಾರದ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ
ಬೆಂಗಳೂರು: ವಿಶ್ವವಿದ್ಯಾಲಯ ಧನಸಹಾಯ ಆಯೋಗದ (ಯುಜಿಸಿ) ನೇಮಕಾತಿ ನಿಯಮಗಳಿಗೆ ತಿದ್ದುಪಡಿ ಮಾಡಿ, ರಾಜ್ಯದ ವಿಶ್ವವಿದ್ಯಾಲಯಗಳ ಉಪಕುಲಪತಿಗಳ ನೇಮಕಾತಿಗೆ ಸಂಬಂಧಿಸಿದಂತೆ ರಾಜ್ಯಪಾಲರಿಗೆ ಸರ್ವಾಧಿಕಾರ ನೀಡಿ ರಾಜ್ಯ ಸರ್ಕಾರಗಳ ಅಧಿಕಾರವನ್ನು ಕಿತ್ತುಕೊಳ್ಳಲು ಹೊರಟಿರುವ ಕೇಂದ್ರ ಸರ್ಕಾರದ ಕ್ರಮ ಖಂಡನೀಯವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ರಾಜ್ಯ ಸರ್ಕಾರಗಳ ಅಧಿಕಾರವನ್ನು ಮೊಟಕುಗೊಳಿಸುವ ಸಣ್ಣ ಅವಕಾಶವನ್ನೂ ಬಿಟ್ಟುಕೊಡದ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರದ ಎನ್ಡಿಎ ಸರ್ಕಾರದ ಕಣ್ಣು ಈಗ ರಾಜ್ಯದ ವಿಶ್ವವಿದ್ಯಾಲಯಗಳ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





