ನವದೆಹಲಿ : ಪ್ರಸ್ತುತ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸರ್ಕಾರಿ ನೌಕರರಿಗೆ ವಿಶೇಷ ಗಮನ ನೀಡುತ್ತಿವೆ. ಅವರಿಗೆ ಒದಗಿಸಬೇಕಾದ ಸೌಲಭ್ಯಗಳ ಬಗ್ಗೆ ವಿಶೇಷ ಗಮನ ಹರಿಸಲಾಗುತ್ತಿದೆ. ಅದ್ರಂತೆ, ಕೇಂದ್ರ ಸರ್ಕಾರಿ ನೌಕರರು ಈಗಾಗಲೇ ನಿವೃತ್ತಿ ವಯೋಮಿತಿಯನ್ನ ಹೆಚ್ಚಿಸುವಂತೆ ಒತ್ತಾಯಿಸುತ್ತಿದ್ದಾರೆ. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿರುವ ನರೇಂದ್ರ ಮೋದಿ ಸರ್ಕಾರ ಕೇಂದ್ರ ಸರ್ಕಾರಿ ನೌಕರರ ನಿವೃತ್ತಿ ವಯಸ್ಸನ್ನು ಹೆಚ್ಚಿಸುವ ನಿರ್ಧಾರ ಕೈಗೊಂಡಿದೆ ಎಂಬ ಸುದ್ದಿ ಬಂದಿದೆ. ಪ್ರಸ್ತುತ, ಕೇಂದ್ರ ಸರ್ಕಾರಿ ನೌಕರರ ನಿವೃತ್ತಿ …
Read More »50 ಸಿಎಪಿಎಫ್ ತುಕಡಿಗಳನ್ನು ಮಣಿಪುರಕ್ಕೆ ಕಳುಹಿಸಲು ಕೇಂದ್ರ ನಿರ್ಧಾರ
ನವದೆಹಲಿ : ಈಶಾನ್ಯ ರಾಜ್ಯದಲ್ಲಿ ಸವಾಲಿನ ಭದ್ರತೆ ಮತ್ತು ಕಾನೂನು ಸುವ್ಯವಸ್ಥೆಯನ್ನ ಗಮನದಲ್ಲಿಟ್ಟುಕೊಂಡು 5,000ಕ್ಕೂ ಹೆಚ್ಚು ಸಿಬ್ಬಂದಿಯನ್ನು ಒಳಗೊಂಡ ಹೆಚ್ಚುವರಿ 50 ಸಿಎಪಿಎಫ್ ತುಕಡಿಗಳನ್ನು ಮಣಿಪುರಕ್ಕೆ ಕಳುಹಿಸಲು ಕೇಂದ್ರ ನಿರ್ಧರಿಸಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಜಿರಿಬಾಮ್ ಜಿಲ್ಲೆಯಲ್ಲಿ ಹಿಂಸಾಚಾರ ಭುಗಿಲೆದ್ದು ಇತರ ಸ್ಥಳಗಳಿಗೆ ಹರಡಿದ ನಂತರ ನವೆಂಬರ್ 12 ರಂದು ಹೊರಡಿಸಿದ ಆದೇಶದ ನಂತರ ಗೃಹ ಸಚಿವಾಲಯ (ಎಂ ಎಚ್ಎ) 20 ಹೆಚ್ಚುವರಿ ಸಿಎಪಿಎಫ್ ತುಕಡಿಗಳನ್ನು ಸಿಆರ್ಪಿಎಫ್ನ 15 …
Read More »ಏರ್ಪೋರ್ಟ್ ಮಾದರಿಯಲ್ಲಿ ಮೆಜೆಸ್ಟಿಕ್ ರೈಲು ನಿಲ್ದಾಣ ಅಭಿವೃದ್ದಿ:
ಬೆಂಗಳೂರು: ಏರ್ಪೋರ್ಟ್ ಮಾದರಿಯಲ್ಲಿ ಮೆಜೆಸ್ಟಿಕ್ ರೈಲು ನಿಲ್ದಾಣ ಅಭಿವೃದ್ಧಿ ಮಾಡುತ್ತೇವೆ ಎಂದು ರೈಲ್ವೆ ಇಲಾಖೆ ರಾಜ್ಯ ಸಚಿವ ವಿ.ಸೋಮಣ್ಣ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದ ಅಭಿವೃದ್ಧಿಗೆ ಡಿಪಿಆರ್ ಸಿದ್ಧವಾಗಿದೆ ಎಂದು ಹೇಳಿದ್ದಾರೆ. ರೈಲು ನಿಲ್ದಾಣ ಅಭಿವೃದ್ಧಿ ಬಗ್ಗೆ ರೈಲ್ವೆ ಮಂಡಳಿ ಸ್ಪಷ್ಟನೆ ಕೇಳಿದೆ. ಮುಂದಿನ ದಿನಗಳಲ್ಲಿ ರೈಲ್ವೆ ಮಂಡಳಿ ಮುಂದೆ ಇಡುತ್ತೇವೆ. ಒಳ್ಳೆಯ ಕೆಲಸಗಳಿಗೆ ಪ್ರಧಾನಿ ನರೇಂದ್ರ ಮೋದಿ ಬೇಡ ಎನ್ನುವುದಿಲ್ಲ. ರೈಲ್ವೆ …
Read More »ಕೃಷಿ ತ್ಯಾಜ್ಯ ಬೆಂಕಿಯಿಂದ ಉತ್ತರ ಭಾರತ ವೈದ್ಯಕೀಯ ತುರ್ತು ಸ್ಥಿತಿ ಎದುರಿಸುತ್ತಿದೆ: ದೆಹಲಿ ಸಿಎಂ
ನವದೆಹಲಿ: ಅಪಾಯಕಾರಿ ಕೃಷಿ ತ್ಯಾಜ ಸುಡುವ ಪರಿಣಾಮ ಉತ್ತರ ಭಾರತ ವೈದ್ಯಕೀಯ ತುರ್ತು ಸ್ಥಿತಿ ಎದುರಿಸುತ್ತಿದೆ ಎಂದು ದೆಹಲಿ ಮುಖ್ಯಮಂತ್ರಿ ಅತಿಶಿ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಮಾಲಿನ್ಯದ ವಿಷಯದಲ್ಲಿ ರಾಜಕೀಯ ಮಾಡುತ್ತಿದೆ. ಬಿಜೆಪಿ ಆಡಳಿತವಿರುವ ಹರಿಯಾಣ, ರಾಜಸ್ಥಾನ, ಉತ್ತರ ಪ್ರದೇಶ ಮತ್ತು ಮಧ್ಯಪ್ರದೇಶ ರಾಜ್ಯಗಳಲ್ಲಿ ಕೃಷಿ ತ್ಯಾಜ್ಯ ಸುಡುತ್ತಿರುವುದರ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದರು. ಇದೇ ವೇಳೆ ಎಎಪಿ ಆಡಳಿತವಿರುವ …
Read More »ಮಂಡ್ಯದಲ್ಲಿ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ: ಜಿಲ್ಲಾಡಳಿತದಿಂದ ಸಕಲ ಸಿದ್ಧತೆ ಆರಂಭ
ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಈ ಬಾರಿ ಸಕ್ಕರಿನಗರಿ ಮಂಡ್ಯದಲ್ಲಿ ನಡೆಯುತ್ತಿದೆ. ಈ ನುಡಿಜಾತ್ರೆಯನ್ನು ಮತ್ತಷ್ಟು ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಆಚರಣೆ ಮಾಡಲು, ಮಂಡ್ಯ ಜಿಲ್ಲಾಡಳಿತ ತಯಾರಿ ಮಾಡಿಕೊಂಡಿದೆ. ಈ ಮಧ್ಯೆ ತಾಂತ್ರಿಕ ಸಮಿತಿಯ ವರದಿಯ ಆಧರಿಸಿ, ನಗರದ ಹೊರವಲಯದ 60 ಎಕರೆ ಪ್ರದೇಶದಲ್ಲಿ ನುಡಿಜಾತ್ರೆಗೆ ಈಗಿನಿಂದಲೇ ತಯಾರಿ ಶುರುವಾಗಿದೆ. ಈ ಬಾರಿ ಸಕ್ಕರಿನಗರಿ ಮಂಡ್ಯದಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಡಿಸೆಂಬರ್ …
Read More »ಬೀದರ್ ನಲ್ಲಿ ಬೀದಿ ದೀಪಗಳಿಲ್ಲದೇ ಬಡವಾದ ಮಹಾನಗರದ ಪ್ರಮುಖ ರಸ್ತೆಗಳು
ಬೀದರ್: ಐತಿಹಾಸಿಕ, ಸಾಂಸ್ಕೃತಿಕ ಹಾಗೂ ಧಾರ್ಮಿಕವಾಗಿ ಮಹತ್ವ ಪಡೆದಿರುವ ಬೀದರ್ ಮಹಾನಗರದ ಪ್ರಮುಖ ರಸ್ತೆಗಳು ಬೀದಿ ದೀಪಗಳಿಲ್ಲದೆ ಬಡವಾಗಿವೆ. ಬೀದರ್ ಶಾಸಕರೂ ಆದ ಪೌರಾಡಳಿತ ಸಚಿವ ರಹೀಂ ಖಾನ್ ಅವರ ತವರಿನ ರಸ್ತೆಗಳೇ ಅಂಧಕಾರದಲ್ಲಿ ಮುಳುಗಿವೆ. ಜನ ವಾಹನಗಳ ಬೆಳಕಿನ ಆಸರೆಯಲ್ಲಿ ಓಡಾಡುವಂಥ ಪರಿಸ್ಥಿತಿ ಸೃಷ್ಟಿಯಾಗಿದೆ. ನಗರದ ನೌಬಾದ್ ಬಸವೇಶ್ವರ ವೃತ್ತದಿಂದ ಆರ್ಟಿಒ ಕಚೇರಿ ವರೆಗಿನ ಬೀದರ್-ನಾಂದೇಡ್ ಮುಖ್ಯರಸ್ತೆಯ ಬೀದಿದೀಪಗಳು ಹಾಳಾಗಿ ಅನೇಕ ತಿಂಗಳುಗಳಾಗಿವೆ. ಇಡೀ ಭಾಗ ಅಂಧಕಾರದಲ್ಲಿ ಮುಳುಗಿದೆ. …
Read More »ಸಂತಶ್ರೇಷ್ಠ ಕನಕದಾಸರ ಜಯಂತಿ: ರಾಜ್ಯದ ಜನತೆಗೆ ಸಿಎಂ ಶುಭಾಶಯ
ಬೆಂಗಳೂರು : ಸಂತಶ್ರೇಷ್ಠ ಕನಕದಾಸರ 537 ನೇ ಜಯಂತಿ ಮಹೋತ್ಸವವನ್ನ ಸರ್ಕಾರದ ವತಿಯಿಂದ ಎಲ್ಲೆಡೆ ಸಂಭ್ರಮದಿಂದ ಆಚರಿಸಲಾಗುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕನಕ ಜಯಂತಿ ಪ್ರಯುಕ್ತ ಶಾಸಕರ ಭವನದ ಆವರಣದಲ್ಲಿರುವ ದಾಸಶ್ರೇಷ್ಠ ಕನಕದಾಸರ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ರಾಜ್ಯದ ಜನತೆಗೆ ಕನಕ ಜಯಂತಿಯ ಶುಭಾಶಯಗಳನ್ನು ಕೋರಿದರು. ಸಚಿವರಾದ ಹೆಚ್.ಸಿ.ಮಹದೇವಪ್ಪ, ಪ್ರಿಯಾಂಕ್ ಖರ್ಗೆ, ಶಿವರಾಜ್ ತಂಗಡಗಿ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಸೇರಿ ಹಲವು …
Read More »ಸಹಾಯಕ ಪ್ರಾಧ್ಯಾಪಕರ ಹುದ್ದೆ ನೇಮಕಾತಿ: 1,016 ಅಭ್ಯರ್ಥಿಗಳಿಗೆ ಸ್ಥಳ ನಿಯುಕ್ತಿ ಮಾಡಿ ಆದೇಶ
ಬೆಂಗಳೂರು: ಸರಕಾರಿ ಪ್ರಥಮ ದರ್ಜೆ ಕಾಲೇಜುಗಳ ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಸಂಬಂಧಿಸಿ 1,016 ಅಭ್ಯರ್ಥಿಗಳಿಗೆ ನ.16ರಂದು ಆನ್ಲೈನ್ ಕೌನ್ಸಿಲಿಂಗ್ ಪ್ರಕ್ರಿಯೆಯನ್ನು ನಡೆಸಲಾಗಿದ್ದು, ಅದರಂತೆ ಸ್ಥಳ ಆಯ್ಕೆ ಮಾಡಿಕೊಂಡವರಿಗೆ ಸ್ಥಳ ನಿಯುಕ್ತಿ ಮಾಡಿ ಆದೇಶ ಹೊರಡಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ತಿಳಿಸಿದ್ದಾರೆ. ರವಿವಾರ ಪ್ರಕಟನೆ ಹೊರಡಿಸಿರುವ ಅವರು, ಸರಕಾರಿ ಪ್ರಥಮ ದರ್ಜೆ ಕಾಲೇಜುಗಳ ವಿವಿಧ ವಿಷಯಗಳ ಸಹಾಯಕ ಪ್ರಾಧ್ಯಾಪಕರ ಮಂಜೂರಾದ ಹುದ್ದೆಗಳಲ್ಲಿ ಒಟ್ಟು 1,654 ಹುದ್ದೆಗಳು ಖಾಲಿ …
Read More »ನಬಾರ್ಡ್ ಸಾಲದಲ್ಲೂ ಕೇಂದ್ರದಿಂದ ಅನ್ಯಾಯ: ಸಿಎಂ ಸಿದ್ದರಾಮಯ್ಯ ಆಕ್ರೋಶ
ನವದೆಹಲಿ: ಇಷ್ಟು ದಿನ ಕೇಂದ್ರ ಸರ್ಕಾರ ತೆರಿಗೆ ಹಂಚಿಕೆ ವಿಚಾರದಲ್ಲಿ ತಾರತಮ್ಯ ಮಾಡುತ್ತಿದೆ ಎಂದು ಹೋರಾಟವನ್ನೇ ಮಾಡಿದ ಸಿಎಂ ಸಿದ್ದರಾಮಯ್ಯ ಈಗ ನಬಾರ್ಡ್ ಸಾಲದಲ್ಲೂ ಅನ್ಯಾಯವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಬಾರ್ಡ್ ಸಾಲದಲ್ಲಿ ರಾಜ್ಯಕ್ಕೆ ಭಾರೀ ಅನ್ಯಾಯವಾಗಿದೆ ಎಂದು ಪ್ರಧಾನಿ ಮೋದಿ ಮತ್ತು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ ಪತ್ರ ಬರೆದು ಆಕ್ರೋಶ ವ್ಯಕ್ತಪಡಿಸುವಂತೆ ಕರೆ ನೀಡಿದ್ದಾರೆ. ಕಳೆದ ವರ್ಷ 5,600 ಕೋಟಿ ರೂ. ಸಾಲ ನೀಡಿತ್ತು ಆದರೆ …
Read More »ಕೊಡಗು ಜಿಲ್ಲೆಯಲ್ಲಿ 13 ವಿದ್ಯುತ್ ಉಪ ಕೇಂದ್ರಗಳ ಸ್ಥಾಪನೆ: ಸಚಿವ ಕೆ.ಜೆ.ಜಾರ್ಜ್
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಒಟ್ಟು 13 ವಿದ್ಯುತ್ ಸರಬರಾಜು ಉಪಕೇಂದ್ರಗಳ ಸ್ಥಾಪನೆಗೆ ಉದ್ದೇಶಿಸಲಾಗಿದ್ದು, ಇವುಗಳಲ್ಲಿ ಈಗಾಗಲೇ 4 ಉಪಕೇಂದ್ರಕ್ಕೆ ಟೆಂಡರ್ ಕರೆಯಲಾಗಿದೆ. ಇನ್ನುಳಿದ ಕೇಂದ್ರಗಳ ಸ್ಥಾಪನೆಗೂ ತ್ವರಿತ ಕ್ರಮ ಕೈಗೊಂಡು ಕೊಡಗು ಜಿಲ್ಲೆಯಲ್ಲಿ ವಿದ್ಯುತ್ ಸರಬರಾಜಿನಲ್ಲಿ ಆಗುವ ತೊಂದರೆಗಳನ್ನು ಸಂಪೂರ್ಣವಾಗಿ ನಿವಾರಿಸಲಾಗುವುದು ಎಂದು ಇಂಧನ ಖಾತೆ ಸಚಿವ ಕೆ.ಜೆ.ಜಾರ್ಜ್ ತಿಳಿಸಿದರು. ನನಗೆ ಕೊಡಗು ಎಂದರೆ ಹೆಚ್ಚು ಪ್ರೀತಿ. ಇಲ್ಲಿಯೇ ಓದಿದ್ದೇನೆ, ನನ್ನ ಬೆಳವಣಿಗೆಗೂ ಕೊಡಗು ಕಾರಣವಾಗಿದೆ. ಹಾಗಾಗಿ, ನಾನು ಯಾವುದೇ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





