Breaking News

BigTv News

ಅಕ್ರಮ-ಸಕ್ರಮ ಯೋಜನೆಯಡಿ ಪಂಪ್‌ಸೆಟ್ ಗಳಿಗೆ ವಿದ್ಯುತ್ ಸಂಪರ್ಕ: ಸಚಿವ ಕೆ.ಜೆ.ಜಾರ್ಜ್‌

ಚಿತ್ರದುರ್ಗ: ಅಕ್ರಮ-ಸಕ್ರಮ ಯೋಜನೆಯಡಿ ರಾಜ್ಯದಲ್ಲಿ ಸುಮಾರು 4.5 ಲಕ್ಷ ಕೃಷಿ ಪಂಪ್‍ಸೆಟ್ ಗಳು ಇವೆ. ಈ ಪೈಕಿ ಈಗಾಗಲೆ 2.5 ಲಕ್ಷ ಪಂಪ್‍ಸೆಟ್‍ಗಳನ್ನು ಅಕ್ರಮ-ಸಕ್ರಮದಡಿ ವಿದ್ಯುತ್ ಸಂಪರ್ಕ ಕಲ್ಪಿಸಿಕೊಡಲಾಗಿದೆ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ತಿಳಿಸಿದ್ದಾರೆ. ಹೊಸದುರ್ಗ ತಾಲ್ಲೂಕಿನ ನೀರಗುಂದ ಗೇಟ್ ಹತ್ತಿರ ಕುಸುಮ್-ಸಿ ಯೋಜನೆಯಡಿ ಸ್ಥಾಪಿತವಾಗಿರುವ “ಸೋಲಾರ್ ಪಾರ್ಕ್”ಗೆ ಭೇಟಿ ನೀಡಿ, ಪರಿಶೀಲನೆ ನಡೆಸಿ ಅವರು ಮಾತನಾಡಿ, ಇನ್ನೂ 2 ಲಕ್ಷ ಪಂಪ್ ಸೆಟ್‍ ಗಳಿಗೆ ಸಂಪರ್ಕ …

Read More »

ರಾಜ್ಯ ಬಜೆಟ್ ಮಂಡನೆಗೆ ಮುಹೂರ್ತ ನಿಗದಿ: ಮಾ.14 ರಂದು ಸಿಎಂ ಸಿದ್ದರಾಮಯ್ಯರಿಂದ ದಾಖಲೆಯ ಬಜೆಟ್ ಮಂಡನೆ

ಬೆಂಗಳೂರು : ರಾಜ್ಯ ಬಜೆಟ್ ಮಂಡಣೆಗೆ ಮುಹೂರ್ತ ಫಿಕ್ಸ್ ಆಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ದಾಖಲೆಯ 16 ನೇ ಬಜೆಟ್ ಮಂಡಿಸಲಿದ್ದಾರೆ. ಹೌದು, ರಾಜ್ಯ ಸರ್ಕಾರದ ಬಜೆಟ್ ಮಂಡನೆಗೆ ಮುಹೂರ್ತ ಫಿಕ್ಸ್ ಆಗಿದ್ದು, ಮಾರ್ಚ್ 10ರಿಂದ ರಾಜ್ಯ ವಿಧಾನ ಮಂಡಲ ಜಂಟಿ ಅಧಿವೇಶನ ಆರಂಭವಾಗಲಿದ್ದು, ಮಾರ್ಚ್ 14 ರಂದು ಸಿಎಂ ಸಿದ್ದರಾಮಯ್ಯ ಅವರು ತಮ್ಮ ದಾಖಲೆಯ 16ನೇ ಬಜೆಟ್ ಮಂಡಿಸಲಿದ್ದಾರೆ. ಜಂಟಿ ಅಧಿವೇಶನದ ಮುಂದುವರೆದ ಭಾಗವಾಗಿ ಬಜೆಟ್ ಅಧಿವೇಶನ …

Read More »

ಕೊಪ್ಪಳ ಗವಿಸಿದ್ದೇಶ್ವರ ಜಾತ್ರೆ: ಮುಂಜಾಗ್ರತಾ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಸೂಚನೆ

ಕೊಪ್ಪಳ: 2025ನೇ ಜನವರಿ 15 ರಂದು ನಡೆಯುವ ಶ್ರೀ ಗವಿಸಿದ್ದೇಶ್ವರ ಜಾತ್ರೆಗೆ ಲಕ್ಷ್ಯಾಂತರ ಭಕ್ತರು ಬರುವುದರಿಂದ ಟ್ರಾಫಿಕ್ ಸಮಸ್ಯೆಗಳಾಗದಂತೆ ಪಾರ್ಕಿಂಗ್ ವ್ಯವಸ್ಥೆ ಸೇರಿದಂತೆ ಇತರೆ ಮುಂಜಾಗ್ರತೆ ಕ್ರಮಗಳನ್ನು ಕೈಗೊಳ್ಳುವಂತೆ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಲಿನ್ ಅತುಲ್ ಸೂಚನೆ ನೀಡಿದ್ದಾರೆ. ಅವರು ಇಂದು ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಶ್ರೀ ಗವಿಸಿದ್ದೇಶ್ವರ ಜಾತ್ರಾ ಮಹೋತ್ಸವದ ನಿಮಿತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳುವ ಕುರಿತು ಅಧಿಕಾರಿಗಳಿಗೆ ಕರೆದ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆವಹಿಸಿ ಮಾತನಾಡಿದರು. ಕಳೆದ …

Read More »

ಆಫ್ರಿಕಾ: ಮದುವೆಗೆ ಹೋಗುವಾಗ ನದಿಗೆ ಟ್ರಕ್ ಉರುಳಿ ಬಿದ್ದು ಮಕ್ಕಳು ಸೇರಿ 60 ಕ್ಕೂ ಹೆಚ್ಚು ಜನ ಸಾವು

ಅಡಿಸ್ ಅಬಾಬಾ : ಮದುವೆಗೆ ಹೋಗುವಾಗ ನದಿಗೆ ಟ್ರಕ್ ಉರುಳಿ ಬಿದ್ದ ಪರಿಣಾಮ ಮಕ್ಕಳು ಸೇರಿದಂತೆ 60 ಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ಘಠನೆ ಆಫ್ರಿಕಾದ ಇಥಿಯೋಪಿಯಾದಲ್ಲಿ ನಡೆದಿದೆ. ಇಥಿಯೋಪಿಯಾದಲ್ಲಿ ಪ್ರಯಾಣಿಕರು ತುಂಬಿದ್ದ ಟ್ರಕ್ ನದಿಗೆ ಬಿದ್ದಿದೆ. ಅಪಘಾತದಲ್ಲಿ 60 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ದಕ್ಷಿಣ ಸಿಡಾಮಾ ಪ್ರದೇಶದ ಅಧಿಕಾರಿಗಳ ಪ್ರಕಾರ, ಬೋನಾ ಜಿಲ್ಲೆಯಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಗಾಯಗೊಂಡವರು ಬೋನಾ ಜನರಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ …

Read More »

ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆ ನೀಡುವ ಅಗತ್ಯ ಇಲ್ಲ: ಸಚಿವ ಪರಮೇಶ್ವರ್

ಬೆಂಗಳೂರು : ಸಚಿವ ಪ್ರಿಯಾಂಕ್ ಖರ್ಗೆ ಅವರ ಮೇಲೆ ಬಿಜೆಪಿಯವರು ಮಾಡಿರುವ ಆರೋಪ ಪ್ರಕರಣವನ್ನು ಸಿಐಡಿಗೆ ವಹಿಸಲಾಗಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದರು.ಸದಾಶಿವನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವರ ಮೇಲೆ ಅನವಶ್ಯಕವಾಗಿ ಆಪಾದನೆ ಮಾಡುವುದು ಯಾವುದೇ ಸರ್ಕಾರಕ್ಕೂ ಸರಿ ಇರುವುದಿಲ್ಲ. ಡೆತ್‌ನೋಟ್‌ನಲ್ಲಿ ಅವರ ಹೆಸರು ಕೂಡ ಇಲ್ಲ ಎಂದು ಇಲಾಖೆಯ ಅಧಿಕಾರಿಗಳು ಹೇಳಿದ್ದಾರೆ. ಸಚಿವರ ಹೆಸರನ್ನು ತಂದು, ಸರ್ಕಾರಕ್ಕೆ ಮಸಿ ಬಳಿಯುವ ಕೆಲಸ ಮಾಡುತ್ತಿದ್ದಾರೆ. ಸತ್ಯಾಸತ್ಯತೆ …

Read More »

ರಾಜ್ಯ ಸರ್ಕಾರಿ ನೌಕರರಿಗೆ ಸಿಹಿಸುದ್ಧಿ: ಬೆಂಗಳೂರಲ್ಲಿ ವಾಸ್ತವ್ಯಕ್ಕೆ 350 ಕೊಠಡಿಗಳ ಭವ್ಯ ಕಟ್ಟಡ ನಿರ್ಮಾಣ

ಶಿವಮೊಗ್ಗ: ಬೆಂಗಳೂರಿಗೆ ಕೆಲಸಕ್ಕೆ ಆಗಮಿಸುವ ಸರ್ಕಾರಿ ನೌಕರರಿಗೆ ವಾಸ್ತವ್ಯಕ್ಕೆ ಅನುಕೂಲವಾಗುವಂತೆ 300 ರಿಂದ 350 ಕೊಠಡಿಗಳ ಭವ್ಯ ಕಟ್ಟಡ ನಿರ್ಮಾಣಕ್ಕೆ ನೀಲಿ ನಕ್ಷೆ ರೂಪಿಸಲಾಗಿದೆ ಎಂದು ರಾಜ್ಯ ಸರ್ಕಾರ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ಹೇಳಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಎಲ್ಲಾ ಜಿಲ್ಲೆಗಳಿಂದ ಬೆಂಗಳೂರಿಗೆ ಕೆಲಸಕ್ಕೆ ಆಗಮಿಸುವ ಸರ್ಕಾರಿ ನೌಕರರಿಗೆ ವಾಸ್ತವ್ಯಕ್ಕೆ ಅನುಕೂಲವಾಗುವಂತೆ ಇನ್ನೆರಡು ತಿಂಗಳಲ್ಲಿ ಕಟ್ಟಡ ನಿರ್ಮಿಸಲಾಗುವುದು. ಸರ್ಕಾರಿ ನೌಕರರಿಗೆ ದಿನವೊಂದಕ್ಕೆ 100ರೂ. ಬಾಡಿಗೆ ದರದಲ್ಲಿ …

Read More »

ರಾಜ್ಯ ಸರ್ಕಾರದ ಮಹತ್ವದ ಸಚಿವ ಸಂಪುಟ ಸಭೆ ಜ.2 ರಂದು ನಿಗದಿ

ಬೆಂಗಳೂರು: ಜನವರಿ 2 ರಂದುರಾಜ್ಯ ಸರ್ಕಾರದ ಮಹತ್ವದ ಸಚಿವ ಸಂಪುಟ ಸಭೆ ನಿಗದಿ ಮಾಡಿದ್ದು, ಈ ವೇಳೆ ಹಲವು ಮಹತ್ವದ ತೀರ್ಮಾನವನ್ನು ತೆಗೆದುಕೊಳ್ಳುವುದರ ಬಗ್ಗೆ ತೀರ್ಮಾನ ಮಾಡಲಾಗುವುದು ಎನ್ನಲಾಗಿದೆ. ಈ ಬಗ್ಗೆ ಆರ್. ಚಂದ್ರಶೇಖರ್, ಸರ್ಕಾರದ ಜಂಟಿ ಕಾರ್ಯದರ್ಶಿ ಇವರು ಸುತ್ತೋಲೆ ಹೊರಡಿಸಿದ್ದು, ದಿನಾಂಕ: 02.01.2025, ಗುರುವಾರ ಬೆಳಿಗ್ಗೆ 11:00 ಗಂಟೆಗೆ ಸಚಿವ ಸಂಪುಟದ 2025ನೇ ಸಾಲಿನ 1ನೇ ಸಭೆಯನ್ನು ವಿಧಾನಸೌಧದ ಸಚಿವ ಸಂಪುಟ ಸಭಾಮಂದಿರದಲ್ಲಿ ಕರೆಯಲಾಗಿದೆ.ಸಭೆಯ ಕಾರ್ಯಸೂಚಿಯನ್ನು ಪ್ರತ್ಯೇಕವಾಗಿ …

Read More »

ಶೀಘ್ರವೇ ರೈಲ್ವೆ, ಜಲಶಕ್ತಿ ಇಲಾಖೆಯಲ್ಲಿ 60 ಸಾವಿರ ಹುದ್ದೆಗಳ ನೇಮಕಾತಿ: ಕೇಂದ್ರ ಸಚಿವ ಸೋಮಣ್ಣ

ಬೆಂಗಳೂರು : ರೈಲ್ವೇ, ಜಲಶಕ್ತಿ ಇಲಾಖೆಯಲ್ಲಿ ಶೀಘ್ರವೇ 60,000 ಹುದ್ದೆಗಳ ನೇಮಕಾತಿ ಮಾಡಲಾಗುತ್ತದೆ ಎಂದು ಕೇಂದ್ರ ರೈಲ್ವೇ ಮತ್ತು ಜಲಶಕ್ತಿ ಇಲಾಖೆ ಸಚಿವ ವಿ. ಸೋಮಣ್ಣ ಘೋಷಣೆ ಮಾಡಿದ್ದಾರೆ. ಅರಮನೆ ಮೈದಾನದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಹಮ್ಮಿಕೊಂಡಿದ್ದ ಕರ್ನಾಟಕ ಸಂಭ್ರಮ-50 ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ರೈಲ್ವೇ, ಜಲಶಕ್ತಿ ಇಲಾಖೆಯಲ್ಲಿ ಶೀಘ್ರವೇ 60,000 ಉದ್ಯೋಗಿಗಳ ನೇಮಕ ಮಾಡಲಾಗುತ್ತದೆ, ಕನ್ನಡಿಗರು ಇದರ ಸದುಪಯೋಗ ಪಡೆಯಬೇಕು ಎಂದರು. ರೈಲ್ವೆ ಇಲಾಖೆಯ ನೇಮಕಾತಿಗಳಿಗೆ ಹಿಂದಿ ಭಾಷೆಯಲ್ಲಿ …

Read More »

ಬೆಂಗಳೂರಿನಲ್ಲಿ ಕೆ ಎಸ್ ಡಿ ಎಲ್ ಅಧಿಕಾರಿ ನೇಣು ಬಿಗಿದುಕೊಂಡು ಆತ್ಮಹತ್ಯೆ

ಬೆಂಗಳೂರು : ಬೆಂಗಳೂರಿನಲ್ಲಿ ಕೆಎಸ್ ಡಿ ಎಲ್(KSDL) ಅಧಿಕಾರಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಡೆತ್ ನೋಟ್ ಬರೆದಿಟ್ಟು ಕೆಎಸ್ ಡಿ ಎಲ್ ಅಧಿಕಾರಿ ಅಮೃತ್ (40) ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. KSDL’ ನ ಮೆಟಿರಿಯಲ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ಅಧಿಕಾರಿ ಅಮೃತ್ ಕೈಯಲ್ಲೇ ಡೆತ್ ನೋಟ್ ಹಿಡಿದುಕೊಂಡು ನೇಣಿಗೆ ಶರಣಾಗಿದ್ದಾರೆ. ಡಿ.28 ರಂದು ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಆತ್ಮಹತ್ಯೆಗೆ ನಿಖರ …

Read More »

ಸಚಿನ್ ಪಾಂಚಾಳ್ ಆತ್ಮಹತ್ಯೆಗೆ ನ್ಯಾಯ ಸಿಗಲು ಸಿಬಿಐ ತನಿಖೆ ಆಗಬೇಕು: ಬಿ.ವೈ.ವಿಜಯೇಂದ್ರ

ಬೆಂಗಳೂರು: ಸಚಿನ್ ಪಾಂಚಾಳ್ ಆತ್ಮಹತ್ಯೆ ಪ್ರಕರಣದ ಸಂಬಂಧ ಸಚಿವ ಪ್ರಿಯಾಂಕ ಖರ್ಗೆಯವರ ರಾಜೀನಾಮೆ ಪಡೆದು, ದುರ್ಘಟನೆಯ ಸಿಬಿಐ ತನಿಖೆ ಮಾಡಬೇಕು ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದ್ದಾರೆ. ನ್ಯಾಯಕ್ಕಾಗಿ ಸಿಬಿಐ ತನಿಖೆ ಆಗಬೇಕು ಎಂದು ಸಚಿನ್ ಕುಟುಂಬವೂ ಒತ್ತಾಯಿಸಿದೆ ಎಂದು ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಹಿಂದೆ, ಇದೇ ಸರಕಾರದ ಸಚಿವ ನಾಗೇಂದ್ರ ಅವರೂ ವಾಲ್ಮೀಕಿ ನಿಗಮದ ಹಗರಣದಲ್ಲಿ ಸಿಲುಕಿ ರಾಜೀನಾಮೆ ಕೊಟ್ಟಿದ್ದಾರೆ. …

Read More »