Breaking News

BigTv News

ನಾಳೆ ಪ್ರಧಾನಿ ಮೋದಿಯವರ ಜನಪ್ರಿಯ ಮನ್ ಕಿ ಬಾತ್ ಕಾರ್ಯಕ್ರಮ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು, ನಾಳೆ ಆಕಾಶವಾಣಿಯಲ್ಲಿ ಪ್ರತಿ ತಿಂಗಳು ಪ್ರಸಾರವಾಗುವ ತಮ್ಮ ಜನಪ್ರಿಯ ‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ದೇಶ ಮತ್ತು ವಿದೇಶಗಳಲ್ಲಿರುವ ಭಾರತೀಯರನ್ನುದ್ದೇಶಿಸಿ ಮಾತನಾಡಲಿದ್ದಾರೆ. ಬೆಳಗ್ಗೆ 11 ಗಂಟೆಗೆ ಈ ಕಾರ್ಯಕ್ರಮ ಪ್ರಸಾರವಾಗಲಿದ್ದು, ಇದು ಮನ್ ಕಿ ಬಾತ್‌ನ 117ನೇ ಅವತರಣಿಕೆಯಾಗಿದೆ. ಆಕಾಶವಾಣಿ ಮತ್ತು ದೂರದರ್ಶನದ ಎಲ್ಲ ವಾಹಿನಿಗಳಲ್ಲಿ, ಆಕಾಶವಾಣಿ ಸುದ್ದಿ ಜಾಲತಾಣ, ಮೊಬೈಲ್ ಆಪ್ ಹಾಗೂ ಯೂಟ್ಯೂಬ್ ಚಾನಲ್‌ಗಳಲ್ಲೂ ಈ ಕಾರ್ಯಕ್ರಮ ಮೂಡಿಬರಲಿದೆ. ಪ್ರಧಾನಮಂತ್ರಿ …

Read More »

ತೃತೀಯ ವಿಶ್ವ ಹವ್ಯಕ ಸಮ್ಮೇಳನಕ್ಕೆ ಚಾಲನೆ ನೀಡಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ಬೆಂಗಳೂರು: ಹವ್ಯಕ ಸಮಾಜದವರ ಮೂಲ ಕೃಷಿಯಾದ ಅಡಕೆ ಉತ್ಪನ್ನದ ಕುರಿತು ಯಾವುದೇ ರೀತಿಯ ವಿರೋಧಾ ಭಿಪ್ರಾಯಗಳು ವ್ಯಕ್ತವಾದರೂ ಕೇಂದ್ರ ಸರ್ಕಾರ ಅದರ ಬಗ್ಗೆ ಚಿಂತಿಸದೆ, ಅಡಕೆ ಬೆಳೆ ಪರವಾಗಿ ರಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಭರವಸೆ ನೀಡಿದ್ದಾರೆ. ಶ್ರೀ ಅಖಿಲ ಹವ್ಯಕ ಮಹಾಸಭಾದಿಂದ ಅರಮನೆ ಮೈದಾನದಲ್ಲಿ ಶುಕ್ರವಾರ ಆಯೋಜಿಸಿದ್ದ 3 ದಿನಗಳ ತೃತೀಯ ವಿಶ್ವ ಹವ್ಯಕ ಸಮ್ಮೇಳನಕ್ಕೆ ಚಾಲನೆ ನೀಡಿ ಮಾತನಾಡಿ, ಅಡಕೆ ಹವ್ಯಕ ಸಮುದಾಯದ ಮೂಲ …

Read More »

ಬೆಂಗಳೂರಿನಲ್ಲಿ ಹೊಸ ವರ್ಷದ ಸಂಭ್ರಮಾಚರಣೆಗೆ ಬಿಗಿ ಪೊಲೀಸ್ ಬಂದೋಬಸ್ತ್: ಎಲ್ಲಾ ಪ್ಲೈಓವರ್ ಗಳಲ್ಲಿ ವಾಹನ ಸಂಚಾರ ಬಂದ್

ಬೆಂಗಳೂರು: ನಗರದಲ್ಲಿ ಹೊಸ ವರ್ಷದ ಸಂಭ್ರಮಾಚರಣೆಯಲ್ಲಿ ಯಾವುದೇ ತೊಂದರೆ ಆಗದಂತೆ ಪೊಲೀಸರು ಹದ್ದಿನ ಕಣ್ಣು ನೆಟ್ಟಿದ್ದಾರೆ. ಬೆಂಗಳೂರು ನಗರದ ಎಲ್ಲಾ ಫ್ರೈ ಓವರ್ ಗಳಲ್ಲಿ ವಾಹನಗಳ ಸಂಚಾರವನ್ನು ಬಂದ್ ಮಾಡಲಾಗುತ್ತಿದೆ. ಎಲ್ಲೆಡೆ ಪೊಲೀಸರ ಬಿಗು ಬಂದೋಬಸ್ತ್ ಕೈಗೊಳ್ಳಲಾಗಿದೆ. ಜೊತೆಗೆ ಸಿಸಿಟಿವಿ ಕ್ಯಾಮರಾ ಕಣ್ಗಾವಲಿರಿಸಲಾಗಿದೆ. ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಅವರು, ಬೆಂಗಳೂರಲ್ಲಿ ಹೊಸ ವರ್ಷಾಚರಣೆಯ ವೇಳೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ …

Read More »

ಇಂದು ದೆಹಲಿಯ ನಿಗಮ ಬೋಧ್ ಘಾಟ್ ನಲ್ಲಿ ಸಿಖ್ ಸಂಪ್ರದಾಯದಂತೆ ಅಗ್ನಿಯಲ್ಲಿ ಲೀನವಾದ ಧೀಮಂತ ನಾಯಕ ಮನಮೋಹನ್ ಸಿಂಗ್

ನವದೆಹಲಿ: ದೇಶದ ಮಾಜಿ ಪ್ರಧಾನಿ, ಶ್ರೇಷ್ಠ ಅರ್ಥ ಶಾಸ್ತ್ರಜ್ಞ ಡಾ.ಮನಮೋಹನ್ ಸಿಂಗ್ ಅವರ ಅಂತ್ಯ ಸಂಸ್ಕಾರ ಇಂದು ದೆಹಲಿಯ ನಿಗಮ ಬೋಧ್ ಘಾಟ್‌ನಲ್ಲಿ ನಡೆಯಿತು. ಸಿಖ್ ಧರ್ಮದ ಸಂಪ್ರದಾಯದಂತೆ ಸಿಂಗ್ ಅವರ ಅಂತಿಮ ಸಂಸ್ಕಾರ ನಡೆಯಿತು. ಕುಸಿಯುತ್ತಿದ್ದ ಭಾರತದ ಆರ್ಥಿಕತೆಯನ್ನು ಸರಿದಾರಿಗೆ ತಂದ ನವಭಾರತದ ಆರ್ಥಿಕತೆಯ ನಿರ್ಮಾತೃ, ದೇಶ ಕಂಡ ಶ್ರೇಷ್ಠ ಪ್ರಧಾನಿಯನ್ನು ದೇಶವು ತುಂಬಿದ ಕಣ್ಣುಗಳಿಂದ ಬೀಳ್ಕೊಟ್ಟಿತು. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನವದೆಹಲಿಯ ಸ್ವಗೃಹದಿಂದ ಕಾಂಗ್ರೆಸ್‌ನ …

Read More »

ಗಮನಾರ್ಹ ಹೂಡಿಕೆಯ ಹೊರತಾಗಿಯೂ ಕರ್ನಾಟಕದಲ್ಲಿ ಕುಸಿಯುತ್ತಿರುವ ಪ್ರವಾಸೋದ್ಯಮ ಇಲಾಖೆ

ಬೆಂಗಳೂರು: ಪ್ರವಾಸೋದ್ಯಮ ವಲಯದಲ್ಲಿನ ಸವಾಲುಗಳ ನಡುವೆ, ಅಂತರರಾಷ್ಟ್ರೀಯ ಮಟ್ಟದಲ್ಲಿ ಚೇತರಿಸಿಕೊಂಡಿದ್ದರೂ, ಕರ್ನಾಟಕದ ನಿರ್ವಾಹಕರು ಈ ವರ್ಷ ತಮ್ಮ ಗ್ರಾಹಕರನ್ನು ಉಳಿಸಿಕೊಳ್ಳಲು ಹೆಣಗಾಡಿದೆ. ಪ್ರವಾಸೋದ್ಯಮ ಮೂಲಸೌಕರ್ಯದಲ್ಲಿ ಗಮನಾರ್ಹ ಹೂಡಿಕೆಗಳನ್ನು ಮಾಡಲಾಗಿದ್ದರೂ, ಹಿಂದಿನ ವರ್ಷಗಳಿಗೆ ಹೋಲಿಸಿದರೆ ರಾಜ್ಯದಲ್ಲಿ ಪ್ರವಾಸಿಗರ ಸಂಖ್ಯೆ ಕಡಿಮೆಯಾಗಿದೆ. ಮೈಸೂರು, ಹಂಪಿ, ಗೋಕರ್ಣ, ಕೊಡಗು, ಬಾದಾಮಿ, ದಾಂಡೇಲಿ ಮತ್ತು ಚಿಕ್ಕಮಗಳೂರು ಮುಂತಾದ ಜನಪ್ರಿಯ ತಾಣಗಳಲ್ಲಿ ಉತ್ತಮ ಸಂಖ್ಯೆಯಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಿದೆ. ರಾಜ್ಯ ಸರ್ಕಾರದ ಶಕ್ತಿ ಯೋಜನೆಯಿಂದ ಪ್ರವಾಸಿಗರ ಸಂಖ್ಯೆಯಲ್ಲಿ …

Read More »

ಮನಮೋಹನ್ ಸಿಂಗ್ ಅತ್ಯುತ್ತಮ ರಾಜನೀತಿಜ್ಞ: ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಸಂತಾಪ

ನವದೆಹಲಿ: ಭಾರತದ ಮಾಜಿ ಪ್ರಧಾನಿ ಮನಮೋಹನ ಸಿಂಗ್ ಅವರ ನಿಧನಕ್ಕೆ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಸಂತಾಪ ಸೂಚಿಸಿದ್ದಾರೆ. ಇದೇ ವೇಳೆ ಭಾರತ-ರಷ್ಯಾ ಬಾಂಧವ್ಯ ವೃದ್ಧಿ ಹಾಗೂ ಗಟ್ಟಿಗೊಳಿಸುವಲ್ಲಿ ಮನಮೋಹನ ಸಿಂಗ್ ಅವರ ವೈಯಕ್ತಿಕ ಕೊಡುಗೆಯನ್ನು ಪುಟಿನ್ ಸ್ಮರಿಸಿದ್ದಾರೆ. ಮನಮೋಹನ ಸಿಂಗ್ ಅತ್ಯುತ್ತಮ ‘ರಾಜನೀತಿಜ್ಞ’ ಎಂದು ಪುಟಿನ್ ಬಣ್ಣಿಸಿದ್ದಾರೆ. ಭಾರತದ ಆರ್ಥಿಕತೆ ಉತ್ತೇಜಿಸುವಲ್ಲಿ ಮತ್ತು ಜಾಗತಿಕ ವೇದಿಕೆಯಲ್ಲಿ ಭಾರತದ ಹಿತಾಸಕ್ತಿಗಳನ್ನು ಪ್ರತಿಪಾದಿಸುವಲ್ಲಿ ಸಿಂಗ್ ಪಾತ್ರವನ್ನು ಪುಟಿನ್ ನೆನೆದಿದ್ದಾರೆ. ಮನಮೋಹನ ಸಿಂಗ್ …

Read More »

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅಂತ್ಯಕ್ರಿಯೆ: ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ಮೋದಿ ಸೇರಿದಂತೆ ಹಲವು ಗಣ್ಯರು ಭಾಗಿ

ನವದೆಹಲಿ : ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅಂತ್ಯಕ್ರಿಯೆಯಲ್ಲಿ ಪ್ರಧಾನಿ ಮೋದಿ ಹಾಗೂ ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಗಿಯಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ದೆಹಲಿಯ ನಿಗಮ್ ಬೋಧ್ ಘಾಟ್ ನಲ್ಲಿ ಸಿಖ್ ಸಂಪ್ರದಾಯದಂತೆ ಸಕಲ ಸರ್ಕಾರಿ ಗೌರವಗಳೊಂದಿಗೆ ಡಾ.ಮನಮೋಹನ್ ಸಿಂಗ್ ಅಂತ್ಯಕ್ರಿಯೆ ನೆರವೇರಲಿದ್ದು, ಪ್ರಧಾನಿ ಮೋದಿ ಹಾಗೂ ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಗಿಯಾಗಲಿದ್ದಾರೆ. ಈ ಹಿನ್ನೆಲೆ ಬಿಗಿ ಪೊಲೀಸ್ ಭದ್ರತೆ ಕೈಗೊಳ್ಳಲಿದ್ದಾರೆ. ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರು …

Read More »

ಹಾವೇರಿ: ಕೆಪಿಎಸ್‌ಸಿ ಯಿಂದ ನಾಳೆ ಗೆಜೆಟೆಡ್ ಪ್ರೊಬೇಷನರ್ ಪರೀಕ್ಷೆ, ನಾಲ್ಕು ಕೇಂದ್ರದಲ್ಲಿ ಭದ್ರತೆ

ಹಾವೇರಿ: ಕರ್ನಾಟಕ ಲೋಕಸೇವಾ ಆಯೋಗದಿಂದ (ಕೆಪಿಎಸ್‌ಸಿ) 2023-24ನೇ ಸಾಲಿನ 374 ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ಭರ್ತಿಗಾಗಿ ಡಿ. 29ರಂದು ಹಾವೇರಿಯ 4 ಕೇಂದ್ರಗಳಲ್ಲಿ ಪೂರ್ವಭಾವಿ ಪರೀಕ್ಷೆ ನಡೆಯಲಿದೆ. ಇದು ಮರು ಪರೀಕ್ಷೆಯಾಗಿದ್ದು, ಯಾವುದೇ ಲೋಪವಾಗದಂತೆ ವ್ಯವಸ್ಥಿತವಾಗಿ ಹಾಗೂ ಪಾರದರ್ಶಕವಾಗಿ ಪರೀಕ್ಷೆ ನಡೆಸಲು ಸಿದ್ಧತೆ ಮಾಡಿಕೊಳ್ಳಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಎಲ್.ನಾಗರಾಜ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ‘ಪರೀಕ್ಷೆ ಪೂರ್ವಭಾವಿ ಸಿದ್ಧತಾ ಸಭೆ’ಯ ಅಧ್ಯಕ್ಷತೆ ವಹಿಸಿ …

Read More »

ಕರ್ನಾಟಕ ಕೃಷಿ ಬೆಲೆ ಆಯೋಗದ ಅಧ್ಯಕ್ಷರಾಗಿ ಅಶೋಕ ದಳವಾಯಿ ನೇಮಕ

ಬೆಂಗಳೂರು: ನಿವೃತ್ತ ಐಎಎಸ್‌ ಅಧಿಕಾರಿ ಡಾ| ಅಶೋಕ ಎಂ. ದಳವಾಯಿ ಅವರನ್ನು ಕರ್ನಾಟಕ ಕೃಷಿ ಬೆಲೆ ಆಯೋಗದ ಅಧ್ಯಕ್ಷರಾಗಿ ನೇಮಿಸಿ ರಾಜ್ಯ ಸರಕಾರ ಆದೇಶಿಸಿದೆ. ಆಯೋಗದ ಅಧ್ಯಕ್ಷ ಹುದ್ದೆ ತೆರವಾದಾಗಿನಿಂದಲೂ ಕೃಷಿ ಸಚಿವರೇ ಅಧ್ಯಕ್ಷ ಸ್ಥಾನದಲ್ಲಿ ಇದ್ದರು. ಬಳ್ಳಾರಿಯ ಎಸ್‌.ಆರ್‌.ಗಾದಿಲಿಂಗನಗೌಡ ಹಾಗೂ ಕೊಪ್ಪಳದ ಡಿ.ಎಚ್‌. ಪೂಜಾರ ಅವರನ್ನು ಆಯೋಗದ ಸದಸ್ಯರನ್ನಾಗಿ ನೇಮಿಸಿದ್ದು, ಕೃಷಿ ಆಯುಕ್ತಾಲಯದ (ಬೆಳೆ ಅಭಿವೃದ್ಧಿ ಮತ್ತು ಯೋಜನೆ) ಹೆಚ್ಚುವರಿ ನಿರ್ದೇಶಕರನ್ನು ಸದಸ್ಯ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ. 2026ರ …

Read More »

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಸ್ಮಾರಕ ನಿರ್ಮಾಣಕ್ಕೆ ಭೂಮಿ ನೀಡಲು ಕೇಂದ್ರ ಸರ್ಕಾರ ಒಪ್ಪಿಗೆ

ನವದೆಹಲಿ: ಮಾಜಿ ಪ್ರಧಾನಮಂತ್ರಿ ಡಾ.ಮನಮೋಹನ್ ಸಿಂಗ್ ಅವರ ಸ್ಮಾರಕಕ್ಕೆ ಭೂಮಿ ನೀಡಲು ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ. ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರ ಸ್ಮಾರಕಕ್ಕೆ ವಿಚಾರವಾಗಿ ಕೇಂದ್ರ ಗೃಹ ಸಚಿವಾಲಯ ಪ್ರಕಟಣೆ ಬಿಡುಗಡೆ ಮಾಡಿದೆ. ಕಾಂಗ್ರೆಸ್ ಮುಖ್ಯಸ್ಥರಿಂದ ಮನಮೋಹನ್ ಸಿಂಗ್ ಅವರ ಸ್ಮಾರಕಕ್ಕಾಗಿ ಜಾಗವನ್ನು ಮಂಜೂರು ಮಾಡುವಂತೆ ಮನವಿ ಬಂದಿದ್ದು, ಈ ಮನವಿಯನ್ನು ಸ್ವೀಕರಿಸಲಾಗಿದೆ. ಸಚಿವ ಸಂಪುಟ ಸಭೆಯ ನಂತರ ಕೇಂದ್ರ ಗೃಹ ಸಚಿವ ಅಮಿತ್ ಶಾ …

Read More »