Breaking News

BigTv News

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ 1500 ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ 1500 ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಆದೇಶ ನೀಡಿದೆ. 1,205 ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ(ANM) ಮತ್ತು 300 ಆರೋಗ್ಯ ನಿರೀಕ್ಷಣಾಧಿಕಾರಿ(HIO) ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆ ಪಡೆಯಲಾಗಿದ್ದು, ಕರ್ನಾಟಕ ಲೋಕಸೇವಾ ಆಯೋಗ ಅಥವಾ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ ನೇಮಕಾತಿ ನಡೆಸಲಾಗುವುದು. ಆರಂಭದಲ್ಲಿ ಈ ಹುದ್ದೆಗಳಿಗೆ ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳಬಹುದು. ಈ ಮೂಲಕ ಕಾಯಂ ನೇಮಕಾತಿಯ ಸಂದರ್ಭದಲ್ಲಿ …

Read More »

ವಿಜಯಪುರ: ₹5 ಕೋಟಿ ವೆಚ್ಚದಲ್ಲಿ ಸಿಸಿ ರಸ್ತೆ ನಿರ್ಮಾಣಕ್ಕೆ ಸಚಿವ ಸತೀಶ ಜಾರಕಿಹೊಳಿ ಚಾಲನೆ

ವಿಜಯಪುರ: ಪಟ್ಟಣದ ಶಿವಗಣೇಶ ಸರ್ಕಲ್‌ನಿಂದ ಶಿಡ್ಲಘಟ್ಟ ಕ್ರಾಸ್‌ವರಗೆ ₹5 ಕೋಟಿ ವೆಚ್ಚದಲ್ಲಿ ಸಿಮೆಂಟ್ ಕಾಂಕ್ರೀಟ್ ರಸ್ತೆ ನಿರ್ಮಾಣಕ್ಕೆ ಭಾನುವಾರ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ಭೂಮಿ ಪೂಜೆ ಸಲ್ಲಿಸಿದರು. ಪಟ್ಟಣದಲ್ಲಿ ಈಗಾಗಲೇ ಸುಮಾರು ₹9.5 ಕೋಟಿ ವೆಚ್ಚದಲ್ಲಿ ಕೋಲಾರ ಮುಖ್ಯರಸ್ತೆಯಲ್ಲಿ ವಿಸ್ತರಣೆ ಕಾಮಗಾರಿ ನಡೆಯುತ್ತಿದೆ. ಈಗ ಶಿವಗಣೇಶ ಸರ್ಕಲ್ ನಿಂದ 480 ಮೀಟರ್ ಉದ್ದದ ರಸ್ತೆ ನಿರ್ಮಾಣ ಮಾಡಲಾಗುತ್ತದೆ. ರಸ್ತೆ ಕಾಮಗಾರಿ ಗುಣಮಟ್ಟದಲ್ಲಿರುವಂತೆ …

Read More »

ಎಸ್ಸಿ, ಎಸ್ಟಿ ಆರೋಗ್ಯ ವೆಚ್ಚದ 17 ದುಬಾರಿ ಕಾಯಿಲೆಗಳ ಚಿಕಿತ್ಸೆಗೆ ನೆರವು: ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಮುದಾಯದ ಜನರಿಗೆ ಅಪರೂಪದ ಮತ್ತು ದುಬಾರಿ ವೆಚ್ಚದ 17 ಕಾಯಿಲೆಗಳ ಚಿಕಿತ್ಸಾ ವೆಚ್ಚವನ್ನು ‘ಕಾರ್ಪಸ್ ಫಂಡ್’ ಸ್ಥಾಪಿಸಿ ಭರಿಸುವ ಯೋಜನೆ ಜಾರಿಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್‌ನಲ್ಲಿ ಪರಿಶಿಷ್ಟರ ಕಲ್ಯಾಣ ಯೋಜನೆ (ಎಸ್‌ಸಿಎಸ್‌ಪಿ, ಟಿಎಸ್‌ಪಿ) ಅಡಿಯಲ್ಲಿ ಪ್ರಸ್ತುತ ಲಭ್ಯ ಇರುವ 47 ರೂ ಕೋಟಿ ಮೊತ್ತದಲ್ಲಿ ಕಾರ್ಪಸ್ ಫಂಡ್ ಸೃಜಿಸಿ ಅದರ ಬಡ್ಡಿಯ ಮೊತ್ತದಿಂದ ಈ …

Read More »

ಬೆಳಗಾವಿ ಚಲೋ ನಡೆಸುವ ಬಗ್ಗೆ ಆಲೋಚನೆ: ಸಿ.ಟಿ.ರವಿ

ಚಿಕ್ಕಮಗಳೂರು: ರಾಜ್ಯ ಸರ್ಕಾರ ಹಮ್ಮುರಾಬಿ ಸಿದ್ಧಾಂತದ ಮೇಲೆ ನಡೆಯುತ್ತಿದೆ. ನನ್ನನ್ನು ಬಂಧಿಸಿ ಇಡೀರಾತ್ರಿ ಸುತ್ತಾಡಿಸಿದ ಕ್ರಮದ ವಿರುದ್ಧ ಹಕ್ಕುಚ್ಯುತಿ ಮಂಡಿಸುತ್ತೇನೆ. ಬೆಳಗಾವಿ ಚಲೊ ನಡೆಸುವ ಬಗ್ಗೆಯೂ ಆಲೋಚನೆ ನಡೆಯುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಹೇಳಿದರು. ಮುಖ್ಯಮಂತ್ರಿ ಮತ್ತು ರಾಜ್ಯ ಸರ್ಕಾರಕ್ಕೆ ಸಂವಿಧಾನದ ಮೇಲೆ ನಂಬಿಕೆ ಇದ್ದಂತೆ ಕಾಣಿಸುತ್ತಿಲ್ಲ. ಕಬ್ಬಿನ ಗದ್ದೆ, ಜಲ್ಲಿ ಕ್ರಷರ್ ಬಳಿಗೆ ಪೊಲೀಸರು ಕರೆದೊಯ್ದು ಕೂರಿಸಿದ್ದರು. ಅವರಿಗೆ ಪ್ರತಿ ಅರ್ಧ ಗಂಟೆಗೊಮ್ಮೆ ಬರುತ್ತಿದ್ದ ನಿರ್ದೇಶನದಂತೆ …

Read More »

ಹವಾಮಾನ ಬದಲಾವಣೆ ಪರಿಹರಿಸುವಲ್ಲಿ ವಿಫಲವಾದರೆ ಬೆಂಗಳೂರಿಗೆ ಸಾಮೂಹಿಕ ವಲಸೆ ಹೆಚ್ಚಳ: ನಾರಾಯಣ ಮೂರ್ತಿ

ಬೆಂಗಳೂರು: ಹವಾಮಾನ ಬದಲಾವಣೆಯನ್ನು ಪರಿಹರಿಸುವಲ್ಲಿ ವಿಫಲವಾದರೆ ಬೆಂಗಳೂರು, ಪುಣೆ ಮತ್ತು ಹೈದರಾಬಾದ್‌ನಂತಹ ನಗರಗಳಿಗೆ ಸಾಮೂಹಿಕ ವಲಸೆಗೆ ಕಾರಣವಾಗಬಹುದು ಎಂದು ಇನ್ಫೋಸಿಸ್ ಸಂಸ್ಥಾಪಕ ಎನ್ ನಾರಾಯಣ ಮೂರ್ತಿ ಎಚ್ಚರಿಸಿದ್ದಾರೆ. ಎಲ್ಲಾ ಪ್ರಮುಖ ಭಾರತೀಯ ನಗರಗಳು ತೀವ್ರತೆಯ ವಿವಿಧ ಹಂತಗಳಲ್ಲಿ ಒಂದೇ ರೀತಿಯ ಸವಾಲುಗಳನ್ನು ಎದುರಿಸುತ್ತಿವೆ. ಹೀಗಾಗಿ ತಪ್ಪಿಸಿಕೊಳ್ಳಲು ಬೇರೆ ಸ್ಥಳವಿಲ್ಲದೇ, ನಾವು ಅವರ ಸ್ವಂತ ನಗರಗಳಲ್ಲಿ ಈ ಸಮಸ್ಯೆಗಳನ್ನು ನಿಭಾಯಿಸಬೇಕು ಎಂದಿದ್ದಾರೆ. ಹವಾಮಾನ ಬದಲಾವಣೆಯ ಪರಿಣಾಮವನ್ನು ಪರಿಹರಿಸಲು ಎರಡು ವಿಧಾನದ ಅಗತ್ಯವಿದೆ, …

Read More »

ಕಲ್ಯಾಣ ಕರ್ನಾಟಕಕ್ಕೆ ಶುಭಸುದ್ದಿ ನೀಡಿದ ಸಿಎಂ ಸಿದ್ದರಾಮಯ್ಯ: ಪ್ರತ್ಯೇಕ ಸಚಿವಾಲಯ ರಚನೆ

ಕಲಬುರಗಿ: ಕಲ್ಯಾಣ ಕರ್ನಾಟಕ ಜನತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಭ ಸುದ್ದಿ ನೀಡಿದ್ದಾರೆ. ಕಲ್ಯಾಣ ಕರ್ನಾಟಕಕ್ಕೆ ಪ್ರತ್ಯೇಕ ಸಚಿವಾಲಯ ರಚಿಸುವ ಉದ್ದೇಶ ಇದೆ. ಉತ್ತರ ಕರ್ನಾಟಕ ವಿಮೋಚನಾ ದಿನದಂದೇ ಈ ಬಗ್ಗೆ ಹೇಳಿದ್ದೇವೆ. ಬಹಳ ವರ್ಷಗಳಿಂದ ಪ್ರತ್ಯೇಕ ಸಚಿವಾಲಯದ ಬೇಡಿಕೆ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಕಲ್ಯಾಣ ಕರ್ನಾಟಕದ ಆರೋಗ್ಯ ವ್ಯವಸ್ಥೆಯಲ್ಲಿ ಇಂದು ಉದ್ಘಾಟನೆಗೊಳ್ಳಲಿರುವ ಜಯದೇವ ಆಸ್ಪತ್ರೆ ಮಹತ್ವದ್ದು. ರಾಜ್ಯ ಸಭೆ ಪ್ರತಿಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ …

Read More »

2023 ರಲ್ಲಿ ಭಾರತದಿಂದ ₹21 ಸಾವಿರ ಕೋಟಿ ರಕ್ಷಣಾ ಉಪಕರಣಗಳ ರಫ್ತು: ಡಾ.ಜಿ.ಸತೀಶ್ ರೆಡ್ಡಿ

ಆನೇಕಲ್: ಶಸ್ತ್ರಾಸ್ತ್ರ ತಯಾರಿಕೆಯಲ್ಲಿ ಭಾರತ ಸ್ವಾವಲಂಬಿಯಾಗುತ್ತಿದೆ. 2023ನೇ ಸಾಲಿನಲ್ಲಿ ₹21 ಸಾವಿರ ಕೋಟಿ ರಕ್ಷಣಾ ಉಪಕರಣಗಳನ್ನು ರಫ್ತು ಮಾಡಲಾಗಿದೆ. ಮುಂದಿನ ದಿನಗಳಲ್ಲಿ ₹50 ಸಾವಿರ ಕೋಟಿ ಗುರಿ ಹೊಂದಲಾಗಿದೆ. ರಕ್ಷಣಾ ಕ್ಷೇತ್ರದಲ್ಲಿ ಭಾರತ ನಾಯಕನಾಗಬೇಕು ಎಂಬುದು ಗುರಿಯಾಗಿದೆ ಎಂದು ರಕ್ಷಣಾ ಸಚಿವಾಲಯದ ಸಲಹೆಗಾರ, ಡಿಆರ್‌ಡಿಓ ಆಡಳಿತ ಮಂಡಳಿ ಅಧ್ಯಕ್ಷ ಡಾ.ಜಿ.ಸತೀಶ್‌ ರೆಡ್ಡಿ ಹೇಳಿದರು. ಅಲಯನ್ಸ್‌ ವಿಶ್ವವಿದ್ಯಾಲಯದ 13ನೇ ಘಟಿಕೋತ್ಸವದಲ್ಲಿ ಮಾತನಾಡಿ, ಸ್ಟಾರ್ಟ್‌ ಅಪ್‌ಗೆ ಇತ್ತೀದಿನ ದಿನಗಳಲ್ಲಿ ಭಾರಿ ಬೆಂಬಲ ವ್ಯಕ್ತವಾಗುತ್ತಿದೆ. …

Read More »

ಪ್ರಧಾನಮಂತ್ರಿ ರೋಜಗಾರ್ ಮೇಳ: ಇಂದು 71 ಸಾವಿರ ಯುವಕರಿಗೆ ಮೋದಿಯವರಿಂದ ನೇಮಕಾತಿ ಪತ್ರ ವಿತರಣೆ

ನವದೆಹಲಿ: ಕೇಂದ್ರ ಸರ್ಕಾರದ ನಾನಾ ಇಲಾಖೆಗಳಲ್ಲಿ ನೇಮಕಗೊಂಡಿರುವ 71 ಸಾವಿರ ಯುವಕರಿಗೆ ಪ್ರಧಾನಿ ನರೇಂದ್ರ ಮೋದಿ ಅವರು, ಇಂದು ನೇಮಕಾತಿ ಪತ್ರಗಳನ್ನು ವಿತರಣೆ ಮಾಡಲಿದ್ದಾರೆ. ಪ್ರಧಾನಿ ಕಚೇರಿಯಿಂದ ವಿಡಿಯೋ ಕಾನ್ಫ್​​ರೆನ್ಸ್​ ಮೂಲಕ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.ದೇಶದ 45 ಸ್ಥಳಗಳಲ್ಲಿ ಪ್ರಧಾನ ಮಂತ್ರಿ ರೋಜಗಾರ್ ಮೇಳ ಆಯೋಜಿಸಲಾಗಿದೆ. ಉದ್ಯೋಗ ಸೃಷ್ಟಿಸಬೇಕೆಂಬ ಪ್ರಧಾನಿ ನರೇಂದ್ರ ಮೋದಿಯವರ ಅತ್ಯಂತ ಬದ್ಧತೆಯ ಭಾಗವಾಗಿ ಈ ಉದ್ಯೋಗ ಮೇಳ ನಡೆಯುತ್ತಿದೆ ಎಂದು ಪ್ರಧಾನಿ ಕಾರ್ಯಾಲಯ ತಿಳಿಸಿದೆ. ಗೃಹ …

Read More »

ರಾಜ್ಯದಲ್ಲಿ ಮತ್ತೊಂದು ಐಐಟಿ ಸ್ಥಾಪನೆಗೆ ಕೇಂದ್ರದೊಂದಿಗೆ ಚರ್ಚೆ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

ಮಂಡ್ಯ : ಜಿಲ್ಲೆಯ ಕೆಆರ್​​​​​​ಎಸ್​​​​​ ಸಮೀಪ ಐಐಟಿ ಸ್ಥಾಪನೆ ಮಾಡುವ ಬಗ್ಗೆ ಶಾಸಕ ದಿನೇಶ್ ಗೂಳಿಗೌಡ ಅವರು ಮನವಿ ಮಾಡಿದ್ದು ಈ ಬಗ್ಗೆ ಸಕಾರಾತ್ಮಕವಾಗಿ ಸ್ಪಂದಿಸಿ ಕೇಂದ್ರದೊಂದಿಗೆ ಚರ್ಚಿಸುವುದಾಗಿ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹಾಗೂ ಮಂಡ್ಯ ಸಂಸದ ಹೆಚ್​.ಡಿ.ಕುಮಾರಸ್ವಾಮಿ ಅವರು ಭರವಸೆ ನೀಡಿದರು. ಮಂಡ್ಯದಲ್ಲಿ ಸಮಾರೋಪವಾದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾಗಿಯಾಗಿ ಸಮ್ಮೇಳನದ ಅಧ್ಯಕ್ಷ ಡಾ.ನಾಡೋಜ ಗೊ.ರು.ಚನ್ನಬಸಪ್ಪ ಅವರನ್ನು ಅಭಿನಂದಿಸಿ …

Read More »

ಶಿಕ್ಷಣ ಇಲಾಖೆ ಸೇರಿದಂತೆ ರಾಜ್ಯದ 43 ಇಲಾಖೆಗಳಲ್ಲಿ 2.76 ಲಕ್ಷ ಹುದ್ದೆ ಖಾಲಿ: ಸರ್ಕಾರದಿಂದ ಮಾಹಿತಿ

ಬೆಂಗಳೂರು : ಶಿಕ್ಷಣ ಇಲಾಖೆ ಸೇರಿದಂತೆ ರಾಜ್ಯದ 43 ಇಲಾಖೆಗಳಲ್ಲಿ ಒಟ್ಟಾರೆ 2.76 ಲಕ್ಷ (2,76,386) ಹುದ್ದೆಗಳು ಖಾಲಿ ಉಳಿದಿರುವುದಾಗಿ ಸರ್ಕಾರದ ಅಧಿಕೃತ ಮಾಹಿತಿಯೊಂದು ತಿಳಿಸಿದೆ. ರಾಜ್ಯ ಸರ್ಕಾರದ 43 ಇಲಾಖೆಗಳಲ್ಲಿ ಒಟ್ಟು 2,76,386 ಹುದ್ದೆಗಳು ಖಾಲಿ ಇವೆ. ಇವುಗಳಲ್ಲಿ 16,017 ಹುದ್ದೆಗಳು ಎ ದರ್ಜೆಯ ಹುದ್ದೆಗಳಾಗಿವೆ. 16,734 ಬಿ ದರ್ಜೆಯ ಹುದ್ದೆಗಳು, 1,66,021 ಸಿ ದರ್ಜೆಯ ಹುದ್ದೆಗಳು, 77,614 ಡಿ ದರ್ಜೆಯ ಹುದ್ದೆಗಳು ಖಾಲಿ ಉಳಿದಿವೆ ಎಂದು ಹೇಳಲಾಗಿದೆ. …

Read More »