Breaking News

BigTv News

ತುಮಕೂರು-ಮಂಗಳೂರು ಮಧ್ಯೆ ರೈಲು ಸಂಚಾರ ಆರಂಭ: ಕೇಂದ್ರ ಸಚಿವ ವಿ.ಸೋಮಣ್ಣ ಭರವಸೆ

ತುಮಕೂರು: ತುಮಕೂರು- ಮಂಗಳೂರು ನಡುವೆ ರೈಲು ಸಂಚಾರ ಆರಂಭಿಸುವ ಕುರಿತು ಅಧಿಕಾರಿಗಳ ಜತೆ ಚರ್ಚಿಸಿ, ಅಗತ್ಯ ಎನಿಸಿದರೆ ರೈಲಿನ ವ್ಯವಸ್ಥೆ ಮಾಡಲಾಗುವುದು ಎಂದು ಕೇಂದ್ರ ಜಲಶಕ್ತಿ, ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಭರವಸೆ ನೀಡಿದರು. ನಗರದಲ್ಲಿ ಗುರುಕುಲ ಆರ್ಕೆಡ್‌’ ನೂತನ ಕಟ್ಟಡ ಉದ್ಘಾಟಿಸಿ ಮಾತನಾಡಿದರು. ನಗರ ಬೆಳೆದಂತೆ ಭೂಮಿಯ ಬೆಲೆ ಗಗನಮುಖಿಯಾಗಿದೆ. ಭವಿಷ್ಯದ ದೃಷ್ಟಿಯಿಂದ ನೆರೆಯ ಆಂಧ್ರಪ್ರದೇಶದವರು ದುಪ್ಪಟ್ಟು ಹಣ ನೀಡಿ ಈ ಭಾಗದ ಭೂಮಿ ಖರೀದಿಸುತ್ತಿದ್ದಾರೆ. ವೀರಶೈವ …

Read More »

ಬೆಳಗಾವಿ ಸಿಇಟಿ ಸಕ್ಷಮ್ ಅನುಷ್ಠಾನಕ್ಕೆ ರಾಜ್ಯ ಸರ್ಕಾರದಿಂದ 10 ಲಕ್ಷ ರೂ. ಅನುದಾನ

ಬೆಳಗಾವಿ: ಸರ್ಕಾರಿ ಪದವಿ ಪೂರ್ವ ವಿದ್ಯಾಲಯಗಳಲ್ಲಿ ವಿಜ್ಞಾನ ವ್ಯಾಸಂಗ ಮಾಡುತ್ತಿರುವ ಜಿಲ್ಲೆಯ ಗ್ರಾಮೀಣ ಪ್ರದೇಶದ ಮತ್ತು ಆರ್ಥಿಕವಾಗಿ ದುರ್ಬಲರಾಗಿರುವ ವಿದ್ಯಾರ್ಥಿಗಳ ಶೈಕ್ಷಣಿಕ ಉನ್ನತಿಗಾಗಿ ಬೆಳಗಾವಿ ಜಿಲ್ಲೆಯಲ್ಲಿ ಅನುಷ್ಠಾನಗೊಳಿಸಲಾಗಿರುವ ಸಿ.ಇ.ಟಿ.-ಸಕ್ಷಮ್ ಎಂಬ ವಿನೂತನ ಮತ್ತು ಸೃಜನಾತ್ಮಕ ಕಾರ್ಯಕ್ರಮಕ್ಕೆ ರಾಜ್ಯ ಸರಕಾರದ ಮೆಚ್ಚುಗೆ ಜತೆಗೆ ಚಾಲೆಂಜ್ ಫಂಡ್ ಯೋಜನೆಯಡಿ ಹತ್ತು ಲಕ್ಷ ರೂಪಾಯಿ ಅನುದಾನ ಲಭಿಸಿದೆ. ಜಿಲ್ಲೆಯ ಎಲ್ಲ ಸರಕಾರಿ ವಿಜ್ಞಾನ ಪದವಿ ಪೂರ್ವ ಕಾಲೇಜುಗಳಲ್ಲಿ ಕಲಿಯುತ್ತಿರುವ ಬಡ ಕುಟುಂಬಗಳ ಹಾಗೂ ಗ್ರಾಮೀಣ …

Read More »

ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನ.28 ರಂದು ಸಚಿವ ಸಂಪುಟ ಸಭೆ ನಿಗದಿ

ಬೆಂಗಳೂರು : ನವೆಂಬರ್ 28 ರಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಚಿವ ಸಂಪುಟ ಸಭೆ ನಿಗದಿಯಾಗಿದೆ. ಈ ಬಗ್ಗೆ ಆರ್. ಚಂದ್ರಶೇಖರ್, ಸರ್ಕಾರದ ಅಪರ ಕಾರ್ಯದರ್ಶಿ ಇವರು ಸುತ್ತೋಲೆ ಹೊರಡಿಸಿದ್ದು, ದಿ. 28.11.2024, ಗುರುವಾರ ಬೆಳಗ್ಗೆ 11 ಗಂಟೆಗೆ ಸಚಿವ ಸಂಪುಟದ 2024ನೇ ಸಾಲಿನ 24 ನೇ ಸಭೆಯನ್ನು ವಿಧಾನಸೌಧದ ಸಚಿವ ಸಂಪುಟ ಸಭಾಮಂದಿರದಲ್ಲಿ ಕರೆಯಲಾಗಿದೆ.ಸಭೆಯ ಕಾರ್ಯಸೂಚಿಯನ್ನು ಪ್ರತ್ಯೇಕವಾಗಿ ಕಳುಹಿಸಲಾಗುವುದು ಎಂದಿದ್ದಾರೆ.

Read More »

ಸಂವಿಧಾನದ 75ನೇ ವಾರ್ಷಿಕೋತ್ಸವ: ರಾಜ್ಯಾದ್ಯಂತ ಪಂಚಾಯತ್ ಇಲಾಖೆಯಿಂದ ಅಭಿಯಾನ

ಬೆಂಗಳೂರು: ಭಾರತ ಸಂವಿಧಾನದ 75ನೆ ವಾರ್ಷಿಕೋತ್ಸವ ಆಚರಿಸುತ್ತಿರುವ ಸಂದರ್ಭದಲ್ಲಿ ಸಾಂವಿಧಾನಿಕ ಮೌಲ್ಯಗಳ ಬಗ್ಗೆ ಸಾರ್ವಜನಿಕರಿಗೆ ತಿಳುವಳಿಕೆ ನೀಡಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ರಾಜ್ಯಾದ್ಯಂತ ಅಭಿಯಾನವನ್ನು ಪ್ರಾರಂಭಿಸಲಾಗುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂವಿಧಾನ ದಿನವಾದ ನವೆಂಬರ್ 26ರಿಂದ ಆರಂಭವಾಗಲಿರುವ ಮೂರು ದಿನಗಳ ಈ ಕಾರ್ಯಕ್ರಮದಲ್ಲಿ ಸಾಂವಿಧಾನಿಕ ಸಾಕ್ಷರತೆಯ ಬಗ್ಗೆ …

Read More »

ಇಡೀ ವಕ್ಫ್ ಬೋರ್ಡ್ ನೆ ಭಾರತದಿಂದ ತೆಗೆದುಹಾಕಬೇಕು: ಯತ್ನಾಳ

ಬೀದರ್:‌ ವಕ್ಫ್ ಭೂ ಕಬಳಿಕೆ ವಿರೋಧಿ ಜನಜಾಗೃತಿ ಹೋರಾಟ ಹಿನ್ನೆಲೆಯಲ್ಲಿ ಬಿಜೆಪಿ ಶಾಸಕರಾದ ಬಸವನಗೌಡ ಪಾಟೀಲ ಯತ್ನಾಳ್ ಮತ್ತು ರಮೇಶ್ ಜಾರಕಿಹೊಳಿ ನೇತೃತ್ವದ ತಂಡ‌ ಇಂದು (ನ.25) ತಾಲೂಕಿನ ಧರ್ಮಾಪುರ ಗ್ರಾಮಕ್ಕೆ ಭೇಟಿ ನೀಡಿ ಜನರಿಂದ‌ ಅಹವಾಲು ಸ್ವೀಕಾರ ಮಾಡಿದರು. ಜಮೀನುಗಳಲ್ಲಿ ವಕ್ಫ್ ಹೆಸರು ಸೇರ್ಪಡೆ ಕುರಿತಂತೆ ತಂಡವು ಗ್ರಾಮದ ಹಲವು ಜನರಿಂದ ಮಾಹಿತಿ ಸಂಗ್ರಹ ಮಾಡಿತು. ಈ ವೇಳೆ ಪಹಣಿಯಿಂದ ವಕ್ಫ್ ಅಂತ ತೆಗೆಯುವುದಲ್ಲ, ವಕ್ಫ್ ಬೋರ್ಡನ್ನೇ ತೆಗೆಯಬೇಕು …

Read More »

ಶಿವಸೇನೆಯ ಶಾಸಕಾಂಗ ಪಕ್ಷದ ನಾಯಕರಾಗಿ ಏಕನಾಥ್ ಶಿಂಧೆ ಆಯ್ಕೆ

ಮುಂಬೈ: ಶಿವಸೇನೆಯ (ಶಿಂದೆ ಬಣ) ಶಾಸಕಾಂಗ ಪಕ್ಷದ ನಾಯಕರಾಗಿ ಮುಖ್ಯಮಂತ್ರಿ ಏಕನಾಥ ಶಿಂದೆ ಆಯ್ಕೆಯಾದರು. ಖಾಸಗಿ ಹೋಟೆಲ್‌ನಲ್ಲಿ ನಡೆದ ಸಭೆಯಲ್ಲಿ ಶಾಸಕರಾಗಿ ಆಯ್ಕೆಯಾದ ಪಕ್ಷದ ಎಲ್ಲ 57 ಸದಸ್ಯರು ಇದ್ದರು. ಮುಖ್ಯ ಸಚೇತಕ, ಇತರ ಪದಾಧಿಕಾರಿಗಳನ್ನು ನೇಮಿಸುವ ಅಧಿಕಾರವನ್ನು ಶಿಂದೆ ಅವರಿಗೆ ನೀಡಲಾಗಿದೆ ಎಂದು ಪಕ್ಷದ ನಾಯಕ ದೀಪಕ್ ಕೇಸಕರ್ ಹೇಳಿದ್ದಾರೆ. ಹೊಸ ಸಿ.ಎಂ ಆಯ್ಕೆ ಕುರಿತಂತೆ ಮೈತ್ರಿ ಪಕ್ಷಗಳಲ್ಲಿ ಯಾವುದೇ ವಿವಾದ ಇಲ್ಲ ಎಂದು ಹೇಳಿದರು.

Read More »

ನಾಳೆ(ನ.26) ಸಂವಿಧಾನ ದಿನಾಚರಣೆ: ರಾಜ್ಯದ ಎಲ್ಲಾ ಸರ್ಕಾರಿ ಕಛೇರಿ, ಶಾಲಾ ಕಾಲೇಜುಗಳಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರ ಕಡ್ಡಾಯ

ಬೆಂಗಳೂರು : ನವೆಂಬರ್- 26 ರ ಸಂವಿಧಾನದ ದಿನಾಚರಣೆ ಸಂದರ್ಭದಲ್ಲಿ ಡಾ.ಬಿ.ಆರ್ ಅಂಬೇಡ್ಕ‌ರವರ ಭಾವಚಿತ್ರವನ್ನು ಕಡ್ಡಾಯವಾಗಿ ಇಡಬೇಕು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಉಲ್ಲೇಖಿತ ಸುತ್ತೋಲೆಯಲ್ಲಿ ಸೂಚಿಸಿರುವಂತೆ, ಜನವರಿ 26ರ ಗಣರಾಜ್ಯೋತ್ಸವ ದಿನದಂದು ಕೂಡ ರಾಜ್ಯದ ಎಲ್ಲಾ ಸರ್ಕಾರಿ ಕಛೇರಿಗಳು, ಸರ್ಕಾರಿ ಸ್ವಾಮ್ಯಕ್ಕೆ ಒಳಪಡುವ ಸಂಸ್ಥೆಗಳು ಹಾಗೂ ಶಾಲಾ ಕಾಲೇಜು ಸೇರಿದಂತೆ ಸರ್ಕಾರದ ವತಿಯಿಂದ ನಡೆಯುವ ಎಲ್ಲಾ ಸಮಾರಂಭಗಳಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಭಾವಚಿತ್ರದೊಂದಿಗೆ ಸಂವಿಧಾನದ ಪಿತಾಮಹ, ಭಾರತ …

Read More »

ಚಳಿಗಾಲದ ಅಧಿವೇಶನ: ಉಭಯ ಸದನಗಳ ಕಲಾಪ ಮುಂದೂಡಿಕೆ

ನವದೆಹಲಿ: ಚಳಿಗಾಲದ ಅಧಿವೇಶನ ಆರಂಭವಾಗುತ್ತಿದ್ದಂತೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ವಾಕ್ಸಮರ ನಡೆದ ಕಾರಣ ಉಭಯ ಸದನಗಳ ಕಲಾಪವನ್ನು ಮುಂದೂಡಲಾಗಿದೆ. ಚಳಿಗಾಲದ ಅಧಿವೇಶನ ಇಂದು ಆರಂಭವಾಗುತ್ತಿದ್ದಂತೆ ವಿಪಕ್ಷಗಳು ವಕ್ಫ್ ಮಂಡಳಿ ವಿವಾದ ಹಾಗೂ ಮಣಿಪುರ ಗಲಭೆ ಕುರಿತು ಚರ್ಚೆಗೆ ಆಗ್ರಹಿಸಿದವು. ಕೇಂದ್ರ ಸರ್ಕಾರ ಒಂದು ದೇಶ, ಒಂದು ಚುನಾವಣೆ, ಬ್ಯಾಕಿಂಗ್ ಮಸೂದೆ ಮತ್ತು ರೈಲ್ವೆ ವಿಧೇಯಕ ತಿದ್ದುಪಡಿ ಮಸೂದೆ, ವಕ್ಫ್ ಮಂಡಳಿ ಮಸೂದೆ ಮತ್ತು ಪ್ರಕೃತಿ ವಿಕೋಪ ನಿರ್ವಹಣೆ ಮಸೂದೆಗಳನ್ನು …

Read More »

ಬಿಪಿಎಲ್ ಕಾರ್ಡ್ ಹೊಂದಿರುವ ಸರ್ಕಾರಿ ನೌಕರರ ವಿರುದ್ಧ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

ಬೆಂಗಳೂರು: ರಾಜ್ಯ ಸರ್ಕಾರ ಬಿಪಿಎಲ್‌ ಕಾರ್ಡ್‌ಗಳ ಪರಿಷ್ಕರಣೆ ಮಾಡುತ್ತಿರುವ ಸುದ್ದಿಯ ನಡುವೆ ಸಿಎಂ ಸಿದ್ದರಾಮಯ್ಯ ಮತ್ತೊಂದು ಖಡಕ್‌ ಸೂಚನೆ ರವಾನಿಸಿದ್ದಾರೆ. ರಾಜ್ಯದಲ್ಲಿ ಐದು ಸಾವಿರಕ್ಕು ಹೆಚ್ಚು ಸರ್ಕಾರಿ ನೌಕರರು ಬಿಪಿಎಲ್ ಕಾರ್ಡ್ ಹೊಂದಿದ್ದಾರೆ ಎಂದು ಸಿಎಂ ಹೇಳಿದ್ದರು. ಬಿಪಿಎಲ್‌ ಕಾರ್ಡ್‌ ಹೊಂದಿರುವ ಈ ಸರ್ಕಾರಿ ನೌಕರರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಿಎಂ ಸೂಚನೆ ನೀಡಿದ್ದಾರೆ ಎಂದು ಕರ್ನಾಟಕ ಸರ್ಕಾರಿ ನೌಕರರ ಸಂಘದ ಮಾಜಿ ಅಧ್ಯಕ್ಷ ಷಡಕ್ಷರಿ ಹೇಳಿದ್ದಾರೆ. ಸರ್ಕಾರದ ಉಚಿತ …

Read More »

ಡಿ.9 ರಿಂದ ಚಳಿಗಾಲ ಅಧಿವೇಶನ: ಸೂಕ್ತ ವ್ಯವಸ್ಥೆ ಕಲ್ಪಿಸಲು ಅಧಿಕಾರಿಗಳಿಗೆ ಸತೀಶ ಜಾರಕಿಹೊಳಿ ಸೂಚನೆ

ಬೆಳಗಾವಿ: ಡಿಸೆಂಬರ್ 9 ರಿಂದ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಚಳಿಗಾಲ ಅಧಿವೇಶನ ಆರಂಭವಾಗಲಿದ್ದು, ಅಧಿವೇಶದಲ್ಲಿ ಯಾವುದೇ ಅನಾನುಕೂಲಗಳಾಗಂತೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಲೋಕೋಪಯೋಗಿ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರು ಸೂಚನೆ ನೀಡಿದರು. ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಪೂರ್ವಸಿದ್ಧತಾ ಸಭೆಯಲ್ಲಿ, ವಸತಿ, ಸಾರಿಗೆ, ಆಹಾರ ಮತ್ತು ಇತರ ಸೌಲಭ್ಯಗಳಲ್ಲಿ ಯಾವುದೇ ಅನಾನುಕೂಲಗಳಾದಂತೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಊಟೋಪಹಾರ ಕಲ್ಪಿಸುವವರಿಗೆ ಮುಂಚಿತವಾಗಿಯೇ ಆದೇಶ ನೀಡುವ …

Read More »