ನವದೆಹಲಿ: ಕೇಂದ್ರ ಸರ್ಕಾರ ರೂ. 50, 571 ಕೋಟಿ ಅನುದಾನವನ್ನು ರಾಜ್ಯಗಳಿಗೆ ಬಿಡುಗಡೆ ಮಾಡಿದೆ. ಪ್ರಸಕ್ತ ಹಣಕಾಸು ವರ್ಷದ ಮೊದಲ ಎಂಟು ತಿಂಗಳ ಅವಧಿಯಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ವೆಚ್ಚವನ್ನು ಹೆಚ್ಚಿಸಲು ಬಂಡವಾಳ ಹೂಡಿಕೆ ಯೋಜನೆ ಭಾಗವಾಗಿ ವಿಶೇಷ ನೆರವನ್ನು ಬಿಡುಗಡೆ ಮಾಡಲಾಗಿದೆ ಎಂದು ಹಣಕಾಸು ಖಾತೆ ರಾಜ್ಯ ಸಚಿವ ಪಂಕಜ್ ಚೌಧರಿ ಲೋಕಸಭೆಯಲ್ಲಿ ತಿಳಿಸಿದ್ದಾರೆ. ಅರುಣಾಚಲ ಪ್ರದೇಶ, ಹರಿಯಾಣ, ಕೇರಳ, ಪಂಜಾಬ್ ಮತ್ತು ತೆಲಂಗಾಣ ಹೊರತುಪಡಿಸಿ 28 ರಾಜ್ಯಗಳ …
Read More »ಅಂಗವಿಕಲರ ಅಭಿವೃದ್ಧಿಗೆ ಕೆಕೆಆರ್ಡಿಬಿಯಿಂದ ಅನುದಾನ ಮೀಸಲು: ಸಚಿವ ಈಶ್ವರ್ ಖಂಡ್ರೆ
ಬೀದರ್: ಅಂಗವಿಕಲರ ಅಭಿವೃದ್ಧಿಗೆ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯಿಂದ (ಕೆಕೆಆರ್ಡಿಬಿ) ಶೇ 5ರಷ್ಟು ಅನುದಾನ ಮೀಸಲಿಡುವ ಪ್ರಸ್ತಾವ ಸಿದ್ಧಪಡಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ಆಶ್ವಾಸನೆ ನೀಡಿದರು. ಜಿಲ್ಲಾಡಳಿತ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸಹಯೋಗದಲ್ಲಿ ನಗರದ ಚನ್ನಬಸವ ಪಟ್ಟದ್ದೇವರು ರಂಗಮಂದಿರದಲ್ಲಿ ಮಂಗಳವಾರ ಏರ್ಪಡಿಸಿದ್ದ ವಿಶ್ವ ಅಂಗವಿಕಲರ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು. ಜಿಲ್ಲೆಯ ಎಲ್ಲ ಅಂಗವಿಕಲರಿಗೆ ವಸತಿ, ನಿವೇಶನಕ್ಕೆ ಕ್ರಮ ಕೈಗೊಳ್ಳುವಂತೆ ಜಿಲ್ಲಾಡಳಿತಕ್ಕೆ …
Read More »ರಸ್ತೆ ಮೂಲಸೌಕರ್ಯ ಯೋಜನೆಗಳ ಪ್ರಗತಿ ಪರಿಶೀಲಿಸಿದ ಕೇಂದ್ರ ಸಚಿವ ನಿತಿನ್ ಗಡ್ಕರಿ
ಪ್ರಯಾಗರಾಜ್: ಕೇಂದ್ರ ಸಚಿವ ನಿತಿನ್ ಗಡ್ಕರಿ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ರಾಜ್ಯದಲ್ಲಿನ ನಿರ್ಣಾಯಕ ರಸ್ತೆ ಮೂಲಸೌಕರ್ಯ ಯೋಜನೆಗಳ ಪ್ರಗತಿಯನ್ನು ಪರಿಶೀಲಿಸಿದರು. ವಿಶೇಷವಾಗಿ ಮುಂದಿನ ತಿಂಗಳು ಪ್ರಯಾಗ್ರಾಜ್ನಲ್ಲಿ ಆರಂಭವಾಗಲಿರುವ ಮಹಾಕುಂಭದ ಆಯೋಜನೆ ಸುಗಮಗೊಳಿಸುವ ಗುರಿ ಹೊಂದಿರುವ ಯೋಜನೆಗಳನ್ನು ಪರಿಶೀಲಿಸಲಾಯಿತು. 63.17-ಕಿಲೋಮೀಟರ್ ರಾಯ್ಬರೇಲಿ-ಪ್ರಯಾಗ್ರಾಜ್ ರಾಷ್ಟ್ರೀಯ ಹೆದ್ದಾರಿಯ ಅಗಲೀಕರಣ, ನಾಲ್ಕು ಸ್ಥಳಗಳಲ್ಲಿ ಚತುಷ್ಪಥ ಬೈಪಾಸ್ಗಳ ನಿರ್ಮಾಣ, ಪ್ರಯಾಗರಾಜ್ ಒಳವರ್ತುಲ ರಸ್ತೆಯ 7.6- ಕಿಲೋಮೀಟರ್ ಭಾಗ ಮತ್ತು ಫಾಫಮೌನಲ್ಲಿ ಗಂಗಾ ನದಿಯ …
Read More »ಫೆಬ್ರವರಿ ವೇಳೆಗೆ ತಾ.ಪಂ, ಜಿ.ಪಂ ಚುನಾವಣೆ ನಡೆಸಲು ಸಿದ್ಧತೆ: ಡಿಸಿಎಂ ಡಿಕೆಶಿ
ಬೆಂಗಳೂರು: ಮುಂದಿನ ಫೆಬ್ರವರಿ ವೇಳೆಗೆ ತಾಲ್ಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಹಾಗೂ ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಲು ತಯಾರಿಗಳಾಗುತ್ತಿವೆ ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು. ಕೆಪಿಸಿಸಿ ಕಚೇರಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇತ್ತೀಚೆಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆಸಲಾಗಿದೆ. ಮತದಾರರ ಪಟ್ಟಿ ಕೂಡ ಸಿದ್ಧಗೊಳ್ಳುತ್ತಿದೆ. ಚುನಾವಣೆಯನ್ನಂತು ನಿಲ್ಲಿಸಲು ಸಾಧ್ಯವಿಲ್ಲ ಫೆಬ್ರವರಿಯಲ್ಲಿ ಮತದಾನದ ಸಾಧ್ಯತೆ ಇದೆ ಎಂದರು. ಸಚಿವ ಸಂಪುಟ …
Read More »ಕರ್ನಾಟಕದಲ್ಲಿ ಹೂಡಿಕೆ ಮಾಡುವ ಕಂಪನಿಗಳಿಗೆ ಸರ್ಕಾರದಿಂದ ನೆರವು: ಸಚಿವ ಸಂತೋಷ್ ಲಾಡ್
ಬೆಂಗಳೂರು : ಕರ್ನಾಟಕದಲ್ಲಿ ಹೂಡಿಕೆಗೆ ವಿಫುಲವಾದ ಅವಕಾಶಗಳಿದ್ದು, ಹೂಡಿಕೆ ಮಾಡಲು ಮುಂದೆ ಬರುವ ಕಂಪನಿಗಳಿಗೆ ಎಲ್ಲಾ ನೆರವನ್ನು ನಮ್ಮ ಕರ್ನಾಟಕ ಸರ್ಕಾರದಿಂದ ನೀಡಲಾಗುವುದು ಎಂದು ಮಾನ್ಯ ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಅವರು ಹೇಳಿದರು. ಬ್ರಿಟನ್ನ ಹೌಸ್ ಆಫ್ ಲಾರ್ಡ್ಸ್ನಲ್ಲಿ ನಡೆದ ಇಂಡೋ -ಯುರೋಪಿಯನ್ ಹೂಡಿಕೆ ಸಮ್ಮೇಳನದಲ್ಲಿ ಮುಖ್ಯ ಭಾಷಣಕಾರರಾಗಿ ಸಂತೋಷ್ ಲಾಡ್ ಅವರು ಮಾತನಾಡಿದರು. ಕರ್ನಾಟಕದಲ್ಲಿ ಹಾಗೂ ಬೆಂಗಳೂರಿನಲ್ಲಿ ಹೂಡಿಕೆ ಮಾಡಲು ಮತ್ತು …
Read More »ವಿಕಲಚೇತನರ ಅನುದಾನದಲ್ಲಿ ಕಡಿತ ಮಾಡಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ ಸ್ಪಷ್ಟನೆ
ಕಲಬುರಗಿ: ರಾಜ್ಯ ಸರ್ಕಾರ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಇಲಾಖೆಗೆ ನೀಡುತ್ತಿದ್ದ ಅನುದಾನದಲ್ಲಿ ಶೇ.80ರಷ್ಟು ಕಡಿತಗೊಳಿಸಿ, ಗ್ಯಾರಂಟಿ ಯೋಜನೆಗೆ ಬಳಕೆ ಮಾಡಿಕೊಳ್ಳಲು ಮುಂದಾಗಿದೆ ಎಂಬ ವಿರೋಧ ಪಕ್ಷಗಳ ಆರೋಪವನ್ನು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಆರ್ಡಿಪಿಆರ್ ಸಚಿವ ಪ್ರಿಯಾಂಕ್ ಖರ್ಗೆ ಅವರು ನಿರಾಕರಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗ್ಯಾರಂಟಿ ಯೋಜನೆ ಪರಿಷ್ಕರಣೆ ಪ್ರಶ್ನೆಯೇ ಇಲ್ಲ. ಇತ್ತೀಚೆಗೆ ಸಿಎಂ ಅವರು ಡಿಸಿಗಳು ಮತ್ತು ಸಿಇಒಗಳ ಜೊತೆ ಮೀಟಿಂಗ್ ಮಾಡುವ ಸಂದರ್ಭದಲ್ಲಿ …
Read More »ಮತ ಸೆಳೆಯುವವರನ್ನು ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದರೆ ಮಾತ್ರ 2028ರಲ್ಲಿ ಅಧಿಕಾರಕ್ಕೆ ಬರಲು ಸಾಧ್ಯ: ಸಚಿವ ಸತೀಶ ಜಾರಕಿಹೊಳಿ
ಬೆಳಗಾವಿ: ಮತ ಸೆಳೆಯುವವರನ್ನು ನೂತನ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದರೆ ಮಾತ್ರ 2028ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಮತ್ತೆ ಅಧಿಕಾರಕ್ಕೆ ಬರಲು ಸಾಧ್ಯವಾಗುತ್ತದೆ ಎಂದು ಸಚಿವ ಸತೀಶ್ ಜಾರಕಿಹೊಳಿ ಅವರು ಶನಿವಾರ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ತಳಮಟ್ಟದಿಂದ ಕಾಂಗ್ರೆಸ್ಗೆ ಶಕ್ತಿ ತುಂಬಲು ಪೂರ್ಣಾವಧಿ ಕೆಪಿಸಿಸಿ ಅಧ್ಯಕ್ಷರ ಅಗತ್ಯವಿದೆ ಎಂದು ಹೇಳಿದರು. ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಚರ್ಚೆ ನಡೆಯುತ್ತಿದೆ. ಈ ಬಗ್ಗೆ ಹೈಕಮಾಂಡ್ ನಿರ್ಧರಿಸುತ್ತದೆ. ದೆಹಲಿಗೆ ಹೋಗಿ …
Read More »ವಕ್ಫ್ ಮಂಡಳಿಯನ್ನು ವಜಾಗೊಳಿಸಿ ಆಂಧ್ರಪ್ರದೇಶ ಸರ್ಕಾರ ಮಹತ್ವದ ಆದೇಶ
ಹೈದರಾಬಾದ್ : ದೇಶಾದ್ಯಂತ ವಕ್ಫ್ ಮಂಡಳಿಯ ವಿರುದ್ಧ ಜನರ ಪ್ರತಿಭಟನೆಯ ನಡುವೆಯೇ ಆಂಧ್ರಪ್ರದೇಶ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ವಕ್ಫ್ ಮಂಡಳಿಯನ್ನು ವಿಸರ್ಜಿಸಿ ಆದೇಶ ಹೊರಡಿಸಿದೆ. ಇದರನ್ವಯ ಸರ್ಕಾರ ಶನಿವಾರ ವಕ್ಫ್ ಬೋರ್ಡ್ ರಚನೆಯ ಹಿಂದಿನ ಆದೇಶವನ್ನು ಹಿಂಪಡೆದು ಜಿಒ 75 ಅನ್ನು ಹೊರಡಿಸಿದೆ. ರಾಜ್ಯ ಕಾನೂನು ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಎನ್.ಎನ್.ಡಿ.ಫಾರೂಕ್ ಮಾತನಾಡಿ, ಹಿಂದಿನ ಸರ್ಕಾರದ ಆಡಳಿತಾವಧಿಯಲ್ಲಿ ಹೊರಡಿಸಿದ್ದ ಅಲ್ಪಸಂಖ್ಯಾತರ ಕಲ್ಯಾಣ ವಕ್ಫ್ ಮಂಡಳಿಯ ಜಿವಿಒ-47 ಅನ್ನು …
Read More »ಗ್ಯಾರಂಟಿ ಯೋಜನೆಗಾಗಿ ಸರ್ಕಾರದಿಂದ ವಿಕಲಚೇತನರಿಗೆ ನೀಡಿದ್ದ ಅನುದಾನ ಕಡಿತ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆಕ್ರೋಶ
ಬೆಂಗಳೂರು: ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸುವ ಭರದಲ್ಲಿ ರಾಜ್ಯ ಸರ್ಕಾರ ವಿಕಲಚೇತನರಿಗೆ ಅನುದಾನ ಕಡಿತ ಮಾಡಿದ ಆರೋಪಕ್ಕೆ ಒಳಗಾಗಿದೆ. ಈ ವಿಚಾರವಾಗಿ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ ಎಕ್ಸ್ನಲ್ಲಿ ಆಕ್ರೋಶ ಹೊರಹಾಕಿದ್ದಾರೆ. ಕಳೆದ ವರ್ಷ ಸರ್ಕಾರ ವಿಕಲಚೇನರ ವಿವಿಧ ಯೋಜನೆಗಳಿಗೆ 53 ಕೋಟಿ ರೂ. ಅನುದಾನ ಮೀಸಲು ಇಡಲಾಗಿತ್ತು. ಆದರೆ ಪ್ರಸಕ್ತ ಹಣಕಾಸು ವರ್ಷದಲ್ಲಿ ಬರೀ 10 ಕೋಟಿ ರೂ. ಅನುದಾನ ಮಾತ್ರ ಹಂಚಿಕೆ ಮಾಡಲಾಗಿದೆ. ಇದು ನಿಜಕ್ಕೂ ದುರದೃಷ್ಟಕರ. …
Read More »ಜನರ ಸಮಸ್ಯೆಗಳಿಗೆ ಅಧಿಕಾರಿಗಳು ಸೂಕ್ತ ರೀತಿಯಲ್ಲಿ ಸ್ಪಂದಿಸಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ಉಡುಪಿ: ಜಿಲ್ಲೆಯ ಜ್ವಲಂತ ಸಮಸ್ಯೆಗಳಿಗೆ ಬೆಳಕು ಚೆಲ್ಲುವ ಸಲುವಾಗಿ ಮುಂಬರುವ ಅಧಿವೇಶನದ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಳಿ ಜಿಲ್ಲೆಯ ಶಾಸಕರೊಳಗೊಂಡ ನಿಯೋಗ ತೆರಳಿ ಮನವಿ ಸಲ್ಲಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ಉಡುಪಿ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಮಾತನಾಡಿದ ಸಚಿವರು, ಜಿಲ್ಲೆಯ ಸಮಸ್ಯೆಗಳಿಗೆ ಅಧಿಕಾರಿಗಳು ಸೂಕ್ತ ರೀತಿಯಲ್ಲಿ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





