Breaking News

BigTv News

ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಾದ್ಯಂತ ವಿಸ್ತರಣೆ: ಸಚಿವ ದಿನೇಶ್ ಗುಂಡೂರಾವ್

ಪುತ್ತೂರು: ಕೋಲಾರ ಜಿಲ್ಲೆಯಲ್ಲಿ ಆರಂಭಿಸಿದ ಗೃಹ ಆರೋಗ್ಯ ಯೋಜನೆ ಯಶಸ್ಸು ಕಂಡಿದ್ದು, ಶೀಘ್ರವೇ ರಾಜ್ಯಾದ್ಯಂತ ವಿಸ್ತರಿಸುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ. ತಾಲೂಕಿನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ, ಉದ್ಘಾಟನೆ ನೆರವೇರಿಸಿ ಪತ್ರಕರ್ತರ ಜತೆ ಮಾತನಾಡಿದ ಅವರು, ರಕ್ತದೊತ್ತಡ, ಮಧು ಮೇಹ ಪ್ರಕರಣಗಳು ಹೆಚ್ಚಾಗುತ್ತಿವೆ. ಕ್ರಮೇಣ ಇದು ಬೇರೆ ಕಾಯಿಲೆಗಳಿಗೂ ದಾರಿ ಮಾಡುತ್ತದೆ. ಗೃಹ ಆರೋಗ್ಯ ಯೋಜನೆ ಯಡಿ ಕೋಲಾರದಲ್ಲಿ ಮನೆ ಮನೆಗೆ ತೆರಳಿ …

Read More »

ಬೀದರ್ ನಲ್ಲಿ 20 ಲಕ್ಷ ರೂ. ಮೌಲ್ಯದ ರಸ್ತೆ ಹಾಗೂ ಚರಂಡಿ ನಿರ್ಮಾಣಕ್ಕೆ ಸಂಸದ ಸಾಗರ್ ಖಂಡ್ರೆ ಚಾಲನೆ

ಬೀದರ್ : ಭಾಲ್ಕಿ ತಾಲ್ಲೂಕಿನ ಗಣೇಶಪುರ್ ವಾಡಿಯಲ್ಲಿ ಸಿಸಿ ರಸ್ತೆ ಹಾಗೂ ಚರಂಡಿ ನಿರ್ಮಿಸಲು ಸಂಸದ ಸಾಗರ್ ಖಂಡ್ರೆ ಅವರು ಅಡಿಗಲ್ಲು ಹಾಕಿದರು. ಗ್ರಾಮದ ಶಂಕರರಾವ್ ಭೂಸುಂಡೆ ಅವರ ಮನೆಯಿಂದ ಲೋಕೇಶ್ ಭೂರೆ ಅವರ ಮನೆಯವರೆಗೆ ಜಿಲ್ಲಾ ಉಸ್ತುವಾರಿ ಸಚಿವರ ಅನುದಾನದ ಅಡಿಯಲ್ಲಿ 20 ಲಕ್ಷ ರೂ.ಮೌಲ್ಯದ ರಸ್ತೆ ಹಾಗೂ ಚರಂಡಿ ನಿರ್ಮಾಣಕ್ಕೆ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಮಾಜಿ ಪುರಸಭೆ ಉಪಾಧ್ಯಕ್ಷ ಅಶೋಕ್ ಗಾವಕವಾಡ್, ಪ್ರಶಾಂತ್ ಕೋಟಗೇರಾ, ಯಾದವರಾವ್ …

Read More »

ದೆಹಲಿಯಲ್ಲಿ 18 ವರ್ಷ ಮೇಲ್ಪಟ್ಟ ಹೆಣ್ಣುಮಕ್ಕಳಿಗೆ ಮಾಸಿಕ ₹1000 ಒದಗಿಸುವ ಯೋಜನೆ ಪ್ರಾರಂಭ: ಕೇಜ್ರಿವಾಲ್

ನವದೆಹಲಿ: ಮುಂಬರುವ ದೆಹಲಿ ವಿಧಾನಸಭೆ ಚುನಾವಣೆ ಹಿನ್ನೆಲೆ ಈಗಾಗಲೇ ಎಎಪಿ ಪಕ್ಷವು ರಾಜಕೀಯ ಕಾರ್ಯತಂತ್ರ ರೂಪಿಸಿದ್ದು, ಅದರಂತೆ 18 ವರ್ಷ ಮೇಲ್ಪಟ್ಟ ಎಲ್ಲಾ ಹೆಣ್ಣು ಮಕ್ಕಳು ಹಾಗೂ ಮಹಿಳೆಯರಿಗೆ ಮಾಸಿಕ ₹1,000 ಒದಗಿಸುವ ಯೋಜನೆ ಪ್ರಾರಂಭವಾಗಲಿದೆ ಎಂದು ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ ಕೇಜ್ರಿವಾಲ್‌ ಇಂದು ಘೋಷಿಸಿದ್ದಾರೆ. ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ನಾಳೆಯಿಂದ (ಡಿ.23) ಈ ಯೋಜನೆಗೆ ಚಾಲನೆ ದೊರೆಯಲಿದ್ದು, ಮಹಿಳೆಯರು ಅರ್ಜಿ ಸಲ್ಲಿಸಲು ಎಲ್ಲಿಯೂ ಹೋಗಬೇಕಿಲ್ಲ. ನಮ್ಮ ಸ್ವಯಂ …

Read More »

ಭಾರತ ಶೀಘ್ರದಲ್ಲಿ ವೈದ್ಯಕೀಯ ಮತ್ತು ಉತ್ಪಾದನೆ ಕ್ಷೇತ್ರಗಳಲ್ಲಿ ವಿಶ್ವದ ಹಬ್ ಆಗಲಿದೆ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ವಿಜಯಪುರ: ಭಾರತ ಶೀಘ್ರದಲ್ಲಿ ವೈದ್ಯಕೀಯ ಮತ್ತು ಉತ್ಪಾದನೆ ಕ್ಷೇತ್ರಗಳಲ್ಲಿ ವಿಶ್ವದ ಹಬ್ ಆಗಲಿದೆ ಎಂದು ಕೇಂದ್ರ ಗ್ರಾಹಕ ವ್ಯವಹಾರ, ಆಹಾರ ಮತ್ತು ಸಾರ್ವಜನಿಕ ವಿತರಣೆ ಹಾಗೂ ಹೊಸ ಮತ್ತು ನವೀಕರಿಸಬಹುದಾದ ಕೇಂದ್ರ ಇಂಧನ ಸಚಿವ ಪ್ರಹ್ಲಾದ ಜೋಶಿ ಹೇಳಿದರು. ನಗರದ ಬಿಎಲ್‌ಡಿಇ ಡೀಮ್ಡ್ ವಿಶ್ವವಿದ್ಯಾಲಯದಲ್ಲಿ ನಡೆದ 12ನೇ ಘಟಿಕೋತ್ಸವದಲ್ಲಿ ಅವರು ಭಾಷಣ ಮಾಡಿದರು. ಭಾರತದಲ್ಲಿ ಹೇರಳವಾದ ಪ್ರಾಕೃತಿಕ ಮತ್ತು ಮಾನವ ಸಂಪನ್ಮೂಲವಿದೆ. ಪ್ರಾಚೀನ ಭಾರತದ ಆರ್ಯಭಟರಿಂದ ಹಿಡಿದು ಶಲ್ಯರವರೆಗೆ ಮತ್ತು …

Read More »

ಬೆಳಗಾವಿಯಲ್ಲಿ ಡಿ.26, 27 ರಂದು ಶತಮಾನೋತ್ಸವ ಕಾರ್ಯಕ್ರಮ: ಸಚಿವ ಸತೀಶ ಜಾರಕಿಹೊಳಿ

ಬೆಳಗಾವಿ: ಮಹಾತ್ಮ ಗಾಂಧಿಯವರು ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಅಧ್ಯಕ್ಷತೆ ವಹಿಸಿದ್ದ ಬೆಳಗಾವಿ ಅಧಿವೇಶನಕ್ಕೆ 100 ವರ್ಷಗಳು ಪೂರ್ಣಗೊಂಡ ಹಿನ್ನೆಲೆಯಲ್ಲಿ ಡಿ. 26, 27ರಂದು ಬೆಳಗಾವಿಯಲ್ಲಿ ಶತಮಾನೋತ್ಸವ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ 150 ಜನ ಸಂಸದರು ಪಾಲ್ಗೊಳ್ಳಲಿದ್ದಾರೆಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಅವರು ಹೇಳಿದರು. ಕಾಂಗ್ರೆಸ್‌ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸ್ವಾತಂತ್ರ್ಯ ಪೂರ್ವ 1924ರಲ್ಲಿ ಮಹಾತ್ಮ ಗಾಂಧಿಯವರು ಕಾಂಗ್ರೆಸ್ ಪಕ್ಷದ ಅಧ್ಯಕ್ಷತೆ ವಹಿಸಿ, ದೇಶದ …

Read More »

ಕಲ್ಯಾಣ ಕರ್ನಾಟಕ ಭಾಗದಲ್ಲಿ ಖಾಲಿ ಇರುವ ಹುದ್ದೆಗಳು ಶೀಘ್ರವೇ ಭರ್ತಿ: ಸಿಎಂ ಸಿದ್ದರಾಮಯ್ಯ

ಕಲಬುರಗಿ : ಕಲ್ಯಾಣ ಕರ್ನಾಟಕದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು. ಇಲ್ಲಿನ ವಿಶ್ವ ವಿದ್ಯಾಲಯಗಳಲ್ಲಿ ನೂತನ ಹೊಸ ಕೋರ್ಸ್ ಗಳನ್ನು ಆರಂಭಿಸುವುದು ಮತ್ತು ಖಾಲಿ ಇರುವ ಹುದ್ದೆಗಳನ್ನು ತುಂಬುವ ಕೆಲಸವನ್ನೂ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ 371 ಜೆ ಜಾರಿಯಾದ ದಶಮಾನೋತ್ಸವದ ಪ್ರಯುಕ್ತ 371 ಹಾಸಿಗೆಗಳ ಅತ್ಯುನ್ನತ ಆರೋಗ್ಯ ಸೌಕರ್ಯಗಳಿರುವ ಜಯದೇವ ಹೃದ್ರೋಗ ಆಸ್ಪತ್ರೆಯನ್ನು ಅತ್ಯಂತ ಸಂತೋಷದಿಂದ ಲೋಕಾರ್ಪಣೆಗೊಳಿಸಿ ಮಾತನಾಡಿದ ಅವರು, …

Read More »

ಬೆಂಗಳೂರು-ಬೀದರ್ ಮಧ್ಯೆ ವಂದೇ ಭಾರತ್ ರೈಲು ಸಂಚಾರ ಪ್ರಾರಂಭಿಸಲು ಕೇಂದ್ರ ಸಚಿವರಿಗೆ ಮನವಿ

ಬೀದರ್ : ಭಾರತೀಯ ರೈಲ್ವೆಯ ಸೆಮಿ ಹೈಸ್ಪೀಡ್ ರೈಲು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಬಹಳ ಬೇಡಿಕೆ ಇದೆ. ಅದರಲ್ಲೂ ಕರ್ನಾಟಕದ ವಿವಿಧ ನಗರಗಳಿಂದ ರಾಜಧಾನಿ ಬೆಂಗಳೂರು ನಗರಕ್ಕೆ ವಂದೇ ಭಾರತ್ ರೈಲು ಸಂಪರ್ಕ ಬೇಕು ಎಂದು ಬೇಡಿಕೆ ಇಡಲಾಗುತ್ತಿದೆ. ಸದ್ಯ ಕರ್ನಾಟಕದಲ್ಲಿ 6ಕ್ಕೂ ಅಧಿಕ ವಂದೇ ಭಾರತ್ ರೈಲುಗಳು ಸಂಚಾರವನ್ನು ನಡೆಸುತ್ತಿವೆ. ಬೆಂಗಳೂರು-ಬೀದರ್ ಮಾರ್ಗದಲ್ಲಿ ಈ ಮಾದರಿ ರೈಲು ಬೇಕು ಎಂದು ಸಚಿವರಿಗೆ ಮನವಿ ಸಲ್ಲಿಕೆ ಮಾಡಲಾಗಿದೆ. ಬೀದರ್ …

Read More »

ಬೆಳಗಾವಿಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ವಿರುದ್ಧ ಅವಹೇಳನಕಾರಿ ಪದ ಬಳಕೆಗೆ ಆಡಿಯೋ, ವಿಡಿಯೋ ಸಾಕ್ಷ್ಯಗಳಿವೆ: ಸಿಎಂ ಸಿದ್ದರಾಮಯ್ಯ

ಕಲಬುರಗಿ: ಬೆಳಗಾವಿಯಲ್ಲಿ ನಡೆದ ವಿಧಾನ ಪರಿಷತ್‌ ಕಲಾಪದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ವಿಧಾನ ಪರಿಷತ್‌ನ ಬಿಜೆಪಿ ಸದಸ್ಯ ಸಿಟಿ ರವಿ ಅವರು ಆಕ್ಷೇಪಾರ್ಹ ಪದ ಬಳಕೆ ಮಾಡಿದ್ದಾರೆ ಎಂಬುದಕ್ಕೆ ಆಡಿಯೋ ಮತ್ತು ವಿಡಿಯೋ ಸಾಕ್ಷ್ಯಗಳಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಘಟನೆಗೆ ಹಲವು ಎಂಎಲ್‌ಸಿಗಳು ಸಾಕ್ಷಿಯಾಗಿದ್ದಾರೆ. ಇದು ಕ್ರಿಮಿನಲ್ ಅಪರಾಧವಾಗಿರುವುದರಿಂದ ನಾವು ಈ ವಿಷಯವನ್ನು ತನಿಖೆ ಮಾಡುತ್ತಿದ್ದೇವೆ. ಹೀಗಿರುವಾಗ ಅವರು (ರವಿ) ನ್ಯಾಯಾಂಗ ತನಿಖೆಗೆ ಏಕೆ ಒತ್ತಾಯಿಸುತ್ತಿದ್ದಾರೆ? ಎಂದು …

Read More »

ಬಳ್ಳಾರಿ: ಗಣಿಬಾಧಿತ ಪ್ರದೇಶದಲ್ಲಿ ವೃಕ್ಷೋದ್ಯಾನ ನಿರ್ಮಿಸಲು ಅರಣ್ಯ ಸಚಿವರ ಸೂಚನೆ

ಬಳ್ಳಾರಿ: ಬಹಳ ಹಿಂದೆಯೇ ಸುಪ್ರೀಂಕೋರ್ಟ್ ಗಣಿಗಾರಿಕೆ ಪ್ರದೇಶದಲ್ಲಿ ಪುನರ್‌ ವಸತಿ, ಪುನಶ್ಚೇತನ ಕೆಲಸ ಕೈಗೊಳ್ಳಬೇಕು ಎಂದು ಆದೇಶಿಸಿದೆ. ಬಳ್ಳಾರಿ ಜಿಲ್ಲೆಯಲ್ಲಿ ಗಣಿಬಾಧಿತ ಪ್ರದೇಶದಲ್ಲಿ ತಾಲೂಕಿಗೊಂದು ವೃಕ್ಷೋದ್ಯಾನ ನಿರ್ಮಾಣ ಮಾಡಲು ಅರಣ್ಯ ಸಚಿವರು ಸೂಚನೆ ನೀಡಿದ್ದಾರೆ. ಈ ಕುರಿತು ಯೋಜನೆ ರೂಪಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಬಳ್ಳಾರಿಯ ಅರಣ್ಯ ಇಲಾಖೆ ಕಛೇರಿಯಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ, ಕರ್ನಾಟಕ ಗಣಿ ಪರಿಸರ …

Read More »

ಕಲ್ಯಾಣ ಕರ್ನಾಟಕದ ಅಭಿವೃದ್ಧಿಗಾಗಿ ಸಿಎಂ ಗೆ ಮನವಿ ಮಾಡಿದ ಮಲ್ಲಿಕಾರ್ಜುನ ಖರ್ಗೆ

ಕಲಬುರಗಿ : ಕಲ್ಯಾಣ ಕರ್ನಾಟಕ ಭಾಗದ ಜನ ಏಳು ಜನ ಶಾಸಕರನ್ನು ನೀಡಿದ್ದಾರೆ, ಹೀಗಾಗಿ ಈ ಭಾಗದಲ್ಲಿ ಇನ್ನೂ ಶೈಕ್ಷಣಿ, ಆರೋಗ್ಯ ಕ್ಷೇತ್ರದಲ್ಲಿ ಇನ್ನೂ ಅಭಿವೃದ್ಧಿ ಕಾರ್ಯಗಳು ಆಗಬೇಕಿವೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಅಭಿಪ್ರಾಯಪಟ್ಟರು. ಕಲ್ಯಾಣ ಕರ್ನಾಟಕ ಭಾಗದ ಕೇಂದ್ರವಾದ ಕಲಬುರಗಿಯಲ್ಲಿ KKRDB ವತಿಯಿಂದ ರೂ. 327.17 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಾದ 371 ಹಾಸಿಗೆ ಸಾಮರ್ಥ್ಯದ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಆಸ್ಪತ್ರೆಯನ್ನು …

Read More »