Breaking News

BigTv News

ಹೆಸ್ಕಾಂ ನೂತನ ಅಧ್ಯಕ್ಷರಾಗಿ ಅಜ್ಜಂಪೀರ ಖಾದ್ರಿ ಅಧಿಕಾರ ಸ್ವೀಕಾರ

ಹುಬ್ಬಳ್ಳಿ: ಹೆಸ್ಕಾಂ ಇಲಾಖೆಯನ್ನು ಮಾದರಿ ಇಲಾಖೆಯನ್ನಾಗಿ ಮಾಡಲು ಪಣ ತೊಟ್ಟು ಕೆಲಸ ಮಾಡುತ್ತೇನೆ ಎಂದು ಹೆಸ್ಕಾಂ ನೂತನ ಅಧ್ಯಕ್ಷ ಸೈಯದ್ ಅಜ್ಜಂಪೀರ ಖಾದ್ರಿ ಹೇಳಿದರು. ಹುಬ್ಬಳ್ಳಿ ಹೆಸ್ಕಾಂ ಕಚೇರಿಯಲ್ಲಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮಾತನಾಡಿದ ಅವರು ರೈತ ದೇಶದ ಬೆನ್ನೆಲುಬು. ರೈತರಿಗೆ ಸಮಯಕ್ಕೆ ಸರಿಯಾಗಿ ವಿದ್ಯುತ್ ಸಂಪರ್ಕ ಕಲ್ಪಿಸಲಾಗುವುದು. ಭಾರತ ದೇಶದಲ್ಲಿ ಗೃಹ ಜ್ಯೋತಿ ಯೋಜನೆ ಮಾದರಿಯಾಗಿದೆ. ಇಲಾಖೆ ಅಧಿಕಾರಿಗಳ ಸಹಕಾರ ತೆಗೆದುಕೊಂಡು ಕಾರ್ಯನಿರ್ವಹಿಸುತ್ತೇನೆ. ಹೆಸ್ಕಾಂ ವ್ಯಾಪ್ತಿಯ ಪ್ರದೇಶಗಳಿಗೆ …

Read More »

ಪೊಲೀಸ್ ಹುದ್ದೆ ಆಕಾಂಕ್ಷಿಗಳಿಗೆ ಸಿಹಿಸುದ್ದಿ: 2400 ಕೆ ಎಸ್ ಆರ್ ಪಿ ಪೊಲೀಸ್ ನೇಮಕಾತಿಗೆ ಸರ್ಕಾರ ಆದೇಶ

ಬೆಂಗಳೂರು: ಪೊಲೀಸ್ ಹುದ್ದೆ ಆಕಾಂಕ್ಷಿಗಳಿಗೆ ಶುಭ ಸುದ್ದಿ ಇಲ್ಲಿದೆ. 2400 ಕೆ.ಎಸ್.ಆರ್.ಪಿ. ಪೋಲೀಸರ ನೇಮಕಾತಿಗೆ ಸರ್ಕಾರ ಆದೇಶಿಸಿದೆ. ಸಶಸ್ತ್ರ ಮೀಸಲು ಪಡೆಯ ಎರಡು ಹೊಸ ಬೆಟಾಲಿಯನ್ ಆರಂಭಿಸಲು ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ದೇವನಹಳ್ಳಿ ಮತ್ತು ಕೆಜಿಎಫ್ ಬಳಿ 2,400 ಪೊಲೀಸರ ಬಲವುಳ್ಳ ಎರಡು ಬೆಟಾಲಿಯನ್ ಆರಂಭಕ್ಕೆ ಅಧಿಕೃತವಾಗಿ ಶುಕ್ರವಾರ ಸರ್ಕಾರ ಆದೇಶಿಸಿದೆ. ಪ್ರಸ್ತುತ 12 ಕೆ.ಎಸ್.ಆರ್.ಪಿ., ಎರಡು ಐ.ಆರ್.ಬಿ. ಬೆಟಾಲಿಯನ್ ಗಳು ಇದ್ದು, ಮತ್ತಷ್ಟು ಬೆಟಾಲಿಯನ್ ಆರಂಭಿಸುವಂತೆ ಕೋರಿ …

Read More »

ಇಂದಿನಿಂದ ರಾಜ್ಯದಲ್ಲಿ ಅಭಿಯಾನ ಮಾದರಿಯಲ್ಲಿ ಪೋಡಿ ದುರಸ್ಥಿ: ಸಚಿವ ಕೃಷ್ಣ ಬೈರೇಗೌಡ

ಬೆಂಗಳೂರು : ರಾಜ್ಯದಲ್ಲಿ ಒಟ್ಟು 1.96 ಲಕ್ಷ ಸರಕಾರಿ ಸರ್ವೇ ನಂಬರ್ಗಳಿದ್ದು, ಅಭಿಯಾನದ ರೀತಿಯಲ್ಲಿ ಪೋಡಿ ದುರಸ್ಥಿ ಮಾಡಲಾಗುವುದು. ಇದಕ್ಕಾಗಿ ಶನಿವಾರ(ನ.30)ದಂದು ಹಾಸನದಲ್ಲಿ ಚಾಲನೆ ನೀಡಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ಧಾರೆ. ವಿಕಾಸಸೌಧದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ನಾನಾ ಸರಕಾರಿ ಯೋಜನೆಗಳ ಅಡಿ ಕಳೆದ 30-40 ವರ್ಷಗಳಿಂದ ಲಕ್ಷಾಂತರ ಜನರಿಗೆ ಸರಕಾರಿ ಜಮೀನು ಮಂಜೂರಾಗಿದೆ. ಆದರೆ, ಈವರೆಗೆ ಪೋಡಿ ದುರಸ್ಥಿ ಆಗಿಲ್ಲ. ದಾಖಲೆ ಪಕ್ಕ ಆಗಿಲ್ಲ. ಇಂತಹ …

Read More »

ರಾಜ್ಯದ ರೈತರ ಖಾತೆಗೆ ಬೆಳೆಹಾನಿ ಪರಿಹಾರ ಜಮಾ: ಸಚಿವ ಕೃಷ್ಣ ಬೈರೇಗೌಡ

ಬೆಂಗಳೂರು: ರಾಜ್ಯದಲ್ಲಿ ಹಿಂಗಾರು ಮಳೆ ಅವಧಿಯಲ್ಲಿ 1.58 ಲಕ್ಷ ಹೆಕ್ಟರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದ್ದು, ಜಂಟಿ ಸಮೀಕ್ಷೆ ನಡೆಸಲಾಗಿದೆ. ಒಂದು ವಾರದಲ್ಲಿ ರೈತರ ಖಾತೆಗೆ ಪರಿಹಾರ ಮೊತ್ತ ಜಮಾ ಮಾಡಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ಹಿಂಗಾರು ಮಳೆಯಿಂದ ಅಂದಾಜು 120 ಕೋಟಿ ರೂ.ನಷ್ಟು ನಷ್ಟ ಉಂಟಾಗಿದೆ. ರೈತರಿಗೆ ಪರಿಹಾರ ನೀಡುವಂತೆ ಎಲ್ಲ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸಚಿವರು ಹೇಳಿದ್ದಾರೆ. ಆದಾಯ ಸಂಗ್ರಹದಲ್ಲಿ ಕಂದಾಯ ಇಲಾಖೆ …

Read More »

ಸವದತ್ತಿ ಶ್ರೀ ಯಲ್ಲಮ್ಮ ದೇಗುಲಕ್ಕೆ ಕೇಂದ್ರದಿಂದ ಶತಕೋಟಿ ಅನುದಾನ ಬಿಡುಗಡೆ: ಸಂಸದ ಜಗದೀಶ ಶೆಟ್ಟರ್‌

ಬೆಳಗಾವಿ: ಪ್ರತಿ ಅಮವಾಸ್ಯೆ ಹಾಗೂ ಹುಣ್ಣಿಗೆ ಅಪಾರ ಸಂಖ್ಯೆಯಲ್ಲಿ ಭಕ್ತರು ಆಗಮಿಸುವ ಬೆಳಗಾವಿ ಜಿಲ್ಲೆಯ ಸುಪ್ರಸಿದ್ಧ ಸವದತ್ತಿ ಕ್ಷೇತ್ರ ರೇಣುಕಾ ಯಲ್ಲಮ್ಮ ದೇವಿ ದೇವಸ್ಥಾನದ ಅಭಿವೃದ್ಧಿಗೆ ಕಾಲ ಸನ್ನಿಹಿತವಾಗಿದೆ. ಕಾರಣ ಕೇಂದ್ರ ಸರ್ಕಾರವು ಶತಕೋಟಿ ಅನುದಾನ ಬಿಡುಗಡೆ ಮಾಡಿದೆ. ಈ ಕುರಿತು ಬೆಳಗಾವಿ ಬಿಜೆಪಿ ಸಂಸದರಾದ ಜಗದೀಶ್ ಶೆಟ್ಟರ್ ಅವರು ಮಾಹಿತಿ ನೀಡಿದ್ದಾರೆ. ಬೆಳಗಾವಿ ಜಿಲ್ಲೆಯ ಸುಪ್ರಸಿದ್ಧ ಕ್ಷೇತ್ರ ರೇಣುಕಾ ಯಲ್ಲಮ್ಮ ದೇವಿ ದೇವಸ್ಥಾನದ ಸರ್ವಾಂಗೀಣ ಅಭಿವೃದ್ಧಿಗೆ ಕೇಂದ್ರ ಪ್ರವಾಸೋದ್ಯಮ …

Read More »

ಕಳಸಾ ಬಂಡೂರಿ ಯೋಜನೆಗೆ ಅನುಮತಿ ನೀಡಿ: ಕೇಂದ್ರ ಸಚಿವರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಮನವಿ

ನವದೆಹಲಿ : ಕಳಸಾ ಬಂಡೂರಿ ನಾಲೆ ಯೋಜನೆ ವಿಚಾರದಲ್ಲಿ ಕೇಂದ್ರ ಸಚಿವರು ಮಧ್ಯಪ್ರವೇಶ ಮಾಡಿ ಅಗತ್ಯವಿರುವ ಅರಣ್ಯ ಹಾಗೂ ವನ್ಯಜೀವಿ ಮಂಡಳಿ ಅನುಮತಿ ಕೊಡಿಸಬೇಕು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಕೇಂದ್ರ ಅರಣ್ಯ ಸಚಿವ ಭೂಪೇಂದರ್ ಯಾದವ್ ಅವರಿಗೆ ಮನವಿ ಮಾಡಿದ್ದಾರೆ. ನವದೆಹಲಿಯಲ್ಲಿ ಕೇಂದ್ರ ಸಚಿವರನ್ನು ಬುಧವಾರ ಭೇಟಿ ಮಾಡಿದ ಜಲ ಸಂಪನ್ಮೂಲ ಸಚಿವರೂ ಆಗಿರುವ ಶಿವಕುಮಾರ್ ಅವರು ಈ ಬಗ್ಗೆ ಮನವಿ ಪತ್ರ ಸಲ್ಲಿಸಿದರು. ಪತ್ರದ ಸಾರಾಂಶ ಹೀಗಿದೆ; …

Read More »

ಬೆಸ್ಕಾಂ ವತಿಯಿಂದ ಸಿಎಂ ಪರಿಹಾರ ನಿಧಿಗೆ 5 ಕೋಟಿ ಕೊಡುಗೆ: ಸಿದ್ಧರಾಮಯ್ಯರ ಕೈಗೆ ಚೆಕ್ ವಿತರಿಸಿದ ಸಚಿವ ಜಾರ್ಜ್

ಬೆಂಗಳೂರು: ರಾಜ್ಯದ ಇಂಧನ ಸಚಿವರಾದ ಮಾನ್ಯ ಕೆ.ಜೆ.ಜಾರ್ಜ್‌ ಅವರು ಬೆಸ್ಕಾಂ ವತಿಯಿಂದ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಗುರುವಾರ 5 ಕೋಟಿ ರೂ. ಚೆಕ್ ಅನ್ನು ಸಿಎಂ ಸಿದ್ದರಾಮಯ್ಯನವರಿಗೆ ನೀಡುವ ಮೂಲಕ ತಮ್ಮ ಇಲಾಖೆಯಿಂದ ಸಿಎಂ ಪರಿಹಾರ ನಿಧಿಗೆ ಕೊಡುಗೆ ನೀಡಿದ್ದಾರೆ. ಇಂದು (ನ.28) ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ 5 ಕೋಟಿ ರೂ. ಚೆಕ್ ಅನ್ನು ಸಚಿವ ಕೆಜೆ ಜಾರ್ಜ್ ಹಸ್ತಾಂತರಿಸಿದ ಸಂದರ್ಭದಲ್ಲಿ ಇಂಧನ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ …

Read More »

ಇನ್ಮುಂದೆ ವಿವಿಗಳಿಗೆ ಮುಖ್ಯಮಂತ್ರಿಗಳೇ ಕುಲಪತಿ: ಸಂಪುಟ ಸಭೆಯಲ್ಲಿ ರಾಜ್ಯಪಾಲರ ಅಧಿಕಾರಕ್ಕೆ ಬ್ರೇಕ್

ಬೆಂಗಳೂರು: ಇನ್ಮುಂದೆ ವಿಶ್ವವಿದ್ಯಾಲಯಗಳಿಗೆ ಮುಖ್ಯಮಂತ್ರಿಯೇ ಕುಲಪತಿ, ರಾಜ್ಯಪಾಲರ ಅಧಿಕಾರಕ್ಕೆ ಸಂಪುಟ ಸಭೆಯಲ್ಲಿ ಬ್ರೇಕ್ ಹಾಕಲಾಗಿದೆ. ಇಂತಹ ಮಹತ್ವದ ನಿರ್ಧಾರವನ್ನು ಇಂದಿನ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಇಂದಿನ ಸಂಪುಟ ಸಭೆಯಲ್ಲಿ ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಯುನಿವರ್ಸಿಟಿ ತಿದ್ದುಪಡಿ ವಿಧೇಯಕಕ್ಕೆ ಕ್ಯಾಬಿನೆಟ್ ಅನುಮೋದನೆ ನೀಡಲಾಗಿದೆ. ಈ ವಿಧೇಯಕಕ್ಕೆ ತಿದ್ದುಪಡಿ ತರಲು ಕ್ಯಾಬಿನೇಟ್ ಅನುಮೋದನೆ …

Read More »

ಕೇಂದ್ರ ಸರ್ಕಾರದಿಂದ ಕೋಳಿ ಸಾಕಣೆಗೆ ಶೇ.50 ರಷ್ಟು ಸಬ್ಸಿಡಿಯೊಂದಿಗೆ 50 ಲಕ್ಷ ರೂ. ಸಾಲ ಲಭ್ಯ

ನವದೆಹಲಿ : ಕೋಳಿ ಸಾಕಣೆ ಕೇಂದ್ರವನ್ನ ಸ್ಥಾಪಿಸುವ ಮೂಲಕ ಜೀವನೋಪಾಯವನ್ನ ಗಳಿಸಲು ಬಯಸುವವರಿಗೆ ಕೇಂದ್ರ ಸರ್ಕಾರ ಒಳ್ಳೆಯ ಸುದ್ದಿಯನ್ನು ನೀಡಿದೆ. ಕೋಳಿ ಸಾಕಣೆ ಕೇಂದ್ರ ಸ್ಥಾಪಿಸಲು ಶೇ.50ರಷ್ಟು ಸಬ್ಸಿಡಿಯೊಂದಿಗೆ 50 ಲಕ್ಷ ರೂ.ವರೆಗೆ ಸಾಲ ಮಂಜೂರು ಮಾಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆದ್ರೆ, ಸಾಲ ಪಡೆಯಲು ಬಯಸುವವರು ಒಂದು ಎಕರೆ ಭೂಮಿಯನ್ನ ಹೊಂದಿರಬೇಕು. ಎಲ್ಲಾ ರಾಷ್ಟ್ರೀಕೃತ ಬ್ಯಾಂಕುಗಳು ಅರ್ಹ ಜನರಿಗೆ ಸಾಲವನ್ನ ನೀಡುತ್ತವೆ. ಹೆಚ್ಚಿನ ವಿವರಗಳನ್ನ ಹತ್ತಿರದ ಪಶುಸಂಗೋಪನಾ ಇಲಾಖೆಯ …

Read More »

ಅಧಿವೇಶನದಲ್ಲಿ ವಿಶೇಷ ಅನುದಾನಕ್ಕಾಗಿ ಧ್ವನಿ ಎತ್ತುವೆ: ಶಾಸಕ ಲಕ್ಷ್ಮಣ ಸವದಿ

ಅಥಣಿ: ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಅಗತ್ಯವಿಲ್ಲ, ಬದಲಿಗೆ ಅಭಿವೃದ್ಧಿಗಾಗಿ ಪ್ರತ್ಯೇಕ ಅಭಿವೃದ್ಧಿ ಮಂಡಳಿ ರಚಿಸಿ ಅಗತ್ಯವಿರುವ ಅನುದಾನ ನೀಡಬೇಕಿದೆ. ಈ ಮೂಲಕ ಪ್ರತ್ಯೇಕ ರಾಜ್ಯದ ಕೂಗಿಗೆ ಅಂತ್ಯಹಾಡಲು ಸಾಧ್ಯ. ಈ ಕುರಿತು ಅಧಿವೇಶನದಲ್ಲಿ ಧ್ವನಿ ಎತ್ತುವೆ ಶಾಸಕ ಲಕ್ಷ್ಮಣ ಸವದಿ ಹೇಳಿದರು. ಅಥಣಿ ಪಟ್ಟಣದಲ್ಲಿ ಪುರಸಭೆ ವತಿಯಿಂದ ವಿವಿಧ ಯೋಜನೆಗಳಡಿಯಲ್ಲಿ ಕೈಗೊಳ್ಳುವ ₹4.10 ಕೋಟಿ ವೆಚ್ಚದ ವಿವಿಧ ಕಾಮಗಾರಿಗಳಿಗೆ ಇಂದು ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು. ಕಲ್ಯಾಣ ಕರ್ನಾಟಕ …

Read More »