Breaking News

BigTv News

ಯಾವುದೇ ಪಡಿತರ ಚೀಟಿ ರದ್ದು ಪಡಿಸದಂತೆ ಅಧಿಕಾರಿಗಳಿಗೆ ಸಿಎಂ ಕಟ್ಟುನಿಟ್ಟಿನ ಸೂಚನೆ

ಬೆಂಗಳೂರು: ಅನರ್ಹ ಬಿಪಿಎಲ್‌ ಪಡಿತರ ಚೀಟಿಗಳ ರದ್ದತಿ ಸಂಬಂಧ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಕ್ರಮ ಕೈಗೊಂಡಿರುವುದು ಬಿಜೆಪಿಗೆ ರಾಜಕೀಯ ಅಸ್ತ್ರವಾಗಿ ಪರಿಣಮಿಸಿರುವ ಹಿನ್ನೆಲೆಯಲ್ಲಿ ಎಚ್ಚೆತ್ತ ಕಾಂಗ್ರೆಸ್‌ ಸರ್ಕಾರ ಯಾವುದೆ ಪಡಿತರ ಚೀಟಿ ರದ್ದು ಪಡಿಸದಂತೆ ಆದೇಶ ನೀಡಿದೆ. ಇಂದು ಬೆಳಿಗ್ಗೆ ಪ್ರಕಟಣೆ ಹೊರಡಿಸಿರುವ ಮುಖ್ಯಮಂತ್ರಿ ಸಚಿವಾಲಯ “ಸರ್ಕಾರಿ ನೌಕರರು ಮತ್ತು ಆದಾಯ ತೆರಿಗೆ ಪಾವತಿಸುವವರನ್ನು ಹೊರತುಪಡಿಸಿ ಉಳಿದಂತೆ ಯಾರೊಬ್ಬರ ಪಡಿತರ ಚೀಟಿ ರದ್ದು ಮಾಡದಂತೆ,” ಸ್ಪಷ್ಟ ಸೂಚನೆ …

Read More »

ಗಯಾನಾದ ಸಂಸತ್ತಿನಲ್ಲಿ ಅಧಿವೇಶನವನ್ನುದ್ದೇಶಿಸಿ ಪ್ರಧಾನಿ ಮೋದಿ ವಿಶೇಷ ಭಾಷಣ

ಗಯಾನಾ: ಪ್ರಧಾನಿ ನರೇಂದ್ರ ಮೋದಿ ಗಯಾನಾ ಪ್ರವಾಸದಲ್ಲಿದ್ದಾರೆ, ಇಂದು ಗಯಾನಾದ ಸಂಸತ್ತಿನಲ್ಲಿ ವಿಶೇಷ ಅಧಿವೇಶನವನ್ನುದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಲಿದ್ದಾರೆ. ಪ್ರಧಾನಿ ಮೋದಿ ವಿದೇಶಿ ರಾಷ್ಟ್ರಗಳ ಸಂಸತ್ತಿನಲ್ಲಿ ಭಾರತದ ಜನರ ಪರವಾಗಿ ಮಾಡುತ್ತಿರುವ 14 ಭಾಷಣ ಇದಾಗಿದೆ. ವಿದೇಶಿ ಸಂಸತ್ತುಗಳಿಗೆ ಅತಿ ಹೆಚ್ಚು ಭಾಷಣ ಮಾಡಿದ ಭಾರತೀಯ ಪ್ರಧಾನಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಮನಮೋಹನ್​ ಸಿಂಗ್ ವಿದೇಶಿ ಸಂಸತ್ತುಗಳಲ್ಲಿ 7 ಬಾರಿ ಭಾಷಣ ಮಾಡಿದ್ದರು. ಇಂದಿರಾಗಾಂಧಿ ವಿದೇಶಿ ಶಾಸಕರನ್ನು ಉದ್ದೇಶಿಸಿ ನಾಲ್ಕು …

Read More »

ಪಿಡಿಒ ಪ್ರಶ್ನೆ ಪತ್ರಿಕೆ ಸೋರಿಕೆ ಕುರಿತು ಕೆಪಿಎಸ್‌ಸಿ ಸ್ಪಷ್ಟನೆ

ಬೆಂಗಳೂರು: ಕಲ್ಯಾಣ ಕರ್ನಾಟಕ ವೃಂದದ 97 ಪಂಚಾಯತಿ ಅಭಿವೃದ್ಧಿ ಅಧಿಕಾರಿ(ಪಿಡಿಒ) ಹುದ್ದೆಗಳ ನೇಮಕಾತಿಗೆ ನವೆಂಬರ್ 17ರಂದು ನಡೆದ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾಗಿಲ್ಲ ಎಂದು ಕರ್ನಾಟಕ ಲೋಕಸೇವಾ ಆಯೋಗ(ಕೆಪಿಎಸ್‌ಸಿ) ಕಾರ್ಯದರ್ಶಿ ರಮಣದೀಪ್ ಚೌಧರಿ ತಿಳಿಸಿದ್ದಾರೆ. ಈ ಬಗ್ಗೆ ನಡೆಸಲಾದ ಪ್ರಾಥಮಿಕ ವಿಚಾರಣೆಯಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿಲ್ಲ ಎನ್ನುವ ಅಂಶ ತಿಳಿದು ಬಂದಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. ರಾಯಚೂರು ಜಿಲ್ಲೆ ಸಿಂಧನೂರಿನ ಪರೀಕ್ಷಾ ಕೇಂದ್ರದಲ್ಲಿ ನಡೆದ ಪರೀಕ್ಷೆಯ ವೇಳೆ ಪ್ರಶ್ನೆ …

Read More »

ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಸಿಹಿಸುದ್ದಿ: ಶೀಘ್ರವೇ 15 ಸಾವಿರ ಹುದ್ದೆಗಳ ನೇಮಕಾತಿ

ಬೆಂಗಳೂರು: ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಕರ್ನಾಟಕ ಸರ್ಕಾರವು ಭರ್ಜರಿ ಗುಡ್‌ ನ್ಯೂಸ್‌ ನೀಡಿದೆ. ಶೀಘ್ರವೇ 15 ಸಾವಿರ ಶಿಕ್ಷಕರ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ನಿರ್ಧರಿಸಲಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ತಿಳಿಸಿದ್ದಾರೆ. ಈ ಕುರಿತು ಮಾಧ್ಯಮಗಳ ಮೂಲಕ ಮಾಹಿತಿ ನೀಡಿರುವ ಸಚಿವ ಮಧು ಬಂಗಾರಪ್ಪ ಅವರು, ರಾಜ್ಯದ ಕಾಲೇಜುಗಳಲ್ಲಿ 800 ವಿಜ್ಞಾನ ಉಪನ್ಯಾಸಕರ ಹುದ್ದೆಗಳು ಹಾಗೂ 15000 ಶಾಲಾ ಶಿಕ್ಷಕರ ಹುದ್ದೆಗಳ ಭರ್ತಿಗೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಶೀಘ್ರವೇ …

Read More »

ರಾಜ್ಯದಲ್ಲಿ 17.61 ಲಕ್ಷ ರೈತರಿಗೆ ₹2021.17 ಕೋಟಿ ರೂ. ಬೆಳೆ ವಿಮೆ ಪರಿಹಾರ: ಸಚಿವ ಚಲುವರಾಯಸ್ವಾಮಿ

ಬೆಂಗಳೂರು: ರಾಜ್ಯದಲ್ಲಿ 2023-24ನೇ ಸಾಲಿನಲ್ಲಿ ಒಟ್ಟು 17.61 ಲಕ್ಷ ರೈತರಿಗೆ ₹2021.17 ಕೋಟಿ ಮೊತ್ತದ ಬೆಳೆ ವಿಮೆ ಪರಿಹಾರ ನೀಡಲಾಗಿದೆ ಎಂದು ಕೃಷಿ ಸಚಿವ ಎನ್‌. ಚಲುವರಾಯಸ್ವಾಮಿ ತಿಳಿಸಿದರು. ಕೃಷಿ ಮತ್ತು ಜಲಾನಯನ ಅಭಿವೃದ್ಧಿ ಇಲಾಖೆಯ ಪ್ರಗತಿ ಪರಿಶೀಲನೆಯ ಬಳಿಕ ಮಾತನಾಡಿದ ಅವರು, ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ 22.97 ಲಕ್ಷ ರೈತರು 17.60 ಲಕ್ಷ ಹೆಕ್ಟೇರ್ ಪ್ರದೇಶಕ್ಕೆ ಬೆಳೆ ವಿಮೆ ನೋಂದಣಿ ಮಾಡಿಕೊಂಡಿದ್ದಾರೆ. ಹಿಂಗಾರು ಹಂಗಾಮಿನಲ್ಲಿ ಈವರೆಗೆ 25,148 ರೈತರು …

Read More »

ಬೀದರ್ ಜಿಲ್ಲೆಗೆ 10 ಕೋಟಿ ರೂ. ಮುಂಗಾರು ಹಂಗಾಮಿನ ಬೆಳೆ ಪರಿಹಾರ ಬಿಡುಗಡೆ: ಸಚಿವ ಈಶ್ವರ್ ಖಂಡ್ರೆ

ಬೀದರ್ : ಪ್ರಸಕ್ತ 2024-25ನೇ ಸಾಲಿನ ಮುಂಗಾರು ಹಂಗಾಮಿಗೆ ಜಿಲ್ಲೆಯಲ್ಲಿ 17,460 ಹೆಕ್ಟರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದ್ದು, ಸರಕಾರವು 13.76 ಕೋಟಿ ರೂ.ಗಳ ಪೈಕಿ 10 ಕೋಟಿ ರೂ. ಪರಿಹಾರ ಬಿಡುಗಡೆ ಮಾಡಿದ್ದು ರೈತರ ಖಾತೆಗಳಿಗೆ ನೇರವಾಗಿ ಡಿಬಿಟಿ ಮೂಲಕ ಜಮೆಯಾಗಲಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು ಹಾಗೂ ಬೀದರ್ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ್‌ ಖಂಡ್ರೆ ಹೇಳಿದ್ದಾರೆ. ಅವರು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜರುಗಿದ ತ್ರೈಮಾಸಿಕ …

Read More »

ಶೀಘ್ರವೇ ಸರ್ಕಾರಿ ಜಾಗ ಒತ್ತುವರಿಯನ್ನು ಹಂತ ಹಂತವಾಗಿ ತೆರವುಗೊಳಿಸಲಾಗುವುದು: ಡಿಸಿ ನಿತಿಶ್ ಕೆ.

ರಾಯಚೂರು : ಇಲ್ಲಿನ ಸಂತೋಷನಗರದಲ್ಲಿ ಸರಕಾರಿ ಶಾಲೆಯ ಜಾಗದಲ್ಲಿ ಅಕ್ರಮ ಕಟ್ಟಡ ತೆರವುಗೊಳಿಸಿದ್ದ ಬೆನ್ನಲ್ಲೇ ಜಿಲ್ಲೆಯಲ್ಲಿರುವ ಸರಕಾರಿ ಜಾಗ ಒತ್ತುವರಿ ಮಾಡಿದ್ದನ್ನು ಹಂತ ಹಂತವಾಗಿ ತೆರವುಗೊಳಿಸಲಾಗುವುದು ಎಂದು ಜಿಲ್ಲಾಧಿಕಾರಿ ನಿತಿಶ್ ಕೆ. ತಿಳಿಸಿದ್ದಾರೆ. ಇಂದು ಸಂಜೆ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂತೋಷನಗರದಲ್ಲಿ ಖಾಸಗಿ ವ್ಯಕ್ತಿಯೊಬ್ಬರು ಸರಕಾರಿ ಪ್ರೌಢ ಶಾಲಾ ನಿರ್ಮಾಣಕ್ಕೆ ಕಾಯ್ದಿರಿಸಿದ ಜಾಗವನ್ನು ಕಬಳಿಸಿ ಅಕ್ರಮ ಶೆಡ್ ನಿರ್ಮಿಸಿಕೊಂಡು ಎರಡು ಮೂರ್ತಿಗಳನ್ನು ಇಟ್ಟು ದೇವಸ್ಥಾನದ ರೂಪ ನೀಡಿದ್ದರು ಎಂದು ಸ್ಪಷ್ಟಪಡಿಸಿದರು. …

Read More »

ಎಪಿಎಲ್ ಬಿಪಿಎಲ್ ಕಾರ್ಡ್ ಇದ್ದವರಿಗೆ ಗೃಹಲಕ್ಷ್ಮಿ ಹಣ ಬರುತ್ತೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟನೆ

ಬೆಳಗಾವಿ : 80 ಸಾವಿರ ಬಿಪಿಎಲ್ ಕಾರ್ಡ್ ಗಳನ್ನ ರದ್ದತಿ ಮಾಡುವ ಬದಲಿಗೆ ಎಪಿಎಲ್ ಗೆ ವರ್ಗಾವಣೆ ಮಾಡಲಾಗಿದೆ. ವರ್ಗಾವಣೆ ಮಾಡಿರುವುದರಿಂದ ಯಾವುದೇ ಗೊಂದಲ ಇಲ್ಲ, ಎಪಿಎಲ್, ಬಿಪಿಎಲ್ ಇದ್ದವರಿಗೆ ಗೃಹಲಕ್ಷ್ಮೀ ಹಣ ಬಂದೇ ಬರುತ್ತೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ಈ ಮೂಲಕ ಗೃಹ ಲಕ್ಷ್ಮಿ ಹಣ ಸ್ಥಗಿತದ ಆತಂಕದಲ್ಲಿ ಇದ್ದವರಿಗೆ ನೆಮ್ಮದಿಯ ನಿಟ್ಟುಸಿರುವು ಬಿಡುವಂತೆ ಮಾಡಿದ್ದಾರೆ. ರಾಜ್ಯದಲ್ಲಿ ಬಿಪಿಎಲ್ …

Read More »

ರಾಜಕೀಯ ರಹಿತವಿದ್ದಾಗ ಮಾತ್ರ ಸಹಕಾರ ಕ್ಷೇತ್ರ ವಿಶ್ವಾಸಾರ್ಹವಾಗಿ ಬೆಳೆಯಲು ಸಾಧ್ಯ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬೆಳಗಾವಿ : ನಮ್ಮಿಂದ ನೀವು, ನಿಮ್ಮಿಂದ ನಾವು ಎನ್ನುವುದೇ ಸಹಕಾರಿ ತತ್ವ. ಸಹಕಾರಿ ಕ್ಷೇತ್ರ ಬೆಳೆದರೆ ರಾಜ್ಯ ಬೆಳೆಯುತ್ತದೆ, ದೇಶ ಬೆಳೆಯುತ್ತದೆ ರಾಜಕೀಯ ರಹಿತವಿದ್ದಾಗ ಮಾತ್ರ ಸಹಕಾರ ಕ್ಷೇತ್ರ ವಿಶ್ವಾಸಾರ್ಹವಾಗಿ ಬೆಳೆಯಲು ಸಾಧ್ಯ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ. ಇಂದು ಇಲ್ಲಿನ ಕೆಎಲ್‌ಇ ಸಂಸ್ಥೆಯ ಜಿಎನ್‌ಎಂಸಿ ಡಾ.ಬಿ.ಎಸ್ ಜೀರಗೆ ಸಭಾಂಗಣದಲ್ಲಿ ನಡೆದ 71ನೆ ಅಖಿಲ ಭಾರತ ಸಹಕಾರ ಸಪ್ತಾಹ ಸಮಾರೋಪ ಕಾರ್ಯಕ್ರಮದಲ್ಲಿ …

Read More »

ಬೆಳಗಾವಿಯಲ್ಲಿ ಚಳಿಗಾಲ ಅಧಿವೇಶನ ಕುರಿತು ಪೂರ್ವಸಿದ್ಧತಾ ಸಭೆ

ಬೆಳಗಾವಿ: ಪ್ರಸಕ್ತ ಸಾಲಿನ ವಿಧಾನಮಂಡಳ ಚಳಿಗಾಲ ಅಧಿವೇಶನ ಡಿ.9 ರಿಂದ ನಡೆಯಲಿದೆ. ಅಧಿವೇಶನ ಸಂದರ್ಭದಲ್ಲಿ ಸಮರ್ಪಕ ವಸತಿ, ಸಾರಿಗೆ, ಊಟ, ಉಪಾಹಾರ ವ್ಯವಸ್ಥೆ ಕಲ್ಪಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ‌ ಕಚೇರಿ ಸಭಾಂಗಣದಲ್ಲಿ ಇಂದು ಜರುಗಿದ ಅಧಿವೇಶನದ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಈ ಬಾರಿಯ ಚಳಿಗಾಲದ ಅಧಿವೇಶನ ಸಿದ್ಧತೆಗೆ ಕಡಿಮೆ ಸಮಯಾವಕಾಶವಿದೆ. ಅಧಿವೇಶನ ಯಶಸ್ವಿಗಾಗಿ ಅಧಿಕಾರಿಗಳು, …

Read More »