ತಿಪಟೂರು: ಕೆ.ಎಸ್.ಆರ್ಬೆಂಗಳೂರು-ಶಿವಮೊಗ್ಗ ಟೌನ್ ಜನಶತಾಬ್ಬಿ ಎಕ್ಸ್ಪ್ರೆಸ್ ಹಾಗೂ ಕೆ.ಎಸ್.ಆರ್ ಬೆಂಗಳೂರು-ಎಸ್.ಎಸ್.ಎಸ್ ಹುಬ್ಬಳ್ಳಿ ಜನಶತಾಬ್ದ ಎಕ್ಸ್ಪ್ರೆಸ್ ರೈಲುಗಳಿಗೆ ತಿಪಟೂರು ರೈಲ್ವೆ ನಿಲ್ದಾಣದಲ್ಲಿ ಹೆಚ್ಚುವರಿ ನಿಲುಗಡೆಗೆ ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ಹಸಿರು ನಿಶಾನೆ ನೀಡಿದರು. ಈ ವೇಳೆ ಮಾತನಾಡಿದ ಸಚಿವರು, ಈ ಹಿಂದಿನ ಯುಪಿಎ ಅವಧಿಯಲ್ಲಿ ಕರ್ನಾಟಕದ ರೈಲ್ವೆಗೆ ಕೇವಲ 830 ಕೋಟಿ ನೀಡುತ್ತಿದ್ದರು. ಆದರೆ ಪ್ರಧಾನಿ ನರೇಂದ್ರ ಮೋದಿ ಸರ್ಕಾರದಲ್ಲಿ ವಾರ್ಷಿಕ 7750 ಕೋಟಿ …
Read More »ಬಾಗಲಕೋಟೆ: ರೈತರ ಮನವಿಗೆ ಸ್ಪಂದಿಸಿದ ಸಿಎಂ ಸಿದ್ದರಾಮಯ್ಯ
ಬಾಗಲಕೋಟೆ: ಜಿಲ್ಲೆಗೆ ಆಗಮಿಸಿದ್ದ ಸಿಎಂ ಸಿದ್ದರಾಮಯ್ಯರನ್ನು ಕಬ್ಬು ಬೆಳೆಗಾರರು ಭೇಟಿ ನೀಡಿ ತಮ್ಮ ಅಹವಾಲು ಸಲ್ಲಿಸಿದರು. ಕಳೆದ ಕೆಲ ದಿನಗಳಿಂದ ಕಬ್ಬಿಗೆ 3500 ದರ ನಿಗದಿಸುವಂತೆ ಆಗ್ರಹಿಸಿ ರೈತರ ಹೋರಾಟ ನಡೆಸುತ್ತಿದ್ದಾರೆ. ಹೀಗಾಗಿ ಇಂದು ಬಾಗಲಕೋಟೆಗೆ ಆಗಮಿಸಿದ್ದ ಸಿಎಂ ಸಿದ್ದರಾಮಯ್ಯರನ್ನು ಭೇಟಿ ಮಾಡಿದ ಕಬ್ಬು ಬೆಳೆಗಾರರ ಸಂಘದ ಸದಸ್ಯರು, ತಮ್ಮ ಮನವಿ ಸಲ್ಲಿಸಿದರು. ರೈತರ ಮನವಿಗೆ ಸ್ಪಂದಿಸಿದ ಸಿಎಂ ಸಿದ್ದರಾಮಯ್ಯ, ನಾಲ್ಕು ದಿನಗಳಲ್ಲಿ ಸಭೆ ನಡೆಸುವಂತೆ ಸಚಿವರಿಗೆ ಸೂಚನೆ ನೀಡಿದರು. …
Read More »ಇನ್ನೂ ನಾಲ್ಕು ದಿನ ಎನ್ ಎಲ್ ಬಿ ಸಿ ಕಾಲುವೆಗೆ ನಿರಂತರವಾಗಿ ನೀರು ಹರಿಸಲು ಸೂಚನೆ: ಸಚಿವ ಶರಣಬಸಪ್ಪ
ಶಹಾಪುರ: ಮುಂಗಾರು ಹಂಗಾಮಿನ ಭಾಗವಾಗಿ ಇನ್ನೂ ನಾಲ್ಕು ದಿನ ಎನ್ಎಲ್ಬಿಸಿ ಕಾಲುವೆಗೆ ನಿರಂತರವಾಗಿ ನೀರು ಹರಿಸಲು ಸೂಚಿಸಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರ ತಿಳಿಸಿದರು. ಈ ಕುರಿತು ಮಾತನಾಡಿದ ಅವರು, ನಿಗದಿತ ನಿಯಮದ ಪ್ರಕಾರ ಭಾನುವಾರ(ನ.17) ಕಾಲುವೆ ನೀರು ಸ್ಥಗಿತಗೊಳಿಸಬೇಕಾಗಿತ್ತು. ಆದರೆ ರೈತರ ಹಿತದೃಷ್ಟಿಯಿಂದ ನ.17ರಿಂದ 20ರವರೆಗೆ ಕಾಲುವೆಗೆ ನಿರಂತರವಾಗಿ ನೀರು ಹರಿಸಲು ನಿಗಮದ ಅಧಿಕಾರಿಗಳಿಗೆ ಶನಿವಾರ ಆಲಮಟ್ಟಿಯಲ್ಲಿ ನಡೆದ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ಸೂಚಿಸಿದೆ …
Read More »ತುಮಕೂರು: ವಿದ್ಯಾರ್ಥಿ ನಿಲಯಗಳಿಗೆ ಜಿಲ್ಲಾಧಿಕಾರಿಗಳ ದಿಢೀರ್ ಭೇಟಿ
ತುಮಕೂರು: ನಗರದ ಮೆಳೆ ಕೋಟೆಯಲ್ಲಿರುವ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕರ ಹಾಗೂ ವೃತ್ತಿಪರ ಬಾಲಕರ ವಿದ್ಯಾರ್ಥಿ ನಿಲಯಗಳಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪರಿಶೀಲನೆ ವೇಳೆ ಸ್ವಚ್ಛತೆ ಇಲ್ಲದ ವಿದ್ಯಾರ್ಥಿಗಳ ಕೊಠಡಿ, ಶೌಚಾಲಯ, ನಿಲಯದ ಆವರಣವನ್ನು ಗಮನಿಸಿದ ಅವರು ಎಲ್ಲವನ್ನು ಸ್ವಚ್ಛವಾಗಿಡಬೇಕು. ಮತ್ತೊಮ್ಮೆ ಭೇಟಿ ನೀಡಿ ಪರಿಶೀಲಿಸಲಾಗುವುದು. ಸರ್ಕಾರದಿಂದ ಸಂಬಳ ಪಡೆಯುತ್ತಿಲ್ಲವೇ? ಕೆಲಸ ಮಾಡಲು ಉದಾಸೀನವೇಕೆ? ಎಂದು ನಿಲಯದ ವಾರ್ಡನ್ ವೆಂಕಟೇಶ್ ಅವರನ್ನು ತರಾಟೆಗೆ …
Read More »ಕೋ-ಆಪರೇಟಿವ್ ಮ್ಯಾನೇಜ್ ಮೆಂಟ್ ಪದವೀಧರರಿಗೆ ಉದ್ಯೋಗದಲ್ಲಿ ಮೀಸಲಾತಿ ಕುರಿತು ಪರಿಶೀಲಿಸಿ ಕ್ರಮ: ಸಿಎಂ
ಬಾಗಲಕೋಟೆ: ಕೋಆಪರೇಟೀವ್ ಮ್ಯಾನೇಜ್ ಮೆಂಟ್ ಪದವೀಧರರಿಗೆ ಉದ್ಯೋಗದಲ್ಲಿ ಮೀಸಲಾತಿ ತರುವ ಬಗ್ಗೆ ಪರಿಶೀಲಿಸಿ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು. ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಕರ್ನಾಟಕ ರಾಜ್ಯ ಅಪೆಕ್ಸ್ ಬ್ಯಾಂಕ್ ಆಯೋಜಿಸಿದ್ದ 71ನೇ ಅಖಿಲ ಭಾರತ ಸಹಕಾರ ಸಪ್ತಾಹ ಉದ್ಘಾಟಿಸಿ, 2024 ನೇ ಸಾಲಿನ ಸಹಕಾರ ರತ್ನ ಪ್ರಶಸ್ತಿ ವಿತರಿಸಿ ಮಾತನಾಡಿದರು. ನಾನು ಯಾವತ್ತೂ ಸಹಕಾರಿ ಚಳವಳಿ ಮತ್ತು ಸಹಕಾರಿ ತತ್ವದ ಪರವಾಗಿ ಇರುವವನು. ಈ …
Read More »ಪಿಂಚಣಿ ಮೊತ್ತ ಬಿಡುಗಡೆಗೊಳಿಸಲು ಲಂಚ ಪಡೆಯುತ್ತಿದ್ದ ಇಬ್ಬರು ಲೋಕಾಯುಕ್ತ ಬಲೆಗೆ
ಉಡುಪಿ: ನಿವೃತ್ತ ಶಿಕ್ಷಕರೊಬ್ಬರಿಗೆ ಪಿಂಚಣಿ ಹಣ ಬಿಡುಗಡೆಗೊಳಿಸಲು ಲಂಚ ಪಡೆಯುತ್ತಿದ್ದ ಉಡುಪಿ ಖಜಾನೆಯ ಉಪನಿರ್ದೇಶಕ ಮತ್ತು ಸಹಾಯಕನನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ನಿವೃತ್ತ ಶಿಕ್ಷಕ ಹಿತೇಂದ್ರ ಭಂಡಾರಿ ತಮ್ಮ ಪಿಂಚಣಿ ಹಣ ಪಡೆಯಲು ಕಳೆದ ಐದು ತಿಂಗಳಿಂದ ಖಜಾನೆಯ ಉಪನಿರ್ದೇಶಕ ರವಿಕುಮಾರ್ ಮತ್ತು ಸಹಾಯಕ ರಾಘವೇಂದ್ರ ಎಂಬುವರು ಸತಾಯಿಸುತ್ತಿದ್ದು, 5,000 ರೂ.ಲಂಚ ನೀಡುವಂತೆ ಒತ್ತಾಯಿಸಿದ್ದರು ಎಂದು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಲಾಗಿತ್ತು. ಲೋಕಾಯುಕ್ತ ಡಿವೈಎಸ್ಪಿ ಮಂಜುನಾಥ್, ನಿರೀಕ್ಷಕರಾದ ಸುರೇಶ್, ಕೆ.ಎನ್. …
Read More »55 ಸಾವಿರ ಕೋಟಿ ರೂ. ವೆಚ್ಚದ ಮುಂಬೈ-ಬೆಂಗಳೂರು ಎಕ್ಸ್ಪ್ರೆಸ್ ಹೆದ್ದಾರಿ ನಿರ್ಮಾಣ: ಕೇಂದ್ರ ಸಚಿವ ನಿತಿನ್ ಗಡ್ಕರಿ
ಪುಣೆ: ಮುಂಬೈ -ಬೆಂಗಳೂರು ನಡುವೆ ಸಂಪರ್ಕ ಕಲ್ಪಿಸುವ ಎಕ್ಸ್ಪ್ರೆಸ್ ಹೆದ್ದಾರಿಯನ್ನು 55,000 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣ ಮಾಡಲಾಗುತ್ತಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ಚಿಂಚ್ವಾಡದಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಈ ಮಾರ್ಗವು ಪಿಂಪ್ರಿ, ಚಿಂಚ್ವಾಡಗಳಲ್ಲಿನ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡುತ್ತದೆ. ಮೊದಲ ಹಂತದಲ್ಲಿ ನಾಸಿಕ್ ಘಾಟದಿಂದ ಖೇಡ್ ನಡುವೆ 8,000 ಕೋಟಿ ರೂಪಾಯಿ ಖರ್ಚಿನಲ್ಲಿ ಹೆದ್ದಾರಿ …
Read More »ಬೆಂಬಲ ಬೆಲೆಯಡಿ ಬಳ್ಳಾರಿ ಜಿಲ್ಲೆಯಲ್ಲಿ 7 ಖರೀದಿ ಕೇಂದ್ರಗಳ ಆರಂಭ: ಜಿಲ್ಲಾಧಿಕಾರಿ
ಬಳ್ಳಾರಿ: ಪ್ರಸ್ತಕ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಠ ಬೆಂಬಲ ಯೋಜನೆಯಡಿ ರೈತರಿಂದ ಭತ್ತ, ರಾಗಿ, ಜೋಳ ಖರೀದಿಸಲು ಜಿಲ್ಲೆಯಲ್ಲಿ ಏಳು ಖರೀದಿ ಕೇಂದ್ರಗಳನ್ನು ತೆರೆಯಲಾಗಿದೆ ಎಂದು ಜಿಲ್ಲಾ ಟಾಸ್ಕ್ಫೋರ್ಸ್ ಸಮಿತಿಯ ಅಧ್ಯಕ್ಷ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ತಿಳಿಸಿದ್ದಾರೆ. ಜಿಲ್ಲಾಡಳಿತ ಭವನದಲ್ಲಿ ಏರ್ಪಡಿಸಿದ್ದ ಜಿಲ್ಲಾ ಟಾಸ್ಕ್ಫೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಬಿಳಿ ಜೋಳವನ್ನು ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ನೇರವಾಗಿ ಖರೀದಿಸಲು ಜಿಲ್ಲಾ ಟಾಸ್ಕ್ಫೋರ್ಸ್ …
Read More »ಕೃಷ್ಣಾ ಮೇಲ್ದಂಡೆ ಯೋಜನೆ: 10 ವರ್ಷಗಳಲ್ಲಿ ಅವಿಭಜಿತ ಆಂಧ್ರಕ್ಕೆ ಹರಿದ 5,611 ಟಿಎಂಸಿ ಅಡಿ ನೀರು
ಬಾಗಲಕೋಟೆ: ಕೃಷ್ಣಾ ಮೇಲ್ದಂಡೆ ಯೋಜನೆ (ಯುಕೆಪಿ) ಮೂರನೇ ಹಂತದ ಕಾಮಗಾರಿ ನನೆಗುದಿಗೆ ಬಿದ್ದಿದ್ದು, 10 ವರ್ಷಗಳಲ್ಲಿ 5,611 ಟಿಎಂಸಿ ಅಡಿ ನೀರು ಅವಿಭಜಿತ ಆಂಧ್ರ ಪ್ರದೇಶಕ್ಕೆ ಹರಿದು ಹೋಗಿದೆ. ರಾಜ್ಯಕ್ಕೆ ತನ್ನ ಪಾಲಿನ 1,170 ಟಿಎಂಸಿ ಅಡಿ ನೀರು ಬಳಸಿಕೊಳ್ಳಲು ಸಾಧ್ಯವಾಗಿಲ್ಲ. ಕೃಷ್ಣಾ ನ್ಯಾಯಮಂಡಳಿ 2010ರಲ್ಲಿ ನೀಡಿದ ತೀರ್ಪಿನಲ್ಲಿ ಪ್ರತಿ ವರ್ಷ 177 ಟಿಎಂಸಿ ಅಡಿ ನೀರು ಬಳಕೆಗೆ ಅವಕಾಶ ನೀಡಿದೆ. ಮೂರನೇ ಹಂತದ ಯೋಜನೆ ಜಾರಿಯಾಗಿದ್ದರೆ ಕಲಬುರಗಿ, ವಿಜಯಪುರ, …
Read More »ನೆಲಮಂಗಲ-ತುಮಕೂರಿನವರೆಗೆ 6 ಪಥ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ: ಕೇಂದ್ರ ಸಚಿವ ಸೋಮಣ್ಣ
ತುಮಕೂರು: ರಾಜ್ಯದ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನೆಲಮಂಗಲ – ತುಮಕೂರಿನವರೆಗೆ 6 ಪಥ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಮಾಡಲು ಉದ್ದೇಶಿಸಲಾಗಿದೆ ಎಂದು ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಖಾತೆ ಸಚಿವ ಹಾಗೂ ಸಂಸದ ವಿ.ಸೋಮಣ್ಣ ತಿಳಿಸಿದರು. ಜಿಲ್ಲೆಯ ತುರುವೇಕೆರೆ ತಾಲೂಕಿನ ಸಂಪಿಗೆ ರೋಡ್ ರೈಲ್ವೆ ನಿಲ್ದಾಣದಲ್ಲಿ ಇಂದು ಸಂಜೆ ರೈಲ್ವೇ ನಿಲ್ದಾಣ ಪರಿವೀಕ್ಷಣೆ ಹಾಗೂ ಯಶವಂತಪುರ-ಚಿಕ್ಕಮಗಳೂರು ಎಕ್ಸ್ಪ್ರೆಸ್ ಗೆ ಹೆಚ್ಚುವರಿ ರೈಲು ನಿಲುಗಡೆಗೆ ಚಾಲನೆ ನೀಡಿ ಮಾತನಾಡಿದರು. ಜಿಲ್ಲೆಯಲ್ಲಿ ರೈಲ್ವೇ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





