ಬೆಂಗಳೂರು: ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಅಕ್ಟೋಬರ್ 27ರಂದು ನಡೆಸಲಾದ ಲಿಖಿತ ಪರೀಕ್ಷೆಯಲ್ಲಿ ಅಭ್ಯರ್ಥಿಗಳು ಪಡೆದಿರುವ ಅಂಕಗಳ ಅಂತಿಮ ಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಗುರುವಾರ ಪ್ರಕಟಿಸಿದೆ. ಕಡ್ಡಾಯ ಕನ್ನಡ ಪರೀಕ್ಷೆಯಲ್ಲಿ ಕನಿಷ್ಠ 50 ಅಂಕ ಪಡೆದಿರುವ ಹಾಗೂ ಪತ್ರಿಕೆ -1 ಮತ್ತು ಪತ್ರಿಕೆ- 2ರಲ್ಲಿ ಕನಿಷ್ಠ ಶೇ 35ರಷ್ಟು ಅಂಕ ಪಡೆದಿರುವ ಅರ್ಹರ ಪಟ್ಟಿಯನ್ನು ಮಾತ್ರ ಪ್ರಕಟಿಸಲಾಗಿದೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಪತ್ರಿಕಾ ಹೇಳಿದ್ದಾರೆ. ಈ …
Read More »ಬೀದರ್ ನಲ್ಲಿ ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ಭತ್ತ ಮತ್ತು ಜೋಳ ಖರೀದಿ ಕೇಂದ್ರ ಪ್ರಾರಂಭ: ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ
ಬೀದರ್ : ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಭತ್ತ ಮತ್ತು ಜೋಳ ಖರೀದಿ ಕೇಂದ್ರ ಪ್ರಾರಂಭ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ತಿಳಿಸಿದ್ದಾರೆ. ಕರ್ನಾಟಕ ಸರ್ಕಾರದ ಆದೇಶದಂತೆ 2024-25ನೇ ಸಾಲಿನ ಕನಿಷ್ಠ ಬೆಂಬಲ ಬೆಲೆ ಯೋಜನೆ ಅಡಿಯಲ್ಲಿ ರೈತರಿಂದ ಭತ್ತ (ಸಾಮಾನ್ಯ ಪ್ರತಿ ಕ್ವಿಂಟಾಲ್ಗೆ 2,300 ರೂ.) ಹಾಗೂ ಭತ್ತ (ಗ್ರೇಡ್-ಎ ಪ್ರತಿ ಕ್ವಿಂಟಾಲ್ಗೆ 2,320 ರೂ.) ರಂತೆ ಖರೀದಿಸಲು ಹಾಗೂ ಬಿಳಿಜೋಳ (ಹೈಬ್ರಿಡ್ ಪ್ರತಿ ಕ್ವಿಂಟಾಲ್ಗೆ 3371 …
Read More »ಗ್ಯಾರಂಟಿ ಯೋಜನೆಗಳಿಂದ ರಾಜ್ಯದಲ್ಲಿ ಅಭಿವೃದ್ದಿ ಕಾರ್ಯ ಕುಂಠಿತವಾಗಿಲ್ಲ: ಸಿಎಂ ಸಿದ್ದರಾಮಯ್ಯ
ಬೆಳಗಾವಿ : ಗ್ಯಾರಂಟಿ ಯೋಜನೆಗಳಿಂದ ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯ ಕುಂಠಿತವಾಗಿಲ್ಲ, ರಾಜ್ಯದಲ್ಲಿ 2023-24 ರಲ್ಲಿ ಅಭಿವೃದ್ಧಿ ವೆಚ್ಚಗಳಿಗಾಗಿ 1,14,292 ಕೋಟಿ ರೂ ವೆಚ್ಚ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಅವರು ಇಂದು ವಿಧಾನ ಪರಿಷತ್ತಿನಲ್ಲಿ ಸದಸ್ಯ ಕೆ.ಎ. ತಿಪ್ಪೇಸ್ವಾಮಿ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದರು. ಸರ್ಕಾರವು 5 ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನ ಗೊಳಿಸಲು ಸದ್ರಿ ಯೋಜನೆಗಳಿಗೆ ಆಯವ್ಯಯ ದಲ್ಲಿ 52,009 ಕೋಟಿ ರೂ ಗಳನ್ನು ಒದಗಿಸಿದೆ. ರಾಜ್ಯ …
Read More »ಚಳಿಗಾಲ ಅಧಿವೇಶದಲ್ಲಿ ಸರ್ಕಾರದಿಂದ ಮಹತ್ವದ ತಿದ್ದುಪಡಿ ವಿಧೇಯಕಗಳ ಮಂಡನೆ
ಬೆಳಗಾವಿ : ಚಳಿಗಾಲದ ಅಧಿವೇಶನದಲ್ಲಿ ರಾಜ್ಯ ಸರ್ಕಾರದಿಂದ 2020-2024ನೇ ಸಾಲಿಗೆ ಹಲವು ಪ್ರಮುಖ ತಿದ್ದುಪಡಿ ವಿಧೇಯಕಗಳನ್ನು ಮಂಡಿಸಲಾಯಿತು. 2024ನೇ ಸಾಲಿನ ಕರ್ನಾಟಕ ಸರಕು ಮತ್ತು ಸೇವೆಗಳ ತೆರಿಗೆ 2ನೇ ತಿದ್ದುಪಡಿ ವಿಧೇಯಕ ಮಂಡನೆಗೆ ಸದನವು ಅನುಮತಿಸಿತು. ಪ್ರಶ್ನೋತ್ತರ ಅವಧಿಗೂ ಮುನ್ನ ವಿಧೇಯಕ ಮಂಡನೆ ಪ್ರಸ್ತಾವನೆ ಪರವಾಗಿರುವ ಸದಸ್ಯರು ಹೌದು ಎಂದು, ಪ್ರಸ್ತಾವ ವಿರುದ್ಧವಾಗಿರುವ ಸದಸ್ಯರು ಇಲ್ಲ ಎಂದು ಧ್ವನಿ ಮೂಲಕ ಸೂಚಿಸುವಂತೆ ಸ್ಪೀಕರ್ ಯು.ಟಿ.ಖಾದರ್ ಅವರು ಸದನ ಸದಸ್ಯರಿಗೆ ಸೂಚನೆ …
Read More »ಆಲಮಟ್ಟಿ ಜಲಾಶಯವನ್ನು ಪೂರ್ವ ನಿಗದಿತ 524 ಮೀ. ಗೆ ಎತ್ತರಿಸಲು ರಾಜ್ಯ ಸರ್ಕಾರ ಬದ್ಧ: ಡಿಸಿಎಂ ಡಿಕೆ ಶಿವಕುಮಾರ್
ವಿಜಯಪುರ: ಕೃಷ್ಣಾ ಮೇಲ್ದಂಡೆ ಯೋಜನೆಗೆ ಸಂಬಂಧಿಸಿದಂತೆ ಆಲಮಟ್ಟಿ ಜಲಾಶಯವನ್ನು ಪೂರ್ವ ನಿಗದಿತ 524.256 ಮೀಟರ್ ಗೆ ಎತ್ತರಿಸಲು ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಉಪ ಮುಖ್ಯಮಂತ್ರಿಯೂ ಆದ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಹೇಳಿದರು. ಕೃಷ್ಣಾ ಮೇಲ್ದಂಡೆ ಯೋಜನೆ ಭೂಸ್ವಾಧೀನ: ಸರ್ಕಾರಕ್ಕೆ ನಿತ್ಯ ₹1 ಕೋಟಿ ಬಡ್ಡಿ ಹೊರೆ! ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದಿನ ಬಸವರಾಜ ಬೊಮ್ಮಾಯಿ ಸರ್ಕಾರದಲ್ಲಿ ಮುಳುಗಡೆ ಭೂಮಿಗೆ ನಿಗದಿಯಾದ ಪರಿಹಾರ ಕೊಡಲು ನಮ್ಮ ಸರ್ಕಾರದ …
Read More »ಒಟ್ಟು 77 ಟನ್ ಚಿನ್ನ ಖರೀದಿಸಿದ ಭಾರತೀಯ ರಿಸರ್ವ್ ಬ್ಯಾಂಕ್
ಮುಂಬೈ: ಭಾರತೀಯ ರಿಸರ್ವ್ ಬ್ಯಾಂಕ್ (RBI) ಭವಿಷ್ಯದ ದೃಷ್ಟಿಯಿಂದ ಈ ವರ್ಷ ಅತ್ಯಧಿಕ ಚಿನ್ನ ಖರೀದಿಸಿದೆ. ಅಕ್ಟೋಬರ್ನಲ್ಲಿ ಆರ್ಬಿಐ ಖರೀದಿಸಿದ ಬಂಗಾರವು ಇತರ ಕೇಂದ್ರೀಯ ಬ್ಯಾಂಕ್ಗಳು ಖರೀದಿಸಿದ ಒಟ್ಟು ಚಿನ್ನದ ಶೇಕಡಾ 48ರಷ್ಟು ಎಂದು ವರದಿ ಆಗಿದೆ. ಪ್ರಸಕ್ತ ಅಕ್ಟೋಬರ್ ವರೆಗೆ ಆರ್ಬಿಐ ಬರೋಬ್ಬರಿ 77 ಟನ್ ಚಿನ್ನ ಖರೀದಿಸಿದೆ. ಈ ಎಲ್ಲ ಅಂಕಿಸಂಖ್ಯೆಗಳನ್ನು ನೋಡಿದರೆ ಚಿನ್ನದ ಬೇಡಿಕೆ ಎಷ್ಟಿದೆ ಎಂಬುದು ಗೊತ್ತಾಗುತ್ತದೆ. ಅಕ್ಟೋಬರ್ ಒಂದೇ ತಿಂಗಳಿನಲ್ಲಿ ಮೀಸಲು ಉದ್ದೇಶಕ್ಕಾಗಿ …
Read More »ಬೆಳಗಾವಿಯಲ್ಲಿ ಮತ್ತೆ ತೀವ್ರ ಸ್ವರೂಪ ಪಡೆದ ಪಂಚಮಸಾಲಿ ಪ್ರತಿಭಟನೆ: ಹೆದ್ದಾರಿ ತಡೆದು ಹೋರಾಟಗಾರರಿಂದ ಆಕ್ರೋಶ
ಬೆಳಗಾವಿ: ಪಂಚಮಸಾಲಿ ಹೋರಟಗಾರರ ಮೇಲೆ ಲಾಠಿ ಚಾರ್ಜ್ ನಡೆಸಿರುವ ಕ್ರಮ ಖಂಡಿಸಿ ರಾಜ್ಯಾದ್ಯಂತ ಪಂಚಮಸಾಲಿ ಸಮುದಾಯದವರು ಪ್ರತಿಭಟನೆ ತೀವ್ರಗೊಳಿಸಿದ್ದಾರೆ. ಅದರಲ್ಲಿಯೂ ಬೆಳಗಾವಿಯಲ್ಲಿ ಪ್ರತಿಭಟನೆ ಮತ್ತೆ ತೀವ್ರ ಸ್ವರೂಪ ಪಡೆಯುತ್ತಿದೆ. ಬೆಳಗಾವಿಯ ಹಿರೆಬಾಗೇವಾಡಿ, ಅಥಣಿ ಸೇರಿದಂತೆ ಹಲವೆಡೆ ಹೆದ್ದಾರಿಗಳನ್ನು ತಡೆದು ಪ್ರತಿಭಟನೆ ನಡೆಸಲಾಗುತ್ತಿದೆ. ಪೊಲಿಸರು ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಥಣಿಯಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆದು, ಟೈರ್ ಗೆ ಬೆಂಕಿ ಹಚ್ಚಿ ಪ್ರತಿಭಟನಾಕಾರರು ಆಕ್ರೋಶ …
Read More »ದೆಹಲಿಯಲ್ಲಿ ಮಹಿಳೆಯರಿಗೆ ಮಾಸಿಕ 1000 ಆರ್ಥಿಕ ನೆರವು ಯೋಜನೆಗೆ ಅರವಿಂದ ಕೇಜ್ರಿವಾಲ್ ಚಾಲನೆ
ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಮಹಿಳೆಯರಿಗೆ ಮಾಸಿಕ ₹1000 ಆರ್ಥಿಕ ನೆರವು ನೀಡುವ ‘ಮುಖ್ಯಮಂತ್ರಿ ಮಹಿಳಾ ಸಮ್ಮಾನ ಯೋಜನೆ’ಗೆ ಮಾಜಿ ಮುಖ್ಯಮಂತ್ರಿ, ಆಮ್ ಆದ್ಮಿ ಪಕ್ಷದ ಸಂಚಾಲಕ ಅರವಿಂದ ಕೇಜ್ರಿವಾಲ್ ಇಂದು (ಗುರುವಾರ) ಚಾಲನೆ ನೀಡಿದ್ದಾರೆ. ದೆಹಲಿ ವಿಧಾನಸಭೆ ಚುನಾವಣೆಯ ಬಳಿಕ ಎಎಪಿ ಸರ್ಕಾರ ಮತ್ತೆ ಅಧಿಕಾರಕ್ಕೆ ಬಂದರೆ ಆರ್ಥಿಕ ನೆರವಿನ ಮೊತ್ತವನ್ನು ₹2,100ಕ್ಕೆ ಹೆಚ್ಚಿಸಲಾಗುವುದು ಎಂದು ಅವರು ಭರವಸೆ ನೀಡಿದ್ದಾರೆ. ಆದಾಗ್ಯೂ, ದೆಹಲಿಯಲ್ಲಿ ಶೀಘ್ರದಲ್ಲೇ ಚುನಾವಣೆ ಘೋಷಣೆಯಾಗಿ ಮಾದರಿ ಸಂಹಿತೆ …
Read More »2ಎ ಮೀಸಲಾತಿ ಒತ್ತಾಯ ಸಂವಿಧಾನಕ್ಕೆ ವಿರುದ್ಧವಾಗಿದೆ: ಸಿಎಂ ಸಿದ್ದರಾಮಯ್ಯ
ಬೆಳಗಾವಿ: ಈಗಾಗಲೇ ರಾಜ್ಯದಲ್ಲಿ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡುವುದರ ಕುರಿತು ಕೂಡಲಸಂಗಮ ಪಂಚಮಸಾಲಿ ಪೀಠದ ಜಯಮೃತ್ಯುಂಜಯ ಸ್ವಾಮಿಗಳ ಜೊತೆ ಎರಡು ಬಾರಿ ಸಭೆ ಮಾಡಿದ್ದೇನೆ. ಅವರಿಗೆ ಪ್ರತಿಭಟನೆ ಮಾಡಲು ಅವಕಾಶ ಇದೆ. ಆದರೆ, 2ಎ ಮೀಸಲಾತಿ ಒತ್ತಾಯ ಸಂವಿಧಾನಕ್ಕೆ ವಿರುದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು. ವಿಧಾನ ಪರಿಷತ್ ಅಧಿವೇಶನದಲ್ಲಿ ಇಂದು ಪಾಲ್ಗೊಂಡು ಮಾತನಾಡಿದ ಅವರು, ಪಂಚಮಸಾಲಿ ಮೀಸಲಾತಿ ಹೋರಾಟದ ವಿಚಾರವಾಗಿ ಜಯಮೃತ್ಯುಂಜಯ ಸ್ವಾಮಿಗಳ ಜೊತೆ 2 …
Read More »ಒನ್ ನೇಷನ್ ಒನ್ ಎಲೆಕ್ಷನ್ ಬಿಲ್ ಗೆ ಕೇಂದ್ರ ಕ್ಯಾಬಿನೆಟ್ ಅನುಮೋದನೆ
ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯ 3ನೇ ಅವಧಿ ಸರ್ಕಾರದಲ್ಲಿ ಕೆಲ ಬಹುನಿರೀಕ್ಷಿತ ಮಸೂದೆಗಳ ಪೈಕಿ ಒಂದು ರಾಷ್ಟ್ರ ಒಂದು ಚುನಾವಣೆ ಪ್ರಮುಖವಾಗಿದೆ. ಇದೇ ಚಳಿಗಾಲದ ಅಧಿವೇಶದಲ್ಲಿ ಮಸೂದೆ ಮಂಡನೆಯಾಗಲಿದೆ. ಇದಕ್ಕೆ ಪೂರಕವಾಗಿ ಇದೀಕ ಕೇಂದ್ರ ಕ್ಯಾಬಿನೆಟ್ ಒನ್ ನೇಷನ್ ಒನ್ ಎಲೆಕ್ಷನ್ ಬಿಲ್ಗೆ ಅನುಮೋದನೆ ನೀಡಿದೆ. ಈ ಮೂಲಕ ಮೋದಿ ಸರ್ಕಾರ, ದೇಶದ ಚುನಾವಣಾ ವ್ಯವಸ್ಥೆಯಲ್ಲಿ ಮಾಡಲು ಹೊರಟಿರುವ ಮಹತ್ವದ ಬಿಲ್ಗೆ ಶೀಘ್ರದಲ್ಲೇ ಎರಡು ಸದನಗಳಲ್ಲಿ ಮಂಡನೆಯಾಗಲಿದೆ. ಏಕಕಾಲಕ್ಕೆ ದೇಶದಲ್ಲಿ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





