Breaking News

BigTv News

ಇಂದಿನಿಂದ ಸಂಸತ್ತಿನ ಚಳಿಗಾಲದ ಅಧಿವೇಶನ: 16 ಮಸೂದೆ ಮಂಡಿಸಲು ಕೇಂದ್ರ ಸರ್ಕಾರ ಸಿದ್ಧತೆ

ನವದೆಹಲಿ: ಇಂದಿನಿಂದ ಡಿಸೆಂಬರ್ 20 ರವರೆಗೆ ನಿಗದಿಯಾಗಿರುವ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ, ಸರ್ಕಾರ ಪ್ರಸ್ತಾಪಿಸಿದ ಹಲವಾರು ಪ್ರಮುಖ ಮಸೂದೆಗಳ ಅಂಗೀಕಾರವನ್ನು ಪ್ರತಿಪಕ್ಷಗಳು ಪ್ರತಿಭಟಿಸುವ ಸಾಧ್ಯತೆಯಿದೆ. ಆಡಳಿತಾರೂಡ ಎನ್ ಡಿಎ ಮೈತ್ರಿಕೂಟ ಮತ್ತು ವಿಪಕ್ಷಗಳ ಇಂಡಿಯಾ ಮೈತ್ರಿಕೂಟ ನಡುವೆ ಭಾರೀ ವಾಕ್ಸಮರಕ್ಕೆ ವೇದಿಕೆಯಾಗುವ ಎಲ್ಲಾ ಸಾಧ್ಯತೆಗಳಿರುವ ಸಂಸತ್ತಿನ ಚಳಿಗಾಲದ ಅಧಿವೇಶನಕ್ಕೆ ಇಂದು ಚಾಲನೆ ಸಿಗಲಿದೆ. ಅಧಿವೇಶನದಲ್ಲಿ ಒಟ್ಟು 16 ಮಸೂದೆ ಮಂಡಿಸಲು ಸರ್ಕಾರ ಸಿದ್ಧತೆ ನಡೆಸಿದೆ. ಸಂವಿಧಾನವನ್ನು ಅಂಗೀಕರಿಸಿದ 75 ನೇ …

Read More »

ಕಲ್ಯಾಣ ಕರ್ನಾಟಕ ಭಾಗದಲ್ಲಿ 5,600 ಶಿಕ್ಷಕರ ಹುದ್ದೆಗಳ ಭರ್ತಿಗೆ ಕ್ರಮ: ಸಚಿವ ಡಾ.ಶರಣಪ್ರಕಾಶ ಪಾಟೀಲ್‌

ಚಿಂಚೋಳಿ: ಕಲ್ಯಾಣ ಕರ್ನಾಟಕ ಭಾಗದಲ್ಲಿ ಖಾಲಿ ಇರುವ ಪ್ರಾಥಮಿಕ ಶಾಲೆಗಳ 5,600 ಶಿಕ್ಷಕರ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗಿದ್ದು ಶೀಘ್ರವೇ ಅಧಿಸೂಚನೆ ಹೊರಡಿಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ ತಿಳಿಸಿದರು. ತಾಲ್ಲೂಕಿನ ವೆಂಕಟಾಪುರ (ಎನ್) ಗ್ರಾಮದಲ್ಲಿ ನಡೆದ ಅಭಿನಂದನಾ ಸಮಾರಂಭದಲ್ಲಿ ಗ್ರಾಮಸ್ಥರಿಂದ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು. ಗ್ರಾಮಕ್ಕೆ ಆಗಮಿಸಿದ ಸಚಿವರಿಗೆ ಗ್ರಾಮಸ್ಥರು ಹಾಗೂ ಕಾಂಗ್ರೆಸ್ ಮುಖಂಡರು ವಾದ್ಯಮೇಳದೊಂದಿಗೆ ಸ್ವಾಗತಿಸಿ ಪಟಾಕಿ ಸಿಡಿಸಿ ಸಂಭ್ರಮಿಸಿದರು. ರಾಜ್ಯ …

Read More »

ಕಳಸಾ ಬಂಡೂರಿ ಯೋಜನೆಗೆ ಶೀಘ್ರ ಮಂಜೂರಾತಿ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ಬಾದಾಮಿ: ಕಳಸಾ-ಬಂಡೂರಿ ನಾಲಾ ವಿಸ್ತ್ರತ ಯೋಜನಾ ವರದಿಯನ್ನು ಕೇಂದ್ರ ಸರ್ಕಾರ ಸ್ವೀಕರಿಸಿದೆ. ಅತೀ ಶೀಘ್ರದಲ್ಲಿ ಯೋಜನೆಗೆ ಮಂಜೂರಾತಿ ದೊರೆಯಲಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ತಿಳಿಸಿದರು. ಬೇಲೂರ ಗ್ರಾಮದ ಅನ್ನದಾನೇಶ್ವರ ವಿದ್ಯಾಸಂಸ್ಥೆಯಲ್ಲಿ ನಡೆದ ದಿವಂಗತ ಬಿ.ಎಂ.ಹೊರಕೇರಿ ಪುತ್ಥಳಿ ಅನಾವರಣ ಸಮಾರಂಭದಲ್ಲಿ ಅವರು ಮಾತನಾಡಿದರು. ಕಳಸಾ ಅರಣ್ಯ ಪ್ರದೇಶದಲ್ಲಿ ಲಕ್ಷಾಂತರ ಮರಗಳಿವೆ ಅವುಗಳ ತೆರವಿಗೆ ಅರಣ್ಯ ಇಲಾಖೆಯಿಂದ ಅನುಮತಿ ದೊರಕಿದೆ. ಅಲ್ಲಿ ಹುಲಿ ಸಂರಕ್ಷಿತ ಪ್ರದೇಶವೂ ಇದ್ದು ಇವುಗಳ ತೆರವಿಗೆ …

Read More »

ರಾಜ್ಯ ಸರ್ಕಾರದಿಂದ ಮಿನಿ ಟ್ರ್ಯಾಕ್ಟರ್ ಖರೀದಿಗೆ ಶೇ.90 ರಷ್ಟು ಸಹಾಯಧನಕ್ಕೆ ಅರ್ಜಿ ಆಹ್ವಾನ

ಬೆಂಗಳೂರು : ಪ್ರಸಕ್ತ(2024-25) ಸಾಲಿನ ಕೃಷಿ ಯಾಂತ್ರೀಕರಣ ಮತ್ತು ಕೃಷಿ ಉತ್ಪನ್ನಗಳ ಸಂಸ್ಕರಣೆ ಕಾರ್ಯಕ್ರಮದಲ್ಲಿ ಸಾಮಾನ್ಯ ವರ್ಗದ ರೈತರಿಗೆ ಶೇ.50 ರ ರಿಯಾಯಿತಿಯಲ್ಲಿ ಮತ್ತು ಪರಿಶಿಷ್ಟ ಜಾತಿ ಮತ್ತು ವರ್ಗದ ರೈತರಿಗೆ ಶೇ.90 ರ ರಿಯಾಯಿತಿಯಲ್ಲಿ ಮಿನಿ ಟ್ರ್ಯಾಕ್ಟರ್, ಪವರ್ ಟಿಲ್ಲರ್, ರೋಟೋವೇಟರ್, ಕಳೆ ಕೊಚ್ಚುವ ಯಂತ್ರಗಳು, ಪವರ್ ವೀಡರ್, ಪವರ್ ಸ್ಪ್ರೇಯರ್ಸ್, ಡೀಸೆಲ್ ಪಂಪ್‍ಸೆಟ್, ಪ್ಲೋರ್‍ಮಿಲ್, ಯಂತ್ರ ಚಾಲಿತ ಮೋಟೋಕಾರ್ಟ್, ಮೋಟಾರ್ ಚಾಲಿತ ಸಣ್ಣ ಎಣ್ಣೆಗಾಣಗಳು ಮತ್ತು ಇತರೆ …

Read More »

ಹಾಸನದಲ್ಲಿ ಡಿ.5 ರಂದು ಸಿಎಂ ಸಿದ್ದರಾಮಯ್ಯ ಅಭಿಮಾನಿಗಳಿಂದ ಬೃಹತ್ ಸಮಾವೇಶ

ಹಾಸನ : ವಾಲ್ಮೀಕಿ ಹಗರಣ, ಮುಡಾ ಹಗರಣ ಸೇರಿದಂತೆ ರಾಜ್ಯ ಕಾಂಗ್ರೆಸ್ ಸರ್ಕಾರ ಸಾಲು ಸಾಲು ಹಗರಣಗಳಿಂದ ಮುಜುಗರಕ್ಕೆ ಈಡಾಗಿತ್ತು. ಈ ಬಾರಿಯ 3 ವಿಧಾನಸಭಾ ಉಪಚುನಾವಣೆಯಲ್ಲಿ ಗೆಲ್ಲುವುದು ಕಷ್ಟ ಅಂತ ಅಂದಾಜಿಸಲಾಗಿತ್ತು. ಆದರೆ ನಿನ್ನೆ ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ದಾಖಲಿಸಿದೆ. ಈ ಹಿನ್ನೆಲೆಯಲ್ಲಿ ಹಾಸನದಲ್ಲಿ ಡಿಸೆಂಬರ್ 5 ರಂದು ಸಿಎಂ ಸಿದ್ದರಾಮಯ್ಯ ಅವರ ಅಭಿಮಾನಿಗಳು ಬೃಹತ್ ಸಮಾವೇಶವನ್ನು ಹಮ್ಮಿಕೊಂಡಿದ್ದಾರೆ. ಹೌದು ಸಾಲು ಸಾಲು ಆರೋಪ, …

Read More »

ಬಿಜೆಪಿಗೆ ಸತತ 3ನೇ ಬಾರಿ ಜನಾದೇಶ ನೀಡಿದ 6ನೇ ರಾಜ್ಯ ಮಹಾರಾಷ್ಟ್ರ: ಪ್ರಧಾನಿ ಮೋದಿ

ನವದೆಹಲಿ: ನಾವು ಒಗ್ಗಟ್ಟಾಗಿದ್ದರೆ ಸುರಕ್ಷಿತವಾಗಿರುತ್ತೇವೆ (ಏಕ್ ಹೈ ತೊ ಸೇಫ್ ಹೈ) ಎಂಬುದು ಇಂದು ದೇಶದ ಮಹಾಮಂತ್ರವಾಗಿದೆ. ಹರ್ಯಾಣ ಮಹಾರಾಷ್ಟ್ರ ಇದನ್ನು ಸಾಬೀತು ಪಡಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಮಹಾರಾಷ್ಟ್ರದಲ್ಲಿ ಬಿಜೆಪಿ ಒಳಗೊಂಡ ಮಹಾಯುತಿ ಕೂಟ ಜಯಭೇರಿ ಬಾರಿಸಿದ ಬೆನ್ನಲ್ಲೇ ಪಕ್ಷದ ಪ್ರಧಾನ ಕಚೇರಿಯಲ್ಲಿ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಮೋದಿ, ಕಳೆದ 50 ವರ್ಷಗಳಲ್ಲಿ ಚುನಾವಣಾ ಪೂರ್ವ ಮೈತ್ರಿ ಇದೇ ಮೊದಲ ಬಾರಿ ಇಂತಹ ಅಭೂತಪೂರ್ವ ಗೆಲುವು ಸಾಧಿಸುವ …

Read More »

ಉಪಚುನಾವಣೆ ಗೆಲುವಿನೊಂದಿಗೆ ವಿಧಾನಸಭೆಯಲ್ಲಿ ಕಾಂಗ್ರೆಸ್ ಸದಸ್ಯ ಬಲ 138 ಕ್ಕೆ ಹೆಚ್ಚಳ

ಬೆಂಗಳೂರು: ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಜಯಗಳಿಸಿದೆ. ಇದರೊಂದಿಗೆ ಕಾಂಗ್ರೆಸ್ ಸದಸ್ಯ ಬಲ ವಿಧಾನಸಭೆಯಲ್ಲಿ 136 ರಿಂದ 138ಕ್ಕೆ ಹೆಚ್ಚಳವಾಗಿದೆ. ಜೆಡಿಎಸ್ ನ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಸಂಸದರಾಗಿ ಆಯ್ಕೆಯಾಗಿದ್ದರಿಂದ ಚನ್ನಪಟ್ಟಣ ಕ್ಷೇತ್ರ ತೆರವಾಗಿತ್ತು. ಬಿಜೆಪಿಯ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಸಂಸದರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಶಿಗ್ಗಾವಿ ಕ್ಷೇತ್ರ ತೆರವಾಗಿತ್ತು. ಜೆಡಿಎಸ್ ಮತ್ತು ಬಿಜೆಪಿ ಈ ಕ್ಷೇತ್ರಗಳನ್ನು ಕಳೆದುಕೊಂಡಿವೆ. ಈ. ತುಕಾರಾಂ ಸಂಸದರಾಗಿ ಆಯ್ಕೆಯಾಗಿದ್ದರಿಂದ …

Read More »

ಮುಡಾ, ವಕ್ಫ್ ನಂತಹ ಸುಳ್ಳು ಆರೋಪಗಳಿಗೆ ಜನರಿಂದ ತಕ್ಕ ಉತ್ತರ: ಸಚಿವ ಈಶ್ವರ್ ಖಂಡ್ರೆ

ಬೀದರ್ : ಮುಡಾ, ವಕ್ಫ್ ಬಗ್ಗೆ ಪ್ರತಿಪಕ್ಷಗಳು ನಮ್ಮ ಮೇಲೆ ಸುಳ್ಳು ಆರೋಪ ಮಾಡುತ್ತಿದ್ದು, ಆ ಸುಳ್ಳು ಆರೋಪಗಳಿಗೆ ಉಪ ಚುನಾವಣೆಯಲ್ಲಿ ಜನರು ತಕ್ಕ ಉತ್ತರ ಕೊಟ್ಟಿದ್ದಾರೆ ಎಂದು ರಾಜ್ಯದ ಅರಣ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಅವರು ಹೇಳಿದ್ದಾರೆ. ಜಿಲ್ಲೆಯ ಬಸವಕಲ್ಯಾಣದಲ್ಲಿ ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಮತದಾರರು ನಮ್ಮ ಕೈ ಹಿಡಿದಿದ್ದು, ಮೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಗೆ ಭರ್ಜರಿ ಗೆಲವು …

Read More »

ಯಾಸೀರ್ ಅಹಮದ್ ಖಾನ್ ಪಠಾಣ್ ಅವರಿಗೆ ಬೆಳಗಾವಿಯಲ್ಲಿ ಸನ್ಮಾನ

ಬೆಳಗಾವಿ: ಶಿಗ್ಗಾವಿ ವಿಧಾನಸಭೆ ಕ್ಷೇತ್ರದ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿದ ಕಾಂಗ್ರೆಸ್ ಅಭ್ಯರ್ಥಿ ಯಾಸೀರ ಅಹಮದ್ ಖಾನ್ ಪಠಾಣ ಇಲ್ಲಿನ ಕಾಂಗ್ರೆಸ್ ಭವನಕ್ಕೆ ಶನಿವಾರ ರಾತ್ರಿ ಆಗಮಿಸಿ, ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಭೇಟಿಯಾದರು. ಪಠಾಣ ಇಲ್ಲಿಗೆ ಬರುತ್ತಿದ್ದಂತೆ, ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದರು. ಪಕ್ಷದ ಗ್ರಾಮೀಣ ಜಿಲ್ಲಾ ಘಟಕದ ವತಿಯಿಂದಲೂ ಸನ್ಮಾನಿಸಲಾಯಿತು. 30 ವರ್ಷಗಳಿಂದ ವನವಾಸ ಅನುಭವಿಸುತ್ತಿದ್ದ ಶಿಗ್ಗಾವಿ ಕ್ಷೇತ್ರದಲ್ಲಿ ನನ್ನಂಥ ಸಾಮಾನ್ಯ ಕಾರ್ಯಕರ್ತನನ್ನು ಸತೀಶ ಜಾರಕಿಹೊಳಿ ಗೆಲ್ಲಿಸಿದ್ದಾರೆ. …

Read More »

ಸಚಿವ ಸಂತೋಷ್ ಲಾಡ್ ರ ಶ್ರಮ ಶ್ಲಾಘಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದ ಶಿಗ್ಗಾಂವಿ, ಚೆನ್ನಪಟ್ಟಣ ಹಾಗೂ ಸಂಡೂರು ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ ಮೂರೂ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. ವಿಶೇಷವಾಗಿ ಸಂಡೂರು ಕ್ಷೇತ್ರದಲ್ಲಿ ಮತ್ತೆ ಕಾಂಗ್ರೆಸ್‌ ತನ್ನ ಪ್ರಾಬಲ್ಯವನ್ನು ಮುಂದುವರಿಸಿದೆ. ಈ ಗೆಲುವಿಗೆ ಶ್ರಮಿಸಿದ ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಲಾಡ್‌ ಅವರನ್ನು ಮುಖ್ಯಮಂತ್ರಿಗಳು ಶ್ಲಾಘಿಸಿದ್ದಾರೆ. ಉಪ ಚುನಾವಣೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೃಹ ಕಚೇರಿ ಕೃಷ್ಣಾದಲ್ಲಿ ಮಾಧ್ಯಮಗೋಷ್ಠಿ ಹಮ್ಮಿಕೊಂಡಿದ್ದರು. ಈ ವೇಳೆ …

Read More »