Breaking News

BigTv News

ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ರೈತ ಸಂಘಟನೆಗಳಿಂದ ಡಿ.6 ರಿಂದ ಉಪವಾಸ ಸತ್ಯಾಗ್ರಹ

ವಿಜಯಪುರ: ರೈತರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಂಯುಕ್ತ ಕಿಸಾನ್ ಮೋರ್ಚಾ ಸಂಘಟನೆಯ ರೈತ ಮುಖಂಡ ಜಗಜಿತ್ ಸಿಂಗ್ ದಲೈವಾಲ ನೇತೃತ್ವದಲ್ಲಿ ದೆಹಲಿ ಗಡಿಯಲ್ಲಿ ನಡೆಸುತ್ತಿರುವ ಉಪವಾಸ ಸತ್ಯಾಗ್ರಹ ಬೆಂಬಲಿಸಿ ರಾಜ್ಯ ರೈತ ಸಂಘಟನೆಗಳು ಬೆಂಗಳೂರಿನ ಸ್ವಾತಂತ್ರ ಉದ್ಯಾನವನದಲ್ಲಿ ಡಿ.6 ರಿಂದ ನಿರಂತರ ಉಪವಾಸ ಸತ್ಯಾಗ್ರಹ ನಡೆಸಲು ನಿರ್ಧರಿಸಲಾಗಿದೆ ಎಂದು ಸಂಯುಕ್ತ ಕಿಸಾನ್ ಮೋರ್ಚ ದಕ್ಷಿಣ ಭಾರತ ಸಂಚಾಲಕ, ರೈತ ಸಂಘಟನೆಗಳ ಒಕ್ಕೂಟದ ರಾಜ್ಯ ಘಟಕದ ಅಧ್ಯಕ್ಷ ಕುರುಬೂರು ಶಾಂತಕುಮಾರ್ …

Read More »

ರಾಜ್ಯ ಸರ್ಕಾರದಿಂದ ಮರಳು ನೀತಿ ಜಾರಿ: ಕಡಿಮೆ ದರದಲ್ಲಿ ಗ್ರಾ.ಪಂ ಗಳಿಂದ ಮರಳು ಪೂರೈಕೆ

ಬೆಂಗಳೂರು: ಮನೆ ಕಟ್ಟೋರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ರಾಜ್ಯದಲ್ಲಿ ಕಡಿಮೆ ದರದಲ್ಲಿ ಮರಳು ಪೂರೈಕೆಗೆ ಸಮಗ್ರ ಮರಳು ನೀತಿ ಅನುಷ್ಠಾನಗೊಳಿಸಲಾಗಿದ್ದು, ಜಿಲ್ಲಾ ಮರಳು ಸಮಿತಿ ಮತ್ತು ಗ್ರಾಮ ಪಂಚಾಯಿತಿಗಳಿಂದ ಮರಳು ಬ್ಲಾಕ್ ಗಳ ವಿಲೇವಾರಿ ಮಾಡಲಾಗುವುದು ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ತಿಳಿಸಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಸಚಿವರು, ಸಾರ್ವಜನಿಕರಿಗೆ ಸುಲಭವಾಗಿ ಮತ್ತು ಕೈಗೆಟುಕುವ ದರದಲ್ಲಿ ಮರಳು ಸಿಗಲಿ ಎನ್ನುವ ಉದ್ದೇಶದಿಂದ ರಾಜ್ಯ …

Read More »

ಗ್ರಾ.ಪಂ.ಗಳ ಆಸ್ತಿ ತೆರಿಗೆ ಸಂಗ್ರಹ: ನಿಗದಿತ ಗುರಿ ಸಾಧಿಸಲು ಸಚಿವ ಪ್ರಿಯಾಂಕ್ ಖರ್ಗೆ ತಾಕೀತು

ಬೆಂಗಳೂರು: ಗ್ರಾಮ ಪಂಚಾಯತಿಗಳ ಆಸ್ತಿ ತೆರಿಗೆ ಸಂಗ್ರಹಿಸುವ ಪ್ರಕ್ರಿಯೆಯನ್ನು ಚುರುಕುಗೊಳಿಸುವ ಮೂಲಕ ಈ ತಿಂಗಳಾಂತ್ಯದೊಳಗೆ ನಿಗದಿತ ಗುರಿಯನ್ನು ಸಾಧಿಸಬೇಕು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಅಧಿಕಾರಿಗಳಿಗೆ ತಾಕೀತು ಮಾಡಿದರು. ರಾಜ್ಯದ ಎಲ್ಲ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ವಿಡಿಯೋ ಸಮ್ಮೇಳನ ನಡೆಸಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪ್ರಗತಿ ಪರಾಮರ್ಶಿಸಿದರು. ಪಂಚಾಯಿತಿ ಅಭಿವೃದ್ಧಿ ದೃಷ್ಟಿಯಿಂದ ತೆರಿಗೆಯನ್ನು ಸಮರ್ಪವಾಗಿ ಸಂಗ್ರಹಿಸುವ ಅನಿವಾರ್ಯತೆ ಇದೆ ಎಂದೂ ಹೇಳಿದರು. ಜಿಲ್ಲಾ ಪಂಚಾಯಿತಿ …

Read More »

ಕೇಂದ್ರ ಸರ್ಕಾರದಿಂದ ರಾಜ್ಯಗಳಿಗೆ 50,571 ಕೋಟಿ ರೂ. ಅನುದಾನ ಬಿಡುಗಡೆ: ಕೇಂದ್ರ ಸಚಿವ ಪಂಕಜ್ ಚೌಧರಿ

ನವದೆಹಲಿ: ಕೇಂದ್ರ ಸರ್ಕಾರ ರೂ. 50, 571 ಕೋಟಿ ಅನುದಾನವನ್ನು ರಾಜ್ಯಗಳಿಗೆ ಬಿಡುಗಡೆ ಮಾಡಿದೆ. ಪ್ರಸಕ್ತ ಹಣಕಾಸು ವರ್ಷದ ಮೊದಲ ಎಂಟು ತಿಂಗಳ ಅವಧಿಯಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ವೆಚ್ಚವನ್ನು ಹೆಚ್ಚಿಸಲು ಬಂಡವಾಳ ಹೂಡಿಕೆ ಯೋಜನೆ ಭಾಗವಾಗಿ ವಿಶೇಷ ನೆರವನ್ನು ಬಿಡುಗಡೆ ಮಾಡಲಾಗಿದೆ ಎಂದು ಹಣಕಾಸು ಖಾತೆ ರಾಜ್ಯ ಸಚಿವ ಪಂಕಜ್ ಚೌಧರಿ ಲೋಕಸಭೆಯಲ್ಲಿ ತಿಳಿಸಿದ್ದಾರೆ. ಅರುಣಾಚಲ ಪ್ರದೇಶ, ಹರಿಯಾಣ, ಕೇರಳ, ಪಂಜಾಬ್ ಮತ್ತು ತೆಲಂಗಾಣ ಹೊರತುಪಡಿಸಿ 28 ರಾಜ್ಯಗಳ …

Read More »

ಅಂಗವಿಕಲರ ಅಭಿವೃದ್ಧಿಗೆ ಕೆಕೆಆರ್‌ಡಿಬಿಯಿಂದ ಅನುದಾನ ಮೀಸಲು: ಸಚಿವ ಈಶ್ವರ್ ಖಂಡ್ರೆ

ಬೀದರ್‌: ಅಂಗವಿಕಲರ ಅಭಿವೃದ್ಧಿಗೆ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯಿಂದ (ಕೆಕೆಆರ್‌ಡಿಬಿ) ಶೇ 5ರಷ್ಟು ಅನುದಾನ ಮೀಸಲಿಡುವ ಪ್ರಸ್ತಾವ ಸಿದ್ಧಪಡಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ಆಶ್ವಾಸನೆ ನೀಡಿದರು. ಜಿಲ್ಲಾಡಳಿತ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸಹಯೋಗದಲ್ಲಿ ನಗರದ ಚನ್ನಬಸವ ಪಟ್ಟದ್ದೇವರು ರಂಗಮಂದಿರದಲ್ಲಿ ಮಂಗಳವಾರ ಏರ್ಪಡಿಸಿದ್ದ ವಿಶ್ವ ಅಂಗವಿಕಲರ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು. ಜಿಲ್ಲೆಯ ಎಲ್ಲ ಅಂಗವಿಕಲರಿಗೆ ವಸತಿ, ನಿವೇಶನಕ್ಕೆ ಕ್ರಮ ಕೈಗೊಳ್ಳುವಂತೆ ಜಿಲ್ಲಾಡಳಿತಕ್ಕೆ …

Read More »

ರಸ್ತೆ ಮೂಲಸೌಕರ್ಯ ಯೋಜನೆಗಳ ಪ್ರಗತಿ ಪರಿಶೀಲಿಸಿದ ಕೇಂದ್ರ ಸಚಿವ ನಿತಿನ್ ಗಡ್ಕರಿ

ಪ್ರಯಾಗರಾಜ್: ಕೇಂದ್ರ ಸಚಿವ ನಿತಿನ್ ಗಡ್ಕರಿ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ರಾಜ್ಯದಲ್ಲಿನ ನಿರ್ಣಾಯಕ ರಸ್ತೆ ಮೂಲಸೌಕರ್ಯ ಯೋಜನೆಗಳ ಪ್ರಗತಿಯನ್ನು ಪರಿಶೀಲಿಸಿದರು. ವಿಶೇಷವಾಗಿ ಮುಂದಿನ ತಿಂಗಳು ಪ್ರಯಾಗ್‌ರಾಜ್‌ನಲ್ಲಿ ಆರಂಭವಾಗಲಿರುವ ಮಹಾಕುಂಭದ ಆಯೋಜನೆ ಸುಗಮಗೊಳಿಸುವ ಗುರಿ ಹೊಂದಿರುವ ಯೋಜನೆಗಳನ್ನು ಪರಿಶೀಲಿಸಲಾಯಿತು. 63.17-ಕಿಲೋಮೀಟರ್ ರಾಯ್‌ಬರೇಲಿ-ಪ್ರಯಾಗ್‌ರಾಜ್ ರಾಷ್ಟ್ರೀಯ ಹೆದ್ದಾರಿಯ ಅಗಲೀಕರಣ, ನಾಲ್ಕು ಸ್ಥಳಗಳಲ್ಲಿ ಚತುಷ್ಪಥ ಬೈಪಾಸ್‌ಗಳ ನಿರ್ಮಾಣ, ಪ್ರಯಾಗರಾಜ್ ಒಳವರ್ತುಲ ರಸ್ತೆಯ 7.6- ಕಿಲೋಮೀಟರ್ ಭಾಗ ಮತ್ತು ಫಾಫಮೌನಲ್ಲಿ ಗಂಗಾ ನದಿಯ …

Read More »

ಫೆಬ್ರವರಿ ವೇಳೆಗೆ ತಾ.ಪಂ, ಜಿ.ಪಂ ಚುನಾವಣೆ ನಡೆಸಲು ಸಿದ್ಧತೆ: ಡಿಸಿಎಂ ಡಿಕೆಶಿ

ಬೆಂಗಳೂರು: ಮುಂದಿನ ಫೆಬ್ರವರಿ ವೇಳೆಗೆ ತಾಲ್ಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಹಾಗೂ ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಲು ತಯಾರಿಗಳಾಗುತ್ತಿವೆ ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು. ಕೆಪಿಸಿಸಿ ಕಚೇರಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇತ್ತೀಚೆಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆಸಲಾಗಿದೆ. ಮತದಾರರ ಪಟ್ಟಿ ಕೂಡ ಸಿದ್ಧಗೊಳ್ಳುತ್ತಿದೆ. ಚುನಾವಣೆಯನ್ನಂತು ನಿಲ್ಲಿಸಲು ಸಾಧ್ಯವಿಲ್ಲ ಫೆಬ್ರವರಿಯಲ್ಲಿ ಮತದಾನದ ಸಾಧ್ಯತೆ ಇದೆ ಎಂದರು. ಸಚಿವ ಸಂಪುಟ …

Read More »

ಕರ್ನಾಟಕದಲ್ಲಿ ಹೂಡಿಕೆ ಮಾಡುವ ಕಂಪನಿಗಳಿಗೆ ಸರ್ಕಾರದಿಂದ ನೆರವು: ಸಚಿವ ಸಂತೋಷ್ ಲಾಡ್

ಬೆಂಗಳೂರು : ಕರ್ನಾಟಕದಲ್ಲಿ ಹೂಡಿಕೆಗೆ ವಿಫುಲವಾದ ಅವಕಾಶಗಳಿದ್ದು, ಹೂಡಿಕೆ ಮಾಡಲು ಮುಂದೆ ಬರುವ ಕಂಪನಿಗಳಿಗೆ ಎಲ್ಲಾ ನೆರವನ್ನು ನಮ್ಮ ಕರ್ನಾಟಕ ಸರ್ಕಾರದಿಂದ ನೀಡಲಾಗುವುದು ಎಂದು ಮಾನ್ಯ ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಲಾಡ್‌ ಅವರು ಹೇಳಿದರು. ಬ್ರಿಟನ್‌ನ ಹೌಸ್‌ ಆಫ್‌ ಲಾರ್ಡ್ಸ್‌ನಲ್ಲಿ ನಡೆದ ಇಂಡೋ -ಯುರೋಪಿಯನ್‌ ಹೂಡಿಕೆ ಸಮ್ಮೇಳನದಲ್ಲಿ ಮುಖ್ಯ ಭಾಷಣಕಾರರಾಗಿ ಸಂತೋಷ್ ಲಾಡ್ ಅವರು ಮಾತನಾಡಿದರು. ಕರ್ನಾಟಕದಲ್ಲಿ ಹಾಗೂ ಬೆಂಗಳೂರಿನಲ್ಲಿ ಹೂಡಿಕೆ ಮಾಡಲು ಮತ್ತು …

Read More »

ವಿಕಲಚೇತನರ ಅನುದಾನದಲ್ಲಿ ಕಡಿತ ಮಾಡಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ ಸ್ಪಷ್ಟನೆ

ಕಲಬುರಗಿ: ರಾಜ್ಯ ಸರ್ಕಾರ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಇಲಾಖೆಗೆ ನೀಡುತ್ತಿದ್ದ ಅನುದಾನದಲ್ಲಿ ಶೇ.80ರಷ್ಟು ಕಡಿತಗೊಳಿಸಿ, ಗ್ಯಾರಂಟಿ ಯೋಜನೆಗೆ ಬಳಕೆ ಮಾಡಿಕೊಳ್ಳಲು ಮುಂದಾಗಿದೆ ಎಂಬ ವಿರೋಧ ಪಕ್ಷಗಳ ಆರೋಪವನ್ನು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಆರ್‌ಡಿಪಿಆರ್‌ ಸಚಿವ ಪ್ರಿಯಾಂಕ್‌ ಖರ್ಗೆ ಅವರು ನಿರಾಕರಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗ್ಯಾರಂಟಿ ಯೋಜನೆ ಪರಿಷ್ಕರಣೆ ಪ್ರಶ್ನೆಯೇ ಇಲ್ಲ. ಇತ್ತೀಚೆಗೆ ಸಿಎಂ ಅವರು ಡಿಸಿಗಳು ಮತ್ತು ಸಿಇಒಗಳ ಜೊತೆ ಮೀಟಿಂಗ್ ಮಾಡುವ ಸಂದರ್ಭದಲ್ಲಿ …

Read More »

ಮತ ಸೆಳೆಯುವವರನ್ನು ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದರೆ ಮಾತ್ರ 2028ರಲ್ಲಿ ಅಧಿಕಾರಕ್ಕೆ ಬರಲು ಸಾಧ್ಯ: ಸಚಿವ ಸತೀಶ ಜಾರಕಿಹೊಳಿ

ಬೆಳಗಾವಿ: ಮತ ಸೆಳೆಯುವವರನ್ನು ನೂತನ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದರೆ ಮಾತ್ರ 2028ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಮತ್ತೆ ಅಧಿಕಾರಕ್ಕೆ ಬರಲು ಸಾಧ್ಯವಾಗುತ್ತದೆ ಎಂದು ಸಚಿವ ಸತೀಶ್ ಜಾರಕಿಹೊಳಿ ಅವರು ಶನಿವಾರ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ತಳಮಟ್ಟದಿಂದ ಕಾಂಗ್ರೆಸ್‌ಗೆ ಶಕ್ತಿ ತುಂಬಲು ಪೂರ್ಣಾವಧಿ ಕೆಪಿಸಿಸಿ ಅಧ್ಯಕ್ಷರ ಅಗತ್ಯವಿದೆ ಎಂದು ಹೇಳಿದರು. ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಚರ್ಚೆ ನಡೆಯುತ್ತಿದೆ. ಈ ಬಗ್ಗೆ ಹೈಕಮಾಂಡ್ ನಿರ್ಧರಿಸುತ್ತದೆ. ದೆಹಲಿಗೆ ಹೋಗಿ …

Read More »