ಬೆಳಗಾವಿ: ರೈತರು ಕೈಗಾರಿಕಾ ಉದ್ದೇಶಗಳಿಗೆ ಜಮೀನು ನೀಡುವಾಗ ಭೂ ಪರಿಹಾರ ಬೇಡ ಎಂದರೆ ಅಂಥವರಿಗೆ ಅಭಿವೃದ್ಧಿಪಡಿಸಿದ 10781 ಚದರ ಅಡಿ ಜಮೀನನ್ನು ಸರ್ಕಾರ ನೀಡುತ್ತಿದೆ ಎಂದು ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಹೇಳಿದರು. ವಿಧಾನಪರಿಷತ್ನಲ್ಲಿಂದು ಪ್ರಶ್ನೋತ್ತರ ಅವಧಿಯಲ್ಲಿ ಭಾರತಿ ಶೆಟ್ಟಿ ಪ್ರಶ್ನೆಗೆ ಉತ್ತರಿಸಿದ ಅವರು, ಭೂ ಸ್ವಾಧೀನ ಪ್ರಕ್ರಿಯೆ ವೇಳೆ ರೈತರಿಗೆ ಮಾರುಕಟ್ಟೆ ದರದಂತೆ ಪರಿಹಾರ ನೀಡಲಾಗುತ್ತದೆ. ಒಂದು ವೇಳೆ ಯಾರಾದರೂ ನಮಗೆ ಪರಿಹಾರ ಬೇಡ ಎಂದರೆ ನಮ ಇಲಾಖೆ …
Read More »ಒಂದು ರಾಷ್ಟ್ರ, ಒಂದು ಚುನಾವಣೆ ಮಸೂದೆಯನ್ನು ಜಂಟಿ ಸಂಸದೀಯ ಸಮಿತಿಗೆ ಕಳುಹಿಸಲು ಸರ್ಕಾರ ಸಿದ್ಧ: ಕೇಂದ್ರ ಸಚಿವ ಅಮಿತ್ ಶಾ
ನವದೆಹಲಿ: ಒಂದು ರಾಷ್ಟ್ರ, ಒಂದು ಚುನಾವಣೆ ಮಸೂದೆ’ಯನ್ನು ವಿಸ್ತೃತ ಸಮಾಲೋಚನೆಗಾಗಿ ಜಂಟಿ ಸಂಸದೀಯ ಸಮಿತಿಗೆ (ಜೆಪಿಸಿ) ಕಳುಹಿಸಲು ಸರ್ಕಾರ ಸಿದ್ಧವಾಗಿದೆ ಎಂದು ಲೋಕಸಭೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ತಿಳಿಸಿದರು. ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಅವರು ಏಕಕಾಲದಲ್ಲಿ ಚುನಾವಣೆ ನಡೆಸಲು ಅನುವು ಮಾಡಿಕೊಡಲು ಸಂವಿಧಾನ (ನೂರ ಇಪ್ಪತ್ತೊಂಬತ್ತು ತಿದ್ದುಪಡಿ) ಮಸೂದೆ, 2024 ಮತ್ತು ಕೇಂದ್ರಾಡಳಿತ ಪ್ರದೇಶಗಳ ಕಾನೂನು (ತಿದ್ದುಪಡಿ) ಮಸೂದೆ, 2024 ಅನ್ನು ಲೋಕಸಭೆಯಲ್ಲಿ …
Read More »ನಾಳೆ ಸುವರ್ಣಸೌಧಕ್ಕೆ ಬರಲಿರುವ 100 ಗೃಹಲಕ್ಷ್ಮಿ ಫಲಾನುಭವಿಗಳು: ಸಚಿವೆ ಲಕ್ಷ್ಮೀ ಹೆಬ್ಬಾಳಕರ್
ಬೆಳಗಾವಿ: ಸರಕಾರ ಜಾರಿಗೆ ತಂದ ಗೃಹಲಕ್ಷ್ಮೀ ಯೋಜನೆ ಯಶಸ್ಸಾಗಿದೆ. ಹಲವು ಜನ ಫಲಾನುಭವಿಗಳು ಸರಕಾರವನ್ನು ಹರಸುತ್ತಿದ್ದಾರೆ. ನಾಳೆ (ಬುಧವಾರ) 100 ಜನ ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳು ಸುವರ್ಣಸೌಧಕ್ಕೆ ಬರುತ್ತಿದ್ದಾರೆ. ಅವರೊಂದಿಗೆ ಸಮಯ ಕಳೆಯುತ್ತೇನೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಬೆಳಗಾವಿಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹೋಳಿಗೆ ಊಟವನ್ನು ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳಿಗೆ ಮಾಡಿಸಲಾಗುವುದು. ಬೋರವೆಲ್, ಗಿರಣಿ ಸೇರಿದಂತೆ ಹಲವು ಉದ್ಯೋಗಿನಿ ಮಹಿಳೆಯರಿಗೆ …
Read More »ರಾಜ್ಯದಲ್ಲಿ ಯಾವುದೇ ಗ್ರಾಮೀಣ ನಗರ ಪ್ರದೇಶಗಳ ಹೊಸ ಬಡಾವಣೆ ನಿರ್ಮಾಣಕ್ಕೆ ನೂತನ ಕಾಯ್ದೆ ಜಾರಿ
ಬೆಳಗಾವಿ: ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಯಾವುದೇ ನಗರ ಅಥವಾ ಗ್ರಾಮೀಣ ಪ್ರದೇಶಗಳಲ್ಲಿ ಹೊಸದಾಗಿ ಸರ್ಕಾರಿ ಇಲ್ಲವೇ ಖಾಸಗಿ ಬಡಾವಣೆ ನಿರ್ಮಿಸುವಾಗ ಮೂಲ ಸೌಕರ್ಯ ಕಲ್ಪಿಸುವ ಕುರಿತ ಹೊಸ ಕಾನೂನನ್ನು ಜಾರಿಗೆ ತರುವ ಅಗತ್ಯವಿದೆ ಎಂದು ಕರ್ನಾಟಕ ವಿಧಾನ ಮಂಡಲದ ಸ್ಥಳೀಯ ಸಂಸ್ಥೆಗಳ ಮತ್ತು ಪಂಚಾಯತ್ ರಾಜ್ ಸಂಸ್ಥೆಗಳ ಸಮಿತಿ ಶಿಫಾರಸ್ಸು ಮಾಡಿದೆ. ಕರ್ನಾಟಕ ವಿಧಾನಮಂಡಲದ ಸ್ಥಳೀಯ ಸಂಸ್ಥೆಗಳ ಮತ್ತು ಪಂಚಾಯತ್ರಾಜ್ ಸಂಸ್ಥೆಗಳ ಸಮಿತಿಯ ಅಧ್ಯಕ್ಷ ರಿಜ್ವಾನ್ ಅರ್ಷದ್ ಅವರು, ತಮ …
Read More »ಚಳಿಗಾಲ ಅಧಿವೇಶನ: ಬಸವನ ಬಾಗೇವಾಡಿ ಅಭಿವೃದ್ದಿ ಪ್ರಾಧಿಕಾರ ವಿಧೇಯಕ ಅಂಗೀಕಾರ
ಬೆಳಗಾವಿ : ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬಜೆಟ್ ಭಾಷಣದಲ್ಲಿ ಘೋಷಿಸಿದಂತೆ ಪ್ರತ್ಯೇಕ ಬಸವನ ಬಾಗೇವಾಡಿ ಅಭಿವೃದ್ಧಿ ಪ್ರಾಧಿಕಾರ ವಿಧೇಯಕವನ್ನು ವಿಧಾನ ಸಭೆಯಲ್ಲಿ ಸೋಮವಾರ ಅಂಗೀಕರಿಸಲಾಗಿದೆ. ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು 2024ನೇ ಸಾಲಿನ ಬಸವನ ಬಾಗೇವಾಡಿ ಅಭಿವೃದ್ಧಿ ಪ್ರಾಧಿಕಾರ ವಿಧೇಯಕವನ್ನು ವಿಧಾನ ಸಭೆಯಲ್ಲಿ ಪರ್ಯಾಲೋಚನೆ ಮಂಡಿಸಿ, ಕೂಡಲ ಸಂಗಮ ಅಭಿವೃದ್ಧಿ ಪ್ರಾಧಿಕಾರದ ಜೊತೆಯಲ್ಲೇ ಬಸವನ ಬಾಗೇವಾಡಿ ಅಭಿವೃದ್ಧಿಯನ್ನು ಸದ್ಯ ಕೈಗೊಳ್ಳಲಾಗುತ್ತಿತ್ತು. ಆದರೆ ಬಸವನ ಬಾಗೇವಾಡಿ ಇತಿಹಾಸವನ್ನು ಜನರಿಗೆ ಪರಿಚಯಿಸುವ ಹಾಗೂ …
Read More »ಬೆಳಗಾವಿಯಲ್ಲಿ 20 ಕೋಟಿ ರೂ. ವೆಚ್ಚದಲ್ಲಿ ಬಾಲಭವನ ನಿರ್ಮಾಣಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಶಂಕುಸ್ಥಾಪನೆ
ಬೆಳಗಾವಿ: ಬೆಂಗಳೂರಿನ ಬಾಲಭವನಕ್ಕಿಂತ ಸುಂದರವಾಗಿ, ವಿಶಿಷ್ಟವಾಗಿ ಬೆಳಗಾವಿ ಬಾಲಭವನ ನಿರ್ಮಿಸಬೇಕೆನ್ನುವುದು ನನ್ನ ಸಂಕಲ್ಪ. 20 ಕೋಟಿ ರೂಪಾಯಿ ವೆಚ್ಚದಲ್ಲಿ ಸುಸಜ್ಜಿತ ಬಾಲಭವನ ಬೆಳಗಾವಿಯಲ್ಲಿ ನಿರ್ಮಾಣಗೊಳ್ಳಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಬೆಳಗಾವಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಬೆಂಗಳೂರಿನ ಜವಾಹರ ಬಾಲಭವನ ಸೊಸೈಟಿ, ನಿರ್ಮಿತಿ ಕೇಂದ್ರ ಹಾಗೂ ಜಿಲ್ಲಾ ಬಾಲ ಭವನ ಸಮಿತಿ ಸಂಯುಕ್ತ ಆಶ್ರಯದಲ್ಲಿ …
Read More »ಕೆ ಪಿ ಎಸ್ ಸಿ ಮೂಲಕ ಸಾರಿಗೆ ಇಲಾಖೆ ನೇಮಕಾತಿಗೆ ಚಿಂತನೆ
ಬೆಂಗಳೂರು: ಸಾರಿಗೆ ಇಲಾಖೆಗೆ ಇನ್ನು ಮುಂದೆ ಕರ್ನಾಟಕ ಲೋಕಸೇವಾ ಆಯೋಗದ ಮೂಲಕ ನೇಮಕಾತಿ ಮಾಡಿಕೊಳ್ಳಲು ಚಿಂತನೆ ನಡೆದಿದೆ. ಗುತ್ತಿಗೆ ಆಧಾರದಲ್ಲಿ ಸಾರಿಗೆ ಇಲಾಖೆಗೆ ನೇಮಕಗೊಂಡ ನೌಕರರು ಕನಿಷ್ಠ ವೇತನ, ಪಿಎಫ್, ಇಎಸ್ಐ ಸೇರಿ ಯಾವುದೇ ಸೌಲಭ್ಯ ಪಡೆಯದೇ ವಂಚಿಸುವಂತಹ ಪ್ರಕರಣಗಳು ಕೋರ್ಟ್ ಮೆಟ್ಟಿಲೇರಿದ್ದು, ಈ ಮುಜುಗರದಿಂದ ತಪ್ಪಿಸಿಕೊಳ್ಳಲು ಕೆಪಿಎಸ್ಸಿ ಮೂಲಕ ನೇಮಕಾತಿ ಪ್ರಕ್ರಿಯೆ ನಡೆಸಲು ಸಾರಿಗೆ ಇಲಾಖೆ ಮುಂದಾಗಿದೆ. ಸಾರಿಗೆ ಇಲಾಖೆಯಲ್ಲಿ ಗ್ರೂಪ್ ಎ ಮತ್ತು ಡಿ ವರೆಗಿನ ಹುದ್ದೆಗಳಲ್ಲಿ …
Read More »ಇಂದು ಲೋಕಸಭೆಯಲ್ಲಿ ಮಹತ್ವದ ಒಂದು ರಾಷ್ಟ್ರ, ಒಂದು ಚುನಾವಣೆ ಮಸೂದೆ ಮಂಡನೆ
ನವದೆಹಲಿ : ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಇಂದು ಲೋಕಸಭೆಯಲ್ಲಿ ಮಹತ್ವದ ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಮಂಡಿಸಿದೆ. ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಅವರು ಇಂದು ಲೋಕಸಭೆಯಲ್ಲಿ ಮಸೂದೆ ಮಂಡಿಸಿದ್ದಾರೆ. ಒಂದು ರಾಷ್ಟ್ರ, ಒಂದು ಚುನಾವಣೆ’ ಮಸೂದೆ ಜಾರಿಗೆ ತರಲು ಮಾಜಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ನೇತೃತ್ವದಲ್ಲಿ ಸಮಿತಿ ರಚಿಸಲಾಗಿತ್ತು. 14ನೇ ಮಾರ್ಚ್ 2024 ರಂದು, ಸಮಿತಿಯು ಸಿದ್ಧಪಡಿಸಿದ 18,000 ಪುಟಗಳ …
Read More »ಕೃಷ್ಣಾ ಮೇಲ್ದಂಡೆ ಯೋಜನೆ-3 ಪೂರ್ಣಗೊಳಿಸಲು ಸರ್ಕಾರ ಬದ್ಧ: ಸಿಎಂ ಸಿದ್ದರಾಮಯ್ಯ
ಬೆಳಗಾವಿ : ಆಲಮಟ್ಟಿ ಜಲಾಶಯದ ನೀರಿನ ಸಂಗ್ರಹ ಮಟ್ಟವನ್ನು ಆರ್.ಎಲ್. 519.60 ಮೀ. ನಿಂದ 524.26 ಮೀ. ರವರೆಗೆ ಎತ್ತರಿಸಿ ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3 ಪೂರ್ಣಗೊಳಿಸಲು ಸರ್ಕಾರ ಬದ್ಧವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3 ರಡಿ ಭೂಸ್ವಾಧೀನ, ಪುನರ್ವಸತಿ ಮತ್ತು ಪುನರ್ ನಿರ್ಮಾಣ ಕುರಿತ ಸಭೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಹಂತ ಹಂತವಾಗಿ ಯೋಜನೆಯನ್ನು ಪೂರ್ಣಗೊಳಿಸಲಾಗುವುದು. ಯೋಜನೆಗಾಗಿ ಮುಳುಗಡೆ ಹೊಂದಲಿರುವ ಜಮೀನು, ಪುನರ್ವಸತಿ …
Read More »ಪಂಚಮಸಾಲಿ ಮೀಸಲಾತಿ: ಡಿ.21 ರಂದು ಪಂಚಮಸಾಲಿ ಶಾಸಕರ ಸಭೆ ಕರೆದ ಸಿಎಂ
ಬೆಂಗಳೂರು : ಒಂದೆಡೆ ಬೆಳಗಾವಿಯಲ್ಲಿ ಚಳಿಗಾಲ ಅಧಿವೇಶನ ನಡೆಯುತ್ತಿದ್ದು, ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಕಲ್ಪಿಸಬೇಕು ಎಂದು ಒತ್ತಾಯಿಸಿ ಬಸವಜಯ ಮೃತ್ಯುಂಜಯ ಸ್ವಾಮೀಜಿ ಅವರ ನೇತೃತ್ವದಲ್ಲಿ ಸದನದ ಹೊರಗೆ ಉಗ್ರ ಪ್ರತಿಭಟನೆ ನಡೆಯುತ್ತಿದೆ. ಸುವರ್ಣಾ ಸೌಧಕ್ಕೆ ಹೋರಾಟಗಾರರು ಮುತ್ತಿಗೆಗೆ ಯತ್ನಿಸಿದಾಗ ನಡೆದ ಲಾಠಿಚಾರ್ಜ್ ಘಟನೆ ಖಂಡಿಸಿ ಸಿಎಂ ಸಿದ್ದರಾಮಯ್ಯ ಹಾಗೂ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದೆ. ಇದರ ಬೆನ್ನಲ್ಲೇ ಸಿಎಂ ಅವರು ಇದೇ ಡಿ.21ರಂದು ಸಾಯಂಕಾಲ ಪಂಚಮಸಾಲಿ ಶಾಸಕರ ಸಭೆ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





