ನವದೆಹಲಿ : ಆರೋಗ್ಯ ಮತ್ತು ಜೀವ ವಿಮೆ ಕಂತುಗಳ ಮೇಲಿನ ತೆರಿಗೆ ದರವನ್ನು ಕಡಿತಗೊಳಿಸಲು ಕೇಂದ್ರ ಸರ್ಕಾರ ಮುಂದಾಗಿದೆ ಎಂದು ತಿಳಿದುಬಂದಿದೆ. ಇಂದು ರಾಜಸ್ಥಾನದ ಜೈಸಲ್ಮೇರ್ ನಲ್ಲಿರುವ GST ಮಂಡಳಿ ಸಭೆಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 55ನೇ GST ಮಂಡಳಿ ಸಭೆ ನಡೆಸಲಿದ್ದಾರೆ. ಈ ಸಭೆಯಲ್ಲಿ ವಿವಿಧ ರಾಜ್ಯಗಳ ಹಣಕಾಸು ಸಚಿವರು ಪಾಲ್ಗೊಳ್ಳಲಿದ್ದಾರೆ. 148 ವಸ್ತುಗಳ ದರ ಬದಲಾವಣೆ ಕುರಿತೂ ಮೀಟಿಂಗ್ನಲ್ಲಿ ಚರ್ಚೆ ನಡೆಯಲಿದೆ ಎಂದು …
Read More »ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪರ ನಿಂತ ವೀರಶೈವ ಲಿಂಗಾಯತ ಮಹಾಸಭಾ: ಸಿ.ಟಿ ರವಿ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ ಶಾಮನೂರು ಶಿವಶಂಕ್ರಪ್ಪ
ದಾವಣಗೆರೆ: ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ಪರ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ನಿಂತಿದ್ದು, ವಿಧಾನ ಪರಿಷತ್ ಸದಸ್ಯ ಸಿ. ಟಿ. ರವಿ ಅವರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದೆ. ಈ ಸಂಬಂಧ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರಾಧ್ಯಕ್ಷ ಶಾಮನೂರು ಶಿವಶಂಕರಪ್ಪ ಅವರು, ಸಿ, ಟಿ.ರವಿ ಅವರು ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಆಡಿದ ಆಕ್ಷೇಪಾರ್ಹ ಮಾತು ವಿಧಾನಸಭೆ ಹಾಗೂ ವಿಧಾನ …
Read More »ಲಿಂಗಾಯತ ಪಂಚಮಸಾಲಿ ಮೀಸಲಾತಿಗಾಗಿ ಧ್ವನಿ ಎತ್ತದಂತೆ ಹಲವು ಶಾಸಕರಿಗೆ ಆಮಿಷ: ಜಯಮೃತ್ಯುಂಜಯ ಸ್ವಾಮೀಜಿ ಆರೋಪ
ಕೊಪ್ಪಳ: ಲಿಂಗಾಯತ ಪಂಚಮಸಾಲಿ ಸಮುದಾಯ ಮೀಸಲಾತಿಗಾಗಿ ಹೋರಾಟ ಮಾಡುತ್ತಿದ್ದರೆ, ಕೆಲ ಶಾಸಕರಿಗೆ ಆಸೆ ಹಾಗೂ ಆಮಿಷ ತೋರಿಸಿ, ಇದರ ಬಗ್ಗೆ ಧ್ವನಿ ಎತ್ತದಂತೆ ಕೆಲವರು ಕುತಂತ್ರ ಮಾಡುತ್ತಿದ್ದಾರೆ ಎಂದು ಕೂಡಲಸಂಗಮದ ಜಯಮೃತ್ಯುಂಜಯ ಸ್ವಾಮೀಜಿ ಆರೋಪಿಸಿದರು. ನಗರದಲ್ಲಿ ಶುಕ್ರವಾರ ಸುದ್ದಿಗಾರರ ಜೊತೆ ಮಾತನಾಡಿ, ಹೋರಾಟದ ವೇಳೆ ಲಿಂಗಾಯತ ಪಂಚಮಸಾಲಿಗಳ ಮೇಲೆ ಹಲ್ಲೆ ಮಾಡಲಾಗಿದೆ. ಹೀಗಾಗಿ ಸರ್ಕಾರ ಕೂಡಲೇ ಸಮಾಜದ ಕ್ಷಮೆ ಕೇಳಬೇಕು. ಹಲ್ಲೆ ಮಾಡಿದ ಪೊಲೀಸರನ್ನು ಅಮಾನತು ಮಾಡಬೇಕು. ಸಮಾಜದವರ ಮೇಲೆ …
Read More »ಎಐಸಿಸಿ ಅಧಿವೇಶನದ ಶತಮಾನೋತ್ಸವ: ಸಿಎಂ ಅಧ್ಯಕ್ಷತೆಯಲ್ಲಿಂದು ಮಹತ್ವದ ಸಭೆ ಆಯೋಜನೆ
ಬೆಂಗಳೂರು: ಮಹಾತ್ಮ ಗಾಂಧಿ ಅಧ್ಯಕ್ಷತೆಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ಡಿ. 26 ಹಾಗೂ 27ರಂದು ಆಯೋಜಿಸಿರುವ ಕಾರ್ಯಕ್ರಮದ ಸಿದ್ಧತೆಯ ಬಗ್ಗೆ ಚರ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಇಂದು ಮಹತ್ವದ ಸಭೆ ಆಯೋಜಿಸಲಾಗಿದೆ. ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ಸಂಜೆ 4 ಗಂಟೆಗೆ ಆಯೋಜಿಸಿರುವ ಈ ಸಭೆಗೆ ಎಲ್ಲ ಸಚಿವರು, ಕಾಂಗ್ರೆಸ್ನ ಲೋಕಸಭಾ ಹಾಗೂ ರಾಜ್ಯಸಭಾ ಸದಸ್ಯರಿಗೆ ಸಿಎಂ ಕಚೇರಿಯಿಂದ ಆಹ್ವಾನ ಕಳುಹಿಸಲಾಗಿದ್ದು, ಇದುವರೆಗೆ ನಡೆಸಿರುವ ಸಿದ್ಧತೆ …
Read More »ರಾಜ್ಯ ಸರ್ಕಾರದಿಂದ ಜನತೆಗೆ ಸಿಹಿಸುದ್ದಿ: ಪುಣ್ಯಕ್ಷೇತ್ರಗಳ ದರ್ಶನಕ್ಕೆ 17 ಸಾವಿರ ರೂ. ಸಹಾಯಧನ ಘೋಷಣೆ
ಬೆಂಗಳೂರು: ರಾಜ್ಯ ಸರ್ಕಾರವು ಜನತೆಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಪುಣ್ಯಕ್ಷೇತ್ರಗಳ ದರ್ಶನಕ್ಕೆ 17 ಸಾವಿರ ರೂ. ಸಹಾಯಧನ ನೀಡುವುದಾಗಿ ರಾಜ್ಯ ಸರ್ಕಾರ ಘೋಷಣೆ ಮಾಡಿದೆ. ರಾಜ್ಯ ಸರ್ಕಾರವು ಹೊಸ ವರ್ಷಕ್ಕೆ ದ್ವಾರಕ, ಪುರಿ, ಜಗನ್ನಾಥ, ದಕ್ಷಿಣ ಭಾರತ ಕ್ಷೇತ್ರಗಳ ಯಾತ್ರೆಗೆ ತೆರಳುವ ಭಕ್ತರಿಗೆ 3 ಪ್ರವಾಸಿ ಪ್ಯಾಕೇಜ್ ಗಳನ್ನು ಧಾರ್ಮಿಕ ದತ್ತಿ ಇಲಾಖೆ ಮಾಡಿದ್ದು, ಕರ್ನಾಟಕ ಭಾರತ್ ಗೌರವ್ ಯಾತ್ರೆ ಸಹಾಯಧನ ಘೋಷಿಸಲಾಗಿದೆ. ದಕ್ಷಿಣ ಯಾತ್ರೆಯು ಜನವರಿ 25 ರಿಂದ …
Read More »ಕಲಬುರಗಿಯಲ್ಲಿ ಡಿ.22 ರಂದು ಜಯದೇವ ಆಸ್ಪತ್ರೆ ಲೋಕಾರ್ಪಣೆ: ಸಚಿವ ಡಾ.ಶರಣಪ್ರಕಾಶ ಪಾಟೀಲ
ಕಲಬುರಗಿ : ಕಲ್ಯಾಣ ಕರ್ನಾಟಕ ಭಾಗದ ಕೇಂದ್ರವಾದ ಕಲಬುರಗಿಯಲ್ಲಿ ಕೆ.ಕೆ.ಆರ್.ಡಿ.ಬಿ.ಯ 302 ಕೋಟಿ ರೂ. ಸೇರಿ ಒಟ್ಟಾರೆ 327.17 ಕೋಟಿ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಾಗಿರುವ 371 ಹಾಸಿಗೆ ಸಾಮರ್ಥ್ಯದ ಶ್ರೀ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಆಸ್ಪತ್ರೆಯ ಕಲಬುರಗಿ ಶಾಖಾ ಆಸ್ಪತ್ರೆ ಇದೇ ಡಿಸೆಂಬರ್ 22 ರಂದು ಲೋಕಾರ್ಪಣೆ ಮಾಡಲಾಗುತ್ತಿದ್ದು, ಕಾರ್ಪೊರೇಟ್ ಆಸ್ಪತ್ರೆ ಮೀರಿಸುವ ಗುಣಮಟ್ಟದ ಸೇವೆ ಇಲ್ಲಿ ಸಾರ್ವಜನಿಕರಿಗೆ ಲಭ್ಯವಾಗಲಿದೆ ಎಂದು ರಾಜ್ಯದ ವೈದ್ಯಕೀಯ ಶಿಕ್ಷಣ, …
Read More »ಕಲಂ 371(ಜೆ) ಜಾರಿ ನಂತರ ಶೈಕ್ಷಣಿಕ ಹಾಗೂ ಆರೋಗ್ಯ ಕ್ಷೇತ್ರದಲ್ಲಿ ಗಣನೀಯ ಅಭಿವೃದ್ದಿ: ಸಚಿವ ಪ್ರಿಯಾಂಕ್ ಖರ್ಗೆ
ಕಲಬುರ್ಗಿ: ಸಂವಿಧಾನದ ಕಲಂ 371 ( ಜೆ ) ಜಾರಿಗೆ ಬಂದ ನಂತರ ಕಲ್ಯಾಣ ಕರ್ನಾಟಕ ಭಾಗದಲ್ಲಿ ಶೈಕ್ಷಣಿಕ ಹಾಗೂ ಆರೋಗ್ಯ ಕ್ಷೇತ್ರದಲ್ಲಿ ಗಣನೀಯ ಅಭಿವೃದ್ದಿಯಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. ಕಲಬುರಗಿಯಲ್ಲಿ ಏರ್ಪಡಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಿದ್ದ ಅವರು, ಕಲಂ 371 ( ಜೆ ) ಜಾರಿಗೆ ಬಂದ ಮೇಲೆ ಲಕ್ಷಾಂತರ ಜನ ನಿರುದ್ಯೋಗಿ ಯುವಕರಿಗೆ ಉದ್ಯೋಗ …
Read More »ಇಂದು ಸತ್ಯಕ್ಕೆ ಜಯ ಸಿಕ್ಕಿದೆ: ಮಧ್ಯಂತರ ಜಾಮೀನು ನಂತರ ಸಿ.ಟಿ.ರವಿ ಮೊದಲ ಪ್ರತಿಕ್ರಿಯೆ
ಬೆಂಗಳೂರು: ಇಂದು ಸತ್ಯಕ್ಕೆ ಜಯ ಸಿಕ್ಕಿದೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಹೇಳಿದ್ದಾರೆ. ಹೈಕೋರ್ಟ್ ನಿಂದ ಬಿಡುಗಡೆಗೆ ಮಧ್ಯಂತರ ಆದೇಶ ನೀಡಿದ ಬಗ್ಗೆ ಮೊದಲ ಪ್ರತಿಕ್ರಿಯೆ ನೀಡಿದ ಅವರು, ನನ್ನನ್ನು ಒಬ್ಬ ಟೆರರಿಸ್ಟ್ ರೀತಿ ನಡೆಸಿಕೊಂಡರು ಎಂದು ಕಿಡಿ ಕಾರಿದ್ದಾರೆ. ರಾಜಕೀಯ, ಸೈದ್ಧಾಂತಿಕವಾಗಿ ನಾನು ಟೀಕೆ ಮಾಡುತ್ತೇನೆ ಹೊರತೂ ವೈಯಕ್ತಿಕವಾಗಿ ಟೀಕೆ ಮಾಡಿಲ್ಲ. ನಾನು ಎಂದಿಗೂ ವೈಯಕ್ತಿಕವಾಗಿ ಟೀಕೆ ಮಾಡುವುದಿಲ್ಲ. ನನ್ನ ಬಗ್ಗೆ ಚಿಕ್ಕಮಗಳೂರಿನಲ್ಲಿ ಕೇಳಿ ತಿಳಿದುಕೊಳ್ಳಿ. …
Read More »ರಾಜ್ಯದಲ್ಲಿ ಶಿಕ್ಷಕರ ಹುದ್ದೆಗಳ ಭರ್ತಿಗೆ ಕ್ರಮ: ಸಚಿವ ಮಧು ಬಂಗಾರಪ್ಪ
ಬೆಳಗಾವಿ: ರಾಜ್ಯದ ಸರಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772ಶಿಕ್ಷಕರ ಹುದ್ದೆಗಳು ಖಾಲಿ ಇವೆ. ಆ ಹುದ್ದೆಗಳ ಭರ್ತಿಗೆ ಕ್ರಮ ವಹಿಸಲಾಗಿದೆ. ಪರ್ಯಾಯವಾಗಿ ಅತಿಥಿ ಶಿಕ್ಷಕರ ನೇಮಕ ಮಾಡಿಕೊಳ್ಳಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್.ಮಧು ಬಂಗಾರಪ್ಪ ತಿಳಿಸಿದ್ದಾರೆ. ವಿಧಾನಸಭೆಯ ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿ ಸದಸ್ಯ ಕೆ.ಗೋಪಾಲಯ್ಯ ಪರವಾಗಿ ಸದಸ್ಯ ಭೈರತಿ ಬಸವರಾಜು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ರಾಜ್ಯದಲ್ಲಿ ಒಟ್ಟು 46,755 ಶಾಲೆಗಳಿದ್ದು, 1,65,618 ಶಿಕ್ಷಕರ ಹುದ್ದೆಗಳಿವೆ. …
Read More »ರಾಜ್ಯದ ಎಲ್ಲಾ ಮೆಟ್ರೋ ನಿಲ್ದಾಣಗಳಲ್ಲಿ ಮಹಿಳೆಯರು, ಮಕ್ಕಳಿಗೆ ಹಾಲುಣಿಸುವ ಆರೈಕೆ ಕೇಂದ್ರ ತೆರೆಯಲು ಸರ್ಕಾರ ಚಿಂತನೆ
ಬೆಂಗಳೂರು : ರಾಜ್ಯದ ಎಲ್ಲಾ ಮೆಟ್ರೋ ನಿಲ್ದಾಣಗಳಲ್ಲಿ ಮಹಿಳೆಯರು, ಮಕ್ಕಳಿಗೆ ಹಾಲುಣಿಸುವ ಆರೈಕೆ ಕೇಂದ್ರ ತೆರೆಯಲು ಸರ್ಕಾರ ಚಿಂತನೆ ನಡೆಸಿದೆ. ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯೆ ಉಮಾಶ್ರೀ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉಪ ಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್ ಉತ್ತರ ನೀಡಿದರು. ರಾಜ್ಯದ ಎಲ್ಲಾ ಮೆಟ್ರೋ ನಿಲ್ದಾಣಗಳಲ್ಲಿ ಮಹಿಳೆಯರು, ಮಕ್ಕಳಿಗೆ ಹಾಲುಣಿಸುವ ಆರೈಕೆ ಕೇಂದ್ರ ತೆರೆಯುವ ಕುರಿತ ಸಲಹೆಯನ್ನು ಸರ್ಕಾರವು ಗಂಭೀರವಾಗಿ ಪರಿಗಣಿಸಲಿದೆ. ಪ್ರಸ್ತುತ ನಾಡಪ್ರಭು ಕೆಂಪೇಗೌಡ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





