ಬೆಂಗಳೂರು ಕೆ.ಆರ್. ಪುರದ ಎನ್ಆರ್ಐ ಲೇಔಟ್ನಲ್ಲಿ ಎಲೆಕ್ಟ್ರಿಕ್ ಬೈಕ್ಗಳನ್ನು ನಿಲ್ಲಿಸಿದ್ದ ಗ್ಯಾರೇಜ್ಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡು ನೂರಾರು ಬೈಕ್ಗಳು ಸುಟ್ಟು ಕರಕಲಾಗಿವೆ. ಮಂಗಳವಾರ ರಾತ್ರಿ ಸುಮಾರು 9 ಗಂಟೆಗೆ ಘಟನೆ ನಡೆದಿದ್ದು, ಕ್ಷಣಾರ್ಧದಲ್ಲೇ ಬೆಂಕಿ ಇಡೀ ಗ್ಯಾರೇಜ್ಗೆ ವ್ಯಾಪಿಸಿದೆ. ಮಾಹಿತಿ ತಿಳಿಯುತ್ತಿದ್ದಂತೆ ಎರಡು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿ ಸತತ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿವೆ. ಬೆಂಕಿಯ ತೀವ್ರತೆಗೆ ಪಕ್ಕದಲ್ಲಿದ್ದ ಡಾ. ಸ್ಮಿತಾ ಕಿರಣ್ ಸ್ಪೆಷಾಲಿಟಿ ಹೆಲ್ತ್ ಕೇರ್ಗೂ …
Read More »ಶಿವಮೊಗ್ಗದಲ್ಲಿ ಎಣ್ಣೆ ಏಟಲ್ಲಿ, ಸ್ನೇಹಿತನಿಗೆ ರಾಡ್ ನಿಂದ ಥಳಿಸಿ, ಮೈಮೇಲೆ ನಿಂತು ಅಟ್ಟಹಾಸ ಮೆರೆದ ಭೂಪ!
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಗರ್ತಿಕೆರೆ ಬಳಿ ಮದ್ಯಪಾನ ಮಾಡುತ್ತಿದ್ದ ಸ್ನೇಹಿತರಿಬ್ಬರ ನಡುವೆ ಜಗಳ ನಡೆದು, ರಾಘವೇಂದ್ರ ಎಂಬಾತ ಮಂಜುನಾಥ್ ಮೇಲೆ ಕಬ್ಬಿಣದ ರಾಡ್ನಿಂದ ಹಲ್ಲೆ ನಡೆಸಿದ್ದಾನೆ. ರಕ್ತಸಿಕ್ತವಾಗಿ ಬಿದ್ದಿದ್ದ ಮಂಜುನಾಥನ ಎದೆಯ ಮೇಲೆ ಹತ್ತಿ ನಿಂತು ವಿಕೃತಿ ಮೆರೆದಿದ್ದಾನೆ. ಬಳಿಕ ಪ್ರಜ್ಞಾಹೀನನಾಗಿದ್ದ ಮಂಜುನಾಥನನ್ನು ಹೈವೇ ರಸ್ತೆಯಲ್ಲಿ ಎಳೆದುಕೊಂಡು ಹೋಗಲು ಯತ್ನಿಸಿದ್ದಾನೆ. ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ರಾಘವೇಂದ್ರನನ್ನು ಬಂಧಿಸಿದ್ದಾರೆ. ಗಂಭೀರವಾಗಿ ಗಾಯಗೊಂಡ ಮಂಜುನಾಥನನ್ನು ಶಿವಮೊಗ್ಗದ ಮೆಕ್ಗಾನ್ ಆಸ್ಪತ್ರೆಗೆ …
Read More »ಚಿಕ್ಕಬಳ್ಳಾಪುರ: ವರದಕ್ಷಿಣೆ ಕಿರುಕುಳಕ್ಕೆ ಗೃಹಿಣಿ ಬಲಿ; ಮಗುವನ್ನು ಪೋಷಕರ ವಶಕ್ಕೆ ನೀಡುವಂತೆ ಡೆತ್ನೋಟ್ನಲ್ಲಿ ಉಲ್ಲೇಖ
ಚಿಕ್ಕಬಳ್ಳಾಪುರ : ಜಿಲ್ಲೆಯ ಚಿಂತಾಮಣಿ ನಗರದ ಸೊಣ್ಣಶೆಟ್ಟಿಹಳ್ಳಿ ಬಡಾವಣೆಯಲ್ಲಿ ವರದಕ್ಷಿಣೆ ಕಿರುಕುಳ ಹಾಗೂ ಕೌಟುಂಬಿಕ ಕಲಹದಿಂದ ಮನನೊಂದ 26 ವರ್ಷದ ಮಮತಾಶ್ರೀ ಎಂಬ ಗೃಹಿಣಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ವರದಿಯಾಗಿದೆ. ಐದು ವರ್ಷಗಳ ಹಿಂದೆ ಮೋಹನ್ ರೆಡ್ಡಿ ಎಂಬುವವರೊಂದಿಗೆ ವಿವಾಹವಾಗಿದ್ದ ಈ ದಂಪತಿಗೆ ನಾಲ್ಕು ವರ್ಷದ ಗಂಡು ಮಗುವಿದೆ. ಕಳೆದ ಕೆಲ ದಿನಗಳಿಂದ ಪತಿ-ಪತ್ನಿ ನಡುವೆ ಉಂಟಾಗಿದ್ದ ವೈಮನಸ್ಸು ಹಾಗೂ ಕೌಟುಂಬಿಕ ಕಲಹದಿಂದ ನೊಂದಿದ್ದ ಮಮತಾಶ್ರೀ, …
Read More »ಬೆಂಗಳೂರು: ಕರ್ತವ್ಯನಿರತ ಮಹಿಳಾ ಪಿಎಸ್ಐ ಮೇಲೆ ಹಲ್ಲೆ; ಬಾಡಿ ಶೇಮಿಂಗ್ ಮಾಡಿದ ನಾಲ್ವರ ವಿರುದ್ಧ FIR
ಬೆಂಗಳೂರು: ಕರ್ತವ್ಯದಲ್ಲಿದ್ದ ಮಹಿಳಾ PSI ನಯನಾ ಅವರ ಮೇಲೆ ಹಲ್ಲೆ ನಡೆಸಿ, ಬಾಡಿ ಶೇಮಿಂಗ್ ಮಾಡಿದ ಆರೋಪ ಕೇಳಿಬಂದಿದೆ. ಭಟ್ಟರಹಳ್ಳಿ ಜಂಕ್ಷನ್ ಬಳಿ ಜಗಳ ಬಿಡಿಸಲು ತೆರಳಿದ್ದ ವೇಳೆ ಘಟನೆ ನಡೆದಿದೆ. ಆರೋಪಿಗಳು ನಯನಾ ಅವರನ್ನು ಅವಾಚ್ಯವಾಗಿ ನಿಂದಿಸಿ, ‘ಎಮ್ಮೆ ತರ ಇದ್ದೀಯಾ’ ಎಂದು ಅವಮಾನಿಸಿದ್ದಾರೆ ಎನ್ನಲಾಗಿದೆ. ಅಲ್ಲದೆ, ಸಸ್ಪೆಂಡ್ ಮಾಡಿಸುವುದಾಗಿ ಬೆದರಿಕೆ ಹಾಕಿದ್ದಾರೆ ಎಂಬ ಆರೋಪವೂ ಇದೆ. ಘಟನೆಯ ದೃಶ್ಯ ಬಾಡಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಹೇಮಂತ್ ರೆಡ್ಡಿ, ರಾಧಾಕೃಷ್ಣ …
Read More »ಕೆ.ಆರ್. ಪುರಂನಲ್ಲಿ ಟ್ರಾಫಿಕ್ ಪೊಲೀಸ್ ದೌರ್ಜನ್ಯ- ಜಗಳ ಬಿಡಿಸಲು ಹೋದ ವಿದ್ಯಾರ್ಥಿ ಮೇಲೆಯೇ ಹಲ್ಲೆ ನಡೆಸಿದ ಪಿಎಸ್ಐ!
ಬೆಂಗಳೂರು: ಸಾರ್ವಜನಿಕರ ನಡುವಿನ ಜಗಳ ಬಿಡಿಸಲು ಮಧ್ಯಪ್ರವೇಶಿಸಿದ ಕಾಲೇಜು ವಿದ್ಯಾರ್ಥಿಯೊಬ್ಬನ ಮೇಲೆ ಕೆ.ಆರ್. ಪುರಂ ಸಂಚಾರಿ ಠಾಣೆಯ ಪಿಎಸ್ಐ ನಯನಾ ದೌರ್ಜನ್ಯ ಎಸಗಿದ್ದಾರೆ ಎನ್ನಲಾದ ಘಟನೆ ತೀವ್ರ ಚರ್ಚೆಗೆ ಕಾರಣವಾಗಿದೆ. ಆಗಸ್ಟ್ 12ರಂದು ಬೆಳಿಗ್ಗೆ ಭಟ್ಟರಹಳ್ಳಿ ಸಿಗ್ನಲ್ನಿಂದ ಕೆ.ಆರ್. ಪುರಂ ಕಡೆಗೆ ಹೋಗುವ ರಸ್ತೆಯಲ್ಲಿ ಇಬ್ಬರು ಕಾರು ಮಾಲೀಕರ ನಡುವೆ ಜಗಳ ನಡೆದಿತ್ತು. ಇದನ್ನು ಬಿಡಿಸಲು ವಿದ್ಯಾರ್ಥಿ ರಾಹುಲ್ ಮಧ್ಯಪ್ರವೇಶಿಸಿದ್ದ. ಈ ವೇಳೆ ಸ್ಥಳಕ್ಕೆ ಬಂದ ಪಿಎಸ್ಐ ನಯನಾ, ವಿಚಾರಣೆ …
Read More »ಮಹಿಳೆ ಜೊತೆ ಅಸಭ್ಯ ವರ್ತನೆ; ತಮ್ಮೇನಹಳ್ಳಿ ಸ್ವಾಮೀಜಿಗೆ ಜನರಿಂದ ಗೂಸಾ!
ಚಿತ್ರದುರ್ಗ: ಮಹಿಳೆಯೊಬ್ಬರೊಂದಿಗೆ ಅಸಭ್ಯವಾಗಿ ವರ್ತಿಸಿದ ಆರೋಪದ ಹಿನ್ನೆಲೆಯಲ್ಲಿ ಮೊಳಕಾಲ್ಮೂರು ತಾಲೂಕಿನ ತಮ್ಮೇನಹಳ್ಳಿ ಮಠದ ಜಮ್ಮಣ್ಣ ಸ್ವಾಮೀಜಿಗೆ ಮಹಿಳೆಯ ಸಂಬಂಧಿಕರು ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಬಳ್ಳಾರಿ ಮೂಲದ ಮಹಿಳೆಯ ಸಂಬಂಧಿಕರು ಸ್ವಾಮೀಜಿಯನ್ನು ಭೇಟಿಯಾಗಲು ತೆರಳಿದ್ದ ವೇಳೆ, ಮಹಿಳೆಯೊಂದಿಗೆ ಸ್ವಾಮೀಜಿ ಅನುಚಿತವಾಗಿ ವರ್ತಿಸಿದ್ದಾರೆ ಎನ್ನಲಾಗಿದೆ. ಈ ವಿಷಯ ತಿಳಿದ ಬಳಿಕ ಆಕೆಯ ಸಂಬಂಧಿಕರು ಸ್ವಾಮೀಜಿಯನ್ನು ಥಳಿಸಿದ್ದಾರೆ ಎಂದು ವರದಿಯಾಗಿದೆ. ಇನ್ನು ಜಮ್ಮಣ್ಣ ಸ್ವಾಮೀಜಿ ವಾಮಾಚಾರ ಹಾಗೂ ಅನಾರೋಗ್ಯ ನಿವಾರಣೆ ಮಾಡುವುದಾಗಿ ಹೇಳಿಕೊಂಡು …
Read More »14 ವರ್ಷ ಜೈಲು ಶಿಕ್ಷೆ ಅನುಭವಿಸಿದ್ರು ಬದಲಾಗಲಿಲ್ಲ; ತಂದೆಯನ್ನು ಕೊಲೆಗೈದು ಬಾವಿಗೆ ಎಸೆದ ಮಗ!
ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ತುಮರಿ ಸಮೀಪದ ಗೊರಗೋಡಿನಲ್ಲಿ ಜೈಲಿನಿಂದ ಬಿಡುಗಡೆಯಾಗಿ ಬಂದಿದ್ದ ತಂದೆಯನ್ನು ಮಗನೇ ಕೊಲೆ ಮಾಡಿರುವ ಆರೋಪ ಕೇಳಿಬಂದಿದೆ. ಮೃತರನ್ನು ಸುಬ್ರಾಯ (55) ಎಂದು ಗುರುತಿಸಲಾಗಿದ್ದು, ಆರೋಪಿ ಮಗ ಜಯಂತ್ನನ್ನು ಕಾರ್ಗಲ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ತಂದೆ-ಮಗನ ನಡುವೆ ಜಗಳ ನಡೆದ ವೇಳೆ ಜಯಂತ್ ಕತ್ತಿ ಹಾಗೂ ಕೋಲಿನಿಂದ ತಂದೆಯ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ಬಳಿಕ ಮೃತದೇಹವನ್ನು ಚಿಕ್ಕಪ್ಪನ ಜಮೀನಿನಲ್ಲಿದ್ದ ಬಾವಿಗೆ ಎಸೆದಿದ್ದಾಗಿ …
Read More »ಪೊಲೀಸ್ ಸೋಗಿನಲ್ಲಿ ಚಿನ್ನಾಭರಣ ಕಳ್ಳತನ – ಇಬ್ಬರು ಅಂತರರಾಜ್ಯ ಕಳ್ಳರ ಬಂಧನ
ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಪೊಲೀಸರ ಸೋಗಿನಲ್ಲಿ ಮಹಿಳೆಯರನ್ನು ವಂಚಿಸಿ ಚಿನ್ನಾಭರಣ ಕಳವು ಮಾಡುತ್ತಿದ್ದ ಆಂಧ್ರಪ್ರದೇಶ ಮೂಲದ ಸೈಯದ್ ಅಬ್ಬಾಸ್ ಅಲಿ ಹಾಗೂ ಹುಸೇನ್ ಭಾಷಾ ಎಂಬುವರನ್ನು ಪೇಪರ್ ಟೌನ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ ₹4.35 ಲಕ್ಷ ಮೌಲ್ಯದ 40 ಗ್ರಾಂ ಚಿನ್ನದ ಸರ ವಶಪಡಿಸಿಕೊಳ್ಳಲಾಗಿದೆ. ತಿಮ್ಲಾಪುರ ರಸ್ತೆಯಲ್ಲಿ ಒಂಟಿಯಾಗಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯನ್ನು ಬೈಕ್ನಲ್ಲಿ ಬಂದ ಆರೋಪಿಗಳು ತಡೆದು, ತಾವು ಪೊಲೀಸರು ಎಂದು ಪರಿಚಯಿಸಿಕೊಂಡಿದ್ದರು. ಸರಗಳ್ಳತನದ ಭೀತಿ ಮೂಡಿಸಿ …
Read More »ಆನ್ಲೈನ್ ಹೂಡಿಕೆ| 19.59 ಲಕ್ಷ ರೂ. ವಂಚನೆ; ಪ್ರಕರಣ ದಾಖಲು
ಉಡುಪಿ, ಆ.15: ಆನ್ಲೈನ್ ಹೂಡಿಕೆ ಹೆಸರಿನಲ್ಲಿ ವ್ಯಕ್ತಿಯೊಬ್ಬರಿಗೆ ಲಕ್ಷಾಂತರ ರೂ. ವಂಚನೆ ಎಸಗಿರುವ ಬಗ್ಗೆ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಂದೀಪ (35) ಎಂಬವರು 2024ರ ಅಗಸ್ಟ್ ತಿಂಗಳಿನಲ್ಲಿ ಹೆಚ್ಚಿನ ಲಾಭ ಸಿಗುವುದಾಗಿ ನಂಬಿ ಆನ್ಲೈನ್ ಹೂಡಿಕೆ ಮಾಡಿದ್ದು, ಇವರು 2024ರ ಸೆ.5ರಿಂದ 2025ರ ಫೆ.8ರವರೆಗೆ ಒಟ್ಟು 19,59,320ರೂ. ಹಣವನ್ನು ಆರೋಪಿಗಳು ಸೂಚಿಸಿದ ಖಾತೆಗೆ ವರ್ಗಾವಣೆ ಮಾಡಿದ್ದರು. ಆದರೆ ಆರೋಪಿಗಳು ಹೂಡಿಕೆ ಮಾಡಿದ ಹಣವನ್ನಾಗಲೀ ಲಾಭಾಂಶ …
Read More »ಕೋಲಾರ: ವರ್ಕ್ ಫ್ರಂ ಹೋಂ, ಹಣ ಡಬಲ್ ಆಮಿಷ; ಕೋಟ್ಯಂತರ ರೂ ವಂಚನೆ: ನಾಲ್ವರ ಬಂಧನ
ಬೆಂಗಳೂರು, ಆಗಸ್ಟ್ 15: ಮನೆಯಿಂದಲೇ ಪ್ಯಾಕಿಂಗ್ ಕೆಲಸ ನೀಡಿ ಹಣ ಗಳಿಸುವ ಅವಕಾಶ ಹಾಗೂ ಹೂಡಿಕೆ ಮಾಡಿದ ಹಣವನ್ನು ದುಪ್ಪಟ್ಟು ಮಾಡುವುದಾಗಿ ನಂಬಿಸಿ ಸಾವಿರಾರು ಜನರಿಗೆ ₹50 ಕೋಟಿಗೂ ಅಧಿಕ ವಂಚಿಸಿದ ಆರೋಪದಡಿ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ‘ಶ್ರೀ ಕಾಳಿಕಾದೇವಿ ಎಂಟರ್ಪ್ರೈಸಸ್’ ಹೆಸರಿನಲ್ಲಿ ಊದುಬತ್ತಿ, ಮೆಣದಬತ್ತಿ, ಪೇಪರ್ ಪ್ಲೇಟ್ ಪ್ಯಾಕಿಂಗ್ ಕೆಲಸ ನೀಡುವುದಾಗಿ ಹೇಳಿ ಗ್ರಾಹಕರಿಂದ ಲಕ್ಷಾಂತರ ರೂ. ಠೇವಣಿ ಪಡೆಯಲಾಗುತ್ತಿತ್ತು. ಕೋಲಾರ, ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ 7–8 …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





