Breaking News

BigTv News

ಮಡಿಕೇರಿ: ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ ಪ್ರಕ್ರಿಯೆಯ ದಿನಾಂಕ ಘೋಷಣೆ

ಮಡಿಕೇರಿ: ಕೊಡಗು ಜಿಲ್ಲೆಯ ರೈತರಿಗೆ ಜಿಲ್ಲಾಡಳಿತ ಸಿಹಿಸುದ್ದಿಯನ್ನು ನೀಡಿದೆ. ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ ಪ್ರಕ್ರಿಯೆಯ ದಿನಾಂಕ ಘೋಷಣೆ ಮಾಡಲಾಗಿದೆ. ಭತ್ತ ಮತ್ತು ರಾಗಿ ಖರೀದಿ ಮಾಡಲಾಗುತ್ತದೆ. ಸಾಮಾನ್ಯ ಭತ್ತ ಪ್ರತಿ ಕ್ವಿಂಟಾಲ್‌ಗೆ 2300 ರೂ.ನಿಗದಿಪಡಿಸಲಾಗಿದ್ದು, ರಾಗಿ ಪ್ರತಿ ಕ್ವಿಂಟಲ್‌ಗೆ 4,290 ರೂ. ಬೆಂಬಲ ಬೆಲೆಯನ್ನು ನಿಗದಿಪಡಿಸಲಾಗಿದೆ. ರೈತರು ಈ ಯೋಜನೆಯ ಸದುಪಯೋಗ ಪಡೆದುಕೊಂಡು ಉತ್ಪನ್ನಗಳನ್ನು ಮಾರಾಟ ಮಾಡಬಹುದು. ಮಡಿಕೇರಿ ನಗರದ ಜಿಲ್ಲಾಧಿಕಾರಿ ಕಛೇರಿ ಸಭಾಂಗಣದಲ್ಲಿ 2024-25ನೇ ಸಾಲಿನ …

Read More »

ಪಡಿತರ ಚೀಟಿಗಳ ಗೊಂದಲಕ್ಕೆ ಅಧಿಕಾರಿಗಳಲ್ಲ, ನಾನೇ ಹೊಣೆ: ಸಚಿವ ಮುನಿಯಪ್ಪ

ಬೆಂಗಳೂರು: ಪಡಿತರ ಚೀಟಿಗಳ ಗೊಂದಲಕ್ಕೆ ಅಧಿಕಾರಿಗಳಲ್ಲ, ನಾನೇ ಹೊಣೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಖಾತೆಯ ಸಚಿವ ಮುನಿಯಪ್ಪ ಹೇಳಿದ್ದಾರೆ. ಬಿಪಿಎಲ್‌ ಪಡಿತರ ಚೀಟಿಗಳ ರದ್ದತಿಗೆ ಸಂಬಂಧಿಸಿದಂತೆ ಎದ್ದ ಗೊಂದಲಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಇಂದು ಸುದ್ದಿಗೋಷ್ಠಿಯನ್ನು ಕರೆದಿದ್ದರು. ಈ ವೇಳೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರ ನೀಡಲು ಪೇಚಾಡಿದರು. ಮಾನದಂಡಗಳ ಅನ್ವಯ ಪರಿಶೀಲನೆ ಮಾಡಿ ಪರಿಷ್ಕರಣೆ ಮಾಡಲಾಗಿದೆ. ಕೇಂದ್ರ ಸರ್ಕಾರದ ನಿಯಮಗಳ ಅನ್ವಯ ಪರಿಷ್ಕರಿಸಲಾಗಿದೆ. ಅನರ್ಹ ಎಂಬ ಕಾರ್ಡ್​ಗಳನ್ನು …

Read More »

ದೇಶದ ಹಾಲು ಉತ್ಪಾದನೆಯಲ್ಲಿ ಕರ್ನಾಟಕಕ್ಕೆ 2 ನೇ ಸ್ಥಾನ: ಸಿಎಂ ಸಿದ್ದರಾಮಯ್ಯ

ನವದೆಹಲಿ: ದೇಶದ ಹಾಲು ಉತ್ಪಾದನೆಯಲ್ಲಿ ಗುಜರಾತ್ ಮೊದಲ ಸ್ಥಾನದಲ್ಲಿದ್ದರೆ ಕರ್ನಾಟಕ ಎರಡನೇ ಸ್ಥಾನದಲ್ಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ರಾಜಧಾನಿ ನವದೆಹಲಿಯಲ್ಲಿ ಕರ್ನಾಟಕ ಹಾಲು ಉತ್ಪಾದಕರ ಮಹಾಮಂಡಲ ಹಾಗೂ ಮಂಡ್ಯ ಜಿಲ್ಲಾ ಸಹಕಾರ ಹಾಲು ಒಕ್ಕೂಟ ನಿಯಮಿತದ ವತಿಯಿಂದ ನಂದಿನಿ ವಿವಿಧ ಶ್ರೇಣಿಯ ಹಾಲು ಬಿಡುಗಡೆ ಮಾಡಿ ಮಾತನಾಡಿದರು. ದೆಹಲಿ ನಗರದಲ್ಲಿ ಕೆ.ಎಂ.ಎಫ್ ಮತ್ತು ಮಂಡ್ಯ ಹಾಲು ಒಕ್ಕೂಟ ಸೇರಿ ವಿವಿಧ ಶ್ರೇಣಿಯ ಹಾಲನ್ನು ಮಾರುಕಟ್ಟೆಗೆ ಬಿಡುಗಡೆ …

Read More »

ಚಳಿಗಾಲ ಅಧಿವೇಶನಲ್ಲಿ ವಕ್ಫ್ ಮಸೂದೆ ಅಂಗೀಕಾರ: ಜೆಪಿಸಿ ಸಭೆಯಲ್ಲಿ ಇಂದು ಮಹತ್ವದ ನಿರ್ಧಾರ

ನವದೆಹಲಿ: ಮುಂಬರುವ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ವಿವಾದಾತ್ಮಕ ವಕ್ಫ್ (ತಿದ್ದುಪಡಿ) ಮಸೂದೆಯನ್ನು ಅಂಗೀಕರಿಸಲು ಭಾರತೀಯ ಜನತಾ ಪಾರ್ಟಿ ನೇತೃತ್ವದ ಎನ್‌ಡಿಎ ಸರ್ಕಾರ ಸಜ್ಜಾಗಿದೆ. ವಕ್ಫ್ (ತಿದ್ದುಪಡಿ) ಮಸೂದೆಯನ್ನು ಲೋಕಸಭೆಯಲ್ಲಿ ಮಂಡಿಸಲಾಯಿತು ಮತ್ತು ತೀವ್ರ ಚರ್ಚೆಯ ನಂತರ ಜಂಟಿ ಸಂಸದೀಯ ಸಮಿತಿಗೆ ಉಲ್ಲೇಖಿಸಲಾಯಿತು, ಪ್ರಸ್ತಾವಿತ ಕಾನೂನಿಗೆ ಮಸೀದಿಗಳ ಕಾರ್ಯನಿರ್ವಹಣೆಯಲ್ಲಿ ಹಸ್ತಕ್ಷೇಪ ಮಾಡುವ ಉದ್ದೇಶವಿಲ್ಲ ಎಂದು ಸರ್ಕಾರ ಪ್ರತಿಪಾದಿಸಿದೆ. ಈ ನಡುವೆ ಇಂದು ಜೆಪಿಸಿ ಸಭೆ ನಡೆಸಲಿದ್ದು, ಮಹತ್ವದ ನಿರ್ಧಾರ ಕೈಗೊಳ್ಳಲಿದೆ. ಪ್ರತಿಪಕ್ಷಗಳು …

Read More »

ಸರ್ಕಾರಿ ಆಸ್ಪತ್ರೆಗಳಲ್ಲಿ ಡಿ ಗ್ರೂಪ್ ಸಿಬ್ಬಂದಿಗೆ ನೇರ ಪಾವತಿಯಡಿ ತರಲು ಇಲಾಖೆ ತೀರ್ಮಾನ: ಸಚಿವ ದಿನೇಶ್ ಗುಂಡೂರಾವ್

ದಾವಣಗೆರೆ: ಸರ್ಕಾರಿ ಆಸ್ಪತ್ರೆಗಳಲ್ಲಿ ಡಿ ಗ್ರೂಪ್‌ ಸಿಬ್ಬಂದಿಯನ್ನು ನೇರ ಪಾವತಿಯಡಿ ತರಲು ಇಲಾಖೆ ಈಗಾಗಲೇ ತೀರ್ಮಾನಿಸಿ ಅನುಮೋದನೆಗಾಗಿ ಕಾನೂನು ಇಲಾಖೆಗೆ ಕಳುಹಿಸಲಾಗಿದೆ. ಅಲ್ಲಿಂದ ಅನುಮೋದನೆ ದೊರಕುವ ವಿಶ್ವಾಸವಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ತಿಳಿಸಿದರು. ಚಿಗಟೇರಿ ಆಸ್ಪತ್ರೆ ಆವರಣದಲ್ಲಿ 200 ಹಾಸಿಗೆಯ ಮಹಿಳೆ ಮತ್ತು ಮಕ್ಕಳ ಆಸ್ಪತ್ರೆ, ಟ್ರಾಮಾ ಕೇರ್‌ ಸೆಂಟರ್‌ ಉದ್ಘಾಟಿಸಿ ಮಾತನಾಡಿದ ಅವರು, ನೇರ ಪಾವತಿಗೆ ಕಾನೂನು ಇಲಾಖೆಯಿಂದ ಅನುಮೋದನೆ ದೊರೆತರೆ ಆರೋಗ್ಯ ಇಲಾಖೆಯ ಎಲ್ಲ …

Read More »

ತೆರಿಗೆ ಪಾವತಿಸುವವರಿಗೆ ಇನ್ಮುಂದೆ ಗೃಹಲಕ್ಷ್ಮೀ ಹಣ ಸಿಗಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬೆಳಗಾವಿ: ಬಿಪಿಎಲ್ ಕಾರ್ಡ್‌ ರದ್ದು ಆಗುತ್ತಿರುವ ಬೆನ್ನಲ್ಲೇ ಇದೀಗ ತೆರಿಗೆ ಕಟ್ಟುವವರಿಗೆ ಗೃಹಲಕ್ಷ್ಮಿ ಹಣ ಸಿಗಲ್ಲ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ ಅವರು ಹೇಳಿಕೆ ಮಹಿಳೆಯರಿಗೆ ನಿರಾಸೆ ಮೂಡಿಸಿದೆ. ಬಿ‍ಪಿಎಲ್ ಕಾರ್ಡ್ ರದ್ದುಗೊಳಿಸುತ್ತಿರುವ ವಿಚಾರವಾಗಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ಎ‍ಪಿಎಲ್‌ ಮತ್ತು ಬಿಪಿಎಲ್ ಪಡಿತರ ಚೀಟಿ ಹೊಂದಿದವರಲ್ಲಿ ಯಾರು ಆದಾಯ ತೆರಿಗೆ ಕಟ್ಟುವುದಿಲ್ಲವೋ, ಅಂಥವರಿಗೆ ಗೃಹಲಕ್ಷ್ಮಿ ಯೋಜನೆ ಹಣ ಬರುತ್ತದೆ. ತೆರಿಗೆ ಕಟ್ಟುವವರಿಗೆ ಮಾತ್ರ ಬರುವುದಿಲ್ಲ ಎಂದು ಸ್ಪಷ್ಟಪಡಿಸಿದರು. ರಾಜ್ಯದಲ್ಲಿ …

Read More »

ಅರ್ಹ ಫಲಾನುಭವಿಗಳಿಗೆ ಒಂದು ವಾರದಲ್ಲಿ ಮತ್ತೆ ಬಿಪಿಎಲ್ ಕಾರ್ಡ್ ಮರುಹಂಚಿಕೆ: ಸಚಿವ ಮುನಿಯಪ್ಪ ಸ್ಪಷ್ಟನೆ

ಬೆಂಗಳೂರು : ಬಿಪಿಎಲ್ ಕಾರ್ಡ್ ಪರಿಷ್ಕರಣೆ ಹಿನ್ನೆಲೆಯಲ್ಲಿ ಅರ್ಹ ಫಲಾನುಭವಿಗಳ ಕೆಲವು ಬಿಪಿಎಲ್ ಕಾರ್ಡ್ ಗಳು ರದ್ದಾಗಿರುವ ಹಿನ್ನೆಲೆಯಲ್ಲಿ, ಅಂತಹ ಅರ್ಹ ಫಲಾನುಭವಿಗಳಿಗೆ ಒಂದು ವಾರದಲ್ಲಿ ಬಿಪಿಎಲ್ ಕಾರ್ಡ್ ಗಳನ್ನು ಮರುಹಂಚಿಕೆ ಮಾಡಲಾಗುತ್ತದೆ ಎಂದು ಆಹಾರ ಇಲಾಖೆ ಸಚಿವ ಕೆಎಚ್ ಮುನಿಯಪ್ಪ ಸ್ಪಷ್ಟನೆ ನೀಡಿದರು. ಇಂದು ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರ ಅರ್ಹರ ಬಿಪಿಎಲ್ ಕಾರ್ಡ್ಗಳನ್ನು ರದ್ದುಪಡಿಸಿಲ್ಲ ಆದಾಯ ತೆರಿಗೆದಾರರ ಮಾಹಿತಿ ಪಡೆದು ಅಂಥವರ ಕಾರ್ಡ್ ಗಳನ್ನು ರದ್ದುಪಡಿಸಲಾಗಿದೆ. …

Read More »

ವಕ್ಫ್ ಆಸ್ತಿ, ಬಿಪಿಎಲ್ ಕಾರ್ಡ್: ಡಿ.1 ರಂದು ಬಿಜೆಪಿ ಕಚೇರಿಗೆ ಕಾಂಗ್ರೆಸ್​ ನಿಯೋಗ ಭೇಟಿ

ಮೈಸೂರು: ವಕ್ಫ್‌ ಆಸ್ತಿ ವಿಚಾರದಲ್ಲಿ ಬಿಜೆಪಿಯವರು ಸುಳ್ಳು ಹೇಳುತ್ತಿರುವುದನ್ನು ಸಾಬೀತುಪಡಿಸಲು ಹಾಗೂ ಬಿಪಿಎಲ್ ಕಾರ್ಡ್ ವಿತರಣೆಗೆ ಕೇಂದ್ರ ಸರ್ಕಾರ ನಿಗಪಡಿಸಿರುವ ಮಾನದಂಡಗಳ ಬಗ್ಗೆ ದಾಖಲೆಗಳ ಸಹಿತ ಚರ್ಚೆಗಾಗಿ ಕಾಂಗ್ರೆಸ್ ನಿಯೋಗವು ಡಿ.1ರಂದು ಬೆಂಗಳೂರಿನ ಮಲ್ಲೇಶ್ವರದ ಬಿಜೆಪಿ ಕಚೇರಿಗೆ ಭೇಟಿ ನೀಡಲಿದೆ ಎಂದು ಕಾಂಗ್ರೆಸ್‌ ಗ್ರಾಮಾಂತರ ಜಿಲ್ಲಾ ಸಮಿತಿಯ ಅಧ್ಯಕ್ಷ ಬಿ.ಜೆ.ವಿಜಯ್‌ಕುಮಾರ್ ತಿಳಿಸಿದರು. ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಮಧ್ಯಾಹ್ನ 12ಕ್ಕೆ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ, ನಾನು ಹಾಗೂ ಮುಖಂಡರು …

Read More »

ರಾಜ್ಯ ಸರ್ಕಾರದ ಅಲ್ಪಾವಧಿ ಕೃಷಿ ಸಾಲದ ಮಿತಿ ಹೆಚ್ಚಿಸುವಂತೆ ನಿರ್ಮಲಾ ಸೀತಾರಾಮನ್ ಅವರಿಗೆ ಸಿಎಂ ಮನವಿ

ಬೆಂಗಳೂರು: ಕರ್ನಾಟಕ ರಾಜ್ಯಸರ್ಕಾರದ ಅಲ್ಪಾವಧಿ ಕೃಷಿ ಸಾಲದ ಮಿತಿಯನ್ನು ಹೆಚ್ಚಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿಗೆ ಮನವಿ ಮಾಡಿದ್ದಾರೆ. ದೆಹಲಿಯಲ್ಲಿ ಕೇಂದ್ರ ಸಚಿವರನ್ನು ಭೇಟಿ ಮಾಡಿರುವ ಅವರು, ಕಳೆದ ಆರು ವರ್ಷದ ಕೃಷಿ ಸಾಲದ ವಹಿವಾಟನ್ನು ನಿರ್ವಹಿಸಿದ್ದಾರೆ. 2024-25ನೇ ಸಾಲಿನಲ್ಲಿ 9,162 ಕೋಟಿ ರೂ.ಗಳ ರಿಯಾಯಿತಿ ಸಾಲದ ಮಿತಿಗೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಆದರೆ ನಬಾರ್ಡ್‌ 2,340 ಕೋಟಿ ರೂ.ಗಳಿಗೆ ಮಾತ್ರ ಅನುಮೋದನೆ ನೀಡಿದೆ. ಇದು …

Read More »

ಬಿಪಿಎಲ್ ಕಾರ್ಡ್ ಫಲಾನುಭವಿಗಳ ಅರ್ಹರ ಹೆಸರು ಪುನರ್ ಸೇರ್ಪಡೆ: ರಾಜ್ಯ ಆಹಾರ ಆಯೋಗ

ಮಂಡ್ಯ: ಬಿಪಿಎಲ್ ಕಾರ್ಡ್‍ದಾರರ ಪರಿಷ್ಕರಣೆ ಸಂದರ್ಭದಲ್ಲಿ ಅರ್ಹ ಫಲಾನುಭವಿಗಳ ಹೆಸರು ಕೈಬಿಟ್ಟು ಹೋಗಿದ್ದು, ಇನ್ನೊಂದು ವಾರದ ಒಳಗೆ ಅವರ ಹೆಸರುಗಳನ್ನು ಪುನರ್ ಸೇರ್ಪಡೆ ಮಾಡಲಾಗುವುದು ರಾಜ್ಯ ಆಹಾರ ಆಯೋಗದ ಅಧ್ಯಕ್ಷ ಡಾ.ಕೃಷ್ಣ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ನಗರದಲ್ಲಿ ಸ್ವಂತ ಮನೆಯುಳ್ಳವರು, ಕಾರು ಹೊಂದಿರುವವರು, ಆದಾಯ ತೆರಿಗೆ ಪಾವತಿಸುವ ಲಕ್ಷಾಂತರ ಜನರು ಬಿಪಿಎಲ್ ಕಾರ್ಡ್ ಬಳಕೆ ಮಾಡುತ್ತಿದ್ದರು. ಇಂಥವರನ್ನು ಅನರ್ಹಗೊಳಿಸುವ ಸಂದರ್ಭದಲ್ಲಿ ಕೆಲ ಅರ್ಹ ಫಲಾನುಭವಿಗಳ ಹೆಸರುಗಳು ಸಹ ಬಿಪಿಎಲ್ …

Read More »