Breaking News

BigTv News

ಸಿಎಂ ಸಿದ್ದರಾಮಯ್ಯರಿಂದ ಮಾರ್ಚ್ 14 ರಂದು ರಾಜ್ಯ ಬಜೆಟ್‌ ಮಂಡನೆ ಸಾಧ್ಯತೆ

ಬೆಂಗಳೂರು: ಸಿದ್ದರಾಮಯ್ಯ 16ನೇ ಬಜೆಟ್ ಮಂಡಿಸಲು ಸಿದ್ಧತೆ ಕೈಗೊಂಡಿದ್ದಾರೆ. ಮಾರ್ಚ್ 10 ರಿಂದ 4 ದಿನಗಳ ಕಾಲ ವಿಧಾನ ಮಂಡಲ ಜಂಟಿ ಅಧಿವೇಶನ ಕರೆಯಲು ಉದ್ದೇಶಿಸಲಾಗಿದೆ. ಮಾರ್ಚ್ 14 ರಂದು ರಾಜ್ಯ ಬಜೆಟ್ ಮಂಡಿಸುವ ಸಾಧ್ಯತೆ ಇದೆ. ಈ ಹಿಂದೆ ರಾಮಕೃಷ್ಣ ಹೆಗಡೆ 13 ಬಾರಿ ಬಜೆಟ್ ಮಂಡಿಸಿದ್ದು ದಾಖಲೆಯಾಗಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ 16ನೇ ಬಾರಿಗೆ ಬಜೆಟ್ ಮಂಡಿಸಲಿದ್ದು, ಅತಿ ಹೆಚ್ಚು ಬಾರಿ ಬಜೆಟ್ ಮಂಡಿಸಿದ ದಾಖಲೆ ಮುಂದುವರೆಸಲಿದ್ದಾರೆ. 2025 …

Read More »

ಜಮ್ಮುಕಾಶ್ಮೀರದಲ್ಲಿ ಹುತಾತ್ಮರಾದ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ

ಬೆಳಗಾವಿ: ಜಮ್ಮು ಕಾಶ್ಮೀರದಲ್ಲಿ ಅಪಘಾತಕ್ಕೀಡಾಗಿ ಹುತಾತ್ಮರಾದ ಪಾರ್ಥಿವ ಶರೀರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಂತಿಮ ಗೌರವ ಸಲ್ಲಿಸಿದರು. ಬೆಳಗಾವಿಯ ಸೇನಾ ಯುದ್ಧ ಸ್ಮಾರಕದಲ್ಲಿ ಸುಬೇದಾರ್ ದಯಾನಂದ ತಿರುಕಣ್ಣನವರ್, ಮಹೇಶ್ ಮಾರಿಗೊಂಡ ಅವರ ಪಾರ್ಥಿವ ಶರೀರಕ್ಕೆ ಪುಷ್ಪ ನಮನ ಸಲ್ಲಿಸಿ ಅಂತಿಮ ಗೌರವ ಸಲ್ಲಿಸಿದರು. ಬಳಿಕ ಮಾಧ್ಯಮದವರ ಜೊತೆ ಮಾತನಾಡಿದ ಮುಖ್ಯಮಂತ್ರಿಗಳು, ಯೋಧರ ಬದುಕು, ಜೀವನ, ವೃತ್ತಿ ಅತ್ಯಂತ ಉನ್ನತವಾದದು. ನಮ್ಮ ರಾಜ್ಯದ ಯೋಧರು ಅಪಘಾತದಲ್ಲಿ ಹುತಾತ್ಮರಾಗಿರುವುದು ಅತ್ಯಂತ ನೋವಿನ ಸಂಗತಿ. …

Read More »

ಕೊಪ್ಪಳದಲ್ಲಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಿಂದ ಡಿ.27 ರಂದು ವಾಕ್ ಇನ್ ಸಂದರ್ಶನ

ಕೊಪ್ಪಳ: ಕೊಪ್ಪಳದಲ್ಲಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಮಾಹಿತಿಯೊಂದಿದೆ. ಕೊಪ್ಪಳ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಿಂದ ವಾಕ್ ಇನ್ ಸಂದರ್ಶನ ಆಯೋಜನೆ ಮಾಡಲಾಗಿದೆ. ಇದರಲ್ಲಿ ಪಾಲ್ಗೊಳ್ಳಲು ಯಾವುದೇ ಶುಲ್ಕವನ್ನು ನಿಗದಿಗೊಳಿಸಿಲ್ಲ. ಅಭ್ಯರ್ಥಿಗಳು ಸೂಕ್ತ ದಾಖಲೆಗಳ ಜೊತೆ ಪಾಲ್ಗೊಳ್ಳಬೇಕು ಎಂದು ಸೂಚನೆ ನೀಡಲಾಗಿದೆ. ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಡಿಸೆಂಬರ್ 27ರಂದು ಬೆಳಗ್ಗೆ 10.30ರಿಂದ ಮಧ್ಯಾಹ್ನ 1.30ರ ತನಕ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ವಾಕ್ ಇನ್ ಸಂದರ್ಶನ ಆಯೋಜನೆ …

Read More »

ಜಮ್ಮುಕಾಶ್ಮೀರದಲ್ಲಿ ನಕ್ಸಲಿಸಂ ಎದುರಿಸುವಲ್ಲಿ ಸಿ ಆರ್ ಪಿ ಎಫ್ ಯೋಧರ ಕಾರ್ಯ ಶ್ಲಾಘನೀಯ: ಕೇಂದ್ರ ಸಚಿವ ಅಮಿತ್ ಶಾ

ನವದೆಹಲಿ: ಈಶಾನ್ಯ ರಾಜ್ಯಗಳು ಸೇರಿದಂತೆ ಜಮ್ಮು ಮತ್ತು ಕಾಶ್ಮೀರದಲ್ಲಿ ನಕ್ಸಲಿಸಂ ಅನ್ನು ಎದುರಿಸುವಲ್ಲಿ ಹಾಗೂ ಶಾಂತಿ ಮರು ಸ್ಥಾಪಿಸುವಲ್ಲಿ ಕೇಂದ್ರೀಯ ಮೀಸಲು ಪೊಲೀಸ್ ಪಡೆಯ (ಸಿಆರ್‌ಪಿಎಫ್) ಯೋಧರ ಕಾರ್ಯ ಶ್ಲಾಘನೀಯವಾದದ್ದು ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿದ್ದಾರೆ. ಸಿಆರ್‌ಪಿಎಫ್ ಪ್ರಧಾನ ಕಚೇರಿಗೆ ಅಮಿತ್‌ ಶಾ ಅವರು ಭೇಟಿ ನೀಡಿ, ವಿಶ್ವದ ಅತಿದೊಡ್ಡ ಅರೆಸೇನಾ ಪಡೆಯ ಕಾರ್ಯಾಚರಣೆಗಳು ಮತ್ತು ಆಡಳಿತಾತ್ಮಕ ದಕ್ಷತೆ ಕುರಿತು ಪರಿಶೀಲನೆ ನಡೆಸಿದ್ದಾರೆ. ಇದೇ ಸಂದರ್ಭದಲ್ಲಿ …

Read More »

ಸಿಎಂ ಸಿದ್ದರಾಮಯ್ಯರಿಂದ ಕೊಪ್ಪಳ ವಿವಿ ಕುಲಪತಿ ಬಿ.ಕೆ.ರವಿ ಕೃತಿಯ ಆವೃತ್ತಿ ಬಿಡುಗಡೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು,ಕೊಪ್ಪಳ ವಿಶ್ವ ವಿದ್ಯಾಲಯದ ಕುಲಪತಿ ಬಿ.ಕೆ.ರವಿ ಅವರಆಧುನಿಕ ಮಾಧ್ಯಮ, ಚುನಾವಣೆಗಳು ಮತ್ತು ಪ್ರಜಾಪ್ರಭುತ್ವ ಕೃತಿಯ ಅಂತಾರಾಷ್ಟ್ರೀಯ ಆವೃತ್ತಿಯನ್ನು ಕಾವೇರಿ ನಿವಾಸದಲ್ಲಿ ಬಿಡುಗಡೆ ಮಾಡಿದರು. ಸ್ವಾತಂತ್ರ್ಯ ಸಂದರ್ಭದಿಂದ ಈ ಕ್ಷಣದವರೆಗೆ ದೇಶದಲ್ಲಿ ನಡೆದ ಚುನಾವಣೆಗಳು, ಚುನಾವಣಾ ರಾಜಕಾರಣ ಕುರಿತಂತೆ ಮಾಧ್ಯಮಗಳು ಕಾಲ ಕಾಲಕ್ಕೆ ಬದಲಾಗಿರುವುದು, ಚುನಾವಣಾ ಸ್ವರೂಪದಲ್ಲಿ ಆದ ಮಾರ್ಪಾಡುಗಳು, ಇವೆಲ್ಲದರಿಂದ ದೇಶದ ಪ್ರಜಾಪ್ರಭುತ್ವದ ಮೇಲೆ ಆಗಿರುವ ಪರಿಣಾಮಗಳ ವಿಶ್ಲೇಷಣಾತ್ಮಕ ಕೃತಿ ಇದಾಗಿದೆ. ರಾಜಕೀಯ ಸಂವಹನ ಕ್ಷೇತ್ರದ …

Read More »

ಹೊಸದಾಗಿ ರಚಿಸಲಾದ 10 ಸಾವಿರ ವಿವಿಧೋದ್ದೇಶ ಪ್ರಾಥಮಿಕ ಕೃಷಿ ಸಾಲ ಸಂಘಗಳಿಗೆ ಕೇಂದ್ರ ಸಚಿವ ಅಮಿತ ಶಾ ಚಾಲನೆ

ನವದೆಹಲಿ: ಹೊಸದಾಗಿ ರಚಿಸಲಾದ 10 ಸಾವಿರ ವಿವಿಧೋದ್ದೇಶ ಪ್ರಾಥಮಿಕ ಕೃಷಿ ಸಾಲ ಸಂಘಗಳು, ಹೈನುಗಾರಿಕೆ ಮತ್ತು ಮೀನುಗಾರಿಕಾ ಸಹಕಾರ ಸಂಘಗಳನ್ನು ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರು ಇಂದು ಉದ್ಘಾಟಿಸಿದ್ದಾರೆ. ಕಳೆದ ಮಾರ್ಚ್‌ನಲ್ಲಿ ರಾಷ್ಟ್ರೀಯ ಸಹಕಾರಿ ದತ್ತಸಂಚಯವನ್ನು ನವದೆಹಲಿಯಲ್ಲಿ ಆರಂಭಿಸಿದ ಒಂಬತ್ತು ತಿಂಗಳ ಬಳಿಕ ಈ ಕಾರ್ಯಕ್ರವನ್ನು ಜಾರಿಗೊಳಿಸಲಾಗುತ್ತಿದೆ. ಇದು ಭಾರತದ ವಿಶಾಲವಾದ ಸಹಕಾರಿ ಕ್ಷೇತ್ರದ ಕುರಿತ ಪ್ರಮುಖ ಮಾಹಿತಿಯನ್ನು ಸೆರೆಹಿಡಿಯುವ ಗುರಿ ಹೊಂದಿದೆ. ಪ್ರಧಾನಮಂತ್ರಿ …

Read More »

ಶತಮಾನೋತ್ಸವ: ಬೆಳಗಾವಿಯ ಸುವರ್ಣಸೌಧದ ಆವರಣದಲ್ಲಿ ಬೃಹತ್ ಗಾಂಧಿ ಪ್ರತಿಮೆ ಅನಾವರಣ

ಬೆಳಗಾವಿ: ಮಹಾತ್ಮಾ ಗಾಂಧೀಜಿಯವರ ಅಧ್ಯಕ್ಷತೆ ವಹಿಸಿದ್ದ 1924ರ ಕಾಂಗ್ರೇಸ್ ಅಧಿವೇಶನಕ್ಕೆ ನೂರು ವರ್ಷಗಳು ಪೂರ್ಣಗೊಂಡಿದೆ. ಹೀಗಾಗಿ ರಾಜ್ಯ ಸರ್ಕಾರದಿಂದ ಅದ್ಧೂರಿ ಶತಮಾನೊತ್ಸವ ಕಾರ್ಯಕ್ರಮ ನಡೆಯಲಿದೆ. ವಿವಿಧೆಡೆ ಕಾಂಗ್ರೆಸ್ ಸಮಾವೇಶಗಳು ನಡೆಯುತ್ತಿವೆ. ಇತ್ತ ಬೆಳಗಾವಿಯ ಸುವರ್ಣಸೌಧದಲ್ಲಿ ಆವರಣದಲ್ಲಿ ಮಹಾತ್ಮಾ ಗಾಂಧೀಜಿಯವರ ಪುತ್ಥಳಿ ಅನಾವರಣಗೊಳ್ಳಲಿದೆ. ಸುವರ್ಣಸೌಧದಲ್ಲಿ ಶುಕ್ರವಾರ ಡಿಸೆಂಬರ್ 27 ಗಾಂಧಿ ಪ್ರತಿಮೆ ಅನಾವರಣ ಮಾಡಲು ಸರ್ಕಾರ ಯೋಜಿಸಿದೆ. ಈ ಸಂಬಂಧ ಬುಧವಾರ ಪುತ್ಥಳಿ ಅನಾವರಣ ಸಮಾರಂಭದ ಪೂರ್ವಸಿದ್ಧತೆಗಳನ್ನು ಪ್ರವಾಸೊದ್ಯಮ ಇಲಾಖೆ ಸಚಿವರಾದ …

Read More »

ಪಿಎಂ ಕಿಸಾನ್ ಸಮ್ಮಾನ್ ಆಯಪ್ ಹೆಸರಿನಲ್ಲಿ ವಂಚನೆ: ಜಾಗೃತಿ ಮೂಡಿಸಲು ಮುಂದಾದ ಪೊಲೀಸರು

ನವದೆಹಲಿ: ದೇಶದಾದ್ಯಂತ ಸುಮಾರು ಎಂಟು ಕೋಟಿ ರೈತರು ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಿಂದ ಪ್ರಯೋಜನ ಪಡೆಯುತ್ತಿದ್ದರೆ, ಇದರ ಬೆನ್ನಲ್ಲೇ ನಕಲಿ ಪಿಎಂ ಕಿಸಾನ್ ಆಯಪ್ ಮತ್ತೆ ಸಕ್ರಿಯವಾಗಿದೆ. ರೈತರನ್ನೇ ಗುರಿಯಾಗಿಸಿಕೊಂಡು ಪಿಎಂ ಕಿಸಾನ್ ಯೋಜನೆಯ ಮೊಬೈಲ್ ಅಪ್ಲಿಕೇಶನ್ ಎಂದು ಹೇಳಿಕೊಳ್ಳುವ ವಂಚನೆಯ ಲಿಂಕ್ ಅನ್ನು ಸೋಶಿಯಲ್ ಮೀಡಿಯಾದಲ್ಲಿ ಮತ್ತೆ ಸಕ್ರಿಯವಾಗಿ ಶೇರ್ ಆಗುತ್ತಿದ್ದು, ಈ ಲಿಂಕ್ ಅನ್ನು ಕ್ಲಿಕ್ ಮಾಡದಂತೆ ಪೊಲೀಸರು ರೈತರಿಗೆ ಎಚ್ಚರಿಕೆ ನೀಡಿದ್ದಾರೆ. ಪ್ರಧಾನ ಮಂತ್ರಿ …

Read More »

ಮಣಿಪುರ ಸೇರಿ 5 ರಾಜ್ಯಗಳಿಗೆ ನೂತನ ರಾಜ್ಯಪಾಲರನ್ನು ನೇಮಿಸಿದ ಕೇಂದ್ರ ಸರ್ಕಾರ

ನವದೆಹಲಿ: ಗಲಭೆ ಪೀಡಿತ ಮಣಿಪುರ ಸೇರಿದಂತೆ 5 ರಾಜ್ಯಗಳಿಗೆ ನೂತನ ರಾಜ್ಯಪಾಲರ ನೇಮಕಕ್ಕೆ ಕೇಂದ್ರ ಸರ್ಕಾರ ಸಲ್ಲಿಸಿದ್ದ ಪ್ರಸ್ತಾಪಕ್ಕೆ ರಾಷ್ಟ್ರಪತಿಯವರು ಒಪ್ಪಿಗೆ ನೀಡಿದ್ದಾರೆ. ಇದರಲ್ಲಿ ಇಬ್ಬರು ಮೊದಲ ಬಾರಿ ರಾಜ್ಯಪಾಲರಾದರೆ, 3 ರಾಜ್ಯಗಳಿಗೆ ಬೇರೆ ರಾಜ್ಯದಿಂದ ವರ್ಗಾವಣೆ ಮಾಡಲಾಗಿದೆ. 1 ವರ್ಷಕ್ಕೂ ಹೆಚ್ಚು ಕಾಲದಿಂದ ಘರ್ಷಣೆಗೆ ತುತ್ತಾಗಿರುವ ಮಣಿಪುರ ರಾಜ್ಯಪಾಲರಾಗಿ ಕೇಂದ್ರದ ಮಾಜಿ ಗೃಹ ಕಾರ್ಯದರ್ಶಿ ಅಜಯ್‌ ಕುಮಾರ್‌ ಭಲ್ಲಾ ಅವರನ್ನು ನೇಮಕ ಮಾಡಲಾಗಿದೆ. ಅಜಯ್‌ ಕುಮಾರ್‌ ಭಲ್ಲಾ 1984ರ …

Read More »

ಕೆನ್‌-ಬೆತ್ವಾ ನದಿ ಜೋಡಣೆ ರಾಷ್ಟ್ರೀಯ ಯೋಜನೆಗೆ ಪ್ರಧಾನಿ ಮೋದಿ ಚಾಲನೆ

ಭೋಪಾಲ್‌: ಮಧ್ಯಪ್ರದೇಶದಲ್ಲಿ ಮೋಹನ್ ಯಾದವ್ ನೇತೃತ್ವದ ಬಿಜೆಪಿ ಸರ್ಕಾರ ಒಂದು ವರ್ಷ ಪೂರೈಸಿದ್ದಕ್ಕೆ ಎಂದು ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದರು. ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ 100ನೇ ಜನ್ಮದಿನದ ಹಿನ್ನೆಲೆಯಲ್ಲಿ ಮಧ್ಯಪ್ರದೇಶದಲ್ಲಿ ಕೆನ್-ಬೆಟ್ವಾ ನದಿ ಜೋಡಣೆ ರಾಷ್ಟ್ರೀಯ ಯೋಜನೆಗೆ ಶಂಕುಸ್ಥಾಪನೆ ಮಾಡಿದ ಅವರು, ಕಳೆದ ಒಂದು ವರ್ಷದಲ್ಲಿ ಅಭಿವೃದ್ಧಿಗೆ ಹೊಸ ಗತಿ ಸಿಕ್ಕಿದೆ. ಮೋಹನ್ ಯಾದವ್ ನೇತೃತ್ವದ ಬಿಜೆಪಿ ಸರ್ಕಾರ ಒಂದು ವರ್ಷ ಪೂರೈಸಿದೆ. ಮಧ್ಯಪ್ರದೇಶದ ಜನತೆಗೆ …

Read More »