ಬೆಂಗಳೂರು: ನಾಲ್ಕೈದು ದಿನಗಳಲ್ಲಿ ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳ ಖಾತೆಗೆ ಹಣ ಹಾಕಲಾಗುವುದು ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಆರೋಪಿಸುವವರು ಹಣ ಹಾಕಿದರೂ ಆರೋಪಿಸುತ್ತಾರೆ. ಹಣ ಹಾಕದಿದ್ದರೂ ಅವರು ಆರೋಪ ಮಾಡುತ್ತಾರೆ. ಚುನಾವಣೆಗಾಗಿ ಹಣ ಹಾಕುತ್ತಾರೆ ಎಂದು ಹೇಳುತ್ತಾರೆ. ಈಗ ಚುನಾವಣೆ ಏನಿಲ್ಲವಲ್ಲ ಎಂದು ಹೇಳಿದ್ದಾರೆ. ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳ ಖಾತೆಗೆ ಹಣ ಜಮಾ ಆಗುವುದು ವಿಳಂಬಾಗಿದ್ದ ಬಗ್ಗೆ ಫಲಾನುಭವಿ ಮಹಿಳೆಯರು ಅಸಮಾಧಾನ ವ್ಯಕ್ತಪಡಿಸಿದ್ದರು. ಇದೀಗ …
Read More »ರಾಜ್ಯ ಸಚಿವ ಸಂಪುಟ ಸಭೆಯಲ್ಲಿ 9 ಮಸೂದೆ ಮಂಡಿಸಲು ಅನುಮೋದನೆ: ಸಚಿವ ಹೆಚ್.ಕೆ.ಪಾಟೀಲ್
ಬೆಂಗಳೂರು : ರಾಜ್ಯ ಸಚಿವ ಸಂಪುಟ ಸಭೆಯಲ್ಲಿ 9 ಮಸೂದೆ ಮಂಡಿಸಲು ಅನುಮೋದನೆ ನೀಡಲಾಗಿದೆ ಎಂದು ಸಚಿವ ಹೆಚ್.ಕೆ.ಪಾಟೀಲ್ ಅವರು ಮಾಹಿತಿ ನೀಡಿದರು. ರಾಜ್ಯ ಸಚಿವ ಸಂಪುಟ ಸಭೆ ಮುಕ್ತಾಯದ ಬಳಿಕ ಮಾಹಿತಿ ನೀಡಿದ ಅವರು, ಕಾರ್ಮಿಕರ ಕಲ್ಯಾಣ ತಿದ್ದುಪಡಿ ವಿಧೇಯಕ-2024, ಅಂತರ್ಜಲ ನಿಯಮಾವಳಿ ಅಭಿವೃದ್ಧಿ ನಿರ್ವಹಣಾ ತಿದ್ದುಪಡಿ, ಚಾಣಕ್ಯ ವಿಶ್ವ ವಿದ್ಯಾಲಯ ತಿದ್ದುಪಡಿ ವಿಧೇಯಕ, ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಯೂನಿವರ್ಸಿಟಿ ತಿದ್ದುಪಡಿಗೆ ಅನುಮೋದನೆ ನೀಡಲಾಗಿದೆ ಎಂದರು. ವಿವಿಗೆ ಸಂಬಂಧಿಸಿ …
Read More »ಹಂಪಿ ಪ್ರವಾಸಕ್ಕೆ ಹೊರಟ ಶಾಲಾ ಮಕ್ಕಳಿದ್ದ ಕೆಎಸ್ಆರ್ಟಿಸಿ ಬಸ್ ಪಲ್ಟಿ: ತಪ್ಪಿದ ಭಾರಿ ಅನಾಹುತ
ಕೊಪ್ಪಳ : ವಿಜಯನಗರ ಜಿಲ್ಲೆಯ ಹಂಪಿ ಪ್ರವಾಸಕ್ಕೆ ಎಂದು ಕಲ್ಬುರ್ಗಿ ಜಿಲ್ಲೆಯ ಗುರುಮಿಟ್ಕಲ್ ನ ಶಾಲಾ ಮಕ್ಕಳಿದ್ದ ಕೆಎಸ್ಆರ್ಟಿಸಿ ಬಸ್ ಒಂದು ಪಲ್ಟಿಯಾಗಿರುವ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಬಳಿ ನಡೆದಿದೆ. ಆದರೆ ಅದೃಷ್ಟವಶಾತ್ ಬಸ್ನಲ್ಲಿದ್ದ ಎಲ್ಲಾ ಮಕ್ಕಳು ಕೂಡ ಸೇಫ್ ಆಗಿದ್ದಾರೆ. ಕಲಬುರಗಿಯ ಗುರುಮಿಟ್ಕಲ್ನ ಶಾಲಾ ಮಕ್ಕಳಿದ್ದ ಸಾರಿಗೆ ಬಸ್ ಗಂಗಾವತಿಯ ಮರಳಿ ಸಮೀಪ ರಸ್ತೆ ಬದಿಯ ಹೊಲಕ್ಕೆ ಉರುಳಿದೆ, ಇಂದು ಬೆಳಗ್ಗೆ 4:30ರ ಸುಮಾರಿಗೆ ಘಟನೆ …
Read More »ನಾರ್ಮಲ್ ಹೆರಿಗೆಗಿಂತ ಸಿಸೇರಿಯನ್ ಸಂಖ್ಯೆ ವಿಪರೀತ ಏರಿಕೆ: ಸಚಿವರ ಕಳವಳ
ಶಿವಮೊಗ್ಗ: ಜಿಲ್ಲೆಯಲ್ಲಿ ಸಹಜ ಹೆರಿಗೆಗಿಂತಲೂ ಸಿಸೇರಿಯನ್ ಸಂಖ್ಯೆಯಲ್ಲಿ ವಿಪರೀತ ಏರಿಕೆ ಆಗಿರುವುದನ್ನು ಕಂಡು ಸ್ವತಃ ಆರೋಗ್ಯ ಸಚಿವರೇ ಹೌಹಾರಿದ್ದಾರೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಸಿಸೇರಿಯನ್ ಪ್ರಮಾಣ ಗರಿಷ್ಠ ಶೇ.49 ಇದ್ದರೆ ಖಾಸಗಿ ಆಸ್ಪತ್ರೆಗಳಲ್ಲಿ ಗರಿಷ್ಠ ಶೇ.73 ಇರುವುದನ್ನು ಕಂಡು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಕಳವಳ ವ್ಯಕ್ತಪಡಿಸಿದ್ದಾರೆ. ಇಲಾಖೆ ಪ್ರಗತಿ ಪರಿಶೀಲನೆ ನಡೆಸುವ ವೇಳೆ ಅಧಿಕಾರಿಗಳು ನೀಡಿದ ಅಂಕಿ ಅಂಶಗಳನ್ನು ಕಂಡು ಆತಂಕ ವ್ಯಕ್ತಪಡಿಸಿದರು. ಈ ಪ್ರಮಾಣದಲ್ಲಿ ಸಿಸೇರಿಯನ್ ಮಾಡುವ ಅವಶ್ಯವಿದೆಯೇ …
Read More »ಡಿ. 6 ರಂದು ಸಾಗರದಲ್ಲಿ ಅಡಿಕೆ ಬೆಳೆಗಾರರ ಸಮಾವೇಶ
ಶಿವಮೊಗ್ಗ: ಅಡಿಕೆ ನಿಷೇಧದ ಭೀತಿ, ಬೆಲೆ ಏರಿಳಿತ, ಕಾರ್ಮಿಕರ ಕೊರತೆ ಮುಂತಾದ ಸಮಸ್ಯೆಗಳಿಗೆ ಸಿಲುಕಿ ಮಲೆನಾಡಿನ ಅಡಿಕೆ ಬೆಳೆಗಾರರು ಕಂಗಾಲಾಗಿದ್ದಾರೆ. ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತು ಚರ್ಚಿಸಲು ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಅಡಿಕೆ ಬೆಳೆಗಾರರ ಸಮಾವೇಶವನ್ನು ಡಿಸೆಂಬರ್ 6ರಂದು ಆಯೋಜಿಸಲಾಗಿದೆ. ಕೇಂದ್ರ ಕೃಷಿ ಸಚಿವರನ್ನು ಸಹ ಸಮಾವೇಶಕ್ಕೆ ಆಹ್ವಾನಿಸಲಾಗಿದೆ. ಶಿವಮೊಗ್ಗ ಸಂಸದ ಬಿ. ವೈ. ರಾಘವೇಂದ್ರ ನೇತೃತ್ವದಲ್ಲಿ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ, ವಿಶ್ವೇಶ್ವರ ಹೆಗಡೆ ಕಾಗೇರಿ, ಕ್ಯಾಪ್ಟನ್ ಬ್ರಿಜೇಶ್ …
Read More »ದೇಶದಲ್ಲಿ ವಕ್ಫ್ ಮಂಡಳಿಗಳ 58,929 ಕರ್ನಾಟಕದಲ್ಲಿ 869 ಆಸ್ತಿಗಳ ಅತಿಕ್ರಮ ಆರೋಪ: ಕೇಂದ್ರ ಸರ್ಕಾರ
ನವದೆಹಲಿ: ದೇಶದಲ್ಲಿ ವಕ್ಫ್ ಮಂಡಳಿಗಳ 58,929 ಆಸ್ತಿಗಳ ಅತಿಕ್ರಮವಾಗಿರುವ ಆರೋಪ ಕೇಳಿಬಂದಿದೆ. ಇದರಲ್ಲಿ ಕರ್ನಾಟಕದ 869 ಆಸ್ತಿಗಳೂ ಸೇರಿವೆ ಎಂದು ಕೇಂದ್ರ ಸರ್ಕಾರ ಹೇಳಿದೆ. ಲೋಕಸಭೆಯಲ್ಲಿ ಬಿಜೆಪಿ ಸಂಸದ ಬಸವರಾಜ ಬೊಮ್ಮಾಯಿ ಕೇಳಿದ ಪ್ರಶ್ನೆಗೆ ಲಿಖಿತ ಉತ್ತರ ನೀಡಿರುವ ಕೇಂದ್ರದ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರೆಣ್ ರಿಜಿಜು, ಕಾಲ ಕಾಲಕ್ಕೆ ವಕ್ಫ್ ಆಸ್ತಿಗೆ ಸಂಬಂಧಿಸಿದಂತೆ ಸಾಕಷ್ಟು ದೂರುಗಳು ಕೇಂದ್ರೀಯ ವಕ್ಫ್ ಪರಿಷತ್ಗೆ ಬಂದಿವೆ. ಅವುಗಳನ್ನು ಆಯಾ ಸಂದರ್ಭದಲ್ಲೇ ರಾಜ್ಯ ವಕ್ಫ್ …
Read More »ಸಂಸದೆಯಾಗಿ ಪ್ರಿಯಾಂಕಾ ಗಾಂಧಿ ವಾದ್ರಾ ಇಂದು ಪ್ರಮಾಣವಚನ ಸ್ವೀಕಾರ
ನವದೆಹಲಿ : ವಯನಾಡು ಕ್ಷೇತ್ರದಿಂದ ಸಂಸದೆಯಾಗಿ ಆಯ್ಕೆಯಾದ ಪ್ರಿಯಾಂಕಾ ವಾದ್ರಾ ಸಂಸತ್ ಪ್ರವೇಶ ಮಾಡಿದ್ದಾರೆ ಸಂಸದೆಯಾಗಿ ಪ್ರಮಾನವಚನ ಸ್ವೀಕರಿಸಿದ್ದಾರೆ. ಪ್ರಮಾಣವಚನ ಸ್ವೀಕಾರ ವೇಳೆ ಪ್ರಿಯಾಂಕಾ ಕೈಯಲ್ಲಿ ಸಂವಿಧಾನ ಪುಸ್ತಕ ಹಿಡಿದು ಗಮನ ಸೆಳೆದಿದ್ದಾರೆ. ಕೇರಳದ ಪಾರಂಪಾರಿಕ ಕೈಮಗ್ಗ ಸೀರೆಯಾದ ಬಿಳಿ ಬಣ್ಣದ ಕಸವು ಸೀರೆಯುಟ್ಟು ಪ್ರಿಯಾಂಕಾ ಪ್ರತಿಜ್ಞಾವಿಧಿ ಸ್ವೀಕಾರ ಮಾಡಿದರು. ಇತ್ತೀಚೆಗೆ ಮುಕ್ತಾಯಗೊಂಡ ವಯನಾಡು ಬೈ ಎಲೆಕ್ಷನ್ ನಲ್ಲಿ ಪ್ರಿಯಾಂಕಾ ವಾದ್ರಾ, 6 ಲಕ್ಷಕ್ಕೂ ಹೆಚ್ಚು ಮತಗಳಿಂದ ಭರ್ಜರಿ ಜಯಗಳಿಸಿದ್ದರು. …
Read More »ಕೊಂಕಣ ರೈಲ್ವೆ ವಿಲೀನಕ್ಕೆ ಒಪ್ಪದ ಕರ್ನಾಟಕ ಸರ್ಕಾರ: ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ನವದೆಹಲಿ: ಭಾರತೀಯ ರೈಲ್ವೆಯೊಂದಿಗೆ ಕೊಂಕಣ ರೈಲ್ವೆಯನ್ನು ವಿಲೀನಗೊಳಿಸುವ ಪ್ರಸ್ತಾವನೆಗೆ ಕರ್ನಾಟಕ ಸರ್ಕಾರ ಒಪ್ಪಿಗೆ ನೀಡಿಲ್ಲ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ. ಲೋಕಸಭೆಯಲ್ಲಿ ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಬುಧವಾರ ಕೇಳಿದ ಪ್ರಶ್ನೆಗೆ ಲಿಖಿತ ಉತ್ತರ ನೀಡಿದ ಸಚಿವರು, ಗೋವಾ ರಾಜ್ಯ ಸರ್ಕಾರ ಮಾತ್ರ ತನ್ನ ಪಾಲನ್ನು ಬಿಟ್ಟುಕೊಡಲು ಇಚ್ಛೆ ವ್ಯಕ್ತಪಡಿಸಿದೆ ಎಂದು ಮಾಹಿತಿ ನೀಡಿದ್ದಾರೆ. ಕೊಂಕಣ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್ನಲ್ಲಿ ರೈಲ್ವೆ ಸಚಿವಾಲಯ, ಮಹಾರಾಷ್ಟ್ರ ಸರ್ಕಾರ, …
Read More »ಕಳಸಾ ಬಂಡೂರಿ ನೀರಾವರಿ ಯೋಜನೆಗೆ ತ್ವರಿತ ಪರಿಸರ ಅನುಮತಿ ನೀಡಿ: ಕೇಂದ್ರ ಸಚಿವರಿಗೆ ಡಿಕೆ ಶಿವಕುಮಾರ್ ಮನವಿ
ನವದೆಹಲಿ: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಕೇಂದ್ರ ಪರಿಸರ ಸಚಿವ ಭೂಪೇಂದರ್ ಯಾದವ್ ಅವರನ್ನು ಭೇಟಿ ಮಾಡಿ, ಕಳಸಾ-ಬಂಡೂರಿ ನೀರಾವರಿ ಯೋಜನೆಗೆ ಪರಿಸರ ಅನುಮತಿಯನ್ನು ತ್ವರಿತವಾಗಿ ನೀಡುವಂತೆ ಮನವಿ ಮಾಡಿದ್ದಾರೆ. ದೆಹಲಿಯಲ್ಲಿ ಕೇಂದ್ರ ಸಚಿವರನ್ನು ಭೇಟಿ ಮಾಡಿದ ಜಲಸಂಪನ್ಮೂಲ ಸಚಿವರೂ ಆಗಿರುವ ಡಿಕೆ ಶಿವಕುಮಾರ್ ಅವರು, ಕಳಸಾ-ಬಂಡೂರಿ ಯೋಜನೆಯು ರಾಜ್ಯದ ನೀರಿನ ಅಗತ್ಯಗಳಿಗೆ ನಿರ್ಣಾಯಕವಾಗಿದ್ದು, ಇದಕ್ಕೆ ಅಗತ್ಯವಿರುವ ಅರಣ್ಯ ಹಾಗೂ ವನ್ಯಜೀವಿ ಮಂಡಳಿ ಅನುಮತಿ ಕೊಡಿಸಬೇಕು ಎಂದು ಮನವಿ ಸಲ್ಲಿಸಿದರು. …
Read More »ಬಿಜೆಪಿ ಸರ್ಕಾರದ ಅವಧಿಯಲ್ಲಿ ಸಾರಿಗೆ ಸಂಸ್ಥೆಗೆ ₹5,900 ಕೋಟಿ ನಷ್ಟ: ಸಚಿವ ರಾಮಲಿಂಗಾರೆಡ್ಡಿ
ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿ ಸಾರಿಗೆ ಸಂಸ್ಥೆಗಳು ಅನುಭವಿಸಿದ್ದ ನಷ್ಟ ₹5,900 ಕೋಟಿ ಹಾಗೂ ಭವಿಷ್ಯ ನಿಧಿ, ಸಾಮಗ್ರಿಗಳ ಖರೀದಿ, ಡೀಸೆಲ್ ಬಾಕಿಯನ್ನು ಕಾಂಗ್ರೆಸ್ ಸರ್ಕಾರ ತೀರಿಸುತ್ತಲೇ ಸಂಸ್ಥೆಯನ್ನು ಯಶಸ್ವಿಯಾಗಿ ಮುನ್ನಡೆಸುತ್ತಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ಈ ಕುರಿತ ಹೇಳಿಕೆಯನ್ನು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, 2013ರಲ್ಲಿ ಅಧಿಕಾರಕ್ಕೆ ಬಂದಿದ್ದ ಕಾಂಗ್ರೆಸ್ 2018ರಲ್ಲಿ ನಿರ್ಗಮಿಸುವಾಗ ಸಾರಿಗೆ ನಿಗಮಗಳಲ್ಲಿ ಭವಿಷ್ಯ ನಿಧಿ ಮೊತ್ತ ಬಾಕಿ ಇದ್ದದ್ದು ₹13.71 …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





