Breaking News

BigTv News

ಬೀದರ್ ನಲ್ಲಿ ರಾಷ್ಟ್ರೀಯ ಲೋಕ ಅದಾಲತ್: 73 ಸಾವಿರ ಪ್ರಕರಣಗಳ ಇತ್ಯರ್ಥ

ಬೀದರ್‌: ಜಿಲ್ಲೆಯಲ್ಲಿ ಡಿ. 14ರಂದು ಹಮ್ಮಿಕೊಂಡಿದ್ದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ 73,628 ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ ಎಂದು ಬೀದರ್‌ ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪ್ರಕಾಶ ಬನಸೋಡೆ ತಿಳಿಸಿದರು. ನಗರದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಕ್ಷಿದಾರರಿಗೆ ಒಟ್ಟು ₹23.43 ಕೋಟಿ ಪರಿಹಾರ ಒದಗಿಸಲಾಗಿದೆ ಎಂದು ಹೇಳಿದರು. ಒಟ್ಟು 10,191 ಪೆಂಡಿಂಗ್‌ ಪ್ರಕರಣಗಳನ್ನು ಇತ್ಯರ್ಥಗೊಳಿಸಿ ₹13.16 ಕೋಟಿ ವಸೂಲಾತಿ ಮತ್ತು ಪರಿಹಾರ ಒದಗಿಸಲಾಗಿದೆ. …

Read More »

ವಿಧಾನಸಭೆಯಲ್ಲಿ ಕರ್ನಾಟಕ ಭೂ ಕಂದಾಯ ತಿದ್ದುಪಡಿ ವಿಧೇಯಕಕ್ಕೆ ಅಂಗೀಕಾರ

ಬೆಳಗಾವಿ: ಕರ್ನಾಟಕ ಸರ್ಕಾರವು ರಾಜ್ಯದ ಭೂ ಕಂದಾಯ ಕಾಯ್ದೆಯಲ್ಲಿ ಕೆಲವು ಬದಲಾವಣೆಗಳನ್ನು ಮಾಡಿದೆ. ಈ ಬದಲಾವಣೆಗಳನ್ನು ‘ತಿದ್ದುಪಡಿ’ ಎಂದು ಕರೆಯಲಾಗುತ್ತದೆ. ಈ ತಿದ್ದುಪಡಿಗಳ ಮುಖ್ಯ ಉದ್ದೇಶಗಳು ಸರ್ಕಾರಿ ಜಮೀನುಗಳನ್ನು ಕಾಪಾಡುವುದು ಮತ್ತು ಸಣ್ಣ ಉದ್ದಿಮೆಗಳಿಗೆ ಸುಲಭವಾಗಿ ಕೆಲಸ ಮಾಡಲು ಅನುವು ಮಾಡಿಕೊಡುವುದು. ಸರ್ಕಾರಿ ಜಮೀನುಗಳ ರಕ್ಷಣೆ: ಈ ಹಿಂದೆ ಕೆಲವರು ಸರ್ಕಾರಿ ಜಮೀನುಗಳನ್ನು ತಮ್ಮ ಹೆಸರಿಗೆ ಮಾಡಿಕೊಳ್ಳಲು ಪ್ರಯತ್ನಿಸುತ್ತಿದ್ದರು. ಈ ತಿದ್ದುಪಡಿಯಿಂದ ಇದು ಸುಲಭವಾಗಿ ಸಾಧ್ಯವಾಗುವುದಿಲ್ಲ. ಸಣ್ಣ ಉದ್ದಿಮೆಗಳಿಗೆ ಸುಲಭ: …

Read More »

ಕೃಷಿ ಕ್ಷೇತ್ರಕ್ಕೆ ನ್ಯಾಯ ಒದಗಿಸುವಂತೆ ಆಗ್ರಹಿಸಿ ಸುವರ್ಣಸೌಧದ ಎದುರು ರೈತರ ಪ್ರತಿಭಟನೆ

ಬೆಳಗಾವಿ: ಕೃಷಿ ಕ್ಷೇತ್ರಕ್ಕೆ ನ್ಯಾಯ ಒದಗಿಸುವಂತೆ ಆಗ್ರಹಿಸಿ ರೈತ ಸಂಘಟನೆಗಳು ಬೆಳಗಾವಿ ಸುವರ್ಣ ವಿಧಾನಸೌಧದ ಎದುರು ಬೃಹತ್ ಪ್ರತಿಭಟನೆ ನಡೆಸಿದವು. ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ವತಿಯಿಂದ ಬೆಳಗಾವಿಯ ಸುವರ್ಣಸೌಧದ ಬಳಿ ರೈತರು ಪ್ರತಿಭಟನೆ ನಡೆಸಿದರು. ರೈತರು ಬೆಳೆದ ಬೆಳೆಗಳಿಗೆ ನ್ಯಾಯಯುತ ಬೆಲೆ ಸಿಗಬೇಕು. ಟನ್ ಕಬ್ಬಿಗೆ ಕಾರ್ಖಾನೆಗಳಿಂದ ಸರಕಾರಕ್ಕೆ ಹೋಗುತ್ತಿರುವ 5 ಸಾವಿರ ರೂ.ಗಳ ತೆರಿಗೆ ಹಣದಲ್ಲಿಯ 2 ಸಾವಿರ ರೂ.ಗಳನ್ನು ರೈತರಿಗೆ ನೀಡಬೇಕು. …

Read More »

ಭೂ ಪರಿಹಾರ ಬೇಡ ಎಂದವರಿಗೆ ಸರ್ಕಾರ ಜಮೀನು ನೀಡುತ್ತಿದೆ: ಸಚಿವ ಎಂ.ಬಿ.ಪಾಟೀಲ್‌

ಬೆಳಗಾವಿ: ರೈತರು ಕೈಗಾರಿಕಾ ಉದ್ದೇಶಗಳಿಗೆ ಜಮೀನು ನೀಡುವಾಗ ಭೂ ಪರಿಹಾರ ಬೇಡ ಎಂದರೆ ಅಂಥವರಿಗೆ ಅಭಿವೃದ್ಧಿಪಡಿಸಿದ 10781 ಚದರ ಅಡಿ ಜಮೀನನ್ನು ಸರ್ಕಾರ ನೀಡುತ್ತಿದೆ ಎಂದು ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಹೇಳಿದರು. ವಿಧಾನಪರಿಷತ್ನಲ್ಲಿಂದು ಪ್ರಶ್ನೋತ್ತರ ಅವಧಿಯಲ್ಲಿ ಭಾರತಿ ಶೆಟ್ಟಿ ಪ್ರಶ್ನೆಗೆ ಉತ್ತರಿಸಿದ ಅವರು, ಭೂ ಸ್ವಾಧೀನ ಪ್ರಕ್ರಿಯೆ ವೇಳೆ ರೈತರಿಗೆ ಮಾರುಕಟ್ಟೆ ದರದಂತೆ ಪರಿಹಾರ ನೀಡಲಾಗುತ್ತದೆ. ಒಂದು ವೇಳೆ ಯಾರಾದರೂ ನಮಗೆ ಪರಿಹಾರ ಬೇಡ ಎಂದರೆ ನಮ ಇಲಾಖೆ …

Read More »

ಒಂದು ರಾಷ್ಟ್ರ, ಒಂದು ಚುನಾವಣೆ ಮಸೂದೆಯನ್ನು ಜಂಟಿ ಸಂಸದೀಯ ಸಮಿತಿಗೆ ಕಳುಹಿಸಲು ಸರ್ಕಾರ ಸಿದ್ಧ: ಕೇಂದ್ರ ಸಚಿವ ಅಮಿತ್ ಶಾ

ನವದೆಹಲಿ: ಒಂದು ರಾಷ್ಟ್ರ, ಒಂದು ಚುನಾವಣೆ ಮಸೂದೆ’ಯನ್ನು ವಿಸ್ತೃತ ಸಮಾಲೋಚನೆಗಾಗಿ ಜಂಟಿ ಸಂಸದೀಯ ಸಮಿತಿಗೆ (ಜೆಪಿಸಿ) ಕಳುಹಿಸಲು ಸರ್ಕಾರ ಸಿದ್ಧವಾಗಿದೆ ಎಂದು ಲೋಕಸಭೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ತಿಳಿಸಿದರು. ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಅವರು ಏಕಕಾಲದಲ್ಲಿ ಚುನಾವಣೆ ನಡೆಸಲು ಅನುವು ಮಾಡಿಕೊಡಲು ಸಂವಿಧಾನ (ನೂರ ಇಪ್ಪತ್ತೊಂಬತ್ತು ತಿದ್ದುಪಡಿ) ಮಸೂದೆ, 2024 ಮತ್ತು ಕೇಂದ್ರಾಡಳಿತ ಪ್ರದೇಶಗಳ ಕಾನೂನು (ತಿದ್ದುಪಡಿ) ಮಸೂದೆ, 2024 ಅನ್ನು ಲೋಕಸಭೆಯಲ್ಲಿ …

Read More »

ನಾಳೆ ಸುವರ್ಣಸೌಧಕ್ಕೆ ಬರಲಿರುವ 100 ಗೃಹಲಕ್ಷ್ಮಿ ಫಲಾನುಭವಿಗಳು: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಳಗಾವಿ: ಸರಕಾರ ಜಾರಿಗೆ ತಂದ ಗೃಹಲಕ್ಷ್ಮೀ ಯೋಜನೆ ಯಶಸ್ಸಾಗಿದೆ. ಹಲವು ಜನ ಫಲಾನುಭವಿಗಳು ಸರಕಾರವನ್ನು ಹರಸುತ್ತಿದ್ದಾರೆ. ನಾಳೆ (ಬುಧವಾರ) 100 ಜನ ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳು ಸುವರ್ಣಸೌಧಕ್ಕೆ ಬರುತ್ತಿದ್ದಾರೆ. ಅವರೊಂದಿಗೆ ಸಮಯ ಕಳೆಯುತ್ತೇನೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಬೆಳಗಾವಿಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹೋಳಿಗೆ ಊಟವನ್ನು ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳಿಗೆ ಮಾಡಿಸಲಾಗುವುದು. ಬೋರವೆಲ್, ಗಿರಣಿ ಸೇರಿದಂತೆ ಹಲವು ಉದ್ಯೋಗಿನಿ ಮಹಿಳೆಯರಿಗೆ …

Read More »

ರಾಜ್ಯದಲ್ಲಿ ಯಾವುದೇ ಗ್ರಾಮೀಣ ನಗರ ಪ್ರದೇಶಗಳ ಹೊಸ ಬಡಾವಣೆ ನಿರ್ಮಾಣಕ್ಕೆ ನೂತನ ಕಾಯ್ದೆ ಜಾರಿ

ಬೆಳಗಾವಿ: ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಯಾವುದೇ ನಗರ ಅಥವಾ ಗ್ರಾಮೀಣ ಪ್ರದೇಶಗಳಲ್ಲಿ ಹೊಸದಾಗಿ ಸರ್ಕಾರಿ ಇಲ್ಲವೇ ಖಾಸಗಿ ಬಡಾವಣೆ ನಿರ್ಮಿಸುವಾಗ ಮೂಲ ಸೌಕರ್ಯ ಕಲ್ಪಿಸುವ ಕುರಿತ ಹೊಸ ಕಾನೂನನ್ನು ಜಾರಿಗೆ ತರುವ ಅಗತ್ಯವಿದೆ ಎಂದು ಕರ್ನಾಟಕ ವಿಧಾನ ಮಂಡಲದ ಸ್ಥಳೀಯ ಸಂಸ್ಥೆಗಳ ಮತ್ತು ಪಂಚಾಯತ್ ರಾಜ್ ಸಂಸ್ಥೆಗಳ ಸಮಿತಿ ಶಿಫಾರಸ್ಸು ಮಾಡಿದೆ. ಕರ್ನಾಟಕ ವಿಧಾನಮಂಡಲದ ಸ್ಥಳೀಯ ಸಂಸ್ಥೆಗಳ ಮತ್ತು ಪಂಚಾಯತ್ರಾಜ್ ಸಂಸ್ಥೆಗಳ ಸಮಿತಿಯ ಅಧ್ಯಕ್ಷ ರಿಜ್ವಾನ್ ಅರ್ಷದ್ ಅವರು, ತಮ …

Read More »

ಚಳಿಗಾಲ ಅಧಿವೇಶನ: ಬಸವನ ಬಾಗೇವಾಡಿ ಅಭಿವೃದ್ದಿ ಪ್ರಾಧಿಕಾರ ವಿಧೇಯಕ ಅಂಗೀಕಾರ

ಬೆಳಗಾವಿ : ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬಜೆಟ್ ಭಾಷಣದಲ್ಲಿ ಘೋಷಿಸಿದಂತೆ ಪ್ರತ್ಯೇಕ ಬಸವನ ಬಾಗೇವಾಡಿ ಅಭಿವೃದ್ಧಿ ಪ್ರಾಧಿಕಾರ ವಿಧೇಯಕವನ್ನು ವಿಧಾನ ಸಭೆಯಲ್ಲಿ ಸೋಮವಾರ ಅಂಗೀಕರಿಸಲಾಗಿದೆ. ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು 2024ನೇ ಸಾಲಿನ ಬಸವನ ಬಾಗೇವಾಡಿ ಅಭಿವೃದ್ಧಿ ಪ್ರಾಧಿಕಾರ ವಿಧೇಯಕವನ್ನು ವಿಧಾನ ಸಭೆಯಲ್ಲಿ ಪರ್ಯಾಲೋಚನೆ ಮಂಡಿಸಿ, ಕೂಡಲ ಸಂಗಮ ಅಭಿವೃದ್ಧಿ ಪ್ರಾಧಿಕಾರದ ಜೊತೆಯಲ್ಲೇ ಬಸವನ ಬಾಗೇವಾಡಿ ಅಭಿವೃದ್ಧಿಯನ್ನು ಸದ್ಯ ಕೈಗೊಳ್ಳಲಾಗುತ್ತಿತ್ತು. ಆದರೆ ಬಸವನ ಬಾಗೇವಾಡಿ ಇತಿಹಾಸವನ್ನು ಜನರಿಗೆ ಪರಿಚಯಿಸುವ ಹಾಗೂ …

Read More »

ಬೆಳಗಾವಿಯಲ್ಲಿ 20 ಕೋಟಿ ರೂ. ವೆಚ್ಚದಲ್ಲಿ ಬಾಲಭವನ ನಿರ್ಮಾಣಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಶಂಕುಸ್ಥಾಪನೆ

ಬೆಳಗಾವಿ: ಬೆಂಗಳೂರಿನ ಬಾಲಭವನಕ್ಕಿಂತ ಸುಂದರವಾಗಿ, ವಿಶಿಷ್ಟವಾಗಿ ಬೆಳಗಾವಿ ಬಾಲಭವನ ನಿರ್ಮಿಸಬೇಕೆನ್ನುವುದು ನನ್ನ ಸಂಕಲ್ಪ. 20 ಕೋಟಿ ರೂಪಾಯಿ ವೆಚ್ಚದಲ್ಲಿ ಸುಸಜ್ಜಿತ ಬಾಲಭವನ ಬೆಳಗಾವಿಯಲ್ಲಿ ನಿರ್ಮಾಣಗೊಳ್ಳಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಬೆಳಗಾವಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಬೆಂಗಳೂರಿನ ಜವಾಹರ ಬಾಲಭವನ ಸೊಸೈಟಿ, ನಿರ್ಮಿತಿ ಕೇಂದ್ರ ಹಾಗೂ ಜಿಲ್ಲಾ ಬಾಲ ಭವನ ಸಮಿತಿ ಸಂಯುಕ್ತ ಆಶ್ರಯದಲ್ಲಿ …

Read More »

ಕೆ ಪಿ ಎಸ್ ಸಿ ಮೂಲಕ ಸಾರಿಗೆ ಇಲಾಖೆ ನೇಮಕಾತಿಗೆ ಚಿಂತನೆ

ಬೆಂಗಳೂರು: ಸಾರಿಗೆ ಇಲಾಖೆಗೆ ಇನ್ನು ಮುಂದೆ ಕರ್ನಾಟಕ ಲೋಕಸೇವಾ ಆಯೋಗದ ಮೂಲಕ ನೇಮಕಾತಿ ಮಾಡಿಕೊಳ್ಳಲು ಚಿಂತನೆ ನಡೆದಿದೆ. ಗುತ್ತಿಗೆ ಆಧಾರದಲ್ಲಿ ಸಾರಿಗೆ ಇಲಾಖೆಗೆ ನೇಮಕಗೊಂಡ ನೌಕರರು ಕನಿಷ್ಠ ವೇತನ, ಪಿಎಫ್, ಇಎಸ್‌ಐ ಸೇರಿ ಯಾವುದೇ ಸೌಲಭ್ಯ ಪಡೆಯದೇ ವಂಚಿಸುವಂತಹ ಪ್ರಕರಣಗಳು ಕೋರ್ಟ್ ಮೆಟ್ಟಿಲೇರಿದ್ದು, ಈ ಮುಜುಗರದಿಂದ ತಪ್ಪಿಸಿಕೊಳ್ಳಲು ಕೆಪಿಎಸ್ಸಿ ಮೂಲಕ ನೇಮಕಾತಿ ಪ್ರಕ್ರಿಯೆ ನಡೆಸಲು ಸಾರಿಗೆ ಇಲಾಖೆ ಮುಂದಾಗಿದೆ. ಸಾರಿಗೆ ಇಲಾಖೆಯಲ್ಲಿ ಗ್ರೂಪ್ ಎ ಮತ್ತು ಡಿ ವರೆಗಿನ ಹುದ್ದೆಗಳಲ್ಲಿ …

Read More »