Breaking News

BigTv News

ಗಿರಿಜನ ಉಪಯೋಜನೆಯಡಿ ಕುರಿ/ಮೇಕೆ ಪೂರೈಕೆ ಘಟಕದಡಿ ಸಹಾಯಧನ ಪಡೆಯಲು ಅರ್ಜಿ ಆಹ್ವಾನ

ಶಿವಮೊಗ್ಗ: ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮ, ನಿಯಮಿತದ ವತಿಯಿಂದ 2024-25 ನೇ ಸಾಲಿನ ಗಿರಿಜನ ಉಪ ಯೋಜನೆಯಡಿಯಲ್ಲಿ ಕುರಿ/ಮೇಕೆ ಘಟಕ ಪೂರೈಕೆ ಯೋಜನೆಗೆ ನಿಗಮದಲ್ಲಿ ನೋಂದಾಯಿತ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳ ಪರಿಶಿಷ್ಟ ಪಂಗಡದ ಸದಸ್ಯರಿಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. 16 ರಿಂದ 60 ವರ್ಷದೊಳಗಿನ ಮಹಿಳಾ/ಪುರುಷ ಸದಸ್ಯರು ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳ ಮೂಲಕ ಅರ್ಜಿ ಸಲ್ಲಿಸಬಹುದು. …

Read More »

ಜ.1 ರಿಂದ ಎಲ್ಲಾ ಭೂ ಮಂಜೂರು ದಾಖಲೆಗಳ ಡಿಜಿಟಲೀಕರಿಸಲು ಕ್ರಮ: ಸಚಿವ ಕೃಷ್ಣ ಬೈರೇಗೌಡ

ಬೆಳಗಾವಿ : ರೈತರಿಗಾಗುತ್ತಿರುವ ಶೋಷಣೆಗಳನ್ನು ತಪ್ಪಿಸುವ ಸಲುವಾಗಿ ಜನವರಿ.01 ರಿಂದ ಈವರೆಗಿನ ಎಲ್ ಭೂ-ಮಂಜೂರು ದಾಖಲೆಗಳನ್ನು ಸ್ಕ್ಯಾನ್ ಮಾಡಿ ಡಿಜಿಟಲೀಕರಿಸಲು ಕ್ರಮವಹಿಸಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಸದನಕ್ಕೆ ಮಾಹಿತಿ ನೀಡಿದರು. ಸೋಮವಾರ ವಿಧಾನಸಭೆಯ ಪ್ರಶ್ನೋತ್ತರ ಅವಧಿಯಲ್ಲಿ ಮಾತನಾಡಿದ್ದ ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿರಾಜು ಬಗರ್ ಹುಕುಂ ಯೋಜನೆ ಅಡಿಯಲ್ಲಿ 1999 ರಿಂದ 2004ರ ಅವಧಿಯಲ್ಲಿ ಜಮೀನು ಮಂಜೂರು ಮಾಡಲಾಗಿದ್ದರೂ ಸಾಗುವಳಿ ಚೀಟಿ ನೀಡಿಲ್ಲ, ಕೆಲವರಿಗೆ ಸಾಗುವಳಿ ಚೀಟಿ …

Read More »

ರಾಜ್ಯದ ಜಿ.ಪಂ, ತಾ.ಪಂ. ನೌಕರರಿಗೆ ಸಿಹಿಸುದ್ದಿ: ವೇತನ ಪಾವತಿಗೆ ಅನುದಾನ ಬಿಡುಗಡೆ ಮಾಡಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ರಾಜ್ಯ ಸರ್ಕಾರವು ವಿವಿಧ ತಾಲೂಕು ಪಂಚಾಯತ್ ಹಾಗೂ ಜಿಲ್ಲಾಪಂಚಾಯತ್ ನೌಕರರಿಗೆ ಸಿಹಿಸುದ್ದಿ ನೀಡಿದ್ದು, ವೇತನ ಪಾವತಿಗೆ ಅನುದಾನ ಬಿಡುಗಡೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಪ್ರಸ್ತಾವನೆಯಲ್ಲಿ ವಿವರಿಸಿರುವಂತೆ ಈ ಆದೇಶಕ್ಕೆ ಲಗತ್ತಿಸಿರುವ ಅನುಬಂಧದ ಕಾಲಂ 2ರ ತಾಲ್ಲೂಕು ಪಂಚಾಯತಿಗೆ ಕಾಲಂ 3 ಕಾರ್ಯಕ್ರಮದಡಿ ಬಾಕಿ/ಪ್ರಸಕ್ತ ಸಾಲಿನ ಬಾಕಿ/ಪ್ರಸಕ್ತ ಸಾಲಿನ ವೇತನ, ವೇತನೇತರ, ಹೊರಗುತ್ತಿಗೆ ನೌಕರರ ವೇತನ, ದಿನಗೂಲಿ ನೌಕರರ ಉಪದಾನ ಮತ್ತು ವೈದ್ಯಕೀಯ ವೆಚ್ಚ ಮರು …

Read More »

ಮಾಜಿ ಸಿಎಂ ಎಸ್.ಎಂ.ಕೃಷ್ಣ ನಿಧನ: ರಾಜ್ಯಾದ್ಯಂತ ನಾಳೆ ಸರ್ಕಾರಿ ರಜೆ ಘೋಷಣೆ

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಹಾಗೂ ಮಾಜಿ ವಿದೇಶಾಂಗ ಸಚಿವ ಎಸ್‌ಎಂ ಕೃಷ್ಣ ಅವರ ನಿಧನ ಹಿನ್ನೆಲೆಯಲ್ಲಿ ನಾಳೆ ರಾಜ್ಯಾದ್ಯಂತ ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು. ನಾಳೆ ರಾಜ್ಯಾದ್ಯಂತ ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ. ಬೆಂಗಳೂರಿನಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಬಗ್ಗೆ ಮಾಹಿತಿ ನೀಡಿದ್ದಾರೆ. ನಾಳೆ ರಾಜ್ಯದ ಸರ್ಕಾರಿ ರಜೆ ಇರುತ್ತದೆ. ಅಲ್ಲದೆ ನಾಳೆ ಬೆಳಿಗ್ಗೆ 8 ಗಂಟೆವರೆಗೆ ಅಂತಿಮ …

Read More »

ಸಕಲ ಸರ್ಕಾರಿ ಗೌರವಗಳೊಂದಿಗೆ ಮಾಜಿ ಸಿಎಂ ಎಸ್.ಎಂ.ಕೃಷ್ಣ ಅಂತ್ಯಕ್ರಿಯೆ: 3 ದಿನ ಶೋಕಾಚರಣೆ ಘೋಷಿಸಿ ರಾಜ್ಯಸರ್ಕಾರ ಆದೇಶ

ಬೆಂಗಳೂರು : ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್​ಎಂ ಕೃಷ್ಣ ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ತಡರಾತ್ರಿ ನಿಧನರಾಗಿದ್ದು, ಸಕಲ ಸರ್ಕಾರಿ ಗೌರವಗಳೊಂದಿಗೆ ಡಿಸೆಂಬರ್ 11 ರಂದು ಅಂತ್ಯಕ್ರಿಯೆ ನಡೆಸಲಾಗುವುದು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿಗಳು ಹಾಗೂ ಮಾಜಿ ಕೇಂದ್ರ ಸಚಿವರಾಗಿದ್ದ ಶ್ರೀ ಎಸ್ ಎಂ ಕೃಷ್ಣ ರವರು ದಿನಾಂಕ: 10.12.2024ರ ಮಂಗಳವಾರದಂದು ಪೂರ್ವಾಹ್ನ 02:30ಕ್ಕೆ ನಿಧನರಾದ ವಿಷಯವನ್ನು ಕರ್ನಾಟಕ ರಾಜ್ಯ …

Read More »

ರೈತರ ಬಗ್ಗೆ ನಿರ್ಲಕ್ಷ್ಯ ಧೋರಣೆ ವಿರೋಧಿಸಿ ಡಿ.13 ರಂದು ಸುವರ್ಣಸೌಧ ಮುತ್ತಿಗೆ: ಕೋಡಿಹಳ್ಳಿ ಚಂದ್ರಶೇಖರ್

ದಾವಣಗೆರೆ: ರೈತರ ಬಗೆಗೆ ರಾಜ್ಯ ಸರ್ಕಾರ ತಳೆದಿರುವ ನಿರ್ಲಕ್ಷ್ಯ ಧೋರಣೆಯನ್ನು ವಿರೋಧಿಸಿ ಬೆಳಗಾವಿಯ ಸುವರ್ಣ ಸೌಧ ಮುತ್ತಿಗೆ ಚಳವಳಿಯನ್ನು ಡಿ.13 ರಂದು ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ತಿಳಿಸಿದರು. ವಿಧಾನಸಭಾ ಚುನಾವಣೆಗೂ ಮುನ್ನ ಕೃಷಿಗೆ ಸಂಬಂದಿಸಿದಂತೆ ಪ್ರಣಾಳಿಕೆಯಲ್ಲಿ ಮಾಡಿದ್ದ ಘೋಷಣೆಗಳನ್ನು ಕಾಂಗ್ರೆಸ್‌ ಮರೆತಿದೆ. ರೈತಪರ ಸರ್ಕಾರ ಎಂಬ ಹೇಳಿಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಾಯಿಮಾತಿಗೆ ಸೀಮಿತವಾಗಿದೆ’ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು. ಬಿ.ಎಸ್‌.ಯಡಿಯೂರಪ್ಪ …

Read More »

ತೊಗರಿಗೆ ಬೆಂಬಲ ಬೆಲೆ ನಿಗದಿಪಡಿಸುವಂತೆ ಕೇಂದ್ರಕ್ಕೆ ಮತ್ತೊಂದು ಪತ್ರ: ಸಚಿವ ಎನ್.ಚಲುವರಾಯಸ್ವಾಮಿ

ಬೆಳಗಾವಿ (ಸುವರ್ಣ ವಿಧಾನಸೌಧ): ತೊಗರಿಗೆ ಹೆಚ್ಚಿನ ಬೆಂಬಲ ಬೆಲೆ ನಿಗದಿಪಡಿಸುವಂತೆ ಕೋರಿ ಕೇಂದ್ರ ಸರ್ಕಾರಕ್ಕೆ ಮತ್ತೊಂದು ಪತ್ರ ಬರೆಯಲಾಗುವುದು ಮತ್ತು ಕಲಬುರಗಿ ಜಿಲ್ಲೆಯ ತೊಗರಿಗೆ ಹೆಚ್ಚಿನ ರೀತಿಯಲ್ಲಿ ಬೆಂಬಲ ಬೆಲೆ ಘೋಷಿಸುವ ನಿಟ್ಟಿನಲ್ಲಿ ಕ್ರಮವಹಿಸಲಾಗುವುದು ಎಂದು ಕೃಷಿ ಸಚಿವರಾದ ಎನ್.ಚಲುವರಾಯಸ್ವಾಮಿ ಅವರು ಪ್ರತಿಕ್ರಿಯಿಸಿದರು. ಕಲಬುರಗಿ ಜಿಲ್ಲೆಯಲ್ಲಿ 30 ಲಕ್ಷ ರೈತರು ಬೆಳೆಯುತ್ತಿರುವ ತೊಗರಿ ಜಿ1-ಟ್ಯಾಗ್ ಕ್ಲಾಸ್-31 ಪ್ರಮಾಣ ಪತ್ರ 2017 ರಿಂದ 2019ರಲ್ಲಿ ದೊರೆತಿದ್ದರೂ ಅದರ ಗುಣಧರ್ಮಕ್ಕೆ ಅನುಗುಣವಾಗಿ ವೈಜ್ಞಾನಿಕ …

Read More »

ಕೃಷ್ಣಾ ಮೇಲ್ದಂಡೆ ಯೋಜನೆ ಅನುಷ್ಠಾನ ಕುರಿತು ಸಿಎಂ ನೇತೃತ್ವದಲ್ಲಿ ಡಿ.11 ರಂದು ಮಹತ್ವದ ಸಭೆ

ಬೆಳಗಾವಿ: ಕೃಷ್ಣಾ ಮೇಲ್ದಂಡೆ ಯೋಜನೆ ಅನುಷ್ಠಾನ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಿಸೆಂಬರ್‌ 11ರಂದು ನಾಲ್ಕು ಜಿಲ್ಲೆಯ ಸರ್ವಪಕ್ಷ ಸಭೆ ಕರೆದಿದ್ದಾರೆ. ಸಭೆಯಲ್ಲಿ ನಮ್ಮ ಹಕ್ಕನ್ನು ನಾವು ಪ್ರತಿಪಾಧಿಸುತ್ತೇವೆ. ನಮ್ಮ ಬೇಡಿಕೆಗಳನ್ನು ಮುಖ್ಯಮಂತ್ರಿ ಈಡೇರಿಸಬೇಕು.ಇಲ್ಲದಿದ್ದರೆ ಮುಂದಿನ ಹೋರಾಟದ ಬಗ್ಗೆ ಚರ್ಚಿಸಿ ಹೋರಾಟ ಮಾಡುತ್ತೇವೆ ಕೃಷ್ಣಾ ಮೇಲ್ದಂಡೆ ಯೋಜನೆ ಹೋರಾಟ ಸಮಿತಿ ಅಧ್ಯಕ್ಷ ಅಜಯ್‌ ಕುಮಾರ್‌ ಸರನಾಯಕ ಹೇಳಿದರು. ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಉತ್ತರ ಕರ್ನಾಟಕ ಭಾಗದ ಮಹತ್ವಾಕಾಂಕ್ಷಿ …

Read More »

ಆರ್ ಬಿ ಐ ನ ನೂತನ ಗವರ್ನರ್ ಆಗಿ ಸಂಜಯ್ ಮಲ್ಹೋತ್ರಾ ನೇಮಕ: ಕೇಂದ್ರ ಸರ್ಕಾರ ಘೋಷಣೆ

ನವದೆಹಲಿ : ಆರ್ಬಿಐ ನೂತನ ಗವರ್ನರ್ ಆಗಿ ಸಂಜಯ್ ಮಲ್ಹೋತ್ರಾ ನೇಮಕ ಮಾಡಲಾಗುವುದು ಎಂದು ಕೇಂದ್ರ ಸರ್ಕಾರ ಘೋಷಿಸಿದೆ. ಅದ್ರಂತೆ, ಪ್ರಸ್ತುತ ಕಂದಾಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿರುವ ಮಲ್ಹೋತ್ರಾ ಅವರನ್ನ ಮುಂದಿನ ಮೂರು ವರ್ಷಗಳ ಕಾಲ ಆರ್ಬಿಐ ಗವರ್ನರ್ ಆಗಿ ನೇಮಿಸಲಾಗಿದೆ. ಪ್ರಸ್ತುತ ಆರ್ಬಿಐ ಗವರ್ನರ್ ಶಕ್ತಿಕಾಂತ ದಾಸ್ ಅವರಿಂದ ಸಂಜಯ್ ಮಲ್ಹೋತ್ರಾ ಡಿಸೆಂಬರ್ 11 ರಂದು ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಸಂಜಯ್ ಮಲ್ಹೋತ್ರಾ ಅವರು ಕಂದಾಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದರು …

Read More »

ಮೋದಿ ಸರ್ಕಾರದಿಂದ ಕರ್ನಾಟಕಕ್ಕೆ ಬಂಪರ್ ಕೊಡುಗೆ: 3 ಹೊಸ ಕೇಂದ್ರೀಯ ವಿದ್ಯಾಲಯಗಳ ಸ್ಥಾಪನೆ

ಬೆಂಗಳೂರು: ಕೇಂದ್ರದ ಎನ್‌ಡಿಎ ಸರ್ಕಾರ ಕರ್ನಾಟಕಕ್ಕೆ ಬಂಪರ್ ಕೊಡುಗೆ ನೀಡಿದೆ. ರಾಜ್ಯದಲ್ಲಿ ಹೊಸದಾಗಿ ಮೂರು ಕೇಂದ್ರೀಯ ವಿದ್ಯಾಲಯಗಳ ಸ್ಥಾಪನೆಗೆ ಅನುಮೋದನೆ ನೀಡಿದೆ. ಅಲ್ಲದೇ ಹಾಲಿ ಇರುವ ಶಿವಮೊಗ್ಗ ಕೇಂದ್ರೀಯ ವಿದ್ಯಾಲಯದಲ್ಲಿ ಎಲ್ಲಾ ತರಗತಿಗಳಲ್ಲಿ ಎರಡು ಹೆಚ್ಚುವರಿ ವಿಭಾಗಗಳನ್ನು ಸೇರಿಸಲು ಸಹ ಒಪ್ಪಿಗೆ ನೀಡಿದೆ. ಇದರಿಂದಾಗಿ ಕೇಂದ್ರ ಸರ್ಕಾರಿ ನೌಕರರಿಗೆ ಅನುಕೂಲವಾಗಲಿದೆ. ಉತ್ತಮ ಗುಣಮಟ್ಟದ ಶಿಕ್ಷಣ ಪಡೆಯುವ ವಿದ್ಯಾರ್ಥಿಗಳ ಕನಸು ಸಾಕಾರಗೊಳ್ಳಲಿದೆ. ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ …

Read More »