ಬೆಳಗಾವಿ: ಬಗರ್ಹುಕುಂ ಸಾಗುವಳಿದಾರರಿಗೆ ತಕ್ಷಣವೇ ಹಕ್ಕುಪತ್ರ ನೀಡಬೇಕು ಎಂದು ಆಗ್ರಹಿಸಿ ಡಿ.16ರಂದು ಸುವರ್ಣ ವಿಧಾನಸೌಧ ಬಳಿ ಪ್ರತಿಭಟನೆ ಮಾಡಲಾಗುವುದು ಎಂದು ಅಖಿಲ ಭಾರತ ರೈತ ಕೃಷಿ ಕಾರ್ಮಿಕರ ಸಂಘಟನೆ ರಾಜ್ಯ ಘಟಕದ ಕಾರ್ಯದರ್ಶಿ ಬಿ.ಭಗವಾನ್ ರೆಡ್ಡಿ ಹೇಳಿದರು. ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಭೂರಹಿತರು ಮತ್ತು ಬಡ ರೈತರು ಜೀವನೋಪಾಯಕ್ಕಾಗಿ ಕಂದಾಯ ಮತ್ತು ಅರಣ್ಯದ ಕುರುಚಲು ಗಿಡ, ಕಲ್ಲುಭೂಮಿಯಲ್ಲಿ ಹಲವು ದಶಕಗಳಿಂದ ಸಾಗುವಳಿ ಮಾಡುತ್ತ ಬಂದಿದ್ದಾರೆ. ತಕ್ಷಣವೇ ಹಕ್ಕುಪತ್ರ …
Read More »ರೈತರಿಗೆ ಆರ್ ಬಿ ಐ ಸಿಹಿಸುದ್ದಿ: ಭದ್ರತೆ ಇಲ್ಲದ ಕೃಷಿ ಸಾಲ ಮಿತಿ 2 ಲಕ್ಷ ರೂ.ಗೆ ಏರಿಕೆ
ಮುಂಬಯಿ: ರೈತರಿಗೆ ಆರ್ಬಿಐ ಸಿಹಿ ಸುದ್ದಿ ನೀಡಿದೆ. ಯಾವುದೇ ಭದ್ರತೆ (ಮೇಲಾಧಾರ) ಇಲ್ಲದೇ ನೀಡಲಾಗುವ ಕೃಷಿ ಸಾಲದ ಮಿತಿಯನ್ನು ಈಗ ಇರುವ 1.6 ಲಕ್ಷ ರೂ.ಗಳಿಂದ 2 ಲಕ್ಷ ರೂ.ಗಳಿಗೆ ಏರಿಕೆ ಮಾಡಿರುವುದಾಗಿ ಆರ್ಬಿಐ ಗವರ್ನರ್ ಶಕ್ತಿಕಾಂತ ದಾಸ್ ಹೇಳಿದ್ದಾರೆ. ಆರ್ಬಿಐನ 3 ದಿನಗಳ ವಿತ್ತೀಯ ನೀತಿ ಪರಿಶೀಲನ ಸಭೆ ಬಳಿಕ ಅವರು ಮಾತನಾಡಿದರು. ಹಾಲಿ ವಿತ್ತ ವರ್ಷದ ಜಿಡಿಪಿ ಪ್ರಗತಿ ದರದ ನಿರೀಕ್ಷೆಯನ್ನು ಈ ಹಿಂದಿನ ಶೇ.7ರಿಂದ ಶೇ.6.6ಕ್ಕಿಳಿಸಲಾಗಿದೆ. ಸತತ …
Read More »ಬೆಂಗಳೂರು: ಸಂಪೂರ್ಣ ಕೃಷಿ ಸಾಲ ಮನ್ನಾಕ್ಕೆ ಆಗ್ರಹಿಸಿ ರೈತ ಸಂಘಟನೆಗಳಿಂದ ಪ್ರತಿಭಟನೆ
ಬೆಂಗಳೂರು: ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತರಿ ಕಾನೂನು ಜಾರಿಗೆ ತರಬೇಕು, ಡಾ. ಸ್ವಾಮಿನಾಥನ್ ವರದಿಯಂತೆ ಬೆಂಬಲ ಬೆಲೆ ನಿಗದಿಯಾಗಬೇಕು ಎಂಬುದು ಸೇರಿದಂತೆ ಹಲವು ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರಾಜ್ಯ ರೈತ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ರೈತ ನಾಯಕ ಜಗಜಿತ್ ಸಿಂಗ್ ದಲೈವಾಲ ಅವರ ನೇತೃತ್ವದಲ್ಲಿ ದೆಹಲಿಯಲ್ಲಿ ನಡೆಯತ್ತಿರುವ ಉಪವಾಸ ಬೆಂಬಲಿಸಿ ರಾಜ್ಯದಲ್ಲೂ ರೈತ ಸಂಘಟನೆಗಳು ಸರದಿ ಉಪವಾಸ ಸತ್ಯಾಗ್ರಹ ಆರಂಭಿಸಿವೆ. ಕೇಂದ್ರ ಸರ್ಕಾರ ಚಳವಳಿ ನಿರತ …
Read More »ಕೇಂದ್ರ ಸರ್ಕಾರದಿಂದ ಮೂರು ಹೊಸ ಕೇಂದ್ರೀಯ ವಿದ್ಯಾಲಯ ಸ್ಥಾಪನೆಗೆ ಒಪ್ಪಿಗೆ
ಬೆಂಗಳೂರು: ನರೇಂದ್ರ ಮೋದಿ ಸರ್ಕಾರ ಕರ್ನಾಟಕ್ಕೆ ಗುಡ್ ನ್ಯೂಸ್ ನೀಡಿದ್ದು, ಮೂರು ಹೊಸ ಕೇಂದ್ರೀಯ ವಿದ್ಯಾಲಯ ಸ್ಥಾಪನೆಗೆ ಒಪ್ಪಿಗೆ ನೀಡಿದೆ. ಇದರೊಂದಿಗೆ ರಾಜ್ಯದಲ್ಲಿ ಮತ್ತೊಂದು ನವೋದಯ ವಿದ್ಯಾಲಯ ಸ್ಥಾಪನೆಗೂ ಕೂಡ ಕೇಂದ್ರ ಸಂಪುಟ ಒಪ್ಪಿಗೆ ನೀಡಿದೆ. ಶುಕ್ರವಾರ ಪ್ರಧಾನಿ ಮೋದಿ ನೇತೃತ್ವದ ಸಂಪುಟ ಸಭೆಯಲ್ಲಿ ಈ ತೀರ್ಮಾನವಾಗಿದೆ. ದೇಶದಾದ್ಯಂತ 85 ಹೊಸ ಕೇಂದ್ರೀಯ ವಿದ್ಯಾಲಯಗಳನ್ನು (ಕೆವಿಗಳು) ತೆರೆಯಲು ಸಂಪುಟ ಒಪ್ಪಿಗೆ ನೀಡಿದೆ. ಇದರಲ್ಲಿ ಶಿವಮೊಗ್ಗದ ಕೇಂದ್ರೀಯ ವಿದ್ಯಾಲಯದ ವಿಸ್ತರಣೆಗೆ ಅನುಮೋದನೆ …
Read More »ಬೆಳಗಾವಿ ಚಳಿಗಾಲ ಅಧಿವೇಶನ: ವಸತಿಗಾಗಿ 2,756 ಕೊಠಡಿ, 10 ಸಮಿತಿ ರಚನೆ
ಬೆಳಗಾವಿ: ವಿಧಾನಮಂಡಲ ಚಳಿಗಾಲದ ಅಧಿವೇಶನ ಹಿನ್ನೆಲೆಯಲ್ಲಿ ಸಚಿವರು, ಶಾಸಕರು, ಅಧಿಕಾರಿಗಳು, ಸಿಬ್ಬಂದಿ ಮತ್ತು ಪತ್ರಕರ್ತರಿಗಾಗಿ 2,756 ಕೊಠಡಿ ಕಾಯ್ದಿರಿಸಿದ್ದೇವೆ. ಇದಕ್ಕಾಗಿ ಪ್ರವಾಸಿ ಮಂದಿರಗಳು, ಖಾಸಗಿ ಹೋಟೆಲ್ಗಳು ಮತ್ತು ವಿವಿಧ ಸಂಸ್ಥೆಗಳ ಅತಿಥಿ ಗೃಹಗಳನ್ನು ಬಳಸಿಕೊಳ್ಳುತ್ತಿದ್ದೇವೆ ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಹೇಳಿದರು. ಇಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ವರ್ಷ ವಸತಿಗಾಗಿ ವಿಧಿಸಿದ್ದ ದರವನ್ನೇ ಈ ಬಾರಿಯೂ ಮುಂದುವರಿಸುವಂತೆ ಕೋರಿದ್ದೇವೆ. ಇದಕ್ಕೆ ಎಲ್ಲ ಹೊಟೇಲ್ ಮಾಲೀಕರು ಒಪ್ಪಿದ್ದಾರೆ. ಅಧಿವೇಶನ …
Read More »ಆರ್ ಬಿ ಐ ನಿಂದ ರೈತರಿಗೆ ಕೃಷಿ ಸಾಲದ ಮಿತಿ 1.6 ಲಕ್ಷದಿಂದ 2 ಲಕ್ಷ ರೂ.ಗೆ ಹೆಚ್ಚಳ
ನವದೆಹಲಿ: ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್ಬಿಐ) ರೈತರಿಗೆ ಮೇಲಾಧಾರ ರಹಿತ ಕೃಷಿ ಸಾಲದ ಮಿತಿಯನ್ನು ಹೆಚ್ಚಿಸುವುದಾಗಿ ಘೋಷಿಸಿದೆ. ಈ ಮಿತಿಯನ್ನು ಪ್ರತಿ ಸಾಲಗಾರನಿಗೆ 1.6 ಲಕ್ಷ ರೂ.ಗಳಿಂದ 2 ಲಕ್ಷ ರೂ.ಗೆ ಹೆಚ್ಚಿಸಲಾಗಿದೆ. ಆರ್ಬಿಐ ಗವರ್ನರ್ ಶಕ್ತಿಕಾಂತ ದಾಸ್ ಅವರು ಡಿಸೆಂಬರ್ 6 ರ ಶುಕ್ರವಾರ ಹಣಕಾಸು ನೀತಿ ಸಮಿತಿ (ಎಂಪಿಸಿ) ಬ್ರೀಫಿಂಗ್ನಲ್ಲಿ ಈ ಘೋಷಣೆ ಮಾಡಿದ್ದಾರೆ. ಈ ಕ್ರಮವು ರೈತರಿಗೆ, ವಿಶೇಷವಾಗಿ ಸಣ್ಣ ಮತ್ತು ಅತಿಸಣ್ಣ ರೈತರಿಗೆ …
Read More »ಎಲ್ಲಾ ಕೃಷಿ ಉತ್ಪನ್ನಗಳು ಕನಿಷ್ಠ ಬೆಂಬಲ ಬೆಲೆಯಲ್ಲಿ ಖರೀದಿ: ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್
ನವದೆಹಲಿ: ರೈತರ ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆ, ನರೇಂದ್ರ ಮೋದಿ ಸರಕಾರವು ಎಲ್ಲಾ ಕೃಷಿ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆಗೆ (ಎಂಎಸ್ಪಿ) ಖರೀದಿಸಲಿದೆ ಎಂದು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಇಂದು ಘೋಷಿಸಿದ್ದಾರೆ. ಪ್ರಶ್ನೋತ್ತರ ವೇಳೆಯಲ್ಲಿ ರೈತರಿಗೆ ಎಂಎಸ್ಪಿ ಸಮಸ್ಯೆಯ ಕುರಿತು ಪೂರಕ ಪ್ರಶ್ನೆಗಳಿಗೆ ಉತ್ತರವಾಗಿ ಅವರು ಈ ಭರವಸೆ ನೀಡಿದರು. ಎಂಎಸ್ಪಿಗೆ ಕಾನೂನು ಬೆಂಬಲ ಸೇರಿದಂತೆ ಬೇಡಿಕೆಗಳ ಪಟ್ಟಿಯನ್ನು ಹೊತ್ತು ರೈತರು ದೆಹಲಿಗೆ ಕಾಲ್ನಡಿಗೆ ಜಾಥಾವನ್ನು ಆರಂಭಿಸಿದ ದಿನವೇ …
Read More »ಅನ್ನಚಕ್ರ ಯೋಜನೆಗೆ ಚಾಲನೆ ನೀಡಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ
ನವದೆಹಲಿ: ನವದೆಹಲಿಯಲ್ಲಿ ಅನ್ನ ಚಕ್ರ ಹೊಸ ಪೋರ್ಟಲ್ಗೆ ಚಾಲನೆ ದೊರೆತಿದೆ. ಕೇಂದ್ರ ಸರ್ಕಾರ ದೇಶದ 80 ಕೋಟಿ ಬಡವರಿಗೆ 2028ರವರೆಗೆ ಉಚಿತ ಪಡಿತರ ಯೋಜನೆ ವಿಸ್ತರಿಸಿದೆ. ಅನ್ನಚಕ್ರ ಯೋಜನೆಗೆ ಚಾಲನೆ ನೀಡಿ ಮಾತನಾಡಿ ಸಚಿವ ಪ್ರಹ್ಲಾದ್ ಜೋಶಿ, ಭಾರತ, ಯುರೋಪಿಯನ್ ಒಕ್ಕೂಟಕ್ಕಿಂತ ದುಪ್ಪಟ್ಟು ಜನಸಂಖ್ಯೆಗೆ ಉಚಿತ ಪಡಿತರ ಪೂರೈಸುತ್ತಿದೆ ಎಂದು ಕೇಂದ್ರ ಆಹಾರ ಸಚಿವ ಪ್ರಲ್ಹಾದ ಜೋಶಿ ಹೇಳಿದರು. ಭಾರತ ಪ್ರತಿ ತಿಂಗಳು 2.20 ಲಕ್ಷ ಕೋಟಿ ಮೌಲ್ಯದ ಉಚಿತ …
Read More »2028 ರವರೆಗೆ ರಾಜ್ಯದಲ್ಲಿ ಯಾವುದೇ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ: ಸಿಎಂ ಸಿದ್ದರಾಮಯ್ಯ ಘೋಷಣೆ
ಹಾಸನ : ಮುಂದಿನ ವಿಧಾನಸಭಾ ಚುನಾವಣೆಯವರಿಗೂ ಅಂದರೆ 2028 ರವರೆಗೆ ರಾಜ್ಯದಲ್ಲಿ ಯಾವುದೇ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ. 2028ರಲ್ಲಿ ಮತ್ತೆ ನಾವೇ ಅಧಿಕಾರಕ್ಕೆ ಬರುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಹಾಸನದಲ್ಲಿ ಜನ ಕಲ್ಯಾಣ ಮೃತ್ ಸಮಾವೇಶದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ಬಡ ಜನರಿಗೋಸ್ಕರ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ. ಆದರೆ ಯಾವುದೇ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಕಳೆದ ವಿಧಾನಸಭಾ ಚುನಾವಣೆಯಲ್ಲಿ …
Read More »ರಾಜ್ಯದಲ್ಲಿ ಕಾಂಗ್ರೆಸ್ ನ 5 ಗ್ಯಾರಂಟಿಗಳನ್ನು ರದ್ದುಗೊಳಿಸುವ ಪ್ರಯತ್ನ ನಡೆಯುತ್ತಿದೆ: ರಣದೀಪ್ ಸಿಂಗ್ ಸುರ್ಜೇವಾಲಾ
ಬೆಂಗಳೂರು: ಕೇಂದ್ರ ಬಿಜೆಪಿ ಸರ್ಕಾರ ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಯೋಜನೆಗಳ ಮೇಲೆ ಟೀಕೆ ಮಾಡುತ್ತಿದೆ. ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಿ ರಾಜ್ಯದ ಮಹಿಳೆಯರಿಗೆ ಸಿಗುವ ಎರಡು ಸಾವಿರ, ಅನ್ನಭಾಗ್ಯ ಯೋಜನೆ ಅಕ್ಕಿ ಹಣ, 200 ಯೂನಿಟ್ ಉಚಿತ ವಿದ್ಯುತ್, ನಿರುದ್ಯೋಗಿ ಯುವಕರ ನಿರುದ್ಯೋಗ ಭತ್ಯೆಯನ್ನು ಕಸಿಯಲು ಪ್ರಯತ್ನಿಸುತ್ತಿದೆ ಎಂದು ರಣದೀಪ್ ಸಿಂಗ್ ಸುರ್ಜೆವಾಲ ಅವರು ಹೇಳಿದರು. ಈ ಕುರಿತು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ಅವರು ಮಾತನಾಡಿ, ಬಿಜೆಪಿ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





