ಬೆಳಗಾವಿ: ಕಳೆದ ವರ್ಷದಂತೆ ಈ ವರ್ಷವೂ ಸಹ ಚಳಿಗಾಲದ ಅಧಿವೇಶನ ಜಿಲ್ಲೆಯಲ್ಲಿ ಜರುಗುತ್ತಿದ್ದು, ಅಧಿವೇಶನದ ಸುಗಮ ನಿರ್ವಹಣೆಗಾಗಿ ಜಿಲ್ಲಾ ಪಂಚಾಯತಿ ಹಾಗೂ ಅಧೀನ ಇಲಾಖೆಯ ಸಿಬ್ಬಂದಿ ವರ್ಗದವರು ಸಮನ್ವಯತೆ ಸಾಧಿಸುವ ಮೂಲಕ ತಮ್ಮ ಕಾರ್ಯ ನಿರ್ವಹಿಸಿ ಹಾಗೂ ಶಿಸ್ತು ಮತ್ತು ಸಮಯ ನಿರ್ವಹಣೆಗೆ ಹೆಚ್ಚಿನ ಆದ್ಯತೆ ನೀಡಿ ಎಂದು ಜಿಲ್ಲಾ ಪಂಚಾಯತಿ ಸಿಇಒ ರಾಹುಲ್ ಶಿಂಧೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಗುರುವಾರ ಜರುಗಿದ ಚಳಿಗಾಲದ ಅಧಿವೇಶನದ …
Read More »ಮಂಗಳೂರು ಸೇರಿ ದೇಶದ 6 ವಿಮಾನ ನಿಲ್ದಾಣ ಗುತ್ತಿಗೆ ಪಾರದರ್ಶಕ: ಕೇಂದ್ರ ಸಚಿವ ಕೆ.ರಾಮಮೋಹನ್ ನಾಯ್ಡು
ಹೊಸದಿಲ್ಲಿ: ಮಂಗಳೂರು ಸೇರಿದಂತೆ ದೇಶದ 6 ಪ್ರಮುಖ ವಿಮಾನ ನಿಲ್ದಾಣಗಳನ್ನು ಅದಾನಿ ಗ್ರೂಪ್ಗೆ ಪಾರದರ್ಶಕವಾಗಿಯೇ ಗುತ್ತಿಗೆ ನೀಡಲಾಗಿದೆ ಎಂದು ನಾಗರಿಕ ವಿಮಾನಯಾನ ಸಚಿವ ಕೆ.ರಾಮ್ಮೋಹನ್ ನಾಯ್ಡು ಗುರುವಾರ ಲೋಕಸಬೆಗೆ ಮಾಹಿತಿ ನೀಡಿದ್ದಾರೆ. ಟಿಎಂಸಿ ಸಂಸದ ಸೌಗತ ರಾಯ್ “ಒಂದೇ ಸಂಸ್ಥೆಗೆ 2 ವಿಮಾನ ನಿಲ್ದಾಣ ಗುತ್ತಿಗೆ ನೀಡ ಬಾರದೆಂದು ನೀತಿ ಆಯೋಗ, ಆರ್ಥಿಕ ವ್ಯವಹಾರಗಳ ಇಲಾಖೆ ಅಭಿಪ್ರಾಯ’ ಎಂದಿದ್ದರು. ಅದಕ್ಕೆ ಉತ್ತರಿಸಿದ ಸಚಿವರು, “ನೀತಿ ಆಯೋಗದ ಸಿಇಒ, ಡಿಇಎ ಕಾರ್ಯದರ್ಶಿಯವರಿದ್ದ …
Read More »ದೇವಾಲಯಗಳ ಅರ್ಚಕರಿಗೆ 5 ಲಕ್ಷ ರೂ. ಜೀವವಿಮೆ, ಗೌರವಧನ ಹೆಚ್ಚಳಕ್ಕೆ ಸಿಎಂಗೆ ಮನವಿ
ಬೆಂಗಳೂರು: ರಾಜ್ಯದ ಮುಜರಾಯಿ ಇಲಾಖೆ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ದೇವಾ ಲಯಗಳ ಅರ್ಚಕರು ಮತ್ತು ನೌಕರರಿಗೆ ಕನಿಷ್ಠ 5 ಲಕ್ಷ ರೂ. ಜೀವ ವಿಮೆ ನೀಡಬೇಕು. ಜತೆಗೆ ಗೌರವಧನ 10 ಸಾವಿರ ರೂ.ಗೆ ಹೆಚ್ಚಿಸುವಂತೆ ಕೋರಿ ಅಖಿಲ ಕರ್ನಾಟಕ ಹಿಂದೂ ದೇವಾಲಯಗಳ ಅರ್ಚಕರ, ಆಗಮಿಕರ ಮತ್ತು ಉಪಾಧಿವಂತರ ಒಕ್ಕೂಟ ಸರಕಾರವನ್ನು ಆಗ್ರಹಿಸಿದೆ. ಒಕ್ಕೂಟದ ರಾಜ್ಯಾಧ್ಯಕ್ಷ ಹಾಗೂ ಆರೋಗ್ಯ ಸಚಿವ ದಿನೇಶ್ ಗುಂಡೂ ರಾವ್ ಮತ್ತು ಒಕ್ಕೂಟದ ಅಧ್ಯಕ್ಷ ಪ್ರೊ| ಡಾ| ಕೆ.ಇ. …
Read More »ಗಿರಿಜನ ಉಪಯೋಜನೆಯಡಿ ಕುರಿ/ಮೇಕೆ ಘಟಕಗಳ ಸಹಾಯಧನಕ್ಕೆ ಅರ್ಜಿ ಆಹ್ವಾನ
ಮಡಿಕೇರಿ: ಪ್ರಸಕ್ತ (2024-25) ಸಾಲಿನ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮ ವತಿಯಿಂದ ಗಿರಿಜನ ಉಪಯೋಜನೆಯಡಿಯಲ್ಲಿ ಪರಿಶಿಷ್ಟ ಪಂಗಡ-03 ಘಟಕಗಳಿಗೆ (10+01) ಕುರಿ, ಮೇಕೆ ಘಟಕಗಳ ಶೇಕಡ 90 ರೂ.59,400 ಸಹಾಯಧನಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮ, ಬೆಂಗಳೂರು ಈ ಕಚೇರಿಯಲ್ಲಿ ನೋಂದಾಯಿಸಿರುವ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳಲ್ಲಿ ಸದಸ್ಯರಾಗಿರುವ ಹಾಗೂ ಈ ಹಿಂದಿನ ವರ್ಷಗಳಲ್ಲಿ ಪಶುಪಾಲನಾ ಮತ್ತು ಪಶುವೈದ್ಯಕೀಯ …
Read More »ರಾಜ್ಯದ ರೈತರಿಗೆ ಸಿಹಿಸುದ್ದಿ: ಅಕ್ರಮ ಸಕ್ರಮದಡಿ ಪೋಡಿ ದುರಸ್ಥಿ ಅಭಿಯಾನ
ಬೆಂಗಳೂರು : ಅಕ್ರಮ-ಸಕ್ರಮದಡಿ ಜಮೀನು ಹೊಂದಿರುವ ರಾಜ್ಯದ ರೈತರಿಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದ್ದು, 1-5 ನಮೂನೆ ಪೋಡಿ ದುರಸ್ಥಿ ಕಾರ್ಯವನ್ನು ಅಭಿಯಾನ ಮಾದರಿಯಲ್ಲಿ ರಾಜ್ಯಾದ್ಯಂತ ಜಾರಿಗೊಳಿಸಲಾಗಿದೆ. ವಿಕಾಸಸೌಧದಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ರಾಜ್ಯದ ಎಲ್ಲಾ ತಹಶೀಲ್ದಾರರ ಜೊತೆ ಸಭೆ ನಡೆಸಲಾಯಿತು. ಈ ವೇಳೆ ಬಗರ್ ಹುಕುಂ ಹಾಗೂ ನಮೂನೆ 1 ರಿಂದ 5 ದುರಸ್ಥಿ ಕಾರ್ಯಗಳ ಪ್ರಗತಿ ಕುರಿತ ಪರಿಶೀಲಿಸಲಾಯಿತು.30 ವರ್ಷಕ್ಕೂ ಅಧಿಕ ಅವಧಿಯಿಂದ ಮಂಜೂರಾದ ಸರ್ಕಾರಿ …
Read More »ಬೆಳಗಾವಿ: 11 ದಿನಗಳ ಚಳಿಗಾಲ ಅಧಿವೇಶನಕ್ಕೆ ₹19.3 ಕೋಟಿ ರೂ. ವೆಚ್ಚ
ಬೆಳಗಾವಿ: ಇಲ್ಲಿನ ಸುವರ್ಣ ವಿಧಾನ ಸೌಧದಲ್ಲಿ ಡಿಸೆಂಬರ್ 9ರಿಂದ 19ರವರೆಗೆ ನಡೆಯುವ 13ನೇ ಚಳಿಗಾಲದ ಅಧಿವೇಶನಕ್ಕೆ ₹19.3 ಕೋಟಿಗೂ ಹೆಚ್ಚು ವೆಚ್ಚ ಅಂದಾಜಿಸಲಾಗಿದೆ. ಪ್ರತಿ ವರ್ಷ ವೆಚ್ಚದಲ್ಲಿ ಶೇ 10ರಷ್ಟು ಹೆಚ್ಚಳ ಆಗುವುದು ಸಹಜ. ಆದರೆ, ಈ ಬಾರಿ ಅದನ್ನೂ ಕಡಿಮೆ ಮಾಡಲು ಜಿಲ್ಲಾಡಳಿತ ಕಸರತ್ತು ನಡೆಸಿದೆ. ಅಧಿವೇಶನದ ವೆಚ್ಚ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಲೇ ಇದೆ. ಕಳೆದ ವರ್ಷ (2023) ₹17 ಕೋಟಿ ಅಂದಾಜಿಸಲಾಗಿತ್ತು. ಕೊನೆಗೆ ₹23 ಕೋಟಿ ವೆಚ್ಚವಾಗಿತ್ತು. …
Read More »ಒಳಮೀಸಲಾತಿ ಏಕ ಸದಸ್ಯ ವಿಚಾರಣಾ ಆಯೋಗಕ್ಕೆ ಸಂಚಾಲಕರು, ಕಾರ್ಯದರ್ಶಿ ನೇಮಕ
ಬೆಂಗಳೂರು : ಪರಿಶಿಷ್ಟ ಜಾತಿಗಳಲ್ಲಿ ಒಳ ಮೀಸಲಾತಿ ಕಲ್ಪಿಸಲು ನ್ಯಾ.ಎಚ್.ಎನ್.ನಾಗಮೋಹನ್ ದಾಸ್ ಅವರ ಅಧ್ಯಕ್ಷತೆಯಲ್ಲಿ ರಚಿಸಲಾದ ಏಕ ಸದಸ್ಯ ವಿಚಾರಣಾ ಆಯೋಗಕ್ಕೆ ಸಮಾಜ ಕಲ್ಯಾಣ ಇಲಾಖೆಯ ಆಯುಕ್ತರನ್ನು ಸಂಚಾಲಕರನ್ನಾಗಿ ಹಾಗೂ ಇಂದಿರಾಗಾಂಧಿ ವೃತ್ತಿ ತರಬೇತಿ ಕೇಂದ್ರದ ಅಪರ ನಿರ್ದೇಶಕಿಯನ್ನು ಕಾರ್ಯದರ್ಶಿಯನ್ನಾಗಿ ನೇಮಿಸಿ ರಾಜ್ಯ ಸರಕಾರ ಬುಧವಾರ ಆದೇಶ ಹೊರಡಿಸಿದೆ. ವಿಚಾರಣಾ ಆಯೋಗವು ರಾಜ್ಯದಲ್ಲಿ ಲಭ್ಯವಿರುವ ದತ್ತಾಂಶ ಮತ್ತು 2011ರ ಜನಗಣತಿಯನ್ನು ಪರಿಗಣಿಸಿ, ವೈಜ್ಞಾನಿಕವಾಗಿ ತರ್ಕಬದ್ಧ ಒಳ ಮೀಸಲಾತಿ ಮತ್ತು ಪರಿಶಿಷ್ಟ …
Read More »ರಾಜ್ಯದ ದಾಖಲೆ ರಹಿತ ವಸತಿ ಪ್ರದೇಶಗಳನ್ನು ಕಂದಾಯ ಗ್ರಾಮಗಳೆಂದು ಘೋಷಣೆ: ಸಚಿವ ಕೃಷ್ಣ ಬೈರೇಗೌಡ
ಶಿರಸಿ: ರಾಜ್ಯದ 3,800 ದಾಖಲೆ ರಹಿತ ವಸತಿ ಪ್ರದೇಶಗಳನ್ನು 6 ತಿಂಗಳಲ್ಲಿ ಕಂದಾಯ ಗ್ರಾಮಗಳೆಂದು ಘೋಷಿಸಲಾಗುವುದು. ಆ ಗ್ರಾಮಗಳಲ್ಲಿ ವಾಸಿಸುವ 1.50 ಲಕ್ಷ ಕುಟುಂಬಗಳಿಗೆ ಹಕ್ಕುಪತ್ರ ನೀಡಲಾಗುವುದು’ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಶಿರಸಿಯ ಅಂಬೇಡ್ಕರ್ ಭವನದಲ್ಲಿ ಬುಧವಾರ ಅವರು ಅರ್ಹ ಫಲಾನುಭವಿಗಳಿಗೆ ಸಾಂಕೇತಿಕವಾಗಿ ಬಗರ್ ಹುಕುಂ ಸಾಗುವಳಿ ಚೀಟಿ, ಪಹಣಿ ಪತ್ರಿಕೆ, ಪೋಡಿ ದಾಖಲೆ ಮತ್ತು ಕಂದಾಯ ಗ್ರಾಮಗಳ ಹಕ್ಕುಪತ್ರ ವಿತರಿಸಿ ಮಾತನಾಡಿದರು. ಬಗರ್ ಹುಕುಂ …
Read More »ಸುಸ್ಥಿರ ಭಾರತಕ್ಕಾಗಿ ರಿಯಲ್ ಎಸ್ಟೇಟ್ ಮತ್ತು ಸರ್ಕಾರ ಒಟ್ಟಾಗಿ ಕೆಲಸ ಮಾಡಲಿ: ಸಚಿವ ಪ್ರಿಯಾಂಕ್ ಖರ್ಗೆ
ಬೆಂಗಳೂರು: ಸುಸ್ಥಿರ ಭಾರತವನ್ನು ನಿರ್ಮಿಸಲು ರಿಯಲ್ ಎಸ್ಟೇಟ್ ಕ್ಷೇತ್ರ ಮತ್ತು ಸರ್ಕಾರಗಳು ಒಟ್ಟಾಗಿ ಕೆಲಸ ಮಾಡಬೇಕು ಎಂದು ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು. ಬ್ರಿಗೇಡ್ ರೀಪ್ ಇದರ ‘ಪ್ರೊಪಗೇಟ್-2024’ ಕಾರ್ಯಕ್ರಮ ‘ದಿ ಮೋಸ್ಟ್ ಇಂಪ್ಯಾಕ್ಟ್ಫುಲ್ ಪ್ರಾಪ್ಟೆಕ್ ಸಮ್ಮಿಟ್’ ಅನ್ನು ಬುಧವಾರ ಉದ್ಘಾಟಿಸಿ ಅವರು ಮಾತನಾಡಿದರು. ರಿಯಲ್ ಎಸ್ಟೇಟ್ ಕ್ಷೇತ್ರವು ಜಿಡಿಪಿಗೆ ಶೇ 7.3ರಷ್ಟು ಕೊಡುಗೆ ನೀಡುತ್ತಿದೆ. ಕರ್ನಾಟಕದಲ್ಲಿ ರಿಯಲ್ ಎಸ್ಟೇಟ್ ಕ್ಷೇತ್ರ ಅತಿ …
Read More »ಪಿಎಂ ಸೂರ್ಯಘರ್ ಸಬ್ಸಿಡಿಗೆ 75000 ಕೋಟಿ ರೂ. ಅನುದಾನ ಮೀಸಲು: ಕೇಂದ್ರ ಸಚಿವ ಪ್ರಲ್ಹಾದ ಜೋಶಿ
ನವದೆಹಲಿ: ದೇಶದಲ್ಲಿ ಪಿಎಂ ಸೂರ್ಯ ಘರ್ ಫಲಾನುಭವಿಗಳಿಗೆ ಸಹಾಯಧನ ನೀಡಲು ಕೇಂದ್ರ ಸರ್ಕಾರ ಬಜೆಟ್ ಅಲ್ಲಿ ಬರೋಬ್ಬರಿ 75,000 ಕೋಟಿ ಅನುದಾನ ಮೀಸಲಿಟ್ಟಿದೆ ಎಂದು ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ ಜೋಶಿ ತಿಳಿಸಿದರು. ಕೇಂದ್ರ ಸಂಸತ್ ಅಧಿವೇಶನದಲ್ಲಿ ವಿಪಕ್ಷ ಸದಸ್ಯರ ಪ್ರಶ್ನೆಗೆ ಉತ್ತರಿಸುವ ವೇಳೆ ಸಚಿವ ಜೋಶಿ, ಪ್ರಧಾನ ಮಂತ್ರಿ ಸೂರ್ಯ ಘರ್ ಯೋಜನೆ ಬಗ್ಗೆ ಸಂಪೂರ್ಣ ಮಾಹಿತಿ ನೀಡುತ್ತ ಸದನದ ಗಮನ ಸೆಳೆದರು. 21 …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





