ಬೆಂಗಳೂರು: ನಗರದ ಅರಮನೆ ಮೈದಾನದಲ್ಲಿ 27 ನೇ ಆವೃತಿಯ ಬೆಂಗಳೂರು ಟೆಕ್ ಸಮ್ಮಿಟ್ -2024ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು. ಈ ವೇಳೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ. ಕೆ. ಶಿವಕುಮಾರ್ ನಿಪುಣ ಕರ್ನಾಟಕ ಯೋಜನೆಯನ್ನು ಲೋಕಾರ್ಪಣೆ ಮಾಡಿ, ನವೋದ್ಯಮ ಸಾಧಕರನ್ನು ಸನ್ಮಾನಿಸಿದರು.
Read More »ದೇಶದಲ್ಲಿ ಹೊಸದಾಗಿ 500 ಎಸ್ ಬಿ ಐ ಶಾಖೆಗಳ ಪ್ರಾರಂಭ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್
ಮುಂಬೈ: 2024-25ರ ಹಣಕಾಸು ವರ್ಷದ ಅಂತ್ಯದ ವೇಳೆಗೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ಬಿಐ) ಹೊಸದಾಗಿ 500 ಶಾಖೆಗಳನ್ನು ಪ್ರಾರಂಭಿಸಲಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. 1921ರಲ್ಲಿ ಬ್ಯಾಂಕ್ 250 ಶಾಖೆಗಳನ್ನು ಹೊಂದಿತ್ತು, ಅದು ಈಗ 22,500ಕ್ಕೆ ಏರಿಕೆಯಾಗಿದೆ. ಹೊಸ ಶಾಖೆಗಳ ಸೇರ್ಪಡೆಯೊಂದಿಗೆ ಶಾಖೆಗಳ ಸಂಖ್ಯೆ 23 ಸಾವಿರಕ್ಕೆ ತಲುಪಲಿದೆ ಎಂದು ಬ್ಯಾಂಕ್ನ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಹೇಳಿದರು. ಎಸ್ಬಿಐನ ಈ ಬೆಳವಣಿಗೆಯು ಜಾಗತಿಕ ದಾಖಲೆ, ದೇಶದಲ್ಲಿನ …
Read More »ಬಡವರಿಗೆ ಬಿಪಿಎಲ್ ಕಾರ್ಡ್ ತಪ್ಪದಂತೆ ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ
ಬೆಂಗಳೂರು: ಬಿಪಿಎಲ್ ಕಾರ್ಡ್ ಪರಿಷ್ಕರಣೆ ಇಂದಿನಿಂದ ಶುರುವಾಗಲಿದೆ. ಇದರಿಂದ ಬಡವರಿಗೂ ಅನ್ಯಾಯವಾಗುತ್ತಿದೆ ಎಂಬ ಮಾತುಗಳು ಕೇಳಿಬಂದಿರುವ ಹಿನ್ನಲೆಯಲ್ಲಿ ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ ನೀಡಿದ್ದಾರೆ. ಬಿಪಿಎಲ್ ಕಾರ್ಡ್ ಹೊಂದಿರಲು ರಾಜ್ಯ ಸರ್ಕಾರ ಕೆಲವೊಂದು ನಿಯಮಗಳನ್ನು ಹಾಕಿದೆ. ಅದರಂತೆ ಆದಾಯ ಮಿತಿ, ತೆರಿಗೆ ಕಟ್ಟುವವರಿಗೆ ಬಿಪಿಎಲ್ ಕಾರ್ಡ್ ರದ್ದು ಮಾಡಲಾಗಿದೆ. ಇದರಿಂದಾಗಿ ರಾತ್ರೋ ರಾತ್ರಿ ಹಲವು ಬಿಪಿಎಲ್ ಕಾರ್ಡ್ ಗಳು ಎಪಿಎಲ್ ಆಗಿ ಬದಲಾಗಿದೆ. ಇದರ ಬಗ್ಗೆ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ. …
Read More »ದೇಶದಲ್ಲಿಯೇ ಪರಿಶುದ್ಧ ಗಾಳಿಯಲ್ಲಿ ಮಡಿಕೇರಿ ಪ್ರಥಮ ಸ್ಥಾನ, ಗದಗಕ್ಕೆ 8 ನೇ ಸ್ಥಾನ
ಕೊಡಗು: ಐಷಾರಾಮಿ ಬದುಕಿಗೆ ಮಾರು ಹೋಗಿರುವ ಮನುಷ್ಯ ಎಲ್ಲಾ ಸೌಲಭ್ಯಗಳನ್ನು ಅನುಭವಿಸುವುದಕ್ಕಾಗಿ ಪರಿಸರವನ್ನು ಇನ್ನಿಲ್ಲದಂತೆ ಮಾಲಿನ್ಯ ಮಾಡುತ್ತಿದ್ದಾನೆ. ಹೀಗಾಗಿ ದೇಶದ ಪ್ರಮುಖ ನಗರಗಳಲ್ಲಿ ಶುದ್ಧಗಾಳಿ ಸಿಗುವುದೇ ದುಸ್ಥರ ಎನ್ನುವಂತೆ ಆಗಿದೆ. ಇಂತಹ ಸಂದರ್ಭದಲ್ಲಿ ದೇಶದಲ್ಲಿಯೇ ಕೊಡಗು ಜಿಲ್ಲೆಯಲ್ಲಿ ಪರಿಶುದ್ಧ ಗಾಳಿ ದೊರೆಯುವುದರಲ್ಲಿ ಅಗ್ರಸ್ಥಾನದಲ್ಲಿ ಇದೆ. ಕೇಂದ್ರ ಪರಿಸರ ಮಾಲಿನ್ಯ ಮಂಡಳಿಯು ಪರಿಶುದ್ಧ ಗಾಳಿ ಹೊಂದಿರುವ ಟಾಪ್ 10 ನಗರಗಳ ಪಟ್ಟಿಯನ್ನು ಗುರುವಾರ ಬಿಡುಗಡೆ ಮಾಡಿದೆ. ಅದರಲ್ಲಿ ಮಡಿಕೇರಿ ನಗರಕ್ಕೆ ಪ್ರಥಮ …
Read More »ಪಾರಂಪರಿಕ ತಾಣಗಳ ರಕ್ಷಣೆಗೆ ಅಗತ್ಯ ಕ್ರಮ: ಸಚಿವ ಎಚ್.ಕೆ.ಪಾಟೀಲ್
ಲಕ್ಷ್ಮೇಶ್ವರ: ನಮ್ಮ ನಾಡಿನ ಪುರಾತನ ಇತಿಹಾಸ ಸಾರುವ ಪಾರಂಪರಿಕ ತಾಣಗಳಾದ ದೇವಸ್ಥಾನ, ಮಸೀದಿ, ಶಿಲಾ ಶಾಸನಗಳನ್ನು ರಕ್ಷಿಸಲು ಎಲ್ಲ ರೀತಿಯ ಕ್ರಮ ಕೈಗೊಳ್ಳಲಾಗುವುದು ಎಂದು ಪ್ರವಾಸೋದ್ಯಮ ಇಲಾಖೆಯ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಹೇಳಿದರು. ಪಟ್ಟಣದ ಸೋಮೇಶ್ವರ ದೇವಸ್ಥಾನದಲ್ಲಿ ನಡೆದ ಲಕ್ಷ ದೀಪೋತ್ಸವ ಕಾರ್ಯಕ್ರಮದ ನಿಮಿತ್ತ ದೇವಸ್ಥಾನಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಅವರು ಮಾತನಾಡಿದರು. ರಾಜ್ಯದಲ್ಲಿ 25 ಸಾವಿರ ಪಾರಂಪರಿಕ ತಾಣಗಳು ಇದ್ದು ಅವುಗಳಲ್ಲಿ ಕೇವಲ 850 ತಾಣಗಳು …
Read More »ಜಿ20 ಶೃಂಗಸಭೆ: ಪ್ರಧಾನಿ ಮೋದಿ, ಬೈಡನ್ ಚರ್ಚೆ
ರಿಯೋ ಡಿ ಜನೈರೋ: ತ್ರಿರಾಷ್ಟ್ರ ಪ್ರವಾಸದ ಭಾಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಬ್ರೆಜಿಲ್ನ ರಿಯೋ ಡಿ ಜನೈರೋ ತಲುಪಿದ್ದಾರೆ. ಇಲ್ಲಿ ಜಿ20 ಶೃಂಗಸಭೆ ಆರಂಭವಾಗಿದ್ದು, ಸಭೆಯಲ್ಲಿ ಮೋದಿ ಭಾಗಿಯಾಗಿದ್ದಾರೆ. ಬ್ರೆಜಿಲ್ಗೆ ತಲುಪಿದ ಮೋದಿ ಅವರನ್ನು ಅಧ್ಯಕ್ಷ ಲುಲಾ ಡ ಸಿಲ್ವಾ ಅವರು ಸ್ವಾಗತಿಸಿದರು. ಈ ವೇಳೆ ಜೈ ಶ್ರೀ ಕೃಷ್ಣಾ, ವಂದೇ ಮಾತರಂ ಘೋಷಣೆಗಳು ಮೊಳಗಿದವು. ಬಳಿಕ ಜಿ20 ಶೃಂಗಸಭೆಯಲ್ಲಿ ಮೋದಿ ಭಾಗಿಯಾದರು. ಈ ವೇಳೆ ಅವರು …
Read More »ಬಳ್ಳಾರಿ: ಬೆಂಬಲ ಬೆಲೆಯಲ್ಲಿ ರೈತರಿಂದ ಬೆಳೆಗಳನ್ನು ಖರೀದಿಸಲು ನೋಂದಣಿ ಆರಂಭ
ಬಳ್ಳಾರಿ: 2024ರ ಮುಂಗಾರು ಹಂಗಾಮಿನಲ್ಲಿ ಭತ್ತ, ರಾಗಿ, ಜೋಳ ಬೆಳೆದ ರೈತರಿಗೆ ಸಿಹಿಸುದ್ದಿಯೊಂದಿದೆ. ಬೆಂಬಲ ಬೆಲೆಯಲ್ಲಿ ರೈತರಿಂದ ಬೆಳೆಗಳನ್ನು ಖರೀದಿಸಲು ನೋಂದಣಿ ಆರಂಭವಾಗಿದೆ. ಬೆಳೆಗಳಿಗೆ ಬೆಂಬಲ ಬೆಲೆಗಳನ್ನು ಘೋಷಣೆ ಮಾಡಲಾಗಿದೆ. ಬೆಂಬಲ ಬೆಲೆ ಯೋಜನೆಯಡಿ ರೈತರು ಬೆಳೆಗಳನ್ನು ಮಾರಾಟ ಮಾಡಲು ಫ್ರೂಟ್ ತಂತ್ರಾಂಶದಲ್ಲಿ ನೋಂದಣಿ ಮಾಡಿಸಿರಬೇಕು, ಈ ನೋಂದಣಿ ಸಂಖ್ಯೆಯ ದಾಖಲೆ ಮೂಲಕವೇ ನೋಂದಾಯಿಸಲು ಅವಕಾಶವಿರುತ್ತದೆ ಎಂದು ಸ್ಪಷ್ಟಪಡಿಸಲಾಗಿದೆ. ವಿವಿಧ ಜಿಲ್ಲೆಗಳಲ್ಲಿ ಪ್ರಸ್ತಕ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಠ ಬೆಂಬಲ …
Read More »ಬ್ಯಾಂಕುಗಳು ಸಾಲದ ಮೇಲಿನ ಬಡ್ಡಿ ದರ ಇಳಿಸಲು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಸೂಚನೆ
ಮುಂಬೈ: ದೇಶದಲ್ಲಿ ಬ್ಯಾಂಕ್ ಸಾಲದ ಬಡ್ಡಿದರ ದುಬಾರಿಯಾಗಿದ್ದು, ಕೆಲವು ವರ್ಗದ ಜನರಿಗೆ ಒತ್ತಡವಾಗುತ್ತದೆ. ಹೀಗಾಗಿ ಬ್ಯಾಂಕುಗಳು ಸಾಲದ ಮೇಲಿನ ಬಡ್ಡಿ ದರ ಇಳಿಕೆ ಮಾಡಬೇಕೆಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೂಚನೆ ನೀಡಿದ್ದಾರೆ. ಎಸ್.ಬಿ.ಐ. ಆಯೋಜಿಸಿದ್ದ ವಾಣಿಜ್ಯ ಶೃಂಗದಲ್ಲಿ ಮಾತನಾಡಿದ ನಿರ್ಮಲಾ ಸೀತಾರಾಮನ್, ದೇಶದಲ್ಲಿ ಬ್ಯಾಂಕ್ ಸಾಲ ತುಂಬಾ ದುಬಾರಿಯಾಗಿದೆ ಎನ್ನುವ ಮಾತುಗಳು ಕೇಳಿ ಬರುತ್ತಿವೆ. ಉದ್ದಿಮೆಗಳು ಚೆನ್ನಾಗಿ ಕೆಲಸ ಮಾಡಬೇಕೆಂದರೆ ಬ್ಯಾಂಕ್ ಸಾಲದ ಬಡ್ಡಿ ದರ ಕೈಗೆಟುಕುವಂತಿರಬೇಕು. …
Read More »ರೈತರ ಪ್ರತಿಭಟನೆ ಮತ್ತಷ್ಟು ತೀವ್ರಗೊಳಿಸಲು ಡಿ.6 ರಂದು ದೆಹಲಿ ಚಲೋ
ಚಂಡೀಗಢ: ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ(ಎಂಎಸ್ಪಿ)ಗೆ ಕಾನೂನು ಖಾತರಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿರುವ ರೈತರು ತಮ್ಮ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲು ಡಿಸೆಂಬರ್ 6 ರಂದು ದೆಹಲಿಯತ್ತ ಮೆರವಣಿಗೆ ನಡೆಸಲಿದ್ದಾರೆ ಎಂದು ಸಂಯುಕ್ತ ಕಿಸಾನ್ ಮೋರ್ಚಾ(ರಾಜಕೀಯೇತರ) ಮತ್ತು ಕಿಸಾನ್ ಮಜ್ದೂರ್ ಮೋರ್ಚಾ ಘೋಷಿಸಿವೆ. ಇಂದು ಚಂಡೀಗಢದಲ್ಲಿ ನಡೆದ ರೈತ ಮುಖಂಡರ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಪ್ರತಿಭಟನಾ ನಿರತ ರೈತರು ಫೆಬ್ರವರಿ 13 ರಿಂದ ಪಂಜಾಬ್ …
Read More »ಸಾರಿಗೆ ಇಲಾಖೆಯಲ್ಲಿ ಶೀಘ್ರವೇ 9 ಸಾವಿರ ಹುದ್ದೆಗಳ ನೇಮಕಾತಿ
ಬೆಂಗಳೂರು: ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ, ಶೀಘ್ರದಲ್ಲೇ 9 ಸಾವಿರ ಹುದ್ದೆಗಳ ಜತೆಗೆ 1 ಸಾವಿರ ಹುದ್ದೆಗಳನ್ನು ಅನುಕಂಪ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಸರ್ಕಾರ ಮುಂದಾಗಿದೆ. ಇತ್ತೀಚೆಗೆ ಸಿಎಂ ಕೂಡ 500 ಕೋಟಿ ಅನುದಾನ ನೀಡಿದ್ದರು. ಏಳು ವರ್ಷದಿಂದ ನೇಮಕಾತಿ ಆಗಿರಲಿಲ್ಲ. ಡ್ರೈವರ್, ಕಂಡಕ್ಟರ್ ಇಲ್ಲ ಅಂದ್ರೆ ಹೇಗೆ ಬಸ್ ಓಡಿಸುವುದು. ಹೀಗಾಗಿ ಶೀಘ್ರದಲ್ಲೇ ನೇಮಕಾತಿ ಮಾಡುತ್ತೇವೆ ಎಂದು ರಾಮಲಿಂಗಾ ರೆಡ್ಡಿ ಅವರು ಹೇಳಿದ್ದಾರೆ. ಸಾರಿಗೆ ಇಲಾಖೆಯಲ್ಲಿ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





