Breaking News

BigTv News

ಚಿತ್ರದುರ್ಗ: ಗ್ರಾಮ ಆಡಳಿತಾಧಿಕಾರಿ ಹುದ್ದೆಯ ಅಭ್ಯರ್ಥಿಗಳ ಅಂತಿಮ ಅಂಕಪಟ್ಟಿ ಪ್ರಕಟ

ಚಿತ್ರದುರ್ಗ:ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಗ್ರಾಮ ಆಡಳಿತಾಧಿಕಾರಿ ಹುದ್ದೆಗಳಿಗೆ ನಡೆಸಲಾದ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಅಭ್ಯರ್ಥಿಗಳು ಗಳಿಸಿರುವ ಅಂತಿಮ ಅಂಕಪಟ್ಟಿಯನ್ನು ಪ್ರಕಟಿಸಲಾಗಿದೆ. ಗ್ರಾಮ ಆಡಳಿತಾಧಿಕಾರಿಗಳ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಸೂಚಿಸಲಾಗಿದ್ದು, ಅದರಂತೆ ಚಿತ್ರದುರ್ಗ ಜಿಲ್ಲಾ ಕಂದಾಯ ಘಟಕದಲ್ಲಿ ಖಾಲಿ ಇರುವ 32 ಅನುಮೋದನೆಯಾಗಿರುವ ಹುದ್ದೆಗಳಿಗೆ ಕರ್ನಾಟಕ ನಾಗರೀಕ ಸೇವಾ (ನೇರ ನೇಮಕಾತಿ, ಸಾಮಾನ್ಯ) ನಿಯಮಗಳನುಸಾರ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸುವ ಸಂಬಂಧ ಪ್ರಾಧಿಕಾರ ನೀಡಿರುವ ಮೆರಿಟ್ ಪಟ್ಟಿಯಲ್ಲಿ 1:3 ಅನುಪಾತದಂತೆ ದಾಖಲಾತಿಗಳ ಪರಿಶೀಲನೆ ಸಂಬಂಧ …

Read More »

ಜಮ್ಮುವಿನಲ್ಲಿ ಕರ್ನಾಟಕದ ಮೂವರು ಯೋಧರು ಹುತಾತ್ಮ: ಸಂತಾಪ ಸೂಚಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಜಮ್ಮು-ಕಾಶ್ಮೀರದಲ್ಲಿ ಕರ್ನಾಟಕದ ಮೂವರು ಯೋಧರು ಹುತಾತ್ಮರಾಗಿದ್ದು, ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ ಜಮ್ಮು ಕಾಶ್ಮೀರದ ಪೂಂಛ್ ಬಳಿ ಸೇನಾ ವಾಹನ ಅಪಘಾತಕ್ಕೀಡಾಗಿ ಕನ್ನಡಿಗ ಯೋಧರಾದ ದಯಾನಂದ ತಿರಕಣ್ಣವರ, ಅನೂಪ್ ಹಾಗೂ ಮಹೇಶ್ ಮರಿಗೊಂಡ ಅವರು ಹುತಾತ್ಮರಾದ ಸುದ್ದಿ ತಿಳಿದು ನೋವಾಯಿತು. ಮೃತ ಯೋಧರ ಆತ್ಮಕ್ಕೆ ಚಿರಶಾಂತಿ ದೊರಕಲಿ, ಅವರ ಕುಟುಂಬವರ್ಗಕ್ಕೆ ಈ ನೋವು ಭರಿಸುವ ಶಕ್ತಿ ಸಿಗಲೆಂದು ದೇವರಲ್ಲಿ …

Read More »

ರಾಜ್ಯ ಸರ್ಕಾರದಿಂದ ಬಿಪಿಎಲ್ ಕಾರ್ಡ್ ದಾರರಿಗೆ ಸಿಹಿಸುದ್ದಿ

ಬೆಂಗಳೂರು: ಪ್ರಮುಖ ದಾಖಲೆಗಳಲ್ಲಿ ರೇಷನ್‌ ಕಾರ್ಡ್‌ ಕೂಡ ಒಂದಾಗಿದೆ. ಅದರಲ್ಲೂ ಬಿಪಿಎಲ್‌ ಕಾರ್ಡ್‌ದಾರರು ಸರ್ಕಾರದ ಹೆಚ್ಚಿನ ಸೌಲಭ್ಯಗಳನ್ನು ಪಡೆಯಬಹುದಾಗಿದೆ. ಇದೀಗ ಸರ್ಕಾರ ಬಿಪಿಎಲ್ ಕಾರ್ಡ್‌ದಾರರಿಗೆ ಸಿಹಿ ಸುದ್ದಿ ನೀಡಿದೆ. ಹೌದು, ಬಿಪಿಎಲ್‌ ಕಾರ್ಡ್‌ದಾರರು ಪಡಿತರ ಪಡೆಯುವುದಕ್ಕೆ ಕುಟುಂಬದ ಎಲ್ಲರ ವೇತನ ಪ್ರಮಾಣ ಪತ್ರ ನೀಡುವುದು ಕಡ್ಡಾಯ ಎಂದು ಹೇಳಲಾಗುತ್ತಿತ್ತು. ಆದರೇ ಎಲ್ಲರ ವೇತನ ಪ್ರಮಾಣಪತ್ರ ನೀಡುವುದು ಕಡ್ಡಾಯವಲ್ಲ ಎಂಬುದಾಗಿ ಆಹಾರ ಇಲಾಖೆ ಸಚಿವ ಕೆ.ಹೆಚ್‌ ಮುನಿಯಪ್ಪ ಸ್ಪಷ್ಟಪಡಿಸಿದ್ದಾರೆ. ಈ ಮೂಲಕ …

Read More »

ಜಮ್ಮು ಕಾಶ್ಮೀರದ ಪೂಂಛ್ ಬಳಿ ರಸ್ತೆ ಅಪಘಾತ: ಕರ್ನಾಟಕದ ಮೂವರು ಯೋಧರು ಹುತಾತ್ಮ

ಬೆಂಗಳೂರು: ಜಮ್ಮು ಮತ್ತು ಕಾಶ್ಮೀರದ ಪೂಂಛ್‌ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಮಂಗಳವಾರ ಸಂಜೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಕರ್ನಾಟಕದ ಮೂವರು ಯೋಧರು ಹುತಾತ್ಮರಾಗಿದ್ದಾರೆ. ಘಟನೆಯಲ್ಲಿ ಒಟ್ಟು ಐವರು ಯೋಧರು ಹುತಾತ್ಮರಾಗಿದ್ದು ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದರು. ಘಟನೆಯಲ್ಲಿ ಐವರು ಯೋಧರು ಗಾಯಗೊಂಡಿದ್ದು ಅವರನ್ನು ಸೇನಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಬೆಳಗಾವಿ ಬಳಿಯ ಸಾಂಬ್ರಾ ಗ್ರಾಮದ ಯೋಧ ಸುಬೇದಾರ್‌ ದಯಾನಂದ ತಿರಕಣ್ಣವರ (45), ಕುಂದಾಪುರ ಬಳಿಯ ಕೋಟೇಶ್ವರ ಬಿಜಾಡಿಯ …

Read More »

ಇಂದು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ 100ನೇ ಜನ್ಮ ದಿನಾಚರಣೆ: ಗಣ್ಯರಿಂದ ಅಟಲ್ ಸ್ಮಾರಕಕ್ಕೆ ಗೌರವ ನಮನ

ನವದೆಹಲಿ: ಮಾಜಿ ಪ್ರಧಾನಿ ದಿವಂಗತ ಅಟಲ್ ಬಿಹಾರಿ ವಾಜಪೇಯಿ ಅವರ 100ನೇ ಜನ್ಮ ದಿನಾಚರಣೆ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಸೇರಿದಂತೆ ಹಲವು ಗಣ್ಯರು ಇಂದು ಸದೈವ್ ಅಟಲ್ ಸ್ಮಾರಕಕ್ಕೆ ಪುಷ್ಪ ನಮನ ಸಲ್ಲಿಸಿದರು. ಲೋಕಸಭಾ ಸ್ಪೀಕರ್ ಓಂ ಬಿರ್ಲಾ, ಗೃಹ ಸಚಿವ ಅಮಿತ್ ಶಾ, ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಸೇರಿದಂತೆ ಹಲವು ಗಣ್ಯರು ಮಾಜಿ ಪ್ರಧಾನಿಗೆ ಗೌರವ ನಮನ ಸಲ್ಲಿಸಿದರು. …

Read More »

ಸಿ.ಟಿ.ರವಿ ರಾಹುಲ್ ಗಾಂಧಿಗೆ ಡ್ರಗ್ ಅಡಿಕ್ಟ್ ಎಂದ ವಿಚಾರ: ಅಸಮಾಧಾನಗೊಂಡ ಕಾಂಗ್ರೆಸ್ ಹೈಕಮಾಂಡ್

ಬೆಂಗಳೂರು: ಬೆಳಗಾವಿ ಅಧಿವೇಶನದಲ್ಲಿ ಸಿಟಿ ರವಿ ಮತ್ತು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ನಡುವಿನ ವಾಕ್ಸಮರದ ವಿಚಾರ ಹೈಕಮಾಂಡ್ ಗೆ ತಲುಪಿದೆ. ರಾಹುಲ್ ಗಾಂಧಿ ಡ್ರಗ್ ಅಡಿಕ್ಸ್ ಎಂದ ವಿಚಾರವನ್ನು ಹೈಕಮಾಂಡ್ ಗೆ ತಲುಪಿಸಲಾಗಿದೆ. ಮೊನ್ನೆಯಷ್ಟೇ ಬೆಳಗಾವಿ ಅಧಿವೇಶನದಲ್ಲಿ ಸಿಟಿ ರವಿಯವರು ರಾಹುಲ್ ಗಾಂಧಿಯವರನ್ನು ಡ್ರಗ್ ಅಡಿಕ್ಟ್ ಎಂದಿದ್ದು ಲಕ್ಷ್ಮೀ ಹೆಬ್ಬಾಳ್ಕರ್ ರನ್ಜು ಕೆರಳಿಸಿತ್ತು. ಇದಕ್ಕಾಗಿ ಲಕ್ಷ್ಮೀ ಹೆಬ್ಬಾಳ್ಕರ್ ಕೊಲೆಗಾರ ಎಂದು ಸಿಟಿ ರವಿ ಹೇಳಿದ್ದರು. ಈ ವಿಚಾರವಾಗಿ ನಡೆದ ಗಲಾಟೆಗಳ …

Read More »

ಅಂದಾಜು 42 ಸಾವಿರ ಕೋಟಿ ರೂ. ಸಾಲದ ಸುಳಿಗೆ ಸಿಲುಕಿದ ರಾಜ್ಯದ ವಿದ್ಯುತ್ ಸರಬರಾಜು ಕಂಪನಿಗಳು

ಬೆಂಗಳೂರು: ಸಾಲ ಮಾಡಿಯಾದರೂ ತುಪ್ಪ ತಿನ್ನಲು ರಾಜ್ಯದ ವಿದ್ಯುತ್‌ ಸರಬರಾಜು ಕಂಪೆನಿ (ಎಸ್ಕಾಂ)ಗಳು ಪಣತೊಟ್ಟಂತಿವೆ. ಅದರ ಫ‌ಲವಾಗಿ ಅಂದಾಜು 42 ಸಾವಿರ ಕೋಟಿ ರೂ. ಸಾಲದ ಸುಳಿಗೆ ಸಿಲುಕಿದ್ದು, ಆ ಹೊರೆಯನ್ನು ಪರೋಕ್ಷವಾಗಿ ದರ ಪರಿಷ್ಕರಣೆ ಮತ್ತಿತರ ರೂಪದಲ್ಲಿ ಗ್ರಾಹಕರು ಹೊರುವಂತಾಗಿದೆ. ಸ್ವತಃ ಇಂಧನ ಸಚಿವರು ಈಚೆಗೆ ವಿಧಾನಸಭೆಯಲ್ಲಿ ಇಲಾಖೆಯ ಹಣಕಾಸಿನ ಸ್ಥಿತಿಗತಿ ಕುರಿತು ಲಿಖಿತವಾಗಿ ಮಾಹಿತಿ ನೀಡಿದ್ದಾರೆ. ಅದರಂತೆ ಎಸ್ಕಾಂಗಳು ಸರಿಸುಮಾರು 42 ಸಾವಿರ ಕೋಟಿ ರೂ. ಸಾಲದ …

Read More »

ಬೆಂಬಲ ಬೆಲೆ ಯೋಜನೆಯಡಿ ತೊಗರಿ ಮತ್ತು ಕಡಲೆ ಖರೀದಿಸಲು ಕೇಂದ್ರ ಸರ್ಕಾರ ಅನುಮತಿ: ಸಚಿವ ಶಿವಾನಂದ ಪಾಟೀಲ್

ಬೆಂಗಳೂರು: ರಾಜ್ಯ ಸರ್ಕಾರದ ಮನವಿ ಮೇರೆಗೆ ತೊಗರಿ ಮತ್ತು ಕಡಲೆಯನ್ನು ಬೆಂಬಲ ಬೆಲೆ ಯೋಜನೆ ಅಡಿ ಖರೀದಿಸಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ತಿಳಿಸಿದ್ದಾರೆ. ಪ್ರತಿ ಕ್ವಿಂಟಾಲ್ ತೊಗರಿಗೆ 7750 ರೂಪಾಯಿ, ಕಡಲೆಗೆ 5,650 ರೂ.ದರ ನಿಗದಿಪಡಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಕಲಬುರಗಿ, ಯಾದಗಿರಿ, ಬೀದರ್, ವಿಜಯಪುರ, ಕೊಪ್ಪಳ, ಬೆಳಗಾವಿ, ಬಳ್ಳಾರಿ, ವಿಜಯನಗರ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ತೊಗರಿ ಖರೀದಿ ಕೇಂದ್ರ …

Read More »

ಗಾಂಧಿ ಭಾರತ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಬಂದರೆ ಕಾಂಗ್ರೆಸ್ ಶಕ್ತಿ ತೋರಿಸುತ್ತೇವೆ: ಡಿಸಿಎಂ ಡಿಕೆಶಿ

ಬೆಳಗಾವಿ: ಕಾಂಗ್ರೆಸ್ ಪಕ್ಷದ ಶಕ್ತಿ ಏನು ಎಂಬುದು ನಮಗೆ ಗೊತ್ತಿದೆ. ನಮಗಿಂತ ಚೆನ್ನಾಗಿ ಬಿಜೆಪಿಯವರಿಗೂ ಗೊತ್ತಿದೆ. ‘ಗಾಂಧಿ ಭಾರತ’ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಬಂದರೆ ನಮ್ಮ ಶಕ್ತಿ ತೋರಿಸುತ್ತೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ತಿಳಿಸಿದರು. ನಗರದಲ್ಲಿ ಮಂಗಳವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಡಿ.26ರಂದು ಬೆಳಗಾವಿ ಚಲೋ’ ಹಮ್ಮಿಕೊಳ್ಳುತ್ತೇವೆ ಎಂದು ಬಿಜೆಪಿಯವರು ಹೇಳಿದ್ದಾರೆ. ನಾನು ಅವರ ಬಗ್ಗೆ ತಲೆ ಕೆಡಿಸಿಕೊಳ್ಳುವವನಲ್ಲ. ಕಾಂಗ್ರೆಸ್‌ ಅಧಿವೇಶನದ ಶತಮಾನೋತ್ಸವ ಸಂಭ್ರಮದಲ್ಲಿದ್ದೇವೆ. ಯಾರಾದರೂ ಕೆಡಿಸುವ ಪ್ರಯತ್ನ ಮಾಡಲಿ …

Read More »

ಗೃಹ ಇಲಾಖೆಯಲ್ಲಿ ನನ್ನ ಬಿಟ್ಟು ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್

ಬೆಂಗಳೂರು: ಗೃಹ ಇಲಾಖೆಯಲ್ಲಿ ನನ್ನ ಬಿಟ್ಟು ಯಾರ ಹಸ್ತಕ್ಷೇಪವೂ ಇಲ್ಲ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿ.ಟಿ. ರವಿ ವಿಡಿಯೋವನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಿ ಪರಿಶೀಲನೆ ನಡೆಸುತ್ತೇವೆ. ಮಹಜರು ನಡೆಸಲು ಅನುಮತಿ ನೀಡುವಂತೆ ಪೊಲೀಸರು ಕೇಳಿದ್ದಾರೆ. ಸಭಾಪತಿಗಳು ಅನುಮತಿ ನೀಡಿಲ್ಲ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಇದೆಯೋ ಇಲ್ಲವೋ ಎಂಬುವುದು ಕುಮಾರಸ್ವಾಮಿಗೆ ಗೊತ್ತಿದೆ. ಯಾರೂ ನನ್ನ ಇಲಾಖೆಯಲ್ಲಿ ಹಸ್ತಕ್ಷೇಪ ಮಾಡಿಲ್ಲ. ಅಧಿಕಾರಿಗಳು ಏನು‌ ಮಾಡಬೇಕು …

Read More »