ಬೀದರ್: ಸಂವಿಧಾನದ ಮೂಲಕ ವಂಚಿತರಿಗೆ, ಶೋಷಿತರಿಗೆ ಸಾಮಾಜಿಕ ನ್ಯಾಯ ಕಲ್ಪಿಸಿದ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು ಅವಮಾನ ಮಾಡಿರುವ ಗೃಹ ಸಚಿವ ಅಮಿತ್ ಶಾ ಅವರಿಗೆ ಕೇಂದ್ರ ಸಚಿವ ಸಂಪುಟದಲ್ಲಿ ಮುಂದುವರೆಯುವ ನೈತಿಕತೆ ಇಲ್ಲ ಎಂದು ಬೀದರ್ ಸಂಸದ ಸಾಗರ್ ಖಂಡ್ರೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸೋಮವಾರ ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ಅವರು, ಶತ ಶತಮಾನಗಳಿಂದ ಅಸ್ಪೃಶ್ಯತೆಯ ನೋವುಂಡು, ಸಾಮಾಜಿಕ ನ್ಯಾಯ, ಶಿಕ್ಷಣ, ಆರೋಗ್ಯ, ಉದ್ಯೋಗ ಮತ್ತಿತರ ಮೂಲಭೂತ …
Read More »ಮುಂಬರುವ ವರ್ಷದಲ್ಲಿ ರೈತರಿಗೆ ರಾಷ್ಟ್ರೀಯ ಸಹಾಯವಾಣಿ ಸೇವೆ ಸ್ಥಾಪನೆ ಸಾಧ್ಯತೆ
ನವದೆಹಲಿ: ಪಿಎಂ ಕಿಸಾನ್ ಇತ್ಯಾದಿ ಯೋಜನೆಗಳ ಮೂಲಕ ರೈತರಿಗೆ ನೆರವಾಗುತ್ತಿರುವ ಕೇಂದ್ರ ಸರ್ಕಾರ ಇದೀಗ ಮತ್ತೊಂದು ಮಹತ್ವದ ಕ್ರಮಕ್ಕೆ ಸಜ್ಜಾಗಿದೆ. ವರದಿಯ ಪ್ರಕಾರ ಮುಂಬರುವ ವರ್ಷದಲ್ಲಿ ರೈತರಿಗಾಗಿ ರಾಷ್ಟ್ರೀಯ ಸಹಾಯವಾಣಿ ಸೇವೆ ಆರಂಭಿಸುವ ಸಾಧ್ಯತೆ ಇದೆ. ದೆಹಲಿ ಎನ್ಸಿಆರ್ ಪ್ರದೇಶದಲ್ಲಿ ಇದಕ್ಕಾಗಿ ಬೃಹತ್ ಕಾಲ್ ಸೆಂಟರ್ ಸ್ಥಾಪನೆಯಾಗಲಿದೆ. ಇದು ಟೋಲ್ ಫ್ರೀ ಹೆಲ್ಪ್ಲೈನ್ ಆಗಿರಲಿದ್ದು ದೇಶದ ಯಾವುದೇ ಮೂಲೆಯಿಂದಲಾದರೂ ಹೆಲ್ಪ್ಲೈನ್ಗೆ ಬರುವ ರೈತರ ಕರೆಗಳಿಗೆ ದಿನದ 24 ಗಂಟೆಯೂ ಸ್ಪಂದನೆ …
Read More »ಕೆಜಿಎಫ್ ನಂತರ ಕರ್ನಾಟಕದ ಕಾಫಿಯನ್ನು ಮತ್ತೊಂದು ರೀತಿಯ ಚಿನ್ನವಾಗಿ ಪರಿವರ್ತಿಸಲು ಅಗತ್ಯ ಕ್ರಮ: ಕೇಂದ್ರ ಸಚಿವ ಪಿಯೂಷ್ ಗೋಯಲ್
ಹಾಸನ: ಕೋಲಾರ ಗೋಲ್ಡ್ ಫೀಲ್ಡ್ಸ್ (ಕೆಜಿಎಫ್) ನಂತರ ಕರ್ನಾಟಕದ ಕಾಫಿಯನ್ನು ಮತ್ತೊಂದು ರೀತಿಯ ಚಿನ್ನವಾಗಿ ಪರಿವರ್ತಿಸಲು ಕೇಂದ್ರ ಸರ್ಕಾರ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಿದೆ ಎಂದು ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ಹೇಳಿದ್ದಾರೆ. ನಗರದಲ್ಲಿ ಸೋಮವಾರ ಕಾಫಿ ಬೆಳೆಗಾರರ ಒಕ್ಕೂಟ ಆಯೋಜಿಸಿದ್ದ ಕಾಫಿ ಬೆಳೆಗಾರರ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು. 2011 ರಿಂದ ಸ್ಥಗಿತಗೊಂಡಿದ್ದ ಸಮಗ್ರ ಕಾಫಿ ಅಭಿವೃದ್ಧಿ ಯೋಜನೆಯನ್ನು ಮತ್ತೆ ಜಾರಿಗೆ ತರಲಾಗಿದೆ. ಇದು ಕಾಫಿಯ ಗುಣಮಟ್ಟವನ್ನು …
Read More »ಬೆಳಗಾವಿ ಅಧಿವೇಶನ ಶತಮಾನೋತ್ಸವ ಆಚರಣೆಗೆ ಸಾರ್ವಜನಿಕರಿಗೆ ಆಹ್ವಾನ ಇರುವುದಿಲ್ಲ: ಡಿಸಿಎಂ ಡಿಕೆ ಶಿವಕುಮಾರ್
ಬೆಳಗಾವಿ: ಬೆಳಗಾವಿ ಅಧಿವೇಶನ ಶತಮಾನೋತ್ಸವ ಆಚರಣೆ ಐತಿಹಾಸಿಕ ಕಾರ್ಯಕ್ರಮ. ದೇಶದ ಇತಿಹಾಸವನ್ನು ಸಂಭ್ರಮಿಸುವ ಕಾರ್ಯಕ್ರಮ ಕಾಂಗ್ರೆಸ್ ಇತಿಹಾಸ ದೇಶದ ಇತಿಹಾಸ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಇಲ್ಲಿನ ವಿಮಾನ ನಿಲ್ದಾಣದಲ್ಲಿ ಸೋಮವಾರ ಸುದ್ದಿಗಾರರ ಜತೆ ಮಾತನಾಡಿದ ಅವರು ಸುವರ್ಣ ಸೌಧದ ಗಾಂಧಿ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಎಲ್ಲಾ ಪಕ್ಷಕ್ಕೂ ಆಹ್ವಾನ ಇದೆಯೇ ಎಂದು ಕೇಳಿದಾಗ, ‘ವಿರೋಧ ಪಕ್ಷಗಳ ನಾಯಕರು, ಸಂಸದರು, ಉಭಯ ಸದನಗಳ ಸಭಾಧ್ಯಕ್ಷರು ಹಾಗೂ ಸಭಾಪತಿಗಳು, ಎಲ್ಲಾ …
Read More »ಅಮಿತ್ ಶಾ ಹೇಳಿಕೆ ಖಂಡಿಸಿ ದಲಿತಪರ ಸಂಘಟನೆಯಿಂದ ಕಲಬುರಗಿ ಮತ್ತು ಗದಗ ಬಂದ್ ಗೆ ಕರೆ
ಕಲಬುರಗಿ : ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿದ ಹೇಳಿಕೆ ಖಂಡಿಸಿ ದಲಿತ ಪರ ಸಂಘಟನೆಗಳು ಇಂದು ಕಲಬುರಗಿ ಮತ್ತು ಗದಗ-ಬೆಟಗೇರಿ ಬಂದ್ ಗೆ ಕರೆ ನೀಡಲಾಗಿದ್ದು, ಪ್ರತಿಭಟನಾಕಾರರು ಟೈರ್ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಂಬೇಡ್ಕರ್ ಅಂತಾ ಹೇಳುವುದು ಕೆಲವರಿಗೆ ಫ್ಯಾಷನ್ ಆಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಸಂಸತ್ತಿನಲ್ಲಿ ಹೇಳಿಕೆ ನೀಡಿದ್ದರು. ಅಮಿತ್ …
Read More »ರಾಜ್ಯದಲ್ಲಿ 20 ತಾಲೂಕುಗಳ ಪಶು ಆಸ್ಪತ್ರೆಗಳನ್ನು ಮೇಲ್ದರ್ಜೆಗೇರಿಸಲು ರಾಜ್ಯ ಸರ್ಕಾರ ತೀರ್ಮಾನ
ಬೆಂಗಳೂರು : ರಾಜ್ಯದಲ್ಲಿ ಸುಮಾರು 20 ತಾಲೂಕುಗಳಲ್ಲಿರುವ ಪಶು ಆಸ್ಪತ್ರೆಗಳನ್ನು ಮೇಲ್ದರ್ಜೆಗೆ ಏರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.ಸುಮಾರು 100 ಕೋಟಿ ವೆಚ್ಚದಲ್ಲಿ 200 ಪಶು ಆಸ್ಪತ್ರೆಗಳ ಕಟ್ಟಡ ನಿರ್ಮಾಣ ಮಾಡಲಾಗುತ್ತಿದ್ದೂ, 20 ತಾಲೂಕುಗಳ ಪಶು ಆಸ್ಪತ್ರೆಗಳನ್ನು ಮೇಲ್ದರ್ಜೆಗೆ ಏರಿಸಲು ಇದೀಗ ರಾಜ್ಯ ಸರ್ಕಾರ ತೀರ್ಮಾನಿಸಿದೆ. 10 ಕೋಟಿ ರೂಪಾಯಿ ವೆಚ್ಚದಲ್ಲಿ ಪಶು ಆಸ್ಪತ್ರೆಗಳು ಮೇಲ್ದರ್ಜೆಗೆ ಏರಿಸಲಾಗುತ್ತಿದ್ದು, ಬಾಡಿಗೆ ಹಾಗೂ ಶಿಥಿಲಾವಸ್ಥೆಯಲ್ಲಿರುವ ಪಶು ಆಸ್ಪತ್ರೆಗಳನ್ನು ಮರು ನಿರ್ಮಾಣ ಮಾಡಲು ಮೇಲ್ದರ್ಜೆಗೆ ಏರಿಸಲಾಗಿದೆ. …
Read More »ಬೆಂಗಳೂರು ರೈಲ್ವೆ ನಿಲ್ದಾಣವನ್ನು ವಿಮಾನ ನಿಲ್ದಾಣ ಮಾದರಿಯಲ್ಲಿ ಮರು ವಿನ್ಯಾಸ
ಬೆಂಗಳೂರು: ಮೆಜೆಸ್ಟಿಕ್ನಲ್ಲಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ (ಕೆಎಸ್ಆರ್) ರೈಲು ನಿಲ್ದಾಣವನ್ನು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಮಾದರಿಯಲ್ಲಿ ಮರು ವಿನ್ಯಾಸಗೊಳಿಸಿ ಅಭಿವೃದ್ಧಿಪಡಿಸಲು ನೈರುತ್ಯ ರೈಲ್ವೆ ಮುಂದಾಗಿದೆ. ಒಟ್ಟು ₹ 1,200 ಕೋಟಿ ವೆಚ್ಚದ ಯೋಜನೆಗೆ ಒಪ್ಪಿಗೆ ಕೋರಿ ಕೇಂದ್ರ ಸಂಪುಟದ ಮುಂದೆ ಪ್ರಸ್ತಾವ ಸಲ್ಲಿಸಲಾಗಿದೆ. ಕೆಎಸ್ಆರ್ ರೈಲ್ವೆ ನಿಲ್ದಾಣ, ಮೆಜೆಸ್ಟಿಕ್ ರೈಲ್ವೆ ನಿಲ್ದಾಣ, ಸಿಟಿ ರೈಲ್ವೆ ನಿಲ್ದಾಣ ಎಂದು ನಾನಾ ಹೆಸರಿನಿಂದ ಕರೆಯಲಾಗುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣವು …
Read More »ರೈತರು ಸಮಗ್ರ ಕೃಷಿ ಪದ್ಧತಿ ಅಳವಡಿಸಿಕೊಳ್ಳುವ ಮೂಲಕ ಆರ್ಥಿಕ ಸ್ವಾವಲಂಬನೆ ಸಾಧಿಸಬೇಕು: ಸಚಿವ ಶಿವಾನಂದ ಪಾಟೀಲ್
ಆಳಂದ: ಅತಿವೃಷ್ಟಿ, ಅನಾವೃಷ್ಟಿ ಸಮಸ್ಯೆ ಕಾಡುತ್ತಿರುವ ದಿನಗಳಲ್ಲಿ ರೈತರೂ ಸಮಗ್ರ ಕೃಷಿ ಪದ್ಧತಿ ಅಳವಡಿಸಿಕೊಳ್ಳುವ ಮೂಲಕ ಆರ್ಥಿಕವಾಗಿ ಸ್ವಾವಲಂಬನೆ ಸಾಧಿಸಬೇಕು ಎಂದು ಜವಳಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ತಿಳಿಸಿದರು. ತಾಲ್ಲೂಕಿನ ಸರಸಂಬಾ ಗ್ರಾಮದಲ್ಲಿ ಸೋಮವಾರ ಸಮತಾ ಲೋಕ ಶಿಕ್ಷಣ ಸಮಿತಿ, ಕಲಬುರಗಿ ಕೃಷಿ ಮಹಾವಿದ್ಯಾಲಯ ಸಹೋಗದಲ್ಲಿ ಹಮ್ಮಿಕೊಂಡ ಎರಡು ದಿನದ ಸಾಸಿರನಾಡಿನ ಕೃಷಿ ಜಾತ್ರೆ ಉದ್ಘಾಟಿಸಿ ಮಾತನಾಡಿದರು. ಕಬ್ಬು, ಭತ್ತದಂತ ಬೆಳೆಗಳು ಹೆಚ್ಚು …
Read More »ಅಂತಿಮ ಅಧಿಸೂಚನೆ ಹೊರಡಿಸಿದ ಜಮೀನುಗಳನ್ನು ವಾಪಸ್ ನೀಡಲು ಅವಕಾಶವಿಲ್ಲ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಅಂತಿಮ ಅಧಿಸೂಚನೆ ಹೊರಡಿಸಿದ ಜಮೀನುಗಳನ್ನು ಭೂಸ್ವಾಧೀನ ಪ್ರಕ್ರಿಯೆಯಿಂದ ಕೈಬಿಡಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕು ಚನ್ನರಾಯಪಟ್ಟಣ ಹೋಬಳಿಯ ರೈತರ ನಿಯೋಗದೊಂದಿಗೆ ಮಾತುಕತೆ ನಡೆಸಿದ ಸಿಎಂ, ಭೂಸ್ವಾಧೀನಕ್ಕಾಗಿ ಅಂತಿಮ ಅಧಿಸೂಚನೆ ಹೊರಡಿಸಿದ ಜಮೀನುಗಳನ್ನು ಭೂಸ್ವಾಧೀನ ಪ್ರಕ್ರಿಯೆಯಿಂದ ಕೈ ಬಿಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಚನ್ನರಾಯಪಟ್ಟಣ ಹೋಬಳಿಯ 13 ಹಳ್ಳಿಗಳ ವ್ಯಾಪ್ತಿಯಲ್ಲಿ 1777 ಎಕರೆ ಭೂಸ್ವಾಧೀನಕ್ಕೆ ಅಧಿಸೂಚನೆ ಹೊರಡಿಸಿದ್ದು, 430 ಎಕರೆಗೆ ಅಂತಿಮ …
Read More »ರಾಜ್ಯದಲ್ಲಿ 4500 ಕೋಟಿ ರೂ. ವೆಚ್ಚದಲ್ಲಿ ಗ್ರೀನ್ ಫೀಲ್ಡ್ ಕಾರಿಡಾರ್ ಯೋಜನೆ: ಕೇಂದ್ರ ಸಚಿವ ವಿ.ಸೋಮಣ್ಣ
ತುಮಕೂರು: ಉತ್ತರ ಭಾರತದ ಬೇರೆ ಬೇರೆ ರಾಜ್ಯಗಳಲ್ಲಿ ಇರುವಂತೆ ಕರ್ನಾಟಕದಲ್ಲೂ 4500 ಕೋಟಿ ರೂ. ವೆಚ್ಚದಲ್ಲಿ ಗ್ರೀನ್ ಫೀಲ್ಡ್ ಕಾರಿಡಾರ್ ಯೋಜನೆಯನ್ನು ಕೈಗೆತ್ತಿಕೊಳ್ಳಲು ಕೇಂದ್ರ ಸರ್ಕಾರ ಸಮ್ಮತಿಸಿದೆ ಎಂದು ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ರಾಜ್ಯ ಖಾತೆ ಸಚಿವ ವಿ. ಸೋಮಣ್ಣ ತಿಳಿಸಿದರು. ನಗರದ ಪ್ರವಾಸಿ ಮಂದಿರದಲ್ಲಿರುವ ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಭವಿಷ್ಯದಲ್ಲಿ ಗ್ರೀನ್ ಫೀಲ್ಡ್ ಕರ್ನಾಟಕದ ದೊಡ್ಡ ಯೋಜನೆಯಾಗಲಿದೆ ಎಂದು ಹೇಳಿದರು. ಹಾಸನ, ತಿಪಟೂರು, ಹುಳಿಯಾರು, …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





