Breaking News

BigTv News

ವಿವಿಧ ಸಚಿವಾಲಯಗಳಲ್ಲಿ ಗುತ್ತಿಗೆ ಆಧಾರದಲ್ಲಿ ಕಾರ್ಯ ನಿರ್ವಹಿಸುವ ಸಿಬ್ಬಂದಿಗಳ ವೇತನ ಪರಿಷ್ಕರಣೆ: ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಸಚಿವರು, ವಿಧಾನಸಭೆ, ವಿಧಾನ ಪರಿಷತ್, ಸಂಸದರು, ರಾಜ್ಯಸಭಾ ಸದಸ್ಯರ ಆಪ್ತ ಸಿಬ್ಬಂದಿ ಸೇರಿದಂತೆ ವಿವಿಧ ಸಚಿವಾಲಯದಲ್ಲಿ ಗುತ್ತಿಗೆ ಆಧಾರದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಯ ವೇತನ ಪರಿಷ್ಕರಿಸಿ ರಾಜ್ಯ ಸರಕಾರ ಇಂದು ಆದೇಶ ಹೊರಡಿಸಿದೆ. ಏಳನೇ ವೇತನ ಆಯೋಗದ ಶಿಫಾರಸ್ಸಿನ ಮೇರೆಗೆ ಕರ್ನಾಟಕ ನಾಗರಿಕ ಸೇವೆಗಳು (ಪರಿಷ್ಕೃತ ವೇತನ) ನಿಯಮಗಳು 2024ನ್ನು ರಾಜ್ಯ ಸರಕಾರ ಜಾರಿಗೆ ತಂದಿದ್ದು, ಅದರಂತೆ ಗುತ್ತಿಗೆ ಆಧಾರದ ಸಿಬ್ಬಂದಿಯ ಪರಿಷ್ಕೃತ ಸಂಚಿತ …

Read More »

ಪ್ರತಿವರ್ಷ ಇನ್ಮುಂದೆ ಡಿ.26 ರಂದು ಗ್ರಾ.ಪಂ. ಕಂಪ್ಯೂಟರ್ ಆಪರೇಟರ್ ಗಳ ದಿನವಾಗಿ ಆಚರಣೆ: ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು: ಕಂಪ್ಯೂಟರ್‌ ಆವಿಷ್ಕಾರ ಮಾಡಿದ ವಿಜ್ಞಾನಿ ಚಾರ್ಲ್ಸ್‌ ಬ್ಯಾಬೇಜ್‌ ಅವರ ಹುಟ್ಟಿದ ದಿನವಾದ ಡಿಸೆಂಬರ್ 26ರಂದು ರಾಜ್ಯದ ಎಲ್ಲಾ ಗ್ರಾಮ ಪಂಚಾಯತಿಗಳಲ್ಲಿನ ಡಾಟಾ ಎಂಟ್ರಿ ಆಪರೇಟರುಗಳು ಇನ್ನು ಮುಂದೆ ಪ್ರತಿ ವರ್ಷ ಕಂಪ್ಯೂಟರ್‌ ಆಪರೇಟರುಗಳ ದಿನವನ್ನಾಗಿ ಆಚರಿಸುವುದಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ಅವರು ಈ …

Read More »

ಅಂಬೇಡ್ಕರ್ ವಿರುದ್ಧ ಅಮಿತ ಶಾ ಅವಹೇಳನಕಾರಿ ಹೇಳಿಕೆ: ಶಾ ವಜಾಗೆ ಆಗ್ರಹಿಸಿ ದಾವಣಗೆರೆಯಲ್ಲಿ ಅರೆಬೆತ್ತಲೆ ಮೆರವಣಿಗೆ

ದಾವಣಗೆರೆ: ಸಂವಿಧಾನ ಶಿಲ್ಪಿ ಅಂಬೇಡ್ಕರ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಕೂಡಲೇ ಸಂಪುಟದಿಂದ ವಜಾ ಮಾಡಬೇಕು ಎಂದು ಒತ್ತಾಯಿಸಿ ಡಿ.24ರ ಇಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ. ಬಿ. ಕೃಷ್ಣಪ್ಪ ಸ್ಥಾಪಿತ) ಕಾರ್ಯಕರ್ತರು ಅರೆಬೆತ್ತಲೆ ಮೆರವಣಿಗೆ ನಡೆಸಿದರು. ಅಂಬೇಡ್ಕರ್ ವೃತ್ತದಿಂದ ಉಪ ವಿಭಾಧಿಕಾರಿ ಕಚೇರಿಯವರೆಗೆ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು ಉಪ ವಿಭಾಗಾಧಿಕಾರಿ ಕಚೇರಿ ಮೂಲಕ ರಾಷ್ಟ್ರಪತಿ ಅವರಿಗೆ ಮನವಿ ಸಲ್ಲಿಸಿದರು. …

Read More »

ಜ.16 ರಿಂದ ಪ್ರತಿ ಹಳ್ಳಿ ಹಳ್ಳಿಗೂ ತೆರಳಿ ಪಂಚಮಸಾಲಿ ಜಾಗೃತಿ ಸಭೆ ನಡೆಸಲಾಗುವುದು: ಜಯಮೃತ್ಯುಂಜಯ ಸ್ವಾಮೀಜಿ

ಬಳ್ಳಾರಿ: ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ನಮ್ಮನ್ನು ಕೇವಲವಾಗಿ ನಡೆಸಿಕೊಂಡಿದ್ದು, ಬಹಳ ಅಪಮಾನ ಮಾಡಿದೆ ಎಂದು ಬಸವ ಜಯಮೃತ್ಯುಂಜಯ ಸ್ವಾಮೀಜಿ ಆರೋಪಿಸಿದ್ದಾರೆ. ವಿಜಯನಗರದ ಜಿಲ್ಲೆ ಹಗರಿಬೊಮ್ಮನಹಳ್ಳಿ ತಾಲೂಕಿನ ವಟ್ಟಮ್ಮನಹಳ್ಳಿಯಲ್ಲಿ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ಹಳ್ಳಿ ಹಳ್ಳಿಯಲ್ಲಿ ಜಾಗೃತಿ ಮೂಡಿಸಿ ನಮ್ಮನ್ನು ಅಪ್ಪಿಕೊಳ್ಳುವ ಸರ್ಕಾರ ತಂದು ಮೀಸಲಾತಿ ಪಡೆಯುತ್ತೇವೆ ಎಂದೂ ಹೇಳಿದ್ದಾರೆ. ಜನವರಿ 16ರಿಂದ ಪ್ರತಿ ಹಳ್ಳಿ ಹಳ್ಳಿಗೂ ತೆರಳಿ ಪಂಚಮಸಾಲಿ ಜಾಗೃತಿ ಸಭೆ ನಡೆಸಲಾಗುವುದು. ಮುಂದಿನ 3 …

Read More »

ಜಮ್ಮುಮತ್ತು ಕಾಶ್ಮೀರ: ಸರ್ಕಾರ ಅಧಿಕಾರ ವಹಿಸಿಕೊಂಡು ಎರಡು ತಿಂಗಳಾದರೂ ಶಾಸಕರಿಗಿಲ್ಲ ಸಂಬಳ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ಕೇಂದ್ರಾಡಳಿತ ಪ್ರದೇಶದಲ್ಲಿ ನ್ಯಾಶನಲ್‌ ಕಾನ್ಫರೆನ್ಸ್‌ (ಜೆಕೆಎನ್‌ಸಿ) ಕಾಂಗ್ರೆಸ್‌ ಮೈತ್ರಿಕೂಟದ ಹೊಸ ಸರ್ಕಾರ ಅಧಿಕಾರ ವಹಿಸಿಕೊಂಡು ಇಲ್ಲಿಗೆ ಎರಡು ತಿಂಗಳಾದರೂ ಹೊಸದಾಗಿ ಚುನಾಯಿತ ಶಾಸಕರು ಇನ್ನು ಕೂಡಾ ತಮ್ಮ ಮೊದಲ ಸಂಬಳಕ್ಕಾಗಿ ಕಾಯುತ್ತಿದ್ದಾರೆ. 2019ರ ಆಗಸ್ಟ್‌ನಲ್ಲಿ ಸಂವಿಧಾನದ 370 ನೇ ವಿಧಿಯ ಅನ್ವಯ ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗುದ್ದ ವಿಶೇಷ ಸ್ಥಾನಮಾನವನ್ನು ಕೇಂದ್ರ ಸರ್ಕಾರ ಹಿಂಪಡೆದರಿಂದ ಈಗ ತಾಂತ್ರಿಕ ಸಮಸ್ಯೆಯಾಗಿದೆ. ಹೀಗಾಗಿ ಶಾಸಕರ ವೇತನ ತಡವಾಗಿದೆ …

Read More »

ರಾಜ್ಯದಲ್ಲಿ ಮುಂದೆ ಜೆಡಿಎಸ್-ಬಿಜೆಪಿ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬರಲಿದೆ: ಕೇಂದ್ರ ಸಚಿವ ಎಚ್ ಡಿ ಕೆ

ಹಾಸನ: ರಾಜ್ಯದಲ್ಲಿ ಮತ್ತೊಮೆ ಮೈತ್ರಿ ಸರ್ಕಾರ ಶೀಘ್ರದಲ್ಲೇ ಬಂದೇ ಬರುತ್ತದೆ ಎಂದು ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್‌.ಡಿ.ಕುಮಾರಸ್ವಾಮಿ ಹೇಳಿದರು. ಸಕಲೇಶಪುರದಲ್ಲಿ ನಡೆದ ಕಾಫಿ ಬೆಳೆಗಾರರ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಅವರು, ಮುಂದೆ ಜೆಡಿಎಸ್‌‍-ಬಿಜೆಪಿ ಮೈತ್ರಿ ಸರಕಾರ ಅಧಿಕಾರಕ್ಕೆ ಬಂದೇ ಬರುತ್ತದೆ. ನಾನು ಸಿಎಂ ಆಗಿದ್ದ ಎರಡು ಅವಧಿಗಳಲ್ಲಿ ಅಪೂರ್ಣವಾಗಿರುವ ಎಲ್ಲಾ ಕೆಲಸಗಳನ್ನೂ ಆಗ ನಾವು ಮಾಡಿ ಮುಗಿಸುತ್ತೇವೆ ಎಂದರು. 2006ರಲ್ಲಿ ಜೆಡಿಎಸ್‌‍ ಮತ್ತು ಬಿಜೆಪಿ ಸಮಿಶ್ರ …

Read More »

ಕಲಬುರಗಿ ನಗರ ಬಹುತೇಕ ಸ್ತಬ್ಧ: ಟೈರ್ ಗಳಿಗೆ ಬೆಂಕಿ, ವಾಹನಗಳ ಸಂಚಾರ ಬಂದ್

ಕಲಬುರಗಿ: ಡಾ.ಬಿ.ಆರ್. ಅಂಬೇಡ್ಕರ್ ಅವರ ಬಗ್ಗೆ ಗೃಹಸಚಿವ ಅಮಿತ್ ಶಾ ಅವರ ಹೇಳಿಕೆ ಖಂಡಿಸಿ ಸಂವಿಧಾನ ರಕ್ಷಣಾ ಸಮಿತಿ ನೇತೃತ್ವದಲ್ಲಿ ‌ವಿವಿಧ ದಲಿತ, ಪ್ರಗತಿಪರ ಸಂಘಟನೆಗಳು, ಎಡಪಕ್ಷಗಳು ಕರೆ ನೀಡಿರುವ ಕಲಬುರಗಿ ಬಂದ್ ಪರಿಣಾಮ ನಗರ ಸ್ತಬ್ಧವಾಗಿದೆ. ಬೆಳಿಗ್ಗೆಯಿಂದಲೇ ಪ್ರತಿಭಟನಾಕಾರರು ನಗರದ ಜೇವರ್ಗಿ ರಸ್ತೆ, ಸೇಡಂ ರಸ್ತೆ, ಹುಮನಾಬಾದ್ ರಸ್ತೆ, ಆಳಂದ ಹಾಗೂ ಅಫಜಲಪುರದಿಂದ ನಗರಕ್ಕೆ ಸೇರುವ ರಸ್ತೆಗಳ ಮೇಲೆ ದಿಗ್ಬಂಧನ ವಿಧಿಸಿದ್ದರಿಂದ ನಗರದ ಹೊರಭಾಗದಲ್ಲಿಯೇ ಸಾವಿರಾರು ಪ್ರಯಾಣಿಕರು ಸಿಲುಕಿಕೊಂಡಿದ್ದಾರೆ. …

Read More »

ಪಿಎಂ ಸ್ವನಿಧಿ ಯೋಜನೆಯಡಿ ಈವರೆಗೆ 94.31 ಲಕ್ಷ ಬೀದಿ ವ್ಯಾಪಾರಿಗಳಿಗೆ ಸಾಲ ವಿತರಣೆ

ನವದೆಹಲಿ : ಕರೋನಾ ಅವಧಿಯಲ್ಲಿ 2020 ರಲ್ಲಿ ಬೀದಿ ವ್ಯಾಪಾರಿಗಳಿಗಾಗಿ ಪ್ರಾರಂಭಿಸಲಾದ ಪಿಎಂ ಸ್ವನಿಧಿ ಯೋಜನೆ (ಪಿಎಂ ಸ್ವನಿಧಿ ಯೋಜನೆ 2024) ದೊಡ್ಡ ಯಶಸ್ವಿ ಸಾಧಿಸಿದೆ. ಈ ಯೋಜನೆಯಡಿ ನಗರಗಳಲ್ಲಿ ವ್ಯಾಪಾರ ಮಾಡುವವರಿಗೆ 10 ಸಾವಿರದಿಂದ 50 ಸಾವಿರದವರೆಗೆ ಖಾತರಿ ರಹಿತ ಸಾಲ ನೀಡಲಾಗುತ್ತದೆ. ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯವು ಪ್ರಧಾನ ಮಂತ್ರಿ ಸ್ವನಿಧಿ ಯೋಜನೆಯಡಿ ಡಿಸೆಂಬರ್ 8, 2024 ರವರೆಗೆ ಬೀದಿ ಆಹಾರ ಮಾರಾಟಗಾರರಿಗೆ ರೂ …

Read More »

ಹೊಸ ತಂತ್ರಜ್ಞಾನ ಸಹಾಯದಿಂದ ತಪ್ಪು ಮಾಹಿತಿ, ನಕಲಿ ಸುದ್ಧಿಗಳು ಸಮಾಜವನ್ನು ಕದಡುವಷ್ಟು ಪ್ರಬಲವಾಗಿವೆ: ಕೇಂದ್ರ ಸಚಿವ ಅಮಿತ ಶಾ

ನವದೆಹಲಿ: ತಪ್ಪು ಮಾಹಿತಿ ಮತ್ತು ನಕಲಿ ಸುದ್ದಿಗಳಿಗೆ ಎಷ್ಟು ಶಕ್ತಿಯಿದೆ ಎಂದರೆ ಇತ್ತೀಚಿನ ತಂತ್ರಜ್ಞಾನದ ಬಳಕೆಯೊಂದಿಗೆ ಸಾಮಾಜಿಕ ರಚನೆಯನ್ನು ಛಿದ್ರಗೊಳಿಸಲು ಅವು ಯಾವಾಗಲೂ ಸಿದ್ಧವಾಗಿವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಸೋಮವಾರ ಹೇಳಿದ್ದಾರೆ. ನವದೆಹಲಿಯಲ್ಲಿ 37 ನೇ ಗುಪ್ತಚರ ಬ್ಯೂರೋ ಶತಮಾನೋತ್ಸವ ದತ್ತಿ ಉಪನ್ಯಾಸ ನೀಡಿದ ಶಾ, ವಿಭಜಕ ಶಕ್ತಿಗಳು ಇಂದಿಗೂ ದೇಶದಲ್ಲಿ ಸಕ್ರಿಯವಾಗಿವೆ. ತಪ್ಪು ಮಾಹಿತಿ ಮತ್ತು ನಕಲಿ ಸುದ್ದಿಗಳಿಗೆ ಎಷ್ಟು ಶಕ್ತಿಯಿದೆ ಎಂದರೆ ಅವು …

Read More »

ಭೂಮಿಯಲ್ಲಿ ತೇವಾಂಶ ಹೆಚ್ಚಿದ ಕಾರಣ ಕಡಲೆಗೆ ಸಿಡಿರೋಗದ ಬಾಧೆ: ರೈತರಲ್ಲಿ ಆತಂಕ

ರೋಣ: ತಾಲ್ಲೂಕಿನ ವಿವಿಧೆಡೆ ಈಚೆಗೆ ಸುರಿದ ಮಳೆಯಿಂದಾಗಿ ಭೂಮಿಯ ತೇವಾಂಶ ಹೆಚ್ಚಿದ ಕಾರಣ ಇಲ್ಲಿನ ಪ್ರಮುಖ ಬೆಳೆಯಾದ ಕಡಲೆಗೆ ಸಿಡಿರೋಗದ ಬಾಧೆ ಎದುರಾಗಿದೆ. ಈರುಳ್ಳಿ ಮತ್ತು ಮೆಣಸಿನಕಾಯಿ ಬೆಳೆಗೆ ಕಳೆದ ಬಾರಿ ನಿರೀಕ್ಷಿತ ಬೆಲೆ ಸಿಗದ ಕಾರಣ ಈ ಬೆಳೆಗಳ ಬಿತ್ತನೆ ಕ್ಷೇತ್ರದ ಪ್ರಮಾಣ ತಾಲ್ಲೂಕಿನಲ್ಲಿ ಕಡಿಮೆಯಾಗಿದೆ. ಕಳೆದ ಬಾರಿ ಕಡಲೆ ಬೆಳೆಯ ಉತ್ತಮ ಇಳುವರಿ ಸಿಕ್ಕಿದ್ದರಿಂದ ಈ ಬಾರಿಯೂ ಅದೇ ನಿರೀಕ್ಷೆಯೊಂದಿಗೆ ಕಡಲೆ ಬಿತ್ತನೆ ಮಾಡಲಾಗಿತ್ತು. ಆದರೆ, ಈಚೆಗೆ …

Read More »