Breaking News

BigTv News

ಮಾಜಿ ಸಿಎಂ ಎಸ್.ಎಂ.ಕೃಷ್ಣ ನಿಧನ: ರಾಜ್ಯಾದ್ಯಂತ ನಾಳೆ ಸರ್ಕಾರಿ ರಜೆ ಘೋಷಣೆ

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಹಾಗೂ ಮಾಜಿ ವಿದೇಶಾಂಗ ಸಚಿವ ಎಸ್‌ಎಂ ಕೃಷ್ಣ ಅವರ ನಿಧನ ಹಿನ್ನೆಲೆಯಲ್ಲಿ ನಾಳೆ ರಾಜ್ಯಾದ್ಯಂತ ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು. ನಾಳೆ ರಾಜ್ಯಾದ್ಯಂತ ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ. ಬೆಂಗಳೂರಿನಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಬಗ್ಗೆ ಮಾಹಿತಿ ನೀಡಿದ್ದಾರೆ. ನಾಳೆ ರಾಜ್ಯದ ಸರ್ಕಾರಿ ರಜೆ ಇರುತ್ತದೆ. ಅಲ್ಲದೆ ನಾಳೆ ಬೆಳಿಗ್ಗೆ 8 ಗಂಟೆವರೆಗೆ ಅಂತಿಮ …

Read More »

ಸಕಲ ಸರ್ಕಾರಿ ಗೌರವಗಳೊಂದಿಗೆ ಮಾಜಿ ಸಿಎಂ ಎಸ್.ಎಂ.ಕೃಷ್ಣ ಅಂತ್ಯಕ್ರಿಯೆ: 3 ದಿನ ಶೋಕಾಚರಣೆ ಘೋಷಿಸಿ ರಾಜ್ಯಸರ್ಕಾರ ಆದೇಶ

ಬೆಂಗಳೂರು : ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್​ಎಂ ಕೃಷ್ಣ ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ತಡರಾತ್ರಿ ನಿಧನರಾಗಿದ್ದು, ಸಕಲ ಸರ್ಕಾರಿ ಗೌರವಗಳೊಂದಿಗೆ ಡಿಸೆಂಬರ್ 11 ರಂದು ಅಂತ್ಯಕ್ರಿಯೆ ನಡೆಸಲಾಗುವುದು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿಗಳು ಹಾಗೂ ಮಾಜಿ ಕೇಂದ್ರ ಸಚಿವರಾಗಿದ್ದ ಶ್ರೀ ಎಸ್ ಎಂ ಕೃಷ್ಣ ರವರು ದಿನಾಂಕ: 10.12.2024ರ ಮಂಗಳವಾರದಂದು ಪೂರ್ವಾಹ್ನ 02:30ಕ್ಕೆ ನಿಧನರಾದ ವಿಷಯವನ್ನು ಕರ್ನಾಟಕ ರಾಜ್ಯ …

Read More »

ರೈತರ ಬಗ್ಗೆ ನಿರ್ಲಕ್ಷ್ಯ ಧೋರಣೆ ವಿರೋಧಿಸಿ ಡಿ.13 ರಂದು ಸುವರ್ಣಸೌಧ ಮುತ್ತಿಗೆ: ಕೋಡಿಹಳ್ಳಿ ಚಂದ್ರಶೇಖರ್

ದಾವಣಗೆರೆ: ರೈತರ ಬಗೆಗೆ ರಾಜ್ಯ ಸರ್ಕಾರ ತಳೆದಿರುವ ನಿರ್ಲಕ್ಷ್ಯ ಧೋರಣೆಯನ್ನು ವಿರೋಧಿಸಿ ಬೆಳಗಾವಿಯ ಸುವರ್ಣ ಸೌಧ ಮುತ್ತಿಗೆ ಚಳವಳಿಯನ್ನು ಡಿ.13 ರಂದು ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ತಿಳಿಸಿದರು. ವಿಧಾನಸಭಾ ಚುನಾವಣೆಗೂ ಮುನ್ನ ಕೃಷಿಗೆ ಸಂಬಂದಿಸಿದಂತೆ ಪ್ರಣಾಳಿಕೆಯಲ್ಲಿ ಮಾಡಿದ್ದ ಘೋಷಣೆಗಳನ್ನು ಕಾಂಗ್ರೆಸ್‌ ಮರೆತಿದೆ. ರೈತಪರ ಸರ್ಕಾರ ಎಂಬ ಹೇಳಿಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಾಯಿಮಾತಿಗೆ ಸೀಮಿತವಾಗಿದೆ’ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು. ಬಿ.ಎಸ್‌.ಯಡಿಯೂರಪ್ಪ …

Read More »

ತೊಗರಿಗೆ ಬೆಂಬಲ ಬೆಲೆ ನಿಗದಿಪಡಿಸುವಂತೆ ಕೇಂದ್ರಕ್ಕೆ ಮತ್ತೊಂದು ಪತ್ರ: ಸಚಿವ ಎನ್.ಚಲುವರಾಯಸ್ವಾಮಿ

ಬೆಳಗಾವಿ (ಸುವರ್ಣ ವಿಧಾನಸೌಧ): ತೊಗರಿಗೆ ಹೆಚ್ಚಿನ ಬೆಂಬಲ ಬೆಲೆ ನಿಗದಿಪಡಿಸುವಂತೆ ಕೋರಿ ಕೇಂದ್ರ ಸರ್ಕಾರಕ್ಕೆ ಮತ್ತೊಂದು ಪತ್ರ ಬರೆಯಲಾಗುವುದು ಮತ್ತು ಕಲಬುರಗಿ ಜಿಲ್ಲೆಯ ತೊಗರಿಗೆ ಹೆಚ್ಚಿನ ರೀತಿಯಲ್ಲಿ ಬೆಂಬಲ ಬೆಲೆ ಘೋಷಿಸುವ ನಿಟ್ಟಿನಲ್ಲಿ ಕ್ರಮವಹಿಸಲಾಗುವುದು ಎಂದು ಕೃಷಿ ಸಚಿವರಾದ ಎನ್.ಚಲುವರಾಯಸ್ವಾಮಿ ಅವರು ಪ್ರತಿಕ್ರಿಯಿಸಿದರು. ಕಲಬುರಗಿ ಜಿಲ್ಲೆಯಲ್ಲಿ 30 ಲಕ್ಷ ರೈತರು ಬೆಳೆಯುತ್ತಿರುವ ತೊಗರಿ ಜಿ1-ಟ್ಯಾಗ್ ಕ್ಲಾಸ್-31 ಪ್ರಮಾಣ ಪತ್ರ 2017 ರಿಂದ 2019ರಲ್ಲಿ ದೊರೆತಿದ್ದರೂ ಅದರ ಗುಣಧರ್ಮಕ್ಕೆ ಅನುಗುಣವಾಗಿ ವೈಜ್ಞಾನಿಕ …

Read More »

ಕೃಷ್ಣಾ ಮೇಲ್ದಂಡೆ ಯೋಜನೆ ಅನುಷ್ಠಾನ ಕುರಿತು ಸಿಎಂ ನೇತೃತ್ವದಲ್ಲಿ ಡಿ.11 ರಂದು ಮಹತ್ವದ ಸಭೆ

ಬೆಳಗಾವಿ: ಕೃಷ್ಣಾ ಮೇಲ್ದಂಡೆ ಯೋಜನೆ ಅನುಷ್ಠಾನ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಿಸೆಂಬರ್‌ 11ರಂದು ನಾಲ್ಕು ಜಿಲ್ಲೆಯ ಸರ್ವಪಕ್ಷ ಸಭೆ ಕರೆದಿದ್ದಾರೆ. ಸಭೆಯಲ್ಲಿ ನಮ್ಮ ಹಕ್ಕನ್ನು ನಾವು ಪ್ರತಿಪಾಧಿಸುತ್ತೇವೆ. ನಮ್ಮ ಬೇಡಿಕೆಗಳನ್ನು ಮುಖ್ಯಮಂತ್ರಿ ಈಡೇರಿಸಬೇಕು.ಇಲ್ಲದಿದ್ದರೆ ಮುಂದಿನ ಹೋರಾಟದ ಬಗ್ಗೆ ಚರ್ಚಿಸಿ ಹೋರಾಟ ಮಾಡುತ್ತೇವೆ ಕೃಷ್ಣಾ ಮೇಲ್ದಂಡೆ ಯೋಜನೆ ಹೋರಾಟ ಸಮಿತಿ ಅಧ್ಯಕ್ಷ ಅಜಯ್‌ ಕುಮಾರ್‌ ಸರನಾಯಕ ಹೇಳಿದರು. ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಉತ್ತರ ಕರ್ನಾಟಕ ಭಾಗದ ಮಹತ್ವಾಕಾಂಕ್ಷಿ …

Read More »

ಆರ್ ಬಿ ಐ ನ ನೂತನ ಗವರ್ನರ್ ಆಗಿ ಸಂಜಯ್ ಮಲ್ಹೋತ್ರಾ ನೇಮಕ: ಕೇಂದ್ರ ಸರ್ಕಾರ ಘೋಷಣೆ

ನವದೆಹಲಿ : ಆರ್ಬಿಐ ನೂತನ ಗವರ್ನರ್ ಆಗಿ ಸಂಜಯ್ ಮಲ್ಹೋತ್ರಾ ನೇಮಕ ಮಾಡಲಾಗುವುದು ಎಂದು ಕೇಂದ್ರ ಸರ್ಕಾರ ಘೋಷಿಸಿದೆ. ಅದ್ರಂತೆ, ಪ್ರಸ್ತುತ ಕಂದಾಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿರುವ ಮಲ್ಹೋತ್ರಾ ಅವರನ್ನ ಮುಂದಿನ ಮೂರು ವರ್ಷಗಳ ಕಾಲ ಆರ್ಬಿಐ ಗವರ್ನರ್ ಆಗಿ ನೇಮಿಸಲಾಗಿದೆ. ಪ್ರಸ್ತುತ ಆರ್ಬಿಐ ಗವರ್ನರ್ ಶಕ್ತಿಕಾಂತ ದಾಸ್ ಅವರಿಂದ ಸಂಜಯ್ ಮಲ್ಹೋತ್ರಾ ಡಿಸೆಂಬರ್ 11 ರಂದು ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಸಂಜಯ್ ಮಲ್ಹೋತ್ರಾ ಅವರು ಕಂದಾಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದರು …

Read More »

ಮೋದಿ ಸರ್ಕಾರದಿಂದ ಕರ್ನಾಟಕಕ್ಕೆ ಬಂಪರ್ ಕೊಡುಗೆ: 3 ಹೊಸ ಕೇಂದ್ರೀಯ ವಿದ್ಯಾಲಯಗಳ ಸ್ಥಾಪನೆ

ಬೆಂಗಳೂರು: ಕೇಂದ್ರದ ಎನ್‌ಡಿಎ ಸರ್ಕಾರ ಕರ್ನಾಟಕಕ್ಕೆ ಬಂಪರ್ ಕೊಡುಗೆ ನೀಡಿದೆ. ರಾಜ್ಯದಲ್ಲಿ ಹೊಸದಾಗಿ ಮೂರು ಕೇಂದ್ರೀಯ ವಿದ್ಯಾಲಯಗಳ ಸ್ಥಾಪನೆಗೆ ಅನುಮೋದನೆ ನೀಡಿದೆ. ಅಲ್ಲದೇ ಹಾಲಿ ಇರುವ ಶಿವಮೊಗ್ಗ ಕೇಂದ್ರೀಯ ವಿದ್ಯಾಲಯದಲ್ಲಿ ಎಲ್ಲಾ ತರಗತಿಗಳಲ್ಲಿ ಎರಡು ಹೆಚ್ಚುವರಿ ವಿಭಾಗಗಳನ್ನು ಸೇರಿಸಲು ಸಹ ಒಪ್ಪಿಗೆ ನೀಡಿದೆ. ಇದರಿಂದಾಗಿ ಕೇಂದ್ರ ಸರ್ಕಾರಿ ನೌಕರರಿಗೆ ಅನುಕೂಲವಾಗಲಿದೆ. ಉತ್ತಮ ಗುಣಮಟ್ಟದ ಶಿಕ್ಷಣ ಪಡೆಯುವ ವಿದ್ಯಾರ್ಥಿಗಳ ಕನಸು ಸಾಕಾರಗೊಳ್ಳಲಿದೆ. ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ …

Read More »

ಬೆಳಗಾವಿಯಲ್ಲಿ ಶಾಶ್ವತ ಶಾಸಕರ ಭವನ ನಿರ್ಮಾಣ ಕುರಿತು ಚರ್ಚೆ

ಬೆಂಗಳೂರು: ಬೆಳಗಾವಿಯಲ್ಲಿ ಶಾಶ್ವತವಾದ ಶಾಸಕರ ಭವನ ನಿರ್ಮಾಣಕ್ಕೆ ಪರಿಶಿಲನೆ ನಡೆಯುತ್ತಿದ್ದು, ನಾನಾ ಆಯಾಮಗಳಿಂದ ಚರ್ಚೆಗಳಾಗುತ್ತಿವೆ ಎಂದು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ತಿಳಿಸಿದ್ದಾರೆ.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕದ ಮಾದರಿಯಲ್ಲೇ ಹಿಮಾಚಲ ಪ್ರದೇಶ ಹಾಗೂ ನಾಗ್ಪುರದಲ್ಲೂ 2 ವಿಧಾನಸೌಧಗಳಿವೆ. ಅಲ್ಲಿಯೂ ಕಾಲಕಾಲಕ್ಕೆ ಅಧಿವೇಶನಗಳು ನಡೆಯುತ್ತಿವೆ. ಬೆಳಗಾವಿಯ ಸುವರ್ಣಸೌಧ ಎಲ್ಲಾ ಕಡೆಗಿಂತಲೂ ಹೆಚ್ಚು ಸಕ್ರಿಯವಾಗಿದ್ದು, ಉತ್ತಮ ಸ್ಥಿತಿಯಲ್ಲಿದೆ ಎಂದು ತಿಳಿಸಿದರು. ಬೆಳಗಾವಿಯಲ್ಲಿ ಶಾಶ್ವತವಾದ ಶಾಸಕರ ಭವನ ನಿರ್ಮಿಸಲು ಚರ್ಚೆ ನಡೆಸಲಾಗಿದೆ. ನಮಲ್ಲಿರುವ ಜಾಗದಲ್ಲಿ ನಾವೇ ಕಟ್ಟಡ …

Read More »

ಜರ್ಮನಿ ಕಂಪನಿಗಳಿಗೆ ರಾಜ್ಯದಲ್ಲಿ ಹೂಡಿಕೆಗೆ ಸಚಿವ ಎಂ.ಬಿ.ಪಾಟೀಲ್ ಆಹ್ವಾನ

ಬೆಂಗಳೂರು: ರಾಜ್ಯದಲ್ಲಿ ಉದ್ದಿಮೆ ಸ್ಥಾಪನೆ ವಿಸ್ತರಣೆ ಮಾಡುವಂತೆ ಜರ್ಮನಿಯ ಕಂಪೆನಿಗಳಿಗೆ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಅವರು ಆಹ್ವಾನ ನೀಡಿದರು. ಜಾಗತಿಕ ಹೂಡಿಕೆದಾರರ ಸಮಾವೇಶ ಇನ್ವೆಸ್ಟ್‌ ಕರ್ನಾಟಕ’ ಕ್ಕೆ ಹೂಡಿಕೆದಾರರನ್ನು ಆಹ್ವಾನಿಸಲು ರಾಜ್ಯದ ಉನ್ನತ ಮಟ್ಟದ ಅಧಿಕಾರಿಗಳ ನಿಯೋಗದ ಜತೆ ಜರ್ಮನಿ ಪ್ರವಾಸದಲ್ಲಿರುವ ಅವರು, ರಾಜ್ಯದಲ್ಲಿ ಉದ್ಯಮ ಸ್ಥಾಪನೆ, ಬಂಡವಾಳ ಹೂಡಿಕೆ ಮತ್ತು ತಯಾರಿಕೆ ಸಾಮರ್ಥ್ಯ ಹೆಚ್ಚಿಸುವುದರ ಪ್ರಯೋಜಗಳನ್ನು ಅಲ್ಲಿನ ಪ್ರಮುಖ ಉದ್ದಿಮೆಗಳು ಮತ್ತು ವಾಣಿಜ್ಯ ಸಂಘಟನೆಗೆ ಮನವರಿಕೆ ಮಾಡಿಕೊಟ್ಟರು. ರಾಜ್ಯದಲ್ಲಿ …

Read More »

3 ದಶಕಗಳ ನಂತರ ಕಾಂಗ್ರೆಸ್ ನ ಪಠಾಣ್ ಮೊದಲ ಬಾರಿಗೆ ವಿಧಾನಸೌಧ ಪ್ರವೇಶಿಸಲು ಸಜ್ಜು

ಹಾವೇರಿ : ಸಂಸದ ಬಸವರಾಜ ಬೊಮ್ಮಾಯಿ ಅವರ ರಾಜಿನಾಮೆಯಿಂದ ತೆರವಾದ ಶಿಗ್ಗಾವಿ ವಿಧಾನಸಭೆಯ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್​ ಅಭ್ಯರ್ಥಿ ಯಾಸೀರ್​​​​​ ಖಾನ್ ಪಠಾಣ್ ಗೆದ್ದು ಶಾಸಕಸ್ತಾನಕ್ಕೇರಿದ್ದಾರೆ. ಬೊಮ್ಮಾಯಿ ಅವರ ಪುತ್ರ ಭರತ್ ಬೊಮ್ಮಾಯಿ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ್ದು, ಈ ಮೂಲಕ ಮೊದಲ ಬಾರಿಗೆ ವಿಧಾನಸೌಧ ಪ್ರವೇಶಿಸಲು ಸಜ್ಜಾಗಿದ್ದಾರೆ. ಇಂದು ಬೆಳಗಾವಿಯಲ್ಲಿ ಪ್ರಾರಂಭವಾಗಲಿರುವ ಅಧಿವೇಶನದಲ್ಲಿ ಶಾಸಕ ಪಠಾಣ್​ ಅವರು ಮೊದಲ ಬಾರಿಗೆ ಸದನಕ್ಕೆ ಕಾಲಿಡಲಿದ್ದಾರೆ. ಶಿಗ್ಗಾಂವಿಯಲ್ಲಿ 1994ರಲ್ಲಿ ಕೊನೆ ಬಾರಿ …

Read More »