ಬೆಂಗಳೂರು : ಭ್ರಷ್ಟಾಚಾರಕ್ಕೆ ಕಡಿವಾಣ, ಮದ್ಯ ಮಾರಾಟಗಾರರಿಗೆ ಆಗುತ್ತಿರುವ ಕಿರುಕುಳ ತಪ್ಪಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಾಳೆ(ನ.20) ಫೆಡರೇಷನ್ ಆಫ್ ವೈನ್ಸ್ ಮರ್ಚಂಟ್ಸ್ ಅಸೋಸಿಯೇಷನ್ ಕರೆ ನೀಡಿದ್ದ ಮದ್ಯ ಮಾರಾಟ ಬಂದ್ ಅನ್ನು ಸಿಎಂ ಸಂಧಾನದ ಹಿನ್ನೆಲೆಯಲ್ಲಿ ಹಿಂಪಡೆದಿದೆ. ಇಂದು ಸಿಎಂ ಗೃಹ ಕಚೇರಿ ಕೃಷ್ಣದಲ್ಲಿ ಅಸೋಸಿಯೇಷನ್ ಪದಾಧಿಕಾರಿಗಳೊಂದಿಗೆ ಸಭೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಮದ್ಯ ಮಾರಾಟಗಾರರ ಎಲ್ಲ ಬೇಡಿಕೆ ಬಗ್ಗೆ ಸಹಾನುಭೂತಿಯಿಂದ ಪರಿಶೀಲಿಸಲಾಗುವುದು. ಮದ್ಯ ಮಾರಾಟಗಾರರಿಗೆ …
Read More »ಸಂಡೂರು ವಿಧಾನಸಭಾ ಉಪಚುನಾವಣೆ: ಮತ ಎಣಿಕೆ ದಿನದಂದು ಜಿಲ್ಲೆಯಾದ್ಯಂತ ಪ್ರತಿಬಂಧಕಾಜ್ಞೆ
ಬಳ್ಳಾರಿ: ಸಂಡೂರು ವಿಧಾನಸಭೆ ಉಪಚುನಾವಣೆ-2024 ರ ಹಿನ್ನಲೆಯಲ್ಲಿ ನ.23 ರಂದು ಮತ ಎಣಿಕೆ ನಡೆಯಲಿದ್ದು, ಮತ ಎಣಿಕೆ ಸಂಬಂಧ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ನ.22 ರ ಸಂಜೆ 06 ಗಂಟೆಯಿಂದ ನ.24 ರ ಬೆಳಿಗ್ಗೆ 06 ಗಂಟೆಯವರೆಗೆ ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ 2023 ರ ಕಲಂ 163 ರಡಿ ಪ್ರದತ್ತವಾದ ಅಧಿಕಾರ ಚಲಾಯಿಸಿ ಜಿಲ್ಲೆಯಾದ್ಯಂತ ಪ್ರತಿಬಂಧಕಾಜ್ಞೆ ವಿಧಿಸಿ ಜಿಲ್ಲಾ ದಂಡಾಧಿಕಾರಿಯಾಗಿರುವ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು …
Read More »ರಾಜ್ಯದಲ್ಲಿ ಐಟಿ ಹಾಗೂ ಕೈಗಾರಿಕೆಗಳಿಗೆ ಉತ್ತೇಜನ: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು: ಬೆಂಗಳೂರು ಹಾಗೂ ರಾಜ್ಯದ ಇತರ ಎಲ್ಲಾ ಕಡೆಗಳಲ್ಲೂ ಐಟಿ ಹಾಗೂ ಇತರ ಕೈಗಾರಿಕೆಗಳಿಗೆ ಉತ್ತೇಜನ ನೀಡುವುದರ ಜೊತೆಗೆ ಜಾಗತಿಕ ಸೆಮಿ ಕಂಡಕ್ಟರ್ ಉದ್ಯಮದಲ್ಲಿ ಕರ್ನಾಟಕದ ಪಾತ್ರವನ್ನು ಸದೃಢಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ನಗರದ ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಮೂರು ದಿನಗಳ ಬೆಂಗಳೂರು ಟೆಕ್ ಸಮೇಳನವನ್ನು ಉದ್ಘಾಟಿಸಿ ಹಲವು ಸಾಧಕರನ್ನು ಸನ್ಮಾನಿಸಿದ ಬಳಿಕ ಮಾತನಾಡಿದ ಅವರು, ನಾವಿನ್ಯತೆ, ತಂತ್ರಜ್ಞಾನದ ಪ್ರಗತಿ ಮತ್ತು ಜಾಗತಿಕ ಸಹಯೋಗಕ್ಕೆ ಈ ಸಮೇಳನ ವಿಶಿಷ್ಟ …
Read More »ರಾಜ್ಯದಲ್ಲಿ 17.61 ಲಕ್ಷ ರೈತರಿಗೆ 2021.17 ಕೋಟಿ ರೂ. ಬೆಳೆ ವಿಮೆ ಪರಿಹಾರ: ಸಚಿವ ಚಲುವರಾಯಸ್ವಾಮಿ
ಬೆಂಗಳೂರು: ರಾಜ್ಯದಲ್ಲಿ 2023-24ನೇ ಸಾಲಿನಲ್ಲಿ 17.61 ಲಕ್ಷ ರೈತ ಫಲಾನುಭವಿಗಳಿಗೆ 2021.17 ಕೋಟಿ ರೂ. ಬೆಳೆ ವಿಮೆ ಪರಿಹಾರ ನೀಡಲಾಗಿದೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದರು. ವಿಕಾಸಸೌಧದ ಸಮಿತಿ ಕೊಠಡಿಯಲ್ಲಿ ಕೃಷಿ ಮತ್ತು ಜಲಾನಯನ ಅಭಿವೃದ್ಧಿ ಇಲಾಖೆಯ ಪ್ರಗತಿ ಪರಿಶೀಲನೆ ಸಭೆಯ ಬಳಿಕ ಸುದ್ದಿಗೋಷ್ಠ್ಠಿಯಲ್ಲಿ ಈ ಮಾಹಿತಿ ನೀಡಿದರು. ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ 22.97 ಲಕ್ಷ ರೈತ ಪ್ರಸ್ತಾವನೆಗಳು 17.60 ಲಕ್ಷ ಹೇಕ್ಟೆರ್ ಪ್ರದೇಶಕ್ಕೆ ನೋಂದಣಿಯಾಗಿದೆ. 2024-25ನೇ ಸಾಲಿನ …
Read More »ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ತರಲು ಅಗತ್ಯ ತಂತ್ರಗಳನ್ನು ಪಕ್ಷ ಹೊಂದಿದೆ: ಡಿಸಿಎಂ ಡಿಕೆಶಿ
ಬೆಂಗಳೂರು: ರಾಜ್ಯದಲ್ಲಿ ಮತ್ತಷ್ಟು ಹೊಸ ಯೋಜನೆಗಳನ್ನು ಜಾರಿ ಮಾಡುವ ಮೂಲಕ ಮುಂದಿನ ದಿನಗಳಲ್ಲೂ ಕಾಂಗ್ರೆಸ್ ಪಕ್ಷವನ್ನು ಮರಳಿ ಅಧಿಕಾರಕ್ಕೆ ತರಲು ಅಗತ್ಯವಾದ ತಂತ್ರ-ಮಂತ್ರಗಳನ್ನು ಪಕ್ಷ ಹೊಂದಿದೆ ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ನಗರದ ಕೆಪಿಸಿಸಿ ಕಚೇರಿಯಲ್ಲಿ ಮಾಜಿ ಪ್ರಧಾನಿ ದಿ.ಇಂದಿರಾಗಾಂಧಿಯವರ ಜನ್ಮ ದಿನಾಚರಣೆಯಲ್ಲಿ ಮಾತನಾಡಿದ ಅವರು, ಎಲ್ಲಾ ಕಾರ್ಯಕರ್ತರು ಆಶಾಭಾವನೆಯಿಂದಿರಿ ಪಕ್ಷವನ್ನು ಉಳಿಸಿ, ಬೆಳೆಸೋಣ. ಮತ್ತಷ್ಟು ಹೊಸ ಯೋಜನೆಗಳ ಮೂಲಕ ಕಾಂಗ್ರೆಸ್ ಪಕ್ಷವನ್ನು ಮತ್ತೆ ಅಧಿಕಾರಕ್ಕೆ …
Read More »ಕೇಂದ್ರ ಸರ್ಕಾರದಿಂದ ಅನುದಾನ ಕಡಿತಗೊಳಿಸಿ ಮಲತಾಯಿ ಧೋರಣೆ: ಸಚಿವ ಚಲುವರಾಯಸ್ವಾಮಿ
ಬೆಂಗಳೂರು : ಕೇಂದ್ರ ಸರ್ಕಾರವು ಕೃಷಿ ವಲಯ ಸೇರಿದಂತೆ ರಾಜ್ಯದ ಇತರ ಕ್ಷೇತ್ರಕ್ಕೂ ಅನುದಾನವನ್ನು ಕಡಿತಗೊಳಿಸುವ ಮೂಲಕ ಮಲತಾಯಿ ಧೋರಣೆ ತಾಳಿದೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅವರು ಪ್ರಧಾನಿ ನರೇಂದ್ರ ಮೋದಿ, ಅಮಿತ್ ವಿರುದ್ಧ ವಾಗ್ದಾಳಿ ನಡೆಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಾಂಗ್ರೆಸ್ ಆಡಳಿತ ರಾಜ್ಯಕ್ಕೆ ಕೇಂದ್ರ ಸರ್ಕಾರ ಅನುದಾನ ಹಂಚಿಕೆಯಲ್ಲಿ ಮಲತಾಯಿ ಧೋರಣೆ ಅನುಸರಿಸುತ್ತಿದೆ. ಈ ಬಗ್ಗೆ ಕೇಂದ್ರದಲ್ಲಿ ಇರುವ ಸಚಿವ ಹೆಚ್.ಡಿ.ಕುಮಾರಸ್ವಾಮಿ ಸೇರಿದಂತೆ ರಾಜ್ಯದ ಬಿಜೆಪಿ ಸಂಸದರು …
Read More »2028ಕ್ಕೆ ಕಾಂಗ್ರೆಸ್ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದು ಮಹಿಳೆಯರಿಗೆ ಶೇ.50 ರಷ್ಟು ಮೀಸಲಾತಿ ಕೊಡ್ತೇವೆ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಬಿಜೆಪಿಯವರು ದೇಶಭಕ್ತಿಯ ಬಗ್ಗೆ ಮಾತನಾಡುತ್ತಾರೆ ಬಿಜೆಪಿಯ ಯಾವುದಾದರೂ ಒಬ್ಬ ನಾಯಕರು ದೇಶಕ್ಕಾಗಿ ಪ್ರಾಣತ್ಯಾಗ ಮಾಡಿಲ್ಲ ಮೋದಿಯವರು ಮಹಿಳೆಯರಿಗೆ ಮೀಸಲಾತಿ ಕೊಡುವುದಿಲ್ಲ. 2028ಕ್ಕೆ ಕಾಂಗ್ರೆಸ್ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದು ಮಹಿಳೆಯರಿಗೆ ಶೇ.50 ಮೀಸಲಾತಿಯನ್ನು ಕೊಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬೆಂಗಳೂರಿನ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಕೇಂದ್ರ ಕಚೇರಿಯಲ್ಲಿ ನಡೆದ ಇಂದಿರಾಗಾಂಧಿ ಜಯಂತಿ ಸಭೆ ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯದ ಜನತೆಗೆ ನೀಡುತ್ತಿದ್ದ 7 ಕೆಜಿ ಅಕ್ಕಿಯನ್ನ …
Read More »ರೈತರಿಗೆ ಸಿಹಿಸುದ್ದಿ: ಕೃಷಿ ಪಂಪ್ಸೆಟ್ ಗಳಿಗೆ ಉಚಿತ ವಿದ್ಯುತ್ ನೀಡಲು ಸಚಿವರ ಭರವಸೆ
ಚಾಮರಾಜನಗರ: ಹಲವು ಬಾರಿ ವಿದ್ಯುತ್ ಸಮಸ್ಯೆಯಿಂದ ರೈತರು ಬೆಳೆಗಳಿಗೆ ನೀರುಣಿಸುವಾಗ ಸಾಕಷ್ಟು ನಷ್ಟ ಅನುಭವಿಸಬೇಕಾಗುತ್ತದೆ. ಇಂತಹ ಪರಿಸ್ಥಿತಿಯಲ್ಲಿರುವಾಗಲೇ ಇಂಧನ ಖಾತೆ ಸಚಿವ ಕೆ.ಜೆ.ಜಾರ್ಜ್ ಅನ್ನದಾತರಿಗೆ ಗುಡ್ ನ್ಯೂಸ್ ನೀಡಿದ್ದಾರೆ. ಹೌದು ಚಾಮರಾಜನಗರದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಸಿಎಂ ಆಗಿರುವ ವರೆಗೂ, ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರ ಖಾಸಗೀಕರಣ ಆಗಲ್ಲ. ರೈತರ ಕೃಷಿ ಪಂಪ್ಸೆಟ್ಗಳಿಗೆ ಉಚಿತ ವಿದ್ಯುತ್ ಕೊಡ್ತೀವಿ ಎಂದು ತಿಳಿಸಿದರು. ಬೇರೆ ಕಡೆ ವಿದ್ಯುತ್ ಖರೀದಿಸಿ ರೈತರಿಗೆ ಉಚಿತ ವಿದ್ಯುತ್ ನೀಡ್ತಿದ್ದೇವೆ. …
Read More »ರಾಜ್ಯದಲ್ಲಿ ಒಬ್ಬರೇ ಒಬ್ಬ ಅರ್ಹ ಬಿಪಿಎಲ್ ಕಾರ್ಡ್ ದಾರರನ್ನು ತಪ್ಪಿಸಬೇಡಿ: ಸಚಿವ ಮುನಿಯಪ್ಪಗೆ ಸಿಎಂ ಸೂಚನೆ
ಬೆಂಗಳೂರು : ಸದ್ಯ ರಾಜ್ಯದಲ್ಲಿ ವಕ್ಫ್ ವಿವಾದ ಬೆನ್ನಲ್ಲೆ, ರಾಜ್ಯ ಸರ್ಕಾರ ಬಿಪಿಎಲ್ ಕಾರ್ಡ್ ಪರಿಷ್ಕರಣೆಗೆ ಮುಂದಾಗಿದೆ. ಇದರಿಂದ ರಾಜ್ಯದ ಅರ್ಹ ಬಿಪಿಎಲ್ ಕಾರ್ಡ್ ಗಳು ಸಹ ಕ್ಯಾನ್ಸಲ್ ಆಗಿವೆ. ಈ ಕುರಿತಾಗಿ ಸಿಎಂ ಸಿದ್ದರಾಮಯ್ಯ ಅವರು ಸಚಿವ ಕೆಎಚ್ ಮುನಿಯಪ್ಪ ಅವರಿಗೆ ಒಬ್ಬರೇ ಒಬ್ಬ ಅರ್ಹ ಬಿಪಿಎಲ್ ಕಾರ್ಡ್ದಾರರನ್ನು ತಪ್ಪಿಸಬೇಡಿ ಕಾರ್ಡ್ ಒದಗಿಸಿ ಎಂದು ಸೂಚನೆ ನೀಡಿದ್ದಾರೆ. ಇಂದು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಇಂದಿರಾಗಾಂಧಿ ಜಯಂತಿ ಪ್ರಯುಕ್ತ ಹಮ್ಮಿಕೊಂಡಿದ್ದ …
Read More »ಕೇಂದ್ರ ತೆರಿಗೆ ಹಣ ಸರಿಯಾಗಿ ನೀಡದ ಕಾರಣ ರೈತರಿಗೆ ಸಾಲ ನೀಡಲು ಸಾಧ್ಯವಾಗುತ್ತಿಲ್ಲ: ಸಚಿವ ರಾಜಣ್ಣ
ಬೆಂಗಳೂರು: ಕೇಂದ್ರ ಸರ್ಕಾರ ಜಿಎಸ್ ಟಿ ಹಣದಲ್ಲಿ ನಮ್ಮ ಪಾಲು ಸರಿಯಾಗಿ ನೀಡದೇ ಇರುವುದರಿಂದ ರೈತರಿಗೆ ಸಾಲ ನೀಡಲು ಆಗುತ್ತಿಲ್ಲ ಎಂದು ಸಹಕಾರ ಸಚಿವ ಕೆಎನ್ ರಾಜಣ್ಣ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರದಿಂದ 9300 ಕೋಟಿ ರೂ.ಜಿಎಸ್ ಟಿ ಪಾಲು ಬರಬೇಕಿತ್ತು. ಆದರೆ 2340 ಕೋಟಿ ರೂ. ಮಾತ್ರ ಬಂದಿದೆ ಎಂದು ಹೇಳಿದರು. ನಮ್ಮ ಪಾಲಿನ 9300 ಕೋಟಿ ರೂ. ನೀಡಲು ಕೇಂದ್ರ ಸರ್ಕಾರಕ್ಕೆ ಮುಖ್ಯ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





