Breaking News

BigTv News

2024-25 ರಲ್ಲಿ ಸರ್ಕಾರಿ ಬ್ಯಾಂಕ್ ಗಳ ನಿವ್ವಳ ಲಾಭ ₹1.5 ಲಕ್ಷ ಕೋಟಿಗೇರುವ ಸಾಧ್ಯತೆ

ನವದೆಹಲಿ: 2024-25ನೇ ಆರ್ಥಿಕ ವರ್ಷದಲ್ಲಿ ಸಾರ್ವಜನಿಕ ವಲಯದ ಬ್ಯಾಂಕ್‌ಗಳ ನಿವ್ವಳ ಲಾಭವು ₹1.5 ಲಕ್ಷ ಕೋಟಿಗೆ ತಲುಪುವ ನಿರೀಕ್ಷೆಯಿದೆ. ವಸೂಲಾಗದ ಸಾಲದ (ಎನ್‌ಪಿಎ) ಪ್ರಮಾಣ ಕುಗ್ಗಿರುವುದು ಹಾಗೂ ಸಾಲ ನೀಡಿಕೆಯಲ್ಲಿ ಎರಡಂಕಿ ದಾಟಿರುವುದು ಲಾಭ ಹೆಚ್ಚಳಕ್ಕೆ ನೆರವಾಗಲಿದೆ ಎಂದು ಆರ್ಥಿಕ ತಜ್ಞರು ಹೇಳಿದ್ದಾರೆ. ಸದ್ಯ ಬ್ಯಾಂಕ್‌ಗಳಲ್ಲಿ ಠೇವಣಿ ಸಂಗ್ರಹ ಪ್ರಮಾಣ ಕಡಿಮೆಯಾಗಿದೆ. ಈ ನಡುವೆಯೂ ಲಾಭದ ಪ್ರಮಾಣದಲ್ಲಿ ಏರಿಕೆಯಾಗಲಿದೆ ಎಂದು ಹೇಳಿದ್ದಾರೆ. ಪ್ರಸಕ್ತ ಆರ್ಥಿಕ ವರ್ಷದ ಮೊದಲಾರ್ಧದಲ್ಲಿ ಸಾರ್ವಜನಿಕ ವಲಯದ …

Read More »

ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾಗಿ ಸಿ.ಎಸ್.ಷಡಾಕ್ಷರಿ ಪುನರಾಯ್ಕೆ

ಬೆಂಗಳೂರು: ಜಿದ್ದಾಜಿದ್ದಿ ಕಣವಾಗಿದ್ದ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸ್ಥಾನದ ಆಯ್ಕೆ ಚುನಾವಣೆಯಲ್ಲಿ ಪುನರಾಯ್ಕೆಯಾದ ಹಾಲಿ ಅಧ್ಯಕ್ಷ ಸಿ.ಎಸ್​.ಷಡಾಕ್ಷರಿ, ಬಿ.ಪಿ.ಕೃಷ್ಣೇಗೌಡ ಅವರನ್ನು 65 ಮತಗಳ ಅಂತರದಿಂದ ಸೋಲಿಸಿದ್ದಾರೆ. ಇಂದು ಬೆಂಗಳೂರಿನ ಕಬ್ಬನ್​ಪಾರ್ಕ್​ ಆವರಣದ ನೌಕರರ ಸಂಘದಲ್ಲಿ ಅಧ್ಯಕ್ಷ ಮತ್ತು ಖಜಾಂಜಿ ಸ್ಥಾನಕ್ಕೆ ಚುನಾವಣೆ ನಡೆಯಿತು.ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಸಿ.ಎಸ್​.ಷಡಾಕ್ಷರಿಗೆ 507 ಮತಗಳು ಬಂದರೆ, ಬಿ.ಪಿ.ಕೃಷ್ಣೇಗೌಡಗೆ 442 ಮತಗಳು ಲಭಿಸಿದ್ದವು. ಖಚಾಂಜಿ ಸ್ಥಾನಕ್ಕೆ ಸ್ಪರ್ಧಿಸಿದ್ದ ಅಭ್ಯರ್ಥಿ ನಾಗರಾಜ ಆರ್.ಜುಮ್ಮನ್ನವರ(ಷಡಾಕ್ಷರಿ ಬಣ), …

Read More »

ದೇಶದ ಅಭಿವೃದ್ದಿ ಮತ್ತು ಪ್ರಗತಿಗೆ ಸಿಂಗ್ ಕೊಡುಗೆ ಸದಾ ಸ್ಮರಣೀಯ: ಪ್ರಧಾನಿ ಮೋದಿ

ನವದೆಹಲಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್‌ ಅವರ ನಿಧನವು ದೇಶಕ್ಕೆ ತುಂಬಲಾರದ ನಷ್ಟವನ್ನುಂಟುಮಾಡಿದೆ ಎಂದಿರುವ ಪ್ರಧಾನಿ ನರೇಂದ್ರ ಮೋದಿ, ಜನರ ಸೇವೆ ಮತ್ತು ರಾಷ್ಟ್ರದ ಅಭಿವೃದ್ಧಿ ವಿಚಾರದಲ್ಲಿ ಸಿಂಗ್‌ ಅವರು ಹೊಂದಿದ್ದ ಬದ್ಧತೆಯನ್ನು ಸದಾ ಗೌರವಿಸಲಾಗುವುದು ಎಂದು ಹೇಳಿದ್ದಾರೆ. ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಸಿಂಗ್ ಅವರು ದೆಹಲಿಯ ಏಮ್ಸ್‌ ಆಸ್ಪತ್ರೆಯಲ್ಲಿ ಗುರುವಾರ ರಾತ್ರಿ ನಿಧನರಾಗಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು. ಸಂತಾಪ ಸೂಚಿಸಿ ವಿಡಿಯೊ ಸಂದೇಶ ಹಂಚಿಕೊಂಡಿರುವ ಮೋದಿ, ಸಿಂಗ್ …

Read More »

ರಾಯಚೂರು ನೂತನ ಮಿನಿ ವಿಧಾನಸೌಧ ಹೊಸ ವರ್ಷಕ್ಕೆ ಕಾರ್ಯಾರಂಭ

ರಾಯಚೂರು : ಜಿಲ್ಲೆಯ ಅನೇಕ ವರ್ಷಗಳ ಬೇಡಿಕೆಯಾಗಿದ್ದ, ನೂತನ ಮಿನಿ ವಿಧಾನಸೌಧ ಹೊಸವರ್ಷದ ನಿಮಿತ್ತವಾಗಿ ಜನವರಿಯಲ್ಲಿ ಕಾರ್ಯಾರಂಭ ಮಾಡುವ ಮೂಲಕ ಸರ್ಕಾರ ಸಾರ್ವಜನಿಕರಿಗೆ, ಸಿಬ್ಬಂದಿಗೆ ಹೊಸ ವರ್ಷದ ಗಿಫ್ಟ್ ನೀಡಲು ಸಜ್ಜಾಗಿದೆ. ನಗರದ ಹೊರವಲಯದ ಯಕ್ಲಾಸಪೂರ ಗ್ರಾಮದಲ್ಲಿ ನೂತನ ಮಿನಿ ವಿಧಾನಸೌಧ ನಿರ್ಮಾಣದ ಕಾಮಗಾರಿಗೆ 2017ರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಡಿಗಲ್ಲು ಹಾಕಿದ್ದರು. ಕಾಮಗಾರಿ ಅಂತಿಮ ಹಂತದಲ್ಲಿದ್ದು, ಅಂದುಕೊಂಡಂತೆ ಆದರೆ ಜನವರಿ ಮೊದಲನೆ ವಾರ ನೂತನ ಮಿನಿ ವಿಧಾನಸೌಧ ಕಾರ್ಯಾರಂಭವಾಗಲಿದೆ ಎಂದು …

Read More »

ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಮನಮೋಹನ್ ಸಿಂಗ್ ಅವರ ಆರ್ಥಿಕ ಸುಧಾರಣೆಗಳನ್ನು ಗೌರವಿಸುವ ಸಂಶೋಧನಾ ಕೇಂದ್ರ ಸ್ಥಾಪನೆ: ಡಿಸಿಎಂ ಡಿಕೆಶಿ

ಬೆಳಗಾವಿ: ದೇಶದ ಬೆಳವಣಿಗೆಗಾಗಿ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರು ರಚಿಸಿದ ಸುಧಾರಣೆಗಳ ಬಗ್ಗೆ ಎಲ್ಲ ವಿದ್ಯಾರ್ಥಿಗಳು ಕಲಿಯಲು ನೆರವಾಗುವಂತೆ ಬೆಂಗಳೂರು ವಿಶ್ವವಿದ್ಯಾನಿಲಯದಲ್ಲಿ ಸಂಶೋಧನೆ ಮತ್ತು ಅಧ್ಯಯನ ಕೇಂದ್ರವನ್ನು ಪ್ರಾರಂಭಿಸುವುದಾಗಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಇಂದು ಹೇಳಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮನಮೋಹನ್ ಸಿಂಗ್ ಅವರು ದೇಶಕ್ಕೆ ನೀಡಿರುವ ಕೊಡುಗೆಯನ್ನು ಎಂದಿಗೂ ಬದಲಾಯಿಸಲು ಸಾಧ್ಯವಿಲ್ಲ ಎಂದರು. ಹಣೆಬರಹ ನಮ್ಮ ಕೈಯಲ್ಲಿಲ್ಲ. ಆದರೆ, ಮನಮೋಹನ್ ಸಿಂಗ್ ಅವರು ಇನ್ನಿಲ್ಲವಾದರೂ ಅವರು …

Read More »

ಸಿದ್ಧಸಿರಿ ಎಥೆನಾಲ್ ಮತ್ತು ಪವರ್ ಘಟಕಕ್ಕೆ ನಾಲ್ವರು ಅಧಿಕಾರಿಗಳ ತಂಡ ಭೇಟಿ, ಪರಿಶೀಲನೆ

ಚಿಂಚೋಳಿ: ಸುಪ್ರೀಂ ಕೋರ್ಟ್ ನಿರ್ದೇಶನದ ಮೇರೆಗೆ ಕೇಂದ್ರೀಯ ಮಾಲಿನ್ಯ ನಿಯಂತ್ರಣ ಮಂಡಳಿ ಹಾಗೂ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿಗಳು ಒಳಗೊಂಡು‌ ನಾಲ್ವರು ಅಧಿಕಾರಿಗಳ ತಂಡ ಶುಕ್ರವಾರ ಸಿದ್ಧಸಿರಿ ಎಥೆನಾಲ್ ಮತ್ತು ಪವರ್ ಘಟಕಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದೆ. ಪತ್ರಕರ್ತರು, ರೈತರು ಸೇರಿದಂತೆ ಯಾರನ್ನೂ ಒಳಗಡೆ ಬಿಡದೇ ಅಧಿಕಾರಿಗಳು‌, ವಕೀಲರು ಸಭೆ ನಡೆಸುತಿದ್ದಾರೆ. ಮಾಧ್ಯಮದವರಿಗೆ ಒಳಗಡೆ ಪ್ರವೇಶ ನಿರಾಕರಿಸಲಾಗಿದೆ. ತಾಲ್ಲೂಕಿನ‌ ವಿವಿಧ ಹಳ್ಳಿಗಳು ಹಾಗೂ ತಾಲ್ಲೂಕುಗಳಿಂದ ರೈತರನ್ನು …

Read More »

ಡಾ.ಮನಮೋಹನ್ ಸಿಂಗ್ ಅವರು ದೇಶದ ಆರ್ಥಿಕತೆಯ ಮೇಲೆ ದೊಡ್ಡ ಛಾಪು ಮೂಡಿಸಿದ್ದಾರೆ: ಸಿಎಂ ಸಿದ್ದರಾಮಯ್ಯ ಸಂತಾಪ

ಬೆಳಗಾವಿ: ಡಿಸೆಂಬರ್ 26 ರಂದು ನಿಧನರಾದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ದೇಶದ ಆರ್ಥಿಕತೆಯ ಮೇಲೆ ‘ದೊಡ್ಡ ಛಾಪು’ ಮೂಡಿಸಿದ್ದಾರೆ. ಅತ್ಯಂತ ಗೌರವಾನ್ವಿತ ವ್ಯಕ್ತಿಯಾಗಿರುವ ಸಿಂಗ್, ಸರಳ, ಸಜ್ಜನ ಮತ್ತು ಪ್ರಾಮಾಣಿಕ ರಾಜಕಾರಣಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಹೇಳಿದ್ದಾರೆ. ಭಾರತದ ಆರ್ಥಿಕ ಸುಧಾರಣೆಗಳ ಶಿಲ್ಪಿ ಮನಮೋಹನ್ ಸಿಂಗ್ ಅವರು ಗುರುವಾರ ರಾತ್ರಿ ದೆಹಲಿಯಲ್ಲಿ ನಿಧನರಾಗಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿದೆ. ಸಿಂಗ್ ಅವರ ಜೀವನವು ಒಂದು ರೀತಿಯಲ್ಲಿ …

Read More »

ಅಮಿತ್‌ ಶಾ ಅವಹೇಳನಕಾರಿ ಹೇಳಿಕೆ ಖಂಡಿಸಿ ಜ.6 ರಂದು ಕೊಪ್ಪಳ ಬಂದ್ ಗೆ ಕರೆ

ಕೊಪ್ಪಳ: ಬಿ.ಆರ್. ಅಂಬೇಡ್ಕರ್ ಅವರ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವಹೇಳನಕಾರಿಯಾಗಿ ಹೇಳಿಕೆ ನೀಡಿದ್ದರಿಂದ ಜನವರಿ 6ರಂದು ಕೊಪ್ಪಳ ಬಂದ್ ಗೆ ಕರೆ ‌ನೀಡಲಾಗಿದೆ ಎಂದು ಸಂವಿಧಾನ ಸಂರಕ್ಷಣಾ ಸಮಿತಿಯ ಜಿಲ್ಲಾ ಸಮಿತಿ ಮುಖಂಡರು ತಿಳಿಸಿದ್ದಾರೆ. ಸಮಿತಿಯ ಮುಖಂಡರಾದ ಸಾಹಿತಿ ಅಲ್ಲಮಪ್ರಭು ಬೆಟ್ಟದೂರು, ಹನುಮೇಶ ಕಡೆಮನಿ, ಟಿ.ರತ್ನಾಕರ, ಈಶಪ್ಪ ಶಿರೂರು ಹಾಗೂ ಕೆ.ಎಸ್. ಮೈಲಾರಪ್ಪ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಕೇಂದ್ರ ಸಂಸತ್ತಿನ ಅಧಿವೇಶನದಲ್ಲಿ ನಡೆದ ಚರ್ಚೆ ವೇಳೆ …

Read More »

ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಸಚಿವ ಕೃಷ್ಣ ಬೈರೇಗೌಡ

ದೊಡ್ಡಬಳ್ಳಾಪುರ: ಕಂದಾಯ ಸಚಿವ ಕೃಷ್ಣ ಬೈರೇಗೌಡ ಗುರುವಾರ ಇಲ್ಲಿಯ ತಾಲ್ಲೂಕು ಕಚೇರಿ, ಉಪವಿಗಾಧಿಕಾರಿಗಳ ಹಾಗೂ ಉಪನೋಂದಣಿ ಅಧಿಕಾರಿಗಳ ಕಚೇರಿಗೆ ದಿಢೀರ್‌ ಭೇಟಿ ನೀಡಿದರು. ಬೆಳಗ್ಗೆ 10.20ಕ್ಕೆ ಭೇಟಿ ನೀಡಿದಾಗ ಸಾರ್ವಜನಿಕರ ಹೊರತಾಗಿ ಯಾವ ಸರ್ಕಾರಿ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಯಲ್ಲಿ ಇರಲಿಲ್ಲ. ಎಲ್ಲಾ ಖುರ್ಚಿಗಳು ಖಾಲಿ ಇರುವುದನ್ನು ಕಂಡ ಸಚಿವರು ಗರಂ ಆದರು. ಕೂಡಲೇ ಜಿಲ್ಲಾಧಿಕಾರಿಗೆ ಕರೆ ಮಾಡಿ ತರಾಟೆಗೆ ತೆಗೆದುಕೊಂಡರು. ಕಚೇರಿಯಲ್ಲಿ ತಾವು ಕಂಡ ದೃಶ್ಯವನ್ನು ಖಾರವಾಗಿಯೇ ಹೇಳಿದರು. …

Read More »

ಮನಮೋಹನ್ ಸಿಂಗ್ ನಿಧನಕ್ಕೆ ಅಫ್ಘಾನಿಸ್ತಾನದ ಮಾಜಿ ಅಧ್ಯಕ್ಷ ಹಮೀದ್ ಕರ್ಜೈ ಸಂತಾಪ

ನವದೆಹಲಿ : ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು 92 ನೇ ವಯಸ್ಸಿನಲ್ಲಿ ನಿಧನರಾದರು. ಅವರ ನಿಧನದ ನಂತರ ಭಾರತ ಮಾತ್ರವಲ್ಲದೆ ವಿಶ್ವದಾದ್ಯಂತದ ರಾಜಕಾರಣಿಗಳು ದುಃಖ ವ್ಯಕ್ತಪಡಿಸಿದ್ದಾರೆ. ಅಫ್ಘಾನಿಸ್ತಾನದ ಮಾಜಿ ಅಧ್ಯಕ್ಷ ಹಮೀದ್ ಕರ್ಜೈ ಕೂಡ ಸಂತಾಪ ಸೂಚಿಸಿದ್ದು, ಭಾರತವು ಇಂದು ತನ್ನ ಅತ್ಯಂತ ಅದ್ಭುತ ಮಗನನ್ನು ಕಳೆದುಕೊಂಡಿದೆ ಎಂದು ಹೇಳಿದರು. ಮನಮೋಹನ್ ಸಿಂಗ್ ನಿಧನಕ್ಕೆ ಸಂತಾಪ ಸೂಚಿಸಿರುವ ಅಫ್ಘಾನಿಸ್ತಾನದ ಮಾಜಿ ಅಧ್ಯಕ್ಷ ಹಮೀದ್ ಕರ್ಜೈ. ಭಾರತವು ತನ್ನ ಅತ್ಯಂತ …

Read More »