ರಾಯಚೂರು : ಜಿಲ್ಲೆಯ ಸಿರವಾರ ತಾಲೂಕಿನ ಚಾಗಭಾವಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ಕಾಮಗಾರಿಯಲ್ಲಿ .5.8 ಲಕ್ಷ ರೂ. ನಡೆದಿದೆ ಎನ್ನಲಾದ ಅವ್ಯವಹಾರಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿ ಮರು ವಸೂಲಾತಿಗೆ ಆದೇಶ ಮಾಡಲಾಗಿದೆ. ಚಾಗಭಾವಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಜಾಲಾಪೂರ ಕ್ಯಾಂಪಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಸುತ್ತ ಮತ್ತು ಕ್ಯಾಂಪಿನ ಸ್ಮಶಾನದಲ್ಲಿ ಸಸಿ ನೆಡದೇ ಹಣ ಪಡೆದಿರುವುದು, ಜಾನುವಾರುಗಳಿಗೆ ಕುಡಿಯುವ ನೀರಿನ ಕೆರೆಯ ಹೂಳೆತ್ತಿದೆ …
Read More »ಸಾರಿಗೆ ನೌಕರರಿಗೆ ಗುಡ್ ನ್ಯೂಸ್: ಪಿಎಫ್ ಹಣಕ್ಕಾಗಿ 2 ಸಾವಿರ ಕೋಟಿ ಬಿಡುಗಡೆಗೆ ಸಂಪುಟ ಅನುಮೋದನೆ
ಬೆಂಗಳೂರು : ನಿನ್ನೆ ನಡೆದ ಸಚಿವ ಸಂಪುಟದಲ್ಲಿ ಬಸ್ ಟಿಕೆಟ್ ದರ ಶೇಕಡ 15ರಷ್ಟು ಹೆಚ್ಚಿಗೆ ಮಾಡಿ ಸರ್ಕಾರ ನಿರ್ಧಾರ ಕೈಗೊಂಡಿತ್ತು. ಇದರ ಬೆನ್ನಲ್ಲೇ ಸಾರಿಗೆ ನೌಕರರಿಗೆ ಇದೀಗ ಸರ್ಕಾರ ಸಿಹಿ ಸುದ್ದಿ ಒಂದನ್ನು ನೀಡಿದ್ದು, ನೌಕರರ ಪಿಎಫ್ ಹಣಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎರಡು ಸಾವಿರ ಕೋಟಿ ರೂಪಾಯಿ ನೀಡಲು ಗ್ರೀನ್ ಸಿಗ್ನಲ್ ನೀಡಿದ್ದಾರೆ. ಹೌದು ಕಳೆದ ವರ್ಷ ನವೆಂಬರ್ ನಲ್ಲಿ KSRTC, KKRTC, BMTC ಹಾಗೂ NWKRTC …
Read More »ಕಾಶ್ಮೀರವನ್ನು ಕಶ್ಯಪ್ ಎಂದು ಮರುನಾಮಕರಣ ಮಾಡುವ ಕುರಿತು ಅಮಿತ್ ಶಾ ಸುಳಿವು
ಶ್ರೀನಗರ: ನಗರಗಳು ಮತ್ತು ಜಿಲ್ಲೆಗಳ ಹೆಸರನ್ನು ಬದಲಾಯಿಸುವ ಸಂಪ್ರದಾಯದಲ್ಲಿ ಈಗ ಕೇಂದ್ರ ಗೃಹ ಸಚಿವ ಅಮಿತ್ ಶಾ ದೊಡ್ಡ ಘೋಷಣೆ ಮಾಡಿದ್ದಾರೆ. ಶಾ ಅವರು ಕಾಶ್ಮೀರದ ಹೆಸರನ್ನು ಕಶ್ಯಪ್ ಎಂದು ಬದಲಾಯಿಸಬಹುದು ಎಂದು ಹೇಳಿದ್ದಾರೆ. ಕಾಶ್ಮೀರದ ಹೆಸರಿನಲ್ಲಿ ಇತಿಹಾಸದ ಸತ್ಯಗಳೊಂದಿಗೆ ಛೇಡಛಾಡ ಮಾಡಲಾಗಿದೆ ಎಂದು ಅವರು ಹೇಳಿದರು. 8000 ವರ್ಷಗಳಷ್ಟು ಹಳೆಯದಾದ ಪುಸ್ತಕಗಳಲ್ಲಿ ಕಾಶ್ಮೀರ ಮತ್ತು ಜೀಲಂ ಉಲ್ಲೇಖವಿದೆ, ಹಾಗಾಗಿ ಕಾಶ್ಮೀರ ಯಾರದ್ದು ಎಂದು ಯಾರಾದರೂ ಹೇಳಬಹುದು. ಕಾಶ್ಮೀರ ಭಾರತದ …
Read More »ಇಂದು ದೆಹಲಿಯಲ್ಲಿ ಹಲವು ಅಭಿವೃದ್ದಿ ಯೋಜನೆಗಳನ್ನು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ (ಜನವರಿ 3) ಮಧ್ಯಾಹ್ನ 12: 10 ರ ಸುಮಾರಿಗೆ ದೆಹಲಿಯ ಅಶೋಕ್ ವಿಹಾರ್ನ ಸ್ವಾಭಿಮಾನ್ ಅಪಾರ್ಟ್ಮೆಂಟ್ನಲ್ಲಿ ಕೊಳೆಗೇರಿ ಪುನರ್ವಸತಿ ಯೋಜನೆಯಡಿ ಝುಗ್ಗಿ ಜೋಪ್ರಿ (ಜೆಜೆ) ಕ್ಲಸ್ಟರ್ಗಳ ನಿವಾಸಿಗಳಿಗಾಗಿ ಹೊಸದಾಗಿ ನಿರ್ಮಿಸಲಾದ ಫ್ಲ್ಯಾಟ್ಗಳಿಗೆ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 12:45 ಕ್ಕೆ ಅವರು ದೆಹಲಿಯಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಜೆಜೆ ಕ್ಲಸ್ಟರ್ ಗಳ ನಿವಾಸಿಗಳಿಗಾಗಿ ಹೊಸದಾಗಿ ನಿರ್ಮಿಸಲಾದ 1,675 …
Read More »ಫೆ.28 ರಿಂದ ಮೂರು ದಿನಗಳ ಕಾಲ ಹಂಪಿ ಉತ್ಸವ ನಡೆಸಲು ಸರ್ಕಾರ ಸಮ್ಮತಿ
ಹೊಸಪೇಟೆ: ಈ ಬಾರಿಯ ಹಂಪಿ ಉತ್ಸವವನ್ನು ಫೆಬ್ರುವರಿ 28ರಿಂದ ಮೂರು ದಿನಗಳ ಕಾಲ ನಡೆಸಲು ಸರ್ಕಾರ ಸಮ್ಮತಿ ಸೂಚಿಸಿದ್ದು, ಒಂದು ತಿಂಗಳು ವಿಳಂಬವಾಗಿ, ಬಿರು ಬೇಸಿಗೆಯಲ್ಲಿ ಉತ್ಸವ ನಡೆಸುವುದು ಇದೀಗ ಅನಿವಾರ್ಯವಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಗುರುವಾರ ಬೆಳಿಗ್ಗೆ ಬೆಂಗಳೂರಿನಲ್ಲಿ ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿದ್ದು, ಸಿ.ಎಂ ಸಮ್ಮತಿಯ ಮೇರೆಗೆ ಈ ಬಗ್ಗೆ ಅಧಿಕೃತ ಪ್ರಕಟಣೆ ನೀಡಿದ್ದಾರೆ. ಈ ಬಾರಿಯೂ ಅದ್ಧೂರಿ …
Read More »ರಾಜ್ಯ ಸರ್ಕಾರದಿಂದ ಆರೋಗ್ಯ ಇಲಾಖೆಯ ಎನ್ ಹೆಚ್ ಎಂ, ನಮ್ಮ ಕ್ಲಿನಿಕ್ ಸಿಬ್ಬಂದಿಗಳಿಗೆ ಟರ್ಮ್ ಇನ್ಸೂರೆನ್ಸ್ ಯೋಜನೆ ಜಾರಿಗೊಳಿಸಿ ಆದೇಶ
ಬೆಂಗಳೂರು: ರಾಜ್ಯ ಸರ್ಕಾರದಿಂದ ಆರೋಗ್ಯ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವಂತ ಎನ್ ಹೆಚ್ ಎಂ ಹಾಗೂ ನಮ್ಮ ಕ್ಲಿನಿಕ್ ಸಿಬ್ಬಂದಿಗಳಿಗೆ ಹೊಸ ವರ್ಷದ ಗಿಫ್ಟ್ ನೀಡಿದೆ. ಅದೇ ಆರೋಗ್ಯ ಇಲಾಖೆಯ ಗುತ್ತಿಗೆ ಸಿಬ್ಬಂದಿಗಳಿಗೆ ಟರ್ಮ್ ಇನ್ಸೂರೆನ್ಸ್ ಯೋಜನೆಯನ್ನು ಜಾರಿಗೊಳಿಸಿ ಆದೇಶಿಸಲಾಗಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಯ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಸಂಘ ( KSHCOEA) ಮಾಹಿತಿ …
Read More »ನಾಳೆ ರಾಜ್ಯಕ್ಕೆ ಭೇಟಿ ನೀಡಲಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು
ಬೆಂಗಳೂರು: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನಾಳೆ ಕರ್ನಾಟಕಕ್ಕೆ ಭೇಟಿ ನೀಡಲಿದ್ದಾರೆ. ನಾಳೆ ಬೆಳಿಗ್ಗೆ ಬೆಂಗಳೂರಿನ ನಿಮ್ಹಾನ್ಸ್‌ನ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಸಿದ್ದರಾಮಯ್ಯ, ಕೇಂದ್ರ ಸಚಿವರಾದ ಜೆ.ಪಿ.ನಡ್ಡಾ, ಜ್ಯೋತಿರಾಧಿತ್ಯ ಸಿಂಧಿಯಾ ಮತ್ತಿತತರು ಪಾಲ್ಗೊಳ್ಳಲಿದ್ದಾರೆ. ನಂತರ ರಾಷ್ಟ್ರಪತಿ ದ್ರೌಪದಿ ಮುರ್ಮು, ಬೆಳಗಾವಿಗೆ ಭೇಟಿ ನೀಡಲಿದ್ದು, ಅಲ್ಲಿ ಕೆ.ಎಲ್.ಇ. ಸಂಸ್ಥೆಯ ಜಾಗತಿಕ ಗುಣಮಟ್ಟದ ಸಮಗ್ರ ಚಿಕಿತ್ಸೆಯನ್ನು ಒಳಗೊಂಡ ಅತ್ಯಾಧುನಿಕ ತಂತ್ರಜ್ಞಾನ ವ್ಯವಸ್ಥೆಯೊಂದಿಗೆ ನಿರ್ಮಿಸಿರುವ …
Read More »ಸರ್ಕಾರಿ ಶಾಲಾ ಕಟ್ಟಡಗಳ ನವೀಕರಣ ಮತ್ತು ಅಭಿವೃದ್ದಿಗೆ ಇನ್ಫೋಸಿಸ್ ಸಂಸ್ಥೆ ನೆರವು: ಸಚಿವ ಕೆ.ಎಚ್.ಮುನಿಯಪ್ಪ
ದೊಡ್ಡಬಳ್ಳಾಪುರ: ಇನ್ಫೋಸಿಸ್ ಸಂಸ್ಥೆ ಸಾಮಾಜಿಕ ಹೊಣೆಗಾರಿಕೆ ನಿಧಿ(ಸಿಎಸ್‌ಆರ್)ಯಡಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲಾ ಕಟ್ಟಡಗಳ ನವೀಕರಣ ಮತ್ತು ಅಭಿವೃದ್ಧಿಪಡಿಸಲು ಮುಂದೆ ಬಂದಿರುವುದು ಜಿಲ್ಲೆಯ ಜನತೆಗೆ ಹೆಮ್ಮೆಯ ವಿಷಯ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್. ಮುನಿಯಪ್ಪ ಹೇಳಿದರು. ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸಿಎಸ್‌ಆರ್ ಅನುದಾನದಡಿ ಸರ್ಕಾರಿ ಶಾಲಾ ಕಟ್ಟಡಗಳ ಅಭಿವೃದ್ಧಿ ಪಡಿಸುವ ಸಲುವಾಗಿ ಚರ್ಚಿಸಲು …
Read More »ನೀಟ್-ಯುಜಿ ಪರೀಕ್ಷೆಗೆ ತಜ್ಞರ ಸಮಿತಿಯ ಶಿಫಾರಸು ಜಾರಿ: ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್ ಗೆ ಮಾಹಿತಿ
ನವದೆಹಲಿ : ನೀಟ್-ಯುಜಿ ಪರೀಕ್ಷೆಗೆ ಸಂಬಂಧಿಸಿದಂತೆ ತಜ್ಞರ ಸಮಿತಿಯ ಶಿಫಾರಸುಗಳನ್ನು ಜಾರಿಗೊಳಿಸುವುದಾಗಿ ಕೇಂದ್ರ ಸರ್ಕಾರ ಇಂದು ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ. ಕಳೆದ ವರ್ಷ, NEET-UG ಪರೀಕ್ಷೆಯನ್ನು ನಡೆಸುವ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (ಎನ್‌ಟಿಎ) ಕಾರ್ಯನಿರ್ವಹಣೆಯನ್ನು ಪರಿಶೀಲಿಸಲು ಸರ್ಕಾರವು ಏಳು ಸದಸ್ಯರ ತಜ್ಞರ ಸಮಿತಿಯನ್ನು ರಚಿಸಿತ್ತು. ಕಳೆದ ವರ್ಷ ಆಗಸ್ಟ್ 2 ರಂದು, NEET-UG ಪರೀಕ್ಷೆಯನ್ನು ಮರು ನಡೆಸುವಂತೆ ಒತ್ತಾಯಿಸಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿತ್ತು. ಅರ್ಜಿಯನ್ನು ತಿರಸ್ಕರಿಸಿದ ಸುಪ್ರೀಂ …
Read More »ರೈತರ ಕಲ್ಯಾಣ ಹೆಚ್ಚಿಸಲು ಕೇಂದ್ರ ಸರ್ಕಾರ ಸಂಪೂರ್ಣ ಬದ್ಧ: ಪ್ರಧಾನಿ ಮೋದಿ
ನವದೆಹಲಿ: ರೈತರ ಕಲ್ಯಾಣವನ್ನು ಹೆಚ್ಚಿಸಲು ತಮ್ಮ ಸರ್ಕಾರ ಸಂಪೂರ್ಣವಾಗಿ ಬದ್ಧವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. 2021-22 ರಿಂದ 2025-26 ರವರೆಗೆ ಒಟ್ಟಾರೆ 69,515.71 ಕೋಟಿ ರೂ.ಗಳ ವೆಚ್ಚದೊಂದಿಗೆ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ ಮತ್ತು ಪುನರ್ರಚಿಸಿದ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯನ್ನು 2025-26 ರವರೆಗೆ ಮುಂದುವರಿಸಲು ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ರೈತರಿಗೆ ಕೈಗೆಟುಕುವ ಬೆಲೆಯಲ್ಲಿ ಡಿಎಪಿಯ ಸುಸ್ಥಿರ ಲಭ್ಯತೆಯನ್ನು ಖಚಿತಪಡಿಸಿಕೊಳ್ಳಲು ಇಂದಿನಿಂದ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





