ಬೆಳಗಾವಿ: ಕೇಂದ್ರ ಸರ್ಕಾರ ಅನುಮೋದನೆ ದೊರೆತ ತಕ್ಷಣ ಕರ್ನಾಟಕದಲ್ಲಿ ಹೊಸ ಅಂಗನವಾಡಿ ಕೇಂದ್ರಗಳನ್ನು ಆರಂಭಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಇಂದು ವಿಧಾನಪರಿಷತ್ ಕಲಾಪದಲ್ಲಿ ಪ್ರಶ್ನೋತ್ತರ ವೇಳೆ ಜೆಡಿಎಸ್ ಸದಸ್ಯ ಜವರಾಯಿ ಗೌಡ ಪರವಾಗಿ ತಿಪ್ಪೇಸ್ವಾಮಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕರ್ನಾಟಕದಲ್ಲಿ ಹೊಸ ಅಂಗನವಾಡಿ ಕೇಂದ್ರಗಳ ಸ್ಥಾಪನೆ ಸಂಬಂಧ 2022ರಲ್ಲೇ ಕೇಂದ್ರ ಸರ್ಕಾರದ ಅನುಮೋದನೆಗಾಗಿ ಸಲ್ಲಿಸಲಾಗಿದೆ. ಅನುಮೋದನೆ ದೊರೆತ ತಕ್ಷಣ …
Read More »ಸದನದಲ್ಲಿ ಹೆಚ್ಚು ಸಮಯ ಇದ್ದವರು ಹೆಚ್ಚು ಬಾರಿ ಗೆಲುವು ಸಾಧಿಸುವರು: ಸಭಾಧ್ಯಕ್ಷ ಯು.ಟಿ.ಖಾದರ್
ಬೆಳಗಾವಿ: ಸದನದಲ್ಲಿ ಹೆಚ್ಚು ಸಮಯ ಇದ್ದವರು ಹೆಚ್ಚು ಬಾರಿ ಗೆಲುವು ಸಾಧಿಸುತ್ತಾರೆ ಹಾಗೂ ಉತ್ತಮ ರಾಜಕಾರಣಿಯಾಗಲು ಸಹಕಾರಿಯಾಗಲಿದೆ ಎಂದು ಸಭಾಧ್ಯಕ್ಷ ಯು.ಟಿ.ಖಾದರ್ ವಿಧಾನಸಭೆಯಲ್ಲಿಂದು ತಿಳಿಸಿದರು. ಇಂದು ಬೆಳಗ್ಗೆ ಸದನ ಸಮಾವೇಶಗೊಂಡಾಗ ನಿನ್ನೆ ಸಕಾಲಕ್ಕೆ ಆಗಮಿಸಿದ ಶಾಸಕರು ಹಾಗೂ ರಾತ್ರಿ 10 ಗಂಟೆವರೆಗೂ ಸದನದಲ್ಲಿ ಹಾಜರಿದ್ದ ಶಾಸಕರ,ಸಚಿವರ ಹೆಸರುಗಳನ್ನು ವಾಚಿಸಿದರು. ಸದನದಲ್ಲಿ ಗಮನಸೆಳೆಯುವ ಸೂಚನೆ ಮುಗಿದ ಕೂಡಲೇ ಶಾಸಕರು ಹೊರಹೋಗುವುದು ಸರಿಯಲ್ಲ. ಸದನದಲ್ಲಿ ಹೆಚ್ಚು ಕಾಲ ಇದ್ದು ಕಾರ್ಯ ಕಲಾಪಗಳಲ್ಲಿ ಭಾಗಿಯಾದರೆ …
Read More »ಬಿಪಿಎಲ್ ಪಡಿತರ ಚೀಟಿ ರದ್ದು ಮಾನದಂಡ ಸರಿಯಿಲ್ಲ: ಡಾ.ಭರತ್ ಶೆಟ್ಟಿ
ಬೆಳಗಾವಿ: ಬಿಪಿಎಲ್ ಪಡಿತರ ಚೀಟಿ ರದ್ದು ಮಾನದಂಡ ಸಂಬಂಧ ಶಾಸಕರಾದ ಡಾ| ಭರತ್ ಶೆಟ್ಟಿ ವೈ. ಅವರು ಸರಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಬಿಪಿಎಲ್ ಪಡಿತರ ಫಲಾನುಭವಿಗಳು ಯಾವುದೋ ಕಾರಣಕ್ಕೆ ಒಂದೆರಡು ತಿಂಗಳು ಪಡಿತರ ಪಡೆದುಕೊಳ್ಳದಿದ್ದಲ್ಲಿ ಕಾರ್ಡ್ ರದ್ದಾಗುತ್ತಿದೆ. ಕೆಲವೊಂದು ಸಾಲ ಸೌಲಭ್ಯಕ್ಕಾಗಿ ಕೇವಲ ಆದಾಯ ರಿಟರ್ನ್ ಮಾಡಿದವರ ಕಾರ್ಡ್ ರದ್ದಾಗುತ್ತಿದೆ. ಆಯುಷ್ಮಾನ್ ಜತೆ ಬಿಪಿಎಲ್ ಪಡಿತರ ಲಿಂಕ್ ಇರುವುದರಿಂದ ಮತ್ತೆ ಕಾರ್ಡ್ ಪಡೆಯಲು ಫಲಾನುಭವಿಯ ಫೈಲ್ ಜಿಲ್ಲಾ ಮಟ್ಟದಲ್ಲಿ ವಿಲೇವಾರಿ …
Read More »ಪಿಎಸ್ಐ ಅಭ್ಯರ್ಥಿಗಳಿಗೆ ಸಿಹಿಸುದ್ದಿ ನೀಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್
ಬೆಳಗಾವಿ: ಬಿಜೆಪಿ ಸರ್ಕಾರದಲ್ಲಿ ಪಿಎಸ್ಐ ನೇಮಕಾತಿ ಪ್ರಕ್ರಿಯೆಯಲ್ಲಿ ಬಹುದೊಡ್ಡ ಹಗರಣ ನಡೆದಿತ್ತು. ಅದನ್ನು ನಮ್ಮ ಸರ್ಕಾರ ಬಂದ ಬಳಿಕ ಬಗೆಹರಿಸಲಾಗಿದೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಹೇಳಿದರು. ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಹಗರಣ ಮಾಡಿ ಹೊಗಿದ್ದರು. ಆದರೆ ಅದನ್ನೆಲ್ಲ ನಾವು ಸ್ವಚ್ಚಗೊಳಿಸಿ ಹೈಕೋರ್ಟ್ ಆದೇಶದಂತೆ ಮರು ಪರೀಕ್ಷೆ ನಡೆಸಿದ್ದೇವೆ ಎಂದು ತಿಳಿಸಿದರು. ಪ್ರಸ್ತುತ ನಡೆದಿರುವ 545 ಪಿಎಸ್ಐ ಹುದ್ದೆಗಳ ನೇಮಕಾತಿಯ ಪ್ರಕ್ರಿಯೆಯನ್ನು ಸರ್ಕಾರ ಅಂತಿಮ …
Read More »ಬೀದರ್: ನಿಗಮಗಳಿಗೆ ಅನುದಾನ ಬಿಡುಗಡೆ ಸ್ಥಗಿತ ವಿರೋಧಿಸಿ ಬಿಜೆಪಿಯಿಂದ ಪ್ರತಿಭಟನೆ
ಬೀದರ್: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ ಬರುವ ವಿವಿಧ ನಿಗಮಗಳಿಗೆ ಅನುದಾನ ಬಿಡುಗಡೆಗೊಳಿಸುವುದನ್ನು ಸ್ಥಗಿತಗೊಳಿಸಿರುವ ರಾಜ್ಯ ಸರ್ಕಾರದ ಕ್ರಮ ಖಂಡಿಸಿ ಜಿಲ್ಲಾ ಬಿಜೆಪಿ ಒಬಿಸಿ ಮೋರ್ಚಾದಿಂದ ನಗರದಲ್ಲಿ ಇಂದು ಪ್ರತಿಭಟನಾ ರ್ಯಾಲಿ ನಡೆಸಲಾಯಿತು. ನಗರದ ಗಣೇಶ ಮೈದಾನದಿಂದ ಜಿಲ್ಲಾಧಿಕಾರಿ ಕಚೇರಿ ವರೆಗೆ ಬಿಜೆಪಿ ಕಾರ್ಯಕರ್ತರು ರ್ಯಾಲಿ ನಡೆಸಿದರು. ರ್ಯಾಲಿಯುದ್ದಕ್ಕೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಹಾಕಿದರು. ರಾಜ್ಯಪಾಲರ ಹೆಸರಿಗೆ ಬರೆದ ಮನವಿ ಪತ್ರವನ್ನು ಜಿಲ್ಲಾಧಿಕಾರಿಗೆ ಸಲ್ಲಿಸಿದರು. 2023ರಲ್ಲಿ ರಾಜ್ಯದಲ್ಲಿ ಅಧಿಕಾರಕ್ಕೆ …
Read More »ಗ್ರಾಮ ಪಂಚಾಯತ್ ಆಸ್ತಿಗಳ ಮ್ಯಾನ್ಯುಯಲ್ ಸಮೀಕ್ಷೆ: ಸಚಿವ ಪ್ರಿಯಾಂಕ್ ಖರ್ಗೆ
ಬೆಳಗಾವಿ: ರಾಜ್ಯದ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕೃಷಿ ತೆರಿಗೆ ನಿರ್ಧರಣೆಗೆ ಒಳಪಟ್ಟಿರದ ಎಲ್ಲಾ ಭೂಮಿ ಮತ್ತು ಕಟ್ಟಡಗಳ ಮ್ಯಾನ್ಯುಯಲ್ ಸಮೀಕ್ಷೆ ನಡೆಸಲಾಗುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. ಅವರು ಇಂದು ವಿಧಾನ ಪರಿಷತ್ತಿನಲ್ಲಿ ಸದಸ್ಯ ಎನ್. ರವಿಕುಮಾರ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದರು. ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕೃಷಿ ತೆರಿಗೆ ನಿರ್ಧರಣೆಗೆ ಒಳಪಟ್ಟಿರದ …
Read More »ಬಿಪಿಎಲ್ ಕಾರ್ಡ್ ಹೊಂದಿದ ಅನರ್ಹರಿಗೆ ಸಚಿವ ಮುನಿಯಪ್ಪ ಮಹತ್ವದ ಮಾಹಿತಿ
ಬೆಂಗಳೂರು: ರಾಜ್ಯ ಸರ್ಕಾರ ಬಿಪಿಎಲ್ ಕಾರ್ಡ್ ಪರಿಷ್ಕರಣೆ ನಡೆಸುತ್ತಿರುವ ಬೆನ್ನಲ್ಲೇ ಕೆಎಚ್ ಮುನಿಯಪ್ಪ ಅನರ್ಹರಿಗೆ ಮಹತ್ವದ ಮಾಹಿತಿಯೊಂದನ್ನು ನೀಡಿದ್ದಾರೆ. ಬಿಪಿಎಲ್ ಕಾರ್ಡ್ ಹೊಂದಲು ಸರ್ಕಾರ ಕೆಲವೊಂದು ಮಾನದಂಡಗಳನ್ನು ವಿಧಿಸಿದೆ. ಅದರಂತೆ ಆದಾಯ ತೆರಿಗೆ ಪಾವತಿಸುವವರು, ಸರ್ಕಾರೀ ನೌಕರರು ಬಿಪಿಎಲ್ ಕಾರ್ಡ್ ಹೊಂದುವಂತಿಲ್ಲ. ಅಂತಹ ಕಾರ್ಡ್ ಗಳನ್ನು ರದ್ದು ಮಾಡಿ ಎಪಿಎಲ್ ಗೆ ವರ್ಗಾಯಿಸಲಾಗುವುದು ಎಂದು ಈಗಾಗಲೇ ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ. ಅದರಂತೆ ಈಗ ಎಲ್ಲಾ ಗ್ರಾಮ, ವಾರ್ಡ್ ಮಟ್ಟದಲ್ಲಿ ಅನರ್ಹ …
Read More »50 ಗ್ರಾಮಪಂಚಾಯ್ತಿಗಳನ್ನು ಪುರಸಭೆಯಾಗಿ ಹಂತ ಹಂತವಾಗಿ ಮೇಲ್ದರ್ಜೆಗೇರಿಸಲಾಗುವುದು
ಬೆಳಗಾವಿ: ರಾಜ್ಯದಲ್ಲಿ 50 ಗ್ರಾಮಪಂಚಾಯ್ತಿಗಳನ್ನು, ಪಟ್ಟಣ ಪಂಚಾಯ್ತಿಗಳನ್ನು ಪುರಸಭೆಯಾಗಿ ಮೇಲ್ದರ್ಜೆಗೇರಿಸುವ ಪ್ರಸ್ತಾವನೆ ಇದ್ದು ಹಂತ ಹಂತವಾಗಿ ಮೇಲ್ದರ್ಜೆಗೇರಿಸಲಾಗುವುದು ಎಂದು ನಗರಾಭಿವೃದ್ಧಿ ಸಚಿವ ಬಿ.ಎಸ್.ಸುರೇಶ್ ವಿಧಾನಸಭೆಗಿಂದು ತಿಳಿಸಿದರು. ಪ್ರಶ್ನೋತ್ತರ ವೇಳೆಯಲ್ಲಿ ಶಾಸಕ ದಿನಕರ್ ಕೇಶವ ಶೆಟ್ಟಿ ಅವರ ಪ್ರಶ್ನೆಗೆ ಪೌರಾಡಳಿತ ಸಚಿವ ರಹೀಮ್ ಖಾನ್ ಅವರು ಉತ್ತರ ನೀಡುತ್ತಿದ್ದ ಸಂದರ್ಭದಲ್ಲಿ ಮಧ್ಯಪ್ರವೇಶಿಸಿದ ಅವರು 2011ರ ಜನಗಣತಿ ಪ್ರಕಾರ ಮೇಲ್ದರ್ಜೆಗೇರಿಸಲು ಅವಕಾಶವಿಲ್ಲ. ಆದರೆ ಗೋಕರ್ಣಕ್ಕೆ ಲಕ್ಷಾಂತರ ಭಕ್ತರು ಆಗಮಿಸುತ್ತಿರುವುದು ನಿಜ. ಗೋಕರ್ಣದ ಬಗ್ಗೆ …
Read More »ಮಂಗಳೂರು: 166 ಎಕ್ರೆ ಜಮೀನು ಪರಿಶಿಷ್ಟ ಜಾತಿ, ಪಂಗಡದ ಫಲಾನುಭವಿಗಳಿಗೆ ಹಂಚಲು ರಾಜ್ಯ ಸರ್ಕಾರಕ್ಕೆ ಡಿಸಿ ಪತ್ರ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಉಳಿಕೆಯಾದ166 ಎಕ್ರೆ ಡಿ.ಸಿ. ಮನ್ನಾ (ಡಿಪ್ರಸ್ಡ್ ಕ್ಲಾಸ್) ಜಮೀನನ್ನು ಪ. ಜಾತಿ ಮತ್ತು ಪಂಗಡದ ಫಲಾನುಭವಿಗಳಿಗೆ ನೀಡುವಂತೆ ದಲಿತ ನಾಯಕರು ಆಗ್ರಹಿಸಿದ್ದು, ಈ ಬಗ್ಗೆ ಪಿಟಿಸಿಎಲ್ ಕಾಯ್ದೆಯಡಿ ನಿಯಮ ರೂಪಿಸಲು ಸರಕಾರಕ್ಕೆ ಪತ್ರ ಬರೆಯುವುದಾಗಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ತಿಳಿಸಿದ್ದಾರೆ. ಗುರುವಾರ ಜಿಲ್ಲಾ ಮಟ್ಟದ ಪರಿಶಿಷ್ಟ ಜಾತಿ /ಪಂಗಡದ ಮುಖಂಡರ ಕುಂದುಕೊರತೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ದಸಂಸ ಮುಖಂಡ ದೇವದಾಸ್ ಎಂ. …
Read More »ಕಲಬುರಗಿ: ಪಿಎಂ ಸೂರ್ಯಘರ್ ಯೋಜನೆಗೆ ಗ್ರಾಹಕರ ನಿರಾಸಕ್ತಿ
ಕಲಬುರಗಿ: ಕೇಂದ್ರ ಸರ್ಕಾರದ ಮಹತ್ವಪೂರ್ಣ ಯೋಜನೆಯಾದ ‘ಪ್ರಧಾನ ಮಂತ್ರಿ ಸೂರ್ಯಘರ್ ಯೋಜನೆ’ಗೆ ಜೆಸ್ಕಾಂ ವ್ಯಾಪ್ತಿಯಲ್ಲಿ ಅರ್ಜಿಗಳ ಸಲ್ಲಿಕೆಗೆ ಉತ್ತಮ ಸ್ಪಂದನೆ ಸಿಕ್ಕಿದ್ದರೂ ಸೋಲಾರ್ ಪ್ಯಾನಲ್ ಅಳವಡಿಸಿಕೊಳ್ಳುವಲ್ಲಿ ಗ್ರಾಹಕರು ನಿರಾಸಕ್ತಿ ತೋರುತ್ತಿದ್ದಾರೆ. ಫೆಬ್ರುವರಿ 29ರಂದು ಈ ಯೋಜನೆಗೆ ಚಾಲನೆ ದೊರಕಿದ್ದು, 10 ತಿಂಗಳ ಅವಧಿಯಲ್ಲಿ ಗುಲಬರ್ಗಾ ವಿದ್ಯುತ್ ಸರಬರಾಜು ಕಂಪನಿ (ಜೆಸ್ಕಾಂ) ವ್ಯಾಪ್ತಿಯ ಏಳು ಜಿಲ್ಲೆಗಳಲ್ಲಿ 7,083 ಅರ್ಜಿಗಳು ಸಲ್ಲಿಕೆಯಾಗಿವೆ. ಆದರೆ, ಇದರಲ್ಲಿ 244 ಜನರು ಮಾತ್ರ ಸೋಲಾರ್ ಪ್ಯಾನಲ್ಗಳನ್ನು ಅಳವಡಿಸಿಕೊಂಡಿದ್ದಾರೆ. …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





