Breaking News

BigTv News

ನರೇಗಾ ಯೋಜನೆಯಡಿ ಪ್ರತಿವರ್ಷ 60 ಲಕ್ಷ ಜಾಬ್ ಕಾರ್ಡ್ ವಿತರಣೆ: ಕೇಂದ್ರ ಸಚಿವ ಪೆಮ್ಮಸಾನಿ ಚಂದ್ರಶೇಖರ್‌

ನವದೆಹಲಿ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಅಡಿಯಲ್ಲಿ ಪ‍್ರತಿ ವರ್ಷ 60 ಲಕ್ಷ ಹೊಸ ಜಾಬ್‌ ಕಾರ್ಡ್‌ಗಳನ್ನು ವಿತರಿಸಲಾಗುತ್ತದೆ. ಅಲ್ಲದೆ ಕೆಲವೊಂದು ಮಾನದಂಡಗಳನ್ನು ಅನುಸರಿಸಿ ಹೆಸರು ತೆಗೆದು ಹಾಕುತ್ತಿದ್ದು, ಇದರಲ್ಲಿ ಸರ್ಕಾರದ ಪಾತ್ರವಿಲ್ಲ ಎಂದು ಕೇಂದ್ರ ಸರ್ಕಾರ ಮಂಗಳವಾರ ಸಂಸತ್ತಿನಲ್ಲಿ ತಿಳಿಸಿದೆ. ಗ್ರಾಮೀಣಾಭಿವೃದ್ಧಿಗೆ ನಿಗದಿಪಡಿಸುವ ಅನುದಾನದಲ್ಲಿ ಶೇ 57ರಷ್ಟು ಉದ್ಯೋಗ ಖಾತರಿಗೆ ಬಳಕೆಯಾಗುತ್ತಿದೆ. ಜಾಬ್‌ ಕಾರ್ಡ್‌ಗಳಲ್ಲಿ ಪಾರದರ್ಶಕತೆ ತರುವ ನಿಟ್ಟಿನಲ್ಲಿ ಆಧಾರ್‌ ಜೋಡಣೆ ಜಾರಿಗೆ ತರಲಾಗಿದೆ …

Read More »

ಎಂ-ಸ್ಯಾಂಡ್, ಜಲ್ಲಿಕಲ್ಲು ಸಾಗಾಣಿಕೆ ವೇಳೆ ಟಾರ್ಪಲ್ ಹೊದಿಕೆ ಕಡ್ಡಾಯ

ಮಡಿಕೇರಿ: ಲಾರಿ ಮತ್ತು ಪಿಕ್‌ಅಪ್‌ ಸೇರಿದಂತೆ ಯಾವುದೇ ಬಗೆಯ ವಾಹನದಲ್ಲಿ ಎಂ-ಸ್ಯಾಂಡ್, ಜಲ್ಲಿಕಲ್ಲುಗಳನ್ನು ಸಾಗಾಣಿಕೆ ಮಾಡುವಾಗ ಕಡ್ಡಾಯವಾಗಿ ಟಾರ್ಪಲ್‌ನ್ನು ಮುಚ್ಚಿರಬೇಕು. ಇಲ್ಲದಿದ್ದರೆ, ದಂಡ ವಿಧಿಸಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಎಚ್ಚರಿಕೆ ನೀಡಿದರು. ಇಲ್ಲಿನ ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಅವರು ಲಾರಿ ಚಾಲಕರು, ಮಾಲೀಕರ ಸಂಘದ ಅಧ್ಯಕ್ಷರು, ಸದಸ್ಯರು, ಟ್ಯಾಕ್ಸಿ ಇತರೆ ಸರಕು ಸಾಗಣೆ ವಾಹನ ಚಾಲಕರೊಂದಿಗೆ ನಡೆಸಿದ ಸಭೆಯಲ್ಲಿ ಈ ಎಚ್ಚರಿಕೆಯನ್ನು ರವಾನಿಸಿದರು. ಒಂದು ವೇಳೆ ಟಾರ್ಪಲ್‌ …

Read More »

ಮಹಾರಾಷ್ಟ್ರ: ನಾಳೆ ಸಿಎಂ, ಇಬ್ಬರು ಡಿಸಿಎಂ ಗಳ ಮಾತ್ರ ಪ್ರಮಾಣವಚನ

ಮುಂಬೈ: ಆಜಾದ್ ಮೈದಾನದಲ್ಲಿ ನಾಳೆ ನಡೆಯಲಿರುವ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮದಲ್ಲಿ ಸಿಎಂ ಮತ್ತು ಇಬ್ಬರು ಡಿಸಿಎಂ ಮಾತ್ರ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಶಿವಸೇನಾ ನಾಯಕ ಉದಯ್ ಸಾವಂತ್ ಹೇಳಿದ್ದಾರೆ. ಸಿಎಂ ಆಗಿ ದೇವೇಂಧ್ರ ಫಡಣವೀಸ್, ಡಿಸಿಎಂಗಳಾಗಿ ಅಜಿತ್ ಪವಾರ್ ಮತ್ತು ಏಕನಾಥ ಶಿಂದೆ ಪ್ರಮಾಣವಚನ ಸ್ವೀಕರಿಸುತ್ತಾರೆ. ಸಚಿವ ಸ್ಥಾನಗಳು ಮತ್ತು ಖಾತೆಗಳ ಹಂಚಿಕೆ ಬಗ್ಗೆ ನಂತರ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ. ಮಹಾರಾಷ್ಟ್ರದ ಹಂಗಾಮಿ ಮುಖ್ಯಮಂತ್ರಿ ಏಕನಾಥ ಶಿಂಧೆ …

Read More »

ಶೀಘ್ರವೇ ಅಬಕಾರಿ ಇಲಾಖೆಯಲ್ಲಿ ಸಿ ಗ್ರೂಪ್ ಹುದ್ದೆಗಳ ಭರ್ತಿ: ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು : ಉದ್ಯೋಗಾಂಕ್ಷಿಗಳಿಗೆ ಸಿಎಂ ಸಿದ್ದರಾಮಯ್ಯ ಗುಡ್ ನ್ಯೂಸ್ ನೀಡಿದ್ದು, ಶೀಘ್ರವೇ ಅಬಕಾರಿ ಇಲಾಖೆಯಲ್ಲಿಖಾಲಿ ಇರುವ ‘ಸಿ ಗ್ರೂಪ್’ ಹುದ್ದೆಗಳ ಭರ್ತಿ ಮಾಡಲಾಗುವುದು ಸಿಎಂ ಘೋಷಣೆ ಮಾಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ಸಭೆ ನಡೆಸಲಾಗಿದ್ದು, ಈ ವೇಳೆ ಘೋಷಣೆ ಮಾಡಿದ್ದಾರೆ. ಅಬಕಾರಿ ಇಲಾಖೆಯಲ್ಲಿ ರಾಜಸ್ವ ಸಂಗ್ರಹ ಹೆಚ್ಚಿಸಲು ಜಾಗೃತ ದಳ ಇನ್ನಷ್ಟು ಚುರುಕಾಗಿ ಕಾರ್ಯನಿರ್ವಹಿಸಲು ಸಿಎಂ ಸೂಚನೆ ನೀಡಿದ್ದಾರೆ. ಅಬಕಾರಿ ಇಲಾಖೆಯಲ್ಲಿ ಖಾಲಿಯಿರುವ …

Read More »

ವಿಧಾನಮಂಡಲ ಅಧಿವೇಶನ ಬಳಿಕ ಪೌರಕಾರ್ಮಿಕರ ಸಮಸ್ಯೆಗೆ ಪರಿಹಾರ: ಡಿಸಿಎಂ ಡಿಕೆ ಶಿವಕುಮಾರ್ ಭರವಸೆ

ಬೆಂಗಳೂರು: ಪೌರಕಾರ್ಮಿಕರ ಬಗ್ಗೆ ನಮಗೆ ಸಹಾನುಭೂತಿ ಇದೆ. ವಿಧಾನಮಂಡಲ ಅಧಿವೇಶನದ ಬಳಿಕ ನಿಮ್ಮ ಸಮಸ್ಯೆಗಳಿಗೆ ಪರಿಹಾರ ನೀಡಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ ನೀಡಿದರು. ಐಪಿಡಿ ಸಾಲಪ್ಪ ವರದಿ ಜಾರಿ ಸೇರಿದಂತೆ ಅನೇಕ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಫ್ರೀಡಂ ಪಾರ್ಕ್ ನಲ್ಲಿ ಧರಣಿ ಮಾಡುತ್ತಿದ್ದ ಪೌರಕಾರ್ಮಿಕರನ್ನು ಶಿವಕುಮಾರ್ ಅವರು ಭೇಟಿ ಮಾಡಿ ಮಂಗಳವಾರ ಭರವಸೆ ನೀಡಿದರು. ಕಳೆದ 25 ವರ್ಷಗಳಿಂದ ಮಾತ್ರವಲ್ಲ, ಈ ಸಮಾಜ ಆರಂಭವಾದಾಗಿನಿಂದಲೂ ನೀವು ಈ …

Read More »

ಗಿರಿಜನ ಉಪಯೋಜನೆಯಡಿ ಕುರಿ/ಮೇಕೆ ಘಟಕ ಸ್ಥಾಪನೆಗಾಗಿ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ : ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮದ ವತಿಯಿಂದ ಗಿರಿಜನ ಉಪಯೋಜನೆಯಡಿ ಕುರಿ/ಮೇಕೆ ಘಟಕ ಸ್ಥಾಪನೆಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮದಲ್ಲಿ ನೊಂದಾಯಿತ, ಜಿಲ್ಲೆಯ ಚಾಲ್ತಿಯಲ್ಲಿರುವ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳ ಸದಸ್ಯತ್ವ ಹೊಂದಿರುವ 18 ರಿಂದ 60 ವರ್ಷ ವಯೋಮಿತಿಯೊಳಗಿನ ಪರಿಶಿಷ್ಟ ಪಂಗಡದ (ಮಹಿಳಾ ಸದಸ್ಯರಿಗೆ ಮೊದಲ ಆದ್ಯತೆ ಕೊಡಲಾಗುವುದು) ಅರ್ಹ ಅರ್ಜಿದಾರರು ಡಿಸೆಂಬರ್ 17 …

Read More »

ದೇಶದಲ್ಲೇ ಅಭಿವೃದ್ದಿಯಲ್ಲಿ ಕರ್ನಾಟಕ ಮೊದಲ ಸ್ಥಾನದಲ್ಲಿದೆ: ಸಿಎಂ ಸಿದ್ದರಾಮಯ್ಯ

ತುಮಕೂರು: ದೇಶದಲ್ಲೇ ಅಭಿವೃದ್ಧಿ ವಿಷಯದಲ್ಲಿ ಕರ್ನಾಟಕ ಮೊದಲ ಸ್ಥಾನದಲ್ಲಿದೆ. ಎಲ್ಲ ರಾಜ್ಯಗಳಿಗಿಂತ ಕರ್ನಾಟಕ ಪ್ರಗತಿಯಲ್ಲಿ ಮುಂಚೂಣಿ ಕಾಯ್ದುಕೊಂಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು. ದೇಶದ ಒಟ್ಟಾರೆ ಜಿಡಿಪಿ 8.2ರಷ್ಟು ಬೆಳವಣಿಗೆ ಸಾಧಿಸಿದ್ದರೆ, ಕರ್ನಾಟಕದ ಜಿಡಿಪಿ 10.2ಕ್ಕೆ ಹೆಚ್ಚಳವಾಗಿದೆ. ವಿದೇಶಿ ನೇರ ಬಂಡವಾಳ ಹೂಡಿಕೆ (ಎಫ್‌ಡಿಐ), ಕೇಂದ್ರಕ್ಕೆ ತೆರಿಗೆ ಪಾವತಿಯಲ್ಲಿ ಮಹಾರಾಷ್ಟ್ರ ಮೊದಲ ಸ್ಥಾನದಲ್ಲಿದ್ದರೆ, ರಾಜ್ಯ ಎರಡನೇ ಸ್ಥಾನದಲ್ಲಿದೆ. ಅಭಿವೃದ್ಧಿಯಲ್ಲಿ ಇತರೆ ಎಲ್ಲ ರಾಜ್ಯಗಳಿಗಿಂತ ನಾವು ಮುಂಚೂಣಿಯಲ್ಲಿ ಇದ್ದೇವೆ. ಯಾರು ಬೇಕಾದರೂ …

Read More »

ಸಿಎಂ ಅಧ್ಯಕ್ಷತೆಯಲ್ಲಿ ಪ್ರಗತಿ ಪರಿಶೀಲನಾ ಸಭೆ: ನವೆಂಬರ್ ಅಂತ್ಯದವರೆಗೆ 53,103 ಕೋಟಿ ರೂ. ತೆರಿಗೆ ಸಂಗ್ರಹ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಗೃಹ ಕಚೇರಿ ಕೃಷ್ಣಾದಲ್ಲಿ ಮಂಗಳವಾರ ವಾಣಿಜ್ಯ ತೆರಿಗೆ ಇಲಾಖೆ, ಅಬಕಾರಿ ಇಲಾಖೆ, ಮುದ್ರಾಂಕ ಮತ್ತು ನೋಂದಣಿ ಇಲಾಖೆಗಳ ಪ್ರಗತಿ ಪರಿಶೀಲನೆ ಸಭೆ ನಡೆಸಿದರು. ವಾಣಿಜ್ಯ ತೆರಿಗೆ ಇಲಾಖೆ: ಪ್ರಸಕ್ತ ಸಾಲಿನ ನವೆಂಬರ್ ಅಂತ್ಯದವರೆಗಿನ ಒಟ್ಟು ವಾಣಿಜ್ಯ ತೆರಿಗೆ ಸಂಗ್ರಹಣೆ ಗುರಿ 56,317 ಕೋಟಿ ರೂ.ಇದ್ದು, ಇದುವರೆಗೆ 53,103 ಕೋಟಿ ರೂ.ತೆರಿಗೆ ಸಂಗ್ರಹ ಮಾಡಲಾಗಿದ್ದು, ಶೇ.94 ರಷ್ಟು ಸಾಧನೆ ಮಾಡಲಾಗಿದೆ. 2024-25 ಹಣಕಾಸು ಸಾಲಿನ ಒಟ್ಟು …

Read More »

ವಿಕಲಚೇತನರ ಶ್ರೇಯೋಭಿವೃದ್ಧಿಗಾಗಿ ಪೂರಕ ಅಂದಾಜಿನಲ್ಲಿ 44 ಕೋಟಿ ರೂ. ಮಂಜೂರು: ಸಿಎಂ ಭರವಸೆ

ಬೆಂಗಳೂರು: ವಿಕಲಚೇತನರ ಸಬಲೀಕರಣಕ್ಕಾಗಿ ಸರ್ಕಾರ ಬದ್ಧವಾಗಿದ್ದು, ಅವರ ಶ್ರೇಯೋಭಿವೃದ್ಧಿಗಾಗಿ ಪ್ರಸಕ್ತ ಸಾಲಿನ ಪೂರಕ ಅಂದಾಜಿನಲ್ಲಿ 44 ಕೋಟಿ ರೂ. ಮಂಜೂರು ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು. ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ವತಿಯಿಂದ ಶ್ರೀ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಇಂದು ಆಯೋಜಿಸಲಾಗಿದ್ದ ವಿಶ್ವ ವಿಕಲಚೇತನರ ದಿನಾಚರಣೆಯ ಕಾರ್ಯಕ್ರಮದಲ್ಲಿ ಭಾಗವಹಿಸಿ, ಅವರು ಮಾತನಾಡಿದರು. ರಾಜ್ಯದಲ್ಲಿ ಸುಮಾರು 15 ಲಕ್ಷ ವಿಕಲಚೇತನರಿದ್ದಾರೆ. ಇವರೆಲ್ಲರ ಆರೈಕೆ ಮಾಡಿ ವಿಶೇಷ ಸೌಲಭ್ಯಗಳನ್ನು …

Read More »

ವಿಕಲಚೇತನರ ಆರೈಕೆದಾರರಿಗೆ ಪ್ರತಿ ತಿಂಗಳು 1000 ರೂ. ಭತ್ಯೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ವಿಕಲಚೇತನರು ಸಮಾಜಕ್ಕೆ ಹೊರೆಯಲ್ಲ, ಅವರು ಸಮಾಜದ ಆಸ್ತಿ. ಎಲ್ಲಾ ಕ್ಷೇತ್ರಗಳಲ್ಲೂ ಸಾಧನೆ ಮಾಡುತ್ತಿರುವ ವಿಕಲಚೇತನರ ಸಬಲೀಕರಣಕ್ಕಾಗಿ ಸರ್ಕಾರ ಬದ್ಧವಾಗಿದ್ದು, ಅವರ ಶ್ರೇಯೋಭಿವೃದ್ಧಿಗಾಗಿ ಪ್ರಸಕ್ತ ಸಾಲಿನ ಪೂರಕ ಅಂದಾಜಿನಲ್ಲಿ 44 ಕೋಟಿಗಳನ್ನು ಮಂಜೂರು ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು. ಬೆಂಗಳೂರಿನಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಅಂಗವಿಕಲರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ನಡೆದ ಅಂತಾರಾಷ್ಟ್ರೀಯ ವಿಕಲಚೇತನರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ …

Read More »