Breaking News

BigTv News

ಪರಿಶಿಷ್ಟ ಜಾತಿ, ಹಿಂದುಳಿದ ವರ್ಗಗಳ ಮೀಸಲಾತಿಯನ್ನು ಮುಸ್ಲಿಮರಿಗೆ ಹಂಚಲು ಅವಕಾಶ ನೀಡುವುದಿಲ್ಲ: ಅಮಿತ್ ಶಾ

ನವದೆಹಲಿ: ಪರಿಶಿಷ್ಟ ಜಾತಿ, ಪಂಗಡ ಹಾಗೂ ಇತರೆ ಹಿಂದುಳಿದ ವರ್ಗಗಳ ಮೀಸಲಾತಿಯನ್ನು ಕಿತ್ತು ಮುಸ್ಲಿಮರಿಗೆ ಹಂಚಲು ಕಾಂಗ್ರೆಸ್‌ ಪ್ರಯತ್ನಿಸುತ್ತಿದೆ. ಇಂತಹ ಪ್ರಯತ್ನಗಳಿಗೆ ಕೇಂದ್ರ ಸರ್ಕಾರ ಯಾವುದೇ ಕಾರಣಕ್ಕೂ ಅವಕಾಶ ನೀಡುವುದಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿದ್ದಾರೆ. ನವದೆಹಲಿಯಲ್ಲಿ ನಡೆದ ‘ಅಜೆಂಡಾ ಆಜ್ ತಕ್ 2024′ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಮೀಸಲಾತಿಯ ಬುಟ್ಟಿಗೆ ಕೈ ಹಾಕುವುದಿಲ್ಲ. ಆದರೆ, ಸಂವಿಧಾನ ಬದಲಿಸುವ …

Read More »

ಬೆಳಗಾವಿ: ಅಧಿವೇಶನದಲ್ಲಿ ಮೂರು ದಿನಗಳ ಕಾಲ ಉತ್ತರ ಕರ್ನಾಟಕದ ಸಮಸ್ಯೆಗಳ ಚರ್ಚೆಗೆ ಆದ್ಯತೆ

ಬೆಳಗಾವಿ: ನಾಳೆಯಿಂದ ವಿಧಾನಸಭೆಯ ಅಧಿವೇಶನದಲ್ಲಿ ಮೂರು ದಿನಗಳ ಕಾಲ ಉತ್ತರ ಕರ್ನಾಟಕದ ಸಮಸ್ಯೆಗಳು ಮತ್ತು ಅಭಿವೃದ್ಧಿ ಕುರಿತು ವಿಶೇಷ ಚರ್ಚೆ ನಡೆಯಲಿದೆ. ಮೊದಲ ದಿನ ಹೊಸದಾಗಿ ಆಯ್ಕೆಯಾಗಿರುವ ಶಾಸಕರಿಗೆ ಚರ್ಚೆಯಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸುವುದಾಗಿ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್‌ ಈಗಾಗಲೇ ಪ್ರಕಟಿಸಿದ್ದಾರೆ. ಮಂಗಳವಾರ ಎಲ್ಲಾ ಶಾಸಕರು ಚರ್ಚೆಯಲ್ಲಿ ಪಾಲ್ಗೊಳ್ಳಲು ಅವಕಾಶ ನೀಡಲಿದ್ದು ಬುಧವಾರ ವಿಶೇಷ ಚರ್ಚೆಯಲ್ಲಿ ಉತ್ತರ ಕರ್ನಾಟಕದ ಭಾಗದ ಅಭಿವೃದ್ಧಿಗೆ ಸಂಬಂಧಿಸಿದಂತೆ ಸರ್ಕಾರ ಉತ್ತರ ನೀಡಲಿದೆ. ಈಗಾಗಲೇ ಮೇಲನೆಯಲ್ಲಿ ಉತ್ತರ …

Read More »

ರಾಜ್ಯದ 26 ಸಂಸದರಿಗೆ ಹೊಸ ಕಾರನ್ನು ಗಿಫ್ಟ್​ ನೀಡಿದ ಸರ್ಕಾರ

ಬೆಂಗಳೂರು : ರಾಜ್ಯದ 26 ಸಂಸದರಿಗೆ ಹೊಸ ಕಾರನ್ನ ಸರ್ಕಾರ ಗಿಫ್ಟ್ ನೀಡಿದೆ. ಕಳೆದ ವರ್ಷವಷ್ಟೇ ಸಂಪುಟ ಸಚಿವರುಗಳಿಗೆ 33 ಹೊಸ ಕಾರುಗಳನ್ನು ಖರೀದಿಸಿದ್ದ ರಾಜ್ಯ ಸರ್ಕಾರ, ಇದೀಗ ರಾಜ್ಯದ 26 ಸಂಸದರಿಗೂ ಹೊಸ ಹೈ ಎಂಡ್ ಕಾರುಗಳನ್ನು ಖರೀದಿ ಮಾಡಿದೆ. ಟೊಯೋಟಾ ಕಂಪನಿಯ ಹೊಸ ಇನ್ನೊವಾ ಕ್ರಿಸ್ಟಾ ಹೈಬ್ರಿಡ್ ಕಾರುಗಳನ್ನು ರಾಜ್ಯದ ಸಂಸದರಿಗೆ ಖರೀದಿಸಲಾಗಿದೆ. ಒಂದು ಇನ್ನೋವಾ ಹೈಬ್ರಿಡ್ ಎಸ್​​ಯುವಿ ಕಾರಿಗೆ ಸುಮಾರು 29 ಲಕ್ಷ ರೂ. ಖರ್ಚಾಗಿದೆ …

Read More »

ಮಾತೃವಂದನಾ ಯೋಜನೆ: 3.64 ಕೋಟಿ ಫಲಾನುಭವಿಗಳಿಗೆ 18,854 ಕೋಟಿ ರೂಪಾಯಿ ವಿತರಣೆ

ನವದೆಹಲಿ: 2017ರಲ್ಲಿ ಪ್ರಧಾನಮಂತ್ರಿ ಮಾತೃ ವಂದನಾ ಯೋಜನೆಯ ಪ್ರಾರಂಭದಿಂದ 3.64 ಕೋಟಿ ಫಲಾನುಭವಿಗಳಿಗೆ 18,854 ಕೋಟಿ ರೂಪಾಯಿಗಳನ್ನು ವಿತರಿಸಲಾಗಿದೆ ಎಂದು ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಅನ್ನಪೂರ್ಣ ದೇವಿ ಅವರು ತಿಳಿಸಿದ್ದಾರೆ. ಅವರು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಅನ್ನಪೂರ್ಣ ದೇವಿ, ಪ್ರಧಾನಮಂತ್ರಿ ಮಾತೃ ವಂದನಾ ಯೋಜನೆಯಡಿ ಫಲಾನುಭವಿಗಳಿಂದ ಕಾಗದರಹಿತ ನೋಂದಣಿಗೆ ಕ್ರಮ ಕೈಗೊಳ್ಳಲಾಗಿದೆ. ಸುಲಭ ನೋಂದಣಿಗಾಗಿ ಅಂಗನವಾಡಿ ಮತ್ತು …

Read More »

ಒಳ ಮೀಸಲಾತಿ ಜಾರಿಗೆ ಒತ್ತಾಯಿಸಿ ಸಚಿವ ಪ್ರಿಯಾಂಕ್ ಖರ್ಗೆ ಮನೆ ಮುಂದೆ ತಮಟೆ ಚಳವಳಿ

ಕಲಬುರಗಿ: ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲ ಅಧಿವೇಶನದಲ್ಲಿ ಒಳ ಮೀಸಲಾತಿ ಬಗ್ಗೆ ಮಾತನಾಡುವಂತೆ ಒತ್ತಾಯಿಸಿ ಜಿಲ್ಲಾ ಮಾದಿಗ ಸಮುದಾಯದ ಸಂಘಟನೆಗಳ ಒಕ್ಕೂಟದ ಮುಖಂಡರು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಮನೆಯ ಮುಂಭಾಗದಲ್ಲಿ ಶನಿವಾರ ತಮಟೆ ಚಳವಳಿ ನಡೆಸಿದರು. ಒಳ ಮೀಸಲಾತಿ ಜಾರಿಯಲ್ಲಿ ರಾಜ್ಯ ಸರ್ಕಾರಗಳಿಗೆ ಅಧಿಕಾರವಿದೆ ಎಂದು ಸುಪ್ರೀಂಕೋರ್ಟ್ ತೀರ್ಪು ನೀಡಿದೆ. ಹೀಗಾಗಿ, ನ್ಯಾಯಾಲಯದ ತೀರ್ಪಿನಂತೆ ಚಳಿಗಾಲದ ಅಧಿವೇಶನದಲ್ಲಿ ಒಳ ಮೀಸಲಾತಿ ಕುರಿತು ಚರ್ಚಿಸಬೇಕು. ಮಾದಿಗ ಸಮುದಾಯದ …

Read More »

ರಾಜ್ಯದಲ್ಲಿ ಒಳ ಮೀಸಲಾತಿ ಜಾರಿಯಾಗದಿದ್ದರೆ ಸರ್ಕಾರ ಉಳಿಯಲ್ಲ: ಎ.ನಾರಾಯಣಸ್ವಾಮಿ

ಚಿತ್ರದುರ್ಗ: ಕರ್ನಾಟಕದಲ್ಲಿ ಒಳಮೀಸಲು ಜಾರಿಯಾಗದಿದ್ದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದ ವಿರುದ್ದ ಮಾದಿಗ ಸಮುದಾಯ ದಂಗೇ ಏಳಲಿದೆ ಎಂದು ಕೇಂದ್ರದ ಮಾಜಿ ಸಚಿವ ಎ.ನಾರಾಯಣಸ್ವಾಮಿ ಎಚ್ಚರಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿ, ಮುಂದಿನ ಎರಡೂವರೆ ತಿಂಗಳೊಳಗೆ ಒಳ ಮೀಸಲಾತಿ ಅನುಷ್ಠಾನವಾಗದಿದ್ದರೆ, ರಾಜಸ್ತಾನ, ಮಹಾರಾಷ್ಟ್ರದ ಮಾದರಿ ಹೋರಾಟ ಶುರುವಾಗಲಿದೆ ಎಂದು ಎಚ್ಚರಿಸಿದರು. ಅಧಿಕಾರಕ್ಕೆ ಬಂದು 19 ತಿಂಗಳು ಕಳೆದರೂ ಪ್ರಣಾಳಿಕೆಯಲ್ಲಿ ಹೇಳಿದಂತೆ ಮೀಸಲು ಜಾರಿಗೆ ಸರ್ಕಾರ ವಿಫಲವಾಗಿದೆ.ಸಿದ್ದರಾಮಯ್ಯ ಜನರಿಗೆ ಮಂಕು ಬೂದಿ ಎರಚುತ್ತಿದ್ದಾರೆ. ಉಪಚುನಾವಣೆ ಕಾರಣಕ್ಕೆ …

Read More »

ಅಂಚೆ ಇಲಾಖೆ ಸಂಪೂರ್ಣ ಡಿಜಿಟಲ್ ವೇದಿಕೆಯಾಗಿ ಪರಿವರ್ತನೆ: ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ

ನವದೆಹಲಿ: ಅಂಚೆ ಇಲಾಖೆಯನ್ನು ಸಂಪೂರ್ಣ ಡಿಜಿಟಲ್ ವೇದಿಕೆಯನ್ನಾಗಿ ಪರಿವರ್ತಿಸುವ ಸಲುವಾಗಿ ವ್ಯಾಪಾರ ಪ್ರಕ್ರಿಯೆ ಪುನಾರಚನೆ ಕಾರ್ಯ ನಡೆಯುತ್ತಿದೆ ಎಂದು ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ತಿಳಿಸಿದ್ದಾರೆ. ಭಾರತೀಯ ಅಂಚೆ ಮತ್ತು ದೂರಸಂಪರ್ಕ ಖಾತೆ ಹಾಗೂ ಹಣಕಾಸು ಸೇವೆಯ 50ನೇ ಸ್ಥಾಪನಾ ದಿನಾಚರಣೆ ಸಮಾರಂಭದಲ್ಲಿ ಮಾತನಾಡಿದ ಅವರು, ಅಂಚೆ ಸೇವೆಯೆಂದರೆ ಜನಸೇವೆ. ಇ-ಕಾಮರ್ಸ್ ವಲಯದ ಬೆಳವಣಿಗೆಯ ಸಂದರ್ಭದಲ್ಲಿ ಇಲಾಖೆಯ ಈ ಪರಿವರ್ತನೆಯು ಅಗತ್ಯವಾಗಿದ್ದು ಈ ಹೊಸ ವ್ಯಾಪಾರ ಮಾರ್ಗದಲ್ಲಿ ಅಂಚೆ ಸೇವೆಗಳ …

Read More »

ಇಂದು ಸಿಎಂ ಸಿದ್ದರಾಮಯ್ಯ ಗದಗ ಜಿಲ್ಲಾ ಪ್ರವಾಸ

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಇಂದು ಗದಗ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಭೇಟಿಯ ವೇಳೆ ವಿವಿಧ ಕಾಮಗಾರಿಗಳಿಗೆ ಶಿಲಾನ್ಯಾಸ ನೆರವೇರಿಸಲಿದ್ದಾರೆ. ಇಂದು ಬೆಳಿಗ್ಗೆ ಹುಬ್ಬಳ್ಳಿಯಿಂದ ಹೆಲಿಕಾಪ್ಟರ್ ಮೂಲಕ ಹೊರಟು ಗದಗ ತಾಲೂಕು ಹರ್ಲಾಪುರ ಗ್ರಾಮದಲ್ಲಿ ಶ್ರೀಮತಿ ಕಮಲಾಬಾಯಿ ನಾರಾಯಣರಾವ್ ಕುಲಕರ್ಣಿ ಸರ್ಕಾರಿ ಪ್ರೌಢಶಾಲೆ ಆವರಣದ ಹೆಲಿಪ್ಯಾಡ್‌ಗೆ ಆಗಮಿಸುವರು. ನಂತರ ಹರ್ಲಾಪುರ ಗ್ರಾಮದಲ್ಲಿ ಶ್ರೀ ಬೀರಲಿಂಗೇಶ್ವರ ದೇವಸ್ಥಾನ ಸೇವಾ ಸಮಿತಿ ಯಿಂದ ಆಯೋಜಿಸಲಾದ ಶ್ರೀ ಬೀರಲಿಂಗೇಶ್ವರ ಹಾಗೂ ಶ್ರೀ ಮಾಳಿಂಗರಾಯ ಮೂರ್ತಿ …

Read More »

ಲೋಕಸಭೆಯಲ್ಲಿ ಒಂದು ರಾಷ್ಟ್ರ, ಒಂದು ಚುನಾವಣೆ ಮಸೂದೆ ಪರಿಚಯಿಸುವ ನಿರ್ಧಾರ ಹಿಂತೆಗೆದುಕೊಂಡ ಕೇಂದ್ರ ಸರ್ಕಾರ

ನವದೆಹಲಿ: ಅಚ್ಚರಿಯ ಬೆಳವಣಿಗೆಯೊಂದರಲ್ಲಿ ನರೇಂದ್ರ ಮೋದಿ ಸರ್ಕಾರ ಸೋಮವಾರ ಲೋಕಸಭೆಯಲ್ಲಿ ಎರಡು ‘ಒಂದು ರಾಷ್ಟ್ರ, ಒಂದು ಚುನಾವಣೆ’ ಮಸೂದೆಗಳನ್ನು ಪರಿಚಯಿಸುವ ನಿರ್ಧಾರವನ್ನು ಹಿಂತೆಗೆದುಕೊಂಡಿದೆ. ಇತರ ಯಾವುದೇ ವ್ಯವಹಾರಕ್ಕಿಂತ ಮೊದಲು ಅನುದಾನಕ್ಕಾಗಿ ಪೂರಕ ಬೇಡಿಕೆಗಳ ಮೊದಲ ಬ್ಯಾಚ್ ಅನ್ನು ಅಂಗೀಕರಿಸಲು ಬಯಸುವುದರಿಂದ ಈ ವಾರದ ಕೊನೆಯಲ್ಲಿ ಮಸೂದೆಗಳನ್ನು ತರುವ ಸಾಧ್ಯತೆಯಿದೆ ಎಂದು ಸರ್ಕಾರಿ ಮೂಲಗಳು ಸೂಚಿಸಿವೆ. ಸಂಸತ್ತಿನ ಚಳಿಗಾಲದ ಅಧಿವೇಶನ ಡಿಸೆಂಬರ್ 20 ರಂದು ಕೊನೆಗೊಳ್ಳಲಿದೆ. ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಿಗೆ …

Read More »

ಪೋರ್ಬ್ಸ್ 2024 ನೇ ಸಾಲಿನ ವಿಶ್ವದ ಅತೀ ಪ್ರಭಾವಿ ಮಹಿಳೆಯರ ಪಟ್ಟಿಯಲ್ಲಿ 3 ಭಾರತೀಯರಿಗೆ ಸ್ಥಾನ

ನವದೆಹಲಿ: ವಾಣಿಜ್ಯ ನಿಯತಕಾಲಿಕೆ ಫೋರ್ಬ್ಸ್ 2024ನೇ ಸಾಲಿನ ವಿಶ್ವದ 100 ಅತ್ಯಂತ ಪ್ರಭಾವಿ ಮಹಿಳೆಯರ 21ನೇ ವಾರ್ಷಿಕ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಜಾಗತಿಕವಾಗಿ ಪ್ರಭಾವ ಬೀರಿದ ವಿವಿಧ ರಂಗದ ಮಹಿಳಾ ಸಾಧಕಿಯರು ಈ ಪಟ್ಟಿಯಲ್ಲಿದ್ದು, ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಸೇರಿದಂತೆ ಮೂವರು ಭಾರತಿಯರು ಇದರಲ್ಲಿ ಸ್ಥಾನ ಪಡೆದಿದ್ದಾರೆ. ನಿರ್ಮಲಾ ಅವರಿಗೆ ಪಟ್ಟಿಯಲ್ಲಿ 28ನೇ ಸ್ಥಾನ ಲಭಿಸಿದ್ದು, ಭಾರತೀಯರ ಪೈಕಿ ಮೊದಲಿಗರಾಗಿದ್ದಾರೆ. ಅಲ್ಲದೇ ಪಟ್ಟಿಯಲ್ಲಿ ಎಚ್‌ಸಿಎಲ್‌ ಕಾರ್ಪೋರೇಶನ್‌ನ ಮುಖ್ಯ ಕಾರ್ಯನಿರ್ವಾಹಕ …

Read More »