Breaking News

BigTv News

ಕೊಡಗು ಜಿಲ್ಲೆಯಲ್ಲಿ 13 ವಿದ್ಯುತ್ ಉಪ ಕೇಂದ್ರಗಳ ಸ್ಥಾಪನೆ: ಸಚಿವ ಕೆ.ಜೆ.ಜಾರ್ಜ್‌

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಒಟ್ಟು 13 ವಿದ್ಯುತ್ ಸರಬರಾಜು ಉಪಕೇಂದ್ರಗಳ ಸ್ಥಾಪನೆಗೆ ಉದ್ದೇಶಿಸಲಾಗಿದ್ದು, ಇವುಗಳಲ್ಲಿ ಈಗಾಗಲೇ 4 ಉಪಕೇಂದ್ರಕ್ಕೆ ಟೆಂಡರ್ ಕರೆಯಲಾಗಿದೆ. ಇನ್ನುಳಿದ ಕೇಂದ್ರಗಳ ಸ್ಥಾಪನೆಗೂ ತ್ವರಿತ ಕ್ರಮ ಕೈಗೊಂಡು ಕೊಡಗು ಜಿಲ್ಲೆಯಲ್ಲಿ ವಿದ್ಯುತ್ ಸರಬರಾಜಿನಲ್ಲಿ ಆಗುವ ತೊಂದರೆಗಳನ್ನು ಸಂಪೂರ್ಣವಾಗಿ ನಿವಾರಿಸಲಾಗುವುದು ಎಂದು ಇಂಧನ ಖಾತೆ ಸಚಿವ ಕೆ.ಜೆ.ಜಾರ್ಜ್ ತಿಳಿಸಿದರು. ನನಗೆ ಕೊಡಗು ಎಂದರೆ ಹೆಚ್ಚು ಪ್ರೀತಿ. ಇಲ್ಲಿಯೇ ಓದಿದ್ದೇನೆ, ನನ್ನ ಬೆಳವಣಿಗೆಗೂ ಕೊಡಗು ಕಾರಣವಾಗಿದೆ. ಹಾಗಾಗಿ, ನಾನು ಯಾವುದೇ …

Read More »

ಪಿಡಿಒ ನೇಮಕಾತಿ ಪರೀಕ್ಷೆಯಲ್ಲಿ ಗೊಂದಲ: ವಿಚಾರಣೆಗೆ ಆದೇಶ

ಬೆಂಗಳೂರು: ಕಲ್ಯಾಣ ಕರ್ನಾಟಕ ವೃಂದದ 97 ಪಂಚಾಯಿತಿ ಅಭಿವೃದ್ಧಿ ಅಧಿಕಾರಿ(ಪಿಡಿಒ) ಹುದ್ದೆಗಳ ನೇಮಕಾತಿಗೆ ನಡೆದ ಪರೀಕ್ಷೆಯಲ್ಲಿ ಗೊಂದಲ ಉಂಟಾಗಿದೆ. ಪಿಡಿಒ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ರಾಯಚೂರು, ಕಲಬುರಗಿಯಲ್ಲಿ ಅಭ್ಯರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ಹಲವರು ಪರೀಕ್ಷೆಯನ್ನು ಬಹಿಷ್ಕರಿಸಿದ್ದಾರೆ. ರಾಯಚೂರು ಜಿಲ್ಲೆ ಸಿಂಧನೂರಿನ ಪರೀಕ್ಷಾ ಕೇಂದ್ರದಲ್ಲಿ ಅನೇಕ ಅಭ್ಯರ್ಥಿಗಳಿಗೆ ಪ್ರಶ್ನೆ ಪತ್ರಿಕೆ ತಲುಪದಿರುವ ಬಗ್ಗೆ ವಿಚಾರಣೆಗೆ ಆದೇಶಿಸಲಾಗಿದೆ. ಅಭ್ಯರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಪ್ರಶ್ನೆ ಪತ್ರಿಕೆ ವಿತರಿಸಿಲ್ಲ ಎನ್ನುವ ಮಾಹಿತಿ ಹಿನ್ನೆಲೆಯಲ್ಲಿ …

Read More »

ಮಹಾರಾಷ್ಟ್ರದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲು: ರೇವಂತ್ ರೆಡ್ಡಿ

ಮುಂಬೈ: ಮಹಾರಾಷ್ಟ್ರದಲ್ಲಿ ಕಾಂಗ್ರೆಸ್‌ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಮುಸ್ಲಿಮರಿಗೆ ಮೀಸಲು ನೀಡುವ ಬಗ್ಗೆ ಚರ್ಚೆ ಮಾಡುತ್ತೇವೆ ಎಂದು ತೆಲಂಗಾಣ ಸಿಎಂ ರೇವಂತ್‌ ರೆಡ್ಡಿ ಹೇಳಿದ್ದಾರೆ. ಮಹಾರಾ ಷ್ಟ್ರದಲ್ಲಿ ಮಾತನಾಡಿ ಸರಕಾರ ಅಧಿಕಾರಕ್ಕೆ ಬಂದ ಮೇಲೆ ಮುಸ್ಲಿಂ ಮೀಸಲು ಬಗ್ಗೆ ಚರ್ಚಿಸುತ್ತೇವೆ. ತೆಲಂಗಾಣ ದಲ್ಲಿ ಈಗಾಗಲೇ ಶೇ.4 ರಷ್ಟು ಮೀಸಲನ್ನು ಜಾರಿ ಮಾಡಲಾಗಿದೆ. ಮೊದಲಿಗೆ ಶೇ.5ರಷ್ಟು ಜಾರಿಮಾಡಲು ನಿರ್ಧರಿಸಲಾಗಿತ್ತು. ಇದು ಶೇ.50ರ ಮಿತಿಗಿಂತ ಹೆಚ್ಚಾಗುತ್ತದೆ ಎಂದು ಸುಪ್ರೀಂಕೋರ್ಟ್‌ ಆದೇಶಿದ ಬಳಿಕ ಶೇ.4ಕ್ಕೆ …

Read More »

ಮೋದಿ ಸರ್ಕಾರದಿಂದ ಕರ್ನಾಟಕ ರೈಲ್ವೆಗೆ 7,750 ಕೋಟಿ ರೂ. ಅನುದಾನ: ಕೇಂದ್ರ ಸಚಿವ ಸೋಮಣ್ಣ

ತಿಪಟೂರು: ಕೆ.ಎಸ್.ಆರ್‌ಬೆಂಗಳೂರು-ಶಿವಮೊಗ್ಗ ಟೌನ್‌ ಜನಶತಾಬ್ಬಿ ಎಕ್ಸ್‌ಪ್ರೆಸ್ ಹಾಗೂ ಕೆ.ಎಸ್.ಆರ್ ಬೆಂಗಳೂರು-ಎಸ್.ಎಸ್.ಎಸ್ ಹುಬ್ಬಳ್ಳಿ ಜನಶತಾಬ್ದ ಎಕ್ಸ್‌ಪ್ರೆಸ್ ರೈಲುಗಳಿಗೆ ತಿಪಟೂರು ರೈಲ್ವೆ ನಿಲ್ದಾಣದಲ್ಲಿ ಹೆಚ್ಚುವರಿ ನಿಲುಗಡೆಗೆ ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ಹಸಿರು ನಿಶಾನೆ ನೀಡಿದರು. ಈ ವೇಳೆ ಮಾತನಾಡಿದ ಸಚಿವರು, ಈ ಹಿಂದಿನ ಯುಪಿಎ ಅವಧಿಯಲ್ಲಿ ಕರ್ನಾಟಕದ ರೈಲ್ವೆಗೆ ಕೇವಲ 830 ಕೋಟಿ ನೀಡುತ್ತಿದ್ದರು. ಆದರೆ ಪ್ರಧಾನಿ ನರೇಂದ್ರ ಮೋದಿ ಸರ್ಕಾರದಲ್ಲಿ ವಾರ್ಷಿಕ 7750 ಕೋಟಿ …

Read More »

ಬಾಗಲಕೋಟೆ: ರೈತರ ಮನವಿಗೆ ಸ್ಪಂದಿಸಿದ ಸಿಎಂ ಸಿದ್ದರಾಮಯ್ಯ

ಬಾಗಲಕೋಟೆ: ಜಿಲ್ಲೆಗೆ ಆಗಮಿಸಿದ್ದ ಸಿಎಂ ಸಿದ್ದರಾಮಯ್ಯರನ್ನು ಕಬ್ಬು ಬೆಳೆಗಾರರು ಭೇಟಿ ನೀಡಿ ತಮ್ಮ ಅಹವಾಲು ಸಲ್ಲಿಸಿದರು. ಕಳೆದ ಕೆಲ ದಿನಗಳಿಂದ ಕಬ್ಬಿಗೆ 3500 ದರ ನಿಗದಿಸುವಂತೆ ಆಗ್ರಹಿಸಿ ರೈತರ ಹೋರಾಟ ನಡೆಸುತ್ತಿದ್ದಾರೆ. ಹೀಗಾಗಿ ಇಂದು ಬಾಗಲಕೋಟೆಗೆ ಆಗಮಿಸಿದ್ದ ಸಿಎಂ ಸಿದ್ದರಾಮಯ್ಯರನ್ನು ಭೇಟಿ ಮಾಡಿದ ಕಬ್ಬು ಬೆಳೆಗಾರರ ಸಂಘದ ಸದಸ್ಯರು, ತಮ್ಮ ಮನವಿ ಸಲ್ಲಿಸಿದರು. ರೈತರ ಮನವಿಗೆ ಸ್ಪಂದಿಸಿದ ಸಿಎಂ ಸಿದ್ದರಾಮಯ್ಯ, ನಾಲ್ಕು ದಿನಗಳಲ್ಲಿ ಸಭೆ ನಡೆಸುವಂತೆ ಸಚಿವರಿಗೆ ಸೂಚನೆ ನೀಡಿದರು. …

Read More »

ಇನ್ನೂ ನಾಲ್ಕು ದಿನ ಎನ್ ಎಲ್ ಬಿ ಸಿ ಕಾಲುವೆಗೆ ನಿರಂತರವಾಗಿ ನೀರು ಹರಿಸಲು ಸೂಚನೆ: ಸಚಿವ ಶರಣಬಸಪ್ಪ

ಶಹಾಪುರ: ಮುಂಗಾರು ಹಂಗಾಮಿನ ಭಾಗವಾಗಿ ಇನ್ನೂ ನಾಲ್ಕು ದಿನ ಎನ್‌ಎಲ್‌ಬಿಸಿ ಕಾಲುವೆಗೆ ನಿರಂತರವಾಗಿ ನೀರು ಹರಿಸಲು ಸೂಚಿಸಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರ ತಿಳಿಸಿದರು. ಈ ಕುರಿತು ಮಾತನಾಡಿದ ಅವರು, ನಿಗದಿತ ನಿಯಮದ ಪ್ರಕಾರ ಭಾನುವಾರ(ನ.17) ಕಾಲುವೆ ನೀರು ಸ್ಥಗಿತಗೊಳಿಸಬೇಕಾಗಿತ್ತು. ಆದರೆ ರೈತರ ಹಿತದೃಷ್ಟಿಯಿಂದ ನ.17ರಿಂದ 20ರವರೆಗೆ ಕಾಲುವೆಗೆ ನಿರಂತರವಾಗಿ ನೀರು ಹರಿಸಲು ನಿಗಮದ ಅಧಿಕಾರಿಗಳಿಗೆ ಶನಿವಾರ ಆಲಮಟ್ಟಿಯಲ್ಲಿ ನಡೆದ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ಸೂಚಿಸಿದೆ …

Read More »

ತುಮಕೂರು: ವಿದ್ಯಾರ್ಥಿ ನಿಲಯಗಳಿಗೆ ಜಿಲ್ಲಾಧಿಕಾರಿಗಳ ದಿಢೀರ್ ಭೇಟಿ

ತುಮಕೂರು: ನಗರದ ಮೆಳೆ ಕೋಟೆಯಲ್ಲಿರುವ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕರ ಹಾಗೂ ವೃತ್ತಿಪರ ಬಾಲಕರ ವಿದ್ಯಾರ್ಥಿ ನಿಲಯಗಳಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪರಿಶೀಲನೆ ವೇಳೆ ಸ್ವಚ್ಛತೆ ಇಲ್ಲದ ವಿದ್ಯಾರ್ಥಿಗಳ ಕೊಠಡಿ, ಶೌಚಾಲಯ, ನಿಲಯದ ಆವರಣವನ್ನು ಗಮನಿಸಿದ ಅವರು ಎಲ್ಲವನ್ನು ಸ್ವಚ್ಛವಾಗಿಡಬೇಕು. ಮತ್ತೊಮ್ಮೆ ಭೇಟಿ ನೀಡಿ ಪರಿಶೀಲಿಸಲಾಗುವುದು. ಸರ್ಕಾರದಿಂದ ಸಂಬಳ ಪಡೆಯುತ್ತಿಲ್ಲವೇ? ಕೆಲಸ ಮಾಡಲು ಉದಾಸೀನವೇಕೆ? ಎಂದು ನಿಲಯದ ವಾರ್ಡನ್ ವೆಂಕಟೇಶ್ ಅವರನ್ನು ತರಾಟೆಗೆ …

Read More »

ಕೋ-ಆಪರೇಟಿವ್‌ ಮ್ಯಾನೇಜ್ ಮೆಂಟ್ ಪದವೀಧರರಿಗೆ ಉದ್ಯೋಗದಲ್ಲಿ ಮೀಸಲಾತಿ ಕುರಿತು ಪರಿಶೀಲಿಸಿ ಕ್ರಮ: ಸಿಎಂ

ಬಾಗಲಕೋಟೆ: ಕೋಆಪರೇಟೀವ್ ಮ್ಯಾನೇಜ್ ಮೆಂಟ್ ಪದವೀಧರರಿಗೆ ಉದ್ಯೋಗದಲ್ಲಿ ಮೀಸಲಾತಿ ತರುವ ಬಗ್ಗೆ ಪರಿಶೀಲಿಸಿ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು. ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಕರ್ನಾಟಕ ರಾಜ್ಯ ಅಪೆಕ್ಸ್ ಬ್ಯಾಂಕ್ ಆಯೋಜಿಸಿದ್ದ 71ನೇ ಅಖಿಲ‌ ಭಾರತ ಸಹಕಾರ ಸಪ್ತಾಹ ಉದ್ಘಾಟಿಸಿ, 2024 ನೇ ಸಾಲಿನ ಸಹಕಾರ ರತ್ನ ಪ್ರಶಸ್ತಿ ವಿತರಿಸಿ ಮಾತನಾಡಿದರು. ನಾನು ಯಾವತ್ತೂ ಸಹಕಾರಿ ಚಳವಳಿ ಮತ್ತು ಸಹಕಾರಿ ತತ್ವದ ಪರವಾಗಿ ಇರುವವನು. ಈ …

Read More »

ಪಿಂಚಣಿ ಮೊತ್ತ ಬಿಡುಗಡೆಗೊಳಿಸಲು ಲಂಚ ಪಡೆಯುತ್ತಿದ್ದ ಇಬ್ಬರು ಲೋಕಾಯುಕ್ತ ಬಲೆಗೆ

ಉಡುಪಿ: ನಿವೃತ್ತ ಶಿಕ್ಷಕರೊಬ್ಬರಿಗೆ ಪಿಂಚಣಿ ಹಣ ಬಿಡುಗಡೆಗೊಳಿಸಲು ಲಂಚ ಪಡೆಯುತ್ತಿದ್ದ ಉಡುಪಿ ಖಜಾನೆಯ ಉಪನಿರ್ದೇಶಕ ಮತ್ತು ಸಹಾಯಕನನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ನಿವೃತ್ತ ಶಿಕ್ಷಕ ಹಿತೇಂದ್ರ ಭಂಡಾರಿ ತಮ್ಮ ಪಿಂಚಣಿ ಹಣ ಪಡೆಯಲು ಕಳೆದ ಐದು ತಿಂಗಳಿಂದ ಖಜಾನೆಯ ಉಪನಿರ್ದೇಶಕ ರವಿಕುಮಾರ್ ಮತ್ತು ಸಹಾಯಕ ರಾಘವೇಂದ್ರ ಎಂಬುವರು ಸತಾಯಿಸುತ್ತಿದ್ದು, 5,000 ರೂ.ಲಂಚ ನೀಡುವಂತೆ ಒತ್ತಾಯಿಸಿದ್ದರು ಎಂದು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಲಾಗಿತ್ತು. ಲೋಕಾಯುಕ್ತ ಡಿವೈಎಸ್ಪಿ ಮಂಜುನಾಥ್, ನಿರೀಕ್ಷಕರಾದ ಸುರೇಶ್, ಕೆ.ಎನ್. …

Read More »

55 ಸಾವಿರ ಕೋಟಿ ರೂ. ವೆಚ್ಚದ ಮುಂಬೈ-ಬೆಂಗಳೂರು ಎಕ್ಸ್‌ಪ್ರೆಸ್ ಹೆದ್ದಾರಿ ನಿರ್ಮಾಣ: ಕೇಂದ್ರ ಸಚಿವ ನಿತಿನ್ ಗಡ್ಕರಿ

ಪುಣೆ: ಮುಂಬೈ -ಬೆಂಗಳೂರು ನಡುವೆ ಸಂಪರ್ಕ ಕಲ್ಪಿಸುವ ಎಕ್ಸ್ಪ್ರೆಸ್ ಹೆದ್ದಾರಿಯನ್ನು 55,000 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣ ಮಾಡಲಾಗುತ್ತಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ಚಿಂಚ್ವಾಡದಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಈ ಮಾರ್ಗವು ಪಿಂಪ್ರಿ, ಚಿಂಚ್ವಾಡಗಳಲ್ಲಿನ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡುತ್ತದೆ. ಮೊದಲ ಹಂತದಲ್ಲಿ ನಾಸಿಕ್ ಘಾಟದಿಂದ ಖೇಡ್ ನಡುವೆ 8,000 ಕೋಟಿ ರೂಪಾಯಿ ಖರ್ಚಿನಲ್ಲಿ ಹೆದ್ದಾರಿ …

Read More »