ಬೆಳಗಾವಿ: ಶಿವಮೊಗ್ಗ ನಗರಕ್ಕೆ ಕುಡಿಯುವ ನೀರು ಸರಬರಾಜು ಮಾಡಲು ಗಾಜನೂರು ಬಳಿ ಹೊಸದಾಗಿ ನೀರು ಶುದ್ಧೀಕರಣ ಘಟಕ ನಿರ್ಮಿಸಲು ಯೋಜನೆ ರೂಪಿಸಲಾಗಿದೆ. ಈ ಸ್ಥಳ ಅರಣ್ಯ ಪ್ರದೇಶದಲ್ಲಿ ಇರುವುದರಿಂದ ಶೀಘ್ರವೇ ಅರಣ್ಯ ಇಲಾಖೆಯಿಂದ ಎನ್.ಓ.ಸಿ ಪಡೆದು ಕಾಮಗಾರಿ ಪ್ರಾರಂಭಿಸಲು ಪ್ರಯತ್ನಿಸಲಾಗುತ್ತಿದೆ. ಒಂದು ವೇಳೆ ಎನ್.ಓ.ಸಿ ಲಭಿಸದಿದ್ದರೆ, ಸೂಕ್ತವಾದ ಬದಲಿ ಜಾಗವನ್ನು ಸಹ ಗುರುತಿಸಲು ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಿದ್ದೇನೆ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ಹೇಳಿದರು. …
Read More »ಬೆಂಗಳೂರಿನಲ್ಲಿ ಪ್ರವಾಹ ಹಾನಿ ತಡೆಗಟ್ಟಲು 5000 ಕೋಟಿ ರೂ.ಗಳ ಶಾಶ್ವತ ಯೋಜನೆ: ಸಚಿವ ಕೃಷ್ಣ ಬೈರೇಗೌಡ
ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಪ್ರದೇಶಗಳಲ್ಲಿ ಅತಿಹೆಚ್ಚು ಮಳೆಯಿಂದ ಪ್ರವಾಹ ರೀತಿಯಲ್ಲಿ ಉಂಟಾಗುವ ಅತಿವೃಷ್ಟಿಯ ಹಾನಿಯನ್ನು ತಡೆಗಟ್ಟಲು ಒಟ್ಟು 5000 ಕೋಟಿ ರೂ. ಗಳ ಶಾಶ್ವತ ಯೋಜನೆ ರೂಪಿಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು ಹೇಳಿದರು. ಪ್ರಸಕ್ತ ವರ್ಷ ರಾಜ್ಯದಲ್ಲಿ ಅಧಿಕ ಮಳೆಯಿಂದ ಉಂಟಾದ ಹಾನಿ ಕುರಿತು ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಶುಕ್ರವಾರ ನಡೆದ ವಿಧಾನಸಭೆ ಕಲಾಪದಕಲ್ಲಿ ಅವರು ಈ ವಿಷಯ ತಿಳಿಸಿದರು. ಬೆಂಗಳೂರು …
Read More »ರಾಜ್ಯದಲ್ಲಿ 50 ಗ್ರಾ.ಪಂ.ಗಳನ್ನು ಪಟ್ಟಣ ಪಂಚಾಯ್ತಿಯಾಗಿ ಮೇಲ್ದರ್ಜೆಗೇರಿಸಲು ಕ್ರಮ: ಸಚಿವ ಭೈರತಿ ಸುರೇಶ್
ಬೆಳಗಾವಿ : ರಾಜ್ಯದಲ್ಲಿ 50ಕ್ಕೂ ಗ್ರಾಮ ಪಂಚಾಯ್ತಿಗಳನ್ನು ಪಟ್ಟಣ ಪಂಚಾಯಿ ಹಾಗೂ ಪುರಸಭೆಯಾಗಿ ಮೇಲ್ದರ್ಜೆಗೇರಿಸುವ ಪ್ರಸ್ತಾವನೆ ಪರಿಶೀಲನೆಯಲ್ಲಿದ್ದು, ಹಂತ-ಹಂತವಾಗಿ ಮೇಲ್ದರ್ಜೆಗೇರಿಸಲಾಗುವುದು ಎಂದು ನಗರಾಭಿವೃದ್ಧಿ ಸಚಿವ ಬಿ.ಎಸ್.ಸುರೇಶ್ ಭರವಸೆ ನೀಡಿದ್ದಾರೆ. ವಿಧಾನಸಭೆ ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿ ಸದಸ್ಯ ದಿನಕರ್ ಶೆಟ್ಟಿ ಕೇಳಿದ ಪ್ರಶ್ನೆಗೆ ಪೌರಾಡಳಿತ ಸಚಿವ ರಹೀಮ್ ಖಾನ್ ಉತ್ತರ ನೀಡುತ್ತಿದ್ದ ವೇಳೆ ಮಧ್ಯಪ್ರವೇಶಿಸಿದ ಅವರು, 2011ರ ಜನಗಣತಿ ಪ್ರಕಾರ ಮೇಲ್ದರ್ಜೆಗೇರಿಸಲು ಅವಕಾಶವಿಲ್ಲ. ಆದರೆ ಗೋಕರ್ಣಕ್ಕೆ ಲಕ್ಷಾಂತರ ಭಕ್ತರು ಆಗಮಿಸುತ್ತಿದ್ದು, ಗೋಕರ್ಣದ …
Read More »ಲೋಕಸಭೆಯಲ್ಲಿ ಒಂದು ರಾಷ್ಟ್ರ, ಒಂದು ಚುನಾವಣೆ ಮಸೂದೆ ಮಂಡಿಸಲು ಕೇಂದ್ರ ಸರ್ಕಾರ ಸಜ್ಜು
ನವದೆಹಲಿ: ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಮಂಡನೆ ಮಾಡಲು ಸೋಮವಾರ ಲೋಕಸಭೆಯಲ್ಲಿ ಮಂಡಿಸಲು ಕೇಂದ್ರ ಸರ್ಕಾರವು ಸಜ್ಜಾಗಿದೆ. ಸಾಂವಿಧಾನಿಕ ತಿದ್ದುಪಡಿಗೆ ಹೆಚ್ಚುವರಿಯಾಗಿ, ಪ್ರಸ್ತಾವಿತ ತಿದ್ದುಪಡಿಯ ನಿಬಂಧನೆಗಳೊಂದಿಗೆ ಜೋಡಿಸಲು ಶಾಸಕಾಂಗ ಸಭೆಗಳೊಂದಿಗೆ ಮೂರು ಕೇಂದ್ರಾಡಳಿತ ಪ್ರದೇಶಗಳನ್ನು ನಿಯಂತ್ರಿಸುವ ಕಾನೂನುಗಳನ್ನು ತಿದ್ದುಪಡಿ ಮಾಡುವ ಗುರಿಯನ್ನು ಹೊಂದಿರುವ ಎರಡನೇ ಮಸೂದೆಯನ್ನು ಕ್ಯಾಬಿನೆಟ್ ಅನುಮೋದಿಸಿತು. ಒಂದು ರಾಷ್ಟ್ರ, ಒಂದು ಚುನಾವಣೆ’ ಉಪಕ್ರಮವನ್ನು ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಸರ್ಕಾರ ಮಹತ್ವದ ಹೆಜ್ಜೆ ಇಡಲು ಸಜ್ಜಾಗಿದ್ದು, ಸೋಮವಾರ ಲೋಕಸಭೆಯಲ್ಲಿ …
Read More »ಉತ್ತರ ಕರ್ನಾಟಕ ಭಾಗದಲ್ಲಿ ಉದ್ಯೋಗ ಸೃಷ್ಟಿಗೆ 432 ನವೋದ್ಯಮಗಳ ಆರಂಭ: ಸಚಿವ ಪ್ರಿಯಾಂಕ್ ಖರ್ಗೆ
ಬೆಳಗಾವಿ: ಉತ್ತರ ಕರ್ನಾಟಕ ಭಾಗದಲ್ಲಿ ಉದ್ಯೋಗ ಸೃಷ್ಟಿಯ ಉದ್ದೇಶದಿಂದ ಬಿಯಾಂಡ್ ಬೆಂಗಳೂರು ಕಾರ್ಯಕ್ರಮದಡಿಯಲ್ಲಿ 432 ನವೋದ್ಯಮಗಳ ಆರಂಭಕ್ಕೆ ನೋಂದಣಿಯನ್ನು ಮಾಡಿಕೊಂಡಿವೆ. ಆ ಮೂಲಕ ಈ ಭಾಗದಲ್ಲಿ ಹೆಚ್ಚಿನ ಉದ್ಯೋಗ ಸೃಷ್ಟಿಯಾಗಲಿದ್ದು, ನಿಪುಣ ಕರ್ನಾಟಕ ಯೋಜನೆಯಡಿ ಈ ಭಾಗಕ್ಕೆ ಹೆಚ್ಚಿನ ಅವಕಾಶಗಳನ್ನು ನೀಡಲಾಗುವುದು ಎಂದು ಮಾಹಿತಿ ಮತ್ತು ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಬೆಳಗಾವಿ ಚಳಿಗಾಲದ ವಿಧಾನ ಮಂಡಲ ಅಧಿವೇಶನದಲ್ಲಿ ಶುಕ್ರವಾರ ವಿಧಾನ ಪರಿಷತ್ತಿನಲ್ಲಿ ನಡೆದ ಉತ್ತರ ಕರ್ನಾಟಕ ಭಾಗದ …
Read More »ರಾಜ್ಯದ ರೈತರ ಸಂಪೂರ್ಣ ಸಾಲ ಮನ್ನಾಕ್ಕೆ ಒತ್ತಾಯಿಸಿ ಡಿ.16 ರಂದು ಬೆಳಗಾವಿ ಚಲೋ ಗೆ ಕರೆ
ಬೆಂಗಳೂರು: ರಾಜ್ಯದ ರೈತರ ಸಾಲ ಸಂಪೂರ್ಣ ಮನ್ನಾ ಮಾಡುವಂತೆ ಒತ್ತಾಯಿಸಿ ಡಿಸೆಂಬರ್ 16ರಂದು ಬೆಳಗಾವಿ ಚಲೋ ಹಮ್ಮಿಕೊಳ್ಳಲಾಗಿದೆ. ರಾಜ್ಯ ರೈತ ಸಂಘಗಳ ಏಕೀಕರಣ ಹೋರಾಟ ಸಮಿತಿ ಮುಖ್ಯಸ್ಥರಾದ ಪಚ್ಚೆ ನಂಜುಂಡಸ್ವಾಮಿ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದು, ರೈತರ ಸಾಲ ಸಂಪೂರ್ಣ ಮನ್ನಾ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಬೆಳಗಾವಿ ಚಲೋ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. ರಾಜ್ಯದಲ್ಲಿ ಸರಿಯಾದ ಮಳೆ ಇಲ್ಲದೆ ರೈತರು ಸಂಕಷ್ಟದಲ್ಲಿದ್ದಾರೆ. ಕೇಂದ್ರ ಮತ್ತು ರಾಜ್ಯ …
Read More »ತೊಗರಿ ಬೆಳೆಗೆ ಸೂಕ್ತ ಪರಿಹಾರ ಒದಗಿಸಲು ರೈತ ಸಂಘದಿಂದ ಸಿಎಂ ಗೆ ಮನವಿ
ವಿಜಯಪುರ: ಜಿಲ್ಲೆಯಲ್ಲಿ ಹಾಳಾದ ತೊಗರಿ ಬೆಳೆಗೆ ಸೂಕ್ತ ಪರಿಹಾರ ಒದಗಿಸುವಂತೆ ಆಗ್ರಹಿಸಿ ಅಖಂಡ ಕರ್ನಾಟಕ ರೈತ ಸಂಘದ ಜಿಲ್ಲಾ ಘಟಕ ಪದಾಧಿಕಾರಿಗಳು ಶುಕ್ರವಾರ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಮನವಿ ಸಲ್ಲಿಸಿದರು. ರಾಜ್ಯ ಪ್ರಧಾನ ಕಾರ್ಯದರ್ಶಿ ಅರವಿಂದ ಕುಲಕರ್ಣಿ ಮಾತನಾಡಿ, ಮುಂಗಾರು ಹಂಗಾಮಿನಲ್ಲಿ ಬಿತ್ತನೆ ಮಾಡಿದ ತೊಗರಿ ಬೆಳೆ ಸಂಪೂರ್ಣ ಹಾಳಾಗಿದ್ದು, ಇದಕ್ಕೆ ಜಿಆರ್ಜಿ 152 ಹಾಗೂ ಜಿಆರ್ಜಿ 811 ತೊಗರಿ ಬೀಜವೇ ಕಾರಣ.ಈ ಬೀಜ ಸಂಪೂರ್ಣ ಕಳಪೆ ಮಟ್ಟದ್ದಾಗಿದೆ ಎಂದು …
Read More »ಮಳೆಹಾನಿಯಿಂದ ರೈತರಿಗೆ ಈ ವರ್ಷ 297 ಕೋಟಿ ರೂ. ಪರಿಹಾರ: ಸಚಿವ ಕೃಷ್ಣ ಬೈರೇಗೌಡ
ಬೆಳಗಾವಿ: ಕಳೆದ ವರ್ಷ ರಾಜ್ಯ ಬರಕ್ಕೆ ತುತ್ತಾಗಿದ್ದರೆ, ಈ ವರ್ಷ ವಾಡಿಕೆಗಿಂತ ಹೆಚ್ಚು ಮಳೆಯಾಗಿದ್ದು, ಹಲವು ಜಿಲ್ಲೆಗಳಲ್ಲಿ ಬೆಳೆಹಾನಿಯಾಗಿದೆ. ಬರ ಪರಿಹಾರವಾಗಿ ರಾಜ್ಯ ಸರ್ಕಾರ ಕಳೆದ ವರ್ಷ ರೂ.4200 ಕೋಟಿ ಹಣವನ್ನು ರೈತರಿಗೆ ಪರಿಹಾರದ ರೂಪದಲ್ಲಿ ನೀಡಿದರೆ, ಮಳೆಹಾನಿಗೆ ಈ ವರ್ಷ ರೂ.297 ಕೋಟಿ ಹಣವನ್ನು ಪರಿಹಾರವಾಗಿ ರೈತರಿಗೆ ನೀಡಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಸದನಕ್ಕೆ ಮಾಹಿತಿ ನೀಡಿದರು. ಶುಕ್ರವಾರ ಶೂನ್ಯವೇಳೆ ಚರ್ಚೆಯ ಸಂದರ್ಭದಲ್ಲಿ ರಾಜ್ಯದಲ್ಲಿ ಉಂಟಾದ …
Read More »ಉತ್ತರ ಕರ್ನಾಟಕದ ಅಭಿವೃದ್ಧಿಗಾಗಿ ಪ್ರತ್ಯೇಕ ಬಜೆಟ್ ಮಂಡಿಸಿ: ವಿಧಾನ ಪರಿಷತ್ ಸದಸ್ಯರ ಒತ್ತಾಯ
ಬೆಳಗಾವಿ: ಉತ್ತರ ಕರ್ನಾಟಕದ ಅಭಿವೃದ್ಧಿಗಾಗಿ ಪ್ರತ್ಯೇಕ ಬಜೆಟ್ ಮಂಡಿಸಬೇಕು, ಕಲ್ಯಾಣ ಕರ್ನಾಟಕದ ಮಾದರಿಯಲ್ಲಿ ಕಿತ್ತೂರು ಕರ್ನಾಟಕಕ್ಕೂ ಪ್ರತ್ಯೇಕ ಅನುದಾನ ಮೀಸಲಿಡಬೇಕು ಎಂದು ಬಿಜೆಪಿಯ ಕೆ.ಎಸ್. ಸುನೀಲ್, ಪಿ.ಎಚ್. ಪೂಜಾರ್, ಕಾಂಗ್ರೆಸ್ನ ಪ್ರಕಾಶ್ ಹುಕ್ಕೇರಿ, ಜೆಡಿಎಸ್ನ ಕೆ.ಎ.ತಿಪ್ಪೇಸ್ವಾಮಿ ಒತ್ತಾಯಿಸಿದರು. ಉತ್ತರ ಕರ್ನಾಟಕದ ಜ್ವಲಂತ ಸಮಸ್ಯೆಗಳ ಕುರಿತು ವಿಧಾನಪರಿಷತ್ನಲ್ಲಿ ಚರ್ಚಿಸಿದ ಅವರು, ಕೃಷ್ಣ ಮೇಲ್ದಂಡೆ, ಕಳಸಾ-ಬಂಡೂರಿ ಯೋಜನೆಗಳ ತ್ವರಿತ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಬೇಕು. ಪಕ್ಷಾತೀತವಾಗಿ ಕೇಂದ್ರದ ಮೇಲೆ ಒತ್ತಡ ತರಬೇಕು. ರಾಜ್ಯದ ಹಿತಾಸಕ್ತಿಗೆ …
Read More »ಬೆಳಗಾವಿ ಅಧಿವೇಶನ: ಕಲ್ಯಾಣ, ಕಿತ್ತೂರು ಸೇರಿದಂತೆ ಉತ್ತರ ಕರ್ನಾಟಕದ ಅಭಿವೃದ್ಧಿಗಾಗಿ ₹3,740 ಕೋಟಿ
ಬೆಳಗಾವಿ (ಸುವರ್ಣ ವಿಧಾನಸೌಧ): ಕಲ್ಯಾಣ ಮತ್ತು ಕಿತ್ತೂರು ಪ್ರದೇಶ ಸೇರಿದಂತೆ ಉತ್ತರ ಕರ್ನಾಟಕದ ಅಭಿವೃದ್ದಿಗಾಗಿ ₹3,740 ಕೋಟಿ ಮೊತ್ತದ ವಿವಿಧ ಯೋಜನೆಗಳನ್ನು ಅನುಷ್ಠಾನಗೊಳಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ವಿಧಾನಮಂಡಲ ಅಧಿವೇಶನದಲ್ಲಿ ಉತ್ತರ ಕರ್ನಾಟಕ ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಚರ್ಚೆ ಆರಂಭವಾಗಿದೆ. ಶುಕ್ರವಾರ ಇಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ವಿವಿಧ ಯೋಜನೆಗಳನ್ನು ಜಾರಿಗೊಳಿಸುವ ನಿರ್ಧಾರ ಕೈಗೊಂಡಿದೆ ಎಂದು ಮೂಲಗಳು ಹೇಳಿವೆ. ನ್ಯಾಯಾಲಯಗಳಲ್ಲಿ ಸಿವಿಲ್ ಪ್ರಕರಣ ವಿಚಾರಣೆಗೆ ಕೈಗೆತ್ತಿಕೊಂಡ ದಿನವೇ ತೀರ್ಪಿನ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





