Breaking News

BigTv News

ಆಲಮಟ್ಟಿ ಜಲಾಶಯವನ್ನು ಪೂರ್ವ ನಿಗದಿತ 524 ಮೀ. ಗೆ ಎತ್ತರಿಸಲು ರಾಜ್ಯ ಸರ್ಕಾರ ಬದ್ಧ: ಡಿಸಿಎಂ ಡಿಕೆ ಶಿವಕುಮಾರ್

ವಿಜಯಪುರ: ಕೃಷ್ಣಾ ಮೇಲ್ದಂಡೆ ಯೋಜನೆಗೆ ಸಂಬಂಧಿಸಿದಂತೆ ಆಲಮಟ್ಟಿ ಜಲಾಶಯವನ್ನು ಪೂರ್ವ ನಿಗದಿತ 524.256 ಮೀಟರ್ ಗೆ ಎತ್ತರಿಸಲು ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಉಪ ಮುಖ್ಯಮಂತ್ರಿಯೂ ಆದ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಹೇಳಿದರು. ಕೃಷ್ಣಾ ಮೇಲ್ದಂಡೆ ಯೋಜನೆ ಭೂಸ್ವಾಧೀನ: ಸರ್ಕಾರಕ್ಕೆ ನಿತ್ಯ ₹1 ಕೋಟಿ ಬಡ್ಡಿ ಹೊರೆ! ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದಿನ ಬಸವರಾಜ ಬೊಮ್ಮಾಯಿ ಸರ್ಕಾರದಲ್ಲಿ ಮುಳುಗಡೆ ಭೂಮಿಗೆ ನಿಗದಿಯಾದ ಪರಿಹಾರ ಕೊಡಲು ನಮ್ಮ ಸರ್ಕಾರದ …

Read More »

ಒಟ್ಟು 77 ಟನ್ ಚಿನ್ನ ಖರೀದಿಸಿದ ಭಾರತೀಯ ರಿಸರ್ವ್ ಬ್ಯಾಂಕ್

ಮುಂಬೈ: ಭಾರತೀಯ ರಿಸರ್ವ್ ಬ್ಯಾಂಕ್ (RBI) ಭವಿಷ್ಯದ ದೃಷ್ಟಿಯಿಂದ ಈ ವರ್ಷ ಅತ್ಯಧಿಕ ಚಿನ್ನ ಖರೀದಿಸಿದೆ. ಅಕ್ಟೋಬರ್‌ನಲ್ಲಿ ಆರ್‌ಬಿಐ ಖರೀದಿಸಿದ ಬಂಗಾರವು ಇತರ ಕೇಂದ್ರೀಯ ಬ್ಯಾಂಕ್‌ಗಳು ಖರೀದಿಸಿದ ಒಟ್ಟು ಚಿನ್ನದ ಶೇಕಡಾ 48ರಷ್ಟು ಎಂದು ವರದಿ ಆಗಿದೆ. ಪ್ರಸಕ್ತ ಅಕ್ಟೋಬರ್ ವರೆಗೆ ಆರ್‌ಬಿಐ ಬರೋಬ್ಬರಿ 77 ಟನ್ ಚಿನ್ನ ಖರೀದಿಸಿದೆ. ಈ ಎಲ್ಲ ಅಂಕಿಸಂಖ್ಯೆಗಳನ್ನು ನೋಡಿದರೆ ಚಿನ್ನದ ಬೇಡಿಕೆ ಎಷ್ಟಿದೆ ಎಂಬುದು ಗೊತ್ತಾಗುತ್ತದೆ. ಅಕ್ಟೋಬರ್ ಒಂದೇ ತಿಂಗಳಿನಲ್ಲಿ ಮೀಸಲು ಉದ್ದೇಶಕ್ಕಾಗಿ …

Read More »

ಬೆಳಗಾವಿಯಲ್ಲಿ ಮತ್ತೆ ತೀವ್ರ ಸ್ವರೂಪ ಪಡೆದ ಪಂಚಮಸಾಲಿ ಪ್ರತಿಭಟನೆ: ಹೆದ್ದಾರಿ ತಡೆದು ಹೋರಾಟಗಾರರಿಂದ ಆಕ್ರೋಶ

ಬೆಳಗಾವಿ: ಪಂಚಮಸಾಲಿ ಹೋರಟಗಾರರ ಮೇಲೆ ಲಾಠಿ ಚಾರ್ಜ್ ನಡೆಸಿರುವ ಕ್ರಮ ಖಂಡಿಸಿ ರಾಜ್ಯಾದ್ಯಂತ ಪಂಚಮಸಾಲಿ ಸಮುದಾಯದವರು ಪ್ರತಿಭಟನೆ ತೀವ್ರಗೊಳಿಸಿದ್ದಾರೆ. ಅದರಲ್ಲಿಯೂ ಬೆಳಗಾವಿಯಲ್ಲಿ ಪ್ರತಿಭಟನೆ ಮತ್ತೆ ತೀವ್ರ ಸ್ವರೂಪ ಪಡೆಯುತ್ತಿದೆ. ಬೆಳಗಾವಿಯ ಹಿರೆಬಾಗೇವಾಡಿ, ಅಥಣಿ ಸೇರಿದಂತೆ ಹಲವೆಡೆ ಹೆದ್ದಾರಿಗಳನ್ನು ತಡೆದು ಪ್ರತಿಭಟನೆ ನಡೆಸಲಾಗುತ್ತಿದೆ. ಪೊಲಿಸರು ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಥಣಿಯಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆದು, ಟೈರ್ ಗೆ ಬೆಂಕಿ ಹಚ್ಚಿ ಪ್ರತಿಭಟನಾಕಾರರು ಆಕ್ರೋಶ …

Read More »

ದೆಹಲಿಯಲ್ಲಿ ಮಹಿಳೆಯರಿಗೆ ಮಾಸಿಕ 1000 ಆರ್ಥಿಕ ನೆರವು ಯೋಜನೆಗೆ ಅರವಿಂದ ಕೇಜ್ರಿವಾಲ್ ಚಾಲನೆ

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಮಹಿಳೆಯರಿಗೆ ಮಾಸಿಕ ₹1000 ಆರ್ಥಿಕ ನೆರವು ನೀಡುವ ‘ಮುಖ್ಯಮಂತ್ರಿ ಮಹಿಳಾ ಸಮ್ಮಾನ ಯೋಜನೆ’ಗೆ ಮಾಜಿ ಮುಖ್ಯಮಂತ್ರಿ, ಆಮ್ ಆದ್ಮಿ ಪಕ್ಷದ ಸಂಚಾಲಕ ಅರವಿಂದ ಕೇಜ್ರಿವಾಲ್ ಇಂದು (ಗುರುವಾರ) ಚಾಲನೆ ನೀಡಿದ್ದಾರೆ. ದೆಹಲಿ ವಿಧಾನಸಭೆ ಚುನಾವಣೆಯ ಬಳಿಕ ಎಎಪಿ ಸರ್ಕಾರ ಮತ್ತೆ ಅಧಿಕಾರಕ್ಕೆ ಬಂದರೆ ಆರ್ಥಿಕ ನೆರವಿನ ಮೊತ್ತವನ್ನು ₹2,100ಕ್ಕೆ ಹೆಚ್ಚಿಸಲಾಗುವುದು ಎಂದು ಅವರು ಭರವಸೆ ನೀಡಿದ್ದಾರೆ. ಆದಾಗ್ಯೂ, ದೆಹಲಿಯಲ್ಲಿ ಶೀಘ್ರದಲ್ಲೇ ಚುನಾವಣೆ ಘೋಷಣೆಯಾಗಿ ಮಾದರಿ ಸಂಹಿತೆ …

Read More »

2ಎ ಮೀಸಲಾತಿ ಒತ್ತಾಯ ಸಂವಿಧಾನಕ್ಕೆ ವಿರುದ್ಧವಾಗಿದೆ: ಸಿಎಂ ಸಿದ್ದರಾಮಯ್ಯ

ಬೆಳಗಾವಿ: ಈಗಾಗಲೇ ರಾಜ್ಯದಲ್ಲಿ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡುವುದರ ಕುರಿತು ಕೂಡಲಸಂಗಮ ಪಂಚಮಸಾಲಿ ಪೀಠದ ಜಯಮೃತ್ಯುಂಜಯ ಸ್ವಾಮಿಗಳ ಜೊತೆ ಎರಡು ಬಾರಿ ಸಭೆ ಮಾಡಿದ್ದೇನೆ. ಅವರಿಗೆ ಪ್ರತಿಭಟನೆ ಮಾಡಲು ಅವಕಾಶ ಇದೆ. ಆದರೆ, 2ಎ ಮೀಸಲಾತಿ ಒತ್ತಾಯ ಸಂವಿಧಾನಕ್ಕೆ‌ ವಿರುದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು. ವಿಧಾನ ಪರಿಷತ್‌ ಅಧಿವೇಶನದಲ್ಲಿ ಇಂದು ಪಾಲ್ಗೊಂಡು ಮಾತನಾಡಿದ ಅವರು, ಪಂಚಮಸಾಲಿ ಮೀಸಲಾತಿ ಹೋರಾಟದ ವಿಚಾರವಾಗಿ ಜಯಮೃತ್ಯುಂಜಯ ಸ್ವಾಮಿಗಳ ಜೊತೆ 2 …

Read More »

ಒನ್ ನೇಷನ್ ಒನ್ ಎಲೆಕ್ಷನ್ ಬಿಲ್ ಗೆ ಕೇಂದ್ರ ಕ್ಯಾಬಿನೆಟ್ ಅನುಮೋದನೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯ 3ನೇ ಅವಧಿ ಸರ್ಕಾರದಲ್ಲಿ ಕೆಲ ಬಹುನಿರೀಕ್ಷಿತ ಮಸೂದೆಗಳ ಪೈಕಿ ಒಂದು ರಾಷ್ಟ್ರ ಒಂದು ಚುನಾವಣೆ ಪ್ರಮುಖವಾಗಿದೆ. ಇದೇ ಚಳಿಗಾಲದ ಅಧಿವೇಶದಲ್ಲಿ ಮಸೂದೆ ಮಂಡನೆಯಾಗಲಿದೆ. ಇದಕ್ಕೆ ಪೂರಕವಾಗಿ ಇದೀಕ ಕೇಂದ್ರ ಕ್ಯಾಬಿನೆಟ್ ಒನ್ ನೇಷನ್ ಒನ್ ಎಲೆಕ್ಷನ್ ಬಿಲ್‌ಗೆ ಅನುಮೋದನೆ ನೀಡಿದೆ. ಈ ಮೂಲಕ ಮೋದಿ ಸರ್ಕಾರ, ದೇಶದ ಚುನಾವಣಾ ವ್ಯವಸ್ಥೆಯಲ್ಲಿ ಮಾಡಲು ಹೊರಟಿರುವ ಮಹತ್ವದ ಬಿಲ್‌ಗೆ ಶೀಘ್ರದಲ್ಲೇ ಎರಡು ಸದನಗಳಲ್ಲಿ ಮಂಡನೆಯಾಗಲಿದೆ. ಏಕಕಾಲಕ್ಕೆ ದೇಶದಲ್ಲಿ …

Read More »

ಬೆಳಗಾವಿ: ಮನರೇಗಾ ಕಾಮಗಾರಿಗಳನ್ನು ಪರಿಶೀಲಿಸಿದ ಪಿ.ಜಿ.ವೇಣುಗೋಪಾಲ್

ಬೆಳಗಾವಿ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಕೈಗೊಳ್ಳಲಾದ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಗ್ರಾಮೀಣಾಭಿವೃದ್ಧಿ ಆಯುಕ್ತಾಲಯದ ತಾಂತ್ರಿಕ ವಿಭಾಗದ ಜಂಟಿ ನಿರ್ದೇಶಕ ಪಿ.ಜಿ. ವೇಣುಗೋಪಾಲ್ ಅವರು ಭೇಟಿ ನೀಡಿ ಪರಿಶೀಲಿಸಿದರು. ಬೆಳಗಾವಿ ತಾಲೂಕಿನ ಮುಚ್ಚಂಡಿ ಗ್ರಾಪಂ ವ್ಯಾಪ್ತಿಯಲ್ಲಿನ ಅರಣ್ಯ ಪ್ರದೇಶದಲ್ಲಿ ನಿರ್ಮಿಸಿದ ಹೊಸ ಕೆರೆ, ಭೇಟಿ ನೀಡಿ ಕೆಲಸ ಮಾಡುತ್ತಿದ್ದ 264 ಕೂಲಿಕಾರರೊಂದಿಗೆ ಮಾತನಾಡುತ್ತಾ ಮೇಟ್ ಗಳಿಂದ ಕೂಲಿಕಾರರ ಕೆಲಸದ ಪ್ರಮಾಣ ಮತ್ತು ಎನ್.ಎಮ್.ಎಮ್.ಎಸ್ ಮಾಹಿತಿ ಪಡೆದುಕೊಂಡು …

Read More »

ರಾಷ್ಟ್ರೀಯ ಹೆದ್ದಾರಿಗೆ ನಿರ್ಮಿಸಿದ ಅವೈಜ್ಞಾನಿಕ ಸೇತುವೆ ಸರಿಪಡಿಸಲು ಗಡ್ಕರಿಗೆ ಮನವಿ ಸಲ್ಲಿಸಿದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ

ದಾವಣಗೆರೆ: ಇಲ್ಲಿನ ಎಸ್‌.ಎಸ್‌.ಹೈಟೆಕ್‌ ಆಸ್ಪತ್ರೆಯ ಸಮೀಪ ರಾಷ್ಟ್ರೀಯ ಹೆದ್ದಾರಿಗೆ ನಿರ್ಮಿಸಿದ ಸೇತುವೆ ಅವೈಜ್ಞಾನಿಕವಾಗಿದ್ದು, ಕೂಡಲೇ ಸರಿಪಡಿಸಬೇಕು. ಇಲ್ಲವೇ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕು ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್‌ ಅವರು ಕೇಂದ್ರ ಸಚಿವ ನಿತಿನ್‌ ಗಡ್ಕರಿ ಅವರಿಗೆ ಮನವಿ ಸಲ್ಲಿಸಿದರು. ಸಂಸತ್ತಿನ ಚಳಿಗಾಲದ ಅಧಿವೇಶನಲ್ಲಿ ಪಾಲ್ಗೊಂಡಿರುವ ಅವರು ಈ ಕುರಿತು ಬುಧವಾರ ಸಚಿವರ ಗಮನ ಸೆಳೆದರು. ಪೊಲೀಸ್ ಮತ್ತು ಲೋಕೋಪಯೋಗಿ ಇಲಾಖೆ ಒದಗಿಸಿದ ಅಂಕಿ-ಅಂಶಗಳನ್ನು ಒಳಗೊಂಡಿರುವ ಮನವಿಯನ್ನು ಸಚಿವರಿಗೆ ನೀಡಿದರು. ಜಯನಗರದಿಂದ …

Read More »

ಭಾರತೀಯ ರೈಲ್ವೆಯಲ್ಲಿ 58,642 ಖಾಲಿ ಹುದ್ದೆಗಳ ಭರ್ತಿ: ಕೇಂದ್ರ ಸಚಿವ ಅಶ್ವಿನಿ ವೈಷ್ಣವ್

ನವದೆಹಲಿ: ರೈಲ್ವೆಯಲ್ಲಿ ಯುವಕರಿಗೆ ಗರಿಷ್ಠ ಅವಕಾಶಗಳನ್ನು ಒದಗಿಸಲು ಕೇಂದ್ರ ಸರ್ಕಾರ ಬದ್ಧವಾಗಿದೆ ಎಂದು ಪ್ರತಿಪಾದಿಸಿದ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್, ರೈಲ್ವೆಯಲ್ಲಿ ಖಾಲಿ ಇರುವ 58,642 ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದೆ ಎಂದು ಹೇಳಿದರು. ಲೋಕಸಭೆಯಲ್ಲಿ ರೈಲ್ವೆ (ತಿದ್ದುಪಡಿ) ಮಸೂದೆ, 2024 ಕುರಿತ ಚರ್ಚೆಗೆ ಉತ್ತರಿಸುವಾಗ ರೈಲ್ವೆ ಸಚಿವರು ಈ ವಿಷಯ ತಿಳಿಸಿದರು. ಅವರ ಉತ್ತರದ ನಂತರ, ಸದನವು ಧ್ವನಿ ಮತದಿಂದ ಮಸೂದೆಯನ್ನು ಅಂಗೀಕರಿಸಿತು. ಯುಪಿಎ ಸರ್ಕಾರದ ಅವಧಿಯಲ್ಲಿ 4,11,000 …

Read More »

ಕೃಷಿ ವಿಕಾಸ ಯೋಜನೆಯಡಿ ಸ್ಟಾರ್ಟ್‌ಅಪ್ ಗಳಿಗೆ ₹122.50 ಕೋಟಿ ರೂ. ಅನುದಾನ: ಈರಣ್ಣ ಕಡಾಡಿ

ಮೂಡಲಗಿ: ‘ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯು 2018-19ನೇ ಸಾಲಿನಿಂದ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ 2019-20 ರಿಂದ 2023-24ರ ವರೆಗೆ 1708 ಕೃಷಿ ಸ್ಟಾರ್ಟ್‌ ಅಪ್‌ಗಳಿಗೆ ₹122.50 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ರಾಮನಾಥ್ ಠಾಕೂರ್ ಅವರು ಲಿಖಿತ ಉತ್ತರದಲ್ಲಿ ಮಾಹಿತಿ ನೀಡಿದ್ದಾರೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ತಿಳಿಸಿದ್ದಾರೆ. ನವದೆಹಲಿಯಲ್ಲಿ ನಡೆಯುತ್ತಿರುವ ಸಂಸತ್ತಿನ ಚಳಿಗಾಲದ …

Read More »