Breaking News

BigTv News

ದೇಶದಲ್ಲಿ ಅರಣ್ಯ ಪ್ರದೇಶ ಕುಸಿತ ಪ್ರಮಾಣದಲ್ಲಿ ಕರ್ನಾಟಕಕ್ಕೆ 2 ನೇ ಸ್ಥಾನ: ಕೇಂದ್ರ ಸರ್ಕಾರ ಮಾಹಿತಿ

ಬೆಂಗಳೂರು : ಭಾರತದಲ್ಲಿ ಅರಣ್ಯ ಹಾಗೂ ಹಸಿರು ಹೊದಿಕೆ ಪ್ರಮಾಣವು 2021 ರಿಂದ 2023ರ ಅವಧಿಯಲ್ಲಿ 1445 ಚದರ ಕಿ.ಮೀ.ನಷ್ಟು ವೃದ್ಧಿಸಿದೆ. ಅಂದರೆ ದೇಶದ ಒಟ್ಟು ಭೂಭಾಗದ ಶೇ.25.17 ಪ್ರದೇಶದಲ್ಲೀಗ ಅರಣ್ಯವಿದೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ. ಆದರೆ ಕಳವಳಕಾರಿ ವಿಷಯವೆಂದರೆ, ಇದೇ ಅವಧಿಯಲ್ಲಿ ಕರ್ನಾಟಕದಲ್ಲಿ ಅರಣ್ಯ ಪ್ರದೇಶ ಕುಸಿತದ ಪ್ರಮಾಣದಲ್ಲಿ ಕರ್ನಾಟಕ ದೇಶದಲ್ಲೇ 2ನೇ ಸ್ಥಾನ ಪಡೆದಿದೆ. ಹೌದು ಈ ಕುರಿತಂತೆ ಇಂಡಿಯಾ ಸ್ಟೇಟ್ ಆಫ್ ಫಾರೆಸ್ಟ್ …

Read More »

ಸಾರಿಗೆ ನೌಕರರು ಮುಷ್ಕರ ಘೋಷಣೆ ಮಾಡಿದ ಬೆನ್ನಲ್ಲೇ ಬೇಡಿಕೆ ಈಡೇರಿಕೆಗೆ ಆದೇಶ

ಬೆಂಗಳೂರು: ಸಾರಿಗೆ ನೌಕರರು ಮುಷ್ಕರ ಘೋಷಣೆ ಮಾಡಿದ ಬೆನ್ನಲ್ಲೇ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕು ನಿಗಮಗಳ ನಿವೃತ್ತ ಸಿಬ್ಬಂದಿಗೆ ನೀಡಬೇಕಾದ ಬಾಕಿ ಉಪಧನ ಮತ್ತು ಗಳಿಕೆ ರಜೆ ನಗದೀಕರಣ ಪಾವತಿಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಆದೇಶಿಸಿದ್ದಾರೆ. ವೇತನ ಹೆಚ್ಚಳ, ವೇತನ ಹೆಚ್ಚಳ ಬಾಕಿ ಜೊತೆಗೆ ನಿವೃತ್ತ ನೌಕರರ ಬಾಕಿ ಉಪಧನ ಮತ್ತು ಗಳಿಕೆ ರಜೆ ನಗದೀಕರಣ ಬಾಕಿ ಪಾವತಿಸುವಂತೆ ಒತ್ತಾಯಿಸಿ ಡಿಸೆಂಬರ್ 31 ರಿಂದ ಕರ್ತವ್ಯ ಬಹಿಷ್ಕರಿಸಿ ಮುಷ್ಕರ …

Read More »

ಸಿ.ಟಿ.ರವಿ ಮಾತಾಡಿರೋದಕ್ಕೆ ಲೆಕ್ಕ ಚುಕ್ತಾ ಮಾಡ್ತೀವಿ: ಕೇಸರಿಪಡೆ ವಿರುದ್ಧ ಡಿಕೆಶಿ ವಾಗ್ದಾಳಿ

ಬೆಂಗಳೂರು : ಬಿಜೆಪಿ MLC ಸಿ.ಟಿ.ರವಿ ಬಂಧನ ವಿಚಾರಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆಶಿ ಕೇಸರಿಪಡೆ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತಾಡಿದ ಅವರು, ಸಿಟಿ ರವಿ ಮಾತುಗಳು ಅವರ ಸಂಸ್ಕೃತಿಯನ್ನು ತೋರಿಸುತ್ತದೆ. ಅವರು ಮಾತಾಡಿರೋದಕ್ಕೆ ಲೆಕ್ಕ ಚುಕ್ತಾ ಮಾಡ್ತೀವಿ ಅಂತ ಕೆಂಡಕಾರಿದ್ದಾರೆ. ಚಿಕ್ಕಮಗಳೂರು ಜನ ಬುದ್ಧಿವಂತರು, ಅವರಿಗೆ ಉತ್ತಮ ಸಂಸ್ಕೃತಿ ಇದೆ. ಸುಮ್ಮನೆ ಲೀಡರ್ ಗಳನ್ನು ಸಪೋರ್ಟ್ ಮಾಡೋದಲ್ಲ. ನಮ್ಮ ಪಕ್ಷದವರು ಆ ರೀತಿಯ ಅಶ್ಲೀಲ ಪದಬಳಕೆ …

Read More »

ಗದಗ: ದುಷ್ಕರ್ಮಿಗಳಿಂದ ಮುಖ್ಯ ಶಿಕ್ಷಕಿಯ ಭೀಕರ ಕೊಲೆ

ಗದಗ: ರೊಟ್ಟಿ ಮಾಡುವ ಕ್ವಾಮಣಗಿಯಿಂದ ತಲೆಗೆ ಹೊಡೆದು ಮುಖ್ಯ ಶಿಕ್ಷಕಿಯನ್ನು ಹತ್ಯೆ ಮಾಡಿರುವ ಘಟನೆ ಗದಗ ಜಿಲ್ಲೆ ಗಜೇಂದ್ರಗಡ ಪಟ್ಟಣದ ನವನಗರದಲ್ಲಿ ನಡೆದಿದೆ. ಅನ್ನಪೂರ್ಣ ರಾಠೋಡ್ (55) ಮೃತ ಮುಖ್ಯ ಶಿಕ್ಷಕಿಯಾಗಿದ್ದು, ಗಜೇಂದ್ರಗಡ ತಾಲೂಕಿನ ರೋಣದ ಬಿಇಒ ಕಚೇರಿಯಲ್ಲಿ ಪ್ರಭಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಮನೆಯಲ್ಲಿದ್ದ ಮುಖ್ಯ ಶಿಕ್ಷಕಿಯ ತಲೆಗೆ ದುಷ್ಕರ್ಮಿಗಳು ರೊಟ್ಟಿ ಮಾಡುವ ಕಟ್ಟಿಗೆಯ ಕ್ವಾಮಣಗಿಯಿಂದ ಹೊಡೆದು ಭೀಕರ ಕೊಲೆ ಮಾಡಲಾಗಿದ್ದು, ಇದನ್ನು ಕಂಡ ಗಜೇಂದ್ರಗಡ ನಿವಾಸಿಗಳು ಆತಂಕಗೊಂಡಿದ್ದಾರೆ. ಇನ್ನೂ ಸ್ಥಳಕ್ಕೆ …

Read More »

ಇಂದು ಕುವೈತ್ ಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ: ದ್ವಿಪಕ್ಷೀಯ ಒಪ್ಪಂದ ಮತ್ತು ರಕ್ಷಣಾ ಸಹಕಾರ ಕುರಿತು ಚರ್ಚೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಎರಡು ದಿನಗಳ ಗಲ್ಫ್ ರಾಷ್ಟ್ರ ಭೇಟಿಯ ಸಂದರ್ಭದಲ್ಲಿ ಭಾರತ ಮತ್ತು ಕುವೈತ್ ರಕ್ಷಣೆ ಮತ್ತು ವ್ಯಾಪಾರ ಸೇರಿದಂತೆ ಪ್ರಮುಖ ಕ್ಷೇತ್ರಗಳಲ್ಲಿ ಸಂಬಂಧಗಳನ್ನು ಬಲಪಡಿಸುವತ್ತ ಗಮನ ಹರಿಸುವ ನಿರೀಕ್ಷೆಯಿದೆ. ಕುವೈತ್ ನ ಉನ್ನತ ನಾಯಕರೊಂದಿಗೆ ಮೋದಿ ಮಾತುಕತೆ ನಡೆಸಲಿದ್ದಾರೆ, ಭಾರತೀಯ ಕಾರ್ಮಿಕ ಶಿಬಿರಕ್ಕೆ ಭೇಟಿ ನೀಡಲಿದ್ದಾರೆ, ಭಾರತೀಯ ಸಮುದಾಯವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಮತ್ತು ಗಲ್ಫ್ ಕಪ್ ಫುಟ್ಬಾಲ್ ಪಂದ್ಯಾವಳಿಯ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಕಳೆದ …

Read More »

ಹಣಕಾಸು ಆಯೋಗದ ಅಡಿಯಲ್ಲಿ ರಾಜ್ಯಗಳಿಗೆ ನಿಗದಿಗಿಂತ ಹೆಚ್ಚಿನ ಅನುದಾನ ವಿತರಣೆ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್

ಜೈಸಲ್ಮೇರ್: ಆರೋಗ್ಯಕರ ಸ್ಥೂಲ ಆರ್ಥಿಕ ವಾತಾವರಣ, ತೆರಿಗೆ ಸಂಗ್ರಹಣೆಯಲ್ಲಿನ ದಕ್ಷತೆಯಿಂದಾಗಿ, 15 ನೇ ಹಣಕಾಸು ಆಯೋಗದ ಅಡಿಯಲ್ಲಿ ಕಳೆದ 45 ತಿಂಗಳುಗಳಲ್ಲಿ ರಾಜ್ಯಗಳಿಗೆ 14 ನೇ ಹಣಕಾಸು ಆಯೋಗದ ಅಡಿಯಲ್ಲಿ 60 ತಿಂಗಳುಗಳಲ್ಲಿ ವಿತರಿಸಿದ ಅನುದಾನಕ್ಕಿಂತ ಹೆಚ್ಚಿನ ಅನುದಾನಗಳನ್ನು ವಿತರಿಸಲಾಗಿದೆ ಎಂದು ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಹೇಳಿದರು. ಇಂದು ಜೈಸಲ್ಮೇರ್‌ನಲ್ಲಿ ನಡೆಯುತ್ತಿರುವ 55ನೇ ಜಿಎಸ್‌ಟಿ ಸಮಿತಿ ಸಭೆಯ ಮುನ್ನ ತಮ್ಮನ್ನು ಭೇಟಿ …

Read More »

ರಾಜ್ಯ ಸರ್ಕಾರದಿಂದ ಅತಿಥಿ ಉಪನ್ಯಾಸಕರಿಗೆ ಸಿಹಿಸುದ್ದಿ: ಗೌರವಧನ ಹೆಚ್ಚಿಸಲು ಅಗತ್ಯ ಕ್ರಮ

ಬೆಂಗಳೂರು: ರಾಜ್ಯ ಸರ್ಕಾರವು ಅತಿಥಿ ಉಪನ್ಯಾಸಕರಿಗೆ ಗೌರವಧನ ಹೆಚ್ಚಳದ ಕುರಿತು ಸಿಹಿ ಸುದ್ದಿ ‌ನೀಡಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಈ ವಿಷಯವನ್ನು ಪ್ರಸ್ತಾಪಿಸಿ, ಅತಿಥಿ ಉಪನ್ಯಾಸಕರ ಗೌರವಧನ ಹೆಚ್ಚಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವುದಾಗಿ ತಿಳಿಸಿದ್ದಾರೆ. ಅತಿಥಿ ಉಪನ್ಯಾಸಕರಿಗೆ ಪ್ರಸ್ತುತ ಮಾಸಿಕ 12,000 ರೂಪಾಯಿ ಗೌರವಧನವನ್ನು ನಿಗದಿ ಮಾಡಲಾಗಿದೆ, ಅದು ಕನಿಷ್ಠ ವೇತನಕ್ಕಿಂತ ಕಡಿಮೆಯಾಗಿದೆ. ಇದರಿಂದಾಗಿ, ಅತಿಥಿ ಉಪನ್ಯಾಸಕರು ತಮ್ಮ ಆರ್ಥಿಕ ಸ್ಥಿತಿಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸುತ್ತಿದ್ದರು. ಮುಖ್ಯಮಂತ್ರಿ …

Read More »

ಬಿಜೆಪಿಯವರಿಗೆ ರಾಮನ ಹೆಸರು ಹೇಳುವ ಯೋಗ್ಯತೆಯೂ ಇಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ ವಿರುದ್ಧ ಸಿ.ಟಿ. ರವಿ ನೀಡಿದ ಹೇಳಿಕೆ ಮನುವಾದಿ ಬಿಜೆಪಿಯ ಸಂಸ್ಕೃತಿಯನ್ನು ತೋರಿಸುತ್ತದೆ. ಬಿಜೆಪಿಯವರಿಗೆ ಮರ್ಯಾದೆ ಇಲ್ಲ. ಮರ್ಯಾದಾ ಪುರುಷೋತ್ತಮ ರಾಮನ ಹೆಸರು ಹೇಳುವ ಯೋಗ್ಯತೆಯೂ ಇಲ್ಲ ಎಂದು ಗ್ರಾಮೀಣಾಭಿವೃದ್ಧಿ, ಪಂಚಾಯತ್‌ ರಾಜ್‌ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. ಇಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮನುವಾದಿಗಳು ಹೆಣ್ಣನ್ನು ಗೌರವಿಸುವುದಿಲ್ಲ ಎನ್ನುವುದಕ್ಕೆ ಇದು ಉತ್ತಮ ಉದಾಹರಣೆ. ಅವರು ಅಶ್ಲೀಲ ಪದ ಬಳಸುವ ಮೂಲಕ ಸ್ತ್ರೀ ಕುಲಕ್ಕೆ …

Read More »

ಡಾ.ಅಂಬೇಡ್ಕರ್ ಗೆ ಅಪಮಾನ ಖಂಡಿಸಿ ಶಾ ವಿರುದ್ಧ ಖರ್ಗೆ ಹಕ್ಕುಚ್ಯುತಿ ನೋಟಿಸ್

ನವದೆಹಲಿ: ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ವಿರುದ್ಧ ಗೃಹ ಸಚಿವ ಅಮಿತ್ ಶಾ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಅಧ್ಯಕ್ಷ ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ವಿಶೇಷ ಹಕ್ಕುಚ್ಯುತಿ ನೊಟೀಸ್ ನ್ನು ರಾಜ್ಯಸಭಾಧ್ಯಕ್ಷರಿಗೆ ಸಲ್ಲಿಸಿದ್ದಾರೆ. ಅಮಿತ್ ಶಾ ಅವರ ಹೇಳಿಕೆಗಳು ಸಂವಿಧಾನ ಶಿಲ್ಪಿಗೆ ಅವಮಾನವಾಗಿದ್ದು, ಸದನದ ಅವಹೇಳನಕ್ಕೆ ಸಮಾನವಾಗಿದೆ ಮತ್ತು ಸವಲತ್ತು ಉಲ್ಲಂಘನೆಯಾಗಿದೆ ಎಂದು ಆರೋಪಿಸಿ ಖರ್ಗೆ ರಾಜ್ಯಸಭಾಧ್ಯಕ್ಷರಿಗೆ ನೊಟೀಸ್ ಸಲ್ಲಿಸಿದ್ದಾರೆ. …

Read More »

ಪ್ರವಾಸೋದ್ಯಮ ಇಲಾಖೆಯಿಂದ 24 ಕಂಬಳ ಕೂಟಕ್ಕೆ ತಲಾ 5 ಲಕ್ಷದಂತೆ 1.20 ಕೋಟಿ ರೂ. ಅನುದಾನ ಬಿಡುಗಡೆ: ಸಚಿವ ಎಚ್.ಕೆ.ಪಾಟೀಲ್‌

ಪುತ್ತೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ನಡೆಯುವ 24 ಕಂಬಳ ಕೂಟಕ್ಕೆ ಪ್ರವಾಸೋದ್ಯಮ ಇಲಾಖೆಯಿಂದ ತಲಾ 5 ಲಕ್ಷದಂತೆ 1.20 ಕೋಟಿ ರೂ.ಅನುದಾನ ಬಿಡುಗಡೆ ಮಾಡಲು ಪ್ರವಾಸೋದ್ಯಮ ಸಚಿವ ಎಚ್‌.ಕೆ. ಪಾಟೀಲ್‌ ಅವರು ಆದೇಶಿಸಿದ್ದಾರೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ನಡೆಯುವ ಪ್ರತೀ ಕಂಬಳಕ್ಕೆ ಸರಕಾರ ತಲಾ 5 ಲಕ್ಷ ರೂ.ಅನುದಾನ ಬಿಡುಗಡೆ ಮಾಡಬೇಕೆಂದು ಶಾಸಕ ಅಶೋಕ್‌ ಕುಮಾರ್‌ ರೈ ಅವರು ಅಧಿವೇಶನದಲ್ಲಿ ಸರಕಾರವನ್ನು ಆಗ್ರಹಿಸಿದ್ದರು. ಪ್ರತೀ …

Read More »