Breaking News

BigTv News

ಎಪಿಎಲ್ ಬಿಪಿಎಲ್ ಕಾರ್ಡ್ ಇದ್ದವರಿಗೆ ಗೃಹಲಕ್ಷ್ಮಿ ಹಣ ಬರುತ್ತೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟನೆ

ಬೆಳಗಾವಿ : 80 ಸಾವಿರ ಬಿಪಿಎಲ್ ಕಾರ್ಡ್ ಗಳನ್ನ ರದ್ದತಿ ಮಾಡುವ ಬದಲಿಗೆ ಎಪಿಎಲ್ ಗೆ ವರ್ಗಾವಣೆ ಮಾಡಲಾಗಿದೆ. ವರ್ಗಾವಣೆ ಮಾಡಿರುವುದರಿಂದ ಯಾವುದೇ ಗೊಂದಲ ಇಲ್ಲ, ಎಪಿಎಲ್, ಬಿಪಿಎಲ್ ಇದ್ದವರಿಗೆ ಗೃಹಲಕ್ಷ್ಮೀ ಹಣ ಬಂದೇ ಬರುತ್ತೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ಈ ಮೂಲಕ ಗೃಹ ಲಕ್ಷ್ಮಿ ಹಣ ಸ್ಥಗಿತದ ಆತಂಕದಲ್ಲಿ ಇದ್ದವರಿಗೆ ನೆಮ್ಮದಿಯ ನಿಟ್ಟುಸಿರುವು ಬಿಡುವಂತೆ ಮಾಡಿದ್ದಾರೆ. ರಾಜ್ಯದಲ್ಲಿ ಬಿಪಿಎಲ್ …

Read More »

ರಾಜಕೀಯ ರಹಿತವಿದ್ದಾಗ ಮಾತ್ರ ಸಹಕಾರ ಕ್ಷೇತ್ರ ವಿಶ್ವಾಸಾರ್ಹವಾಗಿ ಬೆಳೆಯಲು ಸಾಧ್ಯ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬೆಳಗಾವಿ : ನಮ್ಮಿಂದ ನೀವು, ನಿಮ್ಮಿಂದ ನಾವು ಎನ್ನುವುದೇ ಸಹಕಾರಿ ತತ್ವ. ಸಹಕಾರಿ ಕ್ಷೇತ್ರ ಬೆಳೆದರೆ ರಾಜ್ಯ ಬೆಳೆಯುತ್ತದೆ, ದೇಶ ಬೆಳೆಯುತ್ತದೆ ರಾಜಕೀಯ ರಹಿತವಿದ್ದಾಗ ಮಾತ್ರ ಸಹಕಾರ ಕ್ಷೇತ್ರ ವಿಶ್ವಾಸಾರ್ಹವಾಗಿ ಬೆಳೆಯಲು ಸಾಧ್ಯ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ. ಇಂದು ಇಲ್ಲಿನ ಕೆಎಲ್‌ಇ ಸಂಸ್ಥೆಯ ಜಿಎನ್‌ಎಂಸಿ ಡಾ.ಬಿ.ಎಸ್ ಜೀರಗೆ ಸಭಾಂಗಣದಲ್ಲಿ ನಡೆದ 71ನೆ ಅಖಿಲ ಭಾರತ ಸಹಕಾರ ಸಪ್ತಾಹ ಸಮಾರೋಪ ಕಾರ್ಯಕ್ರಮದಲ್ಲಿ …

Read More »

ಬೆಳಗಾವಿಯಲ್ಲಿ ಚಳಿಗಾಲ ಅಧಿವೇಶನ ಕುರಿತು ಪೂರ್ವಸಿದ್ಧತಾ ಸಭೆ

ಬೆಳಗಾವಿ: ಪ್ರಸಕ್ತ ಸಾಲಿನ ವಿಧಾನಮಂಡಳ ಚಳಿಗಾಲ ಅಧಿವೇಶನ ಡಿ.9 ರಿಂದ ನಡೆಯಲಿದೆ. ಅಧಿವೇಶನ ಸಂದರ್ಭದಲ್ಲಿ ಸಮರ್ಪಕ ವಸತಿ, ಸಾರಿಗೆ, ಊಟ, ಉಪಾಹಾರ ವ್ಯವಸ್ಥೆ ಕಲ್ಪಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ‌ ಕಚೇರಿ ಸಭಾಂಗಣದಲ್ಲಿ ಇಂದು ಜರುಗಿದ ಅಧಿವೇಶನದ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಈ ಬಾರಿಯ ಚಳಿಗಾಲದ ಅಧಿವೇಶನ ಸಿದ್ಧತೆಗೆ ಕಡಿಮೆ ಸಮಯಾವಕಾಶವಿದೆ. ಅಧಿವೇಶನ ಯಶಸ್ವಿಗಾಗಿ ಅಧಿಕಾರಿಗಳು, …

Read More »

ಅರ್ಹರಲ್ಲದ ಬಿಪಿಎಲ್ ಕಾರ್ಡ್ ಮಾತ್ರ ರದ್ದು: ಸಚಿವ ಕೆ.ಎಚ್.ಮುನಿಯಪ್ಪ

ಕೋಲಾರ : ಅರ್ಹರಲ್ಲದ ಬಿಪಿಎಲ್ ಕಾರ್ಡ್ ಮಾತ್ರ ರದ್ದಾಗುವುದು ಎಂದು ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ ಸ್ಪಷ್ಟನೆ ನೀಡಿದ್ದಾರೆ. ಕೋಲಾರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಪಿಎಲ್ಗೆ ಅರ್ಹರಲ್ಲದ ಕಾರ್ಡ್ ಗಳು ಮಾತ್ರ ಬದಲಾವಣೆ ಆಗುತ್ತೆ. ಬಿಪಿಎಲ್ ಕಾರ್ಡ್ ರದ್ದು ಮಾಡಲ್ಲ, ಅವರನ್ನು ಎಪಿಎಲ್ ಕಾರ್ಡ್ ಗೆ ಬದಲಾವಣೆ ಮಾಡ್ತೇವೆ. ದಕ್ಷಿಣ ಭಾರತದ ರಾಜ್ಯಗಳಲ್ಲಿ ಶೇ.50ಕ್ಕೂ ಹೆಚ್ಚು ಬಿಪಿಎಲ್ ಕಾರ್ಡ್ ಇಲ್ಲ. ಕರ್ನಾಟಕ ಆರ್ಥಿಕವಾಗಿ ಸುಭದ್ರವಿರುವ ರಾಜ್ಯ, ತೆರಿಗೆ ಪಾವತಿಯಲ್ಲಿ ಎರಡನೇ ಸ್ಥಾನದಲ್ಲಿದ್ದೇವೆ. …

Read More »

ಸಂವಿಧಾನ ಸನ್ಮಾನ ಅಭಿಯಾನ ಕಾರ್ಯಾಗಾರಕ್ಕೆ ಸಂಸದ ಗೋವಿಂದ ಕಾರಜೋಳ ಚಾಲನೆ

ಬೆಂಗಳೂರು: ಎಸ್‌ಸಿ, ಎಸ್‌ಟಿ ವಿಷಯಗಳು, ಪ್ರಶ್ನೆಗಳಿಗೆ ಅದೇ ಸಮುದಾಯದ ರಾಜಕೀಯ ಮುಖಂಡರೇ ಉತ್ತರಿಸಬೇಕೆಂದಿಲ್ಲ. ಪಕ್ಷದ ಎಲ್ಲ ಮುಖಂಡರು ಹೊಣೆಗಾರಿಕೆಯಾಗಿದೆ ಎಂದು ಸಂಸದ ಗೋವಿಂದ ಕಾರಜೋಳ ಸಲಹೆ ನೀಡಿದರು. ಪಕ್ಷದ ರಾಜ್ಯ ಕಚೇರಿಯಲ್ಲಿ ಏರ್ಪಡಿಸಿದ್ದ ಸಂವಿಧಾನ ಸನ್ಮಾನ ಅಭಿಯಾನ ರಾಜ್ಯಮಟ್ಟದ ಕಾರ್ಯಾಗಾರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಸಂವಿಧಾನವೆಂದರೆ ಎಸ್‌ಸಿ, ಎಸ್‌ಟಿಗೆ ಮಾತ್ರ ಸೀಮಿತವಾದದ್ದು ಎಂದು ಕಾಂಗ್ರೆಸ್ ಬಿಂಬಿಸುತ್ತಾ ಬಂದಿದ್ದು ಅದೇ ತಪ್ಪು ನಮ್ಮ ಪಕ್ಷದಿಂದಾಗಬಾರದು ಎಂದರು. ಎಸ್‌ಸಿ, ಎಸ್‌ಟಿ ವಿಷಯಗಳಿಗೆ …

Read More »

ವಕ್ಫ್ ವಿವಾದಕ್ಕೆ ಹಿಂದಿನ ಬಿಜೆಪಿ ಸರ್ಕಾರವೇ ಹೊಣೆ: ಸಚಿವ ಈಶ್ವರ್ ಖಂಡ್ರೆ ಕಿಡಿ

ಬೀದರ್‌ : ವಕ್ಫ್‌ ವಿವಾದವನ್ನು ಪ್ರಾರಂಭ ಮಾಡಿದ್ದೆ ಬಿಜೆಪಿಯವರು ಎಂದು ಬಿಜೆಪಿ ವಿರುದ್ಧ ಕಿಡಿಕಾರಿದ ಸಚಿವ ಈಶ್ವರ್ ಖಂಡ್ರೆ ಕಿಡಿಕಾರಿದ್ದಾರೆ. ಬೀದರ್ ನಲ್ಲಿ ಮಾತನಾಡಿದ ಅವರು, ನಾವು ಅಧಿಕಾರಕ್ಕೆ ಬಂದ ಮೇಲೆ ರೈತರಿಗೆ ನೋಟಿಸ್ ನೀಡಿಲ್ಲ. ನಿಮ್ಮಲ್ಲಿ ದಾಖಲೆ ಇವೆಯಾ..? ನಾನು ಜಿಲ್ಲಾಧಿಕಾರಿಗಳೊಂದಿಗೆ ಮಾತನಾಡಿದ್ದೇನೆ, ನಾವು ಯಾವ ರೈತರಿಗೂ ನೋಟಿಸ್ ನೀಡಿಲ್ಲ, ಒಂದು ಪಹಣಿಯನ್ನು ತಿದ್ದುಪಡಿ ಮಾಡಿಲ್ಲ. ವಕ್ಫ್ ವಿವಾದಕ್ಕೆ ಹಿಂದಿನ ಬಿಜೆಪಿ ಸರ್ಕಾರವೇ ಹೊಣೆ ಎಂದು ಕಿಡಿಕಾರಿದರು. ಮುಖ್ಯಮಂತ್ರಿಗಳು …

Read More »

ಬಿಪಿಎಲ್ ಕಾರ್ಡ್ ರದ್ದಾದರೆ ಗೃಹಲಕ್ಷ್ಮೀ ಹಣಕ್ಕೂ ಕುತ್ತು: ಅನುಮಾನಗಳಿಗೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟನೆ

ಬೆಂಗಳೂರು: ಬಿಪಿಎಲ್ ಕಾರ್ಡ್ ರದ್ದಾದರೆ ಗೃಹಲಕ್ಷ್ಮಿ ಹಣಕ್ಕೂ ಕುತ್ತು ಬರುತ್ತದಾ ಎಂಬ ಅನುಮಾನಗಳಿಗೆ ಇಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟನೆ ನೀಡಿದ್ದಾರೆ. ರಾಜ್ಯದಲ್ಲಿ ಈಗ ಬಿಪಿಎಲ್ ಕಾರ್ಡ್ ರದ್ದಾಗುತ್ತಿರುವುದು ಜನರ ಆತಂಕಕ್ಕೆ ಕಾರಣವಾಗಿದೆ. ಕೆಲವರಿಗೆ ಅರ್ಹತೆಯಿದ್ದರೂ ಬಿಪಿಎಲ್ ಕಾರ್ಡ್ ರದ್ದಾಗುತ್ತಿರುವುದರ ಬಗ್ಗೆ ಆಕ್ರೋಶಗಳು ಕೇಳಿಬರುತ್ತಿವೆ. ಇದರ ಬೆನ್ನಲ್ಲೇ ಬಿಪಿಎಲ್ ಕಾರ್ಡ್ ನಿಂದ ಪಡೆಯುತ್ತಿದ್ದ ಸೌಲಭ್ಯಗಳಿಗೂ ಕತ್ತರಿ ಬೀಳುವ ಆತಂಕದಲ್ಲಿ ಜನರಿದ್ದಾರೆ. ಹೀಗಾಗಿ ಇಂದು ಮಾಧ್ಯಮಗಳಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ …

Read More »

ಸಂಸತ್ತು, ವಿಧಾನಸಭೆಯಲ್ಲಿ ಮಹಿಳೆಯರಿಗೆ ಶೇ.50 ರಷ್ಟು ಮೀಸಲಾತಿಗೆ ನಮ್ಮ ತಕರಾರೇನಿಲ್ಲ: ಸಿಎಂ

ಬೆಂಗಳೂರು: ಸಂಸತ್ತು, ವಿಧಾನಸಭೆಯಲ್ಲಿ ಮಹಿಳೆಯರಿಗೆ 50% ಮೀಸಲಾತಿ ನೀಡಲು ನಮ್ಮ ತಕರಾರೇನಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಮಹಿಳಾ ಕಾಂಗ್ರೆಸ್ ಸಹಯೋಗದಲ್ಲಿ ನಡೆದ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಿ ಮಾತನಾಡಿದರು. 2028ರಲ್ಲಿ ಮೀಸಲಾತಿ ನೀಡುವುದಾಗಿ ನರೇಂದ್ರ ಮೋದಿ ಹೇಳುತ್ತಿದ್ದು, ಅವರು ಈಗಾಗಲೇ ಜಾರಿ ಮಾಡಬಹುದಿತ್ತು. ಜಿಲ್ಲಾ ಪಂಚಾಯತಿ, ಪಟ್ಟಣ ಪಂಚಾಯತಿಗಳಲ್ಲಿ 50% ಮೀಸಲಾತಿ ಇದೆ. ಮಹಿಳೆಯರಿಗೆ ಸಮಾನ ಅವಕಾಶಗಳು …

Read More »

ನಾಳೆಯಿಂದ ದೆಹಲಿಯಲ್ಲಿ ನಂದಿನಿ ಹಾಲು ಮೊಸರು ಉತ್ಪನ್ನ ಮಾರಾಟ ಆರಂಭ

ಬೆಂಗಳೂರು: ಕರ್ನಾಟಕ ಹಾಲು ಒಕ್ಕೂಟ, ನಂದಿನಿ ಬ್ರಾಂಡ್‌ನಲ್ಲಿ ತನ್ನ ಡೈರಿ ಉತ್ಪನ್ನಗಳನ್ನು ಮಾರಾಟ ಮಾಡುತ್ತಿದೆ, ಹಾಲು ಮತ್ತು ಮೊಸರಿನಂತಹ ತಾಜಾ ಡೈರಿ ಉತ್ಪನ್ನಗಳೊಂದಿಗೆ ನವದೆಹಲಿಗೆ ತನ್ನ ವ್ಯಾಪ್ತಿಯನ್ನು ವಿಸ್ತರಿಸಲು ಸಜ್ಜಾಗಿದೆ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ನಾಳೆ (ನವೆಂಬರ್ 21) ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಂದಿನಿ ಹಾಲು ಮತ್ತು ಮೊಸರು ಉತ್ಪನ್ನಗಳನ್ನು ಬಿಡುಗಡೆ ಮಾಡಲಿದ್ದಾರೆ. ಜೊತೆಗೆ, ನವೆಂಬರ್ 26 ರಂದು ಬೆಂಗಳೂರಿನಲ್ಲಿ ನಂದಿನಿ ಬ್ರ್ಯಾಂಡ್‌ನ ಇಡ್ಲಿ ಮತ್ತು ದೋಸೆ …

Read More »

ದೇಶದಲ್ಲಿ ಕೈಗಾರಿಕಾ ಕ್ಷೇತ್ರದ ಬಂಡವಾಳ ಹೂಡಿಕೆಯಲ್ಲಿ ರಾಜ್ಯಕ್ಕೆ ಮೂರನೇ ಸ್ಥಾನ

ಬೆಂಗಳೂರು : ಕೈಗಾರಿಕಾ ಕ್ಷೇತ್ರದ ಬಂಡವಾಳ ಹೂಡಿಕೆಯಲ್ಲಿ ರಾಜ್ಯವು ಸದ್ಯಕ್ಕೆ ದೇಶದಲ್ಲಿ ಮೂರನೇ ಸ್ಥಾನದಲ್ಲಿದ್ದು, 2025ರ ಜೂನ್ ವೇಳೆಗೆ ದ್ವಿತೀಯ ಸ್ಥಾನಕ್ಕೆ ಏರಲಿದೆ. ಈಗ ಆಗಿರುವ 54,427 ಕೋಟಿ ರೂ. ಹೂಡಿಕೆಯ ಜತೆಗೆ ಮುಂದಿನ ಆರೇಳು ತಿಂಗಳಲ್ಲಿ ಇನ್ನೂ 19,059 ಸಾವಿರ ಕೋಟಿ ರೂ.ಬಂಡವಾಳ ಹರಿದು ಬರುವುದು ಖಾತ್ರಿಯಾಗಿದೆ. ಈ ಮೂಲಕ ರಾಜ್ಯವು 73 ಸಾವಿರ ಕೋಟಿ ರೂ.ಗಳಿಗೂ ಹೆಚ್ಚಿನ ಹೂಡಿಕೆಯನ್ನು ಕಾಣಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಅವರು …

Read More »