Breaking News

BigTv News

ಸರ್ಕಾರದ ಅಂತಿಮ ಒಪ್ಪಿಗೆ ಸಿಕ್ಕಿದ ನಂತರ 747 ಹುದ್ದೆಗಳ ಭರ್ತಿಗೆ ಅರ್ಜಿ

ಬೆಂಗಳೂರು: ವಿವಿಧ ಇಲಾಖೆ/ನಿಗಮಗಳು ಸೇರಿ ಒಟ್ಟು 747 ವಿವಿಧ ವೃಂದದ ಹುದ್ದೆಗಳ ಭರ್ತಿಗೆ ನೇಮಕಾತಿ ಪ್ರಕ್ರಿಯೆ ನಡೆಸಿಕೊಡುವಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಕೋರಿಕೆ ಸಲ್ಲಿಸಿದ್ದು, ಸರ್ಕಾರದ ಅಂತಿಮ ಒಪ್ಪಿಗೆ ಸಿಕ್ಕಿದ ನಂತರ ಅರ್ಜಿ ಆಹ್ವಾನಿಸಿ, ಲಿಖಿತ ಪರೀಕ್ಷೆ ನಡೆಸಲಾಗುವುದು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ. ಕೃಷಿ ಮಾರಾಟ ಇಲಾಖೆ, ತಾಂತ್ರಿಕ ಶಿಕ್ಷಣ ಇಲಾಖೆ, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯ, ವಾಯುವ್ಯ ಮತ್ತು …

Read More »

ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ 28 ಸಾವಿರ ನೌಕರರಿಗೆ ಟರ್ಮ್ ಇನ್ಸೂರೆನ್ಸ್ ಘೋಷಿಸಿದ ರಾಜ್ಯ ಸರ್ಕಾರ

ಬೆಂಗಳೂರು: ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ (ಎನ್‌ಎಚ್‌ಎಂ) ಕಾರ್ಯನಿರ್ವಹಿಸುತ್ತಿರುವ ಗುತ್ತಿಗೆ ಹಾಗೂ ಹೊರಗುತ್ತಿಗೆ ಸಿಬ್ಬಂದಿಗೆ ಟರ್ಮ್ ಇನ್ಶೂರೆನ್ಸ್ ಘೋಷಿಸುವ ಮೂಲಕ ರಾಜ್ಯ ಸರ್ಕಾರ ಹೊಸ ವರ್ಷದ ಉಡುಗೊರೆ ನೀಡಿದೆ. ರಾಜ್ಯದಲ್ಲಿರುವ 28 ಸಾವಿರ ನೌಕರರಿಗೆ (ನರ್ಸ್‌ಗಳು, ಆಯಾಗಳು ಮತ್ತಿತರ ಆರೋಗ್ಯ ಸಹಾಯಕರು) ಟರ್ಮ್ ಇನ್ಶೂರೆನ್ಸ್ ಹಾಗೂ ಆರೋಗ್ಯ ವಿಮೆಯ ಸೌಲಭ್ಯ ಒದಗಿಸಿದ್ದು, ಜ.1 ರಂದು ಆಕ್ಸಿಸ್ ಬ್ಯಾಂಕ್ ಜೊತೆ ಒಡಂಬಡಿಕೆಗೆ ಸರ್ಕಾರ ಸಹಿ ಮಾಡಿದೆ. ಎನ್‌ಎಚ್‌ಎಂ ನೌಕರರ ಬಹುದಿನದ ಬೇಡಿಕೆಯಾಗಿದ್ದ ಟರ್ಮ್ …

Read More »

ರಾಯಚೂರು ಮಹಾನಗರ ಪಾಲಿಕೆಯ ಯೋಜನೆಗಳಿಗೆ ಅನುದಾನವನ್ನು ಕಾಲಮಿತಿಯೊಳಗೆ ಬಳಸಿ: ಡಿಸಿ ನಿತೀಶ್ ಕೆ

ರಾಯಚೂರು: 15ನೇ ಹಣಕಾಸು ಮುಕ್ತ ಮತ್ತು ನಿರ್ಬಂಧಿತ ಅನುದಾನ, ಎಸ್‌ಎಫ್‌ಸಿ, ಎಸ್‌ಸಿಎಸ್‌ಪಿ ಮತ್ತು ಟಿಎಸ್ಪಿ ಅನುದಾನ ಸೇರಿದಂತೆ ಮಹಾನಗರ ಪಾಲಿಕೆಯ ನಾನಾ ಯೋಜನೆಗಳಿಗೆ ಸಂಬಂಧಿಸಿದ ಅನುದಾನವನ್ನು ಕಾಲಮಿತಿಯೊಳಗೆ ಬಳಸಿ ರಾಯಚೂರು ನಗರದ ಸೌಂದರ್ಯೀಕರಣಕ್ಕೆ ಮತ್ತು ಅಭಿವೃದ್ಧಿಗೆ ಹೆಚ್ಚಿನ ಒತ್ತು ಕೊಡಬೇಕು ಎಂದು ಜಿಲ್ಲಾಧಿಕಾರಿ ನಿತೀಶ್ ಕೆ ಅವರು ಹೇಳಿದರು. ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ರಾಯಚೂರು ಮಹಾನಗರ ಪಾಲಿಕೆಯ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದ ಅವರು, 2021-22ನೇ ಸಾಲಿನಿಂದ …

Read More »

ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಕೇಂದ್ರ ಸ್ಥಾನದಲ್ಲೇ ವಾಸ್ತವ್ಯ ಕಡ್ಡಾಯ: ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ರಾಜ್ಯ ಆರೋಗ್ಯ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವಂತ ವೈದ್ಯರು ಹಾಗೂ ಸಿಬ್ಬಂದಿಗಳು ಕೇಂದ್ರ ಸ್ಥಾನದಲ್ಲೇ ಕಡ್ಡಾಯವಾಗಿ ವಾಸ್ತವ್ಯ ಇರಬೇಕು. ಈ ನಿಯಮ ಮೀರಿದ್ರೇ ಅಂತವರ ವಿರುದ್ಧ ಶಿಸ್ತುಕ್ರಮ ಜರುಗಿಸುವುದಾಗಿ ರಾಜ್ಯ ಸರ್ಕಾರ ಖಡಕ್ ಆದೇಶವನ್ನು ಹೊರಡಿಸಿದೆ. ಇಂದು ಈ ಸಂಬಂಧ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತರು ಸುತ್ತೋಲೆ ಹೊರಡಿಸಿದ್ದಾರೆ. ಅದರಲ್ಲಿ ರಾಜ್ಯ ಸರ್ಕಾರವು ತನ್ನ ಆರೋಗ್ಯ ನೀತಿ ಪ್ರಕಾರ ವಿವಿಧ ಹಂತಗಳಲ್ಲಿ ಅಂದರೆ ಉಪ ಕೇಂದ್ರಗಳು, ಪ್ರಾಥಮಿಕ …

Read More »

ಮಾಜಿ ಪ್ರಧಾನಿ ದಿವಗಂತ ಮನಮೋಹನ ಸಿಂಗ್ ಸ್ಮಾರಕಕ್ಕೆ ಎರಡು ಜಾಗ ಗುರುತಿಸಿದ ಕೇಂದ್ರ ಸರ್ಕಾರ

ನವದೆಹಲಿ: ಮಾಜಿ ಪ್ರಧಾನಿ ದಿವಂಗತ ಡಾ.ಮನಮೋಹನ್ ಸಿಂಗ್ ಅವರ ಸ್ಮಾರಕ ನಿರ್ಮಿಸಲು ರಾಷ್ಟ್ರೀಯ ಸ್ಮೃತಿ ಸ್ಥಳ ಆವರಣದಲ್ಲಿ ಎರಡು ಜಾಗಗಳನ್ನು ಗುರುತಿಸಿ, ಗೃಹನಿರ್ಮಾಣ ಮತ್ತು ನಗರ ವ್ಯವಹಾರಗಳ ಸಚಿವಾಲಯ ಪ್ರಸ್ತಾವ ಮುಂದಿಟ್ಟಿದೆ. ಗುರುವಾರ ನಡೆದ ಉನ್ನತ ಮಟ್ಟದ ಸಭೆಯ ಬಳಿಕ ಈ ಪ್ರಸ್ತಾವ ಮುಂದಿಟ್ಟಿದ್ದು, ಇದರೊಂದಿಗೆ ಸ್ಮಾರಕಕ್ಕೆ ಜಾಗ ಹಂಚಿಕೆ ಪ್ರಕ್ರಿಯೆ ಅಧಿಕೃತವಾಗಿ ಚಾಲನೆ ಪಡೆದಂತಾಗಿದೆ. ರಾಷ್ಟ್ರೀಯ ಸ್ಮೃತಿ ಸ್ಥಳ ಆವರಣ ಯಮುನಾ ನದಿ ದಂಡೆಯಲ್ಲಿದ್ದು, ದೇಶದ ರಾಷ್ಟ್ರಪತಿ, ಉಪರಾಷ್ಟ್ರಪತಿಗಳು …

Read More »

ಶಕ್ತಿ ಯೋಜನೆ: ಮಹಿಳೆಯರಿಗೆ ಸಾರಿಗೆ ಇಲಾಖೆಯಿಂದ ಶೀಘ್ರವೇ ಸ್ಮಾರ್ಟ್ ಕಾರ್ಡ್ ವಿತರಣೆ

ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರ ಬಂದ ನಂತರ ಜಾರಿಯಾದ ಐದು ಗ್ಯಾರಂಟಿಗಳ ಪೈಕಿ ಮೊದಲನೆಯದ್ದು ಶಕ್ತಿ ಯೋಜನೆ. ಈ ಯೋಜನೆಯಡಿ ಕೋಟ್ಯಂತರ ಮಹಿಳೆಯರು ಸಾರ್ವಜನಿಕ ಸಾರಿಗೆಯಲ್ಲಿ ಉಚಿತವಾಗಿ ಸಂಚರಿಸುವ ಅವಕಾಶ ಪಡೆದಿದ್ದಾರೆ. ಇವರೆಲ್ಲರು ಆಧಾರ್ ಕಾರ್ಡ್ ತೋರಿಸಿ ಉಚಿತ ಪ್ರಯಾಣ ಮಾಡುತ್ತಿದ್ದು, ಇವರೆಲ್ಲರಿಗೂ ಸಾರಿಗೆ ಇಲಾಖೆಯಿಂದ ಶೀಘ್ರವೇ ‘ಸ್ಮಾರ್ಟ್ ಕಾರ್ಡ್’ ವಿತರಿಸಲಾಗುತ್ತದೆ. ಹೌದು, ಈ ಬಗ್ಗೆ ರಾಜ್ಯ ಸರ್ಕಾರವೇ ಅಧಿಕೃತ ಮಾಹಿತಿ ನೀಡಿದೆ. ಸ್ಮಾರ್ಟ್ ಕಾರ್ಡ್ ನೀಡುವ ಮೂಲಕ ಶಕ್ತಿ …

Read More »

ರಾಜ್ಯದಲ್ಲಿ ಶಕ್ತಿ ಯೋಜನೆ ಯಶಸ್ವಿ: ಆಂಧ್ರದಲ್ಲೂ ಯೋಜನೆ ಜಾರಿಗೆ ಸಿಎಂ ರೇವಂತ್ ರೆಡ್ಡಿ ಸರ್ಕಾರ ನಿರ್ಧಾರ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್‌ಆರ್‌ಟಿಸಿ), ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ), ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (ಎನ್‌ಡಬ್ಲ್ಯುಕೆಆರ್‌ಟಿಸಿ) ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗಳು ನಾಲ್ಕು ಬಸ್ ನಿಗಮಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ನೀಡುವ ಶಕ್ತಿ ಯೋಜನೆ ಯಶಸ್ವಿಯಾಗಿದ್ದು, ಆಂಧ್ರಪ್ರದೇಶದಲ್ಲೂ ಯೋಜನೆ ಜಾರಿಗೆ ಮುಖ್ಯಮಂತ್ರಿ ರೇವಂತ್ ರೆಡ್ಡಿ ನೇತೃತ್ವದ ಸರ್ಕಾರ ನಿರ್ಧಾರ ಮಾಡಿದೆ. ಕರ್ನಾಟಕದ ಸರ್ಕಾರದ ‘ಶಕ್ತಿ’ ಯೋಜನೆ ಕುರಿತು …

Read More »

ಇಂದು ಬೆಂಗಳೂರಿಗೆ ಆಗಮಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು: ಹೂಗುಚ್ಛ ನೀಡಿ ಸಿಎಂ ಸಿದ್ದರಾಮಯ್ಯ ಸ್ವಾಗತ

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿಗೆ ನಿಮ್ಹಾನ್ಸ್ ಆಸ್ಪತ್ರೆಯಲ್ಲಿ ವಿವಿಧ ಸೌಲಭ್ಯಗಳನ್ನು ಲೋಕಾರ್ಪಣೆ ಮಾಡುವ ನಿಮಿತ್ತ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಆಗಮಿಸಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮುಗೆ ಮುಖ್ಯಮಂತ್ರಿ ಸಿದ್ದರಾಮಯ್ಯ,ಹಾಗೂ ಸಚಿವ ಶರಣ್ ಪ್ರಕಾಶ್ ಪಾಟೀಲ್,ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್,ಡಿಜಿ ಮತ್ತು ಐಜಿ ಅಲೋಕ್ ಮೋಹನ್, ಕಮಿಷನರ್ ದಯಾನಂದ್, ಬೆಂಗಳೂನಗರ ಡಿಸಿ ಜಗದೀಶ್ ಸ್ವಾಗತ ಮಾಡಿದ್ದಾರೆ. ಬೆಂಗಳೂರಿನಲ್ಲಿರುವ ನಿಮ್ಹಾನ್ಸ್ ಆಸ್ಪತ್ರೆಯಲ್ಲಿ ವಿವಿಧ ಸೌಲಭ್ಯಗಳನ್ನು ಲೋಕಾರ್ಪಣೆ ಮಾಡಲಿದ್ದಾರೆ. ನಂತರ ಬೆಳಗಾವಿಗೆ ಪ್ರಯಾಣ ಬೆಳೆಸಲಿದ್ದು, …

Read More »

ಕೃಷಿ ಭಾಗ್ಯ ಯೋಜನೆಯಡಿ ರಾಜ್ಯದಾದ್ಯಂತ 1,918 ಕೃಷಿ ಹೊಂಡಗಳ ನಿರ್ಮಾಣ: ₹50 ಕೋಟಿ ಅನುದಾನ ಬಾಕಿ

ಬಳ್ಳಾರಿ: ಕೃಷಿ ಭಾಗ್ಯ ಯೋಜನೆಯಡಿ ರಾಜ್ಯದಾದ್ಯಂತ 2024-25ನೇ ಸಾಲಿನಲ್ಲಿ ಒಟ್ಟು 1,918 ಕೃಷಿ ಹೊಂಡಗಳನ್ನು ರೈತರು ನಿರ್ಮಿಸಿಕೊಂಡಿದ್ದಾರೆ. ಮಳೆ ನೀರು ಸಂಗ್ರಹ ಮತ್ತು ಪುನರ್‌ಬಳಕೆಯ ಈ ಯೋಜನೆಗೆ ರಾಜ್ಯ ಸರ್ಕಾರ ಈವರೆಗೆ ₹49.89 ಕೋಟಿ ಅನುದಾನ ಬಿಡುಗಡೆ ಮಾಡಿದ್ದು, ಇನ್ನೂ ₹50 ಕೋಟಿ ಅನುದಾನ ಬಾಕಿ ಇರಿಸಿದೆ. ರಾಜ್ಯದಲ್ಲಿ ತುಮಕೂರು (387), ಮಂಡ್ಯ (187), ಕೋಲಾರ (131), ಚಿಕ್ಕಬಳ್ಳಾಪುರ (116) ಮತ್ತು ಬೆಳಗಾವಿ (98) ಜಿಲ್ಲೆ ಕೃಷಿ ಹೊಂಡಗಳ ನಿರ್ಮಾಣದಲ್ಲಿ …

Read More »

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜಿಸಿ ಪ್ರತ್ಯೇಕ ಎರಡು ಪಾಲಿಕೆ ರಚನೆಗೆ ಸಂಪುಟ ಅನುಮೋದನೆ

ಬೆಂಗಳೂರು : ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯನ್ನು ವಿಭಜಿಸಿ, ಪ್ರತ್ಯೇಕವಾಗಿ ಎರಡು ಮಹಾನಗರ ಪಾಲಿಕೆ ರಚಿಸಲು ಸಚಿವ ಸಂಪುಟ ನಿರ್ಧಾರ ತೆಗೆದುಕೊಂಡಿದೆ ಎಂದು ಕಾನೂನು ಸಚಿವ ಎಚ್.ಕೆ.ಪಾಟೀಲ್ ತಿಳಿಸಿದರು. ನಿನ್ನೆ ಬೆಂಗಳೂರಿನ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಒಂದು ನಿರ್ಣಯ ಕೈಗೊಳ್ಳಲಾಗಿದೆ. ಧಾರವಾಡ ಪ್ರತ್ಯೇಕ ಮಹಾನಗರ ಪಾಲಿಕೆ ರಚನೆ ವಿಷಯ ತಿಳಿಯುತ್ತಿದ್ದಂತೆ ಧಾರವಾಡ ಪ್ರತ್ಯೇಕ ಮಹಾನಗರ ಪಾಲಿಕೆ ಹೋರಾಟ ಸಮಿತಿ ವತಿಯಿಂದ ಸಿಹಿ …

Read More »