Breaking News

BigTv News

ಒಂದು ಲಕ್ಷ ಮನೆ ಯೋಜನೆ ಫಲಾನುಭವಿಗಳಿಗೆ ಬ್ಯಾಂಕ್ ಗಳು ಸಾಲ ಒದಗಿಸಲು ಒಪ್ಪಿಗೆ

ಬೆಂಗಳೂರು : ಮುಖ್ಯಮಂತ್ರಿಯವರ ಒಂದು ಲಕ್ಷ ಮನೆ ಯೋಜನೆ ಫಲಾನುಭವಿಗಳಿಗೆ ಬ್ಯಾಂಕ್ ಸಾಲ ಒದಗಿಸುವ ಸಂಬಂಧ ವಸತಿ ಸಚಿವ ಜಮೀರ್ ಅಹಮದ್ ಖಾನ್ ಬ್ಯಾಂಕ್ ಮುಖ್ಯಸ್ಥರ ಜತೆ ನಡೆಸಿದ ಸಭೆ ಫಲಪ್ರದ ವಾಗಿದೆ. ಮೊದಲ ಹಂತದಲ್ಲಿ ಮೂರು ಸಾವಿರ ಜನರಿಗೆ ತಲಾ ಐದು ಲಕ್ಷ ರೂ. ಸಾಲ ನೀಡಲು ಬ್ಯಾಂಕ್ ಮುಖ್ಯಸ್ಥರು ಸಮ್ಮತಿ ಸೂಚಿಸಿದ್ದಾರೆ. ಮೊದಲ ಹಂತದಲ್ಲಿ ಸಾಲಕ್ಕಾಗಿ ಮೂರು ಸಾವಿರ ಅರ್ಜಿ ಸಲ್ಲಿಕೆಯಾಗಿದ್ದು 316 ಜನರಿಗೆ ಸಾಲ ಮಂಜೂರು …

Read More »

ಬೆಳಗಾವಿ ಅಧಿವೇಶನದಲ್ಲಿ ವಾರದಲ್ಲಿ 2 ದಿನ ಕಿತ್ತೂರು, ಕಲ್ಯಾಣ ಕರ್ನಾಟಕದ ಅಭಿವೃದ್ದಿ ಕುರಿತು ಚರ್ಚೆ: ಬಸವರಾಜ ಹೊರಟ್ಟಿ

ಬೆಳಗಾವಿ: ಎರಡು ವಾರಗಳ ಕಾಲ ಬೆಳಗಾವಿಯಲ್ಲಿ ನಡೆಯಲಿರುವ ವಿಧಾನಮಂಡಲ ಚಳಿಗಾಲ ಅಧಿವೇಶನದಲ್ಲಿ ಮಂಗಳವಾರ ಮತ್ತು ಬುಧವಾರ ಪ್ರಶ್ನೋತ್ತರ ವೇಳೆ‌ ನಂತರ, ಕಿತ್ತೂರು ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕದ ಅಭಿವೃದ್ಧಿ ಕುರಿತು ಚರ್ಚಿಸಲಾಗುವುದು ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಹೇಳಿದರು. ಸುವರ್ಣ ವಿಧಾನಸೌಧದಲ್ಲಿ ಅಧಿವೇಶನದ ವ್ಯವಸ್ಥೆ ಪರಿಶೀಲಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 40ಕ್ಕೂ ಹೆಚ್ಚು ಸದಸ್ಯರೊಂದಿಗೆ ದೂರವಾಣಿ ಕರೆ ಮಾಡಿ ಮಾತನಾಡಲಾಗಿದ್ದು, ಚಳಿಗಾಲದ ಅಧಿವೇಶನದಲ್ಲಿ ರಚನಾತ್ಮಕ …

Read More »

ಕಲಬುರಗಿ: ತೊಗರಿ ಬೆಳೆ ನಷ್ಟ, ಎಕರೆಗೆ 20,000 ರೂ. ಪರಿಹಾರಕ್ಕೆ ಆಗ್ರಹ

ಕಲಬುರಗಿ : ಪ್ರಸಕ್ತ ಸಾಲಿನಲ್ಲಿ ಬಿತ್ತನೆಯಾದ ರೈತರ ತೊಗರಿ ಬೆಳೆ ನೆಟೆ ರೋಗದಿಂದ ಹಾನಿಯಾಗಿ ನಷ್ಟ ಅನುಭವಿಸಿದ್ದು, ಸರಕಾರ ಈ ಕೂಡಲೇ ಪರಿಹಾರ ಮತ್ತು ಬೆಳೆ ವಿಮೆ ನೀಡಲು ಕ್ರಮ ಕೈಗೊಳ್ಳಬೇಕು ಎಂದು ಕಲ್ಯಾಣ ಕರ್ನಾಟಕ ಜನಪರ ಕಲ್ಯಾಣ ವೇದಿಕೆಯು ಆಳಂದ ತಾಲ್ಲೂಕು ತಹಶೀಲ್ದಾರ್ ಮೂಲಕ ಸರಕಾರಕ್ಕೆ ಆಗ್ರಹಿಸಿದೆ. ಈ ಕುರಿತು ಆಳಂದ ಪಟ್ಟಣದ ಹೊರವಲಯದ ತಾಲ್ಲೂಕು ಆಡಳಿತಸೌಧ ಮುಂಭಾಗದಲ್ಲಿ ಬೇಡಿಕೆಯ ಕುರಿತು ಗ್ರೇಡ್-2 ತಹಶೀಲ್ದಾರ್ ಬಿ.ಜಿ. ಕುದರಿ ಮೂಲಕ …

Read More »

ಕೃಷಿ ಉತ್ಪನ್ನಗಳ ಖರೀದಿಗೆ ಶೇ.90 ರಷ್ಟು ಸಹಾಯಧನ

ಬೆಂಗಳೂರು : ಪ್ರಸಕ್ತ (2024-25) ಸಾಲಿನಲ್ಲಿ ಕೃಷಿ ಯಾಂತ್ರೀಕರಣ ಮತ್ತು ಕೃಷಿ ಉತ್ಪನ್ನಗಳ ಸಂಸ್ಕರಣೆ ಕಾರ್ಯಕ್ರಮದಲ್ಲಿ ಸಾಮಾನ್ಯ ವರ್ಗದ ರೈತರಿಗೆ ಶೇ.50ರ ರಿಯಾಯಿತಿಯಲ್ಲಿ ಕೃಷಿ ಯಂತ್ರೋಪಕರಣಗಳು ಲಭ್ಯವಿರುತ್ತವೆ. ಆಸಕ್ತ ರೈತರು ತಮ್ಮ ವ್ಯಾಪ್ತಿಯ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ಅರ್ಜಿಯೊಂದಿಗೆ ಪಹಣಿ(ಆರ್‍ಟಿಸಿ), ಆಧಾರ್ ಕಾರ್ಡ್‍ನ ಜೆರಾಕ್ಸ್, ಬ್ಯಾಂಕ್ ಪಾಸ್ ಪುಸ್ತಕದ ಜೆರಾಕ್ಸ್, ಒಂದು ಭಾವಚಿತ್ರ ರೂ.100ರ ಛಾಪಾ ಕಾಗದ ದಾಖಲಾತಿಗಳನ್ನು ಸಲ್ಲಿಸಿ ಇಲಾಖೆಯಲ್ಲಿ ಸಿಗುವ ಕೃಷಿ ಯಂತ್ರೋಪಕರಣಗಳ ಸದುಪಯೋಗವನ್ನು …

Read More »

ಬಗರ್ ಹುಕುಂ ಸಾಗುವಳಿದಾರರಿಗೆ ಹಕ್ಕುಪತ್ರಕ್ಕೆ ಆಗ್ರಹಿಸಿ ಡಿ.16 ರಂದು ಸುವರ್ಣಸೌಧದ ಬಳಿ ಕೃಷಿ ಕಾರ್ಮಿಕ ಸಂಘಟನೆ ಪ್ರತಿಭಟನೆ

ಬೆಳಗಾವಿ: ಬಗರ್‌ಹುಕುಂ ಸಾಗುವಳಿದಾರರಿಗೆ ತಕ್ಷಣವೇ ಹಕ್ಕುಪತ್ರ ನೀಡಬೇಕು ಎಂದು ಆಗ್ರಹಿಸಿ ಡಿ.16ರಂದು ಸುವರ್ಣ ವಿಧಾನಸೌಧ ಬಳಿ ಪ್ರತಿಭಟನೆ ಮಾಡಲಾಗುವುದು ಎಂದು ಅಖಿಲ ಭಾರತ ರೈತ ಕೃಷಿ ಕಾರ್ಮಿಕರ ಸಂಘಟನೆ ರಾಜ್ಯ ಘಟಕದ ಕಾರ್ಯದರ್ಶಿ ಬಿ.ಭಗವಾನ್‌ ರೆಡ್ಡಿ ಹೇಳಿದರು. ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಭೂರಹಿತರು ಮತ್ತು ಬಡ ರೈತರು ಜೀವನೋಪಾಯಕ್ಕಾಗಿ ಕಂದಾಯ ಮತ್ತು ಅರಣ್ಯದ ಕುರುಚಲು ಗಿಡ, ಕಲ್ಲುಭೂಮಿಯಲ್ಲಿ ಹಲವು ದಶಕಗಳಿಂದ ಸಾಗುವಳಿ ಮಾಡುತ್ತ ಬಂದಿದ್ದಾರೆ. ತಕ್ಷಣವೇ ಹಕ್ಕುಪತ್ರ …

Read More »

ರೈತರಿಗೆ ಆರ್ ಬಿ ಐ ಸಿಹಿಸುದ್ದಿ: ಭದ್ರತೆ ಇಲ್ಲದ ಕೃಷಿ ಸಾಲ ಮಿತಿ 2 ಲಕ್ಷ ರೂ.ಗೆ ಏರಿಕೆ

ಮುಂಬಯಿ: ರೈತರಿಗೆ ಆರ್‌ಬಿಐ ಸಿಹಿ ಸುದ್ದಿ ನೀಡಿದೆ. ಯಾವುದೇ ಭದ್ರತೆ (ಮೇಲಾಧಾರ) ಇಲ್ಲದೇ ನೀಡಲಾಗುವ ಕೃಷಿ ಸಾಲದ ಮಿತಿಯನ್ನು ಈಗ ಇರುವ 1.6 ಲಕ್ಷ ರೂ.ಗಳಿಂದ 2 ಲಕ್ಷ ರೂ.ಗಳಿಗೆ ಏರಿಕೆ ಮಾಡಿರುವುದಾಗಿ ಆರ್‌ಬಿಐ ಗವರ್ನರ್‌ ಶಕ್ತಿಕಾಂತ ದಾಸ್‌ ಹೇಳಿದ್ದಾರೆ. ಆರ್‌ಬಿಐನ 3 ದಿನಗಳ ವಿತ್ತೀಯ ನೀತಿ ಪರಿಶೀಲನ ಸಭೆ ಬಳಿಕ ಅವರು ಮಾತನಾಡಿದರು. ಹಾಲಿ ವಿತ್ತ ವರ್ಷದ ಜಿಡಿಪಿ ಪ್ರಗತಿ ದರದ ನಿರೀಕ್ಷೆಯನ್ನು ಈ ಹಿಂದಿನ ಶೇ.7ರಿಂದ ಶೇ.6.6ಕ್ಕಿಳಿಸಲಾಗಿದೆ. ಸತತ …

Read More »

ಬೆಂಗಳೂರು: ಸಂಪೂರ್ಣ ಕೃಷಿ ಸಾಲ ಮನ್ನಾಕ್ಕೆ ಆಗ್ರಹಿಸಿ ರೈತ ಸಂಘಟನೆಗಳಿಂದ ಪ್ರತಿಭಟನೆ

ಬೆಂಗಳೂರು: ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತರಿ ಕಾನೂನು ಜಾರಿಗೆ ತರಬೇಕು, ಡಾ. ಸ್ವಾಮಿನಾಥನ್ ವರದಿಯಂತೆ ಬೆಂಬಲ ಬೆಲೆ ನಿಗದಿಯಾಗಬೇಕು ಎಂಬುದು ಸೇರಿದಂತೆ ಹಲವು ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರಾಜ್ಯ ರೈತ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ರೈತ ನಾಯಕ ಜಗಜಿತ್‌ ಸಿಂಗ್‌ ದಲೈವಾಲ ಅವರ ನೇತೃತ್ವದಲ್ಲಿ ದೆಹಲಿಯಲ್ಲಿ ನಡೆಯತ್ತಿರುವ ಉಪವಾಸ ಬೆಂಬಲಿಸಿ ರಾಜ್ಯದಲ್ಲೂ ರೈತ ಸಂಘಟನೆಗಳು ಸರದಿ ಉಪವಾಸ ಸತ್ಯಾಗ್ರಹ ಆರಂಭಿಸಿವೆ. ಕೇಂದ್ರ ಸರ್ಕಾರ ಚಳವಳಿ ನಿರತ …

Read More »

ಕೇಂದ್ರ ಸರ್ಕಾರದಿಂದ ಮೂರು ಹೊಸ ಕೇಂದ್ರೀಯ ವಿದ್ಯಾಲಯ ಸ್ಥಾಪನೆಗೆ ಒಪ್ಪಿಗೆ

ಬೆಂಗಳೂರು: ನರೇಂದ್ರ ಮೋದಿ ಸರ್ಕಾರ ಕರ್ನಾಟಕ್ಕೆ ಗುಡ್‌ ನ್ಯೂಸ್‌ ನೀಡಿದ್ದು, ಮೂರು ಹೊಸ ಕೇಂದ್ರೀಯ ವಿದ್ಯಾಲಯ ಸ್ಥಾಪನೆಗೆ ಒಪ್ಪಿಗೆ ನೀಡಿದೆ. ಇದರೊಂದಿಗೆ ರಾಜ್ಯದಲ್ಲಿ ಮತ್ತೊಂದು ನವೋದಯ ವಿದ್ಯಾಲಯ ಸ್ಥಾಪನೆಗೂ ಕೂಡ ಕೇಂದ್ರ ಸಂಪುಟ ಒಪ್ಪಿಗೆ ನೀಡಿದೆ. ಶುಕ್ರವಾರ ಪ್ರಧಾನಿ ಮೋದಿ ನೇತೃತ್ವದ ಸಂಪುಟ ಸಭೆಯಲ್ಲಿ ಈ ತೀರ್ಮಾನವಾಗಿದೆ. ದೇಶದಾದ್ಯಂತ 85 ಹೊಸ ಕೇಂದ್ರೀಯ ವಿದ್ಯಾಲಯಗಳನ್ನು (ಕೆವಿಗಳು) ತೆರೆಯಲು ಸಂಪುಟ ಒಪ್ಪಿಗೆ ನೀಡಿದೆ. ಇದರಲ್ಲಿ ಶಿವಮೊಗ್ಗದ ಕೇಂದ್ರೀಯ ವಿದ್ಯಾಲಯದ ವಿಸ್ತರಣೆಗೆ ಅನುಮೋದನೆ …

Read More »

ಬೆಳಗಾವಿ ಚಳಿಗಾಲ ಅಧಿವೇಶನ: ವಸತಿಗಾಗಿ 2,756 ಕೊಠಡಿ, 10 ಸಮಿತಿ ರಚನೆ

ಬೆಳಗಾವಿ: ವಿಧಾನಮಂಡಲ ಚಳಿಗಾಲದ ಅಧಿವೇಶನ ಹಿನ್ನೆಲೆಯಲ್ಲಿ ಸಚಿವರು, ಶಾಸಕರು, ಅಧಿಕಾರಿಗಳು, ಸಿಬ್ಬಂದಿ ಮತ್ತು ಪತ್ರಕರ್ತರಿಗಾಗಿ 2,756 ಕೊಠಡಿ ಕಾಯ್ದಿರಿಸಿದ್ದೇವೆ. ಇದಕ್ಕಾಗಿ ಪ್ರವಾಸಿ ಮಂದಿರಗಳು, ಖಾಸಗಿ ಹೋಟೆಲ್‌ಗಳು ಮತ್ತು ವಿವಿಧ ಸಂಸ್ಥೆಗಳ ಅತಿಥಿ ಗೃಹಗಳನ್ನು ಬಳಸಿಕೊಳ್ಳುತ್ತಿದ್ದೇವೆ ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಹೇಳಿದರು. ಇಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ವರ್ಷ ವಸತಿಗಾಗಿ ವಿಧಿಸಿದ್ದ ದರವನ್ನೇ ಈ ಬಾರಿಯೂ ಮುಂದುವರಿಸುವಂತೆ ಕೋರಿದ್ದೇವೆ. ಇದಕ್ಕೆ ಎಲ್ಲ ಹೊಟೇಲ್ ಮಾಲೀಕರು ಒಪ್ಪಿದ್ದಾರೆ. ಅಧಿವೇಶನ …

Read More »

ಆರ್ ಬಿ ಐ ನಿಂದ ರೈತರಿಗೆ ಕೃಷಿ ಸಾಲದ ಮಿತಿ 1.6 ಲಕ್ಷದಿಂದ 2 ಲಕ್ಷ ರೂ.ಗೆ ಹೆಚ್ಚಳ

ನವದೆಹಲಿ: ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್ಬಿಐ) ರೈತರಿಗೆ ಮೇಲಾಧಾರ ರಹಿತ ಕೃಷಿ ಸಾಲದ ಮಿತಿಯನ್ನು ಹೆಚ್ಚಿಸುವುದಾಗಿ ಘೋಷಿಸಿದೆ. ಈ ಮಿತಿಯನ್ನು ಪ್ರತಿ ಸಾಲಗಾರನಿಗೆ 1.6 ಲಕ್ಷ ರೂ.ಗಳಿಂದ 2 ಲಕ್ಷ ರೂ.ಗೆ ಹೆಚ್ಚಿಸಲಾಗಿದೆ. ಆರ್ಬಿಐ ಗವರ್ನರ್ ಶಕ್ತಿಕಾಂತ ದಾಸ್ ಅವರು ಡಿಸೆಂಬರ್ 6 ರ ಶುಕ್ರವಾರ ಹಣಕಾಸು ನೀತಿ ಸಮಿತಿ (ಎಂಪಿಸಿ) ಬ್ರೀಫಿಂಗ್ನಲ್ಲಿ ಈ ಘೋಷಣೆ ಮಾಡಿದ್ದಾರೆ. ಈ ಕ್ರಮವು ರೈತರಿಗೆ, ವಿಶೇಷವಾಗಿ ಸಣ್ಣ ಮತ್ತು ಅತಿಸಣ್ಣ ರೈತರಿಗೆ …

Read More »